ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ

ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ
ಲಿಂಕ್ : ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ

ಓದಿ


ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ


ಕೊಪ್ಪಳ ಆ. 29 (ಕರ್ನಾಟಕ ವಾರ್ತೆ): ಮಹರ್ಷಿ ವಾಲ್ಮೀಕಿ ಜಯಂತಿಯಂದು ಅರ್ಹರಿಗೆ ವಾಲ್ಮೀಕಿ ಪ್ರಶಸ್ತಿಯನ್ನು ನೀಡಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ವರ್ಗದ ಸಮುದಾಯಕ್ಕೆ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳಿಂದ ಪ್ರಸ್ತಾವನೆ ಆಹ್ವಾನಿಸಲಾಗಿದೆ.
    ಅಕ್ಟೋಬರ್ 24 ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯ ದಿನದಂದು "ವಾಲ್ಮೀಕಿ ಪ್ರಶಸ್ತಿ" ನೀಡಲು ಉದ್ದೇಶಿಸಲಾಗಿದೆ.  ಕೊಪ್ಪಳ ಜಿಲ್ಲೆಯಿಂದ ಪರಿಶಿಷ್ಟ ವರ್ಗದವರ ಜನರಿಗಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಜಿಲ್ಲೆಯಿಂದ ಒಬ್ಬ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ ಬೆಂಗಳೂರು ಇವರಿಗೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ.
ಪ್ರಸ್ತಾವನೆ ಸಲ್ಲಿಸಬಯಸುವವರು ಕನಿಷ್ಠ 35 ವರ್ಷಗಳಾಗಿರಬೇಕು.  ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು.  ಕೊಪ್ಪಳ ಜಿಲ್ಲೆಯಿಂದ ಒಬ್ಬರನ್ನು ಮಾತ್ರ ಶಿಫಾರಸ್ಸು ಮಾಡಬೇಕಿದ್ದು, ಒಂದಕ್ಕಿಂತ ಹೆಚ್ಚು ಅರ್ಜಿಗಳು ಬಂದಲ್ಲಿ ವಯಸ್ಸಿನ ಆಧಾರದ ಮೇಲೆ ಶಿಫಾರಸ್ಸು ಮಾಡಿ ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ ಸಲ್ಲಿಸಲಾಗುವುದು.  ಆಯ್ಕೆ ಮಾಡುವ ವ್ಯಕ್ತಿಯು ಸಾಮಾಜಿಕ ಕ್ಷೇತ್ರದಲ್ಲಿ ಮುಖ್ಯವಾಗಿ ಪರಿಶಿಷ್ಟ ವರ್ಗದ ಜನರಿಗೆ ಸೇವೆ ಸಲ್ಲಿಸಿದ ವ್ಯಕ್ತಿಯಾಗಿದ್ದು, ಜನಸಾಮಾನ್ಯರಲ್ಲಿ ಸ್ವಯಂ ಸೇವಕರಾಗಿ ಮಾನ್ಯತೆ, ಕೀರ್ತಿ, ಪ್ರಖ್ಯಾತಿ ಹೊಂದಿರಬೇಕು.  ಸಾಧನೆ ಮಾಡಿರುವ ಸಾಧನೆಗಳ ಬಗ್ಗೆ ದಾಖಲಾತಿ ಹೊಂದಿರಬೇಕು.  ಪ್ರಮುಖವಾಗಿ ಪರಿಶಿಷ್ಟ ವರ್ಗದವರ ಶೈಕ್ಷಣಿಕ ಪ್ರಗತಿ ಹಾಗೂ ಆರ್ಥಿಕವಾಗಿ ಸಧೃಡಗೊಳಿಸಲು ಸ್ವಯಂ ಪ್ರೇರಣೆಯಿಂದ ದುಡಿಯುವ ವ್ಯಕ್ತಿಯಾಗಿರಬೇಕು.  ಪರಿಶಿಷ್ಟ ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ಇವುಗಳ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಾಮರಸ್ಯ ವಾತಾವರಣ ಮೂಡಿಸುವುದು ಅಥವಾ ದೌರ್ಜನ್ಯ ನಿಯಂತ್ರಿಸಲು ಸಹಕಾರಿಯಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶ್ರಮಿಸುವ ವ್ಯಕ್ತಿಯಾಗಿರಬೇಕು.  ಮಹರ್ಷಿ ವಾಲ್ಮೀಕಿರವರ ತತ್ವ ಹಾಗೂ ಆದರ್ಶಗಳನ್ನು ಸಾಕಾರಗೊಳಿಸುವಂತಹ ಯಾವುದೇ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿರುವ ವ್ಯಕ್ತಿಯಾಗಿರಬೇಕು.  ಈ ಕುರಿತಂತೆ ಸರ್ಕಾರ ತೆಗೆದುಕೊಳ್ಳುವ ನಿರ್ಣಯವೇ ಅಂತಿಮವಾಗಿರುತ್ತದೆ.  
ನಿಗದಿತ ಅರ್ಜಿ ಫಾರಂಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ/ ಗಂಗಾವತಿ/ ಕುಷ್ಟಗಿ/ ಯಲಬುರ್ಗಾ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಗಂಗಾವತಿ/ ಕುಷ್ಟಗಿ ಇವರಲ್ಲಿ ಕಛೇರಿ ವೇಳೆಯಲ್ಲಿ ಉಚಿತವಾಗಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸೆ. 10 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_671.html

Subscribe to receive free email updates:

0 Response to "ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ