News and Photos Date: 07--12--2018

News and Photos Date: 07--12--2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photos Date: 07--12--2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photos Date: 07--12--2018
ಲಿಂಕ್ : News and Photos Date: 07--12--2018

ಓದಿ


News and Photos Date: 07--12--2018

ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಿಪಿಸಿ ರಚಿಸಿ:
***************************************
ಮಕ್ಕಳ ಸಂರಕ್ಷಣೆಗೆ ಗ್ರಾಮ ಸಭೆ ನಡೆಸಿ
************************************
ಕಲಬುರಗಿ,ಡಿ.07.(ಕ.ವಾ.)-ಪಂಚಾಯತ್ ರಾಜ್ ಅಧಿನಿಯಮ-2018 ಕಾಯ್ದೆಯನ್ವಯ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚಿಸಿ ಗ್ರಾಮ ಸಭೆ ನಡೆಸಬೇಕು. ಇದರಲ್ಲಿ ಶೇ.60 ಮಕ್ಕಳ ಕಳ್ಳಸಾಗಣೆ, ಬಾಲ್ಯ ವಿವಾಹ, ಬಾಲ ಕಾರ್ಮಿಕದಂತಹ ವಿಷಯಗಳು ಹಾಗೂ ಶೇ.40 ಮಕ್ಕಳ ಸಂರಕ್ಷಣೆಗೆ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ವೈ. ಮರಿಸ್ವಾಮಿ ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯುನಿಸೆಫ್ ಹಾಗೂ ಡಾನ್ ಬೋಸ್ಕೋ ಸಂಸ್ಥೆ ಕಲಬುರಗಿ ಇವುಗಳ ಸಂಯುಕ್ತಾಶ್ರದಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಮಗಣದಲ್ಲಿ ಶುಕ್ರವಾರ ಆಯೋಜಿಸಿದ “ಮಕ್ಕಳ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಕುರಿತು” ಮಾಹಿತಿ ಮತ್ತು ಕ್ರಿಯಾ ಯೋಜನೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳ ಸಹಕಾರ ಪಡೆದು ಗ್ರಾಮ ಸಭೆಗಳು ನಡೆಸಿ ಸ್ಥಳೀಯ ಮಟ್ಟದಲ್ಲಿಯೆ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪರಿಹಾರ ಕಲ್ಪಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ ನೀಡಿದಲ್ಲಿ ಉತ್ಕøಷ್ಠ ಮಟ್ಟದ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಭಾರತ ಸೃಷ್ಟಿಸಬಹುದಾಗಿದೆ. ಪ್ರಸ್ತುತ ಭಾರತದಲ್ಲಿ ಶೇ.40ರಷ್ಟು ಜನಸಂಖ್ಯೆ 18 ವರ್ಷ ಒಳಗಿನವರಾಗಿದ್ದು, ಈ ರೀತಿ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ. ಬಹುತೇಕ ಯೂರೋಪ್ ದೇಶಗಳಲ್ಲಿ ಹೆಚ್ಚಿನ ವಯಸ್ಸಿನ ಜನರಿರುವ ಕಾರಣ ಆ ದೇಶಗಳನ್ನು ವಯಸ್ಸಾದ ರಾಷ್ಟ್ರಗಳೆಂದು ಕರೆದರೆ, ಭಾರತವನ್ನು ಯುವ ರಾಷ್ಟø ಎಂದು ಸಂಬೋಧಿಸಲಾಗುತ್ತಿದೆ ಎಂದರು.
ಮಕ್ಕಳ ಸಂರಕ್ಷಣೆಗೆಂದೆ ಜಿಲ್ಲಾ ಹಂತದಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಎನ್.ಸಿ.ಎಲ್.ಪಿ., ಸ್ಥಳೀಯ ಸಂಘ ಸೇವಾ ಸಂಸ್ಥೆಗಳು ಮಕ್ಕಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿವೆ. ಹೀಗಿದ್ದಾಗಿಯೂ ಮಕ್ಕಳ ಮೇಲೆ ಅತ್ಯಾಚಾರ, ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಂತಹ ಅನಿಷ್ಠ ಪದ್ಧತಿಗಳು ಬೆಳಕಿಗೆ ಬರುತ್ತಿರುವುದು ದುರಾದೃಷ್ಠ. ಕಲಬುರಗಿ ಜಿಲ್ಲೆಯಲ್ಲಿ ಕಳೆದ 3-4 ವರ್ಷದಲ್ಲಿ ಗಣನೀಯವಾಗಿ ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಗಟ್ಟಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧ್ಯಕ್ಷರು, ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಇನ್ನು ಬಹಳಷ್ಟು ಸುಧಾರಣೆಯಾಗಬೇಕಿದ್ದು, ಪರಸ್ಪರ ಸಹಕಾರದಿಂದ ಇದನ್ನು ಕಾರ್ಯಾಸಾಧು ಮಾಡಬಹುದಾಗಿದೆ ಎಂದರು.
ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಮಕ್ಕಳ ಅಪೌಷ್ಠಿಕತೆ ಇರುವುದನ್ನು ಅಲ್ಲೆಗಳೆಯುವಂತಿಲ್ಲ. ಇದರ ನಿವಾರಣೆಗೆ ನ್ಯಾಯಮೂರ್ತಿ ಎನ್.ಕೆ.ಪಾಟೀಲ ನೇತೃತ್ವದ ಸಮಿತಿ ಅನೇಕ ಶಿಫಾರಸ್ಸು ಮಾಡಿದೆ. ಆದರೆ ಸಮರ್ಪಕ ಅನುಷ್ಠಾನವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ದಕ್ಷಿಣ ಭಾರತದಲ್ಲಿಯೆ ಪ್ರತಿ ಜಿಲ್ಲೆಯಲ್ಲಿ ಎನ್.ಆರ್.ಸಿ./ಎಂ.ಎನ್.ಆರ್.ಸಿ. ಕೇಂದ್ರ ಹೊಂದಿರುವ ರಾಜ್ಯ ನಮ್ಮದಾಗಿದೆ. ಈ ಕೇಂದ್ರಗಳಲ್ಲಿ ಮಕ್ಕಳು ಮತ್ತು ತಾಯಂದಿರಿಗೆ ಉತ್ತಮ ಚಿಕಿತ್ಸೆ, ಆಹಾರ ನೀಡಲಾಗುತ್ತದೆ ಎಂದರು.
ಮಕ್ಕಳ ಆರೈಕೆ ಕೇಂದ್ರಕ್ಕೆ ನಿಯಮಿತ ಭೇಟಿ ಕೊಡಿ:- ಕಲಬುರಗಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳ ಘನತೆಗೆ ಧಕ್ಕೆಯಾಗುತ್ತಿರುವ ಬಗ್ಗೆ ಆಯೋಗದ ಗಮನಕ್ಕೆ ಬಂದಿದ್ದು, ಸಂಬಂಧಿಸಿದ ಅಧಿಕಾರಿಗಳು ಆಗಾಗ ಇಂತಹ ಆರೈಕೆ ಕೇಂದ್ರಗಳಿಗೆ ಭೇಟಿ ನೀಡಬೇಕು ಹಾಗೂ ತಪ್ಪಿತಸ್ಥ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಇಟ್ಟಿಗೆ ತಯ್ಯಾರಿಕೆ ವೃತ್ತಿಯಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಂಡ ಮಾಲೀಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲೆಮಾರಿ ಮಕ್ಕಳು ಭಿಕ್ಷಾಟನೆ, ಅಪಾಯಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವತ್ತ ಪರಿಣಾಮಕಾರಿ ಚಿಂತನೆ ಅಗತ್ಯವಿದೆ. ಇದಕ್ಕಾಗಿ ಜನಪ್ರತಿನಿಧಿಗಳ ಸಹಕಾರ ತುಂಬಾ ಅವಶ್ಯಕ ಎಂದರು.
ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಮಾತನಾಡಿ ಹೈ.ಕ.ಭಾಗವು ಶಿಕ್ಷಣ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಹಿಂದುಳಿದಿರುವುದು ನಿಜ. ಆದರೆ ಇದೀಗ 371ಜೆ ಜಾರಿಯಾದ ನಂತರ ಅಭಿವೃದ್ಧಿ ದಾಪುಗಾಲು ಇಡುತ್ತಿದೆ. 2017-18ನೇ ಸಾಲಿನ ಹೈ.ಕ.ಮಂಡಳಿ ಅನುದಾನ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರಸಕ್ತ 2018-19ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಜಿಲ್ಲೆಯ ಎಲ್ಲಾ ಪ್ರೌಢ ಶಾಲೆಗಳಲ್ಲಿ ಕೋಣೆ, ಹೆಚ್ಚುವರಿ ಕೋಣೆ, ನೀರು, ಶೌಚಾಲಯ, ಸುತ್ತು ಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇನ್ನು ಜಿಲ್ಲಾ ಖನಿಜ ನಿಧಿ ಯೋಜನೆಯಡಿ ಕಳೆದ ವರ್ಷ 400ಕ್ಕಿಂತ ಹೆಚ್ಚು ಅಂಗನವಾಡಿಗಳಲ್ಲಿ ಶೌಚಾಲಯ ನಿರ್ಮಾಣ, ನೀರು, ಮಕ್ಕಳ ಆಟದ ಉಪಕರಣಗಳನ್ನು ಪೂರೈಸಲಾಗಿದೆ ಎಂದ ಅವರು ಅನಾಥ ಮಕ್ಕಳನ್ನು ಸಂರಕ್ಷಣೆಗೆ “ಮಮತೆಯ ತೊಟ್ಟಿಲು” ಎಂಬ ನೂತನ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಮಾತನಾಡಿ ಸಮಾಜದಲ್ಲಿ ಸೌಲಭ್ಯ ವಂಚಿತ ಮಕ್ಕಳು ಒಂದೆಡೆಯಾದರೆ ಎಲ್ಲ ಸೌಲಭ್ಯ ಪಡೆದುಕೊಂಡು ದುಶ್ಚಟಕ್ಕೆ ಬಲಿಯಾಗುತ್ತಿರುವ ಮತ್ತೊಂದು ಮಕ್ಕಳ ವರ್ಗವಿದೆ. ಇತ್ತೀಚೆಗೆ ಮಕ್ಕಳಲ್ಲಿ ಆತ್ಮಸ್ರ್ಥೈ ತುಂಬುವಲ್ಲಿ ಪಾಲಕರು ಮತ್ತು ಸಮಾಜ ವಿಫಲವಾಗಿದ್ದು ಇದರ ಬಗ್ಗೆ ಚಿಂತನೆ ಮಾಡಬೇಕಾದ ಅವಶ್ಯಕತೆ ಇದೆ ಎಂದ ಅವರು ನಮ್ಮ ಮಕ್ಕಳಂತೆ ಇತರೆ ಮಕ್ಕಳನ್ನು ಸಂರಕ್ಷಿಸುವ ಜವಾಬ್ದಾರಿ ಸಮಾಜದ ಪ್ರತಿ ಪ್ರಜೆಯ ಮೇಲಿದೆ ಎಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಕೊಳ್ಳಾ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಆಯೋಗದ ಸದಸ್ಯ ಚಂದ್ರಶೇಖರ ಅಲ್ಲಿಪೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಸಿ. ರೀನಾ ರಶ್ಮಿ ಡಿಸೋಜ, ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕ ಫಾದರ್ ಸಜೀ ಜಾರ್ಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭೀಮರಾಯ ಕಣ್ಣೂರ, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ನೂರಾರು ಸಂಖ್ಯೆಯ ಪ್ರತಿನಿಧಿಗಳು ಭಾಗವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಅಧಿಕಾರಿ ಭರತೇಶ ಶೀಲವಂತ ಸ್ವಾಗತಿಸಿದರು. ಆಶಾ ಹೆಗಡೆ ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕೊಪ್ಪಳ ಯೂನಿಸೆಫ್ ಜಿಲ್ಲಾ ಮಕ್ಕಳ ಸಂರಕ್ಷಣಾ ಯೋಜನೆಯ ಕಾರ್ಯಕ್ರಮ ಸಂಯೋಜಕ ರಾಘವೇಂದ್ರ ಭಟ್ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ “ಮಕ್ಕಳಿಗಾಗಿ ಮಕ್ಕಳ ಹಕ್ಕುಗಳು” ಪಠ್ಯ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಡಿಸೆಂಬರ್ 8-9ರಂದು ಕಲಬುರಗಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
***************************************************************
ಕಲಬುರಗಿ,ಡಿ.07.(ಕ.ವಾ.)-ಕಲಬುರಗಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಡಿಸೆಂಬರ್ 8 ಹಾಗೂ 9 ರಂದು ಕಲಬುರಗಿ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಕನ್ನಡ ಭವನದ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಡಿಸೆಂಬರ್ 8ರಂದು ಬೆಳಿಗ್ಗೆ 8.30 ಗಂಟೆಗೆ ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ಸಮಾಜ ಕಲ್ಯಾಣ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರಪ್ಪ ಸಿಂಪಿ ಪರಿಷತ್ ಧ್ವಜಾರೋಹಣ ನೆರವೇರಿಸುವರು. ನಂತರ ಬೆಳಿಗ್ಗೆ 9 ಗಂಟೆಗೆ ನಗರೇಶ್ವರ ಬಾಲಭವನದಿಂದ ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ ಸಮ್ಮೇಳನದ ಮೆರವಣಿಗೆ ಉದ್ಘಾಟಿಸುವರು. ಕಲಬುರಗಿ ಮಹಾನಗರಪಾಲಿಕೆ ಮಹಾಪೌರ ಮಲ್ಲಮ್ಮ ಎಸ್. ವಳಕೇರಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಮೆರವಣಿಗೆಯು ನಗರೇಶ್ವರ ಬಾಲ ಭವನ ನೆಹರುಗಂಜ, ಕಿರಾಣಾ ಬಜಾರ, ಸುಪರ ಮಾರ್ಕೇಟ್, ಜಗತ್ ವೃತ್ತ ಮಾರ್ಗವಾಗಿ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಕನ್ನಡ ಭವನದ ಬಾಪುಗೌಡ ದರ್ಶನಾಪುರ ರಂಗಮಂದಿರಕ್ಕೆ ಆಗಮಿಸಿ ಕೊನೆಗೊಳ್ಳಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಕನ್ನಡ ಭವನದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಸಮಾರಂಭವನ್ನು ಉದ್ಘಾಟಿಸುವರು. ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಚಿವ ರಾಜಶೇಖರ ಪಾಟೀಲ ಅವರು ಮಳಿಗೆ ಉದ್ಘಾಟಿಸುವರು. ಶಾಸಕರುಗಳಾದ ದತ್ತಾತ್ರೇಯ ಪಾಟೀಲ ರೇವೂರ, ಕನೀಜ ಫಾತೀಮಾ, ಡಾ. ಉಮೇಶ ಜಾಧವ, ಎಂ.ವೈ. ಪಾಟೀಲ, ಸುಭಾಷ ಗುತ್ತೇದಾರ, ಡಾ. ಅಜಯಸಿಂಗ, ಬಸವರಾಜ ಮತ್ತಿಮೂಡ ಹಾಗೂ ರಾಜಕುಮಾರ ಪಾಟೀಲ ತೇಲ್ಕೂರ ಅತಿಥಿಗಳಾಗಿ ಪಾಲ್ಗೊಳ್ಳುವರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷರು ಹಾಗೂ ಹಿರಿಯ ಸಾಹಿತಿ ಡಾ. ವೀರಣ್ಣಾ ದಂಡೆ ಹಾಗೂ ಹಿರಿಯ ಸಾಹಿತಿ ಡಾ. ನಾಗಾಬಾಯಿ ಬುಳ್ಳಾ ಸಮ್ಮೇಳನಾಧ್ಯಕ್ಷರಾಗಿ ಪಾಲ್ಗೊಳ್ಳುವರು.
ಡಿ. 10 ರಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕಕ್ಷರ ನೇಮಕಾತಿಗೆ ಕೌನ್ಸೆಲಿಂಗ್
*********************************************************************
ಕಲಬುರಗಿ,ಡಿ.07.(ಕ.ವಾ.)-2017-18ನೆ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8ನೇ ತರಗತಿ) ವೃಂದದ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ 1:1ರ ಮುಖ್ಯ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳ ಆಯ್ಕೆಗಾಗಿ ಇದೇ ಡಿಸೆಂಬರ್ 10ರಿಂದ 14ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಬೀದರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಎಸ್.ಎಸ್.ಎ. ಸಭಾಂಗಣದಲ್ಲಿ ಮೂಲ ದಾಖಲೆಗಳ ಪರಿಶೀಲನೆ ಹಾಗೂ ಕೌನ್ಸೆಲಿಂಗ್ ಏರ್ಪಡಿಸಲಾಗಿದೆ ಎಂದು ಬೀದರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಸಮಾಜ ಪಾಠಗಳು (ಕನ್ನಡ, ಮರಾಠಿ ಮತ್ತು ಉರ್ದು) ಮಾಧ್ಯಮದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 2018ರ ಡಿಸೆಂಬರ್ 10ರಂದು ಮೂಲ ದಾಖಲೆ ಪರಿಶೀಲನೆ ಮತ್ತು ಡಿಸೆಂಬರ್ 11ರಂದು ಕೌನ್ಸೆಲಿಂಗ್ ನಡೆಯಲಿದೆ. ಆಂಗ್ಲ ಭಾಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಡಿಸೆಂಬರ್ 12ರಂದು ಮೂಲ ದಾಖಲೆ ಪರಿಶೀಲನೆ ಮತ್ತು ಡಿಸೆಂಬರ್ 13ರಂದು ಕೌನ್ಸೆಲಿಂಗ್ ನಡೆಯಲಿದೆ. ವಿಜ್ಞಾನ ಮತ್ತು ಗಣಿತ (ಕನ್ನಡ, ಮರಾಠಿ ಮತ್ತು ಉರ್ದು ಮಾಧ್ಯಮದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಡಿಸೆಂಬರ್ 14ರಂದು ಮೂಲ ದಾಖಲೆ ಪರಿಶೀಲನೆ ಮತ್ತು ಕೌನ್ಸೆಲಿಂಗ್ ನಡೆಯಲಿದೆ.
ಸಂಬಂಧಪಟ್ಟ ಅಭ್ಯರ್ಥಿಗಳು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸಿದ ಎಲ್ಲಾ ಮೂಲ ದಾಖಲೆಗಳೊಂದಿಗೆ ಎರಡು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳು ಹಾಗೂ 50 ರೂ. ಖಾಲಿ ಛಾಪಾ ಕಾಗದ ಉಪನಿರ್ದೇಶಕರ ಹೆಸರಿನಲ್ಲಿ ಪಡೆದು ತಪ್ಪದೆ ಕೌನ್ಸೆಲಿಂಗ್‍ನಲ್ಲಿ ಹಾಜರಾಗಬೇಕು. ತಪ್ಪಿದಲ್ಲಿ ಮುಂದಿನ ಆಗು ಹೋಗುಗಳಿಗೆ ಅಭ್ಯರ್ಥಿಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ 10ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*************************************************
ಕಲಬುರಗಿ,ಡಿ.07.(ಕ.ವಾ.)-ಜೆಸ್ಕಾಂನ ಕಲಬುರಗಿ ನಗರ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ವ್ಯಾಪ್ತಿಯಲ್ಲಿ ಬರುವ 11ಕೆ.ವಿ. ಸಿನಿಮಾ, ತಾಜ್‍ನಗರ ಹಾಗೂ ವಿಠ್ಠಲನಗರ ಫೀಡರುಗಳ ವ್ಯಾಪ್ತಿಯಲ್ಲಿ ಸೋಮವಾರ ಡಿಸೆಂಬರ್ 10ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಿರ್ವಹಣಾ ಕಾರ್ಯಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಸದರಿ ಫೀಡರ್‍ಗಳ ವ್ಯಾಪ್ತಿಯ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ಕೆ.ವಿ. ಸಿನಿಮಾ ಫೀಡರ್: ಸುಪರ ಮಾರ್ಕೇಟ್, ಶಹಾ ಬಜಾರ ಜಿ.ಡಿ.ಎ., ಕಟಗರಪುರ, ಪ್ರಕಾಶ ಟಾಕೀಸ್, ಲೋಹರಗಲ್ಲಿ, ಐಯ್ಯರವಾಡಿ, ಸಿಟಿ ಬಸ್‍ನಿಲ್ದಾಣ, ಬಂಬೂ ಬeóÁರ್, ಮಹಾಲಕ್ಷ್ಮೀ ಲೇಔಟ್, ಕಿರಾಣ ಬeóÁರ್, ಮಾರವಾಡಿ ಗಲ್ಲಿ, ಚೌಕ್ ಪೊಲೀಸ್ ಸ್ಟೇಷನ್, ಫೋರ್ಟ್ ರಸ್ತೆ, ಬಾಂಡಾ ಬeóÁರ್, ಸರಸ್ವತಿ ಗೋದಾಮು, ಪುಟಾಣಿ ಗಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ. ತಾಜ್ ನಗರ ಫೀಡರ್: ಚನ್ನವೀರ ನಗರ, ರಾಜೀವಗಾಂಧಿ ನಗರ, ಶಹಾ ಬಜಾರ ತಾಂಡಾ, ಶಿವಶಕ್ತಿ ನಗರ, ತಾಜನಗರ, ನಿಜಾಮಪುರ ಮತ್ತು ಹಳೆ ಫೀಲ್ಟರಬೇಡ್, ಕಮಲ ನಗರ, ಕೆ.ಎಸ್.ಆರ್.ಪಿ. ಕ್ವಾರ್ಟರ್ಸ್, ಸುವರ್ಣ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ವಿಠ್ಠಲ ನಗರ ಫೀಡರ್: ಡಿ.ಡಿ.ಪಿ.ಐ.ಕಚೇರಿ, ,ವಿಜಯ-ವಿದ್ಯಾಲಯ ಕಂಪೌಂಡ್, ಐವಾನ್‍ಶಾಹಿ ಅಥಿತಿಗೃಹ, ಗುಲ್ಲಾಬೌಡಿ, ಲಾಹೋಟಿ ಪೆಟ್ರೋಲ್‍ಪಂಪ್, ಕೆ.ಬಿ.ಎನ್.ಆಸ್ಪತ್ರೆ, ಖೂಬಾ ಪ್ಲಾಟ್, ವಿಠ್ಠಲನಗರ, ಆನಂದನಗರ, ವಿವೇಕಾನಂದ ನಗರ, ರಾಮನಗರ, ಇಂದಿರಾ ನಗರ, ವಿದ್ಯಾನಗರ, ಬಲಘಟ ಕಂಪೌಂಡ, ಮೇಹತಾ ಕಂಪೌಂಡ್, ಮಿನಿ ವಿಧಾನಸೌಧ, ಜಿಲ್ಲಾ ನ್ಯಾಯಲಯ ಮತ್ತು ಜೆಸ್ಕಾಂ ಕಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಅದೇ ರೀತಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ 33/11ಕೆ.ವಿ. ಹಡಗಿಲ್ ಹಾರೂತಿ ಕೇಂದ್ರದಿಂದ ಹೈಕೋರ್ಟ 33/11 ಕೆ.ವಿ. ಜಿಆಯ್ ಸಬ್‍ಸ್ಟೇಶನ್ ಲೈನ್ ಕಾರ್ಯಕೈಗೊಂಡಿರುವ ಪ್ರಯುಕ್ತ ಸೋಮವಾರ ಡಿಸೆಂಬರ್ 10ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸದರಿ ಉಪ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಫೀಡರ್ ವ್ಯಾಪ್ತಿಯ ಗ್ರಾಮ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
33/11ಕೆ.ವಿ. ಹಡಗಿಲ್ ಹಾರೂತಿ ವಿತರಣಾ ಕೇಂದ್ರ: ಎಫ್-5 ಶರಣ ಶಿರಸಗಿ ಎನ್‍ಜೆವಾಯ್ ಹಾಗೂ ಎಫ್-6 ಬಬಲಾದ ಐಪಿ.
“ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ”
****************************************
ಯೋಜನೆಯ ತರಬೇತಿ ಕಾರ್ಯಗಾರ ಉದ್ಘಾಟನೆ
*******************************************
ಕಲಬುರಗಿ,ಡಿ.07.(ಕ.ವಾ.)-ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಕಾರ್ಯಕಾರಿ ನಿರ್ದೇಶಕರ ಆದೇಶದ ಮೇರೆಗೆ ಗುರುವಾರ ಕಲಬುಗಿಯ ಬಸವೇಶ್ವರ ಬೋಧಕ ಮತ್ತು ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಯಾದಗಿರ, ಬೀದರ ಮತ್ತು ಕಲಬುರಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಿಗೆ “ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ” ಯೋಜನೆಯ ಕುರಿತು ತರಬೇತಿ ಕಾರ್ಯಗಾರ ಏರ್ಪಡಿಸಲಾಗಿತ್ತು.
ಕಾರ್ಯಾಗಾರದಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಮೈಸೂರು ವಿಭಾಗದ ಡಾ.ಪ್ರಸಾದ ಹಾಗೂ ಪ್ರಚಾರ ಮತ್ತು ಮಾಹಿತಿ ವಿಭಾಗದ ಸಂಯೋಜಕ ಪ್ರವೀಣ ಅವರು ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಕುರಿತು ಸವಿಸ್ತಾರ ಮಾಹಿತಿ ನೀಡಿದರು.
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಾಧವರಾವ ಪಾಟೀಲ್, ಜಿಮ್ಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ, ಸ್ಥಾನೀಯ ವೈದ್ಯಾಧಿಕಾರಿಗಳಾದ ಡಾ.ರಾಜಶೇಖರ ಮಾಲಿ, ಜಿಲ್ಲಾ ಶಸ್ತ್ರಜ್ಞ ಡಾ.ಶಿವಾನಂದ ಸುರಗಿಹಾಳಿ, ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶರಣಗೌಡ ಪಾಟೀಲ್, ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥ ಡಾ.ಬಾಬುರಾವ ಬುಳ್ಳಾ, ಸ್ಥಳೀಯ ಮತ್ತು ಇತರೆ ಜಿಲ್ಲೆಗಳ ಖಾಸಗಿ ಆಸ್ಪತ್ರೆಗಳ ವೈದ್ಯರು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಸಚಿವರ ಪ್ರವಾಸ
*******************************
ಕಲಬುರಗಿ,ಡಿ.07.(ಕ.ವಾ.)-ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಹೈದ್ರಾಬಾದ್‍ದಿಂದ ರಸ್ತೆ ಮೂಲಕ ಶನಿವಾರ ಡಿಸೆಂಬರ್ 8ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಗೆ ಆಗಮಿಸಿ ಕಲಬುರಗಿ ಜಿಲ್ಲೆಯ 17ನೇ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11 ಗಂಟೆಗೆ ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ಸಾಲ ಮನ್ನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಯುವಕರು ಸೇನಾಪಡೆಗೆ ಭರ್ತಿಯಾಗಲು ಜಾಗೃತಿ ಮೂಡಿಸಲು ಸಲಹೆ
*************************************************************
ಕಲಬುರಗಿ,ಡಿ.07.(ಕ.ವಾ.)-ಕಲಬುರಗಿ ಜಿಲ್ಲೆಯ ಯುವಕರಿಗೆ ಸೇನಾಪಡೆಯಲ್ಲಿ ಭರ್ತಿಯಾಗುವವರಿಗೆ ಸರ್ಕಾರದಿಂದ ದೊರೆಯುವ ಸವಲತ್ತು ಮತ್ತು ಸೌಲಭ್ಯಗಳ ಕುರಿತು ತಿಳುವಳಿಕೆ ನೀಡಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸೇನಾಪಡೆಗೆ ಭರ್ತಿಯಾಗುವ ಹಾಗೆ ಜಾಗೃತಿ ಮೂಡಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಏರ್ಪಡಿಸಲಾಗಿದ್ದ ಸಶಸ್ತ್ರ ಮೀಸಲು ಪಡೆ ಧ್ವಜ ದಿನಾಚರಣೆಯಲ್ಲಿ ಧ್ವಜ ಬಿಡುಗಡೆಗೊಳಿಸಿ ಮಾತನಾಡಿ, ಸೈನಿಕ ಕಲ್ಯಾಣ ಅಥವಾ ಮಾಜಿ ಸೈನಿಕರ ಸಂಘದ ವತಿಯಿಂದ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸೇನೆಯಲ್ಲಿ ಭರ್ತಿಯಾಗಲು ಬೇಕಾಗುವ ಸಾಮಥ್ರ್ಯಗಳ ಬಗ್ಗೆ ಹಾಗೂ ಸೇನಾಪಡೆಯಲ್ಲಿ ಭರ್ತಿಯಾದರೆ ಸಿಗುವ ಸವಲತ್ತುಗಳ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಹೇಳಿದರು.
ಸಶಸ್ತ್ರ ಮೀಸಲು ಪಡೆಯಲ್ಲಿ ಕೆಲಸ ನಿರ್ವಹಿಸುವುದು ಗೌರವದ ಹಾಗೂ ಹೆಮ್ಮೆಯ ವಿಷಯವಾಗಿದೆ. ಸರ್ಕಾರವು ಸೈನಿಕರಿಗೆ ಪ್ರಥಮಾದ್ಯತೆ ನೀಡುವ ಮೂಲಕ ಎಲ್ಲ ಸವಲತ್ತುಗಳನ್ನು ಒದಗಿಸುತ್ತಿದೆ. ಕಲಬುರಗಿ ಜಿಲ್ಲೆಯ ಮಾಜಿ ಸೈನಿಕರು ತಮ್ಮ ತೊಂದರೆಗಳನ್ನು ಲಿಖಿತ ರೂಪದಲ್ಲಿ ತಿಳಿಸಿದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು. ಸಾರ್ವಜನಿಕರು ಸೈನಿಕರ ಕಲ್ಯಾಣ ನಿಧಿಗೆ ಆರ್ಥಿಕವಾಗಿ ಸಹಾಯ ಮಾಡಿದ್ದಲ್ಲಿ ದೇಶದ ಸೈನಿಕರನ್ನು ಪ್ರೋತ್ಸಾಹಿಸಿದಂತಾಗುತ್ತದೆ ಹಾಗೂ ಸೈನಿಕರಿಗೆ, ಮಾಜಿ ಸೈನಿಕರಿಗೆ ಹೆಚ್ಚಿನ ಸೌಲಭ್ಯ ದೊರಕಿಸಲು ಅನುಕೂಲವಾಗುವುದು ಎಂದರು.
ಸೈನಿಕರು ತುಂಬಾ ಸಂಧೀಗ್ದ ಪರಿಸ್ಥಿತಿಗಳಲ್ಲಿ ಕಾರ್ಯನಿರ್ವಹಿಸುತ್ತಾರೆ. ಗಡಿಯಲ್ಲಿ ಯಾವುದೇ ಕ್ಷಣ ಏನೇ ಸಂಭವಿಸಿದರೂ ಅದನ್ನು ನಿಭಾಯಿಸುವ ಶಕ್ತಿ ಹಾಗೂ ಮನೋಬಲ ಹೊಂದಿರುತ್ತಾರೆ. ಜವಾನರು ಗಡಿ ಪ್ರದೇಶದಲ್ಲಿ ಯಾವುದೇ ಸೌಲಭ್ಯಗಳಿಲ್ಲದೇ ನಿರ್ಜನ ಪ್ರದೇಶಗಳಲ್ಲಿ, ಮರುಭೂಮಿಯಲ್ಲಿ, ಹಿಮದಲ್ಲಿ ಹಾಗೂ ದಟ್ಟ ಅರಣ್ಯ ಪ್ರದೇಶದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಸೈನಿಕರು ದೇಶದ ರಕ್ಷಣೆಗಾಗಿ ತಮ್ಮ ಜೀವನನ್ನೇ ತ್ಯಾಗ ಮಾಡುತ್ತಾರೆ. ಇಂದಿನ ದಿನಗಳಲ್ಲಿ ಯುದ್ಧ ಮಾಡುವುದಕ್ಕಿಂತ ಯುದ್ಧ ಆಗದಂತೆ ತಡೆಯುವುದು ಒಂದು ಸವಾಲಾಗಿದೆ. ಸೈನಿಕರು ಯಾವಾಗಲೂ ಯುದ್ಧಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿರುತ್ತಾರೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ನಿವೃತ್ತ ಕ್ಯಾಪ್ಟನ್ ಕಾಶಿನಾಥ ಅನುದುರೆ ಮಾತನಾಡಿ, ಮಾಜಿ ಸೈನಿಕರ ಕುಟುಂಬಕ್ಕೆ ಸಹಾಯಾರ್ಥವಾಗಿ ಧ್ವಜ ದಿನಾಚರಣೆಯ ಮೂಲಕ ಚಂದಾ ವಂತಿಕೆ ಸಂಗ್ರಹಿಸಲಾಗುತ್ತಿದೆ. ಸೈನಿಕರು 24 ಗಂಟೆಗಳ ಕಾಲ ದೇಶ ರಕ್ಷಿಸುವಲ್ಲಿ ತೊಡಗಿರುತ್ತಾರೆ. ಹಲವು ಸಂದರ್ಭಗಳಲ್ಲಿ ತಮ್ಮ ಆತ್ಮವನ್ನು ದೇಶಕ್ಕೆ ಸಮರ್ಪಿಸುತ್ತಾರೆ. ಸೈನಿಕರಿಗೆ ಗೌರವ ನೀಡಬೇಕಾಗಿದ್ದಲ್ಲಿ ದೇಶದ ಎಲ್ಲ ನಾಗರಿಕರು ಸಹಾಯ ಹಸ್ತ ಚಾಚಬೇಕು ಎಂದರು.
ಮಾಜಿ ಸೈನಿಕರ ಕಲ್ಯಾಣಾಭಿವೃದ್ಧಿ ಸಂಘದ ಅಧ್ಯಕ್ಷ ಬಸವರಾಜ ಬಿರಾದಾರ ಮಾತನಾಡಿ, ರಾಜ್ಯದ ಎಲ್ಲ ವಿಭಾಗೀಯ ಕೇಂದ್ರಗಳಲ್ಲಿ ಸೇನಾಭರ್ತಿ ಕಾರ್ಯಾಲಯ, ಮಾಜಿ ಸೈನಿಕರ ಹಾಗೂ ಸೈನಿಕರ ಮಕ್ಕಳಿಗೆ ವಸತಿ ನಿಲಯ, ಸೈನಿಕರ ಕ್ಯಾಂಟೀನ್‍ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇದೇ ಮಾದರಿಯಲ್ಲಿ ಕಲಬುರಗಿ ಜಿಲ್ಲೆಯಲ್ಲಿಯೂ ಪ್ರಾರಂಭಿಸಬೇಕು. ಮಾಜಿ ಸೈನಿಕರಿಗೆ ಹಾಗೂ ಸೈನಿಕರಿಗೆ ಅವಶ್ಯಕವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಭೀಮರಾವ ನಾಂದ್ರೆ, ನಿವೃತ್ತ ಕರ್ನಲ್ ರಾಜಶೇಖರ ಕಪಾಟೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ಸ್ನೇಹಲ್ ಸುಧಾಕರ ಲೋಖಂಡೆ, ಮಾಜಿ ಸೈನಿಕರು ಹಾಗೂ ಅವಲಂಬಿತರು ಪಾಲ್ಗೊಂಡಿದ್ದರು.
ಡಿ. 8ರಂದು ಜಿಲ್ಲಾ ಸಚಿವರಿಂದ ಋಣಮುಕ್ತ ಪ್ರಮಾಣಪತ್ರ ವಿತರಣೆ
*********************************************************
ಕಲಬುರಗಿ,ಡಿ.07.(ಕ.ವಾ.)-ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಋಣಮುಕ್ತ ಪ್ರಮಾಣಪತ್ರಗಳನ್ನು ರೈತರಿಗೆ ವಿತರಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವÀ ಪ್ರಿಯಾಂಕ್ ಖರ್ಗೆ ಹಾಗೂ ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಅವರು ಶನಿವಾರ ಡಿಸೆಂಬರ್ 8ರಂದು ಸೇಡಂ ತಾಲೂಕಿನ ರೈತರಿಗೆ ಋಣಮುಕ್ತ ಪ್ರಮಾಣಪತ್ರಗಳನ್ನು ವಿತರಿಸಲಿದ್ದಾರೆ.
ಸೇಡಂ ತಾಲೂಕಿನ ಸಹಕಾರಿ ಬ್ಯಾಂಕ್‍ಗಳಲ್ಲಿ ಸಾಲ ಪಡೆದ ರೈತರಿಗೆ ಋಣಮುಕ್ತ ಪ್ರಮಾಣಪತ್ರ ವಿತರಣೆಯಾಗಲಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಋಣಮುಕ್ತ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವನ್ನು ಹಂತ ಹಂತವಾಗಿ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕ್‍ಗಳಲ್ಲಿ 52586 ರೈತರು ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ 204270 ರೈತರು ಬೆಳೆ ಸಾಲ ಪಡೆದಿದ್ದು, ಎಲ್ಲ ರೈತರ ಬೆಳೆಸಾಲ ಮನ್ನಾ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾಡಳಿತದ ವತಿಯಿಂದ ವೈಜ್ಞಾನಿಕವಾಗಿ ರೈತರ ಆಧಾರ ಸಂಖ್ಯೆ, ಬ್ಯಾಂಕ್ ಖಾತೆ ಹಾಗೂ ಭೂ ದಾಖಲೆಗಳನ್ನು ಪರಿಶೀಲಿಸುವ ಮೂಲಕ ಅರ್ಹ ರೈತರ ಬೆಳೆಸಾಲ ಮನ್ನಾ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಸೇಡಂ ತಾಲೂಕಿನ ಕ್ರೀಡಾಂಗಣದಲ್ಲಿ ಅಂದು ಬೆಳಗಿನ 10.30 ಗಂಟೆಗೆ ಋಣಮುಕ್ತ ಪ್ರಮಾಣಪತ್ರ ವಿತರಿಸುವ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಸೇಡಂ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮನವಿ ಮಾಡಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆ:
****************************
ಭತ್ತ ಖರೀದಿಗಾಗಿ ಜಿಲ್ಲೆಯಲ್ಲಿ ನಾಲ್ಕು ಖರೀದಿ ಕೇಂದ್ರ ಪ್ರಾರಂಭ
******************************************************
ಕಲಬುರಗಿ,ಡಿ.07.(ಕ.ವಾ.)-2018-19ನೇ ಸಾಲಿನ ಮುಂಗಾರು (ಖಾರೀಫ್) ಋತುವಿನಲ್ಲಿ ಕಲಬುರಗಿ ಜಿಲ್ಲೆಯ ರೈತರು ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಭತ್ತ ಖರೀದಿಗಾಗಿ 4 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್‍ಪೊರ್ಸ್ ಸಮಿತಿ ಅಧ್ಯಕ್ಷರಾದ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ಕಲಬುರಗಿಯ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು ಖರೀದಿ ಏಜೆನ್ಸಿಯಾಗಿರುತ್ತದೆ. ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‍ಗೆ ಸಾಮಾನ್ಯ ಭತ್ತ 1750 ರೂ. ಹಾಗೂ ಗ್ರೇಡ್-ಎ ಭತ್ತ ಪ್ರತಿ ಕ್ವಿಂಟಲ್‍ಗೆ 1770 ರೂ.ಗಳ ದರವನ್ನು ನಿಗದಿಪಡಿಸಲಾಗಿದೆ. ರೈತರು ಖರೀದಿ ಕೇಂದ್ರಗಳಲ್ಲಿ 2018ರ ಡಿಸೆಂಬರ್ 15ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು.
2018ರ ಡಿಸೆಂಬರ್ 16 ರಿಂದ 2019ರ ಮಾರ್ಚ್ 31ರವರೆಗೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು. ಕೃಷಿ ಇಲಾಖೆಯು ನೀಡಿರುವ ಭತ್ತದ ಉತ್ಪತ್ತಿ ಅಂದಾಜು ಮತ್ತು ರೈತರ ಅನುಕೂಲಗಳನ್ನು ಗಮನದಲ್ಲಿರಿಸಿಕೊಂಡು ಕೆಳಕಂಡಂತೆ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಕಲಬುರಗಿ ತಾಲೂಕು: ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ (ಎಪಿಎಂಸಿ). ಜೇವರ್ಗಿ ತಾಲೂಕು: ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ (ಎಪಿಎಂಸಿ).. ಚಿಂಚೋಳಿ ತಾಲೂಕು: ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ (ಎಪಿಎಂಸಿ). ಸೇಡಂ ತಾಲೂಕು: ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ (ಎಪಿಎಂಸಿ).
ಪ್ರತಿಯೊಬ್ಬ ರೈತರು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಮಾರಾಟ ಮಾಡಲು ಖರೀದಿ ಕೇಂದ್ರಗಳಲ್ಲಿ ಮೊದಲು ನೋಂದಾಯಿಸಿಕೊಳ್ಳಬೇಕು. ರೈತರು ಸರಬರಾಜು ಮಾಡುವ ಒಂದು ಕ್ವಿಂಟಲ್ ಸಾಮಥ್ರ್ಯದ ಒಂದು ಚೀಲಕ್ಕೆ 6ರೂ. ರಂತೆ ಪಾವತಿಸಲಾಗುವುದು. ರೈತರು ತಮ್ಮ ಸ್ವಂತ ಖರ್ಚಿನಲ್ಲಿ ಖರೀದಿ ಕೇಂದ್ರಕ್ಕೆ ಭತ್ತವನ್ನು ಸರಬರಾಜು ಮಾಡಬೇಕು. ನೊಂದಾಯಿಸಿಕೊಂಡ ಸಣ್ಣ ಹಾಗೂ ಅತೀ ಸಣ್ಣ ರೈತರಿಂದ ಒಬ್ಬ ರೈತರಿಂದ ಮಾತ್ರ ಗರಿಷ್ಠ 40 ಕ್ವಿಂಟಲ್ ಭತ್ತವನ್ನು ಖರೀದಿಸಲಾಗುವುದು.
ರೈತರು ಸರಬರಾಜು ಮಾಡುವ ಭತ್ತದ ಗುಣಮಟ್ಟವನ್ನು ಗುಣಮಟ್ಟ ಪರಿವೀಕ್ಷಕರು ಪರಿಶೀಲಿಸಿ ದೃಢೀಕರಿಸಿದ ನಂತರವೇ ಖರೀದಿಸಲಾಗುವುದು. ರೈತರು ಭತ್ತವನ್ನು ಖರೀದಿ ಕೇಂದ್ರಗಳಿಗೆ ನೇರವಾಗಿ ಸರಬರಾಜು ಮಾಡಬೇಕು. ಯಾವುದೇ ಕಾರಣಕ್ಕೂ ಮಧ್ಯವರ್ತಿ ಅಥವಾ ಏಜೆಂಟರ್‍ನ್ನು ಬೆಂಬಲಿಸಬಾರದು. ಖರೀದಿಯಲ್ಲಿ ಮಧ್ಯವರ್ತಿಗಳು/ಏಜೆಂಟರು ಭಾಗವಹಿಸುವುದು ಕಾನೂನು ಬಾಹಿರವಾಗಿದೆ.
ರೈತರಿಂದ ಖರೀದಿಸುವ ಭತ್ತದ ಸರಕಿನ ಮೌಲ್ಯವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಆರ್.ಟಿ.ಜಿ.ಎಸ್/ಎನ್.ಇ.ಎಫ್.ಟಿ. ಮೂಲಕ ಪಾವತಿಸಲಾಗುವುದು. ರೈತರು ಕಡ್ಡಾಯವಾಗಿ ಆಧಾರ್ ಕಾರ್ಡ್, ಆರ್.ಟಿ.ಸಿ. (ಪಹಣಿ), ಇತ್ತೀಚಿಗೆ ರಾಷ್ಟ್ರೀಕೃತ/ ಶೆಡ್ಯೂಲ್ಡ್ ಬ್ಯಾಂಕ್‍ನಲ್ಲಿ ತೆರೆದ ಬ್ಯಾಂಕ್ ಅಕೌಂಟ್ ಖಾತೆ ಸಂಖ್ಯೆ, ಫೋಟೋ ಮತ್ತು ಐ.ಎಫ್.ಎಸ್.ಸಿ. ಕೋಡ ಹೊಂದಿರುವ ಪಾಸ್ ಬುಕ್‍ನ ಪ್ರತಿ, ಮೊಬೈಲ್ ಸಂಖ್ಯೆ, ಅವಶ್ಯವಿದ್ದಲ್ಲಿ ರದ್ದಾದ ಮೂಲ ಚೆಕ್ ಪ್ರತಿಗಳೊಂದಿಗೆ ಖರೀದಿ ಕೇಂದ್ರಗಳಿಗೆ ಬಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಮಧ್ಯವರ್ತಿಗಳು/ಏಜೆಂಟರ್‍ರು ಖರೀದಿ ಕೇಂದ್ರಗಳಿಗೆ ಭತ್ತವನ್ನು ತಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.





ಹೀಗಾಗಿ ಲೇಖನಗಳು News and Photos Date: 07--12--2018

ಎಲ್ಲಾ ಲೇಖನಗಳು ಆಗಿದೆ News and Photos Date: 07--12--2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photos Date: 07--12--2018 ಲಿಂಕ್ ವಿಳಾಸ https://dekalungi.blogspot.com/2018/12/news-and-photos-date-07-12-2018.html

Subscribe to receive free email updates:

0 Response to "News and Photos Date: 07--12--2018"

ಕಾಮೆಂಟ್‌‌ ಪೋಸ್ಟ್‌ ಮಾಡಿ