ಶೀರ್ಷಿಕೆ : News and Photo Date: 30---01--2019
ಲಿಂಕ್ : News and Photo Date: 30---01--2019
News and Photo Date: 30---01--2019
ಸಮಾಜ ಕಲ್ಯಾಣ ಸಚಿವರ ಪ್ರವಾಸ
*******************************
ಕಲಬುರಗಿ,ಜ.30.(ಕ.ವಾ.)-ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಯಾದಗಿರಿಯಿಂದ ರಸ್ತೆ ಮೂಲಕ ಶುಕ್ರವಾರ ಫೆಬ್ರವರಿ 1ರಂದು ಕಲಬುರಗಿಗೆ ಆಗಮಿಸಿ, ಅಂದು ಸಂಜೆ 4 ಗಂಟೆಗೆ ಕಲಬುರಗಿ ಜಿಲ್ಲೆಯ ಪ್ರವಾಹ ಪೀಡಿತ/ ಬರಪೀಡಿತ ಪ್ರದೇಶಗಳ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸುವರು. ಸಾಯಂಕಾಲ 5.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ, ಯಾದಗಿರಿ, ಬೀದರ ಜಿಲ್ಲೆಗಳ ಬರ ನಿರ್ವಹಣೆ ಕುರಿತು ಸಭೆಯಲ್ಲಿ ಪಾಲ್ಗೊಳ್ಳುವರು.

ಗಣಿ ಮತ್ತು ಭೂ ವಿಜ್ಞಾನ ಸಚಿವರ ಪ್ರವಾಸ
************************************
ಕಲಬುರಗಿ,ಜ.30.(ಕ.ವಾ.)-ಗಣಿ ಮತ್ತು ಭೂ ವಿಜ್ಞಾನ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಬಿ. ಪಾಟೀಲ ಅವರು ಯಾದಗಿರಿಯಿಂದ ರಸ್ತೆ ಮೂಲಕ ಫೆಬ್ರವರಿ 1 ರಂದು ಸಾಯಂಕಾಲ 4 ಗಂಟೆಗೆ ಕಲಬುರಗಿಗೆ ಆಗಮಿಸಿ, ಕಲಬುರಗಿ ಜಿಲ್ಲೆಯ ಬರಪೀಡಿತ ಪ್ರದೇಶಗಳ ಅಧ್ಯಯನ, ಪರಿಹಾರ ಕಾರ್ಯ ಕೈಗೊಂಡಿರುವ ಕುರಿತು ಪ್ರಗತಿ ಪರಿಶೀಲನೆ ನಡೆಸುವರು. ಸಾಯಂಕಾಲ 5.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ, ಯಾದಗಿರಿ, ಬೀದರ ಜಿಲ್ಲೆಗಳ ಬರ ನಿರ್ವಹಣೆ ಕುರಿತು ಸಭೆ ನಡೆಸುವರು. ನಂತರ ಸಾಯಂಕಾಲ 6.30 ಗಂಟೆಗೆ ರಸ್ತೆ ಮಾರ್ಗವಾಗಿ ಹುಮನಾಬಾದಿಗೆ ಪ್ರಯಾಣಿಸುವರು.
ಫೆಬ್ರವರಿ 6ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯೋತ್ಸವ
ಕಲಬುರಗಿ,ಜ.30.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯೋತ್ಸವವನ್ನು ಬುಧವಾರ ಫೆಬ್ರವರಿ 6ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಅಧÀ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಡಾ|| ಅಜಯಸಿಂಗ್, ಎಮ್.ವಾಯ್. ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಬಿ. ಮತ್ತಿಮೂಡ, ಖನೀಜ್ ಫಾತೀಮಾ ಹಾಗೂ ಸುಭಾಷ ಗುತ್ತೇದಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ್ ಖರ್ಬಿಕರ್, ಕಲಬುರಗಿ ಜಿಲ್ಲಾ ಭೋವಿ (ವಡ್ಡರ) ಸಮಾಜದ ಅಧ್ಯಕ್ಷ ತಿಪ್ಪಣ್ಣ ಒಡೆಯರಾಜ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ವಿಜಯಪುರ ಬಿ.ಎಲ್.ಡಿ. ಸಂಸ್ಥೆ ಪದವಿಪೂರ್ವ ಕಾಲೇಜಿನ ದೈಹಿಕ ಉಪನ್ಯಾಸಕ ಕೆ.ವಿ. ಒಡೆಯರ್ ಅವರು ವಿಶೇಷ ಉಪನ್ಯಾಸ ನೀಡುವರು.
ಇದಕ್ಕೂ ಮುನ್ನ ಮಧ್ಯಾಹ್ನ 1.30 ಗಂಟೆಯಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯುವುದು. ಕಲಬುರಗಿ ಡಾ. ಎಸ್.ಎಂ.ಪಂಡಿತ ರಂಗಮಂದಿರದಿಂದ ಆರಂಭವಾಗುವ ಮೆರವಣಿಗೆಯು ಜಗತ್ ವೃತ್ತ, ಗೋವಾ ಹೊಟೇಲ್, ಕುಂಬಾರ ಗಲ್ಲಿ, ಶಾಸ್ತ್ರೀ ಚೌಕ್, ಭಗತಸಿಂಗ್ ಚೌಕ್ ಮೂಲಕ ಬ್ರಹ್ಮಪುರ (ಗಡ್ಡರಗಲ್ಲಿ)ಯಲ್ಲಿರುವ ಪೂಜ್ಯ ಶ್ರೀ ಶಿವದಾಸ ಮಹಾರಾಜರ ಮಠಕ್ಕೆ ಆಗಮಿಸಿ ಕೊನೆಗೊಳ್ಳುವುದು.

ಎಂ.ಫಿಎಲ್-ಪಿಹೆಚ್.ಡಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
*************************************************
ಕಲಬುರಗಿ,ಜ.30.(ಕ.ವಾ)-ಗುಲಬರ್ಗಾ ವಿಶ್ವವಿದ್ಯಾಲಯದ ವಿವಿಧ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳಲ್ಲಿ ಎಂ.ಫಿಎಲ್ ಹಾಗೂ ಪಿಹೆಚ್.ಡಿ. ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.
ಅರ್ಹ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಶುಲ್ಕ 1000 ರೂ. ಗಳೊಂದಿಗೆ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 500ರೂ.)ವನ್ನು ಅನ್‍ಲೈನ್ ಮೂಲಕ ಪಾವತಿಸಿ ಫೆಬ್ರವರಿ 20 ರೊಳಗಾಗಿ ಸಂಬಂಧಪಟ್ಟ ಅಧ್ಯಯನ ವಿಭಾಗದ ಮುಖ್ಯಸ್ಥರಿಗೆ ಸಲ್ಲಿಸಬೇಕು.
ಎಂ.ಫಿಎಲ್./ಪಿಹೆಚ್.ಡಿ. ಪ್ರವೇಶ ಪರೀಕ್ಷೆಯ ದಿನಾಂಕವನ್ನು ನಂತರ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಅಧ್ಯಯನ ವಿಭಾಗದ ಮುಖ್ಯಸ್ಥರನ್ನು ಅಥವಾ ವಿಶ್ವವಿದ್ಯಾಲಯದ ತಿತಿತಿ.gug.ಚಿಛಿ.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಬಡವರ ಬಂಧು ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ
************************************************************
ಕಲಬುರಗಿ,ಜ.30.(ಕ.ವಾ)-ರಾಜ್ಯ ಸರ್ಕಾರವು 2018-19ನೇ ಸಾಲಿನಲ್ಲಿ ಬೀದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲು ಬಡವರ ಬಂಧು ಯೋಜನೆಯನ್ನು ಜಾರಿಗೆ ತಂದಿದೆ. ಅರ್ಹ ವ್ಯಾಪಾರಿಗಳು ಕಲಬುರಗಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ಹಾಗೂ ಪಟ್ಟಣ ಸಹಕಾರ ಬ್ಯಾಂಕುಗಳಿಗೆ ತಮ್ಮ ಆಧಾರ ಕಾರ್ಡ ಹಾಗೂ ತಾವು ವ್ಯಾಪಾರ ಮಾಡುವ ಸ್ಥಳದ ಫೋಟೋದೊಂದಿಗೆ ಸಂಪರ್ಕಿಸಿ ಶೂನ್ಯ ಬಡ್ಡಿದರದಲ್ಲಿ 10,000 ರೂ.ಗಳ ವರೆಗೆ ಸಾಲ ಪಡೆಯಬಹುದಾಗಿದೆ ಎಂದು ಕಲಬುರಗಿ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಬೀದಿ ವ್ಯಾಪಾರಿಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ಈ ಯೋಜನೆ ಅನ್ವಯವಾಗಲಿದೆ. ರಸ್ತೆ ಬದಿಯಲ್ಲಿ ತಳ್ಳುವ ಬಂಡಿ ಅಥವಾ ಮೋಟಾರು ವಾಹನಗಳಲ್ಲಿ ಪಾನೀಯಾ, ತಿಂಡಿ, ಊಟ, ಸಿಹಿ ಪದ್ಧಾರ್ಥ ಮುಂತಾದ ಹೋಟೆಲ್ ಸೇವೆಗಳನ್ನು ಒದಗಿಸುವ ಬೀದಿ ವ್ಯಾಪಾರಿಗಳು, ರಸ್ತೆ/ಮನೆಗಳಲ್ಲಿ ತಳ್ಳು ಬಂಡಿ ಅಥವಾ ಮೋಟಾರು ವಾಹನÀಗಳಲ್ಲಿ ತರಕಾರಿ, ಹೂ, ಹಣ್ಣು, ಕಾಯಿ ಮಾರುವವರು ಮತ್ತು ರಸ್ತೆ ಬದಿಯ ಬುಟ್ಟು ವ್ಯಾಪಾರಿಗಳು, ಪಾದರಕ್ಷೆಗಳು, ಚÀರ್ಮ ಉತ್ಪನ್ನಗಳ ರಿಪೇರಿ ಮಾರಾಟ ಮತ್ತಿತರ ಕೆಲಸಗಳಲ್ಲಿ ತೊಡಗಿರುವ ಬೀದಿ ವ್ಯಾಪಾರಿಗಳು, ಆಟದ ಸಾಮಾನುಗಳು, ಇತರೆ ಗೃಹ ವಸ್ತುಗಳು ಮಾರಾಟ ಮಾಡುವವರು ಇದರ ಸದುಪಯೋಗ ಪಡೆಯಬಹುದಾಗಿದೆ.

ಕಿತ್ತೂರ ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
****************************************************************
ಕಲಬುರಗಿ,ಜ.30.(ಕ.ವಾ)-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ನೀಡುವ 2018-19ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಮತ್ತು ವೀರಮಹಿಳೆ ಪ್ರಶಸ್ತಿಗಾಗಿ ಕಲಬುರಗಿ ಜಿಲ್ಲೆಯ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಅರ್ಹ ಮಹಿಳೆಯರು ನಿಗದಿತ ನಮೂನೆಗಳನ್ನು ಕಲಬುರಗಿ ಚಂದ್ರಶೇಖರ ಪಾಟೀಲ್ ಕ್ರಿಡಾಂಗಣ ಎದುರುಗಡೆಯಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2019ರ ಫೆಬ್ರವರಿ 6ರ ಸಾಯಂಕಾಲ 4 ಗಂಟೆಯೊಳಗಾಗಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಪ್ರಾರಂಭಿಸಲು
*************************************************
ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರಸ್ತಾವನೆ ಆಹ್ವಾನ
*******************************************
ಕಲಬುರಗಿ,ಜ.30.(ಕ.ವಾ)-ಕಲಬುರಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಪ್ರಾರಂಭಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಪ್ರಾರಂಭಿಸಲು ಇಚ್ಛಿವುಳ್ಳ ಸ್ವಯಂ ಸೇವಾ ಸಂಸ್ಥೆಗಳು ಪ್ರಸ್ತಾವನೆಯನ್ನು 2019ರ ಫೆಬ್ರವರಿ 6ರ ಸಂಜೆ 5.30 ಗಂಟೆಯೊಳಗಾಗಿ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕು.
ಸ್ವಯಂ ಸೇವಾ ಸಂಸ್ಥೆ ನೋಂದಣಿಯಾಗಿ ಕನಿಷ್ಠ 05 ವರ್ಷವಾಗಿರಬೇಕು. ಯಾವುದೆ ಕ್ರೀಮಿನಲ್ ಮೊಕ್ಕದ್ದಮೆಯಲ್ಲಿ ಭಾಗಿಯಾಗಿರಬಾರದು. ಸಂಸ್ಥೆಯು ಹಿರಿಯ ನಾಗರಿಕರ ಸಹಾಯವಾಣಿ ನಡೆಸುವಲ್ಲಿ ಅಥವಾ ಇಂತಹದ್ದೇ ಇನ್ನಿತರ ಕಾರ್ಯಕ್ರಮಗಳನ್ನು ನಡೆಸುವ ಅನುಭವ ಹೊಂದಿರಬೇಕು ಅಥವಾ ಹಿರಿಯ ನಾಗರೀಕರ ಸಹಾಯವಾಣಿ ನಡೆಸಲು ದಕ್ಷತೆಯನ್ನು ಹೊಂದಿರುವ ಬಗ್ಗೆ ದಾಖಲೆಗಳನ್ನು ಹಾಜರುಪಡಿಸಬೇಕು. ಮತ್ತಿತರ ಷರತ್ತು ಹಾಗೂ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಫೆಬ್ರವರಿ 2ರಂದು ಪಟ್ಟಣದಲ್ಲಿ ಜನಸ್ಪಂದನ ಸಭೆ
******************************************
ಕಲಬುರಗಿ,ಜ.30.(ಕ.ವಾ)-ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ 2019ರ ಫೆಬ್ರವರಿ 2ರಂದು ಬೆಳಿಗ್ಗೆ 11 ಗಂಟೆಗೆ ಜನಸ್ಪಂದನ ಸಭೆ ನಡೆಸಲಾಗುವುದು ಎಂದು ಕಲಬುರಗಿ ತಹಶೀಲ್ದಾರರು ತಿಳಿಸಿದ್ದಾರೆ.
ಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಗೊಳಪಟ್ಟ ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಖುದ್ದಾಗಿ ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.

ಮೊದಲನೇ ಕಂತಿನ ಆಂತರಿಕ ನಿಬಂಧನೆ ಸಲ್ಲಿಸಲು ಸೂಚನೆ
****************************************************
ಕಲಬುರಗಿ,ಜ.30.(ಕ.ವಾ.)-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಇಲ್ಲಿ 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಬಿ.ಎ., ಬಿ.ಕಾಂ., ಬಿಎಲ್‍ಐಎಸ್‍ಸಿ ಹಾಗೂ ಪ್ರಥಮ ಎಂ.ಎ., ಎಂ.ಕಾಂ. ಹಾಗೂ ಎಂಎಲ್‍ಐಎಸ್‍ಸಿ ವಿಷಯಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ತಮ್ಮ ಆಂತರಿಕ ನಿಬಂಧನೆಗಳನ್ನು ಕ.ರಾ.ಮು.ವಿ. hಣಣಠಿ://ಞsoumಥಿsoಡಿe.ಞಚಿಡಿಟಿಚಿಣಚಿಞಚಿ.iಟಿ ಅಂತರ್ಜಾಲಕ್ಕೆ ಸಂಪರ್ಕಿಸಿ ಪಡೆದು ಮೊದಲನೇ ಕಂತಿನ ಆಂತರಿಕ ನಿಬಂಧನೆಗಳನ್ನು ಸಲ್ಲಿಸಲು ಕೊನೆಯ ದಿನ 2019ರ ಜನವರಿ 31 ಇರುತ್ತದೆ ಎಂದು ಕಲಬುರಗಿ ಪ್ರಾದೇಶಿಕ ನಿರ್ದೇಶಕ ಡಾ.ಸಂಗಮೇಶ ಹಿರೇಮಠ ತಿಳಿಸಿದ್ದಾರೆ.

ಜೆಸ್ಕಾಂ ವಿದ್ಯುತ್ ದರ ಪರಿಷ್ಕರಣೆ:
*****************************
ಫೆಬ್ರವರಿ 11ರಂದು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣಾ ಸಭೆ
********************************************************
ಕಲಬುರಗಿ,ಜ.30.(ಕ.ವಾ.)-ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯು (ಜೆಸ್ಕಾಂ) ಆರ್ಥಿಕ ವರ್ಷ 2019-20ನೇ ಸಾಲಿಗೆ ವಿದ್ಯುತ್ ದರ ಪರಿಷ್ಕರಿಸಬೇಕೆಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‍ಸಿ)ಕ್ಕೆ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ವಿದ್ಯುತ್ ದರ ಪರಿಷ್ಕರಣೆ ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣಾ ಸಭೆಯನ್ನು 2019ರ ಫೆಬ್ರವರಿ 11 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ವಿದ್ಯುತ್ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಈ ಸಭೆಯಲ್ಲಿ ಸಾರ್ವಜನಿಕರ ಅಹವಾಲು ವಿಚಾರಣೆ ಹಾಗೂ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತಿದೆ. ಆಸಕ್ತ ವ್ಯಕ್ತಿಗಳು, ಸಂಘ ಸಂಸ್ಥೆಗಳು ಮತ್ತು ಇತರೆ ಸಾರ್ವಜನಿಕರು ಆಗಮಿಸಿ ತಮ್ಮ ಅಭಿಪ್ರಾಯಗಳನ್ನು ಮೌಖಿಕವಾಗಿ ಅಥವಾ ಲಿಖಿತ ರೂಪದಲ್ಲಿ ಆಯೋಗದ ಮುಂದೆ ಮಂಡಿಸಬಹುದಾಗಿದೆ ಎಂದು ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ (ಕಾರ್ಯಚರಣೆ) ನಿಗಮ ಕಚೇರಿಯ ಮುಖ್ಯ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರಂಭದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದಲ್ಲಿ ಕುಷ್ಠರೋಗ ತಡೆಗಟ್ಟಬಹುದು
****************************************************************
ಕಲಬುರಗಿ,ಜ.30(ಕ.ವಾ)-ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಸಿಬ್ಬಂದಿಗಳು ಮನೆ ಮನೆಗೆ ಹೋಗಿ ತಪಾಸಣೆ ಕೈಗೊಂಡು ಕುಷ್ಠರೋಗವು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿ ಕುಷ್ಠರೋಗವನ್ನು ತಡೆಗಟ್ಟಬಹುದು ಎಂದು ಕಲಬುರಗಿ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಹೇಳಿದರು.
ಬುಧವಾರ ಕಲಬುರಗಿ ನಗರದ ಜಿಲ್ಲಾ ಪಂಚಾಯತಿಯ ಹಳೇ ಸಭಾಂಗಣದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲಬುರಗಿ ಜಿಲ್ಲಾ ಕುಷ್ಠರೋಗ ವಿಭಾಗ ಇವರುಗಳ ಸಹಯೋಗದೊಂದಿಗೆ “ಕುಷ್ಠ ಮುಕ್ತ ದೇಶ ನನ್ನ ಸ್ವಪ್ನ” ಎಂಬ ಘೋಷಣೆಯೊಂದಿಗೆ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚರ್ಮದ ಮೇಲೆ ಬಿಳಿ ಮಚ್ಚೆ ಕಾಣಿಸುವುದು ಕುಷ್ಠರೋಗದ ಲಕ್ಷಣವಾಗಿದ್ದು, ಇದನ್ನು ಆರಂಭದಲ್ಲಿಯೆ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಕುಷ್ಠರೋಗ ಹರಡುವುದನ್ನು ತಡೆಯಬಹುದಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಾಧವರಾವ ಕೆ. ಪಾಟೀಲ್ ಮಾತನಾಡಿ, ಕುಷ್ಠ ರೋಗ ಮತ್ತು ಕ್ಷಯರೋಗಗಳು ಅನಾದಿಕಾಲದಿಂದಲೂ ಇದ್ದು, ಈ ರೋಗಕ್ಕೆ ಸಾವು ಇಲ್ಲ. ಸ್ಪರ್ಶಜ್ಞಾನವಿಲ್ಲದೇ ಹುಟ್ಟುಕೊಳ್ಳುವ ಮಚ್ಚೆ ಕುಷ್ಠರೋಗ. ಕುಷ್ಠರೋಗಿಗಳಿಗೆ ಮನೆಯಿಂದ ಮತ್ತು ಊರಿಂದ ದೂರ ಮಾಡುವ ಮೂಢನಂಬಿಕೆ ಸಮಾಜದಲ್ಲಿ ತೊಲಗಬೇಕಾಗಿದ್ದು, ಅವರಿಗೆ ಇತರೆ ರೋಗಿಗಳಂತೆ ಉಪಚರಿಸಿ ಸೂಕ್ತ ಚಿಕಿತ್ಸೆ ನೀಡಿದಲ್ಲಿ ಗುಣಮುಖರಾಗುತ್ತಾರೆ. ನಿರ್ಲಕ್ಷ್ಯವಹಿಸಿದ್ದಲ್ಲಿ ಅಂಗವೈಕಲ್ಯ ಉಂಟಾಗುವ ಸಂಭವವಿರುತ್ತದೆ. ಮಹಾತ್ಮ ಗಾಂಧೀಜಿಯವರ ಕನಸಂತೆ ಕುಷ್ಠ ರೋಗ ಮುಕ್ತ ಮಾಡಲು ನಾವೆಲ್ಲರೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ಇದಲ್ಲದೇ ನರ್ಸಗಳು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರು ಕುಷ್ಠರೋಗದ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಜನರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸಬೇಕು. ದೇಹದ ಯಾವುದೇ ಭಾಗದಲ್ಲಿ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕಂಡು ಬಂದಲ್ಲಿ ಕೂಡಲೇ ತಮ್ಮ ಸಮೀಪದ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.
ಕಲಬುರಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ. ದಯಾನಂದ ರಾಯ್ಕರ ಉಪನ್ಯಾಸ ನೀಡಿ, ದೇಹದ ಯಾವುದೇ ಭಾಗವು ಸ್ಪರ್ಶಕ್ಕೆ ಸ್ಪಂದಿಸದೆ ಹೋದರೆ ಅಂತಹ ಗುಣ ಲಕ್ಷಣಗಳನ್ನು ಕುಷ್ಠ ರೋಗದ ಲಕ್ಷಣ. ಗ್ರಾಮೀಣ ಭಾಗದಲ್ಲಿ ಕುಷ್ಠರೋಗವು ಹೆಚ್ಚಾಗಿ ಕಂಡುಬರುತ್ತಿದೆಯಾದರೂ ಹಳ್ಳಿ ನಿವಾಸಿಗರಿಗೆ ಈ ಬಗ್ಗೆ ಸರಿಯಾದ ಅರಿವಿಲ್ಲ. ಹೀಗಾಗಿ ಅವರಿಗೆ ಸೂಕ್ತ ಅರಿವು, ಜಾಗೃತಿ, ತಿಳಿವಳಿಕೆ ಮೂಡಿಸುವ ಕೆಲಸವಾಗಬೇಕು. ಆಂದೋಲನದ ಅಂಗವಾಗಿ ಆರೋಗ್ಯ ಸಿಬ್ಬಂದಿಗಳು ಪ್ರತಿ ಮನೆ-ಮನೆಗೆ ತೆರಳಿ ರೋಗ ಪತ್ತೆ ಮಾಡಿ ಚಿಕಿತ್ಸೆ ಪಡೆಯಲು ತಿಳುವಳಿಕೆ ನೀಡಬೇಕು.
ಕಲಬುರಗಿ ಜಿಲ್ಲಾ ಕುಷ್ಟರೋಗ ನಿಯಂತ್ರಣಾ ಅಧಿಕಾರಿ ಡಾ. ಶರಣಬಸಪ್ಪಾ ಕ್ಯಾತ್ನಾಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿ “ಬನ್ನಿ ಕೈ ಕೈ ಜೋಡಿಸಿ ಭಾರತವನ್ನು ಕುಷ್ಠ ಮುಕ್ತಗೊಳಿಸಲು ಸರ್ವ ಪ್ರಯತ್ನ ಮಾಡೋಣ” ಎಂಬ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶರಣಗೌಡ ಪಾಟೀಲ, ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಾನಂದ ಸುರಗಾಳಿ, ಸೇರಿದಂತೆ ಜೀಮ್ಸ್, ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನೀತರರು ಇದ್ದರು. ಗಣೇಶ ಚಿನ್ನಾಕಾರ ನಿರೂಪಿಸಿದರು. ಗಣಪತಿ ವಂದಿಸಿದರು. ಇದಕ್ಕೂ ಮುನ್ನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಈ ಜಾಥಾವು ಜಿಲ್ಲಾ ಆಸ್ಪತ್ರೆಯಿಂದ ಪ್ರಾರಂಭವಾಗಿ, ಜಗತ್ ವೃತ್ತದ ಮಾರ್ಗವಾಗಿ ಹಳೆ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಆಗಮಿಸಿ ಕೊನೆಗೊಂಡಿತು.

ಜನವರಿ 31ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತ್ಯೋತ್ಸವ
***********************************************************
ಕಲಬುರಗಿ,ಜ.30.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತ್ಯೋತ್ಸವವನ್ನು ಗುರುವಾರ ಜನವರಿ 31ರಂದು ಮಧ್ಯಾಹ್ನ 1 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸಂತ ಶ್ರೇಷ್ಠ ಕವಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ವಿಭಾಗದ ತಿಂತಣಿ ಬ್ರಿಡ್ಜ್ ಕಾಗಿನೆಲೆ ಕನಕಗುರು ಪೀಠದ ಪರಮಪೂಜ್ಯ ಶ್ರೀ ಸಿದ್ಧರಾಮಾನಂದಪುರಿ ಮಹಾಸ್ವಾಮೀಜಿ ಅವರು ಸಾನಿಧ್ಯವಹಿಸಲಿದ್ದು, ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಅಧÀ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಡಾ|| ಅಜಯಸಿಂಗ್, ಎಮ್.ವಾಯ್. ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಬಿ. ಮತ್ತಿಮೂಡ, ಖನೀಜ್ ಫಾತೀಮಾ ಹಾಗೂ ಸುಭಾಷ ಗುತ್ತೇದಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ್ ಖರ್ಬಿಕರ್, ಕಲಬುರಗಿಯ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಗುಂಡಗುರ್ತಿ ಬಳಬಟ್ಟಿ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ಬಂಕೂರ ಕರ್ನಾಟಕ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಎಸ್. ಕೊಕಟನೂರ ಅವರು ವಿಶೇಷ ಉಪನ್ಯಾಸ ನೀಡುವರು.
ಇದಕ್ಕೂ ಮುನ್ನ ಬೆಳಿಗ್ಗೆ 9.30 ಗಂಟೆಯಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಂತ ಶ್ರೇಷ್ಠ ಕವಿ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯುವುದು. ಕಲಬುರಗಿ ನಗರದ ನೆಹರು ಗಂಜ್‍ನಲ್ಲಿರುವ ನಗರೇಶ್ವರ ಬಾಲವಿಕಾಸ ಮಂದಿರದಿಂದ ಆರಂಭವಾಗುವ ಮೆರವಣಿಗೆಯು ಚೌಕ್ ಪೊಲೀಸ್ ಸ್ಟೇಶನ್ ವೃತ್ತ, ಸೂಪರ ಮಾರ್ಕೇಟ್ ಮಾರ್ಗವಾಗಿ ಜಗತ್ ವೃತ್ತದ ಮೂಲಕ ಡಾ.ಎಸ್.ಎಂ. ಪಂಡಿತ ರಂಗಮಂದಿರಕ್ಕೆ ಆಗಮಿಸಿ ಕೊನೆಗೊಳ್ಳುವುದು.

ಹೀಗಾಗಿ ಲೇಖನಗಳು News and Photo Date: 30---01--2019
ಎಲ್ಲಾ ಲೇಖನಗಳು ಆಗಿದೆ News and Photo Date: 30---01--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 30---01--2019 ಲಿಂಕ್ ವಿಳಾಸ https://dekalungi.blogspot.com/2019/01/news-and-photo-date-30-01-2019.html

0 Response to "News and Photo Date: 30---01--2019"
ಕಾಮೆಂಟ್ ಪೋಸ್ಟ್ ಮಾಡಿ