News and Photo Date: 27-12-2018

News and Photo Date: 27-12-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photo Date: 27-12-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photo Date: 27-12-2018
ಲಿಂಕ್ : News and Photo Date: 27-12-2018

ಓದಿ


News and Photo Date: 27-12-2018

ಗ್ರಾಮ ದೇವಸ್ಥಾನದ ಕಟ್ಟೆಯ ಮೇಲೆ ಸಾರ್ವಜನಿಕರಿಂದ ಕುಂದುಕೊರತೆ ಸ್ವೀಕಾರ
**********************************************************************
ಕಲಬುರಗಿ,ಡಿ.27.(ಕ.ವಾ.)-ಹಾರವಿಲ್ಲ ತುರಾಯಿ ಇಲ್ಲ. ಅತೀ ಸರಳ ರೀತಿಯಲ್ಲಿ ಗ್ರಾಮದ ದೇವಸ್ಥಾನದ ಕಟ್ಟೆಯ ಮೇಲೆ ಕುಳಿತು ಗ್ರಾಮಸ್ಥರ ಕುಂದುಕೊರತೆಗಳನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಇಂದು ಗುರುವಾರ ಆಲಿಸಿದರು.
ಅವರು ಚಿತ್ತಾಪುರ ಮತಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಗ್ರಾಮಸ್ಥರಿಗೆ ಯಾವುದೇ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಲು ದೊಡ್ಡ ಪೆಂಡಾಲಾಗಲಿ, ರಂಗು ರಂಗಿನ ಶಾಲುಗಳಾಗಲಿ, ಊಡುಗರೆಗಳಾಗಲಿ ನೀಡದಂತೆ ನಿಷೇಧಿಸಿದರು. ಪ್ರಿಯಾಂಕ್ ಖರ್ಗೆ ಅವರು ತಾವು ಸಚಿವರೆನ್ನುವುದನ್ನು ತಿಳಿಯದೇ ಗ್ರಾಮಗಳಲ್ಲಿ ಸಾರ್ವಜನಿಕರೊಂದಿಗೆ ಅವರ ಪ್ರತಿನಿಧಿಯಂತೆ ಗ್ರಾಮದ ಸಮಸ್ಯೆಗಳನ್ನು ತಿಳಿದು ಪರಿಹರಿಸಿದರು.
ನಾನು ನನ್ನ ಮತಕ್ಷೇತ್ರದ ಗ್ರಾಮಗಳಿಗೆ ಆಗಮಿಸಿದಾಗ ಅನಾವಶ್ಯಕವಾಗಿ ಗ್ರಾಮಸ್ಥರನ್ನು ಸಂಬೋಧಿಸಿ ಮಾತನಾಡುವುದಿಲ್ಲ. ಅವಶ್ಯಕತೆಯಿದ್ದಾಗ ಮಾತ್ರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಏನಿದ್ದರೂ ಗ್ರಾಮದಲ್ಲಿ ಸುತ್ತಾಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವಲ್ಲಿ ತೊಡಗಲಾಗುವುದು. ಗ್ರಾಮಸ್ಥರು ರಾಜಕೀಯ ಮಾಡದೇ ತಮ್ಮ ಗ್ರಾಮದ ಅಭಿವೃದ್ಧಿಗಾಗಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. ವೈಯಕ್ತಿಕ ವೈಮನಸ್ಸುಗಳನ್ನು ಬೆಳೆಸಿಕೊಳ್ಳಬಾರದು ಎಂದರು.
ಮುಡಬೂಳ ಗ್ರಾಮದಲ್ಲಿ 43 ಲಕ್ಷ ರೂ. ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗ್ರಾಮದ ನಿಜಶರಣ ಅಂಬಿಗರ ಚೌಡಯ್ಯ ದೇವಸ್ಥಾನದ ಆವರಣದಲ್ಲಿ ಕುಳಿತು ಮುಡಬೂಳ ಗ್ರಾಮಕ್ಕೆ ನೀರು ಸರಬರಾಜು ಮಾಡುವ ನೀರಿನ ಟ್ಯಾಂಕ್ ಆದಷ್ಟು ಬೇಗ ಪೂರ್ಣಗೊಳಿಸಿ ಗ್ರಾಮಕ್ಕೆ ನೀರು ಪೂರೈಕೆ ಮಾಡಬೇಕು. ಶಾಲೆಯ ಕಟ್ಟಡವು ಆರು ತಿಂಗಳ ಹಿಂದೆಯೇ ಪೂರ್ಣಗೊಳ್ಳಬೇಕಾಗಿತ್ತು. ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರ ಶಾಲಾ ಕಟ್ಟಡ ಪೂರ್ಣಗೊಳಿಸಬೇಕು. ಆಶ್ರಯ ಯೋಜನೆಯಡಿ ಆಯ್ಕೆಯಾದ ಹೊಲ, ಮನೆ ಇಲ್ಲದವರಿಗೆ ಗ್ರಾಮದಲ್ಲಿ ಮನೆ ಕಟ್ಟಲು ಜಮೀನು ಖರೀದಿಸಲಾಗಿದೆ ಎಂದು ತಿಳಿದು ಬಂದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಒಗ್ಗಟ್ಟಿನಿಂದ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸಿಕೊಡಬೇಕು ಇದು ಗ್ರಾಮ ಪಂಚಾಯಿತಿಯಲ್ಲಿ ಕೈಗೊಳ್ಳುವ ನಿರ್ಣಯವಾಗಿದೆ ಎಂದು ಸಚಿವರು ತಿಳಿಸಿದರು.
ಏನ್ಮಾಡ್ಬೇಕ್ ಹೇಳಾಯಿ: ಮುಡಬೂಳ ಗ್ರಾಮ ಪ್ರದಕ್ಷಣೆ ಕೈಗೊಳ್ಳುವ ಸಂದರ್ಭದಲ್ಲಿ ಗ್ರಾಮದ 65 ವಯಸ್ಸಿನ ಅಜ್ಜಿಯೊಬ್ಬಳು ಸಚಿವರನ್ನು ತಡೆದಿದ್ದಕ್ಕೆ ಸಚಿವರು ಏನ್ಮಾಡ್ಬೇಕು ಹೇಳಾಯಿ ಎಂದು ಕೇಳಿದಾಗ ಅಜ್ಜಿಯು ಗ್ರಾಮದಲ್ಲಿ ಸಿ.ಸಿ. ರಸ್ತೆಗಳಾಗಿದ್ದು, ಚರಂಡಿ ವ್ಯವಸ್ಥೆ ಇರುವುದಿಲ್ಲ. ಮಹಿಳೆಯರಿಗೆ ಶೌಚಾಲಯದ ತೊಂದರೆ ಇದೆ ಎಂದು ಹೇಳಿದಳು. ಇದಕ್ಕೆ ಸಚಿವರು ಈ ಕುರಿತು ಈಗಾಗಲೇ ಚರ್ಚಿಸಲಾಗಿದೆ. ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದರು.
ಮುಡಬೂಳ ಗ್ರಾಮದ ಗ್ರಾಮಸ್ಥರು ಮುಡಬೂಳದಿಂದ ಚಿತ್ತಾಪುರಕ್ಕೆ ಬಸ್ ಸೌಕರ್ಯ ಕಲ್ಪಿಸಬೇಕು. ಗ್ರಾಮದ ಸಂಗಮೇಶ್ವರ ಗುಡಿಯಲ್ಲಿ ಕಲ್ಯಾಣ ಮಂಟಪ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಲು ಸ್ಥಳಾವಕಾಶದ ಕೊರತೆಯಿರುವುದರಿಂದ ಮಹಿಳೆಯರಿಗೆ ಸಾಮೂಹಿಕ ಶೌಚಾಲಯ ನಿರ್ಮಿಸಿಕೊಡಬೇಕೆಂದು ಮನವಿ ಸಲ್ಲಿಸಿದರು.
ದಂಡೋತಿಯಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳೊಂದಿಗೆ ಚರ್ಚಿಸಿದರು. ಶಾಲಾ ಮಕ್ಕಳು ತಮಗೆ ಏನಾದರೂ ತೊಂದರೆಗಳಿದ್ದರೆ ನಿರ್ಭಯವಾಗಿ ತಮ್ಮ ಗಮನಕ್ಕೆ ತರಬೇಕೆಂದರು.
ಈ ಸಂದರ್ಭದಲ್ಲಿ ಗಣ್ಯರಾದ ಭೀಮಣ್ಣ ಸಾಲಿ, ಶಿವಾನಂದ ಪಾಟೀಲ, ರಮೇಶ ಮರಗೋಳ, ಜಗದೇವ ರೆಡ್ಡಿ, ರಾಜಶೇಖರ ತಿಮ್ಮನಾಯಕ, ಸುನೀಲ ದೊಡ್ಮನಿ, ಶಿವರಾಜ ಪಾಟೀಲ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಸಚಿವರು ಇಂದು ಮುಡಬೂಳ ಗ್ರಾಮದಲ್ಲಿ 43 ಲಕ್ಷ ರೂ. ವೆಚ್ಚದಲ್ಲಿ ಮುಡಬೂಳ ಗ್ರಾಮದಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ, 1. ಕೋಟಿ ರೂ. ವೆಚ್ಚದಲ್ಲಿ ದಂಡೋತಿ ಗ್ರಾಮದ ಎಂ.ಡಿ.ಆರ್.ಎಸ್. ದಿಂದ ಸಿಬ್ಬಂದಿ ವಸತಿಗೃಹದ ವರೆಗೆ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ, 1 ಕೋಟಿ ರೂ. ವೆಚ್ಚದ ದಂಡೋತಿ ಗ್ರಾಮದ ಎಂ.ಡಿ.ಆರ್.ಎಸ್. ಸಿಬ್ಬಂದಿಗಳಿಗೆ ವಸತಿ ಗೃಹ ನಿರ್ಮಾಣ, 15 ಲಕ್ಷ ರೂ. ವೆಚ್ಚದಲ್ಲಿ ದಂಡೋತಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಕೋಣೆಗಳ ನಿರ್ಮಾಣ, 32 ಲಕ್ಷ ರೂ. ವೆಚ್ಚದ ಪೇಠಶಿರೂರ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡ ನಿರ್ಮಾಣ, 16 ಲಕ್ಷ ರೂ. ವೆಚ್ಚದಲ್ಲಿ ಮಹಾನಗರ ತಾಂಡಾದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಕೋಣೆಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರಲ್ಲದೇ 13.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಬೆಣ್ಣೂರ(ಬಿ) ಗ್ರಾಮದ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು.
ಬಂಜಾರ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧ
*****************************************
ಕಲಬುರಗಿ,ಡಿ.27.(ಕ.ವಾ.)-ಬಂಜಾರ ಸಮಾಜದ ಅಭಿವೃದ್ದಿಗೆ ನಮ್ಮ ಸರ್ಕಾರ ಸಂಪೂರ್ಣ ಬದ್ದವಾಗಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಸಮಾಜ ಕಲ್ಯಾಣ ಸಚಿವನಾಗಿದ್ದು ನಿಮ್ಮೆಲ್ಲರ ಸೇವೆ ಮಾಡುವ ಮೂಲಕ ಋಣ ತೀರಿಸುವ ಸುಯೋಗ ಒದಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವÀ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಗುರುವಾರ ಚಿತ್ತಾಪುರ ತಾಲೂಕಿನ ಮಹಾನಗರ ತಾಂಡದಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸರಕಾರಿ ಪ್ರಾಥಮಿಕ ಶಾಲೆಯ ಕೋಣೆಗಳ ಅಡಿಗಲ್ಲು ಸಮಾರಂಭ ನೆರವೇರಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಅಭಿವೃದ್ದಿ ಸಲುವಾಗಿ ಸರಕಾರ ಹಲವಾರು ಯೋಜನೆ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಆದರ್ಶ ಕಾಲನಿ ನಿರ್ಮಾಣಕ್ಕಾಗಿ ರೂ 202 ಕೋಟಿ ರೂ. ಹಣ ಈಗಾಗಲೇ ಬಿಡುಗಡೆ ಮಾಡಿದ್ದು, ಈ ಯೋಜನೆಯಲ್ಲಿ ತಾಂಡಗಳನ್ನು ಅದರ್ಶ ಗ್ರಾಮಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿರುವ 3000 ತಾಂಡಗಳಲ್ಲಿ ಸಂತ ಸೇವಾಲಾಲ್ ಅಧ್ಯಯನ ಕೇಂದ್ರ ನಿರ್ಮಾಣಕ್ಕಾಗಿ ಪ್ರತಿಯೊಂದು ತಾಂಡಕ್ಕೆ ರೂ 25 ಲಕ್ಷ ರೂ. ಬಿಡುಗಡೆ ಮಾಡುತ್ತಿದ್ದೇನೆ. ಇದೆಲ್ಲ ಸಾದ್ಯವಾಗುತ್ತಿರುವುದು ನಿಮ್ಮೆಲ್ಲರ ಆಶೀರ್ವಾದದಿಂದ ಎನ್ನುವುದು ಗಮನಾರ್ಹ ಎಂದು ಹೇಳಿದರು.
ಸರಕಾರ ಹಲವಾರು ಯೋಜನೆಗಳ ಮೂಲಕ ಎಲ್ಲ ವರ್ಗದ ಜನರನ್ನು ಒಂದೇ ಎಂದು ಪರಿಗಣಿಸಿ ಮುಖ್ಯವಾಹಿನಿಗೆ ತರುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ. ಆದರೆ ನೀವೆಲ್ಲರೂ ಈ ಪ್ರಾಮಾಣಿಕತೆಯನ್ನು ಗುರುತಿಸಬೇಕು ಎಂದು ನುಡಿದರು.
ಇತ್ತೀಚಿಗೆ ಜಾರಿಗೆ ತಂದ ಪ್ರಬುದ್ದ ಯೋಜನೆಯ ಕುರಿತು ವಿವರಿಸಿದ ಸಚಿವರು, ದೇಶದಲ್ಲಿಯೇ ಇದೇ ಮೊದಲಬಾರಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದಕ್ಕಾಗಿ ವಿದೇಶಕ್ಕೆ ತೆರಳಲು ತಗುಲುವ ಖರ್ಚನ್ನು ಭರಿಸುವ ಯೋಜನೆಯನ್ನು ಜಾರಿಗೆ ತಂದಿದ್ದೇನೆ. ನೀವೆಲ್ಲ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು. ನಿಮ್ಮೆಲ್ಲರ ಸೇವೆ ಮಾಡಲು ನನಗೆ ಸ್ಪೂರ್ತಿ ನೀಡಬೇಕು ಎಂದು ಕರೆ ನೀಡಿದರು.
ಕಲಬುರಗಿ ಜಿಲ್ಲಾ ಪಂಚಾಯತ ವಿರೋಧ ಪಕ್ಷದ ನಾಯಕ ಶಿವಾನಂದ್ ಪಾಟೀಲ್ ಮಾತನಾಡಿದರು. ವೇದಿಕೆಯ ಮೇಲೆ ಭೀಮಣ್ಣ ಸಾಲಿ, ಜಗನ್ನಾಥರೆಡ್ಡಿ, ರಮೇಶ ಮರಗೋಳ, ಪ್ರಕಾಶ್ ಕಮಕನೂರು, ರವಿ ರಾಠೋಡ, ನಾಮದೇವ ರಾಠೋಡ ಹಾಗೂ ಮತ್ತಿತರಿದ್ದರು.
ಡಿಸೆಂಬರ್ 29ರಂದು ರಾಷ್ಟ್ರಕವಿ ಕುವೆಂಪು-ವಿಶ್ವ ಮಾನವ ದಿನಾಚರಣೆ
************************************************************
ಕಲಬುರಗಿ,ಡಿ.27.(ಕ.ವಾ).-ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನ ಹಾಗೂ ವಿಶ್ವಮಾನವ ದಿನಾಚರಣೆಯ ಅಂಗವಾಗಿ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸುವ ಮೂಲಕ ಶನಿವಾರ ಡಿಸೆಂಬರ್ 29ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.
ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅಧ್ಯಕ್ಷತೆವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಈ ಸಮಾರಂಭದಲ್ಲಿ ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಡಾ|| ಅಜಯಸಿಂಗ್, ಎಂ.ವೈ. ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಬಿ. ಮತ್ತಿಮೂಡ, ಕನೀಜ್ ಫಾತೀಮಾ, ಸುಭಾಷ ಗುತ್ತೇದಾರ್, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಭೋದ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ ಕರ್ಬೀಕರ್ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಕಲಬುರಗಿ ನಿವೃತ್ತ ಪ್ರಾಧ್ಯಾಪಕ ಪ್ರಭು ಖಾನಾಪುರೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಯಾದಗಿರಿಯಲ್ಲಿ 11 ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ
*****************************************************
ಕಲಬುರಗಿ,ಡಿ.27.(ಕ.ವಾ.)-ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿಯಿರುವ 11 ಶೀಘ್ರಲಿಪಿಗಾರರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಈ ಪೈಕಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ (ಸ್ಥಳೀಯ ವೃಂದದವರಿಗೆ) 09 ಹುದ್ದೆಗಳು ಹಾಗೂ ಮೂಲ ವೃಂದದವರಿಗೆ 02 ಹುದ್ದೆಗಳನ್ನು ಮೀಸಲಿಡಲಾಗಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಬೆರಳಚ್ಚು ಮತ್ತು ಶೀಘ್ರಲಿಪಿಗಾರ ಕೋರ್ಸುಗಳಲ್ಲಿ ಪ್ರೌಢ ದರ್ಜೆಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು 2019ರ ಜನವರಿ 17ರ ಸಂಜೆ 5 ಗಂಟೆಯೊಳಗಾಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರವರ ಕಚೇರಿ, ಯಾದಗಿರಿ ಇವರಿಗೆ ಸಲ್ಲಿಸಬೇಕು. ನೇಮಕಾತಿ ಅಧಿಸೂಚನೆಗಾಗಿ ಜಿಲ್ಲಾ ನ್ಯಾಯಾಲಯದhttps://districts.ecourts.gov.in/i…/karnataka/yadgir/recruit ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಾರ್ಯಾಲಯ, ಯಾದಗಿರಿ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಡಿಸೆಂಬರ್ 28ರಂದು
*******************
ರಾಷ್ಟ್ರೀಯ ಗ್ರಾಹಕರ ದಿನಾಚರಣೆ-ಅನ್ನಭಾಗ್ಯ ಜಾಗೃತಿ ಸಮಾವೇಶ ಉದ್ಘಾಟನೆ
********************************************************************
ಕಲಬುರಗಿ,ಡಿ.27.(ಕ.ವಾ.)-“ಗ್ರಾಹಕ ವ್ಯಾಜ್ಯಗಳನ್ನು ಅವಧಿಯೊಳಗೆ ವಿಲೇವಾರಿಗೊಳಿಸುವುದು” ಎಂಬ ಘೋಷ ವ್ಯಾಕ್ಯದೊಂದಿಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2018 ಹಾಗೂ “ಗ್ರಾಹಕ ಜಾಗೃತಿ ಪ್ರಾತ್ಯಕ್ಷಿಕೆಗಳು ಹಾಗೂ ಅನ್ನಭಾಗ್ಯ ಜಾಗೃತಿ ಸಮಾವೇಶವನ್ನು ಇದೇ ಡಿಸೆಂಬರ್ 28 ರಂದು ಬೆಳಗಿನ 10 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿಯ ಜಿಲ್ಲಾ ಕೋರ್ಟ್ ರಸ್ತೆಯಲ್ಲಿರುವ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್‍ನಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕ ಡಾ ಕೆ. ರಾಮೇಶ್ವರಪ್ಪ ಅವರು ತಿಳಿಸಿದ್ದಾರೆ.
ಡಿಸೆಂಬರ್ 28ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2018 ಸಮಾರಂಭವನ್ನು ಉದ್ಘಾಟಿಸುವರು. ನ್ಯಾಯವಾದಿಗಳಾದ ವೈಜನಾಥ ಝಳಕಿ ಅವರು ವಿಶೇಷ ಉಪನ್ಯಾಸ ನೀಡುವರು. ಅದೇ ರೀತಿ ಕಲಬುರಗಿ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ 983 ನ್ಯಾಯಬೆಲೆ ಅಂಗಡಿಯ ಮಾಲೀಕರು, ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಸರ್ಕಾರದ ನೀತಿ ನಿಯಮಗಳ ಬಗ್ಗೆ ವಿವರಿಸಲು ಮತ್ತು ತರಬೇತಿ ನೀಡಲು ಅನ್ನಭಾಗ್ಯ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಅಂದು ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿಗಳು ಅನ್ಯಭಾಗ್ಯ ಜಾಗೃತಿ ಸಮಾವೇಶವನ್ನು ಉದ್ಘಾಟಿಸುವರು.
ಗ್ರಾಹಕ ಜಾಗೃತಿ ಪ್ರಾತ್ಯಕ್ಷಿಕೆಗಳು: ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸಾಮಾನ್ಯ ಗ್ರಾಹಕರಗೆ ತಾವು ಖರೀದಿಸುವ ಸರಕು ಸೇವೆಗಳಲ್ಲಿ ಆಗುವ ಮೋಸ ವಂಚನೆಗಳು ಮತ್ತು ಅನ್ಯಾಯಗಳ ಬಗ್ಗೆ ಮಾಹಿತಿ ನೀಡಲು ಹಾಗೂ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾಮಾನ್ಯ ಗ್ರಾಹಕನಿಗೆ ನೀಡಬೇಕಾದ ಮಾಹಿತಿಗಳ ಬಗ್ಗೆ ವಿವರಿಸಲು ಸರಕಾರದ ವಿವಿಧ ಇಲಾಖೆಗಳು ಗ್ರಾಹಕ ಜಾಗೃತಿ ವಸ್ತು ಪದರ್ಶನ ಮತ್ತು ಪ್ರಾತ್ಯಕ್ಷಿಕೆ ಏರ್ಪಡಿಸಿವೆ.
ಆಹಾರ, ಶಿಕ್ಷಣ, ಕೃಷಿ, ತೋಟಗಾರಿಗೆ, ಸಾರಿಗೆ, ಆರೋಗ್ಯ, ಕಾರ್ಮಿಕ, ಔಷಧ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಜೆಸ್ಕಾಂ, ತೂಕ ಮತ್ತು ಅಳತೆ ಇಲಾಖೆ,. ಐ.ಓ.ಸಿ., ಬಿ.ಪಿ.ಸಿ., ಹೆಚ್.ಪಿ.ಸಿ., ಮುಂತಾದ ಇಲಾಖೆಗಳು ಗ್ರಾಹಕರ ಹಕ್ಕುಗಳು ಮತ್ತು ಜಾಗೃತಿಗಳ ಬಗ್ಗೆ ವಸ್ತು ಪದರ್ಶನ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಅವರು ತಿಳಿಸಿದ್ದಾರೆ.
ಡಿಸೆಂಬರ್ 28ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*************************************************
ಕಲಬುರಗಿ,ಡಿ.27.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ಕೈಗೊಳ್ಳುವ ಪ್ರಯುಕ್ತ 11ಕೆ.ವಿ. ಶರಣನಗರ ಫೀಡರ್ ವ್ಯಾಪ್ತಿಯಲ್ಲಿ ಡಿಸೆಂಬರ್ 28 ರಂದು (ಶುಕ್ರವಾರ) ಬೆಳಗಿನ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸದರಿ ಕೇಂದ್ರದ ಮೇಲೆ ಬರುವ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11 ಕೆ.ವಿ. ಶರಣ ನಗರ ಫೀಡರ್: ಸುಂದರ ನಗರ, ಬಾಪೂ ನಗರ, ಬಾಬ ಹೌಸ್, ಬಿಗ್ ಬಜಾರ, ಅಥರ್ ಕಂಪೌಂಡ್, ಎಸ್.ಟಿ.ಬಿ.ಟಿ. ಆಫೀಸ್, ರುಕುಮ್ ಕಾಲೇಜ್, ಗಾಜೀಪುರ, ವಿದ್ಯಾನಗರ, ಜಿಲ್ಲಾ ಪಂಚಾಯಿತಿ ಸಭಾಂಗಣ, ತಿರಂದಾಸ್, ಭೀಮ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.










ಹೀಗಾಗಿ ಲೇಖನಗಳು News and Photo Date: 27-12-2018

ಎಲ್ಲಾ ಲೇಖನಗಳು ಆಗಿದೆ News and Photo Date: 27-12-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 27-12-2018 ಲಿಂಕ್ ವಿಳಾಸ https://dekalungi.blogspot.com/2018/12/news-and-photo-date-27-12-2018.html

Subscribe to receive free email updates:

0 Response to "News and Photo Date: 27-12-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ