ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್

ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್
ಲಿಂಕ್ : ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್

ಓದಿ


ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್



ಕೊಪ್ಪಳ ಆ. 25 (ಕರ್ನಾಟಕ ವಾರ್ತೆ): ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲೇಬೇಕು,  ಈ ನಿಟ್ಟಿನಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷ್ಯ ತೋರಿದಲ್ಲಿ, ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಎಚ್ಚರಿಕೆ ನೀಡಿದರು.

     ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಿರ್ವಹಿಸಲಾಗುವ ವಿವಿಧ ಯೋಜನೆಗಳು ಹಾಗೂ ಕಾರ್ಯ ಅನುಷ್ಠಾನ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಹಲವು ಕಠಿಣ ಕಾಯ್ದೆಗಳು ಜಾರಿಯಲ್ಲಿವೆ.  ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಒಟ್ಟು 52 ಬಾಲ್ಯ ವಿವಾಹ ಪ್ರಕರಣಗಳು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಬಂದಿದ್ದು, ಈ ಪೈಕಿ ಎಷ್ಟು ಜನ ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಆಗಿದೆ.  ಬಾಲ ಕಾರ್ಮಿಕ ಪದ್ಧತಿಯಡಿ ಕೇವಲ 01 ಪ್ರಕರಣ ಮಾತ್ರ ಬಂದಿದ್ದು, ಬಾಲ ಕಾರ್ಮಿಕರ ಪತ್ತೆ ಕಾರ್ಯ ಹಾಗೂ ಕಾನೂನು ರೀತ್ಯ ಕ್ರಮ ಕೈಗೊಳ್ಳುವ ಕಾರ್ಯ ಇನ್ನಷ್ಟು ತೀವ್ರಗೊಳ್ಳಬೇಕಿದೆ.  ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧಿಸಿದಂತೆ ಈ ವರ್ಷ 04 ಪ್ರಕರಣಗಳು ಸಮಿತಿಯ ಮುಂದೆ ಬಂದಿದೆ.  ಈ ಪ್ರಕರಣಗಳಲ್ಲಿ ಆದ ಪ್ರಗತಿ ಬಗ್ಗೆ ಜಿಲ್ಲಾಧಿಕಾರಿಗಳು ಅಧಿಕಾರಿಗಳನ್ನು ಪ್ರಶ್ನಿಸಿದರು.  ಇದಕ್ಕೆ ಉತ್ತರಿಸಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀರೇಂದ್ರ ನಾವದಗಿ ಅವರು, ಬಾಲ್ಯ ವಿವಾಹ ಪ್ರಕರಣಗಳಲ್ಲಿ, ಮಕ್ಕಳ ಸಹಾಯವಾಣಿ ಮೂಲಕ ಹಾಗೂ ಇತರೆ ಮೂಲಗಳಿಂದ ಬಂದ ಮಾಹಿತಿಯಂತೆ ಬಾಲ್ಯ ವಿವಾಹ ಜರುಗುವುದನ್ನು ತಡೆಗಟ್ಟಲಾಗುತ್ತಿದ್ದು, ಮಕ್ಕಳ ಸಹಾಯವಾಣಿ ಮೂಲಕ ಇಂತಹ 178 ದೂರುಗಳು ಬಂದಿದ್ದವು.  ಈ ಪೈಕಿ ಬಹಳಷ್ಟು ದೂರುಗಳು ತಪ್ಪು ಮಾಹಿತಿಯಿಂದಾಗಿದ್ದು, ಉಳಿದಂತೆ ಹೆಚ್ಚು ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ ಎಂದರು.  ಇದಕ್ಕೆ ಅಸಮಾಧಾನಗೊಂಡ ಜಿಲ್ಲಾಧಿಕಾರಿಗಳು, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಇಂತಹ ಪ್ರಕರಣಗಳನ್ನು ಎಲ್ಲ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು.  ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕ ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಾಗದೆ, ಸ್ಥಳೀಯವಾಗಿಯೇ ಪರಿಹರಿಸಲಾಗುತ್ತಿದೆ.  ಇದರಿಂದ ತಪ್ಪಿತಸ್ತರಿಗೆ ಶಿಕ್ಷೆಯಾಗುವುದಿಲ್ಲ.  ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ನಿಷೇಧ ಕಾಯ್ದೆ ಕುರಿತು ಹೆಚ್ಚಿನ ಜಾಗೃತಿ ಮೂಡುವುದಿಲ್ಲ.  ಹೀಗಾದಲ್ಲಿ ಜಿಲ್ಲೆಯಲ್ಲಿ ಅನಿಷ್ಠ ಪದ್ಧತಿಗಳ ನಿರ್ಮೂಲನೆಯಾಗುವುದು ಹೇಗೆ.  ಅಧಿಕಾರಿಗಳು ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿ, ಎಫ್‍ಐಆರ್ ದಾಖಲಿಸಬೇಕು.  ಯಾರಾದರೂ ದೂರು ದಾಖಲಿಸುವಲ್ಲಿ ಅಡ್ಡಿಯುಂಟು ಮಾಡಿದರೆ, ಅಥವಾ ನಿರ್ಲಕ್ಷ್ಯ ತೋರಿದಲ್ಲಿ, ನೇರವಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಿದರು. 
ಅಧಿಕಾರಿಗಳ ಅಸಹಕಾರ ದೂರು :
************ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ನಿಲೋಫರ್ ರಾಂಪುರಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ಮಕ್ಕಳ ಮೇಲಿನ ಹಲ್ಲೆ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಇವುಗಳಿಗೆ ಸಂಬಂಧಿಸಿದಂತೆ ಮಕ್ಕಳ ಕಲ್ಯಾಣ ಸಮಿತಿ ಹೆಚ್ಚು ಆಸಕ್ತಿಯಿಂದ ಕಾರ್ಯ ನಿರ್ವಹಿಸುತ್ತಿದೆ.  ಆದರೆ ನಮ್ಮ ಕಾರ್ಯಕ್ಕೆ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ.  ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆಯಾ ಶಿಕ್ಷಣಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ.  ಸಕಾಲದಲ್ಲಿ ವರದಿಗಳನ್ನು ಸಲ್ಲಿಸುತ್ತಿಲ್ಲ.  ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲು ಸಾಧ್ಯವಾಗುತ್ತಿಲ್ಲ ಎಂದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕಳೆದ 05 ವರ್ಷಗಳಲ್ಲಿ ಜಿಲ್ಲೆಯಿಂದ ಆದ ಎಲ್ಲ ಬಾಲಕಾರ್ಮಿಕ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸದ್ಯದ ಸ್ಥಿತಿಗತಿಯ ವಿವರವುಳ್ಳ ಎಲ್ಲ ವರದಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಸೂಕ್ತ ದಾಖಲೆಯೊಂದಿಗೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು.  ಒಂದು ವೇಳೆ ಶಿಕ್ಷಣ ಇಲಾಖೆ ಅಥವಾ ಯಾವುದೇ ಇಲಾಖೆ ಅಧಿಕಾರಿಗಳಿಂದ ವಿಳಂಬವಾಗುತ್ತಿರುವುದು ನಿಜವಾದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಬಾಲಮಂದಿರಗಳ ಮಕ್ಕಳ ಆರೋಗ್ಯ ತಪಾಸಣೆ :
*********** ಕೊಪ್ಪಳದ ಕಿನ್ನಾಳ ರಸ್ತೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಬಾಲಕರ ಬಾಲಮಂದಿರವಿದೆ.  ಇಲ್ಲಿ 49 ಮಕ್ಕಳು ಇದ್ದಾರೆ. ಅದೇ ರೀತಿ ಭಾಗ್ಯನಗರದಲ್ಲಿ ಬಾಲಕಿಯರ ಬಾಲಮಂದಿರವಿದ್ದು, 40 ಮಕ್ಕಳಿಗೆ ಇಲ್ಲಿ ಆಶ್ರಯ ನೀಡಲಾಗಿದೆ.  ಬಾಲಮಂದಿರಗಳಲ್ಲಿ  ಸದ್ಯ ನೀರಿನ ಕೊರತೆ ಇದೆ ಎಂದು ಬಾಲಮಂದಿರಗಳ ಅಧೀಕ್ಷಕರು ಸಭೆಗೆ ಮಾಹಿತಿ ನೀಡಿದರು.  ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ತಜ್ಞ ವೈದ್ಯರನ್ನು ಕಾಲಕಾಲಕ್ಕೆ ಕಳುಹಿಸಿ, ಮಕ್ಕಳ ಆರೋಗ್ಯ ತಪಾಸಣೆಯನ್ನು ನಿರಂತರವಾಗಿ ಕೈಗೊಳ್ಳಬೇಕು.  ಬಾಲಮಂದಿರಗಳಿಗೆ ಸ್ವಂತ ಕಟ್ಟಡಕ್ಕಾಗಿ ಸೂಕ್ತ ನಿವೇಶನ ಗುರುತಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಮರು ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
191 ಪೋಕ್ಸೊ ಪ್ರಕರಣಗಳು :
************ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆ (ಪೋಕ್ಸೋ) ಯಡಿ ಜಿಲ್ಲೆಯಲ್ಲಿ 2012-13 ರಿಂದ ಈವರೆಗೆ ಒಟ್ಟು 191 ಪ್ರಕರಣಗಳು ದಾಖಲಾಗಿವೆ.  ಈ ಪೈಕಿ ಈವರೆಗೆ 45 ಪ್ರಕರಣಗಳಲ್ಲಿ 3. 30 ಲಕ್ಷ ರೂ. ಪರಿಹಾರ ಧನ ಬಾಧಿತರಿಗೆ ನೀಡಲಾಗಿದೆ.  ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಒಟ್ಟು 24 ಮಕ್ಕಳು ಕಾಣೆಯಾದ ಕುರಿತು ವರದಿಯಿದ್ದು, ಈ ಪೈಕಿ 13 ಮಕ್ಕಳು ಪತ್ತೆಯಾಗಿದ್ದಾರೆ, ಇನ್ನೂ 11 ಮಕ್ಕಳ ಪತ್ತೆ ಕಾರ್ಯ ಬಾಕಿ ಇದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸಭೆಯ ಗಮನಕ್ಕೆ ತಂದರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.  ಒಂದು ವೇಳೆ ಪ್ರಕರಣಗಳ ಇತ್ಯರ್ಥ ವಿಳಂಬವಾಗುತ್ತಿದ್ದಲ್ಲಿ, ತಮ್ಮ ಗಮನಕ್ಕೆ ತರಬೇಕು.  ಪ್ರಕರಣ ಪರಿಶೀಲಿಸಿ, ಸೂಕ್ತ ಕ್ರಮ ಜರುಗಿಸಲಾಗುವುದು.  ಕಾಣೆಯಾದ ಮಕ್ಕಳ ಪತ್ತೆ ಕಾರ್ಯವನ್ನು ತ್ವರಿತಗೊಳಿಸಲಾಗುವುದು ಎಂದರು. 
     ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ನಿಲೋಫರ್ ಎಸ್ ರಾಂಪುರಿ, ಸದಸ್ಯರುಗಳಾದ ಯಮುನಮ್ಮ, ಕಲ್ಲಪ್ಪ ತಳವಾರ್, ಸರೋಜಾ ಬಾಕಳೆ, ಅಲ್ಲದೆ ಶೇಖರಗೌಡ ರಾಮತ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿರೂಪಾಕ್ಷರೆಡ್ಡಿ ಮಾದಿನೂರ, ಮಕ್ಕಳ ಸಹಾಯವಾಣಿ ನಿರ್ವಹಿಸುವ ಸಂಸ್ಥೆ ಅಧ್ಯಕ್ಷ ನಾಗರಾಜ ದೇಸಾಯಿ, ಶರಣಪ್ಪ, ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್

ಎಲ್ಲಾ ಲೇಖನಗಳು ಆಗಿದೆ ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್ ಲಿಂಕ್ ವಿಳಾಸ https://dekalungi.blogspot.com/2018/08/blog-post_94.html

Subscribe to receive free email updates:

0 Response to "ಬಾಲ್ಯ ವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ತಾಕೀತು : ತಪ್ಪಿತಸ್ಥರಿಗೆ ಕಾನೂನು ರೀತ್ಯ ಕ್ರಮ ಆಗಲೇಬೇಕು- ಡಿ.ಸಿ. ಸುನೀಲ್ ಕುಮಾರ್"

ಕಾಮೆಂಟ್‌‌ ಪೋಸ್ಟ್‌ ಮಾಡಿ