News Date 18-8-2018

News Date 18-8-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News Date 18-8-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News Date 18-8-2018
ಲಿಂಕ್ : News Date 18-8-2018

ಓದಿ


News Date 18-8-2018

ಲೋಕಸಭಾ ಸದಸ್ಯರ ಪ್ರವಾಸ
******************************
ಕಲಬುರಗಿ,ಆ.18.(ಕ.ವಾ)-ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಹೈದ್ರಾಬಾದಿನಿಂದ ರಸ್ತೆ ಮೂಲಕ ಇದೇ ಆಗಸ್ಟ್ 23ರಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಅಂದು ಸಂಜೆ 4 ಗಂಟೆಗೆ ಅಫಜಲಪುರದಲ್ಲಿ ಹಾಗೂ ಸಂಜೆ 6 ಗಂಟೆಗೆ ಆಳಂದ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 24ರಂದು ಬೆಳಿಗ್ಗೆ 11 ಗಂಟೆಗೆ ಚಿಂಚೋಳಿಯಲ್ಲಿ, ಮಧ್ಯಾಹ್ನ 1 ಗಂಟೆಗೆ ಸೇಡಂದಲ್ಲಿ, ಸಂಜೆ 4.30 ಗಂಟೆಗೆ ಚಿತ್ತಾಪುರದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಆಗಸ್ಟ್ 25ರಂದು ಬೆಳಿಗ್ಗೆ 11 ಗಂಟೆಗೆ ಶಹಾಬಾದದಲ್ಲಿ, ಮಧ್ಯಾಹ್ನ 1 ಗಂಟೆಗೆ ಯಾದಗಿರಿಯಲ್ಲಿ ಹಾಗೂ ಸಂಜೆ 4.30 ಗಂಟೆಗೆ ಗುರುಮಿಠಕಲ್‍ದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಆಗಸ್ಟ್ 26 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಹೊರ ವಲಯದಲ್ಲಿರುವ ಶ್ರೀನಿವಾಸ ಸರಡಗಿ ಹತ್ತಿರ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದ ಪ್ರಾಯೋಗಿಕ ವಿಮಾನ ಹಾರಾಟಕ್ಕೆ ಚಾಲನೆ ನೀಡುವರು. ಮಧ್ಯಾಹ್ನ 1 ಗಂಟಗೆ ಜೇವರ್ಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.15 ಗಂಟೆಗೆ ಜೇವರ್ಗಿಯಿಂದ ಕಲಬುರಗಿಗೆ ಆಗಮಿಸಿ, ಸಂಜೆ 5 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು
.
ಆಗಸ್ಟ್ 26ರಂದು ಪ್ರಾಯೋಗಿಕ ವಿಮಾನ ಹಾರಾಟಕ್ಕೆ ಚಾಲನೆ
******************************************************
ಕಲಬುರಗಿ,ಆ.18.(ಕ.ವಾ)-ಮಾಜಿ ಪ್ರಧಾನಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿಯವರ ನಿಧನದ ಹಿನ್ನಲೆಯಲ್ಲಿ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿರುವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 19ರಂದು ನಿಗದಿಪಡಿಸಲಾದ ಕಲಬುರಗಿ ಹೊರ ವಲಯದಲ್ಲಿರುವ ಶ್ರೀನಿವಾಸ ಸರಡಗಿ ಹತ್ತಿರ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದಲ್ಲಿ ಪ್ರಾಯೋಗಿಕ ವಿಮಾನ ಹಾರಾಟಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಆಗಸ್ಟ್ 26ಕ್ಕೆ ಮುಂದೂಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ಡಿ. ದೇವರಾಜು ಅರಸುರವರ ಜನ್ಮ ದಿನಾಚರಣೆ ಮುಂದೂಡಿಕೆ
*****************************************************
ಕಲಬುರಗಿ,ಆ.18.(ಕ.ವಾ)-ಮಾಜಿ ಪ್ರಧಾನಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಪ್ರಯುಕ್ತ ರಾಜ್ಯದ್ಯಾಂತ ಏಳು ದಿನಗಳ ಶೋಕಾಚರಣೆ ಇರುವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 20ರಂದು ನಿಗದಿಪಡಿಸಲಾದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 20ರಂದು ಎ.ಸಿ.ಬಿ.ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಕಲಬುರಗಿ,ಆ.18.(ಕ.ವಾ)-ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಕೆ.ಎಸ್. ಕಲ್ಲದೇವರ ಅವರು ಚಿಂಚೋಳಿ ತಾಲೂಕಿಗೆ ಸಂಬಂಧಿಸಿದಂತೆ ಇದೇ ಆಗಸ್ಟ್ 20ರಂದು ಬೆಳಗಿನ 11 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಚಿಂಚೋಳಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಲಿದ್ದಾರೆ. ಅವರ ಮೊಬೈಲ್ ಸಂಖ್ಯೆ 9480806310 ಇರುತ್ತದೆ ಎಂದು ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ನೀರಿನ ಟ್ಯಾಂಕರ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ
*************************************************
ಕಲಬುರಗಿ,ಆ.18.(ಕ.ವಾ)-ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2018-19 ನೇ ಸಾಲಿನ ತೋಟಗಾರಿಕೆ ಬೆಳೆಗಳನ್ನು ಬೆಳೆದ ರೈತರಿಗೆ ಮಾತ್ರ ನೀರಿನ ಟ್ಯಾಂಕರ್ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ತೋಟಗಾರಿಕೆ ಬೆಳೆಗಳನ್ನು ಬೆಳೆದ ರೈತರಿಗೆ 4000 ಲೀಟರಿನ ಟ್ಯಾಂಕರ್ ಖರೀದಿಗೆ ಶೇ.90 ರಷ್ಟು ಅಂದರೆ ಗರಿಷ್ಠ 1,12,500 ರೂ.ಗಳ ಮತ್ತು 5000 ಲೀಟರಿನ ಟ್ಯಾಂಕರ್ ಖರೀದಿಗೆ 1,26,000 ರೂ.ಗಳು ಹಾಗೂ ಸಾಮಾನ್ಯ ರೈತರಿಗೆ 4000 ಲೀಟರಿನ ಟ್ಯಾಂಕರ್ ಖರೀದಿಗೆ ಶೇ.50 ರಷ್ಟು ಅಂದರೆ ಗರಿಷ್ಠ 62,500 ರೂ.ಗಳ ಮತ್ತು 5000 ಲೀಟರಿನ ಟ್ಯಾಂಕರ್ ಖರೀದಿಗೆ 70,000 ರೂ.ಗಳ ಸಹಾಯಧನ ನೀಡಲಾಗುತ್ತದೆ.
ತೋಟಗಳಲ್ಲಿ ಅಂತರ್ಜಲ ಕುಸಿದಿದ್ದು, ಬೇರೆÉ ಕಡೆಯಿಂದ ಟ್ಯಾಂಕರ್ ಮೂಲಕ ನೀರು ಒದಗಿವುಸುವುದು ಹಾಗೂ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ``ನೀರಿನ ಟ್ಯಾಂಕರ್`` ಖರೀದಿಸಲು ತೋಟಗಾರಿಕೆ ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದ್ದು, ರೈತರು ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
ಸರ್ಕಾರಿ ವಿಭಾಗೀಯ ಮುದ್ರಾಣಾಲಯ:
**********************************
ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪಠ್ಯ ಪುಸ್ತಕ ಮಾರಾಟಕ್ಕೆ ಲಭ್ಯ
*******************************************************
ಕಲಬುರಗಿ,ಆ.18.(ಕ.ವಾ)-ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪಠ್ಯ ಪುಸ್ತಕ ಸೂಕ್ಷ್ಮ ಅರ್ಥಶಾಸ್ತ್ರ ಪರಿಚಯ ಮತ್ತು ಸಮಗ್ರ ಅರ್ಥಶಾಸ್ತ್ರ ಪರಿಚಯ 2017ರ ಆವೃತ್ತಿಗೆ ತಿದ್ದುಪಡಿಗಳು ಕಲಬುರಗಿ ಸರ್ಕಾರಿ ವಿಭಾಗೀಯ ಮುದ್ರಣಾಲಯದ ಸರ್ಕಾರಿ ಪುಸ್ತಕ ಮಾರಾಟ ಮಳಿಗೆಯಲ್ಲಿ ಲಭ್ಯವಿರುತ್ತದೆ. ಒಂದು ಪುಸ್ತಕದ ಬೆಲೆ 15ರೂ. ಇರುತ್ತದೆ. ಸಾರ್ವಜನಿಕರು ಹಾಗೂ ಶಿಕ್ಷಣ ಸಂಸ್ಥೆಗಳು ಈ ಪುಸ್ತಕಗಳನ್ನು ಖರೀದಿಸಿ ಇದರ ಸದುಪಯೋಗ ಪಡೆಯಬಹುದಾಗಿದೆ ಎಂದು ಕಲಬುರಗಿ ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟನೆಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುಸ್ತಕಗಳ ಆಯ್ಕೆ: ಲೇಖಕರು-ಪ್ರಕಾಶಕರಿಂದ ಆಕ್ಷೇಪಣೆ ಆಹ್ವಾನ
*******************************************************
ಕಲಬುರಗಿ,ಆ.18.(ಕ.ವಾ)-2016ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡು ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯು ಮುಂದೆ ಮಂಡಿಸಿ, ನಂತರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಇದೇ ಆಗಸ್ಟ್ 23 ರಿಂದ 28 ರವರೆಗೆ “ಗ್ರಂಥಾಗಣ”, ನಗರ ಕೇಂದ್ರ ಗ್ರಂಥಾಲಯ, ಪಶ್ಚಿಮ ವಲಯ, ಹಂಪಿನಗರ ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.
ಪುಸ್ತಕ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ವಿತರಕರು ಮತ್ತು ಪುಸ್ತಕ ಮಾರಾಟಗಾರರು ಪುಸ್ತಕಗಳ ಆಯ್ಕೆ ಕುರಿತು ಏನಾದರೂ ತಮ್ಮಿಂದ ಆಕ್ಷೇಪಣೆಗಳಿದ್ದಲ್ಲಿ 2018ರ ಸೆಪ್ಟೆಂಬರ್ 5 ರೊಳಗಾಗಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ ವೀದಿ, ಬೆಂಗಳೂರು-560001 ಇವರಿಗೆ ಲಿಖಿತವಾಗಿ ಮನವಿಯನ್ನು ಸಲ್ಲಿಸಬೇಕು. ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ
***************************************
ಕಲಬುರಗಿ,ಆ.18.(ಕ.ವಾ)-ಬೆಂಗಳೂರಿನ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನ ಟೆಕ್ನಿಕಲ್ ಟ್ರೇನಿಂಗ್ ಇನ್‍ಸ್ಟಿಟ್ಯೂಟ್‍ನಲ್ಲಿ ಐ.ಟಿ.ಐ. ವೃತ್ತಿಯ ಟ್ರೇಡ್‍ಗಳಾದ ಫಿಟ್ಟರ್, ಟರ್ನರ್, ಮಶಿನಿಷ್ಟ, ಎಲೆಕ್ಟ್ರಿಶಿಯನ್, ವೆಲ್ಡರ್, ಪಾಸಾ, ಫೌಂಡ್ರಿಮನ್ ಹಾಗೂ ಶೀಟ್‍ಮೆಟಲ್ ವರ್ಕರ್ ಟ್ರೇಡ್ಸ್‍ಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಅಪ್ರೆಂಟಿಶಿಪ್ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಚ್ಛೆಯುಳ್ಳ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕಲಬುರಗಿ ಇಲ್ಲಿ ಭೇಟಿ ನೀಡಿ ತರಬೇತಿಯ ಅರ್ಜಿ ನಮೂನೆ ಪಡೆದು ತಿತಿತಿ.ಚಿಠಿಠಿಡಿeಟಿಣiಛಿeshiಠಿ.gov.iಟಿ ವೆಬ್‍ಸೈಟ್‍ನಲ್ಲಿ ನೋಂದಾಯಿಸಿ ಪೊರ್ಟಲ್ ಸಂಖ್ಯೆಯೊಂದಿಗೆ ಭರ್ತಿ ಆಡಿದ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಮತ್ತು ಐ.ಟಿ.ಐ. ಪಾಸಾದ ಅಂಕಪಟ್ಟಿ, ಆಧಾರ ಕಾರ್ಡ, ಮೀಸಲಾತಿ ಬಯಸ್ಸಿದ್ದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓ.ಬಿ.ಸಿ ಜಾತಿ ಪ್ರಮಾಣಪತ್ರ, ಅಂಗವಿಕಲ ಪ್ರಮಾಣಪತ್ರ, ಸೇನಾಪಡೆ ಮೀಸಲಾತಿಗಾಗಿ (ಆಮ್ರ್ಡ್ ಫೋರ್ಸ್ ಪ್ರಮಾಣಪತ್ರ) ದಾಖಲೆಗಳನ್ನು ಲಗತ್ತಿಸಿ 2018ರ ಸೆಪ್ಟೆಂಬರ್ 15ರೊಳಗಾಗಿ ಸದರಿ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಅಥವಾ ತಿತಿತಿ.ಚಿಠಿಠಿಡಿeಟಿಣiಛಿeshiಠಿ.gov.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.
ಪುಸ್ತಕಗಳು ಆಯ್ಕೆಗಾಗಿ ಸಲ್ಲಿಸಲು ಅವಧಿ ವಿಸ್ತರಣೆ
******************************************
ಕಲಬುರಗಿ,ಆ.18.(ಕ.ವಾ)-ಸಾರ್ವಜನಿಕ ಗ್ರಂಥಾಲಯ ಇಲಾಖೆಯ ವಿವಿಧ
ಯೋಜನೆಗಳಡಿ 2018ನೇ (2018ರ ಜನವರಿ 1 ರಿಂದ ಆಗಸ್ಟ್ 30ರವರೆಗೆ) ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಸಲ್ಲಿಸುವ ಅವಧಿಯನ್ನು 2018ರ ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಗ್ರಂಥ ಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ 2018ರ ಆಗಸ್ಟ್ 31ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಮಾತ್ರ ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಕಚೇರಿಗೆ 2018ರ ಆಗಸ್ಟ್ 31ರ ಸಂಜೆ 5.30 ಗಂಟೆಯೊಳÀಗಾಗಿ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ನಿಬಂಧನೆಗಳು ಕುರಿತ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ತಿತಿತಿ.ಞಚಿಡಿಟಿಚಿಣಚಿಞಚಿಠಿubಟiಛಿಟibಡಿಚಿಡಿಥಿ.gov.iಟಿ ವೆಬ್‍ಸೈಟ್‍ನ್ನು ಅಥವಾ ಕಲಬುರಗಿ ಜಗತ್ ವೃತ್ತದಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.


ಹೀಗಾಗಿ ಲೇಖನಗಳು News Date 18-8-2018

ಎಲ್ಲಾ ಲೇಖನಗಳು ಆಗಿದೆ News Date 18-8-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News Date 18-8-2018 ಲಿಂಕ್ ವಿಳಾಸ https://dekalungi.blogspot.com/2018/08/news-date-18-8-2018.html

Subscribe to receive free email updates:

0 Response to "News Date 18-8-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ