News and photo Date: 10-9-2018

News and photo Date: 10-9-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 10-9-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 10-9-2018
ಲಿಂಕ್ : News and photo Date: 10-9-2018

ಓದಿ


News and photo Date: 10-9-2018

ಪಿ.ಎಂ.ಎ.ವೈ. ಯೋಜನೆಯಡಿ
*****************************
ಕಪನೂರ ಕೊಳಗೇರಿ ಪ್ರದೇಶದಲ್ಲಿ 150 ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ
*********************************************************************
ಕಲಬುರಗಿ,ಸೆ.10.(ಕ.ವಾ)-ವಸತಿ ಇಲಾಖೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವಿಭಾಗ ಕಲಬುರಗಿಯಿಂದ ಪ್ರಧಾನಮಂತ್ರಿ ಆವಾಸ್ (ಸರ್ವರಿಗೂ ಸೂರು) (ಪಿ.ಎಂ.ಎ.ವೈ-ಹೆಚ್.ಎಫ್.ಎ.) ಯೋಜನೆಯಡಿಯಲ್ಲಿ ಕಲಬುರಗಿ ನಗರದ ಕಪನೂರ ಕೊಳಗೇರಿ ಪ್ರದೇಶದಲ್ಲಿ ಅಂದಾಜು ಮೊತ್ತ 747 ಲಕ್ಷ ರೂ.ಗಳ ವೆಚ್ಚದಲ್ಲಿ 150 ಮನೆಗಳ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವನ್ನು ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಕಪನೂರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶಂಕುಸ್ಥಾಪನೆ ನೆರವೇರಿಸುವರು. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ಉತ್ತರ ಶಾಸಕರಾದ ಕನೀಜ್ ಫಾತೀಮಾ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಬಿ. ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣುಕುಮಾರ ಮೋದಿ, ಉಪ ಮಹಾಪೌರ ಪುತಲಿ ಬೇಗಂ ಅಶ್ರಫಮಿಯಾ, ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಜೆ. ರವಿಶಂಕರ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗಳ್ಳಿ, ಕಪನೂರ ವಾರ್ಡ ನಂ. 32ರ ಮಹಾನಗರ ಪಾಲಿಕೆ ಸದಸ್ಯೆ ಲಕ್ಷ್ಮೀ ಬಸರಾಜ ಖಂಡು ಅತಿಥಿಗಳಾಗಿ ಪಾಲ್ಗೊಳ್ಳುವರು.
ಪಿ.ಎಂ.ಎ.ವೈ. ಯೋಜನೆಯಡಿ
***************************
ತಾರಫೈಲ್ ಕೊಳಗೇರಿ ಪ್ರದೇಶದಲ್ಲಿ 350 ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ
*********************************************************************
ಕಲಬುರಗಿ,ಸೆ.10.(ಕ.ವಾ)-ವಸತಿ ಇಲಾಖೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವಿಭಾಗ ಕಲಬುರಗಿಯಿಂದ ಪ್ರಧಾನಮಂತ್ರಿ ಆವಾಸ್ (ಸರ್ವರಿಗೂ ಸೂರು) (ಪಿ.ಎಂ.ಎ.ವೈ-ಹೆಚ್.ಎಫ್.ಎ.) ಯೋಜನೆಯಡಿಯಲ್ಲಿ ಕಲಬುರಗಿ ನಗರದ ತಾರಫೈಲ್ ಕೊಳಗೇರಿ ಪ್ರದೇಶದಲ್ಲಿ ಅಂದಾಜು ಮೊತ್ತ 1743 ಲಕ್ಷ ರೂ.ಗಳ ವೆಚ್ಚದಲ್ಲಿ 350 ಮನೆಗಳ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವನ್ನು ಇದೇ ಸೆಪ್ಟೆಂಬರ್ 11ರಂದು ಮಧ್ಯಾಹ್ನ 12 ಗಂಟೆಗೆ ಕಲಬುರಗಿ ತಾರಫೈಲ್ ಕೊಳಚೆ ಪ್ರದೇಶದಲ್ಲಿ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶಂಕುಸ್ಥಾಪನೆ ನೆರವೇರಿಸುವರು. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ಉತ್ತರ ಶಾಸಕರಾದ ಕನೀಜ್ ಫಾತೀಮಾ, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಬಿ. ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣುಕುಮಾರ ಮೋದಿ, ಉಪ ಮಹಾಪೌರ ಪುತಲಿ ಬೇಗಂ ಅಶ್ರಫಮಿಯಾ, ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಜೆ. ರವಿಶಂಕರ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗಳ್ಳಿ, ತಾರಫೈಲ್ ವಾರ್ಡ ನಂ. 48ರ ಮಹಾನಗರ ಪಾಲಿಕೆ ಸದಸ್ಯೆ ಲತಾ ರವಿ ರಾಠೋಡ ಹಾಗೂ ವಾರ್ಡ ನಂ. 53ರ ಮಹಾನಗರ ಪಾಲಿಕೆ ಸದಸ್ಯ ಸೈಯದ್ ಹಮೀದ ನಿಸಾರ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸೆಪ್ಟೆಂಬರ್ ಮಾಹೆ: ಪಡಿತರದಾರರಿಗೆ ಆಹಾರ ಧಾನ್ಯ ಬಿಡುಗಡೆ
*******************************************************
ಕಲಬುರಗಿ,ಸೆ.10.(ಕ.ವಾ)-ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಕಲಬುರಗಿ ಜಿಲ್ಲೆಯಲ್ಲಿ 2018ರ ಸೆಪ್ಟೆಂಬರ್ ಮಾಹೆಗೆ ಪಡಿತರ ಚೀಟಿದಾರರಿಗೆ ವಿತರಣೆ ಮಾಡಲು ಆಹಾರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಪಡಿತರ ಚೀಟಿವಾರು ನಿಗದಿಪಡಿಸಿದ ಆಹಾರಧಾನ್ಯ ಪ್ರಮಾಣದ ವಿವರ ಇಂತಿದೆ. ಆದ್ಯತಾ ಪಡಿತರ ಚೀಟಿ ಕಾರ್ಡಿನ ಪ್ರತಿ ಸದಸ್ಯರಿಗೆ 5 ಕೆ.ಜಿ. ಮತ್ತು ಅಂತ್ಯೋದಯ ಪ್ರತಿ ಕಾರ್ಡಿಗೆ 35ಕೆ.ಜಿ. ಅಕ್ಕಿಯನ್ನು ಹಾಗೂ ಆದ್ಯತಾ ಪಡಿತರ ಚೀಟಿ ಕಾರ್ಡಿನ ಪ್ರತಿ ಸದಸ್ಯರಿಗೆ 2 ಕೆ.ಜಿ. ಗೋಧಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಇದಲ್ಲದೇ ಅಂತ್ಯೋದಯ ಮತ್ತು ಆದ್ಯತಾ ಪ್ರತಿ ಕಾರ್ಡಿಗೆ 38ರೂ. ದರದಂತೆ 1 ಕೆ.ಜಿ. ತೊಗರಿ ಬೆಳೆಯನ್ನು ವಿತರಿಸಲಾಗುವುದು. ಆದ್ಯತಾ ಪಡಿತರ ಚೀಟಿ ಮತ್ತು ಅಂತ್ಯೋದಯ ಪ್ರತಿ ಕಾರ್ಡಿಗೆ 3 ಲೀಟರನಂತೆ ಹಾಗೂ ಒಪ್ಪಿಗೆ ನೀಡಿರುವ ಗ್ರಾಮಾಂತರ ಪ್ರದೇಶದ ಎಪಿಎಲ್ ಅನಿಲ ಪಡಿತರ ಚೀಟಿಗಳಿಗೆ 1 ಲೀಟರ ಸೀಮೆಯನ್ನು ಪ್ರತಿ ಲೀಟರಿಗೆ 30ರೂ.ಗಳ ದರದಂತೆ ವಿತರಿಸಲಾಗುತ್ತಿದೆ.
ನ್ಯಾಯ ಬೆಲೆ ಅಂಗಡಿಯಲ್ಲಿ ಪ್ರತಿದಿನ ಬೆಳಗಿನ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಸಾಯಂಕಾಲ 4 ರಿಂದ ರಾತ್ರಿ 8 ಗಂಟೆಯವರೆಗೆ ಪಡಿತರ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದ್ದು, ನ್ಯಾಯ ಬೆಲೆ ಅಂಗಡಿಗಳಿಗೆ ಪ್ರತಿ ಮಂಗಳವಾರ ಮತ್ತು ಸರ್ಕಾರಿ ರಜೆ ದಿನಗಳಲ್ಲಿ ರಜೆ ಇರುತ್ತದೆ. 2018ರ ಸೆಪ್ಟೆಂಬರ್ ಮಾಹೆಯಿಂದ ಪಡಿತರ ಚೀಟಿದಾರರು ಜಿಲ್ಲೆಯಲ್ಲಿನ ಒಟ್ಟು 965 ಪಿ.ಓ.ಎಸ್. ಮುಖಾಂತರ ಹೆಬ್ಬಟ್ಟಿನ ಗುರುತು ನೀಡಿ ಆಹಾರಧಾನ್ಯ ಪಡೆದುಕೊಳ್ಳಬೇಕು ಹಾಗೂ ಒಂದು ವೇಳೆ ಮಾನ್ಯುವಲ್ ಆಗಿ ಆಹಾರಧಾನ್ಯ ವಿತರಣೆ ಮಾಡುವುದು ಕಂಡು ಬಂದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳ ಡೀಲರಗಳ ವಿರುದ್ಧ ನಿಯಮಾನುಸಾರವಾಗಿ ಕ್ರಮ ಕೈಗೊಳ್ಳಲಾಗುವುದು.
ನಾನ್ ಪಿ.ಓ.ಎಸ್. (ಓoಟಿ PಔS) ನ್ಯಾಯಬೆಲೆ ಅಂಗಡಿಯವರು ಕಡ್ಡಾಯವಾಗಿ ಪಡಿತರ ಚೀಟಿದಾರರ ಸಹಿ/ಹೆಬ್ಬಟ್ಟಿನ ಗುರುತು ಪಡೆದುಕೊಳ್ಳಬೇಕು ಹಾಗೂ ಬಿಲ್ಲನ್ನು ಕಡ್ಡಾಯವಾಗಿ ಪಡಿತರ ಚೀಟಿದಾರರಿಗೆ ನೀಡಬೇಕು. ಪಡಿತರ ಚೀಟಿದಾರರು ಮೇಲ್ಕಂಡ ಹಂಚಿಕೆಯಂತೆ ವಿತರಣೆ ಮಾಡದೇ ನಿರಾಕರಿಸಿದ್ದಲ್ಲಿ ಈ ಕುರಿತು ದೂರನ್ನು ಬಿಲ್ಲಿನ ಪ್ರತಿಯೊಂದಿಗೆ ಆಯಾ ತಾಲೂಕಿನ ತಾಲೂಕು ತಹಶೀಲ್ದಾರರ ಕಚೇರಿಯಲ್ಲಿ ಹಾಗೂ ಉಪನಿರ್ದೇಶಕರ ಕಚೇರಿ ಅಥವಾ ಆಧಾರ ಸಂಖ್ಯೆಗೆ ನೋಂದಣಿಯಾದ ಮೊಬೈಲ್ ಸಂಖ್ಯೆಯಿಂದ *161# ನ್ನು ಡಯಲ್ ಮಾಡಿ ಹಾಗೂ ಉಚಿತ ಸಹಾಯವಾಣಿ 1967ಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಉದ್ದಿಮೆದಾರರು ಘನತ್ಯಾಜ್ಯವನ್ನು ವ್ಶೆಜ್ಞಾನಿಕವಾಗಿ ವಿಲೇವಾರಿಗೆ ಸೂಚನೆ
****************************************************************
ಕಲಬುರಗಿ,ಸೆ.10.(ಕ.ವಾ)-ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ತರಹದ ಉದ್ದಿಮೆದಾರರು ಕಡ್ಡಾಯವಾಗಿ ಸಂಬಂಧಿಸಿದ ಉದ್ದಿಮೆಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಒಂದು ಕಸದ ತೊಟ್ಟಿಯನ್ನು ಇಟ್ಟು ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕೆಂದು ಕಲಬುರಗಿ ಮಹಾನಗರ ಮಾಲಿಕೆ ಆಯುಕ್ತ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ.
ಇದಲ್ಲದೇ ಉದ್ದಿಮೆದಾರರು ಮಹಾನಗರ ಪಾಲಿಕೆಯ ವಾಹನಗಳಲ್ಲಿ ಹಾಗೂ ತೊಟ್ಟಿಗಳಲ್ಲಿ ತ್ಯಾಜ್ಯವನ್ನು ಹಾಕಬೇಕು. ಪರವಾನಿಗೆ ಪಡೆದು ಉದ್ದಿಮೆ ಮಾಡುವವರು ಘನತ್ಯಾಜ್ಯವನ್ನು ಚರಂಡಿಗಳಲ್ಲಿ, ರಸ್ತೆಗಳಲ್ಲಿ, ಪಾದಚಾರಿ ರಸ್ತೆಗಳಲ್ಲಿ, ತಮ್ಮ ಸುತ್ತಮುತ್ತಲಿನ ಪ್ರದೇಶ ಸೇರಿದಂತೆ ಇತರೆ ಕಡೆಗಳಲ್ಲಿ ಹಾಕಬಾರದು. ಅದೇ ರೀತಿ ಉದ್ದಿಮೆ ಪರವಾನಿಗೆ ಕಡ್ಡಾಯವಾಗಿ ಮಹಾನಗರ ಪಾಲಿಕೆಯಿಂದ ಪಡೆಯಬೇಕು.
ಪ್ಲಾಸ್ಟಿಕ್ ತ್ಯಾಜ್ಯ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು 2016ರಂತೆ ಕಲಬುರಗಿ ಮಹಾನಗರ ಪಾಲಿಕೆಯಲ್ಲಿನ ಎಲ್ಲ ಉದ್ದಿಮೆದಾರರು ಪ್ಲಾಸ್ಟಿಕ್ ಉಪಯೋಗಿಸುವುದು ಹಾಗೂ ಮಾರಾಟ ಮಾಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದೇ ಸೆಪ್ಟೆಂಬರ್ 20ರೊಳಗಾಗಿ ಪ್ಲಾಸ್ಟಿಕ್‍ನ ಬದಲಾಗಿ ಬೇರೆ ಪರ್ಯಾಯ ವಸ್ತುಗಳ ಬಳಕೆ ಮಾಡಬೇಕು. ತಪ್ಪಿದ್ದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು-2016 ರಂತೆ ಈ ಉದ್ದಿಮೆಗಳ ಮೇಲೆ ದಾಳಿ ಮಾಡಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಿ ಪ್ಲಾಸ್ಟಿಕ್ ತ್ಯಾಜ್ಯ ಅಡಿಯಲ್ಲಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಅಗೌರವ ತೋರಿದಲ್ಲಿ ಶಿಸ್ತು ಕ್ರಮ
****************************************
ಕಲಬುರಗಿ,ಸೆ.10.(ಕ.ವಾ)-ಕಲಬುರಗಿ ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 17ರಂದು ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯವಿದ್ದಲ್ಲಿ ನೂತನ ರಾಷ್ಟ್ರಧ್ವಜವನ್ನು ಖರೀದಿಸಬೇಕು. ಯಾವುದೇ ಕಾರಣಕ್ಕೂ ರಾಷ್ಟ್ರ ಧ್ವಜಕ್ಕೆ ಅಗೌರವವಾದು ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕಾನೂನಿನನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ.
ಜಿ.ಪಂ. ವಿಶೇಷ ಸಾಮಾನ್ಯ ಸಭೆ ಸೆಪ್ಟೆಂಬರ್ 18ಕ್ಕೆ ಮುಂದೂಡಿಕೆ
*********************************************************
ಕಲಬುರಗಿ,ಸೆ.10.(ಕ.ವಾ)-ಕಲಬುರಗಿ ಜಿಲ್ಲಾ ಪಂಚಾಯಿತಿಯ ಎರಡನೇ ಅವಧಿಗಾಗಿ ಐದು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗಾಗಿ ಸೆಪ್ಟೆಂಬರ್ 10 ರಂದು ನಿಗದಿಪಡಿಸಲಾಗಿದ್ದ ಚುನಾವಣಾ ವಿಶೇಷ ಸಭೆಯನ್ನು ಭಾರತ ಬಂದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18ಕ್ಕೆ ಮುಂದೂಡಲಾಗಿದೆ.
ಈ ಮುಂದೂಡಿದ ಈ ಚುನಾವಣಾ ವಿಶೇಷ ಸಭೆಯು ಇದೇ ಸೆಪ್ಟೆಂಬರ್ 18ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯಿತಿ ಹೊಸ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಎ.ಸಿ.ಬಿ. ಅಧಿಕಾರಿಗಳಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ
**********************************************************
ಕಲಬುರಗಿ,ಸೆ.10.(ಕ.ವಾ)-ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಅಧಿಕಾರಿಗಳು ಕಲಬುರಗಿ ಜಿಲ್ಲೆಯ ಸೇಡಂಗೆ ಇದೇ ಸೆಪ್ಟೆಂಬರ್ 11 ರಂದು ಭೇಟಿ ನೀಡಿ ಅಂದು ಬೆಳಗಿನ 10 ರಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಡಿ.ಎಸ್.ಪಿ.ಯವರಾದ ಜೇಮ್ಸ್ ಮಿನೇಜಸ್ (ಮೊಬೈಲ್ ಸಂಖ್ಯೆ 9480806240) ಹಾಗೂ ಪೊಲೀಸ್ ಇನ್ಸ್‍ಪೆಕ್ಟರ್ ಕೆ.ಎಸ್. ಕಲ್ಲದೇವರು (ಮೊಬೈಲ್ ಸಂಖ್ಯೆ 9480806310) ಅವರು ಸೇಡಂ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ-
*********************************
ಕಲೋತ್ಸವದಲ್ಲಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
ಕಲಬುರಗಿ,ಸೆ.10.(ಕ.ವಾ)-ಚಿತ್ತಾಪುರ ತಾಲೂಕಿನಲ್ಲಿ ನಡೆದ ತಾಲೂಕ ಮಟ್ಟದ ಪ್ರತೀಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಗುಂಡಗುರ್ತಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು, ನಾಟಕ, ಭರತನಾಟ್ಯ, ಛದ್ಮ ವೇಷ ಮರಾಠಿ ಕಂಠಪಾಠ, ಕಥೆ ಹೇಳುವದು, ಮರಾಠಿ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ವಸತಿ ಶಾಲೆಯ ಪ್ರಾಂಶುಪಾಲರಾದ ಸುರೇಶ ಅಲ್ದಾರ್ತಿ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ವಸತಿ ಶಾಲೆಯ ದೈಹಿಕ ಶಿಕ್ಷಕರಾದ ಶಿವಾನಂದ ನಿರೋಣಿ ಮತ್ತು ಶಾಲಾ ಸಿಬ್ಬಂದಿಗಳಾದ ಪವೀತ್ರ, ತ್ಯಾಗರಾಜ, ಸಿದ್ದರಾಜು, ವಾಣಿಶ್ರೀ ಜ್ಯೋತಿಲಕ್ಷ್ಮೀ, ಗಂಗಮ್ಮ, ಶೀಲಾಬಾಯಿ, ಗಿರಿಜಾ, ಕವಿತಾ, ಪ್ರಕಾಶ ಸಂತಸ ವ್ಯಕ್ತಪಡಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
************************************************
ಕಲಬುರಗಿ,ಸೆ.10.(ಕ.ವಾ)-ಸಮಾಜ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿಗೆ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯದಲ್ಲಿ ಏಕೀಕೃತ ವಿದ್ಯಾರ್ಥಿ ವೇತನ ತಂತ್ರಾಂಶವನ್ನು ಅಭಿವೃದ್ಧಪಡಿಸಲಾಗಿದೆ. ವಿದ್ಯಾರ್ಥಿ ವೇತನ್ಕಾಗಿ ವಿದ್ಯಾರ್ಥಿಗಳು ssಠಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್‍ನಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬೇಕು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು SಂಖಿS Iಆ , ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ ಸಂಖ್ಯೆ, ಆಧಾರ ಸಂಖ್ಯೆ ಇಲ್ಲದಿದ್ದಲ್ಲಿ ವಿದ್ಯಾರ್ಥಿಯ ಹೆಸರಿನಲ್ಲಿರುವ ಬ್ಯಾಂಕ್ ಖಾತೆ ವಿವರಗಳು, ವಿದ್ಯಾರ್ಥಿಯ ಹೆಸರಿನಲ್ಲಿ ನೀಡಲಾದ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕು.
ಆಧಾರ ಸಂಖ್ಯೆಯನ್ನು ಗುರುತುಪಡಿಸಲು ನೇರ ನಗದು ವರ್ಗಾವಣೆಗಾಗಿ ಬಳಸಲು ಮತ್ತು SಂಖಿS ದತ್ತಾಂಶದಲ್ಲಿ ಅಳವಡಿಸಲು ಆಧಾರ ಅನುಮತಿ ಪತ್ರವನ್ನು ಅರ್ಜಿದಾರರು ಕಡ್ಡಾಯವಾಗಿ ಸಲ್ಲಿಸಬೇಕು. ಕರÀಪತ್ರ ಮತ್ತು ಅನುಮತಿ ಪತ್ರವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಮುದ್ರಿಸಲಾಗಿದ್ದು, ಶಾಲೆಯ ಮುಖ್ಯೋಪಾಧ್ಯಾಯರು ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಂಬಂಧಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಹಾಗೂ ಶಾಲೆಗಳ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಲು ಕೋರಲಾಗಿದೆ.
ವಿದ್ಯಾರ್ಥಿ ವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನ
***********************************************************************
ಕಲಬುರಗಿ,ಸೆ.10.(ಕ.ವಾ)-ನ್ಯಾಷನಲ್ ಇ-ಸ್ಕಾಲರ್‍ಶಿಫ್ ಯೋಜನೆಯಡಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಕಲಬುರಗಿ ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಕಲಚೇತನ ವಿದ್ಯಾರ್ಥಿಗಳು ತಿತಿತಿ.sಛಿhoಟಚಿಡಿshiಠಿs.gov.iಟಿ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿ ವೇತನ ಅನುಷ್ಠಾನಗೊಳಿಸಲು ಜಿಲ್ಲೆಯ ಎಲ್ಲ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳು ಈ ವಿದ್ಯಾರ್ಥಿ ವೇತನದ ಅರಿವು ಮೂಡಿಸಬೇಕು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ವಿಕಲಚೇತನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ಜೇವರ್ಗಿ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನ
*********************************************************
ಕಲಬುರಗಿ,ಸೆ.10.(ಕ.ವಾ.)-ಸಮಾಜ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು (ಎಲ್ಲ ನವೀಕರಣ/ ಹೊಸ ವಿದ್ಯಾರ್ಥಿಗಳಿಗೆ) ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ತಾಂತ್ರಾಂಶದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಇದಕ್ಕಾಗಿ ಜೇವರ್ಗಿ ತಾಲೂಕಿನ ಪರಿಶಿಷ್ಟ ಜಾತಿಯ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ssಠಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜೇವರ್ಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08442-236661ನ್ನು ಸಂಪರ್ಕಿಸಲು ಕೋರಲಾಗಿದೆ.
ಚಿತ್ತಾಪುರ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನ
ಕಲಬುರಗಿ,ಸೆ.10.(ಕ.ವಾ.)-ಚಿತ್ತಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಹಾಗೂ ಪ್ರವರ್ಗ-2ಎ, 3ಎ, 3ಬಿ ವರ್ಗಕ್ಕೆ ವಿದ್ಯಾರ್ಥಿಗಳಿಗೆ ಆದಾಯ ಮಿತಿ 44,500 ರೂ. ದೊಳಗಿರಬೇಕು. 1 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಲಗತ್ತಿಸಬೇಕಾ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08474-236561ನ್ನು ಸಂಪರ್ಕಿಸಲು ಕೋರಲಾಗಿದೆ.
ನೇತ್ರದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಿ
****************************************
ಕಲಬುರಗಿ,ಸೆ.10.(ಕ.ವಾ.)-ನೇತ್ರದಾನ ಮಹಾ ಪವಿತ್ರದಾನವಾಗಿದ್ದು, ಪ್ರತಿಯೊಬ್ಬರು ನೇತ್ರದಾನಕ್ಕೆ ಮುಂದಾಗಬೇಕು. ಒಬ್ಬರು ನೇತ್ರದಾನ ಮಾಡಿದ್ದಲ್ಲಿ ಇಬ್ಬರು ಅಂಧರ ಬಾಳಿಗೆ ದೃಷ್ಟಿ ಕೊಡಬಹುದಾಗಿದೆ ಎಂದು ಅಫಜಲಪುರ ವಿಧಾನಸಭಾ ಶಾಸಕ ಎಂ. ವೈ. ಪಾಟೀಲ ಮನವಿ ಮಾಡಿದರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಕಲಬುರಗಿ, ನೇತ್ರ ಬ್ಯಾಂಕ್ ಬಸವೇಶ್ವರ ಆಸ್ಪತ್ರೆ ಹಾಗೂ ಶ್ರೀಮತಿ ಅಂಬುಬಾಯಿ ಅಂಧ ಬಾಲಕಿಯರ ವಸತಿಯುತ ಶಾಲೆ ಕಲಬುರಗಿ ಇವರ ಸಹಯೋಗದಲ್ಲಿ ಮದರ್ ತೆರೆಸಾ ಬಿಎಡ್ ಕಾಲೇಜಿನಲ್ಲಿ ಏರ್ಪಡಿಸಿಸಲಾಗಿದ್ದ ನೇತ್ರದಾನ ಜಾಗೃತಿ ಸಪ್ತಾಹದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಬ್ಬ ವ್ಯಕ್ತಿ ಸತ್ತ ಮೇಲೆ ಅವನ ಕಣ್ಣುಗಳನ್ನು ಮಣ್ಣು ಮಾಡಲಾಗುವುದು. ಇಲ್ಲವೇ ಸುಡಲಾಗುವುದು. ಕಣ್ಣುಗಳನ್ನು ಈ ರೀತಿ ಹಾಳು ಮಾಡುವುದಕ್ಕಿಂತ ದಾನ ಮಾಡಿದರೆ, ಅಂಧರಿಗೆ ಉಪಯೋಗವಾಗುವುದು ಎಂದರು.
ಸಮಾರೋಪ ಭಾಷಣ ಮಾಡಿದ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಭೀಮಳ್ಳಿ ಮಾತನಾಡಿ, ಇಂತಹ ಒಳ್ಳೆಯ ಕೆಲಸಗಳಿಗೆ ತಮ್ಮ ಸಂಸ್ಥೆಯಿಂದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಗೆ ಎಲ್ಲ ರೀತಿಯ ಸಹಾಯ ಸಹಕಾರ ನೀಡಲಾಗುವುದೆಂದು ತಿಳಿಸಿದರು. ಡಾ. ಅರ್ಪಿತಾ ಅವರು ನೇತ್ರದಾನ ಕುರಿತು ಉಪನ್ಯಾಸ ನೀಡಿದರು. ದತ್ತು ಅಗರವಾಲ್ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಅಪ್ಪಾರಾವ ಅಕ್ಕೋಣೆ ರೆಡ್ ಕ್ರಾಸ್ ಸಂಸ್ಥೆಯನ್ನು ಕುರಿತು ಮಾತನಾಡಿದರು. ಪ್ರಾರಂಭದಲ್ಲಿ ಆಡಳಿತಾಧಿಕಾರಿ ಪ್ರಕಾಶ ಕವಿಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ರವೀಂದ್ರ ಶಾಬಾದಿ ವಂದಿಸಿದರು.
ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕೋಶಾಧ್ಯಕ್ಷೆ ಭಾಗ್ಯಲಕ್ಷ್ಮೀ ಎಂ., ಆಡಳಿತ ಮಂಡಳಿಯ ಸದಸ್ಯರರಾದ ಡಾ. ಶರಣಪ್ಪ ಗಿರಿ, ವಿ.ಎನ್.ಚಿತ್ತಾರಿ, ಸಿದ್ರಾಮಪ್ಪ ಬೊಮ್ಮನಾಳಕರ ಹಾಗೂ ಕಾಲೇಜಿನ ಪ್ರಾಚಾರ್ಯರಾದ ನಾಗೇಂದ್ರ ಬಡಿಗೇರ ಹಾಗೂ ಕಾಲೇಜಿನ ಉಪನ್ಯಾಸಕರು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಶಾಸಕ ಎಂ.ವೈ. ಪಾಟೀಲ, ಕಾರ್ಯದರ್ಶಿಗಳಾದ ಶಿವಪುತ್ರಪ್ಪ ಡೆಂಕಿ ಮತ್ತು ನಾಗೇಂದ್ರಪ್ಪ ಮಂಗದ್ ನೇತ್ರದಾನ ಒಪ್ಪಿಗೆ ಪತ್ರಗಳನ್ನು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಅಪ್ಪಾರಾವ ಅಕ್ಕೋಣೆ ಅವರಿಗೆ ನೀಡಿದರು.
ವಿಜೃಂಭಣೆಯಿಂದ ವಿಶ್ವಕರ್ಮ ಜಯಂತಿ ಆಚರಣೆಗೆ ನಿರ್ಧಾರ
****************************************************
ಕಲಬುರಗಿ,ಸೆ.10.(ಕ.ವಾ.)-ಕಲಬುರಗಿ ಜಿಲ್ಲೆಯಾದ್ಯಂತ ಇದೇ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯು ಸರ್ವಾನುಮತದಿಂದ ನಿರ್ಧರಿಸಿತು.
ಸೆಪ್ಟೆಂಬರ್ 17ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜರುಗುವ ವಿಶ್ವಕರ್ಮ ಜಯಂತಿ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಲು ಶಿಷ್ಠಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲು ನಿರ್ಧರಿಸಲಾಯಿತು. ವಿಶ್ವಕರ್ಮರ ಜೀವನ ಚರಿತ್ರೆ ಕುರಿತು ಚಂದ್ರಶೇಖರ್ ಕೆ. ಪೋತದಾರ ಅವರಿಂದ ಉಪನ್ಯಾಸ ನೀಡಲು ಸಭೆ ಒಪ್ಪಿಗೆ ಸೂಚಿಸಿತು.
ಜಿಲ್ಲಾ ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಿಸಲು ಸುತ್ತೋಲೆ ಹೊರಡಿಸುವಂತೆ ಹಾಗೂ ತಾಲೂಕಾ ಮಟ್ಟದಲ್ಲಿಯೂ ವಿಜೃಂಭಣೆಯಿಂದ ಆಚರಿಸುವಂತೆ ಎಲ್ಲಾ ತಹಶೀಲ್ದಾರರಿಗೆ ಸೂಚಿಸಲು ತೀರ್ಮಾನಿಸಲಾಯಿತು. ಸರ್ಕಾರ ಇತ್ತೀಚಿಗೆ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್ ಮತ್ತು ಗ್ಲಾಸ್‍ಗಳನ್ನು ಬಳಸದಂತೆ ನಿಷೇಧಿಸಲಾಗಿದ್ದು, ಹೀಗಾಗಿ ಪ್ಲಾಸ್ಟಿಕ್ ಅಲ್ಲದ ಸ್ಟೀಲ್ ಮತ್ತು ಪೇಪರ್ ಗ್ಲಾಸಿನಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದರು.
ದಿನಾಚರಣೆಯ ಅಂಗವಾಗಿ ಅಂದು ಬೆಳಗಿನ 9.30 ಗಂಟೆಯಿಂದ ಕಲಬುರಗಿ ನಗರದ ಸಂತ್ರಾಸವಾಡಿ ಕಾಳಿಕಾ ಮಂದಿರದಿಂದ ಸರಾಫ ಬಜಾರ, ಕಪಡಾ ಬಜಾರ, ಚೌಕ್ ಪೊಲೀಸ್ ಸ್ಟೇಶನ್, ಸುಪರ ಮಾರ್ಕೇಟ್, ಜಗತ್ ವೃತ್ತದಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರದವರೆಗೆ ವಿವಿಧ ಕಲಾ ಜಾನಪದ ಕಲಾ ತಂಡಗಳೊಂದಿಗೆ ವಿಶ್ವಕರ್ಮ ಭಾವಚಿತ್ರದ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ರಂಗಮಂದಿರದಲ್ಲಿ ನಡೆಯುವ ಸಮಾರಂಭಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು, ಸಮರ್ಪಕ ವಿದ್ಯುತ್ ಪೂರೈಕೆ, ಸ್ವಚ್ಛತೆ, ಮೆರವಣಿಗೆ ಉದ್ದಕ್ಕು ಸೂಕ್ತ ಪೊಲೀಸ್ ಭದ್ರತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕಾಳಿಕಾ ದೇವಸ್ಥಾನದ ಪಕ್ಕದಲ್ಲಿರುವ ಮಾಂಸದ ಅಂಗಡಿಯನ್ನು ಜಯಂತ್ಯೋತ್ಸವ ದಿನದಂದು ಬಂದ್ ಮಾಡಲು ಹಾಗೂ ಅಲ್ಲಿ ಸ್ವಚ್ಛತೆ ಕಾಪಾಡಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಸಭೆಯಲ್ಲಿ ಭಾಗವಹಿಸಿದ ವಿಶ್ವಕರ್ಮ ಸಮಾಜದ ಮುಖಂಡರು ಜಯಂತಿಯ ಯಶಸ್ವಿಗೆ ಅಗತ್ಯ ಸಲಹೆಗಳನ್ನು ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸರ್ವರನ್ನು ಸ್ವಾಗತಿಸಿ ಜಯಂತಿ ನಿಮಿತ್ಯ ಕೈಗೊಂಡ ಪೂರ್ವಸಿದ್ಧತೆ ಬಗ್ಗೆ ವಿವರಿಸಿದರು.
ಸಭೆಯಲ್ಲಿ ವಿಶ್ವಕರ್ಮ ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ.ಮೋನಪ್ಪ, ವಿಶ್ವಕರ್ಮ ಸಮಾಜದ ಮುಖಂಡರಾದ ಅಶೋಕ ಪೋತದಾರ, ಚಿತ್ರಲೇಖಾ ಟೆಂಗಳಿಕರ್, ಲೋಹಿತ್ ವಿಶ್ವಕರ್ಮ, ದೇವೆಂದ್ರಪ್ಪ ಸುತಾರ, ಗಂಗಾಧರ ಪೋತದಾರ, ಶ್ರೀಶೈಲಮ್ಮ ಮನೋಹರ ಸೇರಿದಂತೆ ಸಮಾಜದ ಅನೇಕ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸ್ವಾಮಿ ವಿವೇಕಾನಂದರ ಚಿಕ್ಯಾಗೋ ಉಪನ್ಯಾಸದ 125ನೇ
***************************************************
ವರ್ಷಾಚರಣೆ: ಜಾಥಾ ಹಾಗೂ ಉಪನ್ಯಾಸ ಕಾರ್ಯಕ್ರಮ
*************************************************
ಕಲಬುರಗಿ,ಸೆ.10.(ಕ.ವಾ)-ಸ್ವಾಮಿ ವಿವೇಕಾನಂದರು 1893ರಲ್ಲಿ ಚಿಕ್ಯಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದ್ದಕ್ಕೆ ಸೆಪ್ಟೆಂಬರ್ 11, 2018ಕ್ಕೆ 125 ವರ್ಷಗಳಾಗಿದ್ದು, ಹೀಗಾಗಿ 125ನೇ ವರ್ಷಾಚರಣೆ ಅಂಗವಾಗಿ ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸ್ಥಳೀಯ ವಿಶ್ವವಿದ್ಯಾನಿಲಯಗಳು, ಸರ್ಕಾರದ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಡಿಯದಲ್ಲಿ ಅಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಲಬುರಗಿ ಎಂ.ಎಸ್.ಐ. ಪದವಿ ಮಹಾವಿದ್ಯಾಲಯದ ಸಮಾಜಶಾಸ್ತ್ರದ ಉಪನ್ಯಾಸಕ ಪ್ರೋ. ಎಸ್.ಎಲ್.ಪಾಟೀಲ್ ಅವರಿಂದ ಉಪನ್ಯಾಸ ನೀಡುವರು. ಜಾಥಾ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ಹಾಗೂ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಅವರು ಕೋರಿದ್ದಾರೆ.
ಸ್ವಾಮಿ ವಿವೇಕಾನಂದರು 1893ರಲ್ಲಿ ಚಿಕ್ಯಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಭಾರತದ ತತ್ವಾದರ್ಶಗಳನ್ನು ಹೃದಯಸ್ಪರ್ಶಿಯಾಗಿ ಅಲ್ಲಿ ಹಾಜರಿದ್ದ ಪ್ರತಿನಿಧಿಗಳಿಗೆ ತಿಳಿಸಿ ಜಗತ್ರ್ಪಸಿದ್ಧವಾದ ದಿನ 11ನೇ ಸೆಪ್ಟೆಂಬರ್. ಈ ಐತಿಹಾಸಿಕ ಭಾಷಣ ನೀಡಿ 11ನೇ ಸೆಪ್ಟೆಂಬರ್ 2018ಕ್ಕೆ 125 ವರ್ಷಗಳಾಗಿದ್ದು, 11ನೇ ಸೆಪ್ಟೆಂಬರ್ 2019 ರವರೆಗೆ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರವು ನಿರ್ಧರಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 11 ರಂದು ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟನೆ
*************************************************************************
ಕಲಬುರಗಿ,ಸೆ.10.(ಕ.ವಾ.)-ಕಲಬುರಗಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 12ರಂದು ತಾ.ಪಂ. ಸಾಮಾನ್ಯ ಸಭೆ
***********************************
ಕಲಬುರಗಿ,ಸೆ.10.(ಕ.ವಾ.)-ಕಲಬುರಗಿ ತಾಲೂಕು ಪಂಚಾಯಿತಿಯ 9ನೇ ಸಾಮಾನ್ಯ ಸಭೆಯು ಇದೇ ಸೆಪ್ಟೆಂಬರ್ 12 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ತಾಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಕಲ್ಲಪ್ಪ ಸಜ್ಜನ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಕಲಬುರಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 11ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*************************************************
ಕಲಬುರಗಿ,ಸೆ.11.(ಕ.ವಾ.)-ಜೆಸ್ಕಾಂನ ಕಲಬುರಗಿ ನಗರ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಬರುವ 11ಕೆ.ವಿ. ಸಿದ್ದೇಶ್ವರ ಫೀಡರ್ ವ್ಯಾಪ್ತಿಯಲ್ಲಿ ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 33ಕೆವಿ ಜಿಆಯ್‍ಎಸ್ ಸ್ಟೇಶನ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರಗಳ ವ್ಯಾಪ್ತಿಯ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ಕೆ.ವಿ ಸಿದೇಶ್ವರ ಫೀಡರ್: ಸಂತ್ರಾಸವಾಡಿ ಜಿ.ಡಿ.ಎ, ಎಂ.ಜಿ ರೋಡ, ದರ್ಶನಾಪುರ ಲೇಔಟ್, ಮತ್ತು ಸುತ್ತಮುತ್ತಲಿನ ಪ್ರದೇಶಗಳು.





ಹೀಗಾಗಿ ಲೇಖನಗಳು News and photo Date: 10-9-2018

ಎಲ್ಲಾ ಲೇಖನಗಳು ಆಗಿದೆ News and photo Date: 10-9-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 10-9-2018 ಲಿಂಕ್ ವಿಳಾಸ https://dekalungi.blogspot.com/2018/09/news-and-photo-date-10-9-2018.html

Subscribe to receive free email updates:

0 Response to "News and photo Date: 10-9-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ