News Date: 08--01--2019

News Date: 08--01--2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News Date: 08--01--2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News Date: 08--01--2019
ಲಿಂಕ್ : News Date: 08--01--2019

ಓದಿ


News Date: 08--01--2019

ಮುಷ್ಕರ ಹಿನ್ನೆಲೆ:
**************
ಜನವರಿ 9ರಂದು ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ
*********************************************
ಕಲಬುರಗಿ,ಜ.8.(ಕ.ವಾ.)-ವಿವಿಧ ಕಾರ್ಮಿಕ ಸಂಘಟನೆಗಳು ಇದೇ ಜನವರಿ 9 ರಂದು ಸಹ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿವೆಯಾದರೂ ಕಲಬುರಗಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ. ಜನವರಿ 9ರಂದು ಎಂದಿನಂತೆ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸಲಿವೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಟಕೇಶ ಕುಮಾರ ಅವರು ತಿಳಿಸಿದ್ದಾರೆ.
ಜನವರಿ 11 ರಂದು “ಕೈಗಾರಿಕಾ ನೀತಿ 2014-19” ಕಾರ್ಯಾಗಾರ ಉದ್ಘಾಟನೆ
********************************************************************
ಕಲಬುರಗಿ,ಜ.08(ಕ.ವಾ)-ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಬೆಂಗಳೂರು ಹಾಗೂ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಕಲಬುರಗಿ ಲೇಡೀಸ್ ಅಸೋಸಿಯೇಶನ್ ಮ್ಯಾನ್ಯುಫ್ಯಾಕ್ಚರರ್ಸ್ ಪಾರ್ಕ್ (ಕೆ-ಲ್ಯಾಂಪ್), ಗುಲಬರ್ಗಾ ದಾಲ್ ಮಿಲ್ಲರ್ಸ್ ಅಸೋಸಿಯೇಶನ್ ಹಾಗೂ ಗುಲಬರ್ಗಾ ಕೈಗಾರಿಕಾ ಪ್ರದೇಶ ಉತ್ಪಾದಕರ ಸಂಘ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ಕೈಗಾರಿಕಾ ನೀತಿ 2014-19 ಹಾಗೂ ಉದ್ದೇಶಿತ ಹೊಸ ಕೈಗಾರಿಕಾ ನೀತಿ ಮತ್ತು ಸುಗಮ ವಾಣಿಜ್ಯ-ವ್ಯವಹಾರ ನಡೆಸುವಿಕೆಗಾಗಿ ಸಲಹೆಗಳ ಕುರಿತು ಕಾರ್ಯಗಾರವನ್ನು 2019ರ ಜನವರಿ 11 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಮಾರುಕಟ್ಟೆ ರಸ್ತೆಯಲ್ಲಿರುವ ಹೈದ್ರಾಬಾದ ಕರ್ನಾಟಕ ಚೇಂಬರ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ (ಹೆಚ್.ಕೆ.ಸಿ.ಸಿ.ಐ.) ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಈ ಕಾರ್ಯಾಗಾರವನ್ನು ಉದ್ಘಾಟಿಸುವರು. ಬೆಂಗಳೂರಿನ (ಎಂಎಸ್‍ಎಂಇ ಮತ್ತು ಪಿಪಿ) ಅಪರ ನಿರ್ದೇಶಕ ಹಾಗೂ ಎಂಎಸ್‍ಎಫ್‍ಸಿ ಸದಸ್ಯ ಕಾರ್ಯದರ್ಶಿ ಹೆಚ್.ಎಂ. ಶ್ರೀನಿವಾಸ ಹಾಗೂ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಅಮರನಾಥ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಭಾರ ಜಂಟಿ ನಿರ್ದೇಶಕಿ ಸುರೇಖಾ ಮನೋಲಿ, ಬೆಂಗಳೂರಿನ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ದಲಿಂಗಪ್ಪ ಬಿ. ಪೂಜಾರಿ, ಕಲಬುರಗಿ ಕೆಎಸ್‍ಎಫ್‍ಸಿ ಸಹಾಯಕ ಪ್ರಧಾನ ವ್ಯವಸ್ಥಾಪಕ ಡಾ. ಗಣಪತಿ ರಾಠೋಡ ಹಾಗೂ ಕೆಎಸ್‍ಪಿಸಿಬಿ ಪರಿಸರ ಅಧಿಕಾರಿ ಸಿ.ಎನ್. ಮಂಜಪ್ಪ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾಸಿಯಾ ಉಪಾಧ್ಯಕ್ಷ ಆರ್. ರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಅಂದು ಬೆಳಿಗ್ಗೆ 10.30 ರಿಂದ 11 ಗಂಟೆಯವರೆಗೆ ನೋಂದಣಿ ನಡೆಯಲಿದೆ. ಕಲಬುರಗಿ ಜಿಲ್ಲೆಯ ಉದ್ಯಮದಾರರು/ಭಾವಿ ಉದ್ಯಮದಾರರು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ತಮ್ಮ ಸಲಹೆ-ಸೂಚನೆ ನೀಡಬೇಕೆಂದು ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಜನವರಿ 10ರಂದು
******************
ವಾಣಿಜ್ಯ ವಾಹನ ಚಾಲಕರಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ
**************************************************************
ಕಲಬುರಗಿ,ಜ.08(ಕ.ವಾ.)-ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೆಡ್‍ಕ್ರಾಸ್ ಸಂಸ್ಥೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಪಘಾತ ಜೀವ ರಕ್ಷಕ ಯೋಜನೆಯಡಿ ವಾಣಿಜ್ಯ ವಾಹನ ಚಾಲಕರಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರವನ್ನು ಇದೇ ಜನವರಿ 10 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐ.ಟಿ.ಟಿ. ಕಾಲೇಜು ಆವರಣದಲ್ಲಿರುವ ಕಾರ್ಮಿಕರ ಭವನದಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಕಾರ್ಯಾಗಾರವನ್ನು ಉದ್ಘಾಟಿಸುವರು. ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ. ಗಿರೀಶ ಪಾಟೀಲ ಅಧ್ಯಕ್ಷತೆ ವಹಿಸುವರು. ಕಲಬುರಗಿ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಅಪ್ಪಾರಾವ ಅಕ್ಕೋಣಿ, ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಆರತಿ ಪೂಜಾರಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿಯ ಹಿರಿಯ ವೈದ್ಯಾಧಿಕಾರಿ ಡಾ|| ಮಲ್ಲಾರಾವ್ ಮಲ್ಲೆ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು. ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳು (ವಾಣಿಜ್ಯ ವಾಹನ ಚಾಲಕರು) ತಮ್ಮ ವಾಹನ ಚಾಲನಾ ಪರವಾನಿಗೆ, ಆಧಾರ್ ಕಾರ್ಡ್ ಹಾಗೂ 4 ಭಾವಚಿತ್ರಗಳೊಂದಿಗೆ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ (ಮಾಲ್ಡಿಂಡಿ) ಹಾಗೂ ರಾಗಿ ಖರೀದಿ :
************************************************************************
ರೈತರು ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳ ಮನವಿ
***********************************************************************
ಕಲಬುರಗಿ.ಜ.08.(ಕ.ವಾ.)-ಪ್ರಸಕ್ತ 2018-19ನೇ ಸಾಲಿನ ಮುಂಗಾರು (ಖಾರೀಫ್) ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ ರೈತರು ಬೆಳೆದ ಬಿಳಿಜೋಳ (ಮಾಲ್ದಂಡಿ) ಮತ್ತು ರಾಗಿ ಖರೀದಿಗಾಗಿ ಈಗಾಗಲೇ ಖರೀದಿ ಕೇಂದ್ರದಲ್ಲಿ ಆನ್‍ಲೈನ್ ನೋಂದಣಿ ಪ್ರಕ್ರಿಯೇಯು ಪ್ರಾರಂಭವಾಗಿದ್ದರೂ ಸಹ ಜಿಲ್ಲೆಯಲ್ಲಿನ ಯಾವುದೇ ರೈತರು ಬಿಳಿಜೋಳ (ಮಾಲ್ದಂಡಿ) ಮತ್ತು ರಾಗಿ ಮಾರಾಟಕ್ಕಾಗಿ ಖರೀದಿ ಕೇಂದ್ರದಲ್ಲಿ ಆನ್‍ಲೈನ್ ನೋಂದಣಿ ಮಾಡಿರುವುದಿಲ್ಲ. ರೈತರು ತಮ್ಮ ತಾಲೂಕಿಗೆ ಸಂಬಂಧಿಸಿದ ಖರೀದಿ ಕೇಂದ್ರಕ್ಕೆ ಹೋಗಿ 2019ರ ಜನವರಿ 15ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
ರೈತರು ಬೆಳೆದ ಬಿಳಿಜೋಳ (ಮಾಲ್ದಂಡಿ) ಮತ್ತು ರಾಗಿ ಖರೀದಿಗಾಗಿ ಕಲಬುರಗಿ ಜಿಲ್ಲೆಯ ಅಫಜಲಪುರ, ಕಲಬುರಗಿ, ಆಳಂದ, ಚಿಂಚೋಳಿ, ಚಿತ್ತಾಪುರ, ಜೇವರ್ಗಿ ಹಾಗೂ ಸೇಡಂ ತಾಲೂಕುಗಳಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ (ಎ.ಪಿ.ಎಂ.ಸಿ.) ದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಉತ್ತಮ ಗುಣಮಟ್ಟದ ರಾಗಿಯನ್ನು ಪ್ರತಿ ಕ್ವಿಂಟಲ್‍ಗೆ 2897 ರೂ. ಗಳಂತೆ ಹಾಗೂ ಬಿಳಿಜೋಳ ಪ್ರತಿ ಕ್ವಿಂಟಲ್‍ಗೆ 2450 ರೂ.ಗಳ ದರವನ್ನು ನಿಗದಿಪಡಿಸಲಾಗಿದೆ. ಖರೀದಿ ಕೇಂದ್ರಗಳಲ್ಲಿ 2019ರ ಜನವರಿ 15ರವರೆಗೆ ರೈತರ ನೋಂದಣಿ ಮಾಡಲಾಗುವುದು. ರೈತರಿಂದ 2019ರ ಜನವರಿ 1 ರಿಂದ ಮಾರ್ಚ್ 31ರವರೆಗೆ ಬಿಳಿಜೋಳ (ಮಾಲ್ಡಂಡಿ) ಹಾಗೂ ರಾಗಿಯನ್ನು ಖರೀದಿಸಲಾಗುವುದು.
ಪ್ರತಿಯೊಬ್ಬ ರೈತರು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳ (ಮಾಲ್ದಂಡಿ) ಮತ್ತು ರಾಗಿಯನ್ನು ಮಾರಾಟ ಮಾಡಲು ಖರೀದಿ ಕೇಂದ್ರಗಳಲ್ಲಿ ಮೊದಲು ನೊಂದಾಯಿಸಿಕೊಳ್ಳಬೇಕು. ನೊಂದಾಯಿಸಿಕೊಂಡ ಸಣ್ಣ ಮತ್ತು ಅತೀ ಸಣ್ಣ ಪ್ರತಿ ಒಬ್ಬ ರೈತರಿಂದ ಮಾತ್ರ ಗರಿಷ್ಠ 75 ಕ್ವಿಂಟಾಲ್ ರಾಗಿ ಮತ್ತು ಪ್ರತಿ ಒಬ್ಬ ರೈತರಿಂದ ಪ್ರತಿ ಎಕರೆಗೆ 06 ಕ್ವಿಂಟಲ್ ಬಿಳಿಜೋಳ (ಮಾಲ್ದಂಡಿ) ವನ್ನು 2019ರ ಮಾರ್ಚ್ 31ರವರೆಗೆ ಖರೀದಿಸಲಾಗುವುದು.
ರೈತರು ಕಡ್ಡಾಯವಾಗಿ ಆಧಾರ್ ಕಾರ್ಡ್, ಆರ್.ಟಿ.ಸಿ (ಪಹಣಿ), ಇತ್ತೀಚೆಗೆ ರಾಷ್ಟ್ರೀಕೃತ/ಶೆಡ್ಯೂಲ್ಡ್ ಬ್ಯಾಂಕ್‍ನಲ್ಲಿ ತೆರೆದ ಬ್ಯಾಂಕ್ ಅಕೌಂಟ್ ಖಾತೆ ಸಂಖ್ಯೆ, ಫೋಟೊ ಮತ್ತು ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ ಪಾಸ್ ಬುಕ್‍ನ ಪ್ರತಿ, ಮೊಬೈಲ್ ಸಂಖ್ಯೆಯೊಂದಿಗೆ ಅವಶ್ಯವಿದ್ದಲ್ಲಿ ರದ್ದಾದ ಮೂಲ ಚೆಕ್ ಪ್ರತಿಯೊಂದಿಗೆ ಖರೀದಿ ಕೇಂದ್ರಗಳಿಗೆ ಬಂದು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಮಧ್ಯವರ್ತಿಗಳು / ಏಜೆಂಟರ್‍ಗಳು ಖರೀದಿ ಕೇಂದ್ರಗಳಿಗೆ ರಾಗಿ ಮತ್ತು ಬಿಳಿಜೋಳ ತಂದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ವಾಡಿ: ಸಹಾಯಧನ ಹಾಗೂ ತ್ರಿಚಕ್ರ ಮೋಟಾರ ಸೈಕಲ್‍ಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಜ.08(ಕ.ವಾ.)-ವಾಡಿ ಪುರಸಭೆ ವ್ಯಾಪ್ತಿಯಲ್ಲಿನ ಎಸ್.ಎಸ್.ಎಲ್.ಸಿ. ನಂತರದ ಉನ್ನತ ಶಿಕ್ಷಣದ ಭಾಗವಾಗಿ 2018-19ನೇ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ, ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ. 24.10 ಅನುದಾನದಡಿ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ. 7.25ರ ಅನುದಾನದಡಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯಧನ ಕಲ್ಪಿಸಲು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವರಿಗೆ ಔಷಧಿ ಖರ್ಚಿಗಾಗಿ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ವಾಡಿ (ಜಂ) ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಇದಲ್ಲದೇ ಶೇ. 80ಕ್ಕಿಂತ ಹೆಚ್ಚಿನ ಅಂಗವಿಕಲತೆಯಿಂದ ಬಳಲುತ್ತಿರುವ ವಿಕಲಚೇತನರಿಗೆ ಶೇ. 5ರ ಅನುದಾನದಡಿ ತ್ರಿಚಕ್ರ ಮೋಟಾರ ಸೈಕಲ್ ವಿತರಿಸಲು ಸಹ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಯನ್ನು 2019ರ ಜನವರಿ 15ರೊಳಗಾಗಿ ವಾಡಿ ಪುರಸಭೆಯ ಕಾರ್ಯಾಲಯದ ಆವಕ ಶಾಖೆಯಲ್ಲಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ವಾಡಿ ಪುರಸಭೆಯ ಮುಖ್ಯಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಚಿಂಚೋಳಿ: ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
**********************************************
ಕಲಬುರಗಿ,ಜ.08(ಕ.ವಾ.)-ಚಿಂಚೋಳಿ ಪುರಸಭೆಯಿಂದ ಡೇ-ನಲ್ಮ ಯೋಜನೆಯಡಿಯಲ್ಲಿ 2018-19ನೇ ಸಾಲಿನಲ್ಲಿ ನಿರುದ್ಯೋಗಿ, ಅರೇ ಉದ್ಯೋಗ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕ ಮೂಲಕ ಸಾಲ-ಸೌಲಭ್ಯ ಕಲ್ಪಿಸಲು ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳು ಗುಂಪು ಉದ್ಯೋಗ ಕಾರ್ಯಕ್ರಮವನ್ನು ಕೈಗೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಚಿಂಚೋಳಿ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಚಿಂಚೋಳಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಯೋಮಿತಿ 18 ವರ್ಷ ಮೇಲ್ಪಟ್ಟ ಬಿ.ಪಿ.ಎಲ್. ಕಾರ್ಡ ಹೊಂದಿದ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಬ್ಯಾಂಕ್ ಮೂಲಕ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದಕ್ಕೆ ನೇರವಾಗಿ ಯಾವುದೇ ಸಹಾಯಧನ ಇರುವುದಿಲ್ಲ. ಸಾಲ ಪಡೆದ ಫಲಾನುಭವಿಗಳು ಸಾಲ ಮರುಪಾವತಿ ಮಾಡಿದ ನಂತರ ಬಡ್ಡಿ ಸಹಾಯಧನವನ್ನು ನೀಡಲಾಗುವುದು.
ಆಸ್ತಕ ಅಭ್ಯರ್ಥಿಗಳು ತಮ್ಮ ಆದಾಯ ಪ್ರಮಾಣಪತ್ರ, ಆಧಾರ ಕಾರ್ಡ, ಪಡಿತರ ಚೀಟಿ, ಯೋಜನಾ ವರದಿ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ 2019ರ ಜನವರಿ 22 ರೊಳಗಾಗಿ ಚಿಂಚೋಳಿ ಪುರಸಭೆ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿಂಚೋಳಿ ಪುರಸಭೆಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಉಚಿತ ಹೊಲಿಗೆ ತರಬೇತಿಗಾಗಿ ಮಹಿಳೆಯರಿಂದ ಅರ್ಜಿ ಆಹ್ವಾನ
ಕಲಬುರಗಿ,ಜ.08(ಕ.ವಾ.)-ಕಲಬುರಗಿ ನಗರದ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ) ಸಂಸ್ಥೆಯಲ್ಲಿ ಇದೇ ಜನವರಿ 24 ರಿಂದ ಫೆಬ್ರವರಿ 22ರವರೆಗೆ 30 ದಿನಗಳ ಕಾಲ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತರಬೇತಿ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.
ತರಬೇತಿ ಪಡೆಯಲಿಚ್ಛಿಸುವ ಮಹಿಳೆಯರು ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕಲ್ಲದೇ ಬಿ.ಪಿ.ಎಲ್. ಕಾರ್ಡ ಹೊಂದಿರಬೇಕು. ವಿದ್ಯಾವಂತ ನಿರುದ್ಯೋಗಿ ಮಹಿಳೆಯರ ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜನವರಿ 14 ಕೊನೆಯ ದಿನವಾಗಿದೆ. ಈ ತರಬೇತಿ ಸಮಯದಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಒದಗಿಸುವುದು.
ಅರ್ಜಿ ಸಲ್ಲಿಸಿದ ಮಹಿಳೆಯರು ಜನವರಿ 17 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರವಾಗಿ ಕಡ್ಡಾಯವಾಗಿ ಸಂದರ್ಶನಕ್ಕೆ ವಯೋಮಿತಿ, ಬಿ.ಪಿ.ಎಲ್. ಹಾಗೂ ಆಧಾರ ಕಾರ್ಡ್ ಮತ್ತು ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರಗಳ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9243602888/ 9886781239ಗಳಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಫೆಬ್ರವರಿ 8ರಂದು ಒಟ್ಟು 30 ವಾಣಿಜ್ಯ ಮಳಿಗೆಗಳ ಹರಾಜು
*************************************************
ಕಲಬುರಗಿ,ಜ.08(ಕ.ವಾ.)-ಶಹಾಬಾದ ನಗರಸಭೆಯಿಂದ 2007-08ನೇ ಸಾಲಿನ ಎಸ್.ಎಫ್.ಸಿ. ಯೋಜನೆಯಡಿಯಲ್ಲಿ ಮಳಿಗೆ ಸಂಖ್ಯೆ 01ರಿಂದ 30ರವರೆಗಿನ ಒಟ್ಟು 30 ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜನ್ನು 2019ರ ಫೆಬ್ರವರಿ 8ರಂದು ಬೆಳಿಗ್ಗೆ 11 ಗಂಟೆಗೆ ಶಹಾಬಾದ ನಗರಸಭೆ ಕಾರ್ಯಾಲಯದ ಅವರಣದಲ್ಲಿ ನಡೆಸಲಾಗುವುದು ಎಂದು ಶಹಾಬಾದ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.
ಈ ವಾಣಿಜ್ಯ ಮಳಿಗೆಗಳನ್ನು ಸರ್ಕಾರದ ಸುತ್ತೋಲೆಯಂತೆ 12 ವರ್ಷಗಳ ಅವಧಿಗೆ ಲೀಜ್ ಆಧಾರದ ಮೇಲೆ ಬಹಿರಂಗವಾಗಿ ಮಳಿಗೆಗಳ ಬಾಡಿಗೆ ಮೊತ್ತಕ್ಕೆ ಹರಾಜು ಮಾಡಲಾಗುವುದು. ವಾಣಿಜ್ಯ ಮಳಿಗೆಗಳ ವಿಸ್ತೀರ್ಣ, ನಿಗದಿಪಡಿಸಿದ ಮಾಹೆಯಾನ ಬಾಡಿಗೆ, ಠೇವಣಿ ಮೊತ್ತ, ಷರತ್ತು, ನಿಬಂಧನೆ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಶಹಾಬಾದ ನಗರಸಭೆ ಕಾರ್ಯಾಲಯವನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ವೃದ್ಧಾಶ್ರಮ ಪ್ರಾರಂಭಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರಸ್ತಾವನೆ ಆಹ್ವಾನ
*******************************************************************
ಕಲಬುರಗಿ,ಜ.08(ಕ.ವಾ.)-ಕಲಬುರಗಿ ಜಿಲ್ಲೆಯ ಸೇಡಂ ಹಾಗೂ ಕಲಬುರಗಿ ವಿಭಾಗದಲ್ಲಿ ವೃದ್ಧಾಶ್ರಮ ಪ್ರಾರಂಭಿಸಲು ಕಲಬುರಗಿ ಜಿಲ್ಲೆಯ ಇಚ್ಛೆಯುಳ್ಳ ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಸ್ವಯಂ ಸೇವಾ ಸಂಸ್ಥೆ ಆಸ್ತಿತ್ವಕ್ಕೆ ಬಂದು ಕನಿಷ್ಠ 3 ವರ್ಷವಾಗಿರಬೇಕು. ವೃದ್ಧಾಶ್ರಮ ನಡೆಸಲು ಅಥವಾ ಇಂತಹ ಇನ್ನಿತರ ಕಾರ್ಯಕ್ರಮಗಳನ್ನು ನಡೆಸುವಲ್ಲಿ ಅನುಭವ ಹೊಂದಿರಬೇಕು ಅಥವಾ ವೃದ್ಧಾಶ್ರಮವನ್ನು ನಡೆಸಲು ದಕ್ಷತೆ ಹೊಂದಿರುವ ಕುರಿತು ದಾಖಲೆಗಳನ್ನು ಹಾಜರಪಡಿಸಬೇಕು. ಸ್ವಯಂ ಸೇವಾ ಸಂಸ್ಥೆಗಳು ಸಾಕಷ್ಟು ಸಿಬ್ಬಂದಿ ವರ್ಗದೊಂದಿಗೆ ಅಗತ್ಯವಾದ ಮೂಲಭೂತ ಸೌಲಭ್ಯ, ಸಂಪನ್ಮೂಲ, ಅನುಭವ ಮತ್ತು ಆರ್ಥಿಕ ಸುಸ್ಥಿತಿಯುಳ್ಳ ಆಡಳಿತ ವರ್ಗದವರನ್ನು ಹೊಂದಿರಬೇಕು.
ಇಚ್ಚೆಯುಳ್ಳ ಸ್ವಯಂ ಸೇವಾ ಸಂಸ್ಥೆಗಳು ಪ್ರಸ್ತಾವನೆಯನ್ನು ಕಲಬುರಗಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ 2019ರ ಜನವರಿ 16 ರೊಳಗಾಗಿ ಸಲ್ಲಿಸಬೇಕು. ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-235222ಗೆ ಸಂಪರ್ಕಿಸಲು ಕೋರಲಾಗಿದೆ.
ಜನವರಿ 9 ರಿಂದ ನ್ಯಾಯಬೆಲೆ ಅಂಗಡಿ ಮಾಲೀಕರ-ಚಿಲ್ಲರೆ ಸೀಮೆಎಣ್ಣೆ ವಿತರಕರ ಸಭೆ
**************************************************************************
ಕಲಬುರಗಿ,ಜ.08(ಕ.ವಾ)-ಸಾರ್ವಜನಿಕ ವಿತರಣಾ ವ್ಯವಸ್ಥೆ, ಅನ್ನಭಾಗ್ಯ ಯೋಜನೆ ಹಾಗೂ ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲು ಕಲಬುರಗಿ ಜಿಲ್ಲೆಯ ಕೆಳಕಂಡ ತಾಲೂಕುಗಳಲ್ಲಿ ಸಗಟು ಗುತ್ತಿಗೆದಾರರು, ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು, ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಚಿಲ್ಲರೆ ಸೀಮೆಎಣ್ಣೆ ವಿತರಕರ ಸಭೆಯನ್ನು ಕರೆಯಲಾಗಿದೆ ಎಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕರು ತಿಳಿಸಿದ್ದಾರೆ.
ಜನವರಿ 9ರಂದು ಬೆಳಿಗ್ಗೆ 11 ಗಂಟೆಗೆ ಸೇಡಂ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಜನವರಿ 11 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ತಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಜನವರಿ 14 ರಂದು ಬೆಳಿಗ್ಗೆ 11 ಗಂಟೆಗೆ ಅಫಜಲಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಜನವರಿ 18ರಂದು ಬೆಳಿಗ್ಗೆ 11 ಗಂಟೆಗೆ ಜೇವರ್ಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಜನವರಿ 22 ರಂದು ಬೆಳಿಗ್ಗೆ 11 ಗಂಟೆಗೆ ಆಳಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಜನವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಗ್ರಾಮಾಂತರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ (ಕೃಷಿ ಇಲಾಖೆ) ಹಾಗೂ ಅಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿ ನಗರ ಮತ್ತು ಶಹಾಬಾದ-ವಾಡಿಗೆ ಸಂಬಂಧಿಸಿದಂತೆ ಕಲಬುರಗಿ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ (ಕೃಷಿ ಇಲಾಖೆ) ಹಾಗೂ ಜನವರಿ 29 ರಂದು ಬೆಳಿಗ್ಗೆ 11 ಗಂಟೆಗೆ ಚಿಂಚೋಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಮುಖ್ಯವಾಗಿ ಪ್ರಾಧಿಕಾರಗಳ ವಿಷಯ, ಮಾಸಿಕ ಪಡಿತರ ಹಂಚಿಕೆ ಎತ್ತುವಳಿ ವಿತರಣೆ, ಲೆಕ್ಕ ಪತ್ರ ನಿರ್ವಹಣೆ, ನ್ಯಾಯಬೆಲೆ ಅಂಗಡಿಗಳು ನಿರ್ವಹಹಿಸಬೇಕಾದ ಸಾಮಾನ್ಯ ನಿಯಮಗಳು, ಪಡಿತರ ಚೀಟಿಗೆ ಸಂಬಂಧಿಸಿದ ವಿಷಯ, ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲಾಗುತ್ತದೆ. ಸಗಟು ಪಡಿತರ ವಿತರಕರು, ಸಗಟು ಸೀಮೆಎಣ್ಣೆ ವಿತರಕರು, ಸಗಟು ಸಾಗಾಣಿಕೆದಾರರು, ಚಿಲ್ಲರೆ ಸಾಗಾಣಿಕೆದಾರರು, ನ್ಯಾಯಬೆಲೆ ಅಂಗಡಿ ಮಾಲೀಕರು/ಅಧ್ಯಕ್ಷರು/ಕಾರ್ಯದರ್ಶಿಗಳು, ಚಿಲ್ಲರೆ ಸೀಮೆಎಣ್ಣೆ ವಿತರಕರು ಕಡ್ಡಾಯವಾಗಿ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು News Date: 08--01--2019

ಎಲ್ಲಾ ಲೇಖನಗಳು ಆಗಿದೆ News Date: 08--01--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News Date: 08--01--2019 ಲಿಂಕ್ ವಿಳಾಸ https://dekalungi.blogspot.com/2019/01/news-date-08-01-2019.html

Subscribe to receive free email updates:

0 Response to "News Date: 08--01--2019"

ಕಾಮೆಂಟ್‌‌ ಪೋಸ್ಟ್‌ ಮಾಡಿ