ಶೀರ್ಷಿಕೆ : ಕಾನೂನು ಪದವಿಧರರಿಗೆ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಕಾನೂನು ಪದವಿಧರರಿಗೆ ತರಬೇತಿ : ಅರ್ಜಿ ಆಹ್ವಾನ
ಕಾನೂನು ಪದವಿಧರರಿಗೆ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಆ. 28 (ಕರ್ನಾಟಕ ವಾರ್ತೆ): ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ನಾಲ್ಕು ವರ್ಷಗಳ ಅವಧಿಗೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕೊಪ್ಪಳ ಜಿಲ್ಲೆಯ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಜನಾಂಗದ ಅಭ್ಯರ್ಥಿಗಳಿಗೆ 4 ವರ್ಷಗಳ ಅವಧಿಗೆ ತರಬೇತಿಯನ್ನು ನೀಡಲಿದೆ. ಕಾನೂನು ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೊಂದಾಯಿಸಿರಬೇಕು. ಪ್ರವರ್ಗ 1 ಕ್ಕೆ ಗರಿಷ್ಠ 31 ವರ್ಷಗಳು ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಪ್ರವರ್ಗ-1 ರ ಅಭ್ಯರ್ಥಿಗಳ ವಾರ್ಷಿಕ ಅದಾಯ ರೂ. 3.50 ಲಕ್ಷ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ವಾರ್ಷಿಕ ಆದಾಯವು ರೂ. 2.50 ಲಕ್ಷಕ್ಕೆ ಮೀರಿರಬಾರದು.
ನಿಗದಿತ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಸಂಕೀರ್ಣ ಕಟ್ಟಡ ಕೊಪ್ಪಳ ಇವರಿಂದ ಪಡೆದು, ಸಂಬಂಧಿಸಿದ ದಾಖಲೆಗಳ ನಕಲು ಪ್ರತಿಗಳನ್ನು ದೃಢೀಕರಿಸಿ, ಸೆ. 20 ರೊಳಗೆ ಸಲ್ಲಿಸಬೇಕು ಎಂದು ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕಾನೂನು ಪದವಿಧರರಿಗೆ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕಾನೂನು ಪದವಿಧರರಿಗೆ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾನೂನು ಪದವಿಧರರಿಗೆ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_41.html
0 Response to "ಕಾನೂನು ಪದವಿಧರರಿಗೆ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ