News and Photo Date: 21--01--2019

News and Photo Date: 21--01--2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photo Date: 21--01--2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photo Date: 21--01--2019
ಲಿಂಕ್ : News and Photo Date: 21--01--2019

ಓದಿ


News and Photo Date: 21--01--2019

ಬೆಳೆಸಾಲ ಮನ್ನಾ: ದಾಖಲೆ ಸಲ್ಲಿಸಲು ಜಿಲ್ಲಾಧಿಕಾರಿಗಳಿಂದ ರೈತರಿಗೆ ಮನವಿ
*******************************************************************
ಕಲಬುರಗಿ,ಜ.14.(ಕ.ವಾ.)-ಬೆಳೆ ಸಾಲ ಮನ್ನಾ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ ಇನ್ನೂ ಶೇಕಡಾ 39.41 ರಷ್ಟು ರೈತರು ತಮ್ಮ ಸ್ವಯಂ ಘೋಷಣಾ ಪ್ರಮಾಣ ಪತ್ರ ಸಲ್ಲಿಸುವುದು ಬಾಕಿ ಇರುತ್ತದೆ. ಸಹಕಾರ ಮತ್ತು ವಾಣಿಜ್ಯ ಬ್ಯಾಂಕ್‍ಗಳಲ್ಲಿ ಸಾಲ ಪಡೆದ ರೈತರು ಯಾವುದೇ ವಿಳಂಬ ಮಾಡದೇ ತಮ್ಮ ಸ್ವಯಂ ಘೋಷಣಾ ಪ್ರಮಾಣ ಪತ್ರ, ಆಧಾರ ಕಾರ್ಡ್ ಮತ್ತು ಪಡಿತರ ಚೀಟಿಯ ದಾಖಲೆಗಳನ್ನು ತಮಗೆ ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳಿಗೆ ನೀಡಬೇಕೆಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
ರೈತರ ಬೆಳೆಸಾಲ ಮನ್ನಾ ಕುರಿತು ಈಗಾಗಲೇ ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳು ರೈತರಿಂದ ಸ್ವಯಂ ಘೋಷಣಾ ಪತ್ರ (ಎಫ್.ಎಸ್.ಡಿ.) ನಮೂನೆ ಪಡೆದು ದಾಖಲೆಗಳೊಂದಿಗೆ ಸಂಬಂಧಪಟ್ಟ ಬ್ಯಾಂಕ್‍ಗಳಿಗೆ ಸಲ್ಲಿಸುತ್ತಿದ್ದು, ಅವುಗಳನ್ನು ತಂತ್ರಾಂಶದ ಮೂಲಕ ಅರ್ಜಿಗಳನ್ನು ನಮೂದು ಮಾಡಲಾಗುವ ಕಾರ್ಯ ಪ್ರಕ್ರಿಯೆಯಲ್ಲಿದೆ. ಎಫ್.ಎಸ್.ಡಿ. ನಮೂನೆಗಳನ್ನು ಸಾಲ ಮನ್ನಾ ತಂತ್ರಾಂಶದಲ್ಲಿ ಡಾಟಾ ಎಂಟ್ರಿ ಮಾಡುವ ಕಾರ್ಯವೂ ಸಹ ಪ್ರಗತಿಯಲ್ಲಿರುತ್ತದೆ. ಸದರಿ ಬೆಳೆ ಸಾಲ ಮನ್ನಾ ಯೋಜನೆ ಪ್ರಕ್ರಿಯೆ ವಿಳಂಬವಾದ್ದಲ್ಲಿ ಸಾಲ ಮನ್ನಾ ಯೋಜನೆಯು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ.
ಬೆಳೆ ಸಾಲ ಮನ್ನಾ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 2,23,051 ರೈತರನ್ನು ಗುರುತಿಸಿದ್ದು, ಸದರಿ ರೈತರ ಪೈಕಿ 1,30,200 (ಅಂದರೆ ಶೇಕಡ 60.59ರಷ್ಟು) ರೈತರಿಂದ ಮಾತ್ರ ಸ್ವಯಂ ಘೋಷಣಾ ಪತ್ರ (ಎಫ್.ಎಸ್.ಡಿ.) ನಮೂನೆಯನ್ನು ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಯಾದಗಿರಿ: ಸಿಪಾಯಿ ಹುದ್ದೆಗೆ ಅರ್ಜಿ ಆಹ್ವಾನ
*****************************************
ಕಲಬುರಗಿ,ಜ.14.(ಕ.ವಾ.)-ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿಯಿರುವ 05 ಜನ ಸಿಪಾಯಿ (ಜವಾನ) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಸಿಪಾಯಿ (ಜವಾನ) ಒಟ್ಟು 05 ಹುದ್ದೆಗಳ ಪೈಕಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ (ಸ್ಥಳೀಯ ವೃಂದದವರಿಗೆ) 04 ಹುದ್ದೆಗಳು ಹಾಗೂ ಮೂಲ ವೃಂದದವರಿಗೆ 01 ಹುದ್ದೆಯನ್ನು ಮೀಸಲಿಡಲಾಗಿದೆ. ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದಲು ಹಾಗೂ ಬರೆಯಲು ಬರಬೇಕು.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು 2019ರ ಫೆಬ್ರವರಿ 15ರ ಸಂಜೆ 5 ಗಂಟೆಯೊಳಗಾಗಿ ಯಾದಗಿರಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರವರ ಕಚೇರಿಯಲ್ಲಿ ಸಲ್ಲಿಸಬೇಕು. ನೇಮಕಾತಿ ಅಧಿಸೂಚನೆಗಾಗಿ ಜಿಲ್ಲಾ ನ್ಯಾಯಾಲಯದ hಣಣಠಿs://ಜisಣಡಿiಛಿಣs.eಛಿouಡಿಣs.gov.iಟಿ/iಟಿಜiಚಿ/ಞಚಿಡಿಟಿಚಿಣಚಿಞಚಿ/ಥಿಚಿಜgiಡಿ/ಡಿeಛಿಡಿuiಣ ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಿದೆ.
ಜನವರಿ 16 ರಂದು ಆವಿಷ್ಕಾರೋತ್ಸವ ಕಾರ್ಯಕ್ರಮ ಉದ್ಘಾಟನೆ
********************************************************
ಕಲಬುರಗಿ,ಜ.14.(ಕ.ವಾ.)-ಜಿಲ್ಲಾ ವಿಜ್ಞಾನ ಕೇಂದ್ರದಿಂದ ಕಲಬುರಗಿ ನಗರದ ಮುನಸಿಪಲ್ ಉದ್ಯಾನವನದಲ್ಲಿರುವ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಇದೇ ಜನವರಿ 16 ರಿಂದ 18ರವರೆಗೆ ಆವಿಷ್ಕಾರೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜನವರಿ 16 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಆವಿಷ್ಕಾರೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಗುವುದು. ಈ ಸಂದರ್ಭದಲ್ಲಿ ಕಲಬುರಗಿಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಹೆಚ್.ಎಂ ಮಹೇಶ್ವರಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಎಸ್.ಹೆಬ್ಬಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಜನವರಿ 18ರಂದು ಮಧ್ಯಾಹ್ನ 3.30 ಗಂಟೆಗೆ ನಡೆಯುವ ಆವಿಷ್ಕಾರೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಆರ್ ನಿರಂಜನ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜನವರಿ 19ರಂದು ಮಹಾಯೋಗಿ ವೇಮನ ಜಯಂತ್ಯೋತ್ಸವ
*****************************************************
ಕಲಬುರಗಿ,ಜ.14.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಮಹಾಯೋಗಿ ವೇಮನ ಜಯಂತ್ಯೋತ್ಸವವನ್ನು ಶನಿವಾರ ಜನವರಿ 19ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ನಗರದ ಬಾಪುಗೌಡ ದರ್ಶನಾಪುರ ರಂಗಮಂದಿರ (ಕನ್ನಡ ಭವನ)ದಲ್ಲಿ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಸಚಿವರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಈ ಸಮಾರಂಭದಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಡಾ|| ಅಜಯಸಿಂಗ್, ಎಮ್.ವಾಯ್. ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಬಿ. ಮತ್ತಿಮೂಡ, ಖನೀಜ್ ಫಾತೀಮಾ ಹಾಗೂ ಸುಭಾಷ ಗುತ್ತೇದಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ್ ಖರ್ಬಿಕರ್, ರಡ್ಡಿ ಸಮಾಜದ ಜಿಲ್ಲಾ ಅಧ್ಯಕ್ಷ ಚೆನ್ನಾರೆಡ್ಡಿ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೇಶಕಿ ಜ್ಯೋತಿ ಎಂ. ರೆಡ್ಡಿ ವಿಶೇಷ ಉಪನ್ಯಾಸ ನೀಡುವರು.
ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಜಗತ್ ವೃತ್ತದಿಂದ ಬಾಪುಗೌಡ ದರ್ಶನಾಪುರ ರಂಗಮಂದಿರ (ಕನ್ನಡ ಭವನ) ವರೆಗೆ ಮಹಾಯೋಗಿ ವೇಮನ ಅವರ ಭಾವಚಿತ್ರ ಮತ್ತು ವಿವಿಧ ಕಲಾ ಜಾನಪದ ಕಲಾ ತಂಡದ ಭವ್ಯ ಮೆರವಣಿಗೆ ಜರುಗುವುದು.
ಅಧಿಕಾರ ಸ್ವೀಕಾರ
*****************
ಕಲಬುರಗಿ,ಜ.14.(ಕ.ವಾ.)-ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಕಲಬುರಗಿ ಉಪವಿಭಾಗ-2ರ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಜನವರಿ 7ರಂದು ಎಸ್.ಬಿ. ನಾಗೂರ ಅವರು ಅಧಿಕಾರ ವಹಿಸಿಕೊಂಡಿರುತ್ತಾರೆ.
ಈ ಕಚೇರಿ ಕಾರ್ಯವ್ಯಾಪ್ತಿಗೆ ಅಫಜಲಪುರ, ಆಳಂದ ಹಾಗೂ ಚಿಂಚೋಳಿ ತಾಲೂಕುಗಳು ಒಳಗೊಂಡಿರುತ್ತದೆ. ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಸಂಬಂಧಪಟ್ಟ ಎಲ್ಲ ಸರ್ಕಾರಿ, ಅರೆ ಸರ್ಕಾರಿ, ರಹಸ್ಯ ಪತ್ರ ಮತ್ತು ಖಾಸಗಿ ಪತ್ರಗಳನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರು (ಹೆಚ್ಚುವರಿ), ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ಕಲಬುರಗಿ ಉಪವಿಭಾಗ-2, ರಾಜಾಪುರ-ಕುಸನೂರ ರಸ್ತೆ, ಸರ್ಕಾರಿ ಮಹಾವಿದ್ಯಾಲಯದ ಎದುರಿಗೆ, ಕಲಬುರಗಿ ಕಚೇರಿಯ ದೂರವಾಣಿ ಸಂಖ್ಯೆ 08472-224937 ಹಾಗೂ ಮೊಬೈಲ್ ಸಂಖ್ಯೆ 9448142564 ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಆಂತರಿಕ ನಿಬಂಧನೆಗೆ ಕ.ರಾ.ಮು.ವಿ. ವೆಬ್‍ಸೈಟ್ ಸಂಪರ್ಕಿಸಿ
****************************************************
ಕಲಬುರಗಿ,ಜ.14.(ಕ.ವಾ.)-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಇಲ್ಲಿ 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಬಿ.ಎ., ಬಿ.ಕಾಂ., ಬಿಎಲ್‍ಐಎಸ್‍ಸಿ ಹಾಗೂ ಪ್ರಥಮ ಎಂ.ಎ., ಎಂ.ಕಾಂ., ಎಂಎಲ್‍ಐಎಸ್‍ಸಿ ಹಾಗೂ ಎಂ.ಎಸ್.ಸಿ. ವಿಷಯಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಆಂತರಿಕ ನಿಬಂಧನೆಗೆ ಸಂಬಂಧಿಸಿದಂತೆ ಕ.ರಾ.ಮು.ವಿ. ಅಂತರ್ಜಾಲ hಣಣಠಿ://ಞsoumಥಿsoಡಿe.ಞಚಿಡಿಟಿಚಿಣಚಿಞಚಿ.iಟಿ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕೆಂದು ಕಲಬುರಗಿ ಪ್ರಾದೇಶಿಕ ನಿರ್ದೇಶಕ ಡಾ.ಸಂಗಮೇಶ ಹಿರೇಮಠ ತಿಳಿಸಿದ್ದಾರೆ.
ಜನವರಿ 17ರಂದು ಅತಿಥಿ ಶಿಕ್ಷಕರ ನೇಮಕಾತಿಗೆ ಸಂದರ್ಶನ
ಕಲಬುರಗಿ,ಜ.14.(ಕ.ವಾ.)-ಸೇಡಂ ತಾಲೂಕಿನ ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2019-20 ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿಯಿರುವ ಓರ್ವ ಆಂಗ್ಲ ಭಾಷೆಯ ಸಹಶಿಕ್ಷಕರ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿಯ ಸಂದರ್ಶನ ಇದೇ ಜನವರಿ 17ರಂದು ನಡೆಯಲಿದೆ.
ಆಂಗ್ಲ ಭಾಷಾ ಸಹಶಿಕ್ಷಕರ ಹುದ್ದೆಗೆ ಬಿ.ಎ.,ಬಿ.ಎಡ್. (ಪದವಿಯಲ್ಲಿ ಆಂಗ್ಲ ಭಾಷೆ ಐಚ್ಛಿಕ ವಿಷಯ) ವಿದ್ಯಾರ್ಹತೆ ಹೊಂದಿರಬೇಕು. ಪ್ರತಿ ಮಾಹೆ 10,000 ರೂ.ಗಳ ಗೌರವಧನ ನೀಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಮೂಲ ಪ್ರಮಾಣ ಪತ್ರಗಳು ಹಾಗೂ ಅದರ ದೃಢೀಕೃತ ಜಿರಾಕ್ಸ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9916689952ನ್ನು ಸಂಪರ್ಕಿಸಬೇಕೆಂದು ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಬಲ ಬೆಲೆಯಲ್ಲಿ ತೊಗರಿ ಕಾಳು ಖರೀದಿ:
**************************************
ಜನವರಿ 19ರವರೆಗೆ ರೈತರು ನೋಂದಣಿ ಮಾಡಿಕೊಳ್ಳಲು ಅವಕಾಶ
**********************************************************
ಕಲಬುರಗಿ.ಜ.14.(ಕ.ವಾ.)-ಕಲಬುರಗಿ ಜಿಲ್ಲೆಯ ಎಲ್ಲ ರೈತರಿಂದ 2018-19 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಕಾಳು ಖರೀದಿಸಲು 2019ರ ಜನವರಿ 14 ರವರೆಗೆ ನಿಗದಿಪಡಿಸಲಾದ ನೋಂದಣಿ ಕಾರ್ಯವನ್ನು ಸರ್ಕಾರದ ದಿನಾಂಕ: 14-01-2019ರ ಆದೇಶದನ್ವಯ ನೋಂದಣಿ ಕಾರ್ಯವನ್ನು 2019ರ ಜನವರಿ 19 ರವರೆಗೆ ಮುಂದುವರೆಸಿ ನಿಗದಿಪಡಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ರೈತರು ನೊಂದಣಿಗಾಗಿ ನೀಡಬೇಕಾದ ವಿವರ ಸಿಆಸು (ಇ-ಆಡಳಿತ) ಇಲಾಖೆಯು ಸಿದ್ದಪಡಿಸಿರುವ ತಂತ್ರಾಂಶದೊಂದಿಗೆ ಭೂಮಿ, ಆಧಾರ, UIಆಂI ಕೇಂದ್ರ ಮತ್ತು ಬೆಳೆ ದರ್ಶಕ ದತ್ತಾಂಶದಲ್ಲಿ ತಾಳೆ ಮಾಡಿ ಪರಿಶೀಲಿಸಿದ ನಂತರವೇ ರೈತರ ನೋಂದಣಿ ಮಾಡಲಾಗುತ್ತದೆ. ಒಂದು ವೇಳೆ ದತ್ತಾಂಶದಲ್ಲಿ ತೊಗರಿ ಉತ್ಪನ್ನ ಬೆಳೆಯದೇ ಇರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ತಾಲೂಕು ತಹಶೀಲ್ದಾರರು ಪರಿಶೀಲಿಸಿ ದೃಢಿಕರಿಸಿದ್ದಲ್ಲಿ ಅಂತಹ ರೈತರನ್ನು ನೊಂದಾಯಿಸಲಾಗುತ್ತದೆ.
ತೊಗರಿ ಬೆಳೆದ ರೈತರು ಪಹಣಿ ಪತ್ರಿಕೆ ಮತ್ತು ಆಧಾರ ದಾಖಲೆಗಳಲ್ಲಿ ಒಂದೇ ತರಹದ ಹೆಸರು ಇರಬೇಕಾಗುತ್ತದೆ ಹಾಗೂ ಆಧಾರ ಜೋಡಣೆಯಾದ ಬ್ಯಾಂಕ ಖಾತೆ ಹೊಂದಿರಬೇಕು. ಎಲ್ಲಾ ರೈತರು ಇದಕ್ಕೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.
ಜನವರಿ 16 ರಂದು
******************
“ಕಾನೂನು ಸಾಕ್ಷರತಾ ರಥ”ದ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ
******************************************************************
ಉದ್ಘಾಟನೆ
***********
ಕಲಬುರಗಿ,ಜ.14:(ಕ.ವಾ.)-ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ “ಕಾನೂನು ಸಾಕ್ಷರತಾ ರಥ"ದ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಬುಧವಾರ ಜನವರಿ 16 ರಂದು ಬೆಳಿಗ್ಗೆ 9.15 ಗಂಟೆಗೆ ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಟಿ. ಕಟ್ಟೀಮನಿ ಅವರು ಉದ್ಘಾಟಿಸುವರು.
ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ.ಹಿರೇಮಠ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್.ಮಾಣಿಕ್ಯ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಶಶಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ.ರಾಜಾ ಹಾಗೂ ಗುಲಬರ್ಗಾ ವಕೀಲರ ಸಂಘದ ಕಾರ್ಯದರ್ಶಿ ಬಿ.ಎನ್. ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಲಬುರಗಿ, ನ್ಯಾಯವಾದಿಗಳ ಸಂಘ, ವಿವಿಧ ಸರ್ಕಾರಿ ಇಲಾಖೆಗಳ ಮತ್ತು ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸಂಚಾರಿ ನ್ಯಾಯಾಲಯ ಹಾಗೂ ಕಾನೂನು ಸಾಕ್ಷರತಾ ರಥದ ಅಂಗವಾಗಿ ಇದೇ ಜನವರಿ 16 ರಿಂದ 19ರವರೆಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜನವರಿ 16ರಂದು: ಸಂಚಾರಿ ನ್ಯಾಯಾಲಯ ಹಾಗೂ ಕಾನೂನು ಸಾಕ್ಷರತಾ ರಥದ ಅಂಗವಾಗಿ ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯಗಳು ಮತ್ತು ವಿವಿಧ ಯೋಜನೆಗಳ ಬಗ್ಗೆ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ, ಸಕಾಲ ಕಾಯ್ದೆ ಕುರಿತು ಅರಿವು ನೆರವು ಕಾರ್ಯಕ್ರಮವನ್ನು ಜನವರಿ 16ರಂದು ಬೆಳಿಗ್ಗೆ 10.15 ಗಂಟೆಗೆ ಕಲಬುರಗಿ ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ. ಅಂದು ಮಧ್ಯಾಹ್ನ 1 ಗಂಟೆಗೆ ಮಹಿಳೆಯರಿಗೆಗಾಗಿ ವಿಶೇಷ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಫರಹತಾಬಾದ ಬಸವದಳ ಹಾಲ್‍ನಲ್ಲಿ ಹಾಗೂ ಅಂದು ಸಂಜೆ 5.30 ಗಂಟೆಗೆ ತಾರಫೈಲ್ ಅಂಬೇಡ್ಕರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
ಜನವರಿ 17ರಂದು: ಮೂಲಭೂತ ಕಾನೂನು ಮತ್ತು ಉದ್ಯೋಗ ಖಾತರಿ ಯೋಜನೆಯಿಂದ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಜನವರಿ 17 ರಂದು ಬೆಳಿಗ್ಗೆ 10 ಗಂಟೆಗೆ ಕುಮಸಿಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಏರ್ಪಡಿಸಲಾಗಿದೆ. ಅಂದು ಮಧ್ಯಾಹ್ನ 2 ಗಂಟೆಗೆ ಕಾನೂನು ಸಾಕ್ಷರತಾ ರಥದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಕುಸನೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಏರ್ಪಡಿಸಲಾಗಿದೆ. ಅಂದು ಸಂಜೆ 5 ಗಂಟೆಗೆ “ರಸ್ತೆ ಸುರಕ್ಷತೆ ಮತ್ತು ನಿಯಮಗಳು” ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಳಂದ ರಸ್ತೆಯಲ್ಲಿರುವ ರಾಜ್ಯ ಮಹಿಳಾ ನಿಲಯ ಆವರಣದಲ್ಲಿ ಏರ್ಪಡಿಸಲಾಗಿದೆ.
ಜನವರಿ 18ರಂದು: ಸಂಚಾರಿ ನ್ಯಾಯಾಲಯ ಹಾಗೂ ಕಾನೂನು ಸಾಕ್ಷರತಾ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಜನವರಿ 18 ರಂದು ಬೆಳಿಗ್ಗೆ 10 ಗಂಟೆಗೆ ಇಟಗಾ ಸರ್ಕಾರಿ ಪ್ರೌಢಶಾಲೆಯಲ್ಲಿ, ಅಂದು ಮಧ್ಯಾಹ್ನ 1.30 ಗಂಟೆಗೆ ಕಲಬುರಗಿ ಸೋನಿಯಾ ಗಾಂಧಿ ಕಾಲೋನಿಯ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಹಾಗೂ ಸಂಜೆ 5.30 ಗಂಟೆಗೆ ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದ ಹಿಂದುಗಡೆಯಿರುವ ಡಾ. ಬಿ.ಆರ್. ಅಂಬೇಡ್ಕರ ಬಾಲಕರ ವಸತಿ ನಿಲಯದ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
ಜನವರಿ 19ರಂದು: ಸಂಚಾರಿ ನ್ಯಾಯಾಲಯ ಹಾಗೂ ಕಾನೂನು ಸಾಕ್ಷರತಾ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಜನವರಿ 19 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದೆ. ಅಂದು ಮಧ್ಯಾಹ್ನ 1 ಗಂಟೆಗೆ ಮಹಿಳೆಯರಿಗಾಗಿ ವಿಶೇಷ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಕಲಬುರಗಿಯ ಮಹಾಗಾಂವ ಕ್ರಾಸ್‍ನ ಮಾಣಿಕೇಶ್ವರಿ ದೇವಸ್ಥಾನದದಲ್ಲಿ ಹಾಗೂ ಸಂಜೆ 4 ಗಂಟೆಗೆ ಕಮಲಾಪುರದ ನಗರೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ.




ಹೀಗಾಗಿ ಲೇಖನಗಳು News and Photo Date: 21--01--2019

ಎಲ್ಲಾ ಲೇಖನಗಳು ಆಗಿದೆ News and Photo Date: 21--01--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 21--01--2019 ಲಿಂಕ್ ವಿಳಾಸ https://dekalungi.blogspot.com/2019/01/news-and-photo-date-21-01-2019.html

Subscribe to receive free email updates:

0 Response to "News and Photo Date: 21--01--2019"

ಕಾಮೆಂಟ್‌‌ ಪೋಸ್ಟ್‌ ಮಾಡಿ