ಶೀರ್ಷಿಕೆ : ಚುನಾವಣಾ ವೀಕ್ಷಕರ ನೇಮಕ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಿ
ಲಿಂಕ್ : ಚುನಾವಣಾ ವೀಕ್ಷಕರ ನೇಮಕ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಿ
ಚುನಾವಣಾ ವೀಕ್ಷಕರ ನೇಮಕ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಿ
ಕೊಪ್ಪಳ ಆ. 28 (ಕರ್ನಾಟಕ ವಾರ್ತೆ): ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಿಮಿತ್ಯ ರಾಜ್ಯ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲೆಗೆ ಚುನಾವಣಾ ವೀಕ್ಷಕರನ್ನು ನೇಮಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಚುನಾವಣಾ ವೀಕ್ಷಕರಿಗೆ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ನಾಲ್ಕು ಸ್ಥಳೀಯ ಸಂಸ್ಥೆಗಳಾದ ಕೊಪ್ಪಳ ಹಾಗೂ ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ಯಲಬುರ್ಗಾ ಪಟ್ಟಣ ಪಂಚಾಯತ್, ಸಾರ್ವತ್ರಿಕ ಚುನಾವಣೆ ಸಂಬಂಧ, ಸೆಪ್ಟೆಂಬರ್. 03 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಪ್ರಯುಕ್ತ ರಾಜ್ಯ ಚುನಾವಣಾ ಆಯೋಗವು ಜಿಲ್ಲೆಯ ಸಂಪೂರ್ಣ ಚುನಾವಣಾ ಪ್ರಕ್ರಿಯೆಗಾಗಿ ಚುನಾವಣಾ ವೀಕ್ಷಕರನ್ನು ನೇಮಿಸಿದೆ.
ಚುನಾವಣಾ ವೀಕ್ಷಕರ ವಿವರ : ರಾಜ್ಯ ಚುನಾವಣಾ ಆಯೋಗವು ಕೊಪ್ಪಳ ಚುನಾವಣಾ ವೀಕ್ಷಕರನ್ನಾಗಿ ಜಮಖಂಡಿಯ ಕೃಷ್ಣ ಮೇಲ್ದಂಡೆ ಯೋಜನೆ ವಿಶೇಷ ಜಿಲ್ಲಾಧಿಕಾರಿಗಳಾದ ಆನಂದ ಸಿ.ಎಲ್., ಮೊಬೈಲ್ ಸಂಖ್ಯೆ 9535870900, ಹಾಗೂ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಲೆಕ್ಕಾಧಿಕಾರಿ ಎನ್. ಪರಶಿವಮೂರ್ತಿ, ಮೊ.ಸಂ. 9481817847, ಇವರನ್ನು ನೇಮಿಸಿದೆ. ಚುನಾವಣಾ ವೀಕ್ಷಕರು ಕೊಪ್ಪಳದ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಲಭ್ಯರಿರುತ್ತಾರೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದಾದರೂ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಚುನಾವಣಾ ವೀಕ್ಷಕರನ್ನು ದೂರವಾಣಿ ಸಂಖ್ಯೆ ಮೂಲಕ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಚುನಾವಣಾ ವೀಕ್ಷಕರ ನೇಮಕ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಿ
ಎಲ್ಲಾ ಲೇಖನಗಳು ಆಗಿದೆ ಚುನಾವಣಾ ವೀಕ್ಷಕರ ನೇಮಕ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಚುನಾವಣಾ ವೀಕ್ಷಕರ ನೇಮಕ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಿ ಲಿಂಕ್ ವಿಳಾಸ https://dekalungi.blogspot.com/2018/08/blog-post_58.html
0 Response to "ಚುನಾವಣಾ ವೀಕ್ಷಕರ ನೇಮಕ : ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಿ"
ಕಾಮೆಂಟ್ ಪೋಸ್ಟ್ ಮಾಡಿ