ಶೀರ್ಷಿಕೆ : ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ನಿಷೇಧ – ಎಂ.ಕನಗವಲ್ಲಿ
ಲಿಂಕ್ : ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ನಿಷೇಧ – ಎಂ.ಕನಗವಲ್ಲಿ
ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ನಿಷೇಧ – ಎಂ.ಕನಗವಲ್ಲಿ
ಕೊಪ್ಪಳ ಆ. 04 (ಕವಾ): ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಶನಿವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬರುವ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ. ಶಾಲಾ ಮಕ್ಕಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಕಾರ್ಯಕ್ರಮಗಳು ನೆರವೇರಲಿವೆ. ಅಂದು ಸಂಜೆ 6 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗುವುದು. ಜಿಲ್ಲಾ ಕ್ರೀಡಾಂಗಣ ಮತ್ತು ಸಾಹಿತ್ಯ ಭವನದಲ್ಲಿ ಜರುಗುವ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಸಾಂಸ್ಕøತಿಕ ಸಮಿತಿಯು ಆಯ್ಕೆ ಮಾಡಬೇಕು. ಒಳ್ಳೆಯ ಕಾರ್ಯಕ್ರಮಗಳನ್ನು ಕೊಡುವಂತಾಗಬೇಕು. ಈಗಾಗಲೆ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧಿಸಲಾಗಿದ್ದು, ಕೊಪ್ಪಳ ನಗರವೂ ಸೇರಿದಂತೆ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಪ್ಲಾಸ್ಟಿಕ್ ಧ್ವಜವನ್ನು ಮಾರಾಟ ಮಾಡುವುದಾಗಲಿ, ಬಳಸುವುದಾಗಲಿ ಮಾಡುವಂತಿಲ್ಲ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು. ಈ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಸೇರಿದಂತೆ ಎಲ್ಲ ಅಧಿಕಾರಿ, ನೌಕರರು ತಪ್ಪದೆ ಭಾಗವಹಿಸಬೇಕು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿ, ಸರ್ಕಾರದ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ದಿನಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಈ ಬಾರಿ ಬೆಳಿಗ್ಗೆಯೇ ಆಯಾ ಶಾಲಾ ಮುಖ್ಯಸ್ಥರು ತಪ್ಪದೆ ಸಿಹಿ ತಿಂಡಿಯ ಜೊತೆಗೆ ಹಾಲು ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳಿಗೆ ನಗರಸಭೆ ವತಿಯಿಂದ ಬಾಳೆಹಣ್ಣು ವಿತರಿಸಬೇಕು. ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದವರಿಗೆ ಸನ್ಮಾನಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಉಪವಿಭಾಗಾಧಿಕಾರಿ ಸಿ.ಡಿ. ಗೀತಾ ಅವರು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಕವಾಯತು ಪೂರ್ವ ಸಿದ್ಧತೆ ಕೈಗೊಳ್ಳುವ ಮಕ್ಕಳಿಗೆ ಕುಡಿಯುವ ನೀರು ಹಾಗೂ ಅಲ್ಪೋಪಹಾರದ ವ್ಯವಸ್ಥೆ ಕೈಗೊಳ್ಳಬೇಕು. ಕಾರ್ಯಕ್ರಮದ ಅಚ್ಚುಕಟ್ಟು ನಿರ್ವಹಣೆಗಾಗಿ ವೇದಿಕೆ ಸಮಿತಿ, ಸಾಂಸ್ಕøತಿಕ ಸಮಿತಿ ರಚಿಸಿದ್ದು, ಆಯಾ ಸಮಿತಿಗೆ ವಹಿಸಿದ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು.
ನಗರದ ಎಲ್ಲ ಶಾಲೆ ಕಾಲೇಜಿನ ಮಕ್ಕಳು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು. ಇದಕ್ಕಾಗಿ ನಗರ ಸಾರಿಗೆ ಬಸ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಗಣ್ಯರಾದ ಶಿವಾನಂದ ಹೊದ್ಲೂರ್ ಅವರು ಮನವಿ ಮಾಡಿಕೊಂಡರು. ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರು ಮಾತನಾಡಿ, ಕೊಪ್ಪಳ ನಗರದ ಪ್ರಮುಖ ರಸ್ತೆಗಳು, ಕಿನ್ನಾಳ ರಸ್ತೆಗಳ ಇಕ್ಕೆಲಗಳಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಇದನ್ನು ಸ್ವಚ್ಛಗೊಳಿಸಿ, ನಗರವನ್ನು ಸುಂದರವಾಗಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ಇದಕ್ಕೆ ಸ್ಪಂದಿಸಿ, ಮಕ್ಕಳಿಗೆ ಕ್ರೀಡಾಂಗಣಕ್ಕೆ ಕರೆದುಕೊಂಡು ಹೋಗಲು ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಮತ್ತು ಕೊಪ್ಪಳ ನಗರದ ರಸ್ತೆಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದರು. ಇತ್ತೀಚೆಗೆ ವಿವಿಧ ಮಾಧ್ಯಮಗಳ ಮೂಲಕ ಜನಪ್ರಿಯಗೊಂಡಿರುವ, ಗಾನಕೋಗಿಲೆ ಎನಿಸಿಕೊಂಡ ಕೊಪ್ಪಳದವರೇ ಆದ ಗಾಯಕಿ ಗಂಗಮ್ಮ ಅವರನ್ನು ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸನ್ಮಾನಿಸುವಂತೆ ಕೆ.ಆರ್.ಐ.ಡಿ.ಎಲ್ ಕಾರ್ಯಪಾಲಕ ಅಭಿಯಂತರ ಕೊರಬು ಅವರು ಮನವಿ ಮಾಡಿಕೊಂಡರು. ಜಿಲ್ಲಾಧಿಕಾರಿಗಳು ಇದಕ್ಕೆ ಸಮ್ಮತಿ ಸೂಚಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ವಿಜಯಕುಮಾರ್, ನಗರಸಭೆ ಪೌರಾಯುಕ್ತ ಸುನಿಲ್ ಪಾಟೀಲ, ಡಿವೈಎಸ್‍ಪಿ ಸಂದಿಗವಾಡ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರಾದ ವಿಠ್ಠಪ್ಪ ಗೋರಂಟ್ಲಿ, ಮಹಾಂತೇಶ ಮಲ್ಲನಗೌಡರ, ಮಂಜುನಾಥ ಗೊಂಡಬಾಳ ಮುಂತಾದವರು ಭಾಗವಹಿಸಿದ್ದರು.
ಹೀಗಾಗಿ ಲೇಖನಗಳು ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ನಿಷೇಧ – ಎಂ.ಕನಗವಲ್ಲಿ
ಎಲ್ಲಾ ಲೇಖನಗಳು ಆಗಿದೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ನಿಷೇಧ – ಎಂ.ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ನಿಷೇಧ – ಎಂ.ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2018/08/blog-post_7.html
0 Response to "ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ನಿಷೇಧ – ಎಂ.ಕನಗವಲ್ಲಿ"
ಕಾಮೆಂಟ್ ಪೋಸ್ಟ್ ಮಾಡಿ