News and photo Date: 03-09-2018

News and photo Date: 03-09-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 03-09-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 03-09-2018
ಲಿಂಕ್ : News and photo Date: 03-09-2018

ಓದಿ


News and photo Date: 03-09-2018

ಯ ಸಂಸ್ಥೆಗಳ 168 ವಾರ್ಡುಗಳ ಫಲಿತಾಂಶ ಪ್ರಕಟ
**************************************************************
ಕಲಬುರಗಿ,ಸೆ.03.(ಕ.ವಾ)-ಜಿಲ್ಲೆಯ ಏಳು ನಗರ ಸ್ಥಳೀಯ ಸಂಸ್ಥೆಗಳ 169 ವಾರ್ಡುಗಳ ಪೈಕಿ ಅಫಜಲಪುರ ಪುರಸಭೆಯ ವಾರ್ಡು 19ರಲ್ಲಿ ನಾಮಪತ್ರ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿರುವ ಕಾರಣ ಸ್ಪರ್ಧೆ ನಡೆದ 168 ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಫಲಿತಾಂಶ ಪ್ರಟಕಗೊಂಡ 168 ಸ್ಥಾನಗಳ ಪೈಕಿ ಭಾರತೀಯ ಜನತಾ ಪಕ್ಷ-63, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್-90, ಜನತಾದಳ (ಜಾತ್ಯಾತೀತ)-06, ಬಹುಜನ ಸಮಾಜವಾದಿ ಪಕ್ಷ-01 ಹಾಗೂ ಪಕ್ಷೇತರ-8 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಆಳಂದ ಪುರಸಭೆ: ಆಳಂದ ಪುರಸಭೆಯ ಒಟ್ಟು 27 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ ಭಾಜಪ-13, ಭಾ.ರಾ.ಕಾಂ.-13, ಜೆಡಿಎಸ್-01 ಸ್ಥಾನ ಗಳಿಸಿವೆ. ವಾರ್ಡ ನಂಬರ 21ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಹೀದಾ ಬೇಗಂ ಅಬ್ದುಲ್ ಹಮೀದ್ ಜಮಾದಾರ ಅವರು ಕೇವಲ 1 ಮತದ ಅಂತರದಿಂದ ಜಯಗಳಿಸಿದ್ದಾರೆ.
ಅಫಜಲಪುರ ಪುರಸಭೆ: ಅಫಜಲಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿವೆ. ವಾರ್ಡ ನಂ. 19ರಲ್ಲಿ ನಾಮಪತ್ರ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತವಾಗಿದ್ದರಿಂದ 22 ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ವಾರ್ಡ ನಂ. 5ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಹಾದಾ ಬೇಗಂ ಅಬ್ದುಲ್ ರೌಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರನ್ನು ಒಳಗೊಂಡಂತೆ ಭಾಜಪ-05, ಭಾ.ರಾ.ಕಾಂ.-16 ಹಾಗೂ ಪಕ್ಷೇತರ-01 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಜೇವರ್ಗಿ ಪುರಸಭೆ:- ಜೇವರ್ಗಿ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಭಾಜಪ-17, ಭಾರಾಕಾಂ-03, ಜೆಡಿಎಸ್-03 ಸ್ಥಾನಗಳನ್ನು ಗಳಿಸಿವೆ. ವಾರ್ಡ ನಂ. 11 ಮತ್ತು 15ರ ಅಭ್ಯರ್ಥಿಗಳು ಸಮನಾದ ಮತಗಳನ್ನು ಪಡೆದಿದ್ದರಿಂದ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಚೀಟಿ ಎತ್ತುವ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಯಿತು. ವಾರ್ಡು ನಂ. 11ರಲ್ಲಿ ಭಾಜಪ ಹಾಗೂ ವಾರ್ಡ ನಂ. 15ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯಶೀಲರಾದರು. ವಾರ್ಡ ನಂ. 14ರಲ್ಲಿ ಭಾಜಪ ಅಭ್ಯರ್ಥಿ ಮಲ್ಲಿಕಾರ್ಜುನ ಭಾಗಪ್ಪ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಸೇಡಂ ಪುರಸಭೆ: ಸೇಡಂ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಭಾಜಪ-13 ಹಾಗೂ ಭಾರಾಕಾಂ-10 ಸ್ಥಾನಗಳನ್ನು ಗಳಿಸಿದೆ.
ಚಿತ್ತಾಪುರ ಪುರಸಭೆ: ಚಿತ್ತಾಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ ಭಾಜಪ-05 ಹಾಗೂ ಭಾರಾಕಾಂ-18 ಸ್ಥಾನಗಳನ್ನು ಗಳಿಸಿದೆ.
ಶಹಾಬಾದ ನಗರಸಭೆ: ಶಹಾಬಾದ ನಗರÀಸಭೆಯ ಒಟ್ಟು 27 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ ಭಾಜಪ-05, ಭಾರಾಕಾಂ-18, ಜೆಡಿಎಸ್-01 ಹಾಗೂ ಪಕ್ಷೇತರ-03 ಸ್ಥಾನಗಳನ್ನು ಗಳಿಸಿದೆ. ವಾರ್ಡ ನಂ. 22ರ ಜೆಡಿಎಸ್ ಅಭ್ಯರ್ಥಿ ಮಹ್ಮದ್ ಅಮ್ಜದ್ ಮಹ್ಮದ್ ಹುಸೇನ್ ಕೇವಲ 1 ಮತದ ಅಂತರದಿಂದ ಜಯ ಸಾಧಿಸಿದ್ದಾರೆ.
ಚಿಂಚೋಳಿ ಪುರಸಭೆ: ಚಿಂಚೋಳಿ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ ಭಾಜಪ-05, ಭಾರಾಕಾಂ-12, ಜೆಡಿಎಸ್-01, ಬಿಎಸ್‍ಪಿ-01 ಹಾಗೂ ಪಕ್ಷೇತರ-04 ಸ್ಥಾನಗಳನ್ನು ಗಳಿಸಿದೆ.
ಸೆಪ್ಟೆಂಬರ್ 4 ರಿಂದ ದೈಹಿಕ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ
***********************************************************
ಕಲಬುರಗಿ,ಸೆ.03.(ಕ.ವಾ)-ಕೆ.ಎಸ್.ಆರ್.ಪಿ., ಎಸ್.ಆರ್.ಪಿ.ಸಿ. ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯನ್ನು 2018ರ ಸೆಪ್ಟೆಂಬರ್ 4 ರಿಂದ 6 ರವರೆಗೆ ಕಲಬುರಗಿ ಜಿಲ್ಲಾ ಸಶಸ್ತ್ರ ಪೊಲೀಸ್ ಮೈದಾನದಲ್ಲಿ ನಡೆಯಲಿದೆ ಎಂದು ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ್ ಕರ್ಬೀಕರ್ ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಹಾಜರಾತಿ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಲು ಬೆಂಗಳೂರು ನೇಮಕಾತಿ ಮತ್ತು ತರಬೇತಿ ಹೆಚ್ಚುವರಿ ತರಬೇತಿ ಮಹಾನಿರ್ದೇಶಕರ ಕಚೇರಿಯಿಂದ ಈಗಾಗಲೇ ಸಂದೇಶವನ್ನು ರವಾನಿಸಲಾಗಿದೆ. ಆದ್ದರಿಂದ ಅಭ್ಯರ್ಥಿಗಳು ತಮಗೆ ಹಾಜರಾತಿ ಪತ್ರದಲ್ಲಿ ನೀಡಿರುವ ಸೂಚನೆಗಳನ್ವಯ ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ
***********************************************************
ಕಲಬುರಗಿ,ಸೆ.03.(ಕ.ವಾ)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕಾಗಿ ಅಭ್ಯರ್ಥಿಗಳು hಣಣಠಿs://ssಠಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 2018ರ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯವನ್ನು ಹಾಗೂ ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ರೈಲ್ವೆ ಸ್ಟೇಶನ್ ಹಿಂದುಗಡೆ, ತಾರಫೈಲ್, 8ನೇ ಕ್ರಾಸ್, ಡಂಕಿನ ಭಾವಿ ಹತ್ತಿರ, ಜಿಡಿಎ ಲೇಔಟ್, ಅಂಬಿಕಾ ನಗರ ಹಿಂದುಗಡೆ, ಡಿ. ದೇವರಾಜ ಅರಸು ಭವನ ಕಲಬುರಗಿ ಕಚೇರಿಯನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.
ಸೆಪ್ಟೆಂಬರ್ 4ರಿಂದ ಮಾನಸಿಕ ರೋಗಿಗಳ ತಪಾಸಣಾ ಶಿಬಿರ
*****************************************************
ಕಲಬುರಗಿ,ಸೆ.03.(ಕ.ವಾ)-ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಮನೋಚೈತನ್ಯ ಕಾರ್ಯಕ್ರಮದಡಿ ಕಲಬುರಗಿ ಜಿಲ್ಲೆಯ ತಾಲೂಕುಗಳ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾನಸಿಕ ರೋಗಿಗಳ ತಪಾಸಣಾ ಶಿಬಿರವನ್ನು ಕೆಳಕಂಡ ದಿನಾಂಕಗಳಂದು ನಡೆಸಲಾಗುವುದು ಎಂದು ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ತಿಳಿಸಿದ್ದಾರೆ. ಶಿಬಿರದ ದಿನಾಂಕ, ಸ್ಥಳ ಮತ್ತು ಪಾಲ್ಗೊಳ್ಳುವ ತಜ್ಞ ಮನೋವೈದ್ಯರುಗಳ ವಿವರ ಇಂತಿದೆ.
ಸೆಪ್ಟೆಂಬರ್ 4 ರಂದು: ಆಳಂದ ತಾಲೂಕು ಆಸ್ಪತ್ರೆ-ಜಿಮ್ಸ್ ಮನೋವೈದ್ಯ ಡಾ|| ಚಂದ್ರಶೇಖರ ಹುಡೇದ. ಸೆಪ್ಟೆಂಬರ್ 5 ರಂದು: ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ-ಡಿ.ಎಂ.ಹೆಚ್.ಪಿ. ತಂಡ. ಸೆಪ್ಟೆಂಬರ್ 11 ರಂದು: ಚಿಂಚೋಳಿ ತಾಲೂಕು ಆಸ್ಪತ್ರೆ-ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ|| ವಿಜಯೇಂದ್ರ. ಸೆಪ್ಟೆಂಬರ್ 14ರಂದು: ಅಫಜಲಪುರ ತಾಲೂಕು ಆಸ್ಪತ್ರೆ-ಡಿ.ಎಂ.ಹೆಚ್.ಪಿ. ತಂಡ. ಸೆಪ್ಟೆಂಬರ್ 18 ರಂದು: ಚಿತ್ತಾಪುರ ತಾಲೂಕು ಆಸ್ಪತ್ರೆ-ಮನೋವೈದ್ಯ ಡಾ|| ಇರ್ಫಾನ್.
ಸೆಪ್ಟೆಂಬರ್ 21 ರಂದು: ಜೇವರ್ಗಿ ತಾಲೂಕು ಆಸ್ಪತ್ರೆ-ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೂಲ ಪತಂಗೆ. ಸೆಪ್ಟೆಂಬರ್ 26 ರಂದು: ಫರಹತಾಬಾದ ಪ್ರಾಥಮಿಕ ಆರೋಗ್ಯ ಕೇಂದ್ರ-ಡಿ.ಎಂ.ಹೆಚ್.ಪಿ. ತಂಡ. ಸೆಪ್ಟೆಂಬರ್ 28 ರಂದು: ಸುಲೇಪೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ-ಡಿ.ಎಂ.ಹೆಚ್.ಪಿ. ತಂಡ. ಸೆಪ್ಟೆಂಬರ್ 19 ರಂದು: ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಸಮುದಾಯ ಆರೋಗ್ಯ ಕೇಂದ್ರ-ಬಸವೇಶ್ವರ ಆಸ್ಪತ್ರೆಯ ಮನೋವೈದ್ಯ ಡಾ|| ರಾಹುಲ ಮಂದಕನಳ್ಳಿ. ಸೆಪ್ಟೆಂಬರ್ 26 ರಂದು: ಸೇಡಂ ತಾಲೂಕು ಆಸ್ಪತ್ರೆ-ಕಲಬುರಗಿ ಬಸವೇಶ್ವರ ಆಸ್ಪತ್ರೆಯ ಮನೋವೈದ್ಯ ಡಾ. ಅಜಯ ಢಗೆ.
ಮೇಲ್ಕಂಡ ದಿನಾಂಕಗಳಂದು ಮನೋವೈದ್ಯರು ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮಾನಸಿಕ ರೋಗದಿಂದ ಬಳಲುತ್ತಿರುವವರು ಸದರಿ ದಿನದಂದು ಮನೋವೈದ್ಯರ ಹತ್ತಿರ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೌಷ್ಠಿಕ ಆಹಾರ ಸಪ್ತಾಹಕ್ಕೆ ಚಾಲನೆ
*******************************
ಕಲಬುರಗಿ,ಸೆ.03.(ಕ.ವಾ)-ಕಲಬುರಗಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಿಂದ ಶಹಬಜಾರ ‘ಬಿ’ ವಲಯದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಈ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಕಲಬುರಗಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೇಲ್ವಿಚಾರಕಿ ವಿಲಾಸಮತಿ ಮಾತನಾಡಿ ವಿಶೇಷವಾಗಿ ಗರ್ಭಿಣಿಯರು ಹಾಲು, ಹಣ್ಣು ಮೊಟ್ಟೆ ಹಾಗೂ ಪೌಷ್ಠಿಕ ಆಹಾರ, ಮೊಳಕೆ ಕಾಳುಗಳನ್ನು ಸೇವಿಸಬೇಕು. ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ/ಚುಚ್ಚುಮದ್ದುಗಳನ್ನು ಹಾಕಿಸಬೇಕು. ಎಲ್ಲ ಹೆರಿಗೆಗಳು ಆಸ್ಪತ್ರೆಯಲ್ಲಿ ಮಾಡಿಸಬೇಕು. ಇದರಿಂದ ತಾಯಿ ಮತ್ತು ಶಿಶುವಿನ ಮರಣ ಪ್ರಮಾಣವನ್ನು ತಪ್ಪಿಸಬಹುದಾಗಿದೆ ಎಂದರು.
ಈ ಸಪ್ತಾಹ ಕಾರ್ಯಕ್ರಮದಲ್ಲಿ ಗರ್ಭಿಣಿಯರು ಹಾಗೂ ಮಹಿಳೆಯರು ಭಾಗವಹಿಸಿದ್ದರು. ಅರುಣಾ ಕಾರ್ಯಕ್ರಮ ನಿರೂಪಿಸಿದರು. ಚನ್ನಾಬಾಬು ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
ರಂಗಾಯಣದ ಪ್ರಭಾರ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ
ಕಲಬುರಗಿ,ಸೆ.03.(ಕ.ವಾ)-ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಅವರು ಕಲಬುರಗಿ ರಂಗಾಯಣದ ಆಡಳಿತಾಧಿಕಾರಿ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ.
ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
************************************
ಕಲಬುರಗಿ,ಸೆ.03.(ಕ.ವಾ)-ಬೆಂಗಳೂರಿನ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನ ಟೆಕ್ನಿಕಲ್ ಟ್ರೇನಿಂಗ್ ಇನ್‍ಸ್ಟಿಟ್ಯೂಟ್‍ನಲ್ಲಿ ಕೆಳಕಂಡ ವಿವಿಧ ಟ್ರೇಡ್‍ಗಳಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ಮತ್ತು ತರಬೇತಿ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಡಿಪ್ಲೋಮಾ ಏರೋನಾಟಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜನಿಯರಿಂಗ್, ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್/ ಎವೋನಿಕ್ಸ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್, ಡಿಪ್ಲೋಮಾ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್/ಇನ್ಫಾಮೇಶನ್ ಸೈನ್ಸ್ ಆಂಡ್ ಇಂಜಿನಿಯರಿಂಗ್/ಡಿಪ್ಲೋಮಾ ಇನ್ ಕಮರ್ಶಿಯಲ್ ಪ್ರಾಕ್ಟಿಸ್ ಹಾಗೂ ಡಿಪ್ಲೋಮಾ ಇನ್ ಮೆಟಾಲರ್ಜಿ ಇಂಜಿನಿಯರಿಂಗ್.
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಡಿಪ್ಲೋಮಾ ಪಾಸಾದ ಅಂಕಪಟ್ಟಿ, ಆಧಾರ ಕಾರ್ಡ್ ಹಾಗೂ ಮೀಸಲಾತಿ ಬಯಸಿದ್ದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ, ಅಂಗವಿಕಲ ಪ್ರಮಾಣಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸದರಿ ಕಚೇರಿಯಲ್ಲಿ ಸೆಪ್ಟೆಂಬರ್ 6ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ನ್ನು ಸಂಪರ್ಕಿಸಲು ಕೋರಲಾಗಿದೆ.
ಸೆಪ್ಟೆಂಬರ್ 4ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
************************************************
ಕಲಬುರಗಿ,ಸೆ.03.(ಕ.ವಾ.)-ಜೆಸ್ಕಾಂನ ಕಲಬುರಗಿ ನಗರ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಬರುವ 11ಕೆ.ವಿ. ರಾಮಮಂದಿರ, ಟಿ.ವಿ. ಸ್ಟೇಶನ್ ಹಾಗೂ ಗೋದುತಾಯಿ ಫೀಡರುಗಳ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 4ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರಗಳ ವ್ಯಾಪ್ತಿಯ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ಕೆ.ವಿ ರಾಮಮಂದಿರ ಫೀಡರ್: ಸಿ.ಬಿ.ಐ. ಕಾಲೋನಿ, ಸದಾಶಿವನಗರ, ನವಜೀವನ ಸೊಸೈಟಿ, ಕಲ್ಮಣಕರ್ ಲೇಔಟ್, ರಾಮಮಂದಿರ, ಕರುಣೇಶ್ವರನಗರ, ನವಣಿ ಲೇಔಟ್, ಸಂಗಮೇಶ್ವರ ಲೇಔಟ್, ದೇವಾನಗರ, ಓಜಾó ಕಾಲೋನಿ, ವಿವೇಕಾನಂದ ಕಾಲೋನಿ, ಲಕ್ಷ್ಮೀನಾರಾಯಣ ಲೇಔಟ್, ಶಿವ ಶಕ್ತಿ ಲೇಔಟ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು
11 ಕೆ.ವಿ. ಟಿ.ವಿ.ಸ್ಟೇಶನ ಫೀಡರ್: ಮುನಿಂ ಸಂಘ, ಕಾಕಡೆ ಚೌಕ್, ರಾಮನಗರ, ರೇವಣಸಿದ್ದೇಶ್ವರ ಕಾಲೋನಿ, ಕೆ.ಕೆ. ನಗರ, ಶಿವಾಜಿ ನಗರ ಮತ್ತು ಭವಾನಿ ನಗರ.
11 ಕೆ.ವಿ ಗೋದುತಾಯಿ ನಗರ ಫೀಡರ್: ಸಿ.ಐ.ಬಿ ಕಾಲೋನಿ, ಶಕ್ತಿ ನಗರ, ಗೋದುತಾಯಿ ನಗರ, ಭಾಗ್ಯವಂತಿ ನಗರ, ಜಿ.ಡಿ.ಎ. ಲೇಔಟ್, ಘಾಟಗೆ ಲೇಔಟ್, ಧರಿಯಾಪೂರ, ರೆಹಮತ್ ನಗರ, ಪಿ.ಡಬ್ಲೂ.ಡಿ. ಕ್ವಾರ್ಟರ್ಸ್, ಎನ್.ಜಿ.ಓ ಕಾಲೋನಿ ( ರೈಲ್ವೆ ಟ್ರ್ಯಾಕ್), ದತ್ತ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.


ಹೀಗಾಗಿ ಲೇಖನಗಳು News and photo Date: 03-09-2018

ಎಲ್ಲಾ ಲೇಖನಗಳು ಆಗಿದೆ News and photo Date: 03-09-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 03-09-2018 ಲಿಂಕ್ ವಿಳಾಸ https://dekalungi.blogspot.com/2018/09/news-and-photo-date-03-09-2018.html

Subscribe to receive free email updates:

0 Response to "News and photo Date: 03-09-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ