ಶೀರ್ಷಿಕೆ : ಪರಿಶಿಷ್ಟ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ ನಿರ್ಮಾಣ : ಅರ್ಜಿ ಆಹ್ವಾನ
ಲಿಂಕ್ : ಪರಿಶಿಷ್ಟ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ ನಿರ್ಮಾಣ : ಅರ್ಜಿ ಆಹ್ವಾನ
ಪರಿಶಿಷ್ಟ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ ನಿರ್ಮಾಣ : ಅರ್ಜಿ ಆಹ್ವಾನ
ಕೊಪ್ಪಳ ಆ. 02 (ಕರ್ನಾಟಕ ವಾರ್ತೆ): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ವಿಶೇಷ ಘಟಕ ಯೋಜನೆಯಡಿ 15 ಮತ್ತು ಗಿರಿಜನ ಉಪಯೋಜನೆಯಡಿ 03 ಗುರಿಯನ್ನು ಕೊಪ್ಪಳ ಜಿಲ್ಲೆಗೆ ನಿಗದಿಪಡಿಸಿದ್ದು, ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ಹೊಂದಲು ಅವಕಾಶ ಕಲ್ಪಿಸಿದೆ. ಅರ್ಜಿ ಸಲ್ಲಿಸಲು ಫಲಾನುಭವಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಶಲಕರ್ಮಿಗಳಾಗಿರಬೇಕು. ಅರ್ಜಿದಾರರು ತಮ್ಮ ಹೆಸರಿಗೆ ಖಾಲಿ ನಿವೇಶನ ಹೊಂದಿರಬೇಕು. ಈ ಹಿಂದೆ ಸರ್ಕಾರಿ ಯೋಜನೆಯಡಿಯಲ್ಲಿ ಯಾವುದೇ ವಸತಿ ಮಂಜೂರಾತಿ ಪಡೆದಿರಬಾರದು. ಅರ್ಜಿದಾರರು ಗ್ರಾಮೀಣ ಭಾಗದವರಾಗಿರಬೇಕು. 18 ವರ್ಷ ಮೇಲ್ಪಟ್ಟವರಿರಬೇಕು. ವಸತಿ ಕಾರ್ಯಾಗಾರವನ್ನು ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಆಗಸ್ಟ್. 15 ಕೊನೆಯ ದಿನವಾಗಿದ್ದು, ಆಸಕ್ತಿಯುಳ್ಳ ಫಲಾನುಭವಿಗಳು ನಿಗದಿತ ನಮೂನೆಯ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಜಾಗದ ದಾಖಲಾತಿ (ಆರ್.ಟಿ.ಸಿ), ಕುಶಲಕರ್ಮಿ ಇರುವ ಬಗ್ಗೆ ಗ್ರಾಮ ಪಂಚಾಯತಿ ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಗ್ರಾ.ಪಂ./ ಸರ್ಕಾರದಿಂದ ಯಾವುದೇ ವಸತಿ ಯೋಜನೆಯಡಿಯಲ್ಲಿ ಮನೆ ಪಡೆದಿರುವುದಿಲ್ಲವೆಂದು ಸ್ಥಳೀಯ ಸಂಬಂಧಿಸಿದ ಅಧಿಕಾರಿಯಿಂದ ದೃಢೀಕರಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ, ಪಡಿತರ ಚೀಟಿ, ವೋಟರ್ಸ್ ಐಡಿ, ಸ್ವಂತ ಶಾಶ್ವತ ಮನೆ ಇಲ್ಲದಿರುವ ಬಗ್ಗೆ ಗ್ರಾ.ಪಂ. ನಿಂದ ಪಡೆದ ದೃಢೀಕರಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು ಎಂದು ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪರಿಶಿಷ್ಟ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ ನಿರ್ಮಾಣ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪರಿಶಿಷ್ಟ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ ನಿರ್ಮಾಣ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪರಿಶಿಷ್ಟ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ ನಿರ್ಮಾಣ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_80.html
0 Response to "ಪರಿಶಿಷ್ಟ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ ನಿರ್ಮಾಣ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ