ಶೀರ್ಷಿಕೆ : ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ : ಪಿ. ಸುನೀಲ್ ಕುಮಾರ
ಲಿಂಕ್ : ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ : ಪಿ. ಸುನೀಲ್ ಕುಮಾರ
ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ : ಪಿ. ಸುನೀಲ್ ಕುಮಾರ
ಕೊಪ್ಪಳ ಆ. 09 (ಕರ್ನಾಟಕ ವಾರ್ತೆ): "ಸ್ವಚ್ಛ ಭಾರತ ಮಿಷನ್" ಅಭಿಯಾನ ಯಶಸ್ವಿಗೆ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು, ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಹೇಳಿದರು.
ಕೊಪ್ಪಳ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಮತ್ತು ಜಿಲ್ಲಾಡಳಿತ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‍ನಲ್ಲಿ ಗುರುವಾರದಂದು ಆಯೋಜಿಸಲಾದ "ಸ್ವಚ್ಛ ಭಾರತ್ ಮಿಷನ್ ರಸಪ್ರಶ್ನೆ ಕಾರ್ಯಕ್ರಮ"ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು 2014 ಅಕ್ಟೋಬರ್. 02 ರಾಷ್ಟ್ರಪಿತಾ ಮಹಾತ್ಮ ಗಾಂಧಿಜೀಯವರ ಜನ್ಮ ದಿನದಂದು "ಸ್ವಚ್ಛ ಭಾರತ್ ಮಿಷನ್" ಅಭಿಯಾನವನ್ನು ಪ್ರಾರಂಭಿಸಿ, ಗಾಂಧೀಜಿಯವರ 150 ನೇ ವರ್ಷಾಚರಣೆ ನಿಮಿತ್ಯ ಭಾರತ ದೇಶವನ್ನು ಸಂಪೂರ್ಣ ಸ್ವಚ್ಛವಾಗಿಸುವ ನಿಟ್ಟಿನಲ್ಲಿ 2019 ರ ಅಕ್ಟೋಬರ್. 02 ಕ್ಕೆ ಸ್ವಚ್ಛ ಭಾರತದ ಗುರಿಯನ್ನು ನಿಗದಿಪಡಿಸಲಾಗಿತ್ತು. ಅದರಲ್ಲಿ ಬಯಲು ಶೌಚ ಮುಕ್ತ ಹಾಗೂ ಪರಿಸರದ ಸ್ವಚ್ಛತೆ ಕಾರ್ಯ ಬಹಳ ಪ್ರಮುಖವಾಗಿವೆ. ಆರೋಗ್ಯದ ಹಿತ ದೃಷ್ಟಿಯಿಂದ ನಾವು ವಾಸಿಸುತ್ತಿರುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಮೊದಲು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ಕಾರ್ಯವು ಪ್ರಪ್ರಥಮವಾಗಿ ವಿದ್ಯಾರ್ಥಿಗಳಿಂದಲೇ ಪ್ರಾರಂಭವಾಗಬೇಕು. ವಿದ್ಯಾರ್ಥಿಗಳು ಮೊದಲು ತಮ್ಮ ತಮ್ಮ ಮನೆ ಹಾಗೂ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ. ಅಲ್ಲದೇ ನಿಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಸ್ವಚ್ಛತೆ ಕಂಡುಬಂದಲ್ಲಿ ಆಯಾ ಸ್ಥಳೀಯ ಸಂಸ್ಥೆಗಳಿಗೆ ದೂರು ನೀಡಬಹುದು. ಇದಕ್ಕಾಗಿಯೇ "ಜನಹಿತ ಅಪ್ಲಿಕೇಶನ್" ಅನ್ನು ಪ್ರಾರಂಭಿಸಲಾಗಿದ್ದು, ಮೊಬೈಲ್‍ನಲ್ಲಿ ಪೋಟೋ ಕ್ಲಿಕ್ ಮಾಡಿ ದೂರು ನೀಡಿ. ಯಾವುದೇ ಮೂಲೆಯ ಸಮಸ್ಯೆಯಾಗಿದ್ದರೂ ಸಹ ಅದಕ್ಕೆ ಸ್ಪಂದಿಸಲಾಗುವುದು. ಸ್ವಚ್ಛ ಭಾರತ ಯೋಜನೆಯಡಿ ಹೈ-ಕ ಭಾಗದ ಜಿಲ್ಲೆಗಳು ಹಿಂದುಳಿದಿವೆ. ಈ ದಿಸೆಯಲ್ಲಿ ಕೊಪ್ಪಳ ಜಿಲ್ಲೆ ಸ್ವಚ್ಛತೆಯ ವಿಷಯದಲ್ಲಿ ಹೆಚ್ಚಿನ ಅಭಿವೃದ್ಧಿ ಹೊಂದುವುದು ಅಗತ್ಯವಾಗಿದೆ. ಇದಕ್ಕಾಗಿ ಎಲ್ಲರೂ ಸಹಕರಿಸಿ. ಹಸಿರು ಕರ್ನಾಟಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು "ಹಸಿರು ಕರ್ನಾಟಕ" ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಆ. 15 ರಿಂದ ಜಿಲ್ಲೆಯಾದ್ಯಂತ ಗಿಡಗಳನ್ನು ನಡೆಸಲಾಗುತ್ತಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಕರೆ ನೀಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯ ಕುಮಾರ ಎಂ., ಪುರಸಭೆ ತಹಶೀಲ್ದಾರ ಕವಿತಾ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಘವ ಚಕ್ರವರ್ತಿ ಅವರು ಸ್ವಚ್ಛ ಭಾರತ್ ಮಿಷನ್ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿದರು.
ಹೀಗಾಗಿ ಲೇಖನಗಳು ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ : ಪಿ. ಸುನೀಲ್ ಕುಮಾರ
ಎಲ್ಲಾ ಲೇಖನಗಳು ಆಗಿದೆ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ : ಪಿ. ಸುನೀಲ್ ಕುಮಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ : ಪಿ. ಸುನೀಲ್ ಕುಮಾರ ಲಿಂಕ್ ವಿಳಾಸ https://dekalungi.blogspot.com/2018/08/blog-post_67.html
0 Response to "ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ : ಪಿ. ಸುನೀಲ್ ಕುಮಾರ"
ಕಾಮೆಂಟ್ ಪೋಸ್ಟ್ ಮಾಡಿ