ಶೀರ್ಷಿಕೆ : News and photo Date: 26-12-2018
ಲಿಂಕ್ : News and photo Date: 26-12-2018
News and photo Date: 26-12-2018
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜಾಗೃತೆಯಿಂದ ಕಾರ್ಯನಿರ್ವಹಿಸಿ
***************************************************************
ಕಲಬುರಗಿ,ಡಿ.26.(ಕ.ವಾ.)-ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರು ತೆಗೆದು ಹಾಕುವುದು, ಸೇರ್ಪಡೆ ಮಾಡುವ ಮುನ್ನ ಅವಶ್ಯಕ ಮಾಹಿತಿ ಕಲೆಹಾಕಿ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಮತದಾರ ಪಟ್ಟಿ ಪರಿಷ್ಕರಣಾ ವೀಕ್ಷಕರು ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಬುಧವಾರ ಇಲ್ಲಿನ ಹೆಚ್.ಕೆ.ಆರ್.ಡಿ.ಬಿ. ಸಭಾಂಗಣದಲ್ಲಿ ಕಳೆದ ಅಕ್ಟೋಬರ್ 10 ರಿಂದ ನವೆಂಬರ್ 20ರ ವರಗೆ ಕೈಗೊಳ್ಳಲಾದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಸಂದರ್ಭದಲ್ಲಿ ಗುಲಬರ್ಗಾ ಗ್ರಾಮೀಣ, ಗುಲಬರ್ಗಾ ದಕ್ಷಿಣ, ಗುಲಬರ್ಗಾ ಉತ್ತರ ಮತ್ತು ಜೇವರ್ಗಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಆಕ್ಷೇಪಣೆ ಮತ್ತು ಅಹವಾಲುಗಳ ವಿಲೇವಾರಿ ಕುರಿತಂತೆ ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾರರ ಪರಿಷ್ಕರಣೆಯಲ್ಲಿ ಸ್ವೀಕೃತ ಅಕ್ಷೇಪಣೆಯ ಅಹವಾಲುಗಳನ್ನು ಸೂಕ್ತ ವಿಚಾರಣೆ ನಡೆಸಿ ವಿಲೇವಾರಿ ಮಾಡಬೇಕು ಎಂದ ಅವರು ಒಂದು ವೇಳೆ ಅರ್ಹ ಮತದಾರ ಹೆಸರು ಪರಿಷ್ಕರಣೆ ಸಂದರ್ಭದಲ್ಲಿ ಬಿಟ್ಟು ಹೋದಲ್ಲಿ ಅಂತವರು ಪುನ: ಅರ್ಜಿ ಸಲ್ಲಿಸಿ ಸೇರಿಸಲು ಅವಕಾಶವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಗೊಂದಲಕ್ಕಿಡಾಗಬಾರದು. ಸೂಕ್ತ ದಾಖಲಾತಿ ಇಲ್ಲದೇ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಆರ್.ಎಸ್. ಪೆದ್ದಪ್ಪಯ್ಯ, ಸಹಾಯಕ ಆಯುಕ್ತ ರಾಚಪ್ಪ, ಕಲಬುರಗಿ ತಹಶೀಲ್ದಾರ ಅಶೋಕ ಹಿರೋಳಿ, ಜೇವರ್ಗಿ ತಹಶೀಲ್ದಾರ ಬಸಲಿಂಗಪ್ಪ ನಾಯ್ಕೋಡಿ ಸೇರಿದಂತೆ ಇನ್ನೀತರ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಾದೇಶಿಕ ಆಯುಕ್ತರಿಂದ ವಿವಿಧ ಪ್ರದೇಶಗಳಿಗೆ ಭೇಟಿ: ಗುಲಬರ್ಗಾ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 209 (ಸಿದ್ದೇಶ್ವರ ಕಾಲೋನಿ), ಗುಲಬರ್ಗಾ ವಿಶ್ವವಿದ್ಯಾಲಯ ಕ್ಯಾಂಪಸ್, ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 41 ಹಾಗೂ 42 (ಹುಸೇನಿ ಗಾರ್ಡನ್) ಹಾಗೂ ಗುಲಬರ್ಗಾ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 51 ಮತ್ತು 52 (ಮದಿನಾ ಕಾಲೋನಿ ಮತ್ತು ಮಿಸಬಾ ಕಾಲೋನಿ) ಪ್ರದೇಶಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗುಲಬರ್ಗಾ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 42ರಲ್ಲಿ ಮತದಾರರ ಪರಿಷ್ಕರಣೆ ಸಂದರ್ಭದಲ್ಲಿ ಹೆಚ್ಚಿನ ಹೆಸರು ತೆಗೆದು ಹಾಕಿರುವುದರಿಂದ ಪುನ: ನಕಾಶೆಯೊಂದಿಗೆ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳಬೇಕು. ಅರ್ಹ ಮತದಾರರು ಇದ್ದಲ್ಲಿ ಅಂಥವರ ಹೆಸರನ್ನು ಪುನ: ಸೇರಿಸಲು ಕ್ರಮ ಕೈಗೊಳ್ಳಬೇಕೆಂದು ಕಲಬುರಗಿ ಸಹಾಯಕ ಆಯುಕ್ತ ರಾಚಪ್ಪ ಅವರಿಗೆ ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದರು.

ಡಿಸೆಂಬರ್ 31 ಹಾಗೂ ಜನವರಿ 1ರಂದು
************************************
ಕ್ರೀಡಾ ಶಾಲೆ-ವಸತಿ ನಿಲಯಗಳ ಕ್ರೀಡಾಪಟುಗಳ ಅಯ್ಕೆ
**************************************************
ಕಲಬುರಗಿ,ಡಿ.26.(ಕ.ವಾ.)-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿ ರಾಜ್ಯದ ಬೆಂಗಳೂರು, ಮೈಸೂರು, ಬೆಳಗಾವಿ, ದಾವಣಗೆರೆ, ಕೊಡಗು, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿನ ಕ್ರೀಡಾ ಶಾಲೆ/ನಿಲಯಗಳಿಗೆ ಅಥ್ಲೇಟಿಕ್ಸ, ಹಾಕಿ, ಬಾಸ್ಕೇಟಬಾಲ್, ವಾಲಿಬಾಲ್, ಜೂಡೊ, ಕುಸ್ತಿ, ಫುಟಬಾಲ್, ಈಜು ಮತ್ತು ಸೈಕ್ಲಿಂಗ್ ಕ್ರೀಡೆಗಳಲ್ಲಿ 2019-20ನೇ ಸಾಲಿನ ಆಯ್ಕೆ ಪ್ರಕ್ರಿಯೆಯು ನಡೆಸಲಾಗುತ್ತಿದೆ. ಈ ಕ್ರೀಡಾ ಶಾಲೆ/ವಸತಿ ನಿಲಯಗಳಿಗೆ ಸೇರಬಯಸುವ ಬಾಲಕ/ಬಾಲಕಿಯರಿಗಾಗಿ ತಾಲೂಕು ವiಟ್ಟದ ಆಯ್ಕೆ ಪ್ರಕ್ರಿಯೆಯು 2018ರ ಡಿಸೆಂಬರ್ 31 ಹಾಗೂ 2019ರ ಜನವರಿ 1 ರಂದು ಪ್ರತಿದಿನ ಬೆಳ್ಳಿಗ್ಗೆ 10 ಗÀಂಟೆಯಿಂದ ಕೆಳಕಂಡ ಸ್ಥಳಗಳಲ್ಲಿ ನಡೆಸಲಾಗುವುದು ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಕ್ರೀಡಾಪಟುಗಳು 2008ರ ಜೂನ್ 1ರ ನಂತರ ಜನಿಸಿರಬೇಕು. 7ನೇ ತರಗತಿಯಲ್ಲಿ ಓದುತ್ತಿರುವ ಕ್ರೀಡಾಪಟುಗಳು 2005ರ ಜೂನ್ 1ರ ನಂತರ ಜನಿಸಿರಬೇಕು ಹಾಗೂ 10ನೇ ತರಗತಿಯಲ್ಲಿ ಓದುತ್ತಿರುವ ಕ್ರೀಡಾಪಟುಗಳು 2001ರ ಜೂನ್ 1ರ ನಂತರ ಜನಿಸಿದ ಬಾಲಕ/ಬಾಲಕಿಯರು ಈ ಕ್ರೀಡಾ ಶಾಲೆ/ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೇಯಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆ ಪ್ರಕ್ರಿಯೇ ನಡೆಯುವ ದಿನಾಂಕ, ತಾಲೂಕು, ಸ್ಥಳ ಹಾಗೂ ಸಂಚಾಲಕರ ಹೆಸರು ವಿವರ ಇಂತಿದೆ.
ಡಿಸೆಂಬರ್ 31ರಂದು: ಚಿಂಚೋಳಿ ತಾಲೂಕಿಗೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೇಯು ಚಿಂಚೋಳಿಯ ಆದರ್ಶ ಶಾಲೆ ಹತ್ತಿರದ ತಾಲೂಕು ಕ್ರೀಡಾಂಗಣದಲ್ಲಿ-ಮಲ್ಲಿಕಾರ್ಜುನ ಮತ್ತು ಸಂಜಯ ಬಾಣದ. ಆಳಂದ ತಾಲೂಕಿಗೆ ಸಂಬಂಧಿಸಿದಂತೆ ಆಳಂದ ತಾಲೂಕು ಕ್ರೀಡಾಂಗಣದಲ್ಲಿ-ಸಂತೋಷ ಮತ್ತು ಸುರೇಶ ಲೋಕಾಪುರ. ಸೇಡಂ ತಾಲೂಕಿಗೆ ಸಂಬಂಧಿಸಿದಂತೆ ಸೇಡಂ ತಾಲೂಕು ಕ್ರೀಡಾಂಗಣದಲ್ಲಿ-ಮಣಿಸಿಂಗ್ ರಾಠೋಡ ಮತ್ತು ರಾಜಾಬಾಬು ಚವ್ಹಾಣ. ಅಫಜಲಪುರ ತಾಲೂಕಿಗೆ ಸಂಬಂಧಿಸಿದಂತೆ ಅಫಜಲಪುರ ತಾಲೂಕಿನ ಆತನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ-ರಾಜಕುಮಾರ ಗೌರ್ ಮತ್ತು ಅಶೋಕ.
ಜನವರಿ-1ರಂದು: ಚಿತ್ತಾಪುರ ತಾಲೂಕಿಗೆ ಸಂಬಂಧಿಸಿದಂತೆ ಚಿತ್ತಾಪುರ ತಾಲೂಕು ಕ್ರೀಡಾಂಗಣದಲ್ಲಿ-ಮರೆಪ್ಪಾ ಬೊಮ್ಮನಳ್ಳಿಕರ್/ ಸುರೇಶ ಲೋಕಾಪುರ. ಜೇವರ್ಗಿ ತಾಲೂಕಿಗೆ ಸಂಬಂಧಿಸಿದಂತೆ ಜೇವರ್ಗಿ ತಾಲೂಕು ಕ್ರೀಡಾಂಗಣದಲ್ಲಿ-ರಾಜು ಚವ್ಹಾಣ ಮತ್ತು ಅಶೋಕ. ಕಲಬುರಗಿ ತಾಲೂಕಿಗೆ ಸಂಬಂಧಿಸಿದಂತೆ ಕಲಬುರಗಿ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ- ಸಂಜಯ ಬಾಣದ.
ಹೆಚ್ಚಿನ ಮಾಹಿತಿಗಾಗಿ ತರಬೇತುದಾರರ ಮೊಬೈಲ್ ಸಂಖ್ಯೆ 9844029235, 9986126603, 8105430549, 9900636909 ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ 9902853193ಗೆ ಸಂಪರ್ಕಿಸಲು ಕೋರಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಪ್ರವಾಸ
**********************************************
ಕಲಬುರಗಿ,ಡಿ.26.(ಕ.ವಾ.)-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಡಿಸೆಂಬರ್ 27ರಂದು ಬೆಳಿಗ್ಗೆ 5.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ವಿಜಯಪುರಕ್ಕೆ ಪ್ರಯಾಣಿಸುವರು.

ಡಿಸೆಂಬರ್ 28ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ
*************************************************
ಕಲಬುರಗಿ,ಡಿ.26.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಮತ್ತು ಜಿಲ್ಲೆಯ ಗ್ರಾಹಕ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2018” ಹಾಗೂ “ಗ್ರಾಹಕ ಜಾಗೃತಿ ಪ್ರಾತ್ಯಕ್ಷಿಕೆಗಳು ಹಾಗೂ ಅನ್ನಭಾಗ್ಯ ಜಾಗೃತಿ ಸಮಾವೇಶ”ವನ್ನು ಇದೇ ಡಿಸೆಂಬರ್ 28 ರಂದು ಕಲಬುರಗಿಯ ಜಿಲ್ಲಾ ಕೋರ್ಟ್ ರಸ್ತೆಯಲ್ಲಿರುವ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್‍ನಲ್ಲಿ ಏರ್ಪಡಿಸಲಾಗಿದೆ.
ಅಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2018 ಸಮಾರಂಭವನ್ನು ಉದ್ಘಾಟಿಸುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ನೆಲ್ದಾಳ್ ಶರಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ., ಹಾಗೂ ಮಹಾನಗರ ಪಾಲಿಕೆ ಆಯುಕ್ತ ಆರ್.ಎಸ್.ಪೆದ್ದಪ್ಪಯ್ಯ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯ ನಾಗಶೆಟ್ಟಿ ಜಿ. ಗಂದಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನ್ಯಾಯವಾದಿಗಳಾದ ವೈಜನಾಥ ಝಳಕಿ ಅವರು ವಿಶೇಷ ಉಪನ್ಯಾಸ ನೀಡುವರು. ಅಂದು ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಅನ್ಯಭಾಗ್ಯ ಜಾಗೃತಿ ಸಮಾವೇಶವನ್ನು ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ. ಉಪಸ್ಥಿತರಿರುವರು.
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿಯ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿ ವಿವಿಧ ಇಲಾಖೆಗಳಿಂದ ಗ್ರಾಹಕರ ಹಕ್ಕುಗಳು, ಬಿತ್ತನೆ ಬೀಜ/ರಸಗೊಬ್ಬರ, ತೋಟಗಾರಿಕೆ ವಿಷಯಗಳು, ಮಹಿಳಾ ಮತ್ತು ಮಕ್ಕಳ ಹಕ್ಕುಗಳು, ಶೈಕ್ಷಣಿಕ ಹಕ್ಕು, ಸಾರಿಗೆ ನಿಯಮಗಳು, ಆರೋಗ್ಯ ವಿಷಯಗಳು, ಆಹಾರ ಕಲಬೆರಕೆ-ರಾಸಾಯನಿಕ ವಿಶ್ಲೇಷಣೆ, ಔಷಧ ವಿಷಯಗಳು, ಗ್ರಾಹಕರ ಹಕ್ಕುಗಳು, ಕಾರ್ಮಿಕ ಹಕ್ಕು ಮತ್ತು ಸೌಲಭ್ಯಗಳು, ತೂಕ ಮತ್ತು ಅಳತೆ ವಿಷಯಗಳು, ಅನ್ನಭಾಗ್ಯ, ಮುಖ್ಯಮಂತ್ರಿ ಅನಿಲಭಾಗ್ಯ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ-2013, ಪೆಟ್ರೋಲಿಯಂ ವಿಷಯಗಳು, ಎನ್.ಪಿ.ಜಿ. ವಿಷಯಗಳು, ನಾಗರಿಕ ಸನ್ನದುಗಳು/ ಗ್ರಾಹಕರ ಹಕ್ಕು ಮತ್ತು ಕರ್ತವ್ಯಗಳು, ಆಹಾರ ಗುಣಮಟ್ಟ, ಆಹಾರ ಗುಣಮಟ್ಟ ವರ್ಗೀಕರಣ, ಬೆಂಬಲ ಬೆಲೆ ಯೋಜನೆ ವಿಷಯಗಳ ಕುರಿತು ಗ್ರಾಹಕರ ಜಾಗೃತಿ ವಸ್ತು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ.

ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಣೆ: ದಾಖಲಾತಿ ಸಲ್ಲಿಸಲು ಸೂಚನೆ
*********************************************************************
ಕಲಬುರಗಿ,ಡಿ.26.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿ ವ್ಯಾಪಾರಸ್ಥರಿಗೆ ಮಹಾನಗರ ಪಾಲಿಕೆಯು ನಿರ್ದಿಷ್ಟ ಸ್ಥಳವನ್ನು ನಿಗದಿಪಡಿಸಿ ವ್ಯಾಪಾರದ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ ಎಂದು ಕಲಬುರಗಿ ಮಹಾನಗರಪಾಲಿಕೆ ಆಯುಕ್ತ ಆರ್.ಎಸ್. ಪೆದ್ದಪ್ಪಯ್ಯ ಅವರು ತಿಳಿಸಿದ್ದಾರೆ.
ಇಚ್ಛೆಯುಳ್ಳ ಬೀದಿ ವ್ಯಾಪಾರಸ್ಥರು ಅವಶ್ಯಕ ದಾಖಲೆಗಳಾದ ಕುಟುಂಬದ ಭಾವಚಿತ್ರ, ವ್ಯಾಪಾರ/ ಉದ್ದಿಮೆಯ ಭಾವಚಿತ್ರ, ಇತ್ತೀಚಿನ ಒಂದು ಸ್ಟ್ಯಾಂಪ್ ಸೈಜ್ ಭಾವಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬಿ.ಪಿ.ಎಲ್. ಪಡಿತರ ಚೀಟಿ (ರೇಷನ್ ಕಾರ್ಡ) ಹಾಗೂ ಆಧಾರ ಕಾರ್ಡಗಳ ದಾಖಲೆಗಳನ್ನು ಕಲಬುರಗಿ ಮಹಾನಗರಪಾಲಿಕೆಯ ಆವಕ ಶಾಖೆಯಲ್ಲಿ 2019ರ ಜನವರಿ 2 ರೊಳಗಾಗಿ ಸಲ್ಲಿಸಬೇಕು.
ಕಲಬುರಗಿ ನಗರವು ಕ್ರಮೇಣವಾಗಿ ವಾಣಿಜ್ಯ ನಗರವಾಗಿ ಬೆಳೆಯುತ್ತಿದೆ. ಸುಮಾರು ವ್ಯಾಪಾರಸ್ಥರು ತಮ್ಮ ವ್ಯಾಪಾರಕ್ಕಾಗಿ ನಿರ್ದಿಷ್ಟ ಸ್ಥಳವಿಲ್ಲದೇ ಬೀದಿಯಲ್ಲಿ ವಿವಿಧ ತರಹದ ವ್ಯಾಪಾರ ಮಾಡುತ್ತಿರುವುದು ಕಂಡು ಬಂದಿರುತ್ತದೆ. ಈ ಬೀದಿ ಬದಿ ವ್ಯಾಪಾರಸ್ಥರ ಬಗ್ಗೆ ಯಾವುದೇ ರೀತಿಯ ದಾಖಲೆಗಳು ಹೊಂದಿರುವುದಿಲ್ಲ. ಇದಕ್ಕಾಗಿ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸೇಡಂ: ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
ಕಲಬುರಗಿ,ಡಿ.26.(ಕ.ವಾ.)-ಪ್ರಸಕ್ತ 2018-19ನೇ ಸಾಲಿನ ಡೇ-ನಲ್ಮ್ ಯೋಜನೆಯಡಿ ನಿರುದ್ಯೋಗ, ಅರೆ ನಿರುದ್ಯೋಗ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡಲು ಮತ್ತು ಸ್ವ ಸಹಾಯ ಗುಂಪುಗಳು ಗುಂಪು ಉದ್ಯೋಗ ಕಾರ್ಯಕ್ರಮವನ್ನು ಕೈಗೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸೇಡಂ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೇಡಂ ಪುರಸಭೆಯಲ್ಲಿ ವ್ಯಾಪ್ತಿಯಲ್ಲಿ ಬರುವ 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದೆ. ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡಲಾಗುತ್ತದೆ. ಇದಕ್ಕೆ ನೇರವಾಗಿ ಯಾವುದೇ ಸಹಾಯಧನ ಇರುವುದಿಲ್ಲ. ಆಸಕ್ತ ಫಲಾನುಭವಿಗಳು ತಮ್ಮ ಆದಾಯ ಪ್ರಮಾಣಪತ್ರ, ಆಧಾರ ಕಾರ್ಡ, ಪಡಿತರ ಚೀಟಿ, ಯೋಜನಾ ವರದಿ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ 2019ರ ಜನವರಿ 11 ರೊಳಗಾಗಿ ಸೇಡಂ ಪುರಸಭೆಯ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನ:
*****************
ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆ ಜೋಡಣೆ ಕಡ್ಡಾಯ
***********************************************************
ಕಲಬುರಗಿ,ಡಿ.26.(ಕ.ವಾ.)-ಪ್ರಸಕ್ತ 2018-19ನೇ ಸಾಲಿಗೆ ಕಲಬುರಗಿ ತಾಲೂಕಿನ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಪೋರ್ಟಲ್‍ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಡಿ.ಬಿ.ಟಿ. ಮೂಲಕ ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಗೆ ಆಧಾರ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಿಕೊಳ್ಳಬೇಕು. ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಪೋಷಕರು ಈ ಕುರಿತು ಗಮನಹರಿಸಬೇಕೆಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕಾಡೆಮಿಯಿಂದ ಕಾರ್ಯಾಗಾರ: ಹೆಸರು ನೋಂದಣಿಗೆ ಸೂಚನೆ
********************************************************
ಕಲಬುರಗಿ,ಡಿ.26.(ಕ.ವಾ.)-ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ “ಖeseಚಿಡಿಛಿh ಒeಣhoಜoಟogಥಿ ಚಿಟಿಜ ಆಚಿಣಚಿ ಂಟಿಚಿಟಥಿsis usiಟಿg Sಣಚಿಣisಣiಛಿಚಿಟ ಣooಟs” ಎಂಬ ವಿಷಯದ ಕುರಿತು 2019ರ ಜನವರಿ 2 ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಚೇರಿಯಲ್ಲಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಎಂ. ರಮೇಶ್ ಅವರು ತಿಳಿಸಿದ್ದಾರೆ.
ಈ ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯದಾದ್ಯಂತ ವಿಜ್ಞಾನ ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಈ ಕಾರ್ಯಾಗಾರಕ್ಕೆ ಪ್ರವೇಶ ದರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 100ರೂ. ಹಾಗೂ ಅಧ್ಯಾಪಕರಿಗೆ/ಸಂಶೋಧನಾ ವಿದ್ಯಾರ್ಥಿಗಳಿಗೆ 200 ರೂ. ಇರುತ್ತದೆ. ಮೊದಲು ನೋಂದಾಯಿಸಿಕೊಂಡವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹೆಸರು ನೋಂದಾಯಿಸಿಕೊಳ್ಳಲು ಡಿಸೆಂಬರ್ 31 ಕೊನೆಯ ದಿನವಾಗಿದೆ ಎಂದು ಅವರು ತಿಳಿಸಿದ್ದಾರೆ.

ಡಿಸೆಂಬರ್ 27ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*************************************************
ಕಲಬುರಗಿ,ಡಿ.26.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುವ ಪ್ರಯುಕ್ತ 11ಕೆ.ವಿ. ಸೂಪರ ಮಾರ್ಕೇಟ್ ಫೀಡರ್ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು (ಗುರುವಾರ) ಬೆಳಗಿನ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸದರಿ ಕೇಂದ್ರದ ಮೇಲೆ ಬರುವ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11ಕೆ.ವಿ ಸೂಪರ ಮಾರ್ಕೇಟ್ ಫೀಡರ್: ಶಿವಾಜಿ ಖಾನಾವಳಿ, ಪ್ರಕಾಶ ಟಾಕೀಸ್, ಲೋಹಾರಗಲ್ಲಿ, ಕಿರಾಣ ಬಜಾರ್, ಫೋರ್ಟ್ ರಸ್ತೆ, ಮಹಾದೇವ ಟೆಂಪಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಹೀಗಾಗಿ ಲೇಖನಗಳು News and photo Date: 26-12-2018
ಎಲ್ಲಾ ಲೇಖನಗಳು ಆಗಿದೆ News and photo Date: 26-12-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 26-12-2018 ಲಿಂಕ್ ವಿಳಾಸ https://dekalungi.blogspot.com/2018/12/news-and-photo-date-26-12-2018.html

0 Response to "News and photo Date: 26-12-2018"
ಕಾಮೆಂಟ್ ಪೋಸ್ಟ್ ಮಾಡಿ