ಶೀರ್ಷಿಕೆ : NEWS AND PHOTO DATE: 09-08-2018
ಲಿಂಕ್ : NEWS AND PHOTO DATE: 09-08-2018
NEWS AND PHOTO DATE: 09-08-2018
ಪೊಲೀಸ್‍ರು ಸಂವಿಧಾನದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಲು ಸಲಹೆ
********************************************************************
ಕಲಬುರಗಿ,ಆ.09.(ಕ.ವಾ.)-ಪೊಲೀಸರು ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಯಾವುದೇ ತರಹದ ಜಾತಿ, ಧರ್ಮ, ಆಸೆ-ಆಮಿಷಗಳಿಗೆ ಒಳಗಾಗದೇ ಧೈರ್ಯದಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಸಲಹೆ ನೀಡಿದರು.
ಅವರು ಗುರುವಾರ ಕಲಬುರಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 17ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್‍ಸ್ಟೇಬಲ್‍ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ಸಮಯದಲ್ಲಿ ಸಂವಿಧಾನದ ಎಲ್ಲ ಅಂಶಗಳು ಮತ್ತು ಕಾನೂನುಗಳನ್ನು ಬೋಧಿಸಲಾಗಿದೆ. ಅವುಗಳ ರೀತ್ಯ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಬಗ್ಗೆ ವಿಶ್ವಾಸ ಮೂಡಿಸಬೇಕು ಎಂದರು.
ಪೊಲೀಸ್ ಇಲಾಖೆಯು ಶಿಸ್ತಿಗೆ ಹೆಸರಾದ ಇಲಾಖೆಯಾಗಿದೆ. ಪೊಲೀಸರು ಸಾರ್ವಜನಿಕರ ನಿರೀಕ್ಷೆಗಳನ್ನು ತುಲುಪಿ ಅವರಲ್ಲಿ ಭರವಸೆ ಮೂಡಿಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಪಾಲನೆ ಮಾಡಿ ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು. ಸಶಸ್ತ್ರ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಮುಖ್ಯಮಂತ್ರಿ, ಪ್ರಧಾನಮಂತ್ರಿ, ಗಣೇಶ ಹಬ್ಬ, ರಂಜಾನ್ ಹಬ್ಬಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೇಮಿಸುವ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಪೊಲೀಸ್ ಇಲಾಖೆಯ ಒಬ್ಬ ಸಿಬ್ಬಂದಿ ತನ್ನ ನಿವೃತ್ತಿ ಕಾಲದವರೆಗೆ ಕೈಗೊಳ್ಳುವ ಎಲ್ಲ ಕರ್ತವ್ಯಗಳನ್ನು ಪ್ರಶಿಕ್ಷಣಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿ ಹೇಳಲಾಗಿದೆ. ಇದರ ಪ್ರಯೋಜನವನ್ನು ತಮ್ಮ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹಾಗೂ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಜಯಪ್ರಕಾಶ ವರದಿ ವಾಚನ ಮಾಡಿ, ಕಲಬುರಗಿಯ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯಿಂದ ಇಲ್ಲಿಯವರೆಗೆ 9 ಸಿವಿಲ್, 6 ಸಶಸ್ತ್ರ ಮೀಸಲು ಹಾಗೂ 1 ಮಹಿಳಾ ಪೊಲೀಸ್ ಪೇದೆ ತಂಡದ ಪ್ರಶಿಕ್ಷಣಾರ್ಥಿಗಳು ಸೇರಿದಂತೆ ಒಟ್ಟು 16 ತಂಡಗಳಿಗೆ ಮೂಲ ತರಬೇತಿ ನೀಡಲಾಗಿದೆ. ಒಟ್ಟು 2563 ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಲಾಗಿದ್ದು, ಇಂದು ಪಥಸಂಚಲನದಲ್ಲಿ ಭಾಗಿಯಾಗಿರುವ 17ನೇ ತಂಡದ 146 ಪ್ರಶಿಕ್ಷಣಾರ್ಥಿಗಳಿಗೆ ಮೂಲ ತರಬೇತಿ ನೀಡಲಾಗಿದೆ. ಪ್ರಶಿಕ್ಷಣಾರ್ಥಿಗಳಿಗೆ ಒಳಾಂಗಣ, ಹೊರಾಂಗಣ ತರಬೇತಿಗಳಲ್ಲದೇ ವಿಶೇಷ ತರಬೇತಿಗಳನ್ನು ಸಹ ನುರಿತ ತಜ್ಞರಿಂದ ನೀಡಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸರ್ವೋತ್ತಮ ಪ್ರಶಿಕ್ಷಣಾರ್ಥಿ ಮಹೇಶ ಆರ್. ಬಿದರಮಳಿ, ಒಳಾಂಗಣ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಪಡೆದ ಜಿ. ಖಲೀಪ್ ಪೀರ್, ದ್ವಿತೀಯ ಬಹುಮಾನ ನಾಗರಾಜ್, ತೃತೀಯ ಬಹುಮಾನ ಅನೀಲ ಟಿ.ವೈ., ಹೊರಾಂಗಣ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಮಹೇಶ ಆರ್. ಬಿದರಮಳಿ, ದ್ವಿತೀಯ ಬಹುಮಾನ ಹನುಮಂತ ದಳವಾಯಿ, ತೃತೀಯ ಬಹುಮಾನ ಹಸನಸಾಬ ಜಕಾತಿ, ಫೈರಿಂಗ್ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಶಿವಾ ಎಸ್.ಆರ್., ದ್ವಿತೀಯ ಬಹುಮಾನ ಹನುಮಂತ ದಳವಾಯಿ, ತೃತೀಯ ಬಹುಮಾನ ಮಹೇಶ ಆರ್. ಬಿದರಮಳಿ ಅವರಿಗೆ ವಿತರಣೆ ಮಾಡಲಾಯಿತು. ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಅವರು ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 17ನೇ ತಂಡದ 6 ತುಕಡಿಗಳ ಸಶಸ್ತ್ರ ಪೊಲೀಸ್ ಪ್ರಶಿಕ್ಷಣಾರ್ಥಿಗಳ ಪಥ ಸಂಚಲನ ಪರಿವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಎ ವಿಭಾಗದ ಡಿವೈಎಸ್‍ಪಿ ಲೋಕೇಶ, ನಾಗನಹಳ್ಳಿ ಪೊಲೀಸ್ ತರಬೇತಿ ಕಾಲೇಜಿನ ಪ್ರಾಂಶುಪಾಲ ಸವಿತಾ ಹೂಗಾರ, ಕೆ.ಎಸ್.ಆರ್.ಪಿ. 6ನೇ ಪಡೆ ಕಮಾಂಡಂಟ್ ಬಸವರಾಜ ಜಿಳ್ಳೆ, ಹಿರಿಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳ ಪೋಷಕರು ಮತ್ತಿತರರು ಪಾಲ್ಗೊಂಡಿದ್ದರು.

ಜಿಲ್ಲೆಯ 8.50 ಲಕ್ಷ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆ ನುಂಗಿಸುವ ಗುರಿ
***************************************************************
ಕಲಬುರಗಿ,ಆ.09.(ಕ.ವಾ.)-ಕಲಬುರಗಿ ಜಿಲ್ಲೆಯಾದ್ಯಂತ ಆಗಸ್ಟ್ 10 ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. 19 ವರ್ಷದೊಳಗಿನ ಒಟ್ಟು 8.50 ಲಕ್ಷ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆಗಳನ್ನು ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಎಂ.ಕೆ. ಪಾಟೀಲ ತಿಳಿಸಿದರು.
ಅವರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ 3098 ಅಂಗನವಾಡಿ ಕೇಂದ್ರಗಳು, 3604 ಶಾಲೆಗಳು, 191 ಕಾಲೇಜುಗಳ ಮೂಲಕ 1 ರಿಂದ 2 ವರ್ಷಗೊಳಗಿನ 69493 ಹಾಗೂ 3 ರಿಂದ 19 ವರ್ಷದೊಳಗಿನ 781088 ಮಕ್ಕಳಿಗೆ ಜಂತು ನಿವಾರಕ ಮಾತ್ರೆಗಳನ್ನು ನುಂಗಿಸಲಾಗುವುದು. ಈ ಬಾರಿ ಖಾಸಗಿ ಶಾಲೆಯ ಮಕ್ಕಳಿಗೂ ಸಹ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂದರು.
ಜಂತು ಹುಳು ರೋಗವು ಮುಖ್ಯವಾಗಿ ಕಲುಷಿತ ನೀರು, ಬರಿಗಾಲಿನಿಂದ ನಡೆಯುವುದು, ಅಶುದ್ಧ ಆಹಾರ ಸೇವನೆಯಿಂದ ಹರಡುತ್ತದೆ. ಜಂತು ಹುಳು ಬಾದೆಯಿಂದ ಬಳಲುವ ಮಕ್ಕಳು ಸದಾ ಅನಾರೋಗ್ಯದಿಂದ ಪೀಡಿತರಾಗಿ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಇದರಿಂದಾಗಿ ಕಲಿಕೆ ಕ್ಷಮತೆ ಕಡಿಮೆಯಾಗಿ ಮಕ್ಕಳ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತದೆ. ಮಕ್ಕಳಿಗೆ 6 ತಿಂಗಳಿಗೊಂದು ಬಾರಿ ಅಲ್ಬೆಂಡಾಜೋಲ್ ಮಾತ್ರೆ ನುಂಗಿಸುವ ಮೂಲಕ ಈ ಸಮಸ್ಯೆಯ ನಿವಾರಣೆಗೆ ಪ್ರಯತ್ನಿಸಲಾಗುತ್ತಿದೆ ಎಂದರು.
ಎಲ್ಲ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿಮಕ್ಕಳಿಗೆ ಮಾತ್ರೆ ನುಂಗಿಸುವಾಗ ಶೌಚದ ನಂತರ ಹಾಗೂ ಊಟಕ್ಕೆ ಮೊದಲು ಸ್ವಚ್ಛವಾಗಿ ಕೈ ತೊಳೆಯುವ ಕ್ರಮಗಳನ್ನು ತಿಳಿಸಲಾಗುತ್ತಿದೆ. ವೈಯಕ್ತಿಕ ಸ್ವಚ್ಛತೆ ಕುರಿತು ಸಹ ಜಾಗೃತಿ ಮೂಡಿಸಲಾಗುತ್ತಿದೆ. ಎರಡು ವರ್ಷದ ಒಳಗಿನ ಮಕ್ಕಳಿಗೆ ಅರ್ಧ ಹಾಗೂ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಒಂದು ಅಲ್ಬೆಂಡಾಜೋಲ್ ಮಾತ್ರೆ ನುಂಗಿಸಲಾಗುತ್ತದೆ. ಜಿಲ್ಲೆಯಲ್ಲಿ ಅಲ್ಬೆಂಡಾಜೋಲ್ ಮಾತ್ರೆಯ ಸಾಕಷ್ಟು ದಾಸ್ತಾನು ಇದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಶಿಕ್ಷಕರಿಗೆ ಮಾತ್ರೆ ನುಂಗಿಸುವ ತರಬೇತಿ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಮುಂದುವರೆದ ಗ್ರಾಮ ಸ್ವರಾಜ್ ಅಭಿಯಾನದಡಿ ತೀವ್ರಗೊಂಡ ಮಿಷನ್ ಇಂದ್ರಧನುಷ ಮೊದಲ ಸುತ್ತು ಕಾರ್ಯಕ್ರಮವನ್ನು ಆಗಸ್ಟ್ 13, 14, 17 ಹಾಗೂ 18ರಂದು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಾದ್ಯಂತ 2882478 ಜನಸಂಖ್ಯೆಯ ಸಮೀಕ್ಷೆ ಕೈಗೊಂಡು 1975 ಗರ್ಭಿಣಿಯರು, 2 ವರ್ಷದೊಳಗಿನ 9730 ಮಕ್ಕಳು, 5-6 ವರ್ಷದೊಳಗಿನ 6067 ಮಕ್ಕಳಿಗೆ ಲಸಿಕೆ ನೀಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ 1026 ಲಸಿಕಾ ಕೇಂದ್ರಗಳನ್ನು ಹಾಗೂ 287 ಸಂಚಾರಿ ಲಸಿಕಾ ತಂಡಗಳನ್ನು ಸಹ ಸಿದ್ಧಪಡಿಸಲಾಗಿದೆ. ಸೆಪ್ಟೆಂಬರ್ ಮಾಹೆಯಲ್ಲಿ 10, 11, 12 ಮತ್ತು 14ರಂದು ಎರಡನೇ ಸುತ್ತು ಹಾಗೂ ಅಕ್ಟೋಬರ್ ತಿಂಗಳಲ್ಲಿ 9, 10, 12 ಮತ್ತು 15ರಂದು ಮೂರನೇ ಸುತ್ತಿನ ತೀವ್ರಗೊಂಡ ಇಂದ್ರಧನುಷ ಲಸಿಕಾ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಆರ್.ಸಿ.ಹೆಚ್. ಅಧಿಕಾರಿ ಡಾ. ಅಂಬಾರಾಯ ರುದ್ರವಾಡಿ, ಸರ್ವೇಲನ್ಸ್ ಅಧಿಕಾರಿ ಡಾ. ತಾಳಿಕೋಟಿ, ತಾಲೂಕು ವೈದ್ಯಾಧಿಕಾರಿ ಡಾ. ರಾಜಕುಮಾರ ಮತ್ತಿತರರು ಪಾಲ್ಗೊಂಡಿದ್ದರು.

ಆಗಸ್ಟ್ 17ರಂದು ಜಿ.ಪಂ. ಸಾಮಾನ್ಯ ಸಭೆ
**************************************
ಕಲಬುರಗಿ,ಆ.09.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿಯ 13ನೇ ಸಾಮಾನ್ಯ ಸಭೆಯು 2018ರ ಆಗಸ್ಟ್ 17ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿಯ ಹೊಸ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಈ ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಆಯಾ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಖುದ್ದಾಗಿ ಈ ಸಭೆಗೆ ಹಾಜರಾಗಬೇಕು. ಯಾವುದೇ ಅಧಿಕಾರಿಗಳು ರಜೆ ಮೇಲೆ ಅಥವಾ ಸಭೆಗೆ ತೆರಳುಬೇಕಾದಲ್ಲಿ ಅಧ್ಯಕ್ಷರ ಅನುಮತಿ ಪಡೆದುಕೊಂಡು ಹೋಗಬೇಕೆಂದು ಅವರು ತಿಳಿಸಿದ್ದಾರೆ.

ಕಾಲುವೆಯ ಆಧುನೀಕರಣ ಕಾಮಗಾರಿ: ಕಾಲುವೆ ನೀರು ಸ್ಥಗಿತ
******************************************************
ಕಲಬುರಗಿ,ಆ.09.(ಕ.ವಾ.)-ಕೆಳದಂಡೆ ಮುಲ್ಲಾಮಾರಿ ಯೋಜನೆಯ ಬಲದಂಡೆ ಮುಖ್ಯ ಕಾಲುವೆಯ ಆಧುನೀಕರಣ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ 9713 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ 2019ರ ಮಾರ್ಚ್‍ವರೆಗೆ ಕಾಲುವೆಯಲ್ಲಿ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗುತ್ತದೆ. ಸಂಬಂಧಪಟ್ಟ ರೈತರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಕೆಳದಂಡೆ ಮುಲ್ಲಾಮಾರಿ ಯೋಜನೆ ಆಣೆಕಟ್ಟು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುರಿ-ಹೈನುಗಾರಿಕೆ ಘಟಕ ಸ್ಥಾಪನೆ: ಮಹಿಳೆಯರಿಂದ ಅರ್ಜಿ ಆಹ್ವಾನ
***********************************************************
ಕಲಬುರಗಿ,ಆ.09.(ಕ.ವಾ.)-ಪಶುಪಾಲನೆ ಹಾಗೂ ಪಶು ವೈದ್ಯಕೀಯ ಇಲಾಖೆಯಿಂದ 2018-19ನೇ ಸಾಲಿಗೆ ಮಹಿಳಾ ಕಾರ್ಯಕ್ರಮ (ಅಮೃತ ಯೋಜನೆ ಕರು ಘಟಕ, ಕುರಿ ಘಟಕ, ಹೈನುಗಾರಿಕೆ) ಯೋಜನೆಯಡಿ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಕರು, ಕುರಿ ಹಾಗೂ ಹೈನುಗಾರಿಕೆ ಘಟಕ ಸ್ಥಾಪನೆಗಾಗಿ ಮಹಾನಗರಪಾಲಿಕೆ ಹಾಗೂ ನಗರ ಪ್ರದೇಶ ಹೊರತುಪಡಿಸಿ ಅರ್ಹ ಮಹಿಳಾ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪಶು ಪಾಲನಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಭೂರಹಿತ, ಸಣ್ಣ ರೈತ, ಅತೀ ಸಣ್ಣ ರೈತ, ಇತರೆ ವರ್ಗ, ಹಾಲು ಉತ್ಪಾದಕರ ಸಹಕಾರ ಸಂಘದ ಮಹಿಳಾ ಸದಸ್ಯರು, ದೇವದಾಸಿಯರು, ವಿಧವೆಯರು ಹಾಗೂ ಸಂಕಷ್ಟಕ್ಕೊಳಗಾದ ಮಹಿಳೆಯರು ಅರ್ಜಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿ ಸಾಮಾನ್ಯ ವರ್ಗದ ಮಹಿಳೆಯರಿಗೆ ಸಹಾಯಧನ ವಿರುತ್ತದೆ. ನಿಗದಿತ ಅರ್ಜಿ ನಮೂನೆಯನ್ನು ಆಗಸ್ಟ್ 10 ರಿಂದ ಆಯಾ ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯ ಮೂರು ಪ್ರತಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸೆಪ್ಟೆಂಬರ್ 10ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು.
ಈ ಹಿಂದೆ 2015-16, 2016-17 ಮತ್ತು 2017-18ನೇ ಸಾಲಿನ ಈ ಯೋಜನೆಯಡಿ ಆಯ್ಕೆಯಾಗಿ ಸೌಲಭ್ಯ ಪಡೆದುಕೊಂಡಿರುವ ಫಲಾನುಭವಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಪಡೆಯಲು ಅರ್ಹರಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಪಶು ಆಸ್ಪತ್ರೆಯ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿಯ ಪತ್ತೆಗೆ ಮನವಿ
************************************************
ಕಲಬುರಗಿ,ಆ.09.(ಕ.ವಾ.)-ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ 30 ವರ್ಷದ ಮಾನಸಿಕ ಅಸ್ವಸ್ಥ ವ್ಯಕ್ತಿಯಾದ ಶರಣಪ್ಪ ತಂದೆ ಮಲ್ಲಪ್ಪ ಕುಂಟನೂರ 2018ರ ಜುಲೈ 15ರಂದು ಮಧ್ಯಾಹ್ನ 2 ಗಂಟೆಗೆ ನರಿಬೋಳ ಗ್ರಾಮದ ತಮ್ಮ ಮನೆಯಿಂದ ಊರಲ್ಲಿ ಹೊರಗಡೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವನು ಈವರೆಗೆ ಮರಳಿ ಮನೆಗೆ ಬಾರದೇ ಕಾಣೆಯಾಗಿರುತ್ತಾನೆ. ಈತನನ್ನು ಎಲ್ಲ ಸಂಬಂಧಿಕರಲ್ಲಿ ಹುಡುಕಿದರೂ ಎಲ್ಲಿಯೂ ಈತನು ಸಿಕ್ಕಿರುವುದಿಲ್ಲ.
ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ 2018ರ ಜುಲೈ 22ರಂದು ಪ್ರಕರಣ ದಾಖಲಿಸಲಾಗಿದೆ. ಐದು ಅಡಿ ಆರು ಇಂಚು ಎತ್ತರ, ಕಪ್ಪು ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿರುವ ಈತÀನು ಧೋತರ ಮತ್ತು ಅಂಗಿ ಧರಿಸಿದ್ದು, ಅಗಲವಾದ ಕಿವಿ ಇದ್ದು, ಬಲ ಕೈಗೆ ಖಡಗ ಹಾಕುತ್ತಿದ್ದು, ಬಲ ಕಾಲಿನ ಪಾದದ ಮೇಲೆ ಎತ್ತಿನ ಬಂಡಿ ಹಾಯಿದ ಹಳೆಯ ಗಾಯದ ಗುರುತು ಇರುತ್ತದೆ. ಕನ್ನಡ ಭಾಷೆ ಮಾತನಾಡುತ್ತಾನೆ. ಯುವಕನ ಶೋಧನಾ ಕಾರ್ಯ ನಡೆದಿದೆ.
ಈತನ ಸುಳಿವು ಸಿಕ್ಕಲ್ಲಿ ಕೂಡಲೇ ಜೇವರ್ಗಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08442-236033, ಸಿಪಿಐ ಮೊಬೈಲ್ ಸಂಖ್ಯೆ 9480803560., ಜೇವರ್ಗಿ ವೃತ್ತ ಸಿಪಿಐ ಮೊಬೈಲ್ ಸಂಖ್ಯೆ 9480803533 ಹಾಗೂ ಕಲಬುರಗಿ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 08472-263604ಗೆ ತಿಳಿಸುವಂತೆ ಕೋರಲಾಗಿದೆ.

ಹೀಗಾಗಿ ಲೇಖನಗಳು NEWS AND PHOTO DATE: 09-08-2018
ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 09-08-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 09-08-2018 ಲಿಂಕ್ ವಿಳಾಸ https://dekalungi.blogspot.com/2018/08/news-and-photo-date-09-08-2018.html
0 Response to "NEWS AND PHOTO DATE: 09-08-2018"
ಕಾಮೆಂಟ್ ಪೋಸ್ಟ್ ಮಾಡಿ