ಶೀರ್ಷಿಕೆ : ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ : ಅರ್ಜಿ ಅಹ್ವಾನ
ಲಿಂಕ್ : ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ : ಅರ್ಜಿ ಅಹ್ವಾನ
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ : ಅರ್ಜಿ ಅಹ್ವಾನ
ಕೊಪ್ಪಳ ಆ. 06 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ “ವಿದ್ಯಾಸಿರಿ ಯೋಜನೆ”ಯಡಿ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ, ಭೌದ್ದರು, ಸಿಖ್ಖರು ಹಾಗೂ ಪಾರ್ಸಿ ಸಮುದಾಯದಕ್ಕೆ ಸೇರಿದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಸರ್ಕಾರಿ/ ಖಾಸಗಿ ಅನುದಾನಿತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗದೇ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಪ್ರತಿ ತಿಂಗಳಿಗೆ ರೂ. 1,500/- ರಂತೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಅನ್‍ಲೈನ್ ಮುಖಾಂತರ ಜಮಾ ಮಾಡಲಾಗುತ್ತದೆ.
ಯೋಜನೆಯ ಉದ್ದೇಶ : ಯಾವುದೇ ಇಲಾಖೆಯ ಸರ್ಕಾರಿ/ ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯ ಅಥವಾ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ಇರುವ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸಹಾಯವನ್ನು ಒದಗಿಸುವುದು ಈ ಯೋಜನೆಯ ಉದ್ದೇಶ. ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ, “ವಿದ್ಯಾಸಿರಿ” ಊಟ ಮತ್ತು ವಸತಿ ಸಹಾಯ ಯೋಜನೆ ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸಲು ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ, ಭೌದ್ದರು, ಸಿಖ್ಖರು ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ, ಸ್ಥಳೀಯ, ಅನುದಾನಿತ ಸಂಸ್ಥೆಗಳು/ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು. ವಿದ್ಯಾಸಿರಿ ಸೌಲಭ್ಯ ಪಡೆಯಲು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನವು ಪ್ರವರ್ಗ-1 ರ (ನದಾಫ್, ಪಿಂಜಾರ, ದರವೇಶ, ಚಪ್ಪರಬಂದ್, ಕಸಾಬ, ಪೂಲ್‍ಮಾಲಿ (ಮುಸ್ಲಿಂ)), ಪರಿಶಿಷ್ಟ ಜಾತಿಯಿಂದ ಮತಾಂತರ ಹೊಂದಿದ ಕ್ರಿಶ್ಚಿಯನ್ನರು ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಇತರೆ ಉಪ ಜಾತಿಗಳು) ವಿದ್ಯಾರ್ಥಿಗಳಿಗೆ ರೂ. 2.50 ಲಕ್ಷ. ಪ್ರವರ್ಗ-2ಎ, (ಬೌದ್ದರು ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಇತರೆ ಉಪ ಜಾತಿಗಳು) ಪ್ರವರ್ಗ-2ಬಿ (ಮುಸ್ಲಿಂ) ಮತ್ತು 3ಬಿ ಕ್ರಿಶ್ಚಿಯನ್,ಜೈನ್ (ದಿಗಂಬರ್) ವಿದ್ಯಾರ್ಥಿಗಳಿಗೆ ರೂ. 2.00 ಲಕ್ಷ ಗಳನ್ನು ನಿಗಧಿಪಡಿಸಿಸಲಾಗಿದೆ.
ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಟ 5 ಕಿ.ಮೀ ದೂರದಲ್ಲಿರಬೇಕು. ಹಾಗೂ ಸ್ವಂತ ಸ್ಥಳ, ನಗರ, ಪಟ್ಟಣಕ್ಕೆ ಸೇರಿದವರಾಗಿರಬಾರದು. ಒಂದೇ ಊರಿನ, ನಗರ, ಪಟ್ಟಣದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಯೋಜನೆಯಡಿ ಪ್ರಥಮ ಬಾರಿಗೆ ಸೌಲಭ್ಯವನ್ನು ಪಡೆಯಲು ಈ ಹಿಂದನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಯೋಜನೆಯಡಿ ಸಹಾಯಧನ ಆಯಾ ವರ್ಷಕ್ಕೆ ಲಭ್ಯವಿರುವ ಅನುದಾನ ಹಾಗೂ ಭೌತಿಕ ಗುರಿಗೆ ತಕ್ಕಂತೆ ಸ್ವೀಕೃತವಾದ ಅರ್ಹ ಅರ್ಜಿಗಳಲ್ಲಿ ಪಡೆದ ಅಂಕ, ಕೋರ್ಸುಗಳ ಆಧಾರದ ಮೇಲೆ ಮಂಜೂರು ಮಾಡಲಾಗುವುದು. ಮುಕ್ತ ವಿಶ್ವವಿದ್ಯಾಲಯ/ ದೂರ ಶಿಕ್ಷಣ (ಕರ್ರೇಸ್ಪಾಂಡೆನ್ಸ್) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾಸಿರಿ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. ಈ ಯೋಜನೆಯಡಿ ತಪ್ಪು ಮಾಹಿತಿ ನೀಡಿ ಅಥವಾ ಸರ್ಕಾರಿ, ಖಾಸಗಿ (ಅನುದಾನಿತ) ವಸತಿ ನಿಲಯಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆದಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು, ಪಡೆದಿರುವ ಎಲ್ಲಾ ಮೊತ್ತವನ್ನು ಬಡ್ಡಿ ಸಮೇತ ವಸೂಲಿ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ : ನಿಗಧಿತ ಅರ್ಜಿ ನಮೂನೆಯು ಇಲಾಖೆ ವೆಬ್‍ಸೈಟ್ www.gokdom.kar.nic.in, www.dom.karnataka.gov.in\koppal ಅಥವಾ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಕಛೇರಿಯಲ್ಲಿ ಪಡೆಯಬಹುದು. ಅರ್ಹತೆಯುಳ್ಳ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು (ನಿಗಧಿತ ನಮೂನೆಯಲ್ಲಿ) ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಕಾಲೇಜು ಹಾಗೂ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿಗೆ ಎಲ್ಲಾ ದಾಖಲೆಗಳೊಂದಿಗೆ ಆ. 31 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ : ಅರ್ಜಿ ಅಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ : ಅರ್ಜಿ ಅಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ : ಅರ್ಜಿ ಅಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_9.html
0 Response to "ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ : ಅರ್ಜಿ ಅಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ