nEWS DATE: 09--01--2019

nEWS DATE: 09--01--2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು nEWS DATE: 09--01--2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : nEWS DATE: 09--01--2019
ಲಿಂಕ್ : nEWS DATE: 09--01--2019

ಓದಿ


nEWS DATE: 09--01--2019

ಹತ್ಯೆ ಪ್ರಕರಣದ ದೂರು ದಾಖಲಿಸಿಕೊಳ್ಳದ ಬಾಗೇವಾಡಿ ಪೊಲೀಸ್ ಠಾಣೆಯ
*****************************************************************
ಪಿ.ಎಸ್.ಐ. ವಿವರಣೆಯೊಂದಿಗೆ ಕೋರ್ಟಿಗೆ ಹಾಜರಾಗಲು ಆದೇಶ
********************************************************
ಕಲಬುರಗಿ,ಜ.09.(ಕ.ವಾ.)-ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಚಿಮ್ಮಲಗಿ ಗ್ರಾಮದ ರಾಜಕುಮಾರ ಸಾತಿಹಾಳ ಎಂಬುವವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸೂಕ್ತ ಪ್ರಕರಣ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ಪಿ.ಎಸ್.ಐ. ಅವರು ಇದೇ ಜನವರಿ 17ರಂದು ಲಿಖಿತ ವಿವರಣೆಯೊಂದಿಗೆ ಕರ್ನಾಟಕ ಹೈಕೋರ್ಟ ಪೀಠ ಕಲಬುರಗಿಯಲ್ಲಿ ಖುದ್ದಾಗಿ ಹಾಜರಾಗಬೇಕೆಂದು ಕರ್ನಾಟಕ ಹೈಕೋರ್ಟಿನ ಕಲಬುರಗಿ ಪೀಠದ ನ್ಯಾಯಾಧೀಶ ನ್ಯಾಯಮೂರ್ತಿ ಬಿ.ವೀರಪ್ಪ ಆದೇಶಿಸಿದ್ದಾರೆ.
ದಿವಂಗತ ರಾಜಕುಮಾರ ಸಾತಿಹಾಳ ಅವರ ಪತ್ನಿ ಜಯಮ್ಮ ಅವರು ಕರ್ನಾಟಕ ಹೈಕೋರ್ಟ ಪೀಠ ಕಲಬುರಗಿಯಲ್ಲಿ ನ್ಯಾಯ ದೊರಕಿಸಿಕೊಡಲು ಅರ್ಜಿ ಸಲ್ಲಿಸಿದ್ದು, ತನ್ನ ಪತಿ ರಾಜಕುಮಾರ ಸಾತಿಹಾಳ ಅವರನ್ನು 5 ಜನ ಕೂಡಿ ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಗಂಭೀರ ದೂರು ಸಲ್ಲಿಸಿದರೂ ಸಹ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿಲ್ಲ. ನಂತರ ಕಲಬುರಗಿ ಹೈಕೋರ್ಟ ಪೀಠದಿಂದ 2018ರ ಜುಲೈ 31ರಂದು ದೂರು ದಾಖಲಿಸಿಕೊಳ್ಳುವಂತೆ ಬಸವನಬಾಗೇವಾಡಿ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿದಾಗ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿ.ಆರ್.ಪಿ.ಸಿ.ಸೆಕ್ಷನ್ 174 ರಂತೆ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರಳು ಗಂಭೀರ ದೂರು ಸಲ್ಲಿಸಿದರೂ ಸಹ ಎಫ್.ಐ.ಆರ್. ದಾಖಲಿಸದೇ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿರುವ ಕಾರಣಗಳ ಬಗ್ಗೆ ಸಮಗ್ರ ವಿವರಣೆ ನೀಡುವಂತೆ ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ.
ಸಮಾಜ ಕಲ್ಯಾಣ ಸಚಿವರ ಪ್ರವಾಸ
*******************************
ಕಲಬುರಗಿ,ಜ.09.(ಕ.ವಾ.)-ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಹೈದ್ರಾಬಾದ್‍ದಿಂದ ರಸ್ತೆ ಮೂಲಕ 2019ರ ಜನವರಿ 12ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಗೆ ಆಗಮಿಸಿ, ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಜನವರಿ 13ರಂದು ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು.
ಜನವರಿ 25ರಂದು
****************
ಕಡ್ಡಾಯವಾಗಿ ರಾಷ್ಟೀಯ ಮತದಾರರ ದಿನಾಚರಣೆ ಆಚರಣೆಗೆ ಸೂಚನೆ
***************************************************************
ಕಲಬುರಗಿ,ಜ.09.(ಕ.ವಾ.)-ಚುನಾವಣಾ ಆಯೋಗದ ನಿರ್ದೇಶನದಂತೆ ಕಲಬುರಗಿ ಜಿಲ್ಲಾ ವ್ಯಾಪ್ತಿಗೊಳಪಡುವ ಎಲ್ಲ ಕೇಂದ್ರ ಸರ್ಕಾರಿ, ರಾಜ್ಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಇದೇ ಜನವರಿ 25 ರಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಿ, ಮತದಾರರ ಪ್ರತಿಜ್ಞಾವಿಧಿ ಸ್ವೀಕರಿಸಬೇಕೆಂದು ಕಲಬುರಗಿಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶಕುಮಾರ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಚುನಾವಣಾ ಆಯೋಗವು ಈ ವರ್ಷವೂ ಸಹ ಪ್ರತಿಯೊಂದು ಕಚೇರಿಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲು ಕ್ರಮಕೈಗೊಳ್ಳಬೇಕೆಂದು ತಿಳಿಸಿರುತ್ತದೆ.
ಮತದಾರರ ಪ್ರತಿಜ್ಞಾ ವಿಧಿ ಇಂತಿದೆ. “ಪ್ರಜಾಪ್ರಭುತ್ವದಲ್ಲಿ ಧೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು. ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭಿತರಾಗಿ ಮತ್ತು ಧರ್ಮ, ಜನಾಂಗ, ಜಾತಿ ಮತ್ತು ಭಾಷೆ ಅಥವಾ ಯಾವುದೇ ಪ್ರೇರಣೆ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ”.
ವಿವಿಧ ವಸತಿ ಶಾಲೆ: 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*********************************************************
ಕಲಬುರಗಿ,ಜ.09.(ಕ.ವಾ.)-ಸಮಾಜ ಕಲ್ಯಾಣ ಇಲಾಖೆಯಿಂದ (ಕರ್ನಾಟಕ ವಸತಿ ಶಿಕ್ಷಣ ಸಂಘದಿಂದ) ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಶ್ರೀಮತಿ ಇಂದಿರಾಗಾಂಧಿ, ಡಾ.ಬಿ.ಆರ್. ಅಂಬೇಡ್ಕರ ವಸತಿ ಶಾಲೆಗಳಿಗೆ 2019-20 ನೇ ಸಾಲಿನಲ್ಲಿ 6ನೇ ತರಗತಿಯ ಪ್ರವೇಶ ಪಡೆಯಲು ಕಲಬುರಗಿ ತಾಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ 5ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಗತ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ವಿಶೇಷ (ಸಫಾಯಿ ಕರ್ಮಚಾರಿ, ಅಲೆಮಾರಿ, ಅರೆ ಅಲೆಮಾರಿ, ಅನಾಥ, ದೇವದಾಸಿ, ಮಾಜಿ ಸೈನಿಕ, ವಿಧವೆ, ಒಬ್ಬ ಪೋಷಕ, ಆಶ್ರಮ ಶಾಲೆ, ಬಾಲ ಕಾರ್ಮಿಕ) ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಅರ್ಹರು. ವಿದ್ಯಾರ್ಥಿನಿಯರು ಪ್ರವೇಶ ಅರ್ಜಿಗಳನ್ನು ಜನವರಿ 14 ರೊಳಗೆ ಪಡೆದು ಭರ್ತಿ ಮಾಡಿ ತಮ್ಮ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಜನವರಿ 15ರೊಳಗಾಗಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9986969088, 9945434428ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಪುಸ್ತಕಗಳು ಆಯ್ಕೆ: ಲೇಖಕರು-ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ
**********************************************************
ಕಲಬುರಗಿ,ಜ.09.(ಕ.ವಾ.)-ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ಸ್ಪರ್ಧಾತ್ಮಕ ಪಠ್ಯ, ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ ಮತ್ತಿತರ ವಿಷಯಗಳ ಕನ್ನಡ, ಆಂಗ್ಲ ಹಾಗೂ ಇತರೆ ಭಾರತೀಯ ಭಾಷೆಯ ಗ್ರಂಥಗಳನ್ನು ರಾಜ್ಯಮಟ್ಟದ ಪುಸ್ತಕ ಸಮಿತಿಯಿಂದ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು ಹಾಗೂ ಪ್ರಕಾಶನ ಸಂಸ್ಥೆಗಳಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರಸಕ್ತ 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ ಕಬ್ಬನ್ ಉದ್ಯಾನವನ, ಬೆಂಗಳೂರು ಇವರಲ್ಲಿ 2019ರ ಜನವರಿ 30ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಮಾತ್ರ ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ಲಗತ್ತಿಸಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಕಚೇರಿಯಲ್ಲಿ 2019ರ ಜನವರಿ 31ರ ಸಂಜೆ 5.30 ಗಂಟೆಯೊಳÀಗಾಗಿ ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆ ಹಾಗೂ ನಿಬಂಧನೆ, ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಕುರಿತು ಇಲಾಖಾ ಅಂತರ್ಜಾಲ ತಿತಿತಿ.ಞಚಿಡಿಟಿಚಿಣಚಿಞಚಿಠಿubಟiಛಿಟibಡಿಚಿಡಿಥಿ.gov.iಟಿ ಹಾಗೂ ಕಲಬುರಗಿ ಜಗತ್ ವೃತ್ತದಲ್ಲಿನ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯನ್ನು (ಕಚೇರಿ ದೂರವಾಣಿ ಸಂಖ್ಯೆ 08472-221543ಗೆ ಸಂಪರ್ಕಿಸಲು ಕೋರಿದೆ.


ಹೀಗಾಗಿ ಲೇಖನಗಳು nEWS DATE: 09--01--2019

ಎಲ್ಲಾ ಲೇಖನಗಳು ಆಗಿದೆ nEWS DATE: 09--01--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ nEWS DATE: 09--01--2019 ಲಿಂಕ್ ವಿಳಾಸ https://dekalungi.blogspot.com/2019/01/news-date-09-01-2019.html

Subscribe to receive free email updates:

0 Response to "nEWS DATE: 09--01--2019"

ಕಾಮೆಂಟ್‌‌ ಪೋಸ್ಟ್‌ ಮಾಡಿ