News and Photos Date: 25--01--2019

News and Photos Date: 25--01--2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photos Date: 25--01--2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photos Date: 25--01--2019
ಲಿಂಕ್ : News and Photos Date: 25--01--2019

ಓದಿ


News and Photos Date: 25--01--2019

ಲೋಕಸಭಾ ಸದಸ್ಯರ ಪ್ರವಾಸ
*****************************
ಕಲಬುರಗಿ,ಜ.25(ಕ.ವಾ)-ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಜನವರಿ 26ರಂದು ಕಲಬುರಗಿಯಲ್ಲಿ ವಿವಿಧ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.
ಜನವರಿ 27ರಂದು ಕಲಬುರಗಿಯಿಂದ ಗುರುಮಿಠಕಲ್ಗೆ ಪ್ರಯಾಣಿಸಿ ಬೆಳಿಗ್ಗೆ 11 ಗಂಟೆಗೆ ಗುರುಮಿಠಕಲ್ನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಗುರುಮಿಠಕಲ್ದಿಂದ ಸೇಡಂಗೆ ಆಗಮಿಸಿ, ರಾತ್ರಿ 9.05 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸುವರು.
ಯುವ ಮತದಾರರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಲು ಮನವಿ
**************************************************************
ಕಲಬುರಗಿ,ಜ.25(ಕ.ವಾ)-2019ರ ಜನವರಿ 1ಕ್ಕೆ 18 ವರ್ಷ ತುಂಬಿರುವ ಎಲ್ಲ ಯುವಕರು ಕಡ್ಡಾಯವಾಗಿ ಮತದಾರರ ಯಾದಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಹಾಗೂ ಚುನಾವಣಾ ಪ್ರಕ್ರಿಯೇಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಯುವಕರಲ್ಲಿ ಮನವಿ ಮಾಡಿದರು.
ಅವರು ಶುಕ್ರವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಜನಸಂಖ್ಯೆಗನುಗುಣವಾಗಿ ಜನಸಂಖ್ಯೆಯ ಶೇ. 3ರಷ್ಟು ಯುವಕರಿರಬೇಕು. ಆದರೆ ಮತದಾರರ ಯಾದಿಯಲ್ಲಿ ಪ್ರತಿ ವರ್ಷ ಶೇ. 1ರಷ್ಟು ಯುವಕರು ಮಾತ್ರ ನೋಂದಣಿಯಾಗುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗವು ಯುವ ಮತದಾರರ ನೋಂದಣಿಗೆ ಹೆಚ್ಚಿನ ಒತ್ತು ನೀಡಿದೆ ಎಂದರು.
ಯಾವುದೇ ಮತದಾರರು ನೋಂದಣಿಯಿಂದ ಬಿಟ್ಟು ಹೋಗಬಾರದು ಎಂಬುವುದು ಈ ವರ್ಷದ ರಾಷ್ಟ್ರೀಯ ಮತದಾರರ ದಿನಾಚರಣೆ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಶಾಲಾ-ಕಾಲೇಜುಗಳಲ್ಲಿ 18 ವರ್ಷ ಪೂರೈಸಿದ ಯುವ ಮತದಾರರ ನೋಂದಣಿಗೆ ಮುತುವರ್ಜಿವಹಿಸಲಾಗಿದೆ. ವಿದ್ಯಾರ್ಥಿಗಳು ಚುನಾವಣೆಯಲ್ಲಿ ಬದಲಾವಣೆ ತರುವ ರಾಯಭಾರಿಗಳಾಗಿದ್ದು, ಮತದಾನದ ದಿನ ಕಡ್ಡಾಯವಾಗಿ ತಮ್ಮ ಅಕ್ಕಪಕ್ಕದ ಕನಿಷ್ಠ 5 ಮನೆಗಳಲ್ಲಿರುವ ಎಲ್ಲ ಮತದಾರರು ಮತಚಲಾಯಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ಮತದಾನದ ಪ್ರಮಾಣ ಹೆಚ್ಚಿಗೆ ಆದಲ್ಲಿ ಒಳ್ಳೆಯ ಜನಪ್ರತಿನಿಧಿಗಳು ಆಯ್ಕೆಯಾಗುತ್ತಾರೆ ಎಂದರು.
ಗ್ರಾಮೀಣ ಭಾಗಕ್ಕಿಂತ ಪಟ್ಟಣ ಪ್ರದೇಶದಲ್ಲಿ ಹಾಗೂ ಹೆಚ್ಚು ಓದಿರುವವರು ಇರುವ ಕಡೆಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಮತದಾನದ ದಿನ ರಜೆ ಘೋಷಿಸಲಾಗುತ್ತದೆ. ಮತದಾನದ ದಿನದಂದು ಯಾರೂ ಮನೆಯಲ್ಲಿ ಉಳಿಯದೇ ಎಲ್ಲರೂ ಮತದಾನದ ಮಹತ್ವ ತಿಳಿದು ತಮ್ಮ ಶಕ್ತಿ ಪ್ರದರ್ಶನ ಮಾಡಬೇಕು. ಜಾತಿ, ಮತ, ಭಾಷೆ, ಹಣಕ್ಕೆ ಮತ ಮಾರಿಕೊಳ್ಳದೇ ಕಡ್ಡಾಯವಾಗಿ ಮತದಾನ ಮಾಡಬೇಕು. ಕೆಲವು ಜನಪ್ರತಿನಿಧಿಗಳು ಒಂದು ಮತದಿಂದ ಸೋತಿರುವ ನಿದರ್ಶನಗಳಿವೆ. ಕಾರಣ ನನ್ನದೊಂದು ಮತದಿಂದ ಯಾವ ಬದಲಾವಣೆಯಾಗಲಿದೆ ಎಂದು ಭಾವಿಸಬಾರದು. ಕಲಬುರಗಿ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 62 ಪ್ರತಿಶತ ಮತದಾನವಾಗಿದ್ದು, ಈ ಬಾರಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ. 75ಕ್ಕಿಂತ ಹೆಚ್ಚಿಗೆ ಆಗುವ ಹಾಗೆ ಮತದಾನ ಮಾಡಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ. ಪಿ. ರಾಜಾ ಮಾತನಾಡಿ, ಜನವರಿ 25 ಭಾರತ ಚುನಾವಣಾ ಆಯೋಗ ಪ್ರಾರಂಭವಾದ ದಿನವಾಗಿದೆ. ಈ ದಿನದಂದು ಮತದಾರರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಯುವಜನಾಂಗ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುತ್ತಿಲ್ಲ. ಈ ಕುರಿತು ಹಾಗೂ ಕಡ್ಡಾಯ ಮತದಾನದ ಕುರಿತು ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಮತಚಲಾಯಿಸುವುದು ಹಕ್ಕು ಮತ್ತು ಕರ್ತವ್ಯವಾಗಿದ್ದು, ಮತ ಚಲಾಯಿಸದೇ ಈ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.
ಪ್ರಥಮ ಪ್ರಯತ್ನ: ಭಾರತ ಚುನಾವಣಾ ಆಯೋಗದಿಂದ ದೃಷ್ಟಿಹೀನರಿಗೆ ಬ್ರೈಲ್ ಲಿಪಿಯಲ್ಲಿರುವ ಚುನಾವಣಾ ಗುರುತಿನ ಚೀಟಿ ಪ್ರಪ್ರಥಮ ಬಾರಿಗೆ ನೀಡಿದ್ದು, ಇದು ವಿನೂತನ ಪ್ರಯೋಗವಾಗಿದೆ. ವಿಕಲಚೇತನರು ಚುನಾವಣಾ ವೆಬ್ಸೈಟ್ನಲ್ಲಿ ಮತದಾನದ ದಿನದಂದು ಸಹಾಯ ಕೇಳಿದರೆ ಅವರನ್ನು ಮನೆಯಿಂದ ಮತಗಟ್ಟೆಗೆ ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಬ್ರೈಲ್ ಲಿಪಿ ಹೊಂದಿದ ಚುನಾವಣಾ ಗುರುತಿನ ಚೀಟಿ ಸ್ವೀಕರಿಸಿದ ದತ್ತು ಅಗರವಾಲ್ ಮಾತನಾಡಿ, ಚುನಾವಣಾ ಆಯೋಗವು ದೃಷ್ಟಿಹೀನರಿಗೆ ಬ್ರೈಲ್ ಲಿಪಿಯಲ್ಲಿ ಚುನಾವಣಾ ಗುರುತಿನ ಚೀಟಿ ನೀಡಿರುವುದು ಅತ್ಯಂತ ಪ್ರಶಂಸನೀಯ ವಿಷಯವಾಗಿದೆ. ಇ.ವಿ.ಎಂ. ಯಂತ್ರದಲ್ಲಿಯೂ ಸಹ ಬ್ರೈಲ್ ಲಿಪಿ ಅಳವಡಿಸಲಾಗುತ್ತಿದ್ದು, ಇನ್ನು ಮುಂದೆ ದೃಷ್ಟಿಹೀನರು ಬೇರೆಯವರ ಸಹಾಯ ಪಡೆಯದೆ ಸ್ವತಂತ್ರವಾಗಿ ಮತ ಚಲಾಯಿಸಬಹುದಾಗಿದೆ ಎಂದು ಮತದಾರರ ಗುರುತಿನ ಚೀಟಿಯಲ್ಲಿ ಬ್ರೈಲ್ ಪಿಲಿಯಲ್ಲಿರುವ ತಮ್ಮ ಹೆಸರನ್ನು ಓದಿ ಹರ್ಷವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ದೃಷ್ಟಿ ಹೀನರಾದ ಉಮೇಶ, ಸಂಗಮ್ಮ ಅವರಿಗೂ ಸಹ ಚುನಾವಣಾ ಗುರುತಿನ ಚೀಟಿ ವಿತರಿಸಲಾಯಿತು. ಉತ್ತಮ ಮತಗಟ್ಟೆ ಅಧಿಕಾರಿಗಳಿಗೆ ಪ್ರಮಾಣಪತ್ರ, ಪ್ರಥಮ ಬಾರಿಗೆ ಹೆಸರು ನೋಂದಾಯಿಸಿದ ಯುವ ಮತದಾರರಿಗೆ ಗುರುತಿನ ಚೀಟಿ, ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿವಿಧ ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಜಾಕನಪಲ್ಲಿ ಸರ್ಕಾರಿ ಶಾಲಾ ಮಕ್ಕಳಿಂದ ಚುನಾವಣಾ ಗೀತೆ ಹಾಗೂ ಮಾರಬ್ಯಾಡ್ ನೀ ಮತವನ್ನ ಎಣಿಸಬ್ಯಾಡ್ ನೀ ದುಡ್ಡನ್ನ ಎಂಬ ಬೀದಿ ನಾಟಕ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ, ಜಿಲ್ಲಾ ಗೃಹರಕ್ಷಕ ದಳದ ಕಮಾಂಡಂಟ್ ಸಂತೋಷ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ರಾಚಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ, ಉಪ ಅರಣ್ಯ ಅಧಿಕಾರಿ ಬಿ.ಎನ್. ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಕೆ. ಪಾಟೀಲ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ, ತಹಶೀಲ್ದಾರ ಸಂಜೀವಕುಮಾರ ಮತ್ತಿತರರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಜಿಲ್ಲಾಡಳಿತ, ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಸಾವಿರಾರು ವಿದ್ಯಾರ್ಥಿಗಳನ್ನೊಳಗೊಂಡ ಜಾಥಾವು ಚಂದ್ರಶೇಖರ ಪಾಟೀಲ ಕ್ರೀಡಾಂಗಣದಿಂದ ಪ್ರಾರಂಭವಾಗಿ ರಂಗಮಂದಿರದಲ್ಲಿ ಆಗಮಿಸಿ ಕೊನೆಗೊಂಡಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್.ಮಾಣಿಕ್ಯ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಫೆಬ್ರವರಿ 1ರಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವಾರ್ಷಿಕ ಸಮ್ಮೇಳನ
**********************************************************************
ಕಲಬುರಗಿ,ಜ.25.(ಕ.ವಾ)-ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಬೆಂಗಳೂರಿನ ಎನ್.ಎಂ.ಕೆ.ಆರ್.ವಿ. ಕಾಲೇಜಿನ ಇವುಗಳ ಸಹಯೋಗದೊಂದಿಗೆ “ಸಮಾನ ಒಳಿತಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಆಯಾಮಗಳು” ಕೇಂದ್ರ ವಿಷಯ ಕುರಿತು ಹನ್ನೊಂದನೇ ಪ್ರಧಾನ ಸಮ್ಮೇಳನವನ್ನು 2019ರ ಫೆಬ್ರುವರಿ 1 ಹಾಗೂ 2ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ. ರಮೇಶ ತಿಳಿಸಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ಖ್ಯಾತ ವಿಜ್ಞಾನಿ ಹಾಗೂ ಮುಂಬೈಯಿನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ ಸಂಸ್ಥೆಯ ನಿವೃತ್ತ ನಿರ್ದೇಶಕ ಹಾಗೂ ಪದ್ಮಭೂಷಣ ಪುರಸ್ಕøತರಾದ ಡಾ.ಬಿ.ವಿ.ಶ್ರೀಕಂಠನ್ ಅವರು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಸಮ್ಮೇಳನದಲ್ಲಿ ಅವರಿಗೆ ಒಂದು ಲಕ್ಷ ನಗದು, ಐವತ್ತು ಸಾವಿರ ರೂಪಾಯಿ ಮೌಲ್ಯದ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಾಲನ್ಯಾಯ ಮಂಡಳಿಗೆ ಸದಸ್ಯರ ನೇಮಕ: ಅರ್ಜಿ ಆಹ್ವಾನ
****************************************************
ಕಲಬುರಗಿ,ಜ.25.(ಕ.ವಾ)-ಕಲಬುರಗಿ ಬಾಲನ್ಯಾಯ ಮಂಡಳಿಗೆ ಸದಸ್ಯರ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚುವರಿ ಬಾಲನ್ಯಾಯ ಮಂಡಳಿಯನ್ನು ರಚಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಮಂಡಳಿಗೆ 2019ರಿಂದ 2022ವರೆಗೆ ಮೂರು ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ, ಸೂಚನೆಗಳು, ವಿಶೇಷ ಸೂಚನೆಗಳು, ದೃಢೀಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಿತಿತಿ.ಜತಿಛಿಜ.ಞಚಿಡಿ.gov.iಟಿ ವೆಬ್ಸೈಟ್ದಿಂದ ಪಡೆಯಬಹುದಾಗಿದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ನೋಂದಾಯಿತ ಅಂಚೆ ಮೂಲಕ ಅಥವಾ ಖುದ್ದಾಗಿ 2019ರ ಜನವರಿ 30ರ ಸಂಜೆ 5.30 ಗಂಟೆಯೊಳಗಾಗಿ ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಕೇರ್ ಆಫ್ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೊದಲನೇ ಮಹಡಿ, ಬಹು ಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ ವಿಧಿ ಬೆಂಗಳೂರು-560001 ಈ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ಬೆಂಗಳೂರ ಕಚೇರಿಯ ದೂರವಾಣಿ ಸಂಖ್ಯೆ 080-22879381/82 ಅಥವಾ ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08472-243219ಗೆ ಸಂಪರ್ಕಿಸಬೇಕು. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಸೆಕ್ಷನ್ (4)ರನ್ವಯ ಒಂದು ಜಿಲ್ಲೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಲನ್ಯಾಯ ಮಂಡಳಿಗಳನ್ನು ಸ್ಥಾಪಿಸಲು ಅವಕಾಶವಿರುತ್ತದೆ ಅವರು ತಿಳಿಸಿದ್ದಾರೆ.

ಅಕಾಡೆಮಿಯಿಂದ ಕಾರ್ಯಾಗಾರ: ಹೆಸರು ನೋಂದಣಿಗೆ ಸೂಚನೆ
********************************************************
ಕಲಬುರಗಿ ಜ.25 (ಕ.ವಾ)-ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಚಲಿತ/ ಮುಂಚೂಣಿ ವಿಷಯಗಳ ಕುರಿತು 2019ರ ಫೆಬ್ರವರಿ 7 ರಿಂದ 9ರವರೆಗೆ ಬೆಂಗಳೂರಿನ ಅಕಾಡೆಮಿ ಕಚೇರಿಯಲ್ಲಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ. ರಮೇಶ ಅವರು ತಿಳಿಸಿದ್ದಾರೆ.
ಎನ್ವರಾನ್ಮೆಂಟಲ್ ಇಂಪ್ಯಾಕ್ಟ ಅಸೆಸ್ಮೆಂಟ್ ಎಂಬ ವಿಷಯ ಕುರಿತು ಏರ್ಪಡಿಸಲಾದ ಈ ಕಾರ್ಯಾಗಾರದಲ್ಲಿ ಜಿಲ್ಲೆಯ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರುಗಳಿಗೆ ಭಾಗವಹಿಸಬಹುದಾಗಿದೆ. ಆಸಕ್ತರು ತಮ್ಮ ಹೆಸರನ್ನು 2019ರ ಫೆಬ್ರವರಿ 5ರೊಳಗಾಗಿ ನೋಂದಾಣಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ ತಿತಿತಿ.ಞsಣಚಿಛಿಚಿಜemಥಿ.iಟಿ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಜನವರಿ 28ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
**********************************************
ಕಲಬುರಗಿ,ಜ.25.(ಕ.ವಾ.)-ಜೆಸ್ಕಾಂನ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ 33ಕೆ.ವಿ. ವಿಕೆ ಸಲಗರ ಮಾರ್ಗದ ಮೇಲೆ 33ಕೆ.ವಿ. ಕಮಲಾಪುರ ಮಾರ್ಗ ಜೋಡಿಸುವ ಕೆಲಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇದೇ ಜನವರಿ 28 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸದರಿ ಫೀಡರಗಳ ವ್ಯಾಪ್ತಿಯ ಬರುವ ಗ್ರಾಮ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಕೇಂದ್ರ ಹಾಗೂ ಫೀಡರಗಳ ವಿವರ ಇಂತಿದೆ. 33/11.ಕೆ.ವಿ. ವಿ.ಕೆ. ಸಲಗರ ವಿದ್ಯುತ್ ವಿತರಣಾ ಕೇಂದ್ರ- ಅಂಬಲಗಾ, ವಿ.ಕೆ. ಸಲಗರ, ಬೆಳಮಗಿ, ಕರಹರಿ, ಮುದ್ದಡಗಾ ಫೀಡರಗಳು ಹಾಗೂ 110/33/11ಕೆ.ವಿ. ಮಹಾಗಾಂವ ವಿತರಣಾ ಕೇಂದ್ರ: ಎಫ್-1 ಕುರಕೋಟಾ ಎನ್.ಜೆ.ವಾಯ್., ಎಫ್-7 ಬಬಲಾದ ಐಪಿ ಹಾಗೂ ಎಫ್-8 ಮಹಾಗಾಂವ ಐಪಿ ಫೀಡರಗಳು.

ಜನನ-ಮರಣ ನೋಂದಣಿ ನಿಯಮಗಳು ಮತ್ತು
------------------------------------------------
ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ
*********************************************************
ಕಲಬುರಗಿ,ಜ.25.(ಕ.ವಾ.)-ಜನನ-ಮರಣ ನೋಂದಣಿ ನಿಯಮಗಳ ಮತ್ತು ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತು ಕಲಬುರಗಿ ಜಿಲ್ಲೆಯ ನಗರಸಭೆ, ಪುರಸಭೆ, ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ವೈದ್ಯಾಧಿಕಾರಿಗಳಿಗೆ ಹಾಗೂ ಡೆಟಾ ಎಂಟ್ರಿ ಆಪರೇಟರುಗಳು ಮತ್ತು ಎಲ್ಲಾ ತಾಲೂಕಿನ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಇದೇ ಜನವರಿ 28 ರಿಂದ ಫೆಬ್ರವರಿ 1ರವರೆಗೆ ಪ್ರತಿದಿನ ಬೆಳಿಗ್ಗೆ 10.30 ಗಂಟೆಯಿಂದ ಸಾಯಂಕಾಲ 5.30 ಗಂಟೆಯವರೆಗೆ ತರಬೇತಿ ಕಾರ್ಯಾಗಾರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ಪ್ರಾದೇಶಿಕ ತರಬೇತಿ ಕೇಂದ್ರದ ಹತ್ತಿರವಿರುವ ಹೆಚ್.ಐ.ಟಿ. ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ತಿಳಿಸಿದ್ದಾರೆ.
ತರಬೇತಿ ಕಾರ್ಯಾಗಾರದ ವೇಳಾ ಪಟ್ಟಿ ಇಂತಿದೆ. ಜನವರಿ 28 ರಂದು ಆಳಂದ, ಚಿಂಚೋಳಿ ಹಾಗೂ ಸೇಡಂ ತಾಲೂಕುಗಳ ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಿಗರು, ಡೆಟಾ ಎಂಟ್ರಿ ಆಪರೇಟರುಗಳಿಗೆ, ಜನವರಿ 29 ರಂದು ಚಿತ್ತಾಪುರ ಹಾಗೂ ಜೇವರ್ಗಿ ತಾಲೂಕುಗಳ ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಿಗರು, ಡೆಟಾ ಎಂಟ್ರಿ ಆಪರೇಟರುಗಳಿಗೆ ಹಾಗೂ ಜನವರಿ 30 ರಂದು ಅಫಜಲಪುರ ಹಾಗೂ ಕಲಬುರಗಿ ತಾಲೂಕುಗಳ ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಿಗರು, ಡೆಟಾ ಎಂಟ್ರಿ ಆಪರೇಟರುಗಳಿಗೆ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ಜನವರಿ 31ರಂದು ಅಫಜಲಪುರ, ಚಿಂಚೋಳಿ, ಸೇಡಂ, ಚಿತ್ತಾಪುರ, ಆಳಂದ ಹಾಗೂ ಜೇವರ್ಗಿ ತಾಲೂಕುಗಳ ಪುರಸಭೆಗಳ ಮುಖ್ಯಾಧಿಕಾರಿಗಳಿಗೆ, ವೈದ್ಯಾಧಿಕಾರಿಗಳಿಗೆ ಹಾಗೂ ಡೆಟಾ ಎಂಟ್ರಿ ಆಪರೇಟರುಗಳಿಗೆ ಹಾಗೂ ಫೆಬ್ರವರಿ













ಹೀಗಾಗಿ ಲೇಖನಗಳು News and Photos Date: 25--01--2019

ಎಲ್ಲಾ ಲೇಖನಗಳು ಆಗಿದೆ News and Photos Date: 25--01--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photos Date: 25--01--2019 ಲಿಂಕ್ ವಿಳಾಸ https://dekalungi.blogspot.com/2019/01/news-and-photos-date-25-01-2019.html

Subscribe to receive free email updates:

0 Response to "News and Photos Date: 25--01--2019"

ಕಾಮೆಂಟ್‌‌ ಪೋಸ್ಟ್‌ ಮಾಡಿ