NEWS AND PHOTO DATE: 04-09-2018

NEWS AND PHOTO DATE: 04-09-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 04-09-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 04-09-2018
ಲಿಂಕ್ : NEWS AND PHOTO DATE: 04-09-2018

ಓದಿ


NEWS AND PHOTO DATE: 04-09-2018

ಲೋಕಸಭಾ ಸದಸ್ಯರ ಪ್ರವಾಸ
*****************************
ಕಲಬುರಗಿ,ಸೆ.04.(ಕ.ವಾ)-ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಪುಣೆಯಿಂದ ಚೆನ್ನೈ-ದಾದರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಸೆಪ್ಟೆಂಬರ್ 10ರಂದು ಬೆಳಿಗ್ಗೆ 6 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ತಾರಫೈಲ್ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ವಸತಿ ರಹಿತ ತಾರಫೈಲ್ ಮತ್ತು ಕಪನೂರ ಫಲಾನುಭವಿಗಳಿಗೆ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಕಲಬುರಗಿಯಲ್ಲಿ ರಾಜೀವಗಾಂಧಿ ಆವಾಸ್ ಯೋಜನೆಯಡಿ ವಸತಿ ರಹಿತ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಅಂದು ಸಂಜೆ 7.50 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಸೇಡಂ ಪ್ರಯಾಣಿಸಿ, ಸೇಡಂದಿಂದ ಅಂದು ರಾತ್ರಿ 9 ಗಂಟೆಗೆ ರಾಜಧಾನಿ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಜಿ.ಪಂ. ಚುನಾವಣಾ ವಿಶೇಷ ಸಭೆ
*****************************
ಕಲಬುರಗಿ,ಸೆ.04.(ಕ.ವಾ)-ಕಲಬುರಗಿ ಜಿಲ್ಲಾ ಪಂಚಾಯಿತಿಯ ಎರಡನೇ ಅವಧಿಯ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗಾಗಿ ಚುನಾವಣಾ ವಿಶೇಷ ಸಭೆಯು ಇದೇ ಸೆಪ್ಟೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಹೊಸ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ತಿಳಿಸಿದ್ದಾರೆ.
ಕಾಮಗಾರಿಗಳ ಗುಣಮಟ್ಟ ಪರಿವೀಕ್ಷಣೆಗೆ ಅರ್ಹ ಫರ್ಮಗಳಿಂದ ಟೆಂಡರ್ ಆಹ್ವಾನ
*********************************************************************
ಕಲಬುರಗಿ,ಸೆ.04.(ಕ.ವಾ)-ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಾಮಗಾರಿಗಳ ಗುಣಮಟ್ಟವನ್ನು ಮೂರನೇ ತಂಡದವರಿಂದ ಪರಿವೀಕ್ಷಣೆ ಮಾಡಲು ಅರ್ಹ ಫರ್ಮಗಳಿಂದ ಇ-ಪ್ರೊಕ್ಯೂರಮೆಂಟ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹೆಚ್.ಕೆ.ಆರ್.ಡಿ.ಬಿ.ಯ ತಿತಿತಿ.hಞಡಿಜb.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನ್ನು ಹಾಗೂ ಹೆಚ್.ಕೆ.ಆರ್.ಡಿ.ಬಿ. ಕಚೇರಿಯ ಅಧೀಕ್ಷಕ ಅಭಿಯಂತರರನ್ನು ಹಾಗೂ ಅವರ ಮೊಬೈಲ್ ಸಂಖ್ಯೆ 9449137736ಗೆ ಸಂಪರ್ಕಿಸಲು ಕೋರಲಾಗಿದೆ.
ಸೆ. 5ರಂದು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
*************************************************************************
ಕಲಬುರಗಿ,ಸೆ.04.(ಕ.ವಾ.)-ಜಿಲ್ಲಾ ಪಂಚಾಯಿತಿ ಹಾಗೂ ಉಪನಿರ್ದೆಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ 2018-19ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಸೆಪ್ಟೆಂಬರ್ 5ರಂದು ಬೆಳಗಿನ 11 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಸಚಿವರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಈ ಸಮಾರಂಭದಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಡಾ|| ಅಜಯಸಿಂಗ್, ಬಸವರಾಜ ಬಿ. ಮತ್ತಿಮೂಡ, ಸುಭಾಷ ಗುತ್ತೇದಾರ್, ರಾಜಕುಮಾರ ಪಾಟೀಲ ತೇಲ್ಕೂರ, ಎಮ್.ವಾಯ್. ಪಾಟೀಲ, ಖನೀಜ್ ಫಾತೀಮಾ, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣುಕುಮಾರ ಮೋದಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಡಿ. ಷಣ್ಮುಖ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹಣಮಂತ (ರಾಜು) ಲೇಂಗಟಿ, ಕಲಬುರಗಿ ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಕಟ್ಟಿಮನಿ, ಕಲಬುರಗಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಯ್ಯ ಬಿ. ಗುತ್ತೇದಾರ, ಕಲಬುರಗಿ ಉತ್ತರ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಭೀಮಸಿಂಗ್ ರಾಠೋಡ, ಕಲಬುರಗಿ ಉತ್ತರ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಶರಣಬಸಪ್ಪ ಎಂ. ಜೋಗದ, ಕಲಬುರಗಿ ದಕ್ಷಿಣ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಬಿ. ಚಿತ್ತಾಪುರ ಹಾಗೂ ಕಲಬುರಗಿ ದಕ್ಷಿಣ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಪ್ಪ ಮೂಲಗೆ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಈ ಸಮಾರಂಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕರೆಂದು ಪ್ರಾಥಮಿಕ ಶಾಲಾ ವಿಭಾಗದಿಂದ ಪ್ರಶಸ್ತಿ ಪಡೆದ 6 ಜನ ಶಿಕ್ಷಕರನ್ನು ಹಾಗೂ ಪ್ರೌಢಶಾಲಾ ವಿಭಾಗದಿಂದ ಪ್ರಶಸ್ತಿಗೆ ಆಯ್ಕೆಯಾದ 9 ಶಿಕ್ಷಕರನ್ನು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸೇಡಂ: ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ
***********************************************************************
ಕಲಬುರಗಿ,ಸೆ.04.(ಕ.ವಾ)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿಗೆ ಸೇಡಂ ತಾಲೂಕಿನಲ್ಲಿ ನಡೆಸಲಾಗುತ್ತಿರುವ ಕೆಳಕಂಡ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳಿಗೆ ಪ್ರವೇಶ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಬಸವರಾಜ ಎ. ಕಲೋಜಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಇಲಾಖೆಯ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಸೆಪ್ಟೆಂಬರ್ 11ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಆಯಾ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರನ್ನು ಅಥವಾ ಸೇಡಂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಸೇಡಂ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿಯನ್ನು ಹಾಗೂ ಮೊಬೈಲ್ ಮೊಬೈಲ್ ಸಂಖ್ಯೆ 9972609565, 9632166306, 9972770006ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ವಸತಿ ನಿಲಯಗಳ ವಿವರ ಇಂತಿವೆ: ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಹೌಸಿಂಗ್ ಬೋರ್ಡ ಕಾಲೋನಿ ಸೇಡಂ, ಭವಾನಿ ನಗರ ಕಲಬುರಗಿ ಹಾಗೂ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಊಡಗಿ ರಸ್ತೆ ಸೇಡಂ, ವೆಂಕಟೇಶ್ವರ ನಗರ ಹಾಗೂ ರಹೆಮತ ನಗರ ಸೇಡಂ.
ಜೇವರ್ಗಿ:ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ
*******************************************************************
ಕಲಬುರಗಿ,ಸೆ.04.(ಕ.ವಾ)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ (ರಾಜ್ಯ ವಿದ್ಯಾರ್ಥಿ ವೇತನ) ಜೇವರ್ಗಿ ತಾಲೂಕಿನಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜೇವರ್ಗಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ hಣಣಠಿs://ssಠಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಮಿನಿ ವಿಧಾನಸೌಧ, ಕೊಠಡಿ ಸಂಖ್ಯೆ 103, ಮೊದಲನೇ ಮಹಡಿ ಜೇವರ್ಗಿ ಹಾಗೂ ಮೊಬೈಲ್ ಸಂಖ್ಯೆ 8105989092, 9620567917, 9686591093, 9741171001ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ನೇತ್ರದಾನ ಮಹಾದಾನ
*********************
-ಡಾ. ವಿಶ್ವನಾಥ ರೆಡ್ಡಿ
*********************
ಕಲಬುರಗಿ,ಸೆ.04.(ಕ.ವಾ.)-ನೇತ್ರದಾನ ಮಹಾದಾನವಾಗಿದ್ದು, ಒಬ್ಬ ವ್ಯಕ್ತಿ ಸತ್ತ ನಂತರ 6 ಗಂಟೆಯೊಳÀಗಾಗಿ ಕಣ್ಣನ್ನು ತೆಗೆದು 24 ಗಂಟೆಯೊಳಗಾಗಿ ಅಂಧರಿಗೆ ಕಸಿ ಮಾಡಬಹುದಾಗಿದೆ ಎಂದು ಕಲಬುರಗಿ ಬಸವೇಶ್ವರ ಆಸ್ಪತ್ರೆಯ ನೇತ್ರ ನಿಧಿ ವಿಭಾಗದ ಮುಖ್ಯಸ್ಥ ಡಾ. ವಿಶ್ವನಾಥ ರೆಡ್ಡಿ ತಿಳಿಸಿದ್ದಾರೆ.
ಅವರು ಮಂಗಳವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ “ನೇತ್ರದಾನ ಜಾಗೃತಿ ಸಪ್ತಾಹ” ಅಂಗವಾಗಿ ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ನೇತ್ರದಾನದ ಅರಿವು ಕುರಿತ ಎರಡನೇ ದಿನದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಾ ನೇತ್ರದಾನಕ್ಕೆ ಯಾವುದೇ ತಾರತಮ್ಯವಿರುವುದಿಲ್ಲ. ಒಂದು ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ನೇತ್ರದಾನ ಮಾಡಬಹುದಾಗಿದೆ ಎಂದರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಅಪ್ಪಾರಾವ ಅಕ್ಕೋಣೆ ಮಾತನಾಡಿ, ಕಣ್ಣನ್ನು ಮಣ್ಣಿನಲ್ಲಿ ಹಾಕದೇ ಅಥವಾ ಸುಡದೆ ಬೇರೊಬ್ಬರಿಗೆ ದಾನ ಮಾಡಬೇಕು. ಸತ್ತ ಮೇಲೂ ಕಣ್ಣಿನಿಂದ ಬದುಕಿದ ಹಾಗೆ ಮತ್ತೊಬ್ಬರಿಗೆ ಬೆಳಕಾಗಬಹುದೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಸರ್ಕಾರಿ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಎಸ್.ಎಸ್.ಹತ್ತಿ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆಯ ಚಟುವಟಿಕೆಗಳನ್ನು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ ನೇತ್ರದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇದೊಂದು ಅತ್ಯುತ್ತಮ ಹೆಜ್ಜೆಯಾಗಿದೆ. ವಿದ್ಯಾರ್ಥಿಗಳಿಗೆ ಕಣ್ಣುಗಳನ್ನು ಯಾರು ದಾನ ಮಾಡಬೇಕು. ಅದಕ್ಕೆ ವಯೋಮಿತಿ ಮತ್ತಿತರ ಎಲ್ಲ ಪ್ರಶ್ನೆಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿ ಅರುಣಕುಮಾರ ಲೋಯಾ, ಕಾರ್ಯದರ್ಶಿ ರವೀಂದ್ರ ಶಾಬಾದಿ, ಖಜಾಂಚಿ ಭಾಗ್ಯಲಕ್ಷ್ಮಿ ಎಂ. ಮತ್ತು ಸದಸ್ಯರಾದ ನಾಗಣ್ಣ ಗಣಜಲಖೇಡ, ಡಾ. ಶರಣಪ್ಪ ಗಿರಿ, ಡಾ. ಬಿ.ಎಸ್. ಗುಳಶೆಟ್ಟಿ, ಮತ್ತಿತರರು ಪಾಲ್ಗೊಂಡಿದ್ದರು. ಸರ್ಕಾರಿ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಶಶಿಕಾಂತ ಮಜ್ಜಗೆ ಸ್ವಾಗತಿಸಿದರು. ದತ್ತು ಅಗ್ರವಾಲ ವಂದಿಸಿದರು.
ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ
************************************************
ಕಲಬುರಗಿ,ಸೆ.04.(ಕ.ವಾ)-ಕಲಬುರಗಿ ಜಿಲ್ಲೆಯ ಅವರಾದ(ಬಿ) ಗ್ರಾಮದಲ್ಲಿ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎಸಿ.್ಸ (ಕೃಷಿ) ವಿದ್ಯಾರ್ಥಿಗಳ “ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ”ದ ಕಾರ್ಯಕ್ರಮದಡಿ ಮಣ್ಣು ಮಾದರಿ ಪರೀಕ್ಷೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಮಣ್ಣು ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಡಾ. ಕೆ. ಬಸವರಾಜರವರು ಮಣ್ಣು ಮಾದರಿ ಸಂಗ್ರಹಿಸುವುದರ ಕುರಿತು ರೈತರಿಗೆ ಮಾಹಿತಿ ನೀಡಿದರು. ಈ ಪ್ರಾತ್ಯಕ್ಷಿಕೆಯನ್ನು ಶ್ರೀಧರ ಕುಲಕರ್ಣಿಯವರ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಮಾಹಿತಿ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸುಜಾಲಾ ಪ್ರಾಜೆಕ್ಟನಲ್ಲಿ ಸಂಗ್ರಹಿಸಿದ ಮಣ್ಣಿನ ಆರೋಗ್ಯದ ಮಾಹಿತಿಯನ್ನು ಮಣ್ಣಿನ ಆರೋಗ್ಯ ಕಾರ್ಡ್‍ನಲ್ಲಿ ತುಂಬಿ ರೈತರಿಗೆ ವಿತರಿಸಿದರು.
ಸೆಪ್ಟೆಂಬರ್ 5ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
***********************************************
ಕಲಬುರಗಿ,ಸೆ.04.(ಕ.ವಾ.)-ಜೆಸ್ಕಾಂನ ಕಲಬುರಗಿ ನಗರ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಬರುವ 11ಕೆ.ವಿ. ಸಿನಿಮಾ, ಬ್ರಹ್ಮಪುರ, ನೃಪತುಂಗ, ತಾಜ್‍ನಗರ ಹಾಗೂ ಬ್ಯಾಂಕ್ ಕಾಲೋನಿಗಳ ಫೀಡರುಗಳ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 5ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರಗಳ ವ್ಯಾಪ್ತಿಯ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11ಕೆ.ವಿ. ಸಿನಿಮಾ ಫೀಡರ್: ಸುಪರ ಮಾರ್ಕೇಟ್, ಶಹಾಬಜಾರ್ ಜಿ.ಡಿ.ಎ., ಕಟಗರಪುರ, ಪ್ರಕಾಶ ಟಾಕೀಸ್, ಲೋಹಾರಗಲ್ಲಿ, ಐಯ್ಯರವಾಡಿ, ಸಿಟಿ ಬಸ್‍ನಿಲ್ದಾಣ, ಬಂಬೂ ಬಜಾರ, ಮಹಾಲಕ್ಷ್ಮೀ ಲೇಔಟ್, ಕಿರಾಣ ಬಜಾರ್, ಮಾರವಾಡಿ ಗಲ್ಲಿ, ಚೌಕ್ ಪೊಲೀಸ್ ಸ್ಟೇಷನ್, ಫೋರ್ಟ ರಸ್ತೆ, ಬಾಂಡಾ ಬeóÁರ್, ಸರಸ್ವತಿ ಗೋದಾಮು, ಪುಟಾಣಿ ಗಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ ಬ್ರಹ್ಮಪುರ ಫೀಡರ್: ಶಹಬಜಾರ, ಶೆಟ್ಟಿಕಾಂಪ್ಲೆಕ್ಸ್, ಗದ್ಲೆಗಾಂವ, ಶಹಬಜಾರ ನಾಕಾ, ಶಹಬಜಾರ ಜಿ.ಡಿ.ಎ, ಕೈಲಾಶ ನಗರ, ಮಾಣೀಕೇಶ್ವರಿ ಕಾಲೋನಿ, ಲಾಲಗೇರಿ, ಗಂಗಾನಗರ, ಅಗ್ನಿಶಾಮಕ ದಳ, ಜನತಾ ಲೇಔಟ್, ಕಾಳೆ ಲೇಔಟ್, ಮಹಾಲಕ್ಷ್ಮೀ ಲೇಔಟ್, ಚೌಡೇಶ್ವರಿ ಕಾಲೋನಿ, ಎನ್.ಆರ್. ಕಾಲೋನಿ, ಬಾಳೆ ಲೇಔಟ್, ಅಗ್ರೀಕಲ್ಚರ ಲೇಔಟ್, ಜಿ.ಡಿ.ಎ. ವಕ್ಕಲಗೇರಾ, ಜಿ.ಡಿ.ಎ. ಶಹಬಜಾರ, ಹರಿಜನ ವಾಡಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ನೃಪತುಂಗಾ ಫೀಡರ್: ಜಿ.ಡಿ.ಎ. ಕೋಟನೂರ ಪ್ರದೇಶ, ನ್ಯೂ ಓಝಾ ಲೇಔಟ್, ಧನಶೆಟ್ಟಿ ನಗರ, ಸ್ಲಮ್ ಬೋರ್ಡ್ ವಸತಿ ಗೃಹಗಳು ಹಾಗೂ ಸುತ್ತಮುತ್ತಲ್ಲಿನ ಪ್ರದೇಶಗಳು,
11ಕೆ.ವಿ. ತಾಜ್‍ನಗರ ಫೀಡರ್: ಚನ್ನವೀರ ನಗರ, ರಾಜೀವಗಾಂಧಿ ನಗರ, ಶಹಾಬಜಾರ ತಾಂಡಾ, ಶಿವಶಕ್ತಿ ನಗರ, ತಾಜ್‍ನಗರ, ನಿಜಾಮಪುರ ಮತ್ತು ಹಳೆ ಫೀಲ್ಟರ್‍ಬೇಡ್, ಕಮಲ ನಗರ, ಕೆ.ಎಸ್.ಆರ್.ಪಿ. ಕ್ವಾರ್ಟರ್ಸ್ , ಸುವರ್ಣ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ ಬ್ಯಾಂಕ್ ಕಾಲೋನಿ ಫೀಡರ್: ಗಂಜ ಮೊನಪ್ಪಾ ದಾಲಮಿಲ್, ಕಸಾಯಿ ಮಸ್ಜಿದ್, ನಬಿ ಹೋಟೆಲ್, ಕಿರಾಣ ಬಜಾರ, ಪುಟಾಣಿಗಲ್ಲಿ, ರಂಗಿನ ಮಸ್ಜಿದ್, ಸದರ ಮೊಹಲ್ಲಾ, ಸಿಟಿ ಮಾರ್ಕೇಟ್, ಗಂಜ್ ಮೇನ್‍ರೋಡ್ ಎಪಿಎಂ.ಸಿ ಯಾರ್ಡ್, ಸಂಜೀವ ನಗರ, ಫಿಲ್ಟರ್ ಬೆಡ್ ವಾಟರ್ ಸಪ್ಲೈ ನಗರೇಶ್ವರ ಮಂದಿರ, ಗಡಂಗ ವಿ.ಆರ್.ಎಲ್. ಟಿ.ಸಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಅಂಗನವಾಡಿ ಮತ್ತು ಶಾಲೆ ಗೋಡೆಗಳ ಮೇಲೆ ಚೈಲ್ಡ್‍ಲೈನ್ ಜಾಗೃತಿಯ ಚಿತ್ರ
**********************************************************************
ಬಿಡಿಸಲು ಸೂಚನೆ
****************
ಕಲಬುರಗಿ,ಸೆ.04.(ಕ.ವಾ.)-ಮಕ್ಕಳ ಸಂರಕ್ಷಣೆ ಮತ್ತು ಹಕ್ಕುಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಚೈಲ್ಡ್‍ಲೈನ್ ಸಹಾಯವಾಣಿ ಕೇಂದ್ರದ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಜಿಲ್ಲೆಯ ಎಲ್ಲಾ ಶಾಲೆ ಆವರಣಗಳ ಗೋಡೆ ಮೇಲೆ ಚೈಲ್ಡ್‍ಲೈನ್ ಕುರಿತು ಚಿತ್ರ ಬಿಡಿಸಿ ಆಯಾ ಶಾಲೆ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಡಿಡಿಪಿಐಗೆ ಸೂಚನೆ ನೀಡಿದರು.
ಅವರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಚೈಲ್ಡ್‍ಲೈನ್ 10ನೇ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಇದಕ್ಕೆ ತಗಲುವ ವೆಚ್ಚವನ್ನು ಆಯಾ ಶಾಲೆಯ ಎಸ್.ಡಿ.ಎಂ.ಸಿ. ಅನುದಾನದಿಂದಲೇ ಭರಿಸಬೇಕು. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳ ಆವರಣದಲ್ಲೂ ಸಹ ಚೈಲ್ಡ್‍ಲೈನ್ ಕುರಿತು ವ್ಯಾಪಕ ಪ್ರಚಾರಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದ ರಾಜ್ಯ ಮಹಿಳಾ ವಸತಿ ನಿಲಯ, ಸರ್ಕಾರಿ ಬಾಲಕೀಯರ ಬಾಲ ಮಂದಿರ, ಅಮೂಲ್ಯ ಶಿಶು ಗೃಹ, ಸರ್ಕಾರಿ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಕೂಡಲೆ ಭೇಟಿ ನೀಡಿ ನೂತನ ಕಟ್ಟಡ ಆಗುವವರೆಗೂ ಸದರಿ ಹಳೆ ಕಟ್ಟಡಕ್ಕೆ ಸಣ್ಣ-ಪುಟ್ಟ ದುರಸ್ತಿ ಕಾಮಗಾರಿ ಅಗತ್ಯವಿದ್ದಲ್ಲಿ ಕೂಲಡೆ ಕೈಗೊಳ್ಳಬೇಕು, ವಿಶೇಷವಾಗಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳಿಂದ ಮಕ್ಕಳ ವಂಚಿತರಾಗದಂತೆ ನಿಗಾವಹಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು
ಬಾಲ್ಯ ವಿವಾಹ ನಿಷೇಧ ಕಾನೂನಿನಡಿ ಸೂಚಿಸಲಾದ ಎಲ್ಲಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತ ಕೂಡಲೆ ದಾಳಿಯ ನೇತೃತ್ವ ವಹಿಸಿದ ತಂಡದಲ್ಲಿ ಕಡ್ಡಾಯವಾಗಿ ಭಾಗಿಯಾಗಬೇಕು. ಒಂದು ವೇಳೆ ದಾಳಿಯಲ್ಲಿ ಭಾಗವಹಿಸಿದ್ದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದ ಅವರು ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಿಗೆ ತಾಲೂಕಾ ಮಟ್ಟದಲ್ಲಿ ಬಾಲ್ಯ ವಿವಾಹ ಕಾಯ್ದೆ ಕುರಿತು ತರಬೇತಿ ಆಯೋಜಿಸುವಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬಾಲ್ಯ ವಿವಾಹ ಪ್ರಕರಣಗಳ ಸಮಗ್ರ ಮಾಹಿತಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಹೊಂದುವುದಲ್ಲದೆ ಸದರಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಮೇಲುಸ್ತುವಾರಿಯಾಗಿಯೂ ಕಾರ್ಯನಿರ್ವಹಿಸಬೇಕು. ಇನ್ನು ತಾಲೂಕು ಮಟ್ಟದಲ್ಲಿ ತಹಶೀಲ್ದಾರ ನೇತೃತ್ವದ ಸಮಿತಿಗೂ ತಾಲೂಕುವಾರು ಪ್ರಕರಣಗಳ ಬಗ್ಗೆ ಮಾಹಿತಿ ನೀಡಿ ಶೀಘ್ರ ವಿಲೇವಾರಿ ಕ್ರಮ ಕೈಗೊಳ್ಳಲು ತಿಳಿಸಬೇಕು ಎಂದ ಅವರು ಒಟ್ಟಾರೆ ಬಾಲ್ಯ ವಿವಾಹ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಬಗ್ಗೆ 15 ದಿನದೊಳಗಾಗಿ ತಾಲೂಕುವಾರು ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿವಿ.ರಾಮನ ಮಾತನಾಡಿ ಪ್ರಸಕ್ತ ಸಾಲಿನಲ್ಲಿ ಬಾಲ್ಯ ವಿವಾಹ ಕಾಯ್ದೆಯಡಿ 69 ದಾಳಿ ಮಾಡಿ ಮುಂದಿನ ಕ್ರಮ ವಹಿಸಲಾಗಿದೆ. ಅನಾಥ ಮಕ್ಕಳ ಸಂರಕ್ಷಣೆಗೆಂದೆ ಕಲಬುರಗಿ ರೈಲು ನಿಲ್ದಾಣದಲ್ಲಿ ತೆರೆಯಲಾಗಿರುವ ಮಮತೆಯ ತೊಟ್ಟಿಲು ಕೇಂದ್ರದಲ್ಲಿ ಇದೂವರೆಗೆ 4 ಅನಾಥ ಮಕ್ಕಳನ್ನು ಸಾರ್ವಜನಿಕರು ತಂದು ಬಿಟ್ಟಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಚೈಲ್ಡ್‍ಲೈನ್ ಸಂಯೋಜಕ ಬಸವರಾಜ ಮಾತನಾಡಿ 2017-18ನೇ ಸಾಲಿನಲ್ಲಿ ಚೈಲ್ಡ್‍ಲೈನ್ ಸಹಾಯವಾಣಿಗೆ 1049 ಕರೆ ಸ್ವೀಕೃತವಾಗಿವೆ. ಪ್ರಸಕ್ತ 2018-19ನೇ ಸಾಲಿನಲ್ಲಿ 471 ಕರೆ ಸ್ವೀಕೃತವಾಗಿದ್ದು, ಇದರಲ್ಲಿ 453 ಕರೆಗಳಿಗೆ ತಕ್ಷಣ ಸ್ಪಂದಿಸಿ ಪ್ರಕಣಗಳ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶÀಕ ಮಲ್ಲಿಕಾರ್ಜುನ ರೆಡ್ಡಿ ಮಾತನಾಡಿ ಕೇಂದ್ರ ಸರ್ಕಾರ ಬೇಟಿ ಪಡಾವ್ ಬೇಟಿ ಬಚಾವ್ ಯೋಜನೆಯ 3ನೇ ಹಂತದಲ್ಲಿ 2018-19ನೇ ಸಾಲಿಗೆ ಕಲಬುರಗಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅದರನ್ವಯ ಯೋಜನೆಯ ಸಮಗ್ರ ಅನುಷ್ಠಾನಕ್ಕೆ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಇದಲ್ಲದೆ ಈ ಬಗ್ಗೆ ಸಿ.ಡಿ.ಪಿ.ಓ ಕಚೇರಿಗಳಿಂದ ಈಗಾಗಲೆ ಅಂಗನವಾಡಿ, ಗ್ರಾಮ ಮತ್ತು ಪಟ್ಟಣದ ಪ್ರಮುಖ ವೃತ್ತ, ಶಾಲಾ ಹಂತದಲ್ಲಿ ಅರಿವು ಕಾರ್ಯಕ್ರಮ ಸಹ ಆಯೋಜಿಸಲಾಗುತ್ತಿದೆ ಎಂದು ಯೋಜನೆ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟಿಲ್, ಚೈಲ್ಡ್‍ಲೈನ್ ನೋಡಲ್ ಅಧಿಕಾರಿ ಡಾ.ಲಿಂಗರಾಜ ಕೋಣಿನ, ಡಾನ್ ಬೋಸ್ಕೋ ಸಂಸ್ಥೆಯ ಫಾದರ್ ಸಜಿತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಅಧಿಕಾರಿ ಭರತೇಶ ಶೀಲವಂತ, ತಾಲೂಕಾ ಸಿ.ಡಿ.ಪಿ.ಓಗಳು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಸುಧಾರಣಾ ಸಂಸ್ಥೆಗಳ ಮುಖ್ಯಸ್ಥರು, ಸ್ವಯಂ ಸೇವಾ ಸಂಸ್ಥೆಗಳು ಪ್ರತಿನಿಧಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.







ಹೀಗಾಗಿ ಲೇಖನಗಳು NEWS AND PHOTO DATE: 04-09-2018

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 04-09-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 04-09-2018 ಲಿಂಕ್ ವಿಳಾಸ https://dekalungi.blogspot.com/2018/09/news-and-photo-date-04-09-2018.html

Subscribe to receive free email updates:

0 Response to "NEWS AND PHOTO DATE: 04-09-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ