ಶೀರ್ಷಿಕೆ : ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
ಲಿಂಕ್ : ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
ಕೊಪ್ಪಳ ಆ. 29 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ 01 ರಿಂದ 10 ನೇ ತರಗತಿಯವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿಗೆ ವಿದ್ಯಾರ್ಥಿ ವೇತನ ಸೌಲಭ್ಯವನ್ನು ಕಲ್ಪಿಸಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್. 31 ಕೊನೆಯ ದಿನವಾಗಿದ್ದು, ಸೌಲಭ್ಯ ಪಡೆಯಲಿಚ್ಛಿಸುವವರು ಇಲಾಖಾ ವೆಬ್‍ಸೈಟ್ https://ift.tt/2LDZ4xj ಅಥವಾ www.sw.kar.nic.in ಲಿಂಕ್ ನಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿದೆ.
ಅರ್ಜಿಯೊಂದಿಗೆ ವಿದ್ಯಾರ್ಥಿಯ ಎಸ್.ಎ.ಟಿ.ಎಸ್-ಐಡಿ (ಸಂಬಂಧಪಟ್ಟ ಶಾಲೆಗಳಿಂದ), ವಿದ್ಯಾರ್ಥಿಯ ಆಧಾರ್/ ಇ.ಐ.ಡಿ ಸಂಖ್ಯೆ ಹಾಗೂ ಆಧಾರ/ ಇ.ಐ.ಡಿ ಯಲ್ಲಿ ನಮೂದಿಸಿರುವಂತೆ ಹೆಸರು, ಪೊಷಕರ ಮೊಬೈಲ್ ಸಂಖ್ಯೆ, ಪೋಷಕರ ಆಧಾರ/ ಇ.ಐ.ಡಿ ಸಂಖ್ಯೆ ಹಾಗೂ ಆಧಾರ/ ಇ.ಐ.ಡಿ ಯಲ್ಲಿ ನಮೂದಿಸಿರುವಂತೆ ಹೆಸರು, ವಿದ್ಯಾರ್ಥಿಯ ಆಧಾರ ಇಲ್ಲದಿದ್ದಲ್ಲಿ ವಿದ್ಯಾರ್ಥಿ ಹೆಸರಿನಲ್ಲಿರುವ ಬ್ಯಾಂಕ್ ಖಾತೆಯ ವಿವರ, ವಿದ್ಯಾರ್ಥಿಯ ಹೆಸರಿನ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಆರ್.ಡಿ. ಸಂಖ್ಯೆ, ವಸತಿ ನಿಲಯಾರ್ಥಿಯಾಗಿದ್ದಲ್ಲಿ ವಸತಿ ನಿಲಯ ನಿರ್ವಹಣೆ ತಂತ್ರಾಶದ ನೊಂದಣೆ ಸಂಖ್ಯೆ (ಹೆಚ್.ಐ.ಎಂ.ಎಸ್.), ಈಗಾಗಲೇ ವಿದ್ಯಾರ್ಥಿವೇತನ ಪಡೆಯುತ್ತಿದ್ದಲ್ಲಿ ಇ-ಪಾಸ್/ಎನ್.ಎಸ್.ಪಿ/ಎಸ.ಎಂ.ಐ.ಎಸ್. ಐಡಿ ಸಂಖ್ಯೆಯನ್ನು ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_811.html
0 Response to "ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ