ಶೀರ್ಷಿಕೆ : ಕಿನ್ನಾಳ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಾಗಾರ
ಲಿಂಕ್ : ಕಿನ್ನಾಳ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಾಗಾರ
ಕಿನ್ನಾಳ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಾಗಾರ
ಕೊಪ್ಪಳ ಆ. 04 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯತ್ ಕಾರ್ಯಾಲಯ ಆವರಣದಲ್ಲಿ "ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ"ದ ಅಂಗವಾಗಿ ಕಾರ್ಯಾಗಾರ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಜರುಗಿತು.
ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಕಾರ್ಯಕ್ರಮವು ಜಿ.ಪಂ. ಯೋಜನಾ ನಿರ್ದೇಶಕ ರವಿ ಬಸರಳ್ಳಿ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ. ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಜರುಗಿತು. ಶಾಲಾ ಮಕ್ಕಳಿಂದ ಗ್ರಾಮದ ವಿವಿಧ ಬೀದಿಗಳಲ್ಲಿ ಸ್ವಚ್ಛತೆ ಜಾಗೃತಿಗಾಗಿ ಜಾಥಾ ಕಾರ್ಯಕ್ರಮವು ಸಹ ನಡೆಯಿತು. ಕಿನ್ನಾಳ ಗ್ರಾ.ಪಂ. ಅಧ್ಯಕ್ಷೆ ಚನ್ನಮ್ಮ ವಾಲ್ಮೀಕಿ, ಉಪಾಧ್ಯಕ್ಷೆ ಗೀತಾ ಬಿದನೂರ, ಅಭಿವೃದ್ಧಿ ಅಧಿಕಾರಿ ವೀರನಗೌಡ್ರ ಚನ್ನವೀರನಗೌಡ್ರ ಸೇರಿದಂತೆ ಸರ್ವ ಸದಸ್ಯರು, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಆಶಾ ಕಾರ್ಯಕರ್ತೆಯರು ಹಾಗೂ ಶಾಲಾ ವಿದ್ಯಾರ್ಥಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗ್ರಾಮವನ್ನು ಸ್ವಚ್ಛವಾಗಿರಿಸಿಕೊಳ್ಳುವ ಕುರಿತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಇದೇ ಸಂದರ್ಭದಲ್ಲಿ ಜರುಗಿತು.
ಹೀಗಾಗಿ ಲೇಖನಗಳು ಕಿನ್ನಾಳ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಾಗಾರ
ಎಲ್ಲಾ ಲೇಖನಗಳು ಆಗಿದೆ ಕಿನ್ನಾಳ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಾಗಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಿನ್ನಾಳ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಾಗಾರ ಲಿಂಕ್ ವಿಳಾಸ https://dekalungi.blogspot.com/2018/08/blog-post_68.html
0 Response to "ಕಿನ್ನಾಳ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಾಗಾರ"
ಕಾಮೆಂಟ್ ಪೋಸ್ಟ್ ಮಾಡಿ