News and photo Date: 28--8--2018

News and photo Date: 28--8--2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 28--8--2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 28--8--2018
ಲಿಂಕ್ : News and photo Date: 28--8--2018

ಓದಿ


News and photo Date: 28--8--2018

ಆದಾಯ ತೆರಿಗೆ ಪಾವತಿಸಿ ಹೆಮ್ಮೆಪಡಿ
**********************************
ಕಲಬುರಗಿ,ಆ.28.(ಕ.ವಾ.)-ನಾಗರಿಕರು ನೇರವಾಗಿ ತೆರಿಗೆ ಪಾವತಿಸುವುದು ದೇಶದ ಅಭಿವೃದ್ಧಿಗೆ ಪೂರಕವಾಗುವುದು. ಆದಾಯ ಹೆಚ್ಚಿಗೆ ಇರುವವರು ಆದಾಯಕ್ಕೆ ತಕ್ಕಂತೆ ತೆರಿಗೆ ಪಾವತಿಸಲು ಹೆಮ್ಮೆಪಡುವಂತಾಗಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
ಅವರು ಮಂಗಳವಾರ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ, ಆದಾಯ ತೆರಿಗೆ ಇಲಾಖೆ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ನೌಕರರಿಗೆ ಹಮ್ಮಿಕೊಂಡಿದ್ದ ಆದಾಯ ತೆರಿಗೆ, ಟಿಡಿಎಸ್ ಹಾಗೂ ಸೇವಾ ನಿಯಮಾವಳಿಗಳ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಆದಾಯ ತೆರಿಗೆಯಲ್ಲಿ ನೇರ ಹಾಗೂ ಪರೋಕ್ಷ ಪದ್ಧತಿಗಳಿದ್ದು, ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ನೇರ ತೆರಿಗೆ ಸಂಗ್ರಹ ಪ್ರಮುಖ ಪಾತ್ರ ವಹಿಸುತ್ತದೆ. ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಎಲ್ಲ ವಸ್ತುಗಳ ಮೇಲೆ ಎಲ್ಲರಿಗೂ ಸಮನಾದ ತೆರಿಗೆ ವಿಧಿಸಲಾಗುತ್ತದೆ. ನೇರ ಮತ್ತು ಪರೋಕ್ಷ ತೆರಿಗೆಯಲ್ಲಿರುವ ಅಸಮತೋಲನವನ್ನು ಸರಿಪಡಿಸಲು ಎಲ್ಲ ಸರ್ಕಾರಗಳ ಉದ್ದೇಶವಾಗಿದ್ದು, ಹೆಚ್ಚಿಗೆ ಆದಾಯ ಪಡೆಯುವವರು ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು. ಮುಂದಿನ ವರ್ಷಗಳಲ್ಲಿ ತೆರಿಗೆ ಸಂಗ್ರಹಕ್ಕೆ ಬಹಳ ಪ್ರಾಮುಖ್ಯತೆ ನೀಡಲಾಗುವುದು ಎಂದರು.
ಸರ್ಕಾರಿ ನೌಕರರು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಮುಖಾಂತರ ಆದಾಯ ತೆರಿಗೆ ಪಾವತಿಸಬೇಕು. ಸರ್ಕಾರಿ ನೌಕರರು ಆದಾಯ ತೆರಿಗೆ ಬಗ್ಗೆ ಸಂಪೂರ್ಣ ತಿಳುವಳಿಕೆ ಹೊಂದಬೇಕು. ಕಚೇರಿ ಮುಖ್ಯಸ್ಥರು, ಲೆಕ್ಕಿಗರು, ಆದಾಯ ತೆರಿಗೆಯ ಜ್ಞಾನ ಹೊಂದಿ ಕಚೇರಿಗಳ ಸಹ ಸಿಬ್ಬಂದಿಗಳ ಆದಾಯ ತೆರಿಗೆ ಲೆಕ್ಕ ಹಾಕಬೇಕು. ಸರ್ಕಾರಿ ಸೇವಾ ನಿಯಮಾವಳಿಗಳಲ್ಲಿ ಕಾಲಕಾಲಕ್ಕೆ ತರುವ ತಿದ್ದುಪಡಿಗಳನ್ನು ಅರ್ಥಮಾಡಿಕೊಳ್ಳಬೇಕು. ಇಲಾಖೆಗಳಲ್ಲಿ ಪರಿವೀಕ್ಷಣಾವಧಿ ಘೋಷಿಸುವಲ್ಲಿ, ಮುಂಬಡ್ತಿ, ವೇತನ ಬಡ್ತಿ ನೀಡುವಲ್ಲಿ ಸದಾ ಗೊಂದಲಗಳು ಇರುತ್ತವೆ. ಸೇವಾ ನಿಯಮಾವಳಿಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿ ಇವು ಮರುಕಳಿಸದಂತೆ ನೋಡಿಕೊಳ್ಳಬೇಕು. ಖಜಾನೆಗೆ ಸಲ್ಲಿಸಿದ ಬಿಲ್ಲುಗಳು ಸರಿಯಿಲ್ಲ ಎಂದು ವಾಪಸ್ಸು ಇಲಾಖೆಗಳಿಗೆ ಕಳಿಸಲಾಗುತ್ತಿದೆ. ಬಿಲ್ಲು ಸರಿಯಾಗಿ ತಯಾರಿಸುವಲ್ಲಿ ಲೆಕ್ಕಿಗರು ಹಾಗೂ ವಿಷಯ ನಿರ್ವಾಹಕರು ಸರಿಯಾಗಿ ತಿಳಿದುಕೊಳ್ಳಬೇಕು. ಖಜಾನೆಯವರು ಇಲಾಖೆಯಿಂದ ಪದೇ ಪದೇ ಆಗುವ ತಪ್ಪುಗಳನ್ನು ಗುರುತಿಸಿ ಅವುಗಳ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಹೇಳಿದರು.
ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಡಿ. ಪ್ರಸಾದರಾವ್ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿ ಆದಾಯ ತೆರಿಗೆಯು ಅವಿಭಾಜ್ಯ ಅಂಗವಾಗಿದೆ. ನಾವು ಪಾವತಿಸುವ ಆದಾಯ ತೆರಿಗೆ ಆಧಾರದ ಮೇಲೆ ದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತದೆ. ದೇಶ ಕಾಯುವ ಸೈನಿಕರಿಗೂ ಸಹ ನಮ್ಮ ತೆರಿಗೆಯಿಂದಲೇ ಅವರ ವೇತನ ಪಾವತಿಸಲಾಗುತ್ತದೆ. ಕಾರಣ ಎಲ್ಲರೂ ಆದಾಯ ತೆರಿಗೆ ಪಾವತಿಸಲು ಮುಂದೆ ಬರಬೇಕು ಎಂದು ವಿವರಿಸಿದರು.
ಆದಾಯ ತೆರಿಗೆ ಸಹಾಯಕ ಆಯುಕ್ತ ಮನೀಷ ಕಸೋಡೇಕರ್ ಮಾತನಾಡಿ, ಸರ್ಕಾರಿ ಇಲಾಖೆಗಳು, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಮೂಲಕ ಶೇ. 90ರಷ್ಟು ಟಿಡಿಎಸ್ ಕಟಾವು ಮಾಡುವ ಬೇಡಿಕೆಯಿದೆ. ಟಿಡಿಎಸ್ ಕಟಾವು ಮಾಡಿದ ತಕ್ಷಣ ಸೂಕ್ತ ಸಮಯದಲ್ಲಿ ರಿಟರ್ನ್ ದಾಖಲಿಸಬೇಕು. ಇಲ್ಲದಿದ್ದಲ್ಲಿ ಟಿಡಿಎಸ್ ಪಾವತಿಸುವ ಬೇಡಿಕೆ ವೆಬ್‍ಸೈಟ್‍ನಲ್ಲಿ ದಾಖಲಾಗಿ ಅದಕ್ಕೆ ದಂಡ ವಿಧಿಸಲಾಗುವುದು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ನಿವೃತ್ತ ಅಧಿಕಾರಿ ನಜೀರ ಅಹ್ಮದ್, ಕಲಬುರಗಿ ಟಿಡಿಎಸ್ ಅಧಿಕಾರಿ ಆಶಾ ಎಸ್., ಬಳ್ಳಾರಿ ಟಿಡಿಎಸ್ ಅಧಿಕಾರಿ ಗುರುನಾಥ ಹೆಚ್.ಎಸ್., ಆದಾಯ ತೆರಿಗೆ ಅಧಿಕಾರಿಗಳಾದ ನಾಗರಾಜ್ ಕಡಲಾಸ್ಕರ್, ಬಿ.ವಿ. ಕುಮಾರ, ಕಲಬುರಗಿ ಜಿಲ್ಲಾ ಖಜಾನೆಯ ಉಪನಿರ್ದೇಶಕ ದತ್ತಪ್ಪ ಗೊಬ್ಬೂರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಕೊಶಾಧ್ಯಕ್ಷ ಚಂದ್ರಕಾಂತ ಏರಿ, ಗೌರವಾಧ್ಯಕ್ಷ ಮಲ್ಲಣ್ಣ ಮಡಿವಾಳ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಆಗಸ್ಟ್ 31ರಂದು ಸಾರ್ವತ್ರಿಕ ರಜೆ ಘೋಷಣೆ
ಕಲಬುರಗಿ,ಆ.28.(ಕ.ವಾ.)-ಇದೇ ಆಗಸ್ಟ್ 31ರಂದು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ 2018ರ ಆಗಸ್ಟ್ 31ರಂದು ಸಾರ್ವತ್ರಿಕ ರಜೆ ಘೋಷಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನವೀನ ಜೊಸೇಫ್ ಎ ಅವರು ಆದೇಶ ಹೊರಡಿಸಿದ್ದಾರೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು. ಈ ಆದೇಶವು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆ್ಯಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆಯಂದು ಘೋಷಿಸಲಾಗಿದೆ ಎಂದು ಅದೇಶದಲ್ಲಿ ತಿಳಿಸಲಾಗಿದೆ.
ಸೆಪ್ಟೆಂಬರ್ 2ರಂದು ಶ್ರೀ ಕೃಷ್ಣ ಜಯಂತಿ ಆಚರಣೆ
*******************************************
ಕಲಬುರಗಿ.ಆ.28.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾದ ಅವತಾರ ಪುರುಷ ಹಾಗೂ ಗೀತ ಬೋಧಕನಾದ ಶ್ರೀಕೃಷ್ಣ ಜಯಂತಿ ಆಚರಣೆಯ ಸಮಾರಂಭವನ್ನು ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸಮಾಜ ಕಲ್ಯಾಣ ಸಚಿವರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು 2018ರ ಸೆಪ್ಟೆಂಬರ್ 2ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ.
ಈ ಸಮಾರಂಭದಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಡಾ|| ಅಜಯಸಿಂಗ್, ಬಸವರಾಜ ಬಿ. ಮತ್ತಿಮೂಡ, ಸುಭಾಷ ಗುತ್ತೇದಾರ್, ರಾಜಕುಮಾರ ಪಾಟೀಲ ತೇಲ್ಕೂರ, ಎಮ್.ವಾಯ್. ಪಾಟೀಲ, ಖನೀಜ್ ಫಾತೀಮಾ, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣುಕುಮಾರ ಮೋದಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ್ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ್ ಖರ್ಬಿಕರ್, ಕಲಬುರಗಿ ಜಿಲ್ಲಾ ಯಾದವ ಸಂಘದ ಅಧ್ಯಕ್ಷ ರವೀಂದ್ರ ಉದನೂರ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಲಬುರಗಿಯ ಹಿರಿಯ ಸಾಹಿತಿ ವಸಂತ ಕುಷ್ಟಗಿ ವಿಶೇಷ ಉಪನ್ಯಾಸ ನೀಡುವರು.
ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ ಪಟೇಲ್ ವೃತ್ತದಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರದವರೆಗೆ ಶ್ರೀಕೃಷ್ಣರ ಭಾವಚಿತ್ರ ಮತ್ತು ವಿವಿಧ ಕಲಾ ಜಾನಪದ ಕಲಾ ತಂಡದ ಮೆರವಣಿಗೆ ಜರುಗುವುದು.
ಮುಕ್ತ ವಿಶ್ವವಿದ್ಯಾಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
**********************************************
ಕಲಬುರಗಿ,ಆ.28.(ಕ.ವಾ.)-ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2018-19ನೇ ಶೈಕ್ಷಣಿಕ ವರ್ಷಕ್ಕೆ ಸ್ನಾತಕ ಪದವಿಗಳಾದ ಪ್ರಥಮ ಬಿ.ಎ., ಬಿ.ಕಾಂ., ಬಿ.ಲಿಬ್. ಐ.ಎಸ್ಸಿ ಹಾಗೂ ಸ್ನಾತಕೋತ್ತರ ಪದವಿಗಳಾದ ಪ್ರಥಮ ಎಂ.ಎ.: ಕನ್ನಡ, ಇಂಗ್ಲೀಷ, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಪತ್ರಿಕೊದ್ಯಮ, ಎಂ.ಕಾಂ., ಎಂ.ಎಸ್‍ಸಿ (ಪರಿಸರ ವಿಜ್ಞಾನ) ಹಾಗು ಎಂ.ಲಿಬ್ ಐ.ಎಸ್ಸಿ. ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದ ಅನ್ವಯ ಶುಲ್ಕ ವಿನಾಯಿತಿ ಇರುತ್ತದೆ. ಬಿಪಿಎಲ್ ಕಾರ್ಡುನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 25ರಷ್ಟು ವಿನಾಯಿತಿ ನೀಡಲಾಗಿದೆ. ಪ್ರವೇಶಾತಿಯು ಈಗಾಗಲೇ ಪ್ರಾರಂಭಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ, ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವವಿದ್ಯಾಲಯ ಆವರಣ ಕಲಬುರಗಿ ಹಾಗೂ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ಸಂಗಮೇಶ ಹಿರೇಮಠ ಅವರ ಮೊಬೈಲ್ ಸಂಖ್ಯೆ 9916783555, ಕಚೇರಿ ದೂರವಾಣಿ 08472-265868ಗಳಿಗೆ ಸಂಪರ್ಕಿಸಲು ಕೋರಿದೆ.
ಕೃಷಿ ಸಂಸ್ಕರಣ ಯೋಜನೆಯಡಿ ತಾಡಪತ್ರಿ ವಿತರಣೆ: ಅರ್ಜಿ ಆಹ್ವಾನ
************************************************************
ಕಲಬುರಗಿ,ಆ.28.(ಕ.ವಾ.)-ಕೃಷಿ ಸಂಸ್ಕರಣ ಯೋಜನೆಯಡಿ 2018-19ನೇ ಸಾಲಿನ ತಾಡಪತ್ರಿ ವಿತರಣಾ ಕಾರ್ಯಕ್ರಮವಿರುತ್ತದೆ. ಇದಕ್ಕಾಗಿ ರೈತ ಬಾಂಧವರು ಇದೇ ಆಗಸ್ಟ್ 31 ರೊಳಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕೆಂದು ಕಲಬುರಗಿ ಸಹಾಯಕ ಕೃಷಿ ನಿರ್ದೇಶರು ತಿಳಿಸಿದ್ದಾರೆ.
ಸೆಪ್ಟೆಂಬರ್ 3ರಂದು ಬೆಳಿಗ್ಗೆ 10.30 ಗಂಟೆಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರÀಗಳಲ್ಲಿ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಿಲಾಗುವುದು. ರೈತ ಬಾಂಧವರು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇಡಂ: ಆಸ್ತಿಯ ಮಾರುಕಟ್ಟೆ ಬೆಲೆ ಪರಿಷ್ಕರಣೆ
ಕಲಬುರಗಿ,ಆ.28.(ಕ.ವಾ.)-ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ವ್ಯಾಪ್ತಿಯ ಆಸ್ತಿಯ ಮಾರುಕಟ್ಟೆ ಬೆಲೆಗಳನ್ನು 2018-19ನೇ ಸಾಲಿಗೆ ಪರಿಷ್ಕರಿಸಲಾಗಿದೆ. ಈ ಪರಿಷ್ಕøತ ಮಾರುಕಟ್ಟೆ ಬೆಲೆಯ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಆಕ್ಷೇಪಗಳೆನಾದರೂ ಇದ್ದಲ್ಲಿ 15 ದಿವಸಗಳೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಲಿಖಿತವಾಗಿ ಸೇಡಂ ಮಿನಿ ವಿಧಾನಸೌಧದ ಕಚೇರಿ ಆವರಣದಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕೆಂದು ಸೇಡಂ ಉಪ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 25ರೊಳಗಾಗಿ ವಾರ್ಷಿಕ ಮಹಾಸಭೆ ನಡೆಸಲು ಸೂಚನೆ
*********************************************************
ಕಲಬುರಗಿ,ಆ.28.(ಕ.ವಾ.)-ಕಲಬುರಗಿ ಉಪವಿಭಾಗದ ಕಲಬುರಗಿ, ಆಳಂದ, ಅಫಜಲಪುರ ಹಾಗೂ ಜೇವರ್ಗಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳು, ಸೌಹಾರ್ಧ ಸಹಕಾರಿಗಳು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 27 ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ 1997ರ ನಿಯಮ 2004 ಪ್ರಕರಣ 30(1) ರಂತೆ 2017-18ನೇ ಸಾಲಿನ ಜರುಗಿಸುವ ವಾರ್ಷಿಕ ಮಹಾಸಭೆಯನ್ನು 2018ರ ಸೆಪ್ಟೆಂಬರ್ 25ರೊಳಗಾಗಿ ಜರುಗಿಸಿ ಅದರ ಒಂದು ಪ್ರತಿಯನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಕಲಬುರಗಿ ವಿಭಾಗ ಕಲಬುರಗಿ ಪಿಡಬ್ಲ್ಯೂಡಿ ಕ್ವಾರ್ಟರ್ಸ್ ನಂ. ಡಿ-13, ಆರ್‍ಟಿಓ ಕ್ರಾಸ್ ರಾಜಾಪುರ ರಸ್ತೆ ಕಲಬುರಗಿ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-221896ನ್ನು ಸಂಪರ್ಕಿಸಬೇಕೆಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರು ತಿಳಿಸಿದ್ದಾರೆ.
ಕೃಷಿ ಪ್ರಶಸ್ತಿ ಸ್ಪರ್ಧೆಗಾಗಿ ಅರ್ಜಿ ಆಹ್ವಾನ
***********************************
ಕಲಬುರಗಿ,ಆ.28.(ಕ.ವಾ.)-ಕೃಷಿ ಇಲಾಖೆಯಿಂದ ಕೃಷಿ ಪ್ರಶಸ್ತಿ ಯೋಜನೆಯಡಿ ರೈತರಿಗೆ ಉತ್ಪಾದನೆ ಬಹುಮಾನಗಳನ್ನು ನೀಡುವ ಮೂಲಕ ಕೃಷಿ ವಲಯದ ಉತ್ಪಾದನೆ ಹೆಚ್ಚಿಸಲು ಹಾಗೂ ರೈತರಿಗೆ ಸ್ಪರ್ಧಾ ಮನೋಭಾವ ಬೆಳೆಸಲು 2018-19ನೇ ಸಾಲಿನ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಮುಂಗಾರು ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯ ಮಟ್ಟದ ಬೆಳೆ ಸ್ಪರ್ಧೆಗೆ ಭತ್ತ-(ನೀರಾವರಿ). (ಮುಂಗಾರು) ರಾಗಿ, ಜೋಳ, ತೊಗರಿ, ಸೋಯಾ ಅವರೆÉ, ಶೇಂಗಾ (ಮಳೆಯಾಶ್ರಿತ) ಮತ್ತು ಸೂರ್ಯಕಾಂತಿ-ಮುಂಗಾರು/ಹಿಂಗಾರು (ಮಳೆಯಾಶ್ರಿತ) ಬೆಳೆಗಳನ್ನು ನಿಗದಿಪಡಿಸಿದ್ದು, 50,000 ರೂ. ಪ್ರಥಮ, 40,000 ರೂ. ದ್ವಿತೀಯ ಮತ್ತು 35,000 ರೂ. ತೃತೀಯ ಬಹುಮಾನ ನೀಡಲಾಗುತ್ತದೆ. ಜಿಲ್ಲಾ ಮಟ್ಟದ ಬೆಳೆ ಸ್ಪರ್ಧೆಗೆ ಮುಂಗಾರು (ಮಳೆಯಾಶ್ರಿತ) ತೊಗರಿ ಬೆಳೆಯನ್ನು ನಿಗದಿಪಡಿಸಿದ್ದು, 30,000 ರೂ. ಪ್ರಥಮ, 25,000 ರೂ. ದ್ವಿತೀಯ ಮತ್ತು 20,000 ರೂ. ತೃತೀಯ ಬಹುಮಾನ ನೀಡಲಾಗುತ್ತದೆ. ಅದೇ ರೀತಿ ತಾಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಚಿಂಚೋಳಿ, ಚಿತ್ತಾಪುರ ಮತ್ತು ಸೇಡಂ ತಾಲೂಕುಗಳ ಮುಂಗಾರು (ಮಳೆಯಾಶ್ರಿತ) ತೊಗರಿ ಬೆಳೆಯನ್ನು ನಿಗದಿಪಡಿಸಿದ್ದು, 15,000 ರೂ. ಪ್ರಥಮ, 10,000 ರೂ. ದ್ವಿತೀಯ ಮತ್ತು 5,000 ರೂ.ಗಳ ತೃತೀಯ ಬಹುಮಾನ ನೀಡಲಾಗುತ್ತದೆ.
ಈ ಮೂರೂ ಹಂತದ ಬೆಳೆಗಳ ಸ್ಫರ್ಧೆಗಳಲ್ಲಿ ಭಾಗವಹಿಸುವ ಆಸಕ್ತ ಸಾಮಾನ್ಯ ರೈತರು 100 ರೂ. ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ರೈತರು 25 ರೂ. 2018ರ ಅಗಸ್ಟ್ 31ರೊಳಗಾಗಿ ಹಣ ಪಾವತಿ ಮಾಡಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳ ಅಥವಾ ಕಲಬುರಗಿ ಮತ್ತು ಸೇಡಂ ಉಪ ಕೃಷಿ ನಿರ್ದೇಶಕರ ಅಥವಾ ಕಲಬುರಗಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಚೇರಿ ಸ್ಥಳಾಂತರ
********************
ಕಲಬುರಗಿ,ಆ.28.(ಕ.ವಾ.)-ನಗರದ ಹಳೆಯ ಎಸ್.ಪಿ. ಆಫೀಸ್ ಕಚೇರಿ ಹತ್ತಿರದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಉಪವಿಭಾಗ ಕಚೇರಿ ಸುಪರ ಮಾರ್ಕೇಟ್ ಕಲಬುರಗಿ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಯನಿರ್ವಾಹಕ ಅಭಿಯಂತರರು, ಯೋಜನಾ ಅನುಷ್ಠಾನ ಘಟಕ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ) ಕಚೇರಿಯನ್ನು ಇತ್ತೀಚೆಗೆ ಕೆಳಕಂಡ ಹೊಸ ವಿಳಾಸಕ್ಕೆ ಸ್ಥಳಾಂತರಗೊಂಡಿವೆ.
ಹೊಸ ಕಚೇರಿ ವಿಳಾಸ ಇಂತಿದೆ. ಕಾರ್ಯನಿರ್ವಾಹಕ ಅಭಿಯಂತರರು, ಯೋಜನಾ ಅನುಷ್ಠಾನ ಘಟಕ, ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ, ಮಹಾನಗರ ಪಾಲಿಕೆ ನೂತನ ಕಟ್ಟಡ, ಎರಡನೇ ಮಹಡಿ, ಕೊಠಡಿ ಸಂಖ್ಯೆ 48, ಜಗತ್ ಸರ್ಕಲ್ ಕಲಬುರಗಿ-585101. ಕಚೇರಿ ದೂರವಾಣಿ ಸಂಖ್ಯೆ 08472-261025. ಇನ್ನು ಮುಂದೆ ಈ ಕಚೇರಿಗೆ ಸಂಬಂಧಪಟ್ಟ ಯಾವುದೇ ಪತ್ರಗಳನ್ನು ಹೊಸ ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಯೋಜನಾ ಅನುಷ್ಠಾನ ಘಟಕದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 29ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
***********************************************
ಕಲಬುರಗಿ,ಆ.28.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿನ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆವಿ. ಗಣೇಶ ನಗರ ಫೀಡರ ವ್ಯಾಪ್ತಿಯ 33ಕೆ.ವಿ. ಜಿಆಯ್‍ಎಸ್ ಸ್ಟೇಶನ್ ಕೆಲಸದ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 29ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11 ಕೆ.ವಿ. ಗಣೇಶ ನಗರ ಫೀಡರ್: ಬಾಕರ್ ಫಂಶನ್ ಹಾಲ್, ಶಿವಮಂದಿರ ಏರಿಯಾ, ಬಂದೇ ನವಾಜ್ ಕಾಲೋನಿ, ಪಟೇಲ್ ಹೋಟಲ್ ಏರಿಯಾ, ಕನ್ನಡ ಕಾನ್ವೆಂಟ್ ಏರಿಯಾ, ಬ್ರಹ್ಮಕುಮಾರಿ ಏರಿಯಾ ಗೃಹಗಳು ಹಾಗೂ ಸುತ್ತಮುತ್ತಲ್ಲಿನ ಪ್ರದೇಶಗಳು.




ಹೀಗಾಗಿ ಲೇಖನಗಳು News and photo Date: 28--8--2018

ಎಲ್ಲಾ ಲೇಖನಗಳು ಆಗಿದೆ News and photo Date: 28--8--2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 28--8--2018 ಲಿಂಕ್ ವಿಳಾಸ https://dekalungi.blogspot.com/2018/08/news-and-photo-date-28-8-2018.html

Subscribe to receive free email updates:

0 Response to "News and photo Date: 28--8--2018"

ಕಾಮೆಂಟ್‌‌ ಪೋಸ್ಟ್‌ ಮಾಡಿ