News and Photo Date: 12-02-2019

News and Photo Date: 12-02-2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photo Date: 12-02-2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photo Date: 12-02-2019
ಲಿಂಕ್ : News and Photo Date: 12-02-2019

ಓದಿ


News and Photo Date: 12-02-2019

ಫೆಬ್ರವರಿ 13ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
*****************************************************
ಕಲಬುರಗಿ,ಫೆ.12.(ಕ.ವಾ.)-ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ “ಮೂಲಭೂತ ಕಾನೂನುಗಳು ಹಾಗೂ ಖಾಯಂ ಜನತಾ ನ್ಯಾಯಾಲಯ” ನ್ಯಾಯ ಸಂಯೋಗ ಮತ್ತು ಫೋಕ್ಸೊ ಕಾಯ್ದೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಬುಧವಾರ ಫೆಬ್ರವರಿ 13ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ರೂಬಿನಾ ಪರ್ವಿನ್ ಅಧ್ಯಕ್ಷತೆ ವಹಿಸುವರು. ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ಅಧ್ಯಕ್ಷ ಸಿದ್ರಾಮಯ್ಯ ಹಿರೇಮಠ ಅವರು ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಹಾಗೂ ಜಿಲ್ಲಾ ಬಾಲ ನ್ಯಾಯ ಮಂಡಳಿ ಸದಸ್ಯೆ ಗೀತಾ ಸಜ್ಜನಶೆಟ್ಟಿ ಅವರು ಫೋಕ್ಸೊ ಕಾಯ್ದೆ ಕುರಿತು ಮಾತನಾಡುವರು.
ಫೆ. 24ರಂದು ಬೆಂಗಳೂರಿನಲ್ಲಿ ವಿಕಲಚೇತನರಿಗಾಗಿ ಉದ್ಯೋಗ ಮೇಳ
************************************************************
ಕಲಬುರಗಿ,ಫೆ.12.(ಕ.ವಾ.)-ವಿ.ಆರ್. ಯುವರ್ ವಾಯ್ಸ್ ಸಂಸ್ಥೆಯ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲ್ (ಮಡಿವಾಳ ಮಾರುಕಟ್ಟೆ ಹತ್ತಿರ) ಕೆ.ಎಸ್.ಆರ್.ಪಿ. ಮೈದಾನದಲ್ಲಿ ಇದೇ ಫೆಬ್ರವರಿ 24 ರಂದು ವಿಕಲಚೇತನ ಅಭ್ಯರ್ಥಿಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಕಲಬುರಗಿ ಜಿಲ್ಲೆಯ ವಿಕಲಚೇತನ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
ಕುರಿ-ಆಡು ಸಾಕಾಣಿಕೆ ತರಬೇತಿ ಶಿಬಿರ: ಹೆಸರು ನೋಂದಣಿ ಮಾಡಿಕೊಳ್ಳಲು ಸೂಚನೆ
*************************************************************************
ಕಲಬುರಗಿ,ಫೆ.12.(ಕ.ವಾ.)-ಬಾಗಲಕೋಟೆ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದ ವತಿಯಿಂದ ಮೂರು ದಿನಗಳ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಶಿಬಿರವನ್ನು ಬಾಗಲಕೋಟೆಯಲ್ಲಿ ಏರ್ಪಡಿಸಲಾಗಿದೆ ಎಂದು ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಎಫ್.ಬಿ. ಬಾಳಿಕಾಯಿ ಅವರು ತಿಳಿಸಿದ್ದಾರೆ.
ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ಶಿಬಿರದಲ್ಲಿ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವುದು.
ಆಸಕ್ತ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದ ದೂರವಾಣಿ ಸಂಖ್ಯೆ 08354-244048, ಮೊಬೈಲ್ ಸಂಖ್ಯೆ 9482630790ಗಳಿಗೆ ಕರೆ ಮಾಡಿ ತಮ್ಮ ಹೆಸರು, ವಿಳಾಸ, ದೂರವಾಣಿ/ಮೊಬೈಲ್ ಸಂಖ್ಯೆಗಳ ಮಾಹಿತಿಯನ್ನು ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ತರಬೇತಿ ಶಿಬಿರಕ್ಕೆ ನಿಗದಿಪಡಿಸಿದ ದಿನಾಂಕದ ಮಾಹಿತಿಯನ್ನು ನಂತರ ತಮ್ಮ ನೋಂದಾಯಿಸಿದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ.ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ-587103 ಕಚೇರಿ ಹಾಗೂ ಮೇಲ್ಕಂಡ ಮೊಬೈಲ್, ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಮುನೋಳ್ಳಿ ಬಿಸಿಎಂ ವಸತಿ ನಿಲಯಕ್ಕೆ ಜಿ.ಪಂ. ಅಧ್ಯಕ್ಷರ ಭೇಟಿ
******************************************************
ಕಲಬುರಗಿ,ಫೆ.12.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ ಅವರು ಮಂಗಳವಾರ ಫೆಬ್ರವರಿ 12ರಂದು ಆಳಂದ ತಾಲೂಕಿನ ಮುನೋಳ್ಳಿ ಗ್ರಾಮದ ಬಿ.ಸಿ.ಎಂ. ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸದರಿ ವಸತಿ ನಿಲಯದ ದಾಖಲಾತಿಯಲ್ಲಿನ 50 ಮಕ್ಕಳ ಪೈಕಿ ಕೇವಲ 20 ಮಕ್ಕಳು ಹಾಜರಿದ್ದರು. ಬಯೋಮೆಟ್ರಿಕ್ ಹಾಜರಾತಿ ಕೆಲಸ ನಿರ್ವಹಿಸುತ್ತಿಲ್ಲ ಎಂಬುವುದು ಗಮನಕ್ಕೆ ಬಂದಿರುತ್ತದೆ. ಆಹಾರ ದಾಸ್ತಾನು ಪರಿಶೀಲಿಸಿ ಆಹಾರದ ಗುಣಮಟ್ಟ ಕಾಯ್ದುಕೊಳ್ಳಲು ಸೂಚಿಸಿದರು. ಮಕ್ಕಳ ಸಮಸ್ಯೆಗಳ ಕುರಿತು ಚರ್ಚಿಸಿದರು. ಪರೀಕ್ಷೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಲು ತಿಳಿಸಿದರು. ವಸತಿ ನಿಲಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿ ಮಾಡಲು ಸೂಚಿಸಿದರು.
ಕ.ರಾ.ಮು.ವಿ.: ವಿದ್ಯಾರ್ಥಿಗಳು ಆಂತರಿಕ ನಿಬಂಧನೆ ಸಲ್ಲಿಸಲು ಫೆ. 16ರಂದು
******************************************************************
ಕೊನೆಯ ದಿನ
**************
ಕಲಬುರಗಿ,ಫೆ.12.(ಕ.ವಾ.)-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಇಲ್ಲಿ 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಬಿ.ಎ., ಬಿ.ಕಾಂ., ಬಿಎಲ್‍ಐಎಸ್‍ಸಿ ಹಾಗೂ ಪ್ರಥಮ ಎಂ.ಎ., ಎಂ.ಕಾಂ. ಹಾಗೂ ಎಂಎಲ್‍ಐಎಸ್‍ಸಿ ವಿಷಯಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ತಮ್ಮ ಮೊದಲನೇ ಕಂತಿನ ಆಂತರಿಕ ನಿಬಂಧನೆಗಳನ್ನು ಸಲ್ಲಿಸಲು 2019ರ ಫೆಬ್ರವರಿ 16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕ.ರಾ.ಮು.ವಿ. hಣಣಠಿ://ಞsoumಥಿsoಡಿe.ಞಚಿಡಿಟಿಚಿಣಚಿಞಚಿ.iಟಿ ಅಂತರ್ಜಾಲಕ್ಕೆ ಸಂಪರ್ಕಿಸಿ ಪಡೆಯಬೇಕೆಂದು ಕಲಬುರಗಿ ಪ್ರಾದೇಶಿಕ ನಿರ್ದೇಶಕ ಡಾ.ಸಂಗಮೇಶ ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಜಿ.ಪಂ. ಅಧ್ಯಕ್ಷರ ಭೇಟಿ
***********************************************************
ಕಲಬುರಗಿ,ಫೆ.12.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹೆಚ್. ಮಲಾಜಿ ಅವರು ಸೋಮವಾರ ಫೆಬ್ರವರಿ 11 ರಂದು ಸೇಡಂ ತಾಲೂಕಿನ ನೀಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 2 ಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶಾರದಾ ಅವರು ಗೈರು ಹಾಜರಾಗಿದ್ದು, ಅಂಗನವಾಡಿ ಕೇಂದ್ರದಲ್ಲಿ 17 ಮಕ್ಕಳ ಪೈಕಿ ಕೇವಲ 5 ಮಕ್ಕಳು ಮಾತ್ರ ಉಪಸ್ಥಿತರಿದ್ದರು. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರ ಸಹ ತಯಾರಿಸಿರುವುದಿಲ್ಲ. ಈ ಕುರಿತು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹೆಚ್. ಮಾಲಾಜಿ ಅವರು ಸೇಡಂ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸದರಿ ಅಂಗನವಾಡಿ ಕಾರ್ಯಕರ್ತೆರ ಮೇಲೆ ಕ್ರಮ ಜರುಗಿಸಲು ಸೂಚಿಸಿದರು.
ನಂತರ ಅಧ್ಯಕ್ಷರು ಅದೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ಶಾಲೆ ದಾಖಲಾತಿಯಲ್ಲಿರುವ 120 ಮಕ್ಕಳ ಪೈಕಿ ಕೇವಲ 82 ಮಕ್ಕಳು ಮಾತ್ರ ಹಾಜರಿದ್ದರು. ಪರೀಕ್ಷೆ ಸಮಯ ಸಮೀಪಿಸುತ್ತಿರುವುದರಿಂದ ಮಕ್ಕಳ ಹಾಜರಾತಿ ಹೆಚ್ಚಿಸಲು ಮುಖ್ಯ ಗುರುಗಳಿಗೆ ಸೂಚಿಸಿದರು. ಶಾಲೆಯಲ್ಲಿ ಇಂಗ್ಲೀಷ ಮತ್ತು ವಿಜ್ಞಾನ ವಿಷಯ ಬೋಧಕರ ಹುದ್ದೆಗಳು ಖಾಲಿ ಇದ್ದು, ಹುದ್ದೆ ಭರ್ತಿ ಮಾಡುವಂತೆ ಮುಖ್ಯ ಗುರುಗಳಾದ ನಾಗಾಲಾಂಬಿಕ ಅವರು ಅಧ್ಯಕ್ಷರಿಗೆ ಮನವಿ ಮಾಡಿದರು. ಮಕ್ಕಳಿಗೆ ಉತ್ತಮ ವಾತಾವರಣದಲ್ಲಿ ಶಿಕ್ಷಣ ನೀಡುತ್ತಿರುವುದನ್ನು ಕಂಡು ಬಂದಿರುತ್ತದೆ.
ಅಧ್ಯಕ್ಷರು ನೀಲಹಳ್ಳಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿದಾಗ ಈ ವರ್ಷ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ 10,000 ಮಾನವ ದಿನಗಳು ಸೃಜಿಸಲಾಗಿದೆ. ಗ್ರಾಮದಲ್ಲಿ ಯಾವುದೇ ನೀರಿನ ಸಮಸ್ಯೆ ಇರುವುದಿಲ್ಲ ಹಾಗೂ 5 ವಾರಗಳಿಂದ ಕೂಲಿಕಾರರಿಗೆ ಹಣ ಸಂದಾಯವಾಗಿಲ್ಲ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಿಯಾಂಕ ಅವರು
ಅಧ್ಯಕ್ಷರಿಗೆ ಮಾಹಿತಿ ನೀಡಿದರು. ಅಧ್ಯಕ್ಷರು ಈ ವಿಷಯ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಕಟ್ಟಡದ ಪಕ್ಕದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಧ್ಯಕ್ಷರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ ಸಾಹು, ಭೀಮರಾವ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಫೆಬ್ರವರಿ 13ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
************************************************
ಕಲಬುರಗಿ,ಫೆ.12.(ಕ.ವಾ)-ಜೆಸ್ಕಾಂನ ಕಲಬುರಗಿ ನಗರ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ನಗರದ 11.ಕೆ.ವಿ. ಗಣೇಶ ನಗರ ಹಾಗೂ ಉಮರ್ ಕಾಲೋನಿ ಫೀಡರಗಳ ಮೇಲೆ ಜಿ.ಐ.ಎಸ್. ಕೆಲಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಫೆಬ್ರವರಿ 13 ಅಂದು ಬೆಳಿಗ್ಗೆ 10 ರಿಂದ ಸಾಯಂಕಾಲ 4 ಗಂಟೆ ವರೆಗೆ ಸದರಿ ಫೀಡರಗಳ ವ್ಯಾಪ್ತಿಯ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ಕೆ.ವಿ. ಗಣೇಶ ನಗರ ಫೀಡರ್: ಎಂ.ಬಿ.ನಗರ, ಬಾಕರ್ ಪಂಕ್ಷನ್ ಹಾಲ್, ಆದರ್ಶ ನಗರ ಮತ್ತು ಬಂದೇ ನವಾಜ್ ಕಾಲೋನಿ, ಕೆ.ಹೆಚ್.ಬಿ. ಲೇಔಟ್, ಗಣೇಶ ನಗರ, ಮನ್ಸೂಬ್‍ದಾರ ಲೇಔಟ್, ಆದರ್ಶ ನಗರ ನ್ಯೂ ಜಿ.ಡಿ.ಎ. ಮೇಹತಾ ಲೇಔಟ್ ಮತ್ತು ವೀರೆಂದ್ರ ಪಾಟೀಲ್ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11 ಕೆ.ವಿ. ಉಮರ್ ಕಾಲೋನಿ ಫೀಡರ್: ಉಮರ ಕಾಲೋನಿ, ಅಬುಬಕ್ಕರ್ ಕಾಲೋನಿ, ಆಜಾದಪೂರ ರಸ್ತೆ, ಅಹ್ಮದ್ ನಗರ, ಮಕ್ಕಾ ಕಾಲೋನಿ, ಮಹಾರಾಜಾ ಹೋಟೆಲ್, ವಾಟರ್ ಟ್ಯಾಂಕ್À, ಯಾದುಲ್ಲಾ ಕಾಲೋನಿ, ಕಮಾಲ- ಎ-ಮುಜರತ್, ಮೆಹಬೂಬ ನಗರ, ವೀರಭದ್ರೇಶ್ವರ ದೇವಾಲಯ, ಖಾನ್ ಕಂಪೌಂಡ್, ಟಿಪ್ಪು ಸುಲ್ತಾನ ಚೌಕ್, ಸನಾ ಹೋಟೆಲ್, ಅಕ್ಬರ್‍ಬಾಗ್, ರಾಮಜಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ
*****************************
ಕಲಬುರಗಿ,ಫೆ.12(ಕ.ವಾ)- ಹೆಣ್ಣು-ಗಂಡು ಭೇದ ತೋರದೆ ಎಲ್ಲರಿಗೂ ಶಿಕ್ಷಣ ನೀಡುವುದು ಮುಖ್ಯವಾಗಿದೆ. ಶಿಕ್ಷಣದ ಮೂಲಕ ಮಾತ್ರ ಇತರೆ ಸಮಾಜದಂತೆ ನಾವು ಮುಖ್ಯ ವಾಹಿನಿಗೆ ಬರಲು ಸಾಧ್ಯ ಎಂದು ಕಲಬುರಗಿ ಸರಕಾರಿ ಪದವಿ ಮಹಾವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ನಾಗಪ್ಪ ಟಿ.ಗೋಗಿ ಹೇಳಿದರು.
ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ ಸವಿತಾ ಮಹರ್ಷಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಪ್ರಪ್ರಥಮವಾಗಿ ಸವಿತಾ ಮಹರ್ಷಿ ಜಯಂತಿಯನ್ನು ರಥಸಪ್ತಮಿ ದಿನದಂದು ಆಚರಿಸುತ್ತಿರುವುದು ಹೆಮ್ಮೆಯ ವಿಚಾರ ಇದಕ್ಕಾಗಿ ಸರ್ಕಾರಕ್ಕೆ ಅಭಿನಂದನೆಗಳು. ಆರ್ಯುವೇದ, ಸಂಗೀತ ಕ್ಷೇತ್ರದಲ್ಲಿ ಸವಿತಾ ಮಹರ್ಷಿಯವರ ಕೊಡುಗೆ ಅಪಾರವಾಗಿದ್ದು, ಸಮಾಜ ಎಂದಿಗೂ ಇದನ್ನು ಮರೆಯಬಾರದು ಹಾಗೂ ಅವರ ಮಾರ್ಗದರ್ಶನದಲ್ಲಿ ಸಮಾಜ ಸಾಗಬೇಕು ಎಂದರು.
ಗುರು ಸಿಕ್ಕಾಗಿದೆ, ಇದೀಗ ನಾವು ಪ್ರಗತಿಯತ್ತ ಮುನ್ನುಗ್ಗಬೇಕಾಗಿದೆ. ಹಿಂದೆ ರಾಜಮನೆತನದ ಆಳ್ವಿಕೆಯಲ್ಲಿ ಕ್ಷೌರ ವೃತ್ತಿ ಮಾಡುವ ಸವಿತಾ ಸಮಾಜದವರಿಗೆ ಯಾವುದೇ ರೀತಿಯ ತೆರಿಗೆ ವಿಧಿಸುತ್ತಿರಲಿಲ್ಲ. ಬೀದಿ ಬದಿಯಲ್ಲ್ಲಿ ಗೂಡಂಗಡಿ ಇಟ್ಟುಕೊಂಡು ಕ್ಷೌರಿಕ ವೃತ್ತಿ ಮಾಡಿ ತಮ್ಮ ಸಂಸಾರವನ್ನು ನಡೆಸುವ ಸವಿತಾ ಸಮಾಜದವರಿಗೆ ಸರಕಾರವು ತೆರಿಗೆ ವಿನಾಯತಿ ನೀಡಬೇಕು ಎಂದರು.
ಸವಿತಾ ಸಮಾಜದ ಗೌರವ ಅಧ್ಯಕ್ಷ ಡೈಮಂಡ್ ಅಶೋಕ ಮಾತನಾಡಿ, ಸವಿತಾ ಮಹರ್ಷಿ ಅವರ ಜಯಂತಿ ಆಚರಣೆಯ ಮೂಲಕ ಸರ್ಕಾರವು ಈ ಸಮುದಾಯವನ್ನು ಗುರುತಿಸಿದೆ. ಸಮುದಾಯದ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಸವಿತಾ ಮಹರ್ಷಿ ನಿಗಮ ಮಂಡಳಿ ಸ್ಥಾಪನೆಗೆ ಕ್ರಮವಹಿಸಬೇಕು ಎಂದರು. ಸವಿತಾ ಸಮಾಜದ ಜಿಲ್ಲಾಧ್ಯಕ್ಷ ನರಸಿಂಹರಾವ್ ಆರ್.ಮೋತಕಪಲ್ಲಿ ಮಾತನಾಡಿ ಎಲ್ಲಾ ತಾಲೂಕಿನಲ್ಲಿ ಸವಿತಾ ಮಹರ್ಷಿ ಸಮುದಾಯ ಭವನ ನಿರ್ಮಾಣವಾಗಬೇಕು. ಸರಕಾರ ನೀಡುವ ಆಶ್ರಯ ಮನೆಗಳಲ್ಲಿ ಅಧಿಕ ಪ್ರಮಾಣದಲ್ಲಿ ಮನೆಗಳು ಸವಿತಾ ಮಹರ್ಷಿ ಸಮಾಜದ ವರ್ಗದವರಿಗೆ ಮನೆ ನಿರ್ಮಾಣ ಮಾಡಿಕೊಳ್ಳುವಂತೆ ಆರ್ಥಿಕ ಸೌಲಭ್ಯ ಒದಗಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವ ಗಣ್ಯರು ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸವಿತಾ ಸಮಾಜದ ನೌಕರರ ಸಂಘದ ಅಧ್ಯಕ್ಷ ದತ್ತಾತ್ರೇಯ ಚೌಧರಿ, ಮಾಜಿ ಅಧ್ಯಕ್ಷ ಸುಭಾಷ ಬಾದಾಮಿ, ಉಪಾಧ್ಯಕ್ಷ ಪ್ರಕಾಶ ಕೋಟನೂರ, ಪ್ರಧಾನ ಕಾರ್ಯದರ್ಶಿ ಶರಣಪ್ರಕಾಶ ಸೂರ್ಯವಂಶಿ, ಸವಿತಾ ಸಮಾಜದ ಯುವ ಅಧ್ಯಕ್ಷ ಸುಧಾಕರ, ಮುಖಂಡರಾದ ಬಾಬು ಹಕ್ಕಿಂ, ಜಿಲ್ಲಾ ಪ್ರತಿನಿಧಿ ಶಾರದಾ ಮಂಗಲಗಿ ಸೇರಿದಂತೆ ಸಮಾಜದ ಇನ್ನೀತರ ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಸಮಾಜದ ಬಾಂಧವರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸ್ವಾಗತಿಸಿದರೆ, ಶ್ರೀನಿವಾಸ ನಾಲವಾರ ವಂದಿಸಿದರು. ಕಪಿಲದೇವ ಚಕ್ರವರ್ತಿ ನಿರೂಪಿಸಿದರು. ಇದಕ್ಕೂ ಮುನ್ನ ಸವಿತಾ ಮಹರ್ಷಿ ರವರ ಭಾವಚಿತ್ರದ ಭವ್ಯ ಮೆರವಣಿಗೆಯು ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ.ಎಸ್.ಎಂ ಪಂಡಿತ ರಂಗಮಂದಿರದವರಿಗೆ ಸಾಗಿತು.









ಹೀಗಾಗಿ ಲೇಖನಗಳು News and Photo Date: 12-02-2019

ಎಲ್ಲಾ ಲೇಖನಗಳು ಆಗಿದೆ News and Photo Date: 12-02-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 12-02-2019 ಲಿಂಕ್ ವಿಳಾಸ https://dekalungi.blogspot.com/2019/02/news-and-photo-date-12-02-2019.html

Subscribe to receive free email updates:

0 Response to "News and Photo Date: 12-02-2019"

ಕಾಮೆಂಟ್‌‌ ಪೋಸ್ಟ್‌ ಮಾಡಿ