News and photos Date: 26--01--2019

News and photos Date: 26--01--2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photos Date: 26--01--2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photos Date: 26--01--2019
ಲಿಂಕ್ : News and photos Date: 26--01--2019

ಓದಿ


News and photos Date: 26--01--2019

ರೈತರ ಮೇಲಿರುವ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧ
****************************************************
ಕಲಬುರಗಿ,ಜ.26.(ಕ.ವಾ.)-ರೈತರ ಮೇಲಿರುವ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ವಿವಿಧ ವಾಣಿಜ್ಯ ಬ್ಯಾಂಕುಗಳಲ್ಲಿ ಸಾಲ ಪಡೆದ ಒಟ್ಟು 2.21 ಲಕ್ಷ ರೈತರ ಸಾಲ ಮನ್ನಾ ಮಾಡಲು ಸರ್ಕಾರ ಸುಮಾರು 447 ಕೋಟಿ ರೂ.ಗಿಂತ ಹೆಚ್ಚು ಅನುದಾನವನ್ನು ಸಂಬಂಧಪಟ್ಟ ಬ್ಯಾಂಕುಗಳಿಗೆ ಮರು ಪಾವತಿಗಾಗಿ ಜಮಾ ಮಾಡಿದೆ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.
ಅವರ ಶನಿವಾರ ಕಲಬುರಗಿ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಭಾರತದ 70ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಹಾಗೂ ವಿವಿಧ ಪಡೆಗಳಿಂದ ವಂದನೆ ಸ್ವೀಕರಿಸಿ ಮಾತನಾಡಿದರು.
ರಾಜ್ಯದ ಸಮ್ಮಿಶ್ರ ಸರ್ಕಾರ ಈ ಹಿಂದಿನ ಯಶಸ್ವಿ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಬರುತ್ತಿದೆ. ಜನಪರ ಹಾಗೂ ಬಡವರ ಯೋಜನೆಗಳಾದ ಅನ್ನಭಾಗ್ಯ, ಕೃಷಿ ಭಾಗ್ಯ ಸೇರಿದಂತೆ ಹಲವಾರು ಯೋಜನೆಗಳಿಗೆ ಮತ್ತಷ್ಟು ಒತ್ತು ನೀಡಲಾಗಿದೆ. ಸಮಾಜಕಲ್ಯಾಣ ಇಲಾಖೆಯ ವತಿಯಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯದ 3500 ವಿದ್ಯಾರ್ಥಿ ನಿಲಯಗಳು ಹಾಗೂ 800 ವಸತಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸಮಗ್ರ ಅಭಿವೃದ್ದಿ ಮಾಡಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದರು.
ಕಲಬುರಗಿ ನಗರದಲ್ಲಿ 46.18 ಕೋಟಿ ರೂ. ವೆಚ್ಚದಲ್ಲಿ 5 ನೂತನ ಮಾದರಿ ವಸತಿನಿಲಯಗಳು ಹಾಗೂ ಜೇವರ್ಗಿಯಲ್ಲಿ 15.66 ಕೋಟಿ ರೂ.ಗಳ ವೆಚ್ಚದಲ್ಲಿ ಮೋರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸ್ಥಾಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪಗತಿ ತಾಂಡಾ ಯೋಜನೆ, ಐರಾವತ, ಉನ್ನತಿ, ಸಮೃದ್ದಿ, ಪ್ರಗತಿ ಕಾಲನಿ ಹಾಗೂ ಪ್ರಬುದ್ದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ ಯುವತಿಯರಿಗೆ, ಉದ್ದಿಮೆದಾರರಿಗೆ, ಉನ್ನತ ಶಿಕ್ಷಣ ಆಕಾಂಕ್ಷಿಗಳಿಗೆ ಆರ್ಥಿಕ ಸಹಾಯ ಹಾಗೂ ಮೂಲಭೂತ ಸೌಲಭ್ಯ ವಂಚಿತ ಕಾಲನಿಗಳ ಸಮಗ್ರ ಅಭಿವೃದ್ದಿಯನ್ನು ಈ ಯೋಜನೆಗಳ ಅನ್ವಯ ಕೈಗೊಳ್ಳಲಾಗುವುದು. ಹೈ.ಕ. ಅಭಿವೃದ್ದಿ ಮಂಡಳಿಗೆ 2017-18 ರÀವರೆಗೆ ಒಟ್ಟು 4500 ಕೋಟಿ ರೂ.ಗಳ ಅನುದಾನ ಹಂಚಿಕೆಯಾಗಿದ್ದು 2337.39 ಕೋಟಿ ರೂ.ಗಳ ವೆಚ್ಚದಲ್ಲಿ 13,722 ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ 2018-19ನೇ ಸಾಲಿನಲ್ಲಿ 29.41 ಲಕ್ಷ ಮಾನವದಿನಗಳನ್ನು ನಿಗದಿಪಡಿಸಲಾಗಿದ್ದು, ಈ ಪೈಕಿ ಈಗಾಗಲೇ 21.33 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ ಹಾಗೂ ರೂ 1.42 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಿ ಅವರಿಗೆ 62 ಕೋಟಿ ರೂ.ಗಳ ಕೂಲಿ ಹಣವನ್ನು ಪಾವತಿಸಲಾಗಿದೆ. ಹಸಿವು ಮುಕ್ತ ಕರ್ನಾಟಕದ ಕನಸು ನಮ್ಮದು. ಈ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 5.35 ಲಕ್ಷ ಆದ್ಯತಾ ಕುಟುಂಬಗಳಿಗೆ ಹಾಗೂ 8502 ಆದ್ಯತೇತರ ಕುಟುಂಬಗಳ ಪ್ರತಿ ವ್ಯಕ್ತಿಗೆ ತಿಂಗಳೊಂದಕ್ಕೆ 7 ಕೆಜಿ ಅಕ್ಕಿಯನ್ನು ಉಚಿತವಾಗಿ ಹಾಗೂ 1 ಕೆಜಿ ತೊಗರಿಬೇಳೆಯನ್ನು 38 ರೂ.ನಂತೆ ವಿತರಿಸಲಾಗುತ್ತಿದೆ. ಜೊತೆಗೆ 2.29 ಲಕ್ಷ ಅನಿಲರಹಿತ ಕುಟುಂಬಗಳಿಗೆ ಪ್ರತಿ ತಿಂಗಳು ಸೀಮೆ ಎಣ್ಣೆ ವಿತರಿಸಲಾಗುತ್ತಿದೆ ಎಂದರು.
ಸಂವಿಧಾನದ ಅಡಿಯಲ್ಲಿ ಸರ್ವರಿಗೆ ಸಮಪಾಲು, ಸರ್ವರಿಗೆ ಸಮಬಾಳು ತತ್ವದ ಅಡಿಯಲ್ಲಿ ರಾಜ್ಯದ ಎಲ್ಲ ಧರ್ಮದ, ವರ್ಗದ ಜನರ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದ್ದು, ನಾಡಿನ ಜನರು ಸರ್ಕಾರÀಕ್ಕೆ ತಮ್ಮ ಅಮೂಲ್ಯ ಸಹಕಾರ ಹಾಗೂ ಸಲಹೆ ನೀಡುವ ಮೂಲಕ ಜನರ ಮತ್ತಷ್ಟು ಸೇವೆ ಮಾಡಲು ಪ್ರೋತ್ಸಾಹಿಸಬೇಕು ಎಂದರು.
ನಮ್ಮ ದೇಶದ ಸಂವಿಧಾನ ರಚನೆ ಅಷ್ಟೊಂದು ಸಲೀಸಾದ ಕೆಲಸವಾಗಿರಲಿಲ್ಲ. ಸರ್ವಧರ್ಮ, ಬೇರೆ ಬೇರೆ ಭಾಷೆ, ವಿಶಿಷ್ಟ ಆಚರಣೆಯನ್ನು ಪಾಲಿಸುತ್ತಿದ್ದ ದೇಶದ ವಾಸಿಗಳ ಹಕ್ಕು ಕಾಪಾಡಲು ಸಂವಿಧಾನ ರಚನೆ ಮಾಡುವ ಅವಶ್ಯಕತೆ ಇತ್ತು. ಡಾ ಬಾಬಾಸಾಹೇಬ್ ಅವರನ್ನು ಕರಡು ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಇಂಗ್ಲೆಂಡ್, ಜಪಾನ್, ಐರ್ಲೆಂಡ್ ಸೇರಿದಂತೆ ಹಲವಾರಹ ದೇಶಗಳ ಸಂವಿಧಾನಗಳ ಅಧ್ಯಯನ ಮಾಡಿ ಡಾ ಅಂಬೇಡ್ಕರ್ ಅವರು ಸಂವಿಧಾನದ ಕರಡು ರಚಿಸಿದರು. ಕರಡು
ರಚಿಸಿದ ಮೇಲೆ ಅದರ ಮೇಲೆ ಸುಮಾರು 114 ದಿನಗಳ ಕಾಲ ಸುದೀರ್ಘ ಚರ್ಚೆ ನಡೆದು ಅಂತಿಮವಾಗಿ ಜನೇವರಿ 26, 1950 ರಂದು ಸಂವಿಧಾನ ಜಾರಿಗೆ ಬಂದಿತು. ಭಾರತದಂತಹ ಸಂವಿಧಾನ ಜಗತ್ತಿನ ಯಾವ ದೇಶದಲ್ಲಿ ಅಸ್ತಿತ್ವದಲ್ಲಿಲ್ಲ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದರು.
ಭಾರತದ 70ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಕಲಬುರಗಿ ಪ್ರೊಬೇಷನರಿ ಎ.ಎಸ್.ಪಿ. ರಾಮ ರಾಜನ್ ಹಾಗೂ ಸಹಾಯಕ ಪರೇಡ್ ಕಮಾಂಡರ್ ಆರ್.ಪಿ.ಐ. ಚನ್ನಬಸವ ಅವರ ನೇತೃತ್ವದಲ್ಲಿ ನಡೆದ ಪರೇಡಿನಲ್ಲಿ ಡಿ.ಎ.ಆರ್., ಕೆ.ಎಸ್.ಆರ್.ಪಿ., ಸಿವಿಲ್ ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಅಬಕಾರಿ ಇಲಾಖೆ, ಎನ್.ಸಿ.ಸಿ. ಹಿರಿಯ ಬಾಲಕ/ಬಾಲಕಿಯರು, ಜವಾಹರ ನವೋದಯ ವಸತಿ ಶಾಲೆ, ಕೆ.ಸಿ.ಇ.ಡಿ.ಟಿ.ಬಾಲಕಿಯರ ಪ್ರೌಢಶಾಲೆ ರೆಡ್‍ಕ್ರಾಸ್ ಶಾಖೆ, ತಾರಫೈಲ್ ಸರ್ಕಾರಿ ಪ್ರೌಢಶಾಲೆ ಭಾರತ ಸೇವಾ ದಳ ಶಾಖೆ, ಮುರಾರ್ಜಿ ದೇಸಾಯಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಸತಿ ಶಾಲೆ, ಸ್ಕೌಟ್ಸ್ ಬಾಲಕರು, ಗೈಡ್ಸ್ ಬಾಲಕಿಯರು, ಸರ್ಕಾರಿ ಅಂಧ ಬಾಲಕರ ವಸತಿ ಶಾಲೆ, ಪೊಲೀಸ್ ವಾದ್ಯ ವಂದ ಸೇರಿದಂತೆ ಒಟ್ಟು 17 ತುಕಡಿಗಳಿಂದ ಸಚಿವರು ಪರೇಡ್ ವಂದನೆ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ವೆಂಕಟರಾವ ಅರ್ಜುನರಾವ, ಬಾಬುರಾವ ಶಂಕರರಾವ ದೇಶಮುಖ ಹಾಗೂ ಸೀತಾರಾಂ ಚವ್ಹಾಣ ಅವರನ್ನು ಸನ್ಮಾನಿಸಲಾಯಿತು. ಸರ್ವೋತ್ತಮ ಪ್ರಶಸ್ತಿ ಪಡೆದ ಕಲಬುರಗಿ ಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಡಾ. ಶಿವಾನಂದ ಲೇಂಗಟಿ, ಜಿಮ್ಸ್‍ನ ವೈದ್ಯ ಡಾ. ಸಂದೀಪ, ಖಜಾನೆ ಇಲಾಖೆಯ ಉಪನಿರ್ದೇಶಕ ಗೊಬ್ಬೂರ ದತ್ತಪ್ಪಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹ್ಮದ್ ಸಲೀಮ್, ಆಳಂದ ಕೈಗಾರಿಕಾ ವಿಸ್ತರಣಾಧಿಕಾರಿ ಜಾಫರ ಖಾಸಿಂ ಅನ್ಸಾರಿ ಹಾಗೂ ಪಟ್ಟಣ ನಾಡ ಕಚೇರಿಯ ಗ್ರಾಮ ಲೆಕ್ಕಿಗ ಶ್ರೀವತ್ಸ ಅವರುಗಳಿಗೆ ತಲಾ 10,000 ರೂ. ಗಳ ಚೆಕ್ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಅದೇ ರೀತಿ ಉತ್ತಮ ಸೇವಾ ಪ್ರಶಸ್ತಿ ಪಡೆದ ಕಲಬುರಗಿ ಅಶೋಕ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ರಮೇಶ ಕಾಂಬಳೆ, ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರ ಸಂಜೀವಕುಮಾರ ಪಾಟೀಲ, ಜಿಲ್ಲಾ ಆಸ್ಪತ್ರೆಯ ಹಿರಿಯ ಪ್ರಯೋಗ ಶಾಲೆ ತಂತ್ರಜ್ಞ ಮಹ್ಮದ ಅಬ್ದುಲ್ ಹೈ, ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಛಾಯಾಗ್ರಾಹಕ ತುಳಜಾರಾಮ ಪವಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಪ್ರಥಮ ದರ್ಜೆ ಸಹಾಯಕ ರಾಘವೇಂದ್ರ ಅವರನ್ನು ಉತ್ತಮ ಸೇವಾ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ನ್ಯೂಸ್ 18 ವರದಿಗಾರ ಡಾ. ಶಿವಾರಾಂ ಅಸುಂಡಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದ ವಿಜಯವಾಣಿ ವರದಿಗಾರ ಪ್ರಭಾಕರ ಜೋಶಿ ಅವರನ್ನು ಜಿಲ್ಲಾಡಳಿತದಿಂದ ಸನ್ಮಾಯಿಸಲಾಯಿತು. 2018-19ನೇ ಸಾಲಿನ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ 7 ಜನರನ್ನು ಹಾಗೂ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾದ 7 ಜನ ರೈತರನ್ನು ಕೃಷಿ ಇಲಾಖೆಯಿಂದ ಸನ್ಮಾನಿಸಲಾಯಿತು. ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗಕ್ಕಾಗಿ ನೀಡಲಾಗುವ 1 ಲಕ್ಷ ರೂ.ಗಳ ನೇರಸಾಲ ಚೆಕ್‍ನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಗಣರಾಜ್ಯೋತ್ಸವದ ಅಂಗವಾಗಿ ಕಲಬುರಗಿ ನಗರದ ವಿವಿಧ ಶಾಲೆಗಳ 1650 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಜರುಗಿದ ಅತ್ಯಾಕರ್ಷಕ ಮತ್ತು ಮನಮೋಹಕ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ದೇಶಭಕ್ತಿ ಮತ್ತು ತ್ಯಾಗ ಬಲಿದಾನಗಳ ವಿವಿಧ ರೋಮಾಂಚಕ ಸನ್ನಿವೇಶಗಳು ಪ್ರದರ್ಶಿತವಾದವು. ಸರ್ಕಾರದ ವಿವಿಧ ಯೋಜನೆಗಳನ್ನು ಸಾರ್ವಜನಿಕರನ್ನು ತಲುಪಿಸಲು ಸಾರ್ವಜನಿಕ ಶಿಕ್ಷಣ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ, ಯುವಜನಸೇವಾ ಮತ್ತು ಕ್ರೀಡಾ ಇಲಾಖೆ, ನಗರಾಭಿವೃದ್ಧಿ ಹಾಗೂ ಆಹಾರ ಇಲಾಖೆಗಳಿಂದ ನಿರ್ಮಿಸಿದ ಸ್ಟಾಲ್‍ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಿದರು.
ಕಲಬುರಗಿಯ ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ, ಅರಣ್ಯ ಇಲಾಖೆ, ಮಹಾನಗರಪಾಲಿಕೆ, ಪ್ರವಾಸೋದ್ಯಮ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಮಳಖೇಡದ ಅಲ್ಟ್ರಾಟೆಕ್ ಸಿಮೆಂಟ್ ಲಿ. (ಯುನಿಟ್ ರಾಜಶ್ರೀ ಸಿಮೆಂಟ್ ವಕ್ಸ್) ಇಲಾಖೆಗಳ ಸ್ತಬ್ದ ಚಿತ್ರಗಳ ಪ್ರದರ್ಶನವು ಎಲ್ಲರ ಗಮನ ಸೆಳೆಯಿತು. ಇದೇ ಸಂದರ್ಭದಲ್ಲಿ ಕಲಬುರಗಿ ಸಂಸದ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್. ನಾಗಮೋಹನ ದಾಸ್ ಅವರು ರಚಿಸಿದ “ಸಂವಿಧಾನ ಓದು” ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿಯನ್ನು ಬಿಡುಗಡೆ ಮಾಡಿದರು. ಕಲಬುರಗಿ ಆಗ್ನಿಶಾಮಕ ದಳದ ಬೆಂಕಿ ನಂದಿಸುವ ಹಾಗೂ ಜನರನ್ನು ರಕ್ಷಿಸುವ ಕುರಿತು ಅಣುಕು ಪ್ರದರ್ಶನವು ಎಲ್ಲರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ವಿಧಾನಸಭಾ ಶಾಸಕಿ ಕನೀಜ್ ಫಾತೀಮಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಮಹಾನಗರಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಭೋದ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ ಕರ್ಬೀಕರ್, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಮಹಾನಗರ ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರ್ರನುಮ್, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಸೇರಿದಂತೆ ಮತ್ತಿತರ ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದರು.
ಭ್ರಷ್ಟಾಚಾರ ಕ್ಯಾನ್ಸರ್‍ಗಿಂತ ಭಯಾನಕ, ಕಿತ್ತೊಗೆಯಲು ಪಣತೊಡಿ
*********************************************************
-ನ್ಯಾ. ಬಿ.ವೀರಪ್ಪ
****************
ಕಲಬುರಗಿ,ಜ.26.(ಕ.ವಾ.)-ಭ್ರಷ್ಟಾಚಾರವು ಕ್ಯಾನ್ಸರ್‍ಗಿಂತ ಭಯಾನಕÀವಾಗಿದ್ದು ದೇಶದ ಪ್ರಗತಿಗೆ ಅಡ್ಡಿಯಾಗಿದೆ. ಇದನ್ನು ಬೇರು ಸಮೇತ ಕಿತ್ತೊಗೆಯಲು ಎಲ್ಲರು ಪಣ ತೊಡಬೇಕು ಎಂದು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ.ಬೀರಪ್ಪ ಹೇಳಿದರು.
ಅವರು ಶನಿವಾರ ಇಲ್ಲಿನ ಉಚ್ಚ ನ್ಯಾಯಾಲಯದಲ್ಲಿ 70ನೇ ಗಣರಾಜ್ಯೋತ್ಸವದ ನಿಮಿತ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಅಧಿಕಾರ ವ್ಯಾಮೋಹ, ಸ್ವಹಿತಾಸಕ್ತಿ, ಸೃಜನ ಪಕ್ಷಪಾತ, ಹಣದ ದಾಹ, ಭ್ರಷ್ಠಾಚಾರ ಸಮಾಜದಲ್ಲಿ ಹೆಚ್ಚಾಗಿ ರಾಷ್ಟ್ರಪ್ರೇಮ ಆತಂಕದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ದಿನಾಚರಣೆಗಳು ದೇಶದ ಎರಡು ರಾಷ್ಟ್ರೀಯ ಹಬ್ಬಗಳಾಗಿವೆ. ದಿನಾಚರಣೆಗೆ ಮಾತ್ರ ರಾಷ್ಟ್ರಪ್ರೇಮ ಸೀಮಿತವಾಗದೆ ಪ್ರತಿದಿನ ನಮ್ಮ ರಕ್ತದಲ್ಲಿ ರಾಷ್ಟ್ರಪ್ರೇಮ ಅಡಗಿರಬೇಕು. ಅನ್ಯಾಯ, ಅತ್ಯಾಚಾರ ಕಂಡಾಗ ಅದರ ವಿರುದ್ಧ ಸಿಡಿದೇಳಬೇಕು. ದೇಶದ ರಕ್ಷಣೆ ಕೇವಲ ಸೈನಿಕರ ಕೆಲಸ ಮಾತ್ರವಲ್ಲ, ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ತನ್ನ ಕೆಲಸದಲ್ಲಿ ಕಾಯ, ವಾಚ, ಮನಸ್ಸು, ಶ್ರದ್ಧೆಯಿಂದ ದೇಶದ ಪ್ರಗತಿಗೆ ದುಡಿದಾಗ ಮಾತ್ರ ಸ್ವರಾಜ್ಯದ ಮೂಲ ಆಶಯ ಸಾರ್ಥಕವಾಗುತ್ತದೆ ಹಾಗೂ ಸ್ವಾತಂತ್ರ ದೊರಕಿಸಿಕೊಟ್ಟ ಅಸಂಖ್ಯಾತ ಸ್ವಾತಂತ್ರ ಸೇನಾನಿಗಳಿಗೆ ನಾವು ಸಲ್ಲಿಸುವ ನಿಜವಾದ ಗೌರವದ ಪರಿ ಇದಾಗುತ್ತದೆ ಎಂದರು.
ದೇಶದ ರಕ್ಷಣೆಗೆ ಸೈನಿಕರು ಪ್ರಾಣದ ಹಂಗು ಲೆಕ್ಕಿಸದೆ ಗಡಿಯಲ್ಲಿ ದೇಶದ ನಿವಾಸಿಗಳ ಭದ್ರತೆಗೆ ಟೊಂಕ ಕಟ್ಟಿ ನಿಂತಿದ್ದಾರೆ. ದೇಶದ ಪ್ರತಿ ಪ್ರಜೆಯೂ ಗೌರವ ಮತ್ತು ಘನತೆಯಿಂದ ಬದುಕಲು ಸಮಾನತೆ, ಸ್ವಾತಂತ್ರವನ್ನು ಜಾತಿ, ಮತ ಬೇಧವಿಲ್ಲದೆ ಸಂವಿಧಾನವು ನಮಗೆ ಸಮನಾಗಿ ನೀಡಿದೆ. ಇಷ್ಟೆಲ್ಲ ಪಡೆದುಕೊಂಡಿರುವ ನಾವು ದೇಶದ ರಕ್ಷಣೆ ಮತ್ತು ಪ್ರಗತಿಗೆ ನಮ್ಮ ಕೊಡುಗೆ ಏನು ಎಂಬುದನ್ನು ಎಲ್ಲರು ಆತ್ಮಾವಲೋಕನ ಮಾಡಿಕೊಳ್ಳಬೇಕು. ನಿವೃತ್ತ ಸೈನಿಕ ಹಾಗೂ ಸೈನಿಕನ ಕುಟುಂಬಕ್ಕೆ ಸಿಗಬೇಕಾದ ಸವಲತ್ತುಗಳು ಸಿಗದೆ ಸೈನಿಕನ ಕುಟುಂಬ ನ್ಯಾಯಾಲಯಕ್ಕೆ ಅಲೆದಾಡುತ್ತಿರುವುದು ತುಂಬಾ ನೋವಿನ ಸಂಗತಿ. ಸೈನಿಕನ ಕುಟುಂಬಕ್ಕೆ ನೆರವು ನೀಡಬೇಕಾಗಿರುವುದು ಸರ್ಕಾರ ಹಾಗೂ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ದೇಶದ ಬೆನ್ನೆಲಬು ರೈತ ಅನ್ನುತ್ತೇವೆ. ಆದರೆ ಇಂದು ಅದೆ ರೈತ ಸಮರ್ಪಕ ಮಳೆ ಬಾರದೆ ಹಾಗೂ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಆತ್ಮಹತ್ಯೆಗೆ ಬಲಿಯಾಗುತ್ತಿರುವುದು ತುಂಬಾ ಆತಂಕಕಾರಿ ವಿಷಯವಾಗಿದೆ ಎಂದರು.
ಇತ್ತೀಚೆಗೆ ಸಮಾಜದಲ್ಲಿ ಕುಟುಂಬದ ಸದಸ್ಯರೊಂದಿಗೆ ಪರಸ್ಪರ ಪ್ರೀತಿ, ಸಹೋದರತ್ವ ಬದಲಾಗಿ ವೈಮನಸ್ಸು ಹೆಚ್ಚಾಗಿದೆ. ಹೆತ್ತ ತಂದೆ-ತಾಯಿಗಳಿಗೆ ಸಂಧ್ಯಾಕಾಲದಲ್ಲಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದು ನಾಗರಿಕ ಸಮಾಜವು ತಲೆ ತಗ್ಗಿಸುವ ವಿಷಯವಾಗಿದೆ. ಅಧುನಿಕ ಜೀವನದ ಭರಾಟೆಯಲ್ಲಿರುವ ಯುವ ಜನಾಂಗ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಬುದ್ದಿಮಾತು ಹೇಳಿದರು.
ಕಾಸಿಗಾಗಿ ಮತ ಮಾರಿಕೊಳ್ಳಬೇಡಿ:- ಪ್ರತಿ ಐದು ವರ್ಷಕೊಮ್ಮೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಗಳನ್ನು ಚುನಾಯಿಸುವ ಮೂಲಕ ದೇಶದ ಪಗತಿಗೆ ಸಹಕರಿಸಿ. ಎಂಜಿಲು ಕಾಸಿಗೆ ಕೈ ಒಡ್ಡಿ ಮತ ಮಾರಿಕೊಂಡು ನಂತರ ಪಶ್ಚಾತಾಪ ಪಡಬೇಡಿ ಎಂದು ಸಲಹೆ ನೀಡಿದರು.
ಕಲಬುರಗಿ ಜಿಲ್ಲಾ ನ್ಯಾಯಾವಾದಿಗಳ ಸಂಘದ ಅಧ್ಯಕ್ಷ ಆರ್.ಕೆ.ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ದೇಶ ನಮ್ಮದಾಗಿದ್ದು, ಇದಕ್ಕೆ ಡಾ.ಬಿ.ಆರ್.ಅಂಬೇಡ್ಕರ ರಚಿತ ಬಲಿಷ್ಠ ಸಂವಿಧಾನವೆ ಮೂಲ ಕಾರಣವಾಗಿದೆ. ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ ಪರಿಕಲ್ಪನೆಯ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಯನ್ನಾಗಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್.ಜಿ.ಪಂಡಿತ, ನ್ಯಾಯಮೂರ್ತಿ ಪಿ.ಜೆ.ಎಂ.ಪಾಟೀಲ, ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಕೆ.ಬಿ.ಅಸೋದೆ, ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಟಿ.ಕಟ್ಟಿಮನಿ ಸೇರಿದಂತೆ ವಿವಿಧ ಶ್ರೇಣಿಯ ನ್ಯಾಯಾಧೀಶರು, ನ್ಯಾಯಾವಾದಿಗಳು, ಬಾರ್ ಕೌನ್ಸಿಲ್ ಸದಸ್ಯರು, ಉಚ್ಚ ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಚ್ಛ ನ್ಯಾಯಾಲಯದ ನ್ಯಾಯಾವಾದಿಗಳ ಸಂಘದ ಉಪಾಧ್ಯಕ್ಷ ಎಸ್.ಜಿ.ಮಠ ಸ್ವಾಗತಿಸಿ ನಿರೂಪಣೆ ಮಾಡಿದರು. ಪ್ರಧಾನ ಕಾರ್ಯದರ್ಶಿ ಗೋಪಾಲ ಯಾದವ ವಂದಿಸಿದರು. ಕಾರ್ಯಕ್ರಮದಲ್ಲಿ ಕು.ಸುಧಾರಾಣಿ ಹಾಡಿದ “ಹಿಂದೂಸ್ಥಾನವು ಎಂದು ಮರಿಯದ ಭಾರತ ರತ್ನವು ನೀನಾಗು” ಹಾಗೂ “ಏ ಮೇರೆ ವತನ್ ಕೆ ಲೋಗೊ” ದೇಶಭಕ್ತಿ ಗೀತೆಗಳು ಎಲ್ಲರ ಚಪ್ಪಾಳೆ ಗಿಟ್ಟಿಸಿಕೊಂಡವು.
ಫೆ. 11 ಹಾಗೂ 12ರಂದು ವಿಭಾಗ ಮಟ್ಟದ ತರಬೇತಿ ಕಾರ್ಯಾಗಾರ
***********************************************************
ಕಲಬುರಗಿ,ಜ.26.(ಕ.ವಾ.)-ಕಲಬುರಗಿ ವಿಭಾಗದ ಆಯ್ಕೆಯಾದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರುಗಳಿಗೆ ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರಗಳ ಮಹತ್ವ ಹಾಗೂ ನಿಗದಿತ ನಮೂನೆಗಳನ್ನು ಭರ್ತಿ ಮಾಡಿ ಅವಧಿಯಲ್ಲಿ ಸಲ್ಲಿಸುವ ಕುರಿತ ಕಲಬುರಗಿ ವಿಭಾಗ ಮಟ್ಟದ ತರಬೇತಿ ಕಾರ್ಯಾಗಾರವನ್ನು 2019ರ ಫೆಬ್ರವರಿ 11 ಹಾಗೂ 12ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಸೇಡಂ ರಸ್ತೆಯ ಮಹಾದೇವಪ್ಪ ರಾಂಪೂರೆ ಮೆಡಿಕಲ್ ಕಾಲೇಜಿನ ಹಿಂಭಾಗದಲ್ಲಿರುವ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) ಯಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ಫೆಬ್ರವರಿ 11ರಂದು ಕಲಬುರಗಿ, ರಾಯಚೂರು, ಬೀದರ ಹಾಗೂ ಫೆಬ್ರವರಿ 12 ರಂದು ಬಳ್ಳಾರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಆಯ್ಕೆಯಾದ ಸರ್ಕಾರಿ ಮತ್ತು ಖಾಸಗಿ ವೈದ್ಯರುಗಳಿಗೆ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ವೈದ್ಯರು ಕಡ್ಡಾಯವಾಗಿ ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಬೇಕೆಂದು ಅವರು ತಿಳಿಸಿದ್ದಾರೆ.


























ಹೀಗಾಗಿ ಲೇಖನಗಳು News and photos Date: 26--01--2019

ಎಲ್ಲಾ ಲೇಖನಗಳು ಆಗಿದೆ News and photos Date: 26--01--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photos Date: 26--01--2019 ಲಿಂಕ್ ವಿಳಾಸ https://dekalungi.blogspot.com/2019/01/news-and-photos-date-26-01-2019.html

Subscribe to receive free email updates:

0 Response to "News and photos Date: 26--01--2019"

ಕಾಮೆಂಟ್‌‌ ಪೋಸ್ಟ್‌ ಮಾಡಿ