ಶೀರ್ಷಿಕೆ : ಸಂಗೀತ ನೃತ್ಯ ಅಕಾಡೆಮಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಸಂಗೀತ ನೃತ್ಯ ಅಕಾಡೆಮಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಸಂಗೀತ ನೃತ್ಯ ಅಕಾಡೆಮಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಆ. 27 (ಕರ್ನಾಟಕ ವಾರ್ತೆ): ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಪ್ರಸಕ್ತ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಸೇರಿದಂತೆ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10,000 ರೂ.ಗಳನ್ನು ಶಿಷ್ಯ ವೇತನವಾಗಿ ನೀಡಲಾಗುವುದು. ಅರ್ಜಿಗಳನ್ನು ಕಛೇರಿ ವೇಳೆಯಲ್ಲಿ ಅಕಾಡೆಯ ಅಥವಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ. ವೆಬ್‍ಸೈಟ್ https://ift.tt/2BRNdfa ಮೂಲಕವು ಸಹ ಪಡೆಯಬಹುದು.
ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ನೀಡಲಾಗಿದ್ದು, ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು 10 ರೂ. ಗಳ ಸ್ಟ್ಯಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಿಕೊಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಕಾಡೆಮಿಯ ವಿಳಾಸಕ್ಕೆ ಸೆಪ್ಟೆಂಬರ್. 15 ರೊಳಗಾಗಿ ಕಳುಹಿಸಿಕೊಡಬೇಕು ಎಂದು ಕರ್ನಾಟಕ ಸಂಗೀತ ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ. ಅಂಗಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಸಂಗೀತ ನೃತ್ಯ ಅಕಾಡೆಮಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಸಂಗೀತ ನೃತ್ಯ ಅಕಾಡೆಮಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಂಗೀತ ನೃತ್ಯ ಅಕಾಡೆಮಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_76.html
0 Response to "ಸಂಗೀತ ನೃತ್ಯ ಅಕಾಡೆಮಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ