ಶೀರ್ಷಿಕೆ : ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸೂಕ್ಷ್ಮ ಜೀವಾಣು ಪಾತ್ರ ಪ್ರಮುಖ : ಎಂ.ಬಿ ಪಾಟೀಲ
ಲಿಂಕ್ : ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸೂಕ್ಷ್ಮ ಜೀವಾಣು ಪಾತ್ರ ಪ್ರಮುಖ : ಎಂ.ಬಿ ಪಾಟೀಲ
ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸೂಕ್ಷ್ಮ ಜೀವಾಣು ಪಾತ್ರ ಪ್ರಮುಖ : ಎಂ.ಬಿ ಪಾಟೀಲ
ಕೊಪ್ಪಳ ಆ. 09 (ಕರ್ನಾಟಕ ವಾರ್ತೆ): ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸೂಕ್ಷ್ಮ ಜೀವಾಣುಗಳ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥರಾದ ಎಂ.ಬಿ ಪಾಟೀಲ ಅವರು ಹೇಳಿದರು.
ಕೊಪ್ಪಳ ಕೃಷಿ ಇಲಾಖೆಯ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿಯಲ್ಲಿ ಮಣ್ಣು ಪರೀಕ್ಷೆಯ ಮಹತ್ವದ ಕುರಿತು ರೈತರಿಗಾಗಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಇತ್ತೀಚೆಗೆ ಆಯೋಜಿಸಲಾದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಣ್ಣಿನಲ್ಲಿ ಸೂಕ್ಷ್ಮ ಜೀವಾಣುಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವಂತೆ ರೈತರು ನೋಡಿಕೊಳ್ಳಬೇಕು. ಇದರಿಂದಾಗಿ ಭೂಮಿಯ ಆರೋಗ್ಯವು ಉತ್ತಮವಾಗಿರುತ್ತದೆ. ಸೂಕ್ಷ್ಮ ಜೀವಾಣುಗಳ ಸಂಖ್ಯೆಯನ್ನು ಹೆಚ್ಚಿಸಲು ರೈತರು ಜೈವಿಕ ಗೊಬ್ಬರಗಳನ್ನು ಹೆಚ್ಚಿಗೆ ಬಳಕೆ ಮಾಡಬೇಕು. ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಜೀವಾಣುಗಳ ಪಾತ್ರ ಬಹಳ ಪ್ರಮುಖವಾಗಿದ್ದು, ಅವುಗಳನ್ನು ಕಾಪಾಡುವ ಜವಾಬ್ದಾರಿ ರೈತರದ್ದು. ಆದ್ದರಿಂದ ರೈತರು ಜೈವಿಕ ಗೊಬ್ಬರವನ್ನೇ ಬಳಕೆ ಮಾಡಿ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥರಾದ ಎಂ.ಬಿ ಪಾಟೀಲ ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಲಿಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪುಟ್ಟಣ್ಣ ಅವರು ವಹಿಸಿದ್ದರು. ಡಾ. ಬದ್ರಿಪ್ರಸಾದ ಅವರು ಮಣ್ಣಿನಲ್ಲಿರುವ ಪೋಷಕಾಂಶಗಳ ಬಗ್ಗೆ ಹಾಗೂ ಮಣ್ಣಿನಿಂದ ಬರುವ ಕೀಟ ಮತ್ತು ರೋಗಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಡಾ. ಪ್ರದೀಪ ಅವರು ಮಣ್ಣು ಮಾದರಿ ತೆಗೆಯುವ ಬಗ್ಗೆ ರೈತರಿಗೆ ತರಬೇತಿ ನೀಡಿದರು. ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನ ಆತ್ಮ ಯೋಜನೆಯ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಸೇರಿದಂತೆ ಎರಡು ತಾಲೂಕಿನ ರೈತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಣ್ಣು ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಣ್ಣಿನ ಮಾದರಿಗಳನ್ನು ಪರೀಕ್ಷೆ ಮಾಡಿದ ಮಣ್ಣು ಆರೋಗ್ಯ ಚೀಟಿಗಳನ್ನು ಇದೇ ಸಂದರ್ಭದಲ್ಲಿ ರೈತರಿಗೆ ವಿತರಿಸಲಾಯಿತು.
ಹೀಗಾಗಿ ಲೇಖನಗಳು ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸೂಕ್ಷ್ಮ ಜೀವಾಣು ಪಾತ್ರ ಪ್ರಮುಖ : ಎಂ.ಬಿ ಪಾಟೀಲ
ಎಲ್ಲಾ ಲೇಖನಗಳು ಆಗಿದೆ ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸೂಕ್ಷ್ಮ ಜೀವಾಣು ಪಾತ್ರ ಪ್ರಮುಖ : ಎಂ.ಬಿ ಪಾಟೀಲ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸೂಕ್ಷ್ಮ ಜೀವಾಣು ಪಾತ್ರ ಪ್ರಮುಖ : ಎಂ.ಬಿ ಪಾಟೀಲ ಲಿಂಕ್ ವಿಳಾಸ https://dekalungi.blogspot.com/2018/08/blog-post_40.html
0 Response to "ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸೂಕ್ಷ್ಮ ಜೀವಾಣು ಪಾತ್ರ ಪ್ರಮುಖ : ಎಂ.ಬಿ ಪಾಟೀಲ"
ಕಾಮೆಂಟ್ ಪೋಸ್ಟ್ ಮಾಡಿ