ಶೀರ್ಷಿಕೆ : ಮಹಿಳಾ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಮಹಿಳಾ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ
ಮಹಿಳಾ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಆ. 02 (ಕರ್ನಾಟಕ ವಾರ್ತೆ): ಕೊಪ್ಪಳ ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಆಸಕ್ತರಿಗೆ 30 ದಿನಗಳ ಉಚಿತ "ಮಹಿಳಾ ಹೊಲಿಗೆ" ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಕೊನೆಯ ದಿನಾಂಕ ಆ. 17 ಆಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆ. 18 ರಂದು ಬೆಳಿಗ್ಗೆ 10-30ಕ್ಕೆ ಸಂದರ್ಶನ ನಡೆಸಲಾಗುವುದು. ಆ. 20 ರಿಂದ ತರಬೇತಿಗಳು ಪ್ರಾರಂಭಗೊಳ್ಳುವವು. ತರಬೇತಾರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ. 08539-231038, ಇಲ್ಲಿಗೆ ಸಲ್ಲಿಸಬಹುದು ಎಂದು ಕೊಪ್ಪಳ ಎಸ್.ಬಿ.ಐ. ಆರ್ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮಹಿಳಾ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಮಹಿಳಾ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಹಿಳಾ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_60.html
0 Response to "ಮಹಿಳಾ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ