ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ

ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ
ಲಿಂಕ್ : ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ

ಓದಿ


ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ



ಕೊಪ್ಪಳ ಆ. 29 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ತಾಯಿ ಹಾಗೂ ಶಿಶು ಮರಣ ಪ್ರಮಾಣವನ್ನು ತಗ್ಗಿಸಲು ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾದ ಅವಲೋಕನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಕಳೆದ ನಾಲ್ಕೈದು ವರ್ಷಗಳ ಅವಧಿಯಲ್ಲಿನ ಶಿಶು ಮರಣಗಳ ಪ್ರಮಾಣವನ್ನು ಗಮನಿಸಿದಾಗ, ಜಿಲ್ಲೆಯಲ್ಲಿ ಮರಣ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತಿದೆ.  ಇನ್ನಷ್ಟು ಕಡಿಮೆಯಾಗಬೇಕಾಗಿದೆ.  ತಾಯಿ ಮತ್ತು ಶಿಶು ಮರಣ ಸಂಭವಿಸಲು ಮುಖ್ಯ ಕಾರಣ ಏನು ಎಂಬುದರ ಬಗ್ಗೆ ಪ್ರಕರಣಗಳ ಕೂಲಂಕಷ ಪರಿಶೀಲನೆ ನಡೆಯಬೇಕು ಮತ್ತು ಅದನ್ನು ತಡೆಗಟ್ಟಲು ಮುಂಜಾಗೃತೆ ವಹಿಸಿ, ತಾಯಿ ಮತ್ತು ಶಿಶುವಿನ ಮರಣ ಪ್ರಮಾಣವನ್ನು ಆದಷ್ಟು ಕಡಿಮೆಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕಾರ್ಯ ಕೈಗೊಳ್ಳಬೇಕು.  ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಜಿರಿನ್ ಹೆರಿಗೆ ಹೆಚ್ಚಳ ಕುರಿತು ವಿವರನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 
ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಅಲಕನಂದಾ ಮಳಗಿ ಅವರು ಮಾತನಾಡಿ, ರಾಜ್ಯ ಮಟ್ಟದಲ್ಲಿ 2017-18 ನೇ ಸಾಲಿನಲ್ಲಿ ತಾಯಿ ಮರಣ ದರ 81, ಶಿಶು ಮರಣ 13 ಇತ್ತು. ಕೊಪ್ಪಳ ಜಿಲ್ಲೆಯಲ್ಲಿ ತಾಯಿ ಮರಣ ದರ 60.6, ಶಿಶುಮರಣ ಪ್ರಮಾಣ 14.90 ಇತ್ತು.  ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ ಏಪ್ರಿಲ್ ರಿಂದ ಜೂನ್ ರವರೆಗೆ ಒಟ್ಟು ಜೀವಂತ ಜನನ 6693 ಗಳಾಗಿವೆ.   2014-15 ನೇ ಸಾಲಿನಲ್ಲಿ ತಾಯಿ ಮರಣ ದರ 99.8 ದಾಖಲಾಗಿತ್ತು.  2017-18 ನೇ ಸಾಲಿನಲ್ಲಿ ತಾಯಿಮರಣ ದರ 60.60 ಕ್ಕೆ ಇಳಿಕೆಯಾಗಿದೆ.  ಅದೇ ರೀತಿಯಾಗಿ ಶಿಶುಮರಣ ದರ 2014-15 ನೇ ಸಾಲಿನಲ್ಲಿ 25.04 ಇದ್ದು, 2017-18 ನೇ ಸಾಲಿನಲ್ಲಿ 14.90ಕ್ಕೆ ಇಳಿಕೆಯಾಗಿದೆ.  ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಆರೋಗ್ಯ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.  ಜಿಲ್ಲೆಯಲ್ಲಿ 01 ಮೆಡಿಕಲ್ ಕಾಲೇಜು, 01 ಜಿಲ್ಲಾ ಆಸ್ಪತ್ರೆ, 03 ತಾಲೂಕಾ ಆಸ್ಪತ್ರೆ, 46 ಪ್ರಾಥಮಿಕ ಆರೋಗ್ಯ ಕೇಂದ್ರ / 09 ಸಮುದಾಯ ಆರೋಗ್ಯ ಕೇಂದ್ರ ಮತ್ತು 03 ನಗರ ಆರೋಗ್ಯ ಕೇಂದ್ರ, 01 ಪ್ರಥಮ ಮಟ್ಟದ, 177 ಉಪಕೇಂದ್ರಗಳ ಆಸ್ಪತ್ರೆಗಳ, 596 ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಗಳಿವೆ.  ನೀತಿ ಆಯೋಗದ ಪ್ರಕಾರ 2016ರಲ್ಲಿ ಭಾರತದಲ್ಲಿ ತಾಯಿ ಮರಣದ ದರ 130 ಇದ್ದರೆ, ಕರ್ನಾಟಕದ ತಾಯಿಮರಣ ದರ 108.  ಭಾರತದ ಶಿಶು ಮರಣ ಪ್ರಮಾಣ 34 ಇದ್ದರೆ, ಕರ್ನಾಟಕದ ಶಿಶುಮರಣ ಪ್ರಮಾಣ 24 ಇದೆ.  ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಜಿರಿಯನ್ ಅವಶ್ಯಕತೆ ಇದ್ದರೆ ಜಿಲ್ಲಾ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕಾ ಮಟ್ಟದ ಆಸ್ಪತ್ರೆಗಳಲ್ಲಿ ಮಾಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು. 
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಮಾತನಾಡಿ, ತಾಯಿಮರಣ ಮತ್ತು ಶಿಶುಮರಣ ಸಂಭವಿಸಲು ಮುಖ್ಯ ಕಾರಣ ಮತ್ತು ಅದನ್ನು ಯಾವ ರೀತಿ ಮುಂಜಾಗೃತೆ ತೆಗೆದುಕೊಂಡು ಉಳಿಸಬಹುದು ಎಂಬುದರ ಬಗ್ಗೆ ಸ್ತ್ರೀರೋಗ ತಜ್ಞರು ಮತ್ತು ಮಕ್ಕಳ ತಜ್ಞರಿಂದ ಸಲಹೆ ಪಡೆದು ಮುಂದಿನ ದಿನಗಳಲ್ಲಿ ತಾಯಿ ಮತ್ತು ಶಿಶು ಮರಣ ಹೆಚ್ಚಳವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. 
     ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿರುಪಾಕ್ಷರೆಡ್ಡಿ ಮಾದಿನೂರು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಬಿ ದಾನರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಂಬಯ್ಯ, ತಾಲೂಕಾ ಆರೋಗ್ಯಾಧಿಕಾರಿ, ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಆರೋಗ್ಯ ಸಂಸ್ಥೆಯ ವೈಧ್ಯಾಧಿಕಾರಿಗಳು, ಹಿರಿಯ, ಕಿರಿಯ ಆರೋಗ್ಯ ಸಹಾಯಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. 


ಹೀಗಾಗಿ ಲೇಖನಗಳು ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ

ಎಲ್ಲಾ ಲೇಖನಗಳು ಆಗಿದೆ ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/08/blog-post_839.html

Subscribe to receive free email updates:

0 Response to "ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಿ : ಪಿ. ಸುನಿಲ್ ಕುಮಾರ್ ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ