ಶೀರ್ಷಿಕೆ : News and photos Date: 10--01--2019
ಲಿಂಕ್ : News and photos Date: 10--01--2019
News and photos Date: 10--01--2019
ಜನವರಿ 11 ರಂದು “ಕೈಗಾರಿಕಾ ನೀತಿ 2014-19” ಕಾರ್ಯಾಗಾರ ಉದ್ಘಾಟನೆ
********************************************************************
ಕಲಬುರಗಿ,ಜ.10.(ಕ.ವಾ)-ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಕಲಬುರಗಿ ಲೇಡೀಸ್ ಅಸೋಸಿಯೇಶನ್ ಮ್ಯಾನ್ಯುಫ್ಯಾಕ್ಚರರ್ಸ್ ಪಾರ್ಕ್ (ಕೆ-ಲ್ಯಾಂಪ್), ಗುಲಬರ್ಗಾ ದಾಲ್ ಮಿಲ್ಲರ್ಸ್ ಅಸೋಸಿಯೇಶನ್ ಹಾಗೂ ಗುಲಬರ್ಗಾ ಕೈಗಾರಿಕಾ ಪ್ರದೇಶ ಉತ್ಪಾದಕರ ಸಂಘ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕೈಗಾರಿಕಾ ನೀತಿ 2014-19 ಹಾಗೂ ಉದ್ದೇಶಿತ ಹೊಸ ಕೈಗಾರಿಕಾ ನೀತಿ ಮತ್ತು ಸುಗಮ ವಾಣಿಜ್ಯ-ವ್ಯವಹಾರ ನಡೆಸುವಿಕೆಗಾಗಿ ಸಲಹೆಗಳ ಕುರಿತು ಕಾರ್ಯಾಗಾರವನ್ನು ಶುಕ್ರವಾರ ಜನವರಿ 11ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಮಾರುಕಟ್ಟೆ ರಸ್ತೆಯಲ್ಲಿರುವ ಹೆಚ್.ಕೆ.ಸಿ.ಸಿ.ಐ. ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಖನೀಜ್ ಫಾತೀಮಾ ಅವರು ಈ ಕಾರ್ಯಾಗಾರವನ್ನು ಉದ್ಘಾಟಿಸುವರು. ಬೆಂಗಳೂರಿನ (ಎಂಎಸ್‍ಎಂಇ ಮತ್ತು ಪಿಪಿ) ಅಪರ ನಿರ್ದೇಶಕ ಹಾಗೂ ಎಂಎಸ್‍ಎಫ್‍ಸಿ ಸದಸ್ಯ ಕಾರ್ಯದರ್ಶಿ ಹೆಚ್.ಎಂ. ಶ್ರೀನಿವಾಸ ಹಾಗೂ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಅಮರನಾಥ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಭಾರ ಜಂಟಿ ನಿರ್ದೇಶಕಿ ಸುರೇಖಾ ಮನೋಲಿ, ಬೆಂಗಳೂರಿನ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ದಲಿಂಗಪ್ಪ ಬಿ. ಪೂಜಾರಿ, ಕಲಬುರಗಿ ಕೆಎಸ್‍ಎಫ್‍ಸಿ ಸಹಾಯಕ ಪ್ರಧಾನ ವ್ಯವಸ್ಥಾಪಕ ಡಾ. ಗಣಪತಿ ರಾಠೋಡ ಹಾಗೂ ಕೆಎಸ್‍ಪಿಸಿಬಿ ಪರಿಸರ ಅಧಿಕಾರಿ ಸಿ.ಎನ್. ಮಂಜಪ್ಪ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾಸಿಯಾ ಉಪಾಧ್ಯಕ್ಷ ಆರ್. ರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಜನವರಿ 11ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
***********************************************
ಕಲಬುರಗಿ,ಜ.10.(ಕ.ವಾ)-ಜೆಸ್ಕಾಂ ವ್ಯಾಪ್ತಿಯ ಕಲಬುರಗಿ ನಗರ ಕಾರ್ಯ ಮತ್ತು ಪಾಲನೆ ವಿಭಾಗದಡಿ ಬರುವ 11ಕೆ.ವಿ ಇಂಡಸ್ಟ್ರೀಯಲ್ (ಸೌಥ್) ಫೀಡರ್‍ನಲ್ಲಿ ಶುಕ್ರವಾರ ಜನವರಿ 11 ರಂದು ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಸಾಯಂಕಾಲ 4 ಗಂಟೆಯವರೆಗೆ ಸದರಿ ಫೀಡರಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಕೋರಿದ್ದಾರೆ.
11 ಕೆ.ವಿ. ಇಂಡಸ್ಟ್ರೀಯಲ್ (ಸೌಥ್) ಫೀಡರ್: ಮಹಾವೀರ ನಗರ, ಶಾಸ್ತ್ರೀ ನಗರ, ಕೊಠಾರಿ ಭವನ, ಮಾಳು ಇಂಡಸ್ಟ್ರೀಸ್ ಎರಿಯಾ, ಐ.ಟಿ.ಐ. ಕಾಲೇಜ, ತಿಮ್ಮಾಪೂರಿ ಸರ್ಕಲ್, ವೆಂಕಟೇಶ ನಗರ, ಹೊಸ ಯುನಿಟೆಡ್ ಆಸ್ಪತ್ರೆ, ಹಳೆಯ ಪ್ರಜಾವಾಣಿ ಕಚೇರಿ, ಖಮರುಲ್ ಇಸ್ಲಾಂ ಮನೆ, ವಸಂತ್ ನಗರ, ಪ್ರಿಂಟಿಂಗ್ ಪ್ರೆಸ್, ಸಂಗಮೇಶ್ವರ ಆಸ್ಪತ್ರೆ, ವಿಧ್ಯಾ ನಗರ ಗರ್ಲ್ ಹಾಸ್ಟೇಲ್, ಕೆ.ಕೆ. ಮೆಡಿಕಲ್, ಸೆಂಟ್ರಲ್ ಬಸ್ ಸ್ಟ್ಯಾಂಡ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಸಂಚಾರಿ ನಿಯಮಗಳು ಪಾಲಿಸಿ, ಅಪಘಾತ ತಪ್ಪಿಸಿ
********************************************
-ಎಸ್.ಆರ್.ಮಾಣಿಕ್ಯ
*******************
ಕಲಬುರಗಿ,ಜ.10(ಕ.ವಾ.)- ವಾಹನ ಚಾಲಕರು ಕಡ್ಡಾಯವಾಗಿ ಸಂಚಾರ ಮತ್ತು ಸುರಕ್ಷಾ ನಿಯಮಗಳನ್ನು ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಪ್ಪಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಕರೆ ನೀಡಿದರು.
ಗುರುವಾರ ಕಲಬುರಗಿ ನಗರದ ಕಾರ್ಮಿಕ ಭವನದಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೆಡ್‍ಕ್ರಾಸ್ ಸಂಸ್ಥೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಪಘಾತ ಜೀವ ರಕ್ಷಕ ಯೋಜನೆಯಡಿ ವಾಣಿಜ್ಯ ವಾಹನ ಚಾಲಕರಿಗೆ ಆಯೋಜಿಸಲಾದ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಚಾಲನೆ ಸಂದರ್ಭದಲ್ಲಿ ತುಂಬಾ ಜಾಗೃತೆ ವಹಿಸುವುದಲ್ಲದೆ ಸಂಚಾರ ಮತ್ತು ಸುರಕ್ಷಾ ನಿಯಮಗಳನ್ನು ಪಾಲಿಸುವ ಮೂಲಕ ತಮ್ಮ ಜೀವನದೊಂದಿಗೆ ಸಹ ಪ್ರಯಾಣಿಕರ ಜೀವನ ಉಳಿಸುವ ಜವಾಬ್ದಾರಿ ವಾಹನ ಚಾಲಕರ ಮೇಲಿದೆ. ವಾಹನ ಚಾಲಕರ ಸೇವೆ ನಿಜಕ್ಕೂ ಶ್ಲಾಘನೀಯವಾಗಿದ್ದು, ಅವರು ಶ್ರಮಜೀವಿಗಳಾಗಿದ್ದಾರೆ. ಚಾಲಕರು ಕಡ್ಡಾಯವಾಗಿ ಬ್ಯಾಡ್ಜ್ ಲೈಸೆನ್ಸ್ ಪಡೆಯಬೇಕು ಹಾಗೂ ಪ್ರತಿ ವರ್ಷ ನವೀಕರಣಗೊಳಿಸಬೇಕು. ನವೀಕರಣ ಮಾಡದೆ ಅಪಘಾತಕ್ಕೀಡಾದಲ್ಲಿ ವಿಮೆ ಪರಿಹಾರ ಸಿಗುವುದಿಲ್ಲ, ಇದನ್ನು ವಾಹನ ಚಾಲಕರು ಅರಿಯಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಅಪ್ಪಾರಾವ ಅಕ್ಕೋಣಿ ಮಾತನಾಡಿ ಇಂದಿಲ್ಲಿ ನೀಡಲಾಗುವ ಪ್ರಥಮ ಚಿಕಿತ್ಸೆ ತರಬೇತಿ ಚಾಲಕರಿಗೆ ತುಂಬಾ ಉಪಯುಕ್ತ ಹಾಗೂ ಜೀವ ಉಳಿಸುವ ತರಬೇತಿಯಾಗಿದ್ದು, ವೈದ್ಯರಿಂದ ಸರಿಯಾಗಿ ತಿಳಿದುಕೊಳ್ಳಬೇಕು. ರಸ್ತೆ ಅಪಘಾತದ ಸಂದರ್ಭದಲ್ಲಿ ಅಪಘಾತಕ್ಕೊಳಗಾದ ಪ್ರಯಾಣಿಕರಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾಮಾನ್ಯರಲ್ಲಿ ದೇವರಾಗುವ ಅವಕಾಶ ವಾಹನ ಚಾಲಕರಿಗಿದೆ. ಗರ್ಭಿಣಿಯರಿಗೆ ಉಚಿತ ಆಟೋ ಸೇವೆ ನೀಡುವ ನಿಟ್ಟಿನಲ್ಲಿ ಆಟೋ ಚಾಲಕರು ಮುಂದಾಗಬೇಕು ಎಂದ ಅವರು ಹೆಚ್ಚು ಹಣ ಗಳಿಸಬೇಕೆಂಬ ಆಸೆಗಾಗಿ ಸಂಚಾರಿ ನಿಯಮಗಳು ಮರೆಯದಿರಿ. ಇಂದಿಲ್ಲಿ ತರಬೇತಿ ಪಡೆದ ವಾಹನ ಚಾಲಕರಿಗೆ ಬ್ಯಾಂಡೇಜ್, ಆಯೋಡಿನ್ ಸೇರಿದಂತೆ ಇನ್ನೀತರ ವೈದ್ಯಕೀಯ ಸಾಮಗ್ರಿವುಳ್ಳ ಪ್ರಥಮ ಚಿಕಿತ್ಸಾ ಕಿಟ್, ಪ್ರಮಾಣಪತ್ರ ನೀಡಲಾಗುತ್ತದೆ ಎಂದರು.
ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಕಾರ್ಮಿಕ ಆಯುಕ್ತ ಡಾ.ಗಿರೀಶ ಪಾಟೀಲ ಮಾತನಾಡಿ, ಚಾಲಕರು ಪ್ರಯಾಣಿಕರಿಗೆ ನಿಜವಾದ ಆಪತ್ಬಾಂಧವರಾಗಿದ್ದಾರೆ. ರಸ್ತೆ ನಿಯಮಗಳನ್ನು ಪಾಲಿಸಿ ತನ್ನ ಜೀವನವಲ್ಲದೆ ಇತರೆ ಸಹ ಪ್ರಯಾಣಿಕರ ಜೀವನ ಉಳಿಸುವ ಆದರ್ಶ ವಾಹನ ಚಾಲಕರಾಗಿ ಎಲ್ಲರು ಹೊರಹೊಮ್ಮಬೇಕು. ವಾಹನ ಚಾಲಕರು ಸೇರಿದಂತೆ ಇತರೆ ಅಸಂಘಟಿಕ ಕಾರ್ಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮತ್ತು ಕಾರ್ಮಿಕ ಇಲಾಖೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಅರುಣಕುಮಾರ ಲೋಹಿಯಾ, ಸದಸ್ಯೆ ಭಾಗ್ಯಲಕ್ಷ್ಮೀ, ಹಿರಿಯ ಕಾರ್ಮಿಕ ನಿರೀಕ್ಷಕರಾದ ರವಿಂದ್ರಕುಮಾರ, ರಮೇಶ ಎಸ್.ಸುಂಬಡ ಸೇರಿದಂತೆ ಆಟೋ ಸಂಘಗಳ ಪ್ರತಿನಿಧಿಗಳು, ನೂರಾರು ಸಂಖ್ಯೆಯಲ್ಲಿ ವಾಹನ ಚಾಲಕರು ಭಾಗವಹಿಸಿದ್ದರು. ಸಹಾಯಕ ಕಾರ್ಮಿಕ ಆಯುಕ್ತೆ ಆರತಿ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಸವಿಸ್ತಾರ ಮಾಹಿತಿ ನೀಡಿದರು.
ಸಿ.ಎಲ್.ದೇಶಪಾಂಡೆ ಸ್ವಾಗತಿಸಿದರೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ವಂದಿಸಿದರು. ಎನ್.ಸಿ.ಎಲ್.ಪಿ. ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ನಿರೂಪಣೆಗೈದರು. ನಂತರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಡಾ.ಮಲ್ಲಾರಾವ ಮಲ್ಲೆ ಅವರು ವಾಹನ ಚಾಲಕರಿಗೆ ಪ್ರಥಮ ಚಿಕಿತ್ಸೆಯ ಕುರಿತು ತರಬೇತಿ ನೀಡಿದರು.

ತೀವ್ರ ನಿಗಾ ಕಲಿಕಾ ತರಗತಿಗಳಿಗೆ ಹೈ.ಕ. ಮಂಡಳಿ ಕಾರ್ಯದರ್ಶಿ ಭೇಟಿ:
****************************************************************
ಕಲಬುರಗಿ ವಿಭಾಗದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಯತ್ನ
******************************************************************

ಕಲಬುರಗಿ,ಜ.10(ಕ.ವಾ.)-ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾವಾರು ಕಡಿಮೆ ಫಲಿತಾಂಶ ಹೊಂದಿರುವ ಹೈ.ಕ. ಭಾಗದ 542 ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ತೀವ್ರ ನಿಗಾ ಕಲಿಕಾ ತರಗತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ್ ಹೇಳಿದರು.
ಅವರು ಗುರುವಾರ ಕಲಬುರಗಿ ತಾಲೂಕಿನ ಪಾಳಾ ಮತ್ತು ಶ್ರೀನಿವಾಸ ಸರಡಗಿಗೆ ಭೇಟಿ ನೀಡಿ ಅಲ್ಲಿನ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ನಡೆಯುತ್ತಿದ್ದ ತೀವ್ರ ನಿಗಾ ಕಲಿಕಾ ತರಗತಿಯನ್ನು ಪರಿಶೀಲಿಸಿ ಮಾತನಾಡಿದರು. ಕಳೆದ 5 ವರ್ಷಗಳಲ್ಲಿ ಸತತವಾಗಿ 75 ಪ್ರತಿಶತಕ್ಕಿಂತ ಎಸ್.ಎಸ್.ಎಲ್.ಸಿ.ಯಲ್ಲಿ ಕಡಿಮೆ ಫಲಿತಾಂಶ ಹೊಂದಿರುವ ಕಲಬುರಗಿ ವಿಭಾಗದ ಪ್ರೌಢ ಶಾಲೆಗಳನ್ನು ಈ ಕಲಿತಾ ತರಬೇತಿ ಯೋಜನೆಗೆ ಆಯ್ಕೆ ಮಾಡಲಾಗಿದ್ದು, ಹೆಚ್ಚುವರಿ ತರಗತಿಗಳಲ್ಲಿ ಉತ್ತಮವಾದ ಶಿಕ್ಷಣ ನೀಡುವ ಮೂಲಕ ಫಲಿತಾಂಶ ಹೆಚ್ಚಳ ಆಗುವಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಕರಿಗೆ ನಿರ್ದೇಶನ ನೀಡಿದರು.
ಇದೇ ಜನವರಿ ಒಂದರಿಂದ ಪರೀಕ್ಷೆ ಮುಗಿಯುವವರೆಗೆ ಪ್ರತಿದಿನ ಮುಂಜಾನೆ ಮತ್ತು ಸಾಯಂಕಾಲ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ಹೆಚ್ಚುವರಿಯಾಗಿ ಒಂದು ತಾಸು ಕಲಿಕಾ ತರಗತಿ ಪ್ರಾರಂಭಿಸಲಾಗಿದೆ. ಪ್ರತಿದಿನ ಇಂಗ್ಲೀಷ, ವಿಜ್ಞಾನ ಮತ್ತು ಗಣಿತ ವಿಷಯಗಳ ಶಿಕ್ಷಕರು ಹಿಂದುಳಿದಿರುವ ಈ ಮಕ್ಕಳಿಗೆ ಪಾಠ ಮಾಡಲಿದ್ದಾರೆ. ಪರೀಕ್ಷೆಗೆ ಇನ್ನು ಎರಡು ತಿಂಗಳು ಮಾತ್ರ ಬಾಕಿ ಇರುವುದರಿಂದ ಅಷ್ಟರೊಳಗೆ ಯೋಜನೆಯಂತೆ ಬೋಧನಾ ಕಾಲಾವಧಿ ಮುಗಿಸಬೇಕು. ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದ ಅವರು ಶಾಲೆಗಳ ಸುತ್ತ ಸುತ್ತುಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಕ್ಕಳೊಂದಿಗೆ ಕುಳಿತು ತರಗತಿ ಆಲಿಸಿದ ಕಾರ್ಯದರ್ಶಿಗಳು:- ಕಲಬುರಗಿ ತಾಲೂಕಿನ ಪಾಳಾ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ತರಗತಿ ನಡೆಯುತ್ತಿರುವುದನ್ನು ಗಮನಿಸಿದ ಹೈ.ಕ.ಮಂಡಳಿ ಕಾರ್ಯದರ್ಶಿ ಸುಬೋಧ ಯಾದವ ಅವರು ನೇರವಾಗಿ ತರಗತಿ ಕೋಣೆಗೆ ಹೋಗಿ ಮಕ್ಕಳೊಂದಿಗೆ ಕುಳಿತುಕೊಂಡು ಶಿಕ್ಷಕರು ಪಾಠ ಮಾಡುತ್ತಿರುವುದನ್ನು ಖುದ್ದಾಗಿ ಆಲಿಸಿದರು.
ಶ್ರೀನಿವಾಸ ಸರಡಗಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು 70 ವಿದ್ಯಾರ್ಥಿಗಳ ಪೈಕಿ 40 ವಿದ್ಯಾರ್ಥಿಗಳು ಹಾಗೂ ಪಾಳಾ ಪ್ರೌಢ ಶಾಲೆಯಲ್ಲಿ 29 ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ತೀವ್ರ ನಿಗಾ ಕಲಿಕಾ ತರಗತಿಯ ಪ್ರಯೋಜನ ಪಡೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲಬುರಗಿ ಅಪರ ಆಯುಕ್ತಾಲಯದ ನಿರ್ದೇಶಕ ಟಿ.ನಾಯಾಯಣ ಗೌಡ, ಉಪನಿರ್ದೇಶಕ (ಯೋಜನಾ) ಎನ್.ಎಸ್.ನಾಗೂರು, ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಾಣಾಧಿಕಾರಿ ವೀರಣ್ಣ ಬೊಮ್ಮನಳ್ಳಿ, ಕಲಬುರಗಿ ಉತ್ತರ ವಲಯದ ಕ್ಷೇತ್ರ ಶಿಕ್ಷಾಣಾಧಿಕಾರಿ ಚನ್ನಬಸಪ್ಪ ಮುಧೋಳ ಸೇರಿದಂತೆ ಇನ್ನೀತರರು ಇದ್ದರು.

ಹೀಗಾಗಿ ಲೇಖನಗಳು News and photos Date: 10--01--2019
ಎಲ್ಲಾ ಲೇಖನಗಳು ಆಗಿದೆ News and photos Date: 10--01--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photos Date: 10--01--2019 ಲಿಂಕ್ ವಿಳಾಸ https://dekalungi.blogspot.com/2019/01/news-and-photos-date-10-01-2019.html

0 Response to "News and photos Date: 10--01--2019"
ಕಾಮೆಂಟ್ ಪೋಸ್ಟ್ ಮಾಡಿ