News and photo Date: 6-8-2018

News and photo Date: 6-8-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 6-8-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 6-8-2018
ಲಿಂಕ್ : News and photo Date: 6-8-2018

ಓದಿ


News and photo Date: 6-8-2018

ಕೆ.ಎಸ್.ಆರ್.ಪಿ. ಎಸ್.ಆರ್.ಪಿಸಿ ಹುದ್ದೆಗಳ ನೇಮಕಾತಿ:
*************************************************
ದೈಹಿಕ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ
*****************************************
ಕಲಬುರಗಿ,ಆ.06.(ಕ.ವಾ.)-ಕೆ.ಎಸ್.ಆರ್.ಪಿ. ಎಸ್.ಆರ್.ಪಿಸಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ದೈಹಿಕ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಗಳನ್ನು 2018ರ ಆಗಸ್ಟ್ 9 ರಿಂದ 20ರವರೆಗೆ (ಸಾರ್ವಜನಿಕ ರಜೆಗಳನ್ನು ಹೊರತುಪಡಿಸಿ) 8 ದಿನಗಳ ಕಾಲ ಕಲಬುರಗಿ ಜಿಲ್ಲಾ ಸಶಸ್ತ್ರ ಪೊಲೀಸ್ ಮೈದಾನದಲ್ಲಿ ನಡೆಯಲಿದೆ ಎಂದು ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಎಸ್. ಮುರುಗನ್ ತಿಳಿಸಿದ್ದಾರೆ.
ಈ ಕುರಿತು ಅಭ್ಯರ್ಥಿಗಳಿಗೆ ಹಾಜರಾತಿ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಲು ಈಗಾಗಲೇ ಬೆಂಗಳೂರಿನ ನೇಮಕಾತಿ ಮತ್ತು ತರಬೇತಿಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಇವರಿಂದ ಸಂದೇಶವನ್ನು ರವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ತಮಗೆ ಹಾಜರಾತಿ ಪತ್ರದಲ್ಲಿ ನೀಡಿರುವ ಸೂಚನೆಗಳನ್ವಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ: ಶೇ. 50ರ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟಕ್ಕೆ ಲಭ್ಯ
ಕಲಬುರಗಿ,ಆ.06.(ಕ.ವಾ.)-ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿರುವ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕಾರದ ಪುಸ್ತಕಗಳು ಶೇ. 50ರ ರಿಯಾಯಿತಿ ದರದಲ್ಲಿ ದೊರೆಯಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ, ಪ್ರಾಧಿಕಾರದಿಂದ ತೆರೆಯಲಾದ ಜಿಲ್ಲೆಯ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ, ಹಾಗೂ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳನ್ನು ಪುಸ್ತಕಗಳು ರಿಯಾಯಿತಿ ದರದಲ್ಲಿ ದೊರೆಯಲಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರವು ಹೊಂದಿದೆ.
ಆಸಕ್ತರು ಆನ್‍ಲೈನ್ ಮಾರಾಟಕ್ಕಾಗಿ ಪ್ರಾಧಿಕಾರದ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿomನ್ನು ವೆಬ್‍ಸೈಟ್‍ನ ನಮ್ಮ ಪುಸ್ತಕ ವಿಭಾಗದಲ್ಲಿ ಆಯ್ಕೆ ಮಾಡಿ ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂರವಾಣಿ ಸಂಖ್ಯೆ 080-22484516, 22107704/ 05ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಕಿತ್ತೂರು ಚೆನ್ನಮ್ಮ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
*********************************************
ಕಲಬುರಗಿ,ಆ.06.(ಕ.ವಾ.)-ಕಳೆದ 2018ರ ಮಾರ್ಚ್ ಮಾಹೆಯಲ್ಲಿ ಜರುಗಿದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿನಿಯರಿಗಾಗಿ ಸರ್ಕಾರ ಜಾರಿಗೆ ತಂದಿರುವ 2018-19ನೇ ಸಾಲಿನ “ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕಾರ” ಯೋಜನೆಗಾಗಿ ಕಲಬುರಗಿ ಜಿಲ್ಲೆಯ ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಿಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಡಿ. ಕಲಬುರಗಿ ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿಇಟಿ ಪರೀಕ್ಷೆ ಬರೆದು ವೃತ್ತಿ ಶಿಕ್ಷಣ ಕೋರ್ಸುಗಳಾದ ಇಂಜಿನಿಯರ್, ವೈದ್ಯಕೀಯ, ದಂತ ವಿಜ್ಞಾನ ಕಾಲೇಜುಗಳಿಗೆ ಹಾಗೂ ಕೃಷಿ, ಪಶುವೈದ್ಯ ವಿಜ್ಞಾನ ವಿದ್ಯಾಲಯದ ವಿವಿಧ ವೃತ್ತಿ ಶಿಕ್ಷಣ ಪದವಿ ಕೋರ್ಸಗಳನ್ನು ಆಯ್ಕೆ ಮಾಡಿಕೊಂಡು ಕಾಲೇಜುಗಳಿಗೆ ಪ್ರವೇಶ ಪಡೆದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸೇರಿದ ವಿದ್ಯಾರ್ಥಿನಿಯರು ಮಾತ್ರ ಈ ಯೋಜನೆಗೆ ಅರ್ಹರು.
ವಿದ್ಯಾರ್ಥಿನಿಯರ ಕುಟುಂಬವು ಬಿಪಿಎಲ್ ಕಾರ್ಡ್ ಹೊಂದಿರಬೇಕು. ಮೇಲಿನ ಅರ್ಹತೆಗೆ ಅನುಗುಣವಾಗಿ ವಿದ್ಯಾರ್ಥಿನಿಯರು ಸರ್ಕಾರವು ನೀಡುವ ಯಾವುದಾದರೂ ಒಂದು ವಿದ್ಯಾರ್ಥಿ ವೇತನಕ್ಕೆ ಮಾತ್ರ ಆಯ್ಕೆ ಮಾಡಲು ಅವಕಾಶವಿರುತ್ತದೆ. ಭರ್ತಿಮಾಡಿದ ಅರ್ಜಿಗಳನ್ನು 2018ರ ಆಗಸ್ಟ್ 16ರೊಳಗೆ ನೇರವಾಗಿ ಸಂಬಂಧ ಪಟ್ಟ ಕಾಲೇಜುಗಳ ಪ್ರಾಚಾರ್ಯರಿಗೆ ಸಲ್ಲಿಸಲು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಜೇವರ್ಗಿ ಪುರಸಭೆ: ವಾರ್ಡುವಾರು ಅಂತಿಮ ಮೀಸಲಾತಿ ಪಟ್ಟಿ ಪ್ರಕಟ
************************************************************
ಕಲಬುರಗಿ,ಆ.06.(ಕ.ವಾ.)-ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-2018ರ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳ ವಾರ್ಡುವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು 2018ರ ಜುಲೈ 30ರಂದು ಅಧಿಸೂಚನೆ ಹೊರಡಿಸಿದ್ದಾರೆ ಎಂದು ಜೇವರ್ಗಿ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿÀು ತಿಳಿಸಿದ್ದಾರೆ.
ಜೇವರ್ಗಿ ಪುರಸಭೆ (ಒಟ್ಟು 23 ವಾರ್ಡುಗಳು):- ವಾರ್ಡ್ ಸಂಖ್ಯೆ ಮತ್ತು ಮೀಸಲಾತಿ ವಿವರ. ವಾರ್ಡ ಸಂಖ್ಯೆ 1-ಪರಿಶಿಷ್ಟ ಪಂಗಡ, ವಾರ್ಡ ಸಂ. 2-ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ ಸಂ. 3-ಸಾಮಾನ್ಯ, ವಾರ್ಡ ಸಂ. 4-ಸಾಮಾನ್ಯ, ವಾರ್ಡ ಸಂ. 5-ಪರಿಶಿಷ್ಟ ಜಾತಿ ಮಹಿಳೆ, ವಾರ್ಡ ಸಂ. 6-ಸಾಮಾನ್ಯ ಮಹಿಳೆ, ವಾರ್ಡ ಸಂ. 7-ಹಿಂದುಳಿದ ವರ್ಗ(ಎ), ವಾರ್ಡ ಸಂ. 8-ಹಿಂದುಳಿದ ವರ್ಗ(ಬಿ), ವಾರ್ಡ ಸಂ.-9 ಪರಿಶಿಷ್ಟ ಜಾತಿ ಮಹಿಳೆ, ವಾರ್ಡ ಸಂ. 10-ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ ಸಂ. 11-ಪರಿಶಿಷ್ಟ ಜಾತಿ, ವಾರ್ಡ ಸಂ. 12-ಸಾಮಾನ್ಯ, ವಾರ್ಡ ಸಂ. 13-ಸಾಮಾನ್ಯ, ವಾರ್ಡ ಸಂ. 14-ಪರಿಶಿಷ್ಟ ಜಾತಿ, ವಾರ್ಡ ಸಂ. 15-ಸಾಮಾನ್ಯ ಮಹಿಳೆ, ವಾರ್ಡ ಸಂ. 16-ಸಾಮಾನ್ಯ, ವಾರ್ಡ ಸಂ. 17-ಹಿಂದುಳಿದ ವರ್ಗ (ಎ), ವಾರ್ಡ ಸಂ. 18-ಸಾಮಾನ್ಯ, ವಾರ್ಡ ಸಂ. 19-ಹಿಂದುಳಿದ ವರ್ಗ(ಎ), ವಾರ್ಡ ಸಂ. 20-ಸಾಮಾನ್ಯ ಮಹಿಳೆ, ವಾರ್ಡ ಸಂ. 21-ಸಾಮಾನ್ಯ ಮಹಿಳೆ, ವಾರ್ಡ ಸಂ. 22-ಸಾಮಾನ್ಯ ಮಹಿಳೆ, ವಾರ್ಡ ಸಂ. 23-ಸಾಮಾನ್ಯ ಮಹಿಳೆ.
ಉತ್ತಮ ಶಿಕ್ಷಕ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ
**************************************
ಕಲಬುರಗಿ,ಆ.06.(ಕ.ವಾ.)-ಪ್ರಸಕ್ತ 2018-19ನೇ ಸಾಲಿಗಾಗಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ರನ್ನು ಆಯ್ಕೆ ಮಾಡಲು ಕಲಬುರಗಿ ಜಿಲ್ಲೆಯ ಅರ್ಹ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅರ್ಹ ಶಿಕ್ಷಕರು ಪ್ರಸ್ತಾವನೆಗಳ 5 ಪ್ರತಿಗಳನ್ನು ಲಗತ್ತಿಸಿ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಗಸ್ಟ್ 10 ರಿಂದ 13 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಅಥವಾ ಇಲಾಖೆಯ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನು ಸಂಪರ್ಕಿಸಲು ಕೋರಲಾಗಿದೆ
.
ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ
************************************************
ಕಲಬುರಗಿ,ಆ.06.(ಕ.ವಾ.)-ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನಾಂಗದವರ ಅಭಿವೃದ್ಧಿಗಾಗಿ ಸಮಗ್ರ ಗಂಗಾ ಕಲ್ಯಾಣ ಯೋಜನೆಯ ಸಣ್ಣ ಮತ್ತು ಅತೀ ಸಣ್ಣ ಖುಷ್ಕಿ ಜಮೀನುಗಳಿಗೆ ವೈಯಕ್ತಿಕ ಕೊಳವೆಬಾವಿ ಹಾಗೂ ಏತ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸೌಲಭ್ಯ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ 2018ರ ಆಗಸ್ಟ್ 31 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆಯ ನೆಲಮಹಡಿ, ವಿಧಾನಸೌಧ ಎದುರಿಗೆ ಕಲಬುರಗಿ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-221331ನ್ನು ಸಂಪರ್ಕಿಸಲು ಕೋರಲಾಗಿದೆ.
ಜೇವರ್ಗಿ: ಪಿಪಿಪಿ ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*************************************************************
ಕಲಬುರಗಿ,ಆ.06.(ಕ.ವಾ.)-ಜೇವರ್ಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉಳಿದ ಸೀಟುಗಳಿಗೆ ಆಕಸ್ಮಿಕ ಸುತ್ತಿ (ಅಚಿsuಚಿಟ ಖouಟಿಜ) ನಲ್ಲಿ ಮತ್ತು ಪಿಪಿಪಿ ಯೋಜನೆಯಡಿಯ ಸ್ಥಾನಗಳಿಗೆ ಪ್ರವೇಶ ಪಡೆಯಲು ಆಸಕ್ತ ಅಭ್ಯರ್ಥಿಗಳು 2018ರ ಆಗಸ್ಟ್ 13 ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಜೇವರ್ಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶಕ್ಕಾಗಿ ಆಗಸ್ಟ್ 14ರಂದು ಮಧ್ಯಾಹ್ನ 3 ಗಂಟೆಗೆ ಜೇವರ್ಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪಾಲಕರ ಜೊತೆಗೆ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ
*************************************
ಕಲಬುರಗಿ,ಆ.06.(ಕ.ವಾ.)-ಜಿಲ್ಲೆಯ ಆಳಂದ ತಾಲೂಕಿನ ಶಕಾಪುರ ರಸ್ತೆ ಬದಿಯಲ್ಲಿ 2018ರ ಜುಲೈ 20ರಂದು ಪತ್ತೆಯಾದ 3 ದಿವಸದ ಹೆಣ್ಣು ಮಗುವನ್ನು ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಅವರು ಈ ಮಗುವನ್ನು ರಕ್ಷಿಸಿ ತಕ್ಷಣ ಆಳಂದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ತಂದು ದಾಖಲು ಮಾಡಿರುತ್ತಾರೆ. ನಂತರ 2018ರ ಜುಲೈ 26ರಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶುಗೃಹದಲ್ಲಿ ದಾಖಲಿಸಲಾಗಿದೆ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶು ಗೃಹದ ಅಧೀಕ್ಷಕರು ತಿಳಿಸಿದ್ದಾರೆ.
ಬಿಳುಪು ಬಣ್ಣ, ಕಡಿಮೆ ತೂಕ ಹೊಂದಿರುವ ಈ ಹೆಣ್ಣು ಮಗುವು ಎಡಗೈಯ ಬೆರಳುಗಳು ಇರುವುದಿಲ್ಲ. ಮೇಲ್ಕಂಡ ಹೆಣ್ಣು ಮಗುವಿನ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 60 ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಅಧೀಕ್ಷಕರು, ಅಮೂಲ್ಯ ಶಿಶು ಗೃಹ, ಆಳಂದ ರಸ್ತೆ ಕಲಬುರಗಿ ಕಚೇರಿಗೆ ಭೇಟಿ ನೀಡಲು ಕೋರಿದೆ. ತಪ್ಪಿದಲ್ಲಿ ಕಾನೂನು ಪ್ರಕಾರ ಈ ಹೆಣ್ಣು ಮಗುವಿನ ದತ್ತು ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಮೂಲ್ಯ ಶಿಶುಗೃಹದ ಅಧೀಕ್ಷಕರನ್ನು ಹಾಗೂ ದೂರವಾಣಿ ಸಂ.08472-265588ನ್ನು ಸಂಪರ್ಕಿಸಬೇಕೆಂದು ಕೋರಿದ್ದಾರೆ.
ಆಗಸ್ಟ್ 7 ಹಾಗೂ 8ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
***************************************************
ಕಲಬುರಗಿ,ಆ.06.(ಕ.ವಾ.)-ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಬೆಣ್ಣೆತೋರಾ ನದಿಯ 600 ಎಂ.ಎಂ. ವ್ಯಾಸದ ಪಿ.ಎಸ್.ಸಿ. ಕೊಳವೆ ಮಾರ್ಗದಲ್ಲಿ ಕಂಡು ಬಂದಿರುವ ಸೋರುವಿಕೆಯ ತುರ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೆಳಕಂಡ ಮೇಲ್ಮಟ್ಟದ/ ಕೆಳಮಟ್ಟದ ಜಲ ಸಂಗ್ರಾಹಗಾರದಿಂದ ಇದೇ ಆಗಸ್ಟ್ 7 ಹಾಗೂ 8ರಂದು ನಿರಂತರ (24x7) ನೀರು ಸರಬರಾಜು ಆಗುವ ಬಡಾವಣೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಹಳೆ ಜಲಶುದ್ಧೀಕರಣ ಕೇಂದ್ರ, ಹೆಚ್.ಎಸ್.ಆರ್. ಮೇಲ್ಮಟ್ಟದ/ ಕೆಳಮಟ್ಟದ, ಮೋಮಿನ್‍ಪುರ, ಸುಪರ್ ಮಾರ್ಕೆಟ್ (ನೇರ ಸರಬರಾಜು), ಡಿ.ಸಿ. ಟ್ಯಾಂಕ್, ಪೊಲೀಸ್ ಕಾಲೋನಿ, ಐವಾನ್-ಇ-ಶಾಹಿ ಟ್ಯಾಂಕ್ ಬಡಾವಣೆಗಳಲ್ಲಿ ನೀರು ಸರಬರಾಜು ಇರುವುದಿಲ್ಲ. ಇದಕ್ಕೆ ಕಲಬುರಗಿ ನಗರದ ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 7ರಂದು ನಾಲ್ಕನೇಯ ರಾಷ್ಟ್ರೀಯ ಕೈಮಗ್ಗ ದಿನಾಚರಣೆ
******************************************************
ಕಲಬುರಗಿ,ಆ.06.(ಕ.ವಾ.)-ಭಾರತ ಸರ್ಕಾರವು 2015ರ ಸಾಲಿನಿಂದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ 2018ರ ಸಾಲಿಗೆ 4ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಆಚರಿಸಲಾಗುತ್ತಿದೆ ಕಲಬುರಗಿ ಜಿಲ್ಲೆಯ ಎಲ್ಲ ಕೈಮಗ್ಗ ನೇಕಾರರಿಗೆ ಕಲಬುರಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಆಗಸ್ಟ್ 7ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*******************************************
ಕಲಬುರಗಿ,ಆ.06.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆವಿ. ಉಮರ ಕಾಲೋನಿ ಫೀಡರಗಳ ಮೇಲೆ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 7ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಕೇಂದ್ರದ ಮೇಲೆ ಬರುವ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11 ಕೆ.ವಿ ಉಮರ್ ಕಾಲೋನಿ ಫೀಡರ್: ಉಮರ ಕಾಲೋನಿ, ಅಬುಬಕರ್ ಕಾಲೋನಿ, ಆಜಾದಪೂರ ರಸ್ತೆ, ಅಹ್ಮದ್‍ನಗರ್, ಮಕ್ಕಾ ಕಾಲೋನಿ, ಮಹಾರಾಜಾ ಹೋಟೆಲ್, ವಾಟರ್ ಟ್ಯಾಂಕ್, ಯದ್ದುಲ್ಲಾ ಕಾಲೋನಿ, ಕಮಾಲ-ಎ-ಮುಜರತ್, ಮಹಬೂಬ್ ನಗರ, ವೀರಭದ್ರೇಶ್ವರ ದೇವಾಲಯ, ಖಾನ್ ಕಂಪೌಂಡ್, ಟಿಪ್ಪುಸುಲ್ತಾನ ಚೌಕ್, ಸನಾ ಹೋಟೆಲ್, ಅಕ್ಬರ್ ಭಾಗ್, ರಾಮಜಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಆಗಸ್ಟ್ 7ರಿಂದ ಮಾನಸಿಕ ರೋಗಿಗಳ ತಪಾಸಣಾ ಶಿಬಿರ
*************************************************
ಕಲಬುರಗಿ,ಆ.06.(ಕ.ವಾ.)-ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಮನೋಚೈತನ್ಯ ಕಾರ್ಯಕ್ರಮದಡಿ ಕಲಬುರಗಿ ಜಿಲ್ಲೆಯ ತಾಲೂಕುಗಳ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾನಸಿಕ ರೋಗಿಗಳ ತಪಾಸಣಾ ಶಿಬಿರವನ್ನು ಕೆಳಕಂಡ ದಿನಾಂಕಗಳಂದು ನಡೆಸಲಾಗುವುದು ಎಂದು ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ತಿಳಿಸಿದ್ದಾರೆ. ಶಿಬಿರದ ದಿನಾಂಕ, ಸ್ಥಳ ಮತ್ತು ಪಾಲ್ಗೊಳ್ಳುವ ತಜ್ಞ ಮನೋವೈದ್ಯರುಗಳ ವಿವರ ಇಂತಿದೆ.
ಆಗಸ್ಟ್ 7 ರಂದು: ಆಳಂದ ತಾಲೂಕು ಆಸ್ಪತ್ರೆ-ಜಿಮ್ಸ್ ಮನೋವೈದ್ಯ ಡಾ|| ಚಂದ್ರಶೇಖರ ಹುಡೇದ. ಆಗಸ್ಟ್ 10 ರಂದು: ಅಫಜಲಪುರ ತಾಲೂಕು ಆಸ್ಪತ್ರೆ-ಡಿ.ಎಂ.ಹೆಚ್.ಪಿ. ತಂಡ. ಆಗಸ್ಟ್ 14 ರಂದು: ಚಿಂಚೋಳಿ ತಾಲೂಕು ಆಸ್ಪತ್ರೆ-ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ|| ವಿಜಯೇಂದ್ರ. ಆಗಸ್ಟ್ 17 ರಂದು: ಜೇವರ್ಗಿ ತಾಲೂಕು ಆಸ್ಪತ್ರೆ-ಬಸವೇಶ್ವರ ಆಸ್ಪತ್ರೆಯ ಮನೋವೈದ್ಯ ಡಾ|| ಆಲೋಕ ಘನಾತೆ. ಆಗಸ್ಟ್ 21 ರಂದು: ಚಿತ್ತಾಪುರ ತಾಲೂಕು ಆಸ್ಪತ್ರೆ-ಮನೋವೈದ್ಯ ಡಾ|| ಇರ್ಫಾನ್. ಆಗಸ್ಟ್ 24 ರಂದು: ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಸಮುದಾಯ ಆರೋಗ್ಯ ಕೇಂದ್ರ-ಬಸವೇಶ್ವರ ಆಸ್ಪತ್ರೆಯ ಮನೋವೈದ್ಯ ಡಾ|| ರಾಹುಲ ಮಂದಕನಳ್ಳಿ ಹಾಗೂ ಆಗಸ್ಟ್ 28 ರಂದು: ಸೇಡಂ ತಾಲೂಕು ಆಸ್ಪತ್ರೆ-ಕಲಬುರಗಿ ಬಸವೇಶ್ವರ ಆಸ್ಪತ್ರೆಯ ಮನೋವೈದ್ಯ ಡಾ. ಅಜಯ ಢಗೆ.
ಮೇಲ್ಕಂಡ ದಿನಾಂಕಗಳಂದು ಮನೋವೈದ್ಯರು ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮಾನಸಿಕ ರೋಗದಿಂದ ಬಳಲುತ್ತಿರುವವರು ಸದರಿ ದಿನದಂದು ಮನೋವೈದ್ಯರ ಹತ್ತಿರ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು News and photo Date: 6-8-2018

ಎಲ್ಲಾ ಲೇಖನಗಳು ಆಗಿದೆ News and photo Date: 6-8-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 6-8-2018 ಲಿಂಕ್ ವಿಳಾಸ https://dekalungi.blogspot.com/2018/08/news-and-photo-date-6-8-2018.html

Subscribe to receive free email updates:

0 Response to "News and photo Date: 6-8-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ