ಶೀರ್ಷಿಕೆ : ಸ್ವಾತಂತ್ರೋತ್ಸವ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ರೀಯಾಯಿತಿ ದರದಲ್ಲಿ ಪುಸ್ತಕಗಳು
ಲಿಂಕ್ : ಸ್ವಾತಂತ್ರೋತ್ಸವ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ರೀಯಾಯಿತಿ ದರದಲ್ಲಿ ಪುಸ್ತಕಗಳು
ಸ್ವಾತಂತ್ರೋತ್ಸವ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ರೀಯಾಯಿತಿ ದರದಲ್ಲಿ ಪುಸ್ತಕಗಳು
ಕೊಪ್ಪಳ ಆ. 08 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಸ್ವಾತಂತ್ರೋತ್ಸವದ ಅಂಗವಾಗಿ ಆಗಸ್ಟ್ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳು ಶೇ.50ರ ರಿಯಾಯಿತಿ ದರದಲ್ಲಿ ದೊರೆಯಲಿವೆ ಎಂದು ಪ್ರಾಧಿಕಾರದ ಆಢಳಿತಾಧಿಕಾರಿಗಳು ತಿಳಿಸಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು. ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ಮಾಹೆಯಲ್ಲಿ ಮಾತ್ರ, ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲ ಪ್ರಕಾರದ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಜಿಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಮತ್ತು ಪ್ರಾಧಿಕಾರದ ಆನ್‍ಲೈನ್ ನಲ್ಲಿ ಪುಸ್ತಕಗಳು ಮಾರಾಟಕ್ಕೆ ಲಭ್ಯ ಇವೆ.
ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದ ಮೂಲಕವೂ ರಿಯಾಯಿತಿಯಲ್ಲಿ ಪಡೆಯಬಹುದಾಗಿದ್ದು, ವೆಬ್‍ಸೈಟ್ https://ift.tt/1tU4YjE ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 080-22484516/ 22107704/05 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಸ್ವಾತಂತ್ರೋತ್ಸವ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ರೀಯಾಯಿತಿ ದರದಲ್ಲಿ ಪುಸ್ತಕಗಳು
ಎಲ್ಲಾ ಲೇಖನಗಳು ಆಗಿದೆ ಸ್ವಾತಂತ್ರೋತ್ಸವ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ರೀಯಾಯಿತಿ ದರದಲ್ಲಿ ಪುಸ್ತಕಗಳು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸ್ವಾತಂತ್ರೋತ್ಸವ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ರೀಯಾಯಿತಿ ದರದಲ್ಲಿ ಪುಸ್ತಕಗಳು ಲಿಂಕ್ ವಿಳಾಸ https://dekalungi.blogspot.com/2018/08/blog-post_33.html
0 Response to "ಸ್ವಾತಂತ್ರೋತ್ಸವ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ರೀಯಾಯಿತಿ ದರದಲ್ಲಿ ಪುಸ್ತಕಗಳು"
ಕಾಮೆಂಟ್ ಪೋಸ್ಟ್ ಮಾಡಿ