ಶೀರ್ಷಿಕೆ : News and Photo Date: 21-02-2019
ಲಿಂಕ್ : News and Photo Date: 21-02-2019
News and Photo Date: 21-02-2019
ವಸತಿ ನಿಲಯಗಳ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ಅನುಕೂಲ
*********************************************************
ಕಲಬುರಗಿ,ಫೆ.21.(ಕ.ವಾ.)-ಕಲಬುರಗಿ ಜಿಲ್ಲೆಯ ಯುವಕರಿಗೆ ಶೈಕ್ಷಣಿಕ ಸೌಲಭ್ಯ ಕಲ್ಪಿಸುವ ನಿಟ್ಟನಲ್ಲಿ ಸ್ನಾತಕೋತ್ತರ, ಮೆಟ್ರಿಕ್ ನಂತರದ, ಮಹಿಳೆಯರ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದ್ದು, ಇದರಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಅವರು ಗುರುವಾರ ಕಲಬುರಗಿ ರಾಜಾಪುರ ರಸ್ತೆಯಲ್ಲಿರುವ ಆರ್.ಟಿ.ಓ. ಕ್ರಾಸ್‍ನ ಡಾ.ಬಿ.ಆರ್. ಅಂಬೇಡ್ಕರ ವಸತಿ ನಿಲಯ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಒಟ್ಟು 84.29 ಕೋಟಿ ರೂ., ಹಿಂದುಳಿ ವರ್ಗಗಳ ಕಲ್ಯಾಣ ಇಲಾಖೆಯ ಒಟ್ಟು 6 ಕೋಟಿ ರೂ., ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಒಟ್ಟು 11.56 ಕೋಟಿ ರೂ. ಹಾಗೂ ಲೋಕೋಪಯೋಗಿ ಇಲಾಖೆಯ 11.10 ಕೋಟಿ ರೂ.ಗಳ ಹಾಗೂ 1.75 ಕೋಟಿ ರೂ. ವೆಚ್ಚದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕಚೇರಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನೂತನ ಮೈತ್ರಿ ಸರ್ಕಾರದ ಕೇವಲ ಆರು ತಿಂಗಳ ಆಡಳಿತದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸುಮಾರು 115 ಕೋಟಿ ರೂ.ಗಳ ಕಾಮಗಾರಿಗೆ ಚಾಲನೆ ನೀಡುತ್ತಿರುವುದು ಐತಿಹಾಸಿಕವಾಗಿದೆ. ಇದು ಜಿಲ್ಲಾ ಉಸ್ತುವಾರಿ ಸಚಿವರ, ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಸಾಧ್ಯವಾಗಿದೆ. ಈ ಹಿಂದೆ ತಾವು ಕಂದಾಯ ಸಚಿವರಿದ್ದಾಗ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ನಿಲಯಗಳನ್ನು ನಿರ್ಮಿಸಲಾಗಿತ್ತು. ಆದರೆ ಅವುಗಳು 35 ವರ್ಷ ಹಳೆಯದಾಗಿದ್ದು, ನಿರ್ವಹಣೆಯಿಲ್ಲದೇ ಬಿದ್ದು ಹೋಗುವ ಸ್ಥಿತಿಯಲ್ಲಿವೆ. ಸಧ್ಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆಯಿಂದ ಸುಧಾರಿತ ಗುಣಮಟ್ಟದ ವಸತಿ ನಿಲಯಗಳನ್ನು ನಿರ್ಮಿಸುತ್ತಿರುವುದು ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ವಿದ್ಯಾರ್ಥಿ ನಿಲಯಗಳನ್ನು ಗುಣಮಟ್ಟದಿಂದ ನಿರ್ಮಿಸಬೇಕು. ಈ ವಸತಿ ನಿಲಯಗಳನ್ನು ವಿದ್ಯಾರ್ಥಿಗಳು ಒಳ್ಳೆಯ ರೀತಿಯಿಂದ ಕಾಪಾಡಿಕೊಂಡು ಹೋಗಬೇಕು. ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ಓದಿನಲ್ಲಿ ತೊಡಗುವ ಹಾಗೆ ವಾತಾವರಣ ನಿರ್ಮಿಸಲು ವಸತಿ ನಿಲಯದ ನೀಲನಕ್ಷೆಯಲ್ಲಿ ಬದಲಾವಣೆಗಳ ಅವಶ್ಯಕತೆಯಿದ್ದಲ್ಲಿ ಮಾರ್ಪಡಿಸಬೇಕು ಎಂದರು.
ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಗಳ ಅಭಿವೃದ್ಧಿ ಆಗಬೇಕಾಗಿದ್ದು, ಈ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಜಿಲ್ಲೆಯ ಅಧಿಕಾರಿಗಳು ತಮ್ಮ ಹಣಕಾಸು ವ್ಯಾಪ್ತಿಯ ಅಧಿಕಾರವನ್ನು ಚಲಾಯಿಸಿ ಈ ಭಾಗಕ್ಕೆ ಹೆಚ್ಚಿನ ಅನುದಾನ ದೊರೆತು ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಕ್ರಮ ಜರುಗಿಸಬೇಕು ಎಂದರು.
ಕಲಬುರಗಿ ಜಿಲ್ಲೆಯನ್ನು ಅಭಿವೃದ್ಧಿಪಡಿಸಲು ಕೇಂದ್ರದಿಂದ ಈ ಭಾಗಕ್ಕೆ ಕೇಂದ್ರ ರಸ್ತೆ ನಿಧಿ, ರಾಷ್ಟ್ರೀಯ ಹೆದ್ದಾರಿಗಳು, ಇ.ಎಸ್.ಐ.ಕಟ್ಟಡ, ರೈಲು ಮಾರ್ಗ ಹಾಗೂ ನಿಲ್ದಾಣಗಳಂತಹ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ. ಇದು ಕಲಬುರಗಿ ಜಿಲ್ಲೆಯ ನಾಗರಿಕರ ಆಶೀರ್ವಾದದಿಂದ ಸಾಧ್ಯವಾಗಿದೆ. ಕಲಬುರಗಿ ಜಿಲ್ಲೆಯ ಮತದಾರರು ನೀಡಿರುವ ಶಕ್ತಿಯನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಲಾಗಿದೆ. ಮುಂದೆಯೂ ಸಹ ಜಿಲ್ಲೆಯ ಅಭಿವೃದ್ಧಿಗಾಗಿ ಮತದಾರರು ಶಕ್ತಿ ತುಂಬಬೇಕು ಎಂದು ಮನವಿ ಮಾಡಿದ ಸಂಸದರು, ದಲಿತರಲ್ಲಿ, ಅಲ್ಪಸಂಖ್ಯಾತರಲ್ಲಿ ಹಾಗೂ ಬಡವರಲ್ಲಿ ಅನಕ್ಷರತೆ ಇನ್ನೂ ಹೆಚ್ಚಾಗಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವ ಸಾಧ್ಯತೆಗಳಿದ್ದು, ಕೇಂದ್ರ ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಜರುಗಿಸಬೇಕಾಗಿದೆ. ನೋಟುಗಳ ಅಪಮೌಲ್ಯೀಕರಣದಿಂದ ಉಗ್ರವಾದ ನಶಿಸುತ್ತದೆ ಎಂದು ಭಾವಿಸಲಾಗಿತ್ತು. ಆದರೆ ಇತ್ತೀಚೆಗೆ ಉಗ್ರರು ದೇಶದ 42 ಯೋಧರ ಬಲಿ ಪಡೆದಿದ್ದಾರೆ. ಉಗ್ರರನ್ನು ಸಂಹರಿಸಲು ದಿಟ್ಟವಾದ ಕ್ರಮ ಕೈಗೊಳ್ಳಲು ಎಲ್ಲರೂ ಒಂದಾಗಿ ಹೋರಾಡಬೇಕಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕದ ಭೂಪಟಕ್ಕೆ ಮುಕುಟವಾಗಿರುವ ಕಲ್ಯಾಣ ಕರ್ನಾಟಕವು ಆಧುನಿಕ ಯುಗದಲ್ಲಿ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿ ಹೊಂದಿದೆ. ಇದನ್ನು ತೆಗೆದು ಹಾಕಲು ಈ ಭಾಗಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈ ಭಾಗದ ಹಿರಿಯರೆಲ್ಲರೂ ಪ್ರಯತ್ನಿಸುತ್ತಿದ್ದಾರೆ. ಸಮಾಜ ಕಲ್ಯಾಣ ಸಚಿವರ ಪ್ರಯತ್ನದಿಂದಾಗಿ ಕಲಬುರಗಿಯಲ್ಲಿ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿರುವ ಐದು ವಸತಿ ನಿಲಯಗಳು ನಿರ್ಮಾಣಗೊಳ್ಳುತ್ತಿದ್ದು, ಇದರಿಂದ ಸುಮಾರು 1200 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ವಸತಿ ನಿಲಯಗಳಲ್ಲಿ ಸಂಪೂರ್ಣ ಸೌಲಭ್ಯಗಳನ್ನು ಒದಗಿಸುವ ಮೂಲಕ ಅನುಕೂಲ ಕಲ್ಪಿಸಲಾಗುತ್ತಿದೆ. ಇಂದಿನ ಯುಗದಲ್ಲಿ ಶರವೇಗದಲ್ಲಿ ಬೆಳೆಯುತ್ತಿರುವ ನಾಗರೀಕರಣದ ಲಾಭವನ್ನು ಯುವಕ/ಯುವತಿಯರಿಗಾಗಿ ದೊರಕಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಐರಾವತ ಮತ್ತು ಸಮೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಬಡ ಕುಟುಂಬದ ಯುವಕರು ವಿದೇಶದಲ್ಲಿ ಓದುವ ಕನಸನ್ನು ನನಸಾಗಿಸಲು ಪ್ರತಿಭಾವಂತ ಬಡ ಕುಟುಂಬದ ಯುವಕರಿಗೆ ವಿದೇಶದಲ್ಲಿ ಓದಲು ಅನುಕೂಲವಾಗುವ ಹಾಗೆ ತರಬೇತಿ ನೀಡಿ ವಿದೇಶದ ಒಳ್ಳೆಯ ವಿಶ್ವವಿದ್ಯಾಲಯದಲ್ಲಿ ವಿದ್ಯಾಬ್ಯಾಸಕ್ಕೆ ಅಣಿಗೊಳಿಸಲಾಗುತ್ತಿದೆ. ಇದರ ಸಂಪೂರ್ಣ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸಲಿದೆ. ವಿನೂತನ ಕಲ್ಪನೆಯನ್ನು ಹೊಂದಿರುವ ಹಿಂದುಳಿದ ವರ್ಗಗಳ ಯುವಕರಿಗೆ ಹೊಸ ಮಾದರಿಯ ಉದ್ಯೋಗ ನೀಡಲು ಹಾಗೂ ಅವರಿಗೆ ಆರ್ಥಿಕ ನೆರವು ಕಲ್ಪಿಸಲು ಉನ್ನತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಶಾಸಕರಾದ ಎಂ.ವೈ. ಪಾಟೀಲ, ಖನೀಜ್ ಫಾತೀಮಾ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಉಪ ಮೇಯರ್ ಆಲಿಯಾ ಶಿರೀನ್, ಮುಖಂಡರಾದ ಅಲ್ಲಮಪ್ರಭು ಪಾಟೀಲ, ಜಗದೇವ ಗುತ್ತೇದಾರ್, ಆಲಂ ಖಾನ್, ಬಸವರಾಜ ಭೀಮಳ್ಳಿ, ನೀಲಕಂಠ ಮೂಲಗೆ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ. ರಾಜಾ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಸದಸ್ಯರು, ಮತ್ತಿತರರು ಪಾಲ್ಗೊಂಡಿದ್ದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಸತೀಶ ಸ್ವಾಗತಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ಪಾಷಾ ಕಾರಟಗಿ ವಂದಿಸಿದರು. ಶಶಿಕಲಾ ಜಡೆ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತಂದಿರುವ ಮೈತ್ರಿ ಸರ್ಕಾರದ ಸಾಧನೆಯನ್ನು ಬಿಂಬಿಸುವ ಮೈತ್ರಿಯ ನಡಿಗೆ ಅಭಿವೃದ್ಧಿಯ ಕಡೆಗೆ ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಯಿತು.

ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣ ಜನರಿಗೆ ತಲುಪಿಸಲು ಸಲಹೆ
********************************************************
ಕಲಬುರಗಿ,ಫೆ.21 (ಕ.ವಾ)-ಸರ್ಕಾರದ ವಿವಿಧ ಇಲಾಖೆಯ ಸೌಲಭ್ಯಗಳು ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ಬಡ ಜನರಿಗೆ ದೊರಕಿಸಬೇಕು. ಹಳ್ಳಿಗಳ ಸಮಸ್ಯೆ, ದೂರುಗಳನ್ನು ನಿವಾರಿಸಿದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಆರ್. ಮಾಣಿಕ್ಯ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಹಾರಾ ಸೇವಾ ಸಂಸ್ಥೆ ಮತ್ತು ರಹೆನುಮಾ ಕಾನೂನು ಸಲಹಾ ಕೇಂದ್ರ, ಕುಮಸಿ ಗ್ರಾಮ ಪಂಚಾಯತ, ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಕುಮಸಿ ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಕುಮಸಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ದೂರು ಮುಕ್ತ ಗ್ರಾಮದ ಅಂಗವಾಗಿ ಬಡತನ ನಿರ್ಮೂಲನಾ ಯೋಜನೆ ಅಡಿಯಲ್ಲಿ ಕಾನೂನು ಸೇವಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಡತನ ನಿರ್ಮೂಲನೆಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಗ್ರಾಮೀಣ ಪ್ರದೇಶದ ಬಡ ಜನರಿಗೆ ಸಮರ್ಪಕವಾಗಿ ಈ ಯೋಜನೆಗಳನ್ನು ತಲುಪುತ್ತಿಲ್ಲ. ತಾಲೂಕು ಮಟ್ಟದ ಅಧಿಕಾರಿಗಳು ಮುತುವರ್ಜಿ ವಹಿಸಿ ಬಡತನವನ್ನು ಹೊಗಲಾಡಿಸಲು ಅರ್ಹ ಬಡವರಿಗೆ ಯೋಜನೆಗಳ ಪ್ರಯೊಜನ ದೊರಕಿಸಬೇಕು. ಅಂಗವಿಕಲ ವೇತನ, ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಪಡಿತರ ಚೀಟಿ, ಕುಡಿಯುವ ನೀರು, ವಿದ್ಯುತ್, ಆಧಾರ ಕಾರ್ಡ್ ಸಮಸ್ಯೆ ಇತ್ಯಾದಿ ಯಾವುದೇ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕಾದರೆ, ಎಲ್ಲರೂ ಆಧಾರ ಕಾರ್ಡ್, ಪಡಿತರ ಚೀಟಿ, ಜಾತಿ, ಆದಾಯ ಪ್ರಮಾಣಪತ್ರ ಇನ್ನಿತರ ದಾಖಲೆಗಳು ಸಂಬಂಧಪಟ್ಟ ಇಲಾಖೆಗೆ ನೀಡಿ ಸೌಲಭ್ಯ ಪಡೆಯಬಹುದಾಗಿದೆ ಎಂದರು.
ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಮಾನಪ್ಪ ಕಟ್ಟಿಮನಿ ಮಾತನಾಡಿ, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 100 ದಿನಗಳ ಖಾತರಿ ಉದ್ಯೋಗ ಪಡೆಯಬಹುದಾಗಿದೆ. ಗ್ರಾಮಸ್ಥರು ಗ್ರಾಮ ಪಂಚಾಯತಿಯಲ್ಲಿ ಜಾರ್ಬ್ ಕಾರ್ಡ್ ಪಡೆದುಕೊಂಡು ಕೂಲಿಗೆ ಅರ್ಜಿ ಸಲ್ಲಿಸಬೇಕು. ಬೇಸಿಗೆಯಲ್ಲಿ ಕೆಲಸಕ್ಕಾಗಿ ಗ್ರಾಮಸ್ಥರು ಬೇರೆ ಊರುಗಳಿಗೆ ಹೋಗದಂತೆ ತಡೆಯಲು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಾಮೂಹಿಕ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿ ದಿನಕ್ಕೆ 249 ರೂ.ಗಳಂತೆ ಕೂಲಿ ನೀಡಲಾಗುತ್ತಿದೆ. ಕೆರೆಯ ಹೂಳೆತ್ತುವುದು, ತಮ್ಮ ಹೊಲಗಳ ಬದುಗಳ ನಿರ್ಮಾಣ ಮಾಡಿಕೊಳ್ಳುವುದು, ದನದ ಕೊಟ್ಟಿಗೆ ನಿರ್ಮಿಸಿಕೊಳ್ಳಬಹುದಾಗಿದೆ ಎಂದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಕಾಂತ ಜಿವಣಗಿ ಮಾತನಾಡಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಲಾಗಿದ್ದು, ಸಣ್ಣ ಮತ್ತು ಅತೀ ಸಣ್ಣ ರೈತ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು 6000 ರೂ. ಗಳನ್ನು ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ ಈ ಮಾಹಿತಿಯನ್ನು ಗ್ರಾಮ ಪಂಚಾಯತ ನೋಟಿಸಿ ಬೋರ್ಡ್‍ನಲ್ಲಿ ಅಳವಡಿಸಲಾಗಿದ್ದು, ಯೋಜನೆಗೆ ಆಯ್ಕೆಯಾದ ರೈತರು ದಾಖಲಾತಿಗಳನ್ನು ಸಲ್ಲಿಸಬೇಕೆಂದರು.
ತಾಲ್ಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ, ಉಪ ತಹಶೀಲ್ದಾರ ಶಿವಪ್ರಭು ಹಿರೇಮಠ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರವೀಣ ಹೇರೂರು, ತೊಟಗಾರಿಕೆ ಸಹಾಯಕ ನಿರ್ದೇಶಕ ರಾಹುಲ, ಸಹಾರಾ ಸೇವಾ ಸಂಸ್ಥೆಯ ನಿರ್ದೇಶಕ ಮಸ್ತಾನ ಬಿರಾದಾರ, ಗ್ರಾಮ ಪಂಚಾಯತ ಅಧ್ಯಕ್ಷ ಮಹಮ್ಮದ್ ಶಫೀಕ್, ಸದಸ್ಯೆ ಲಕ್ಷ್ಮೀ ಬಾಯಿ, ಸುಮೀತ್ರಬಾಯಿ ಸೇರಿದಂತೆ ತಾಲ್ಲೂಕಾ ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವೃದ್ದರಿಗೆ ಹಾಗೂ ಅಂಗವಿಕಲರಿಗೆ ಮಾಸಾಶನ ಪ್ರಮಾಣಪತ್ರ, ಮಾಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಜಾರ್ಬ್ ಕಾರ್ಡ್ ಹಾಗೂ ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್ ನೀಡಲಾಯಿತು.

ಜಿಲ್ಲಾ ಮಟ್ಟದ ಯುವಜನಮೇಳ ಫೆ. 26ಕ್ಕೆ ಮುಂದೂಡಿಕೆ
************************************************
ಕಲಬುರಗಿ,ಫೆ.21.(ಕ.ವಾ)-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕಲಬುರಗಿ ಸುಪರ ಮಾರ್ಕೇಟಿನ ಎಂ.ಪಿ.ಎಚ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಇದೇ ಫೆಬ್ರವರಿ 23 ರಂದು ಏರ್ಪಡಿಸಲಾಗಿದ್ದ 2018-19ನೇ ಸಾಲಿನ ಜಿಲ್ಲಾ ಮಟ್ಟದ ಯುವಜನಮೇಳ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಫೆಬ್ರವರಿ 26ಕ್ಕೆ ಮುಂದೂಡಲಾಗಿದೆ.
ಈ ಮುಂದೂಡಿದ ಜಿಲ್ಲಾ ಮಟ್ಟದ ಯುವಜನ ಮೇಳ ಕಾರ್ಯಕ್ರಮವನ್ನು ಇದೇ ಫೆಬ್ರವರಿ 26 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಕಲಾವಿದರು ಇದಕ್ಕೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

“ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ:
ರೈತರು ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ
****************************************
ಕಲಬುರಗಿ,ಫೆ.21.(ಕ.ವಾ.)-ಕೇಂದ್ರ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯ ವೃದ್ಧಿಸಲು “ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pಒ-ಏISಂಓ)” ಎಂಬ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ 2 ಹೆಕ್ಟೇರಿಗಿಂತ ಕಡಿಮೆ ಭೂ ಒಡೆತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು 6000 ರೂ. ಗಳನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಟೇಶಕುಮಾರ ಅವರು ತಿಳಿಸಿದ್ದಾರೆ.
ಅರ್ಹ ಸಣ್ಣ ಮತ್ತು ಅತೀ ಸಣ್ಣ ರೈತರ ಪಟ್ಟಿಗಳನ್ನು ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರವಾಗಿ ಪ್ರಕಟಿಸಲಾಗುವುದು. ಈ ಸಂಭಾವ್ಯ ಅರ್ಹ ರೈತರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡಿರುವ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಡ ಕಚೇರಿ / ಅಟಲ್ ಜೀ ಜನಸ್ನೇಹಿ ಕೇಂದ್ರಕ್ಕೆ ತೆರಳಿ ಅನುಬಂಧ (ಸಿ) ಯಲ್ಲಿ ತಮ್ಮ ಹೆಸರು, ಆಧಾರ್ ಸಂಖ್ಯೆ, ಜಮೀನಿನ ವಿವರ ಮುಂತಾದ ವಿವರಗಳನ್ನು ನಮೂದಿಸಿ ಸ್ವಯಂ ಘೋಷಣೆಯನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಬೃಹತ್ ಜನಸ್ಪಂದನ ಸಭೆ: ವಿವಿಧ ಇಲಾಖೆಗಳಿಂದ ಸವಲತ್ತುಗಳನ್ನು ಪಡೆಯಲು
------------------------------------------------
ಸಲಹೆ
ಕಲಬುರಗಿ,ಫೆ.21.(ಕ.ವಾ)-ಕಲಬುರ್ಗಿ ಜಿಲ್ಲಾ ಮಟ್ಟದ ಬೃಹತ್ ಜನಸ್ಪಂದನ ಸಭೆಯನ್ನು ಫೆಬ್ರವರಿ 28 ರಂದು ರಂದು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ವಿವಿಧ ಇಲಾಖೆಗಳಲ್ಲಿರುವ ಸವಲತ್ತುಗಳನ್ನು ಪಡೆಯಲು ಈ ಕೆಳಗೆ ತಿಳಿಸಿದ ದಾಖಲಾತಿಗಳನ್ನು ಆಯಾ ತಾಲೂಕಿನ ಇಲಾಖೆಗಳಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಮುಖ್ಯಮಂತ್ರಿ ಮಾತೃಶ್ರೀ ಯೋಜನೆ ಪ್ರಯೋಜನಕ್ಕಾಗಿ ಫಲಾನುಭವಿಯು ಅರ್ಜಿಯೊಂದಿಗೆ ಬಿಪಿಎಲ್ ಕಾರ್ಡ, ಆಧಾರ ಕಾರ್ಡ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ ಹಾಗೂ ಬ್ಯಾಂಕ್ ಖಾತೆ ನೀಡಬೇಕು. ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಗಾಗಿ ಅರ್ಜಿಯೊಂದಿಗೆ ಫಲಾನುಭವಿಯ ಪತಿಯ ಅಧಾರ ಕಾರ್ಡ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಸಲ್ಲಿಸಬೇಕು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬಿದಾಯಿ ಯೋಜನೆಗಾಗಿ ಫಲಾನುಭವಿಗಳು ಅರ್ಜಿಯೊಂದಿಗೆ ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ, ವಯಸ್ಸಿನ ದಾಖಲೆ, ಬ್ಯಾಂಕ್ ಖಾತೆ ದಾಖಲೆಗಳನ್ನು ಸಲ್ಲಿಸಬೇಕು. ಮದರಸಾಗಳಲ್ಲಿ ಆಧುನಿಕ ಹಾಗೂ ಔಪಚಾರಿಕ ಶಿಕ್ಷಣ ನೀಡುವ ಯೋಜನೆಗಾಗಿ ಫಲಾನುಭವಿಗಳು ಅರ್ಜಿಯೊಂದಿಗೆ ಕನಿಷ್ಠ ಎರಡು ವರ್ಷ ಕಾರ್ಯನಿರ್ವಹಿಸಿದ ದಾಖಲಾತಿ, ಸಂಸ್ಥೆಯ ನೋಂದಣಿ ದಾಖಲಾತಿ, ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಹಾಜರಾತಿ, ಎರಡು ವರ್ಷಗಳ ಅಡಿಟ್ ವರದಿ ದಾಖಲೆಗಳನ್ನು ಸಲ್ಲಿಸಬೇಕು. ಸಮುದಾಯ ಅಥವಾ ಶಾದಿ ಮಹಲ್ ಯೋಜನೆಗಾಗಿ ಅರ್ಜಿಯೊಂದಿಗೆ ವಕ್ಫ್ ಸಂಸ್ಥೆಯಲ್ಲಿ ನೋಂದಾಯಿಸಿದ ದಾಖಲೆ, 100*100 ಚ.ಅಡಿಯ ನಿವೇಶನ, ವಕ್ಫ್ ಸಂಸ್ಥೆಯಿಂದ ಎನ್.ಓ.ಸಿ. ಪ್ರಮಾಣಪತ್ರ ಸಲ್ಲಿಸಬೇಕು.
ಕ್ರಿಶ್ಚಿಯನ್ ಸಮಗ್ರ ಅಭಿವೃದ್ಧಿ ಯೋಜನೆಗಾಗಿ ನಿಗದಿತ ಅರ್ಜಿಯೊಂದಿಗೆ ಚರ್ಚ ನೋಂದಣಿಪ್ರಮಾಣಪತ್ರ, ಅಡಿಟ್ ರಿಪೋರ್ಟ, ನಿವೇಶನ ಪತ್ರ, ಆಡಳಿತ ಮಂಡಳಿ ಪಟ್ಟಿ, ಜಿಲ್ಲಾಧಿಕಾರಿಗಳ ಶಿಫಾರಸ್ಸು, ಕಟ್ಟಡ ಅಂದಾಜು ಪಟ್ಟಿ, ಮುಚ್ಚಳಿಕೆ ಪತ್ರಗಳ ದಾಖಲಾತಿಗಳನ್ನು ಸಲ್ಲಿಸಬೇಕು.
ಸಮಾಜ ಕಲ್ಯಾಣ ಇಲಾಖೆಯ ಅಂತರ್‍ಜಾತಿ ವಿವಾಹಕ್ಕೆ ಪ್ರೋತ್ಸಾಹಧನಕ್ಕಾಗಿ ವಿವಾಹ ನೋಂದಣಿ ಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರ, ಶಾಲಾ ದಾಖಲಾತಿ, ಪ್ಯಾನ ಕಾರ್ಡ ಮತ್ತು ಆಧಾರ ಕಾರ್ಡ, ವಯಸ್ಸಿನ ದಾಖಲಾತಿ, ದಂಪತಿಗಳ ಜಂಟಿ ಖಾತೆ ಪಾಸ್ ಬುಕ್ ಗಳ ದಾಖಲಾತಿಗಳನ್ನು ಸಲ್ಲಿಸಬೇಕು.
ಸಾಮೂಹಿಕ ವಿವಾಹದ ಯೋಜನೆಯ ಪ್ರಯೋಜನಕ್ಕಾಗಿ ಸಂಘ ಸಂಸ್ಥೆಗಳಲ್ಲಿ ಜರುಗಿದ ಸಾಮೂಹಿಕ ಅಥವಾ ಸರಳ ವಿವಾಹದ ನೋಂದಣಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರ, ಶಾಲಾ ದಾಖಲಾತಿ, ಪ್ಯಾನ್ ಮತ್ತು ಆಧಾರ ಕಾರ್ಡ, ವಯಸ್ಸಿನ ದಾಖಲಾತಿ, ದಂಪತಿಗಳ ಜಂಟಿ ಖಾತೆ ಪಾಸ್ ಬುಕ್ ದಾಖಲಾತಿಗಳನ್ನು ಸಲ್ಲಿಸಬೇಕು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರ ಮರು/ವಿಧವಾ ವಿವಾಹ ಯೋಜನೆಗಾಗಿ ವಿವಾಹ ನೋಂದಣಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣಪತ್ರ, ಶಾಲಾ ದಾಖಲಾತಿ, ಪ್ಯಾನ್ ಕಾರ್ಡ ಮತ್ತು ಆಧಾರ ಕಾಡ, ಮಹಿಳೆಯ ಬ್ಯಾಂಕ್ ಖಾತೆ, ಮೊದಲನೇ ಪತಿಯ ಮರಣ ಪ್ರಮಾಣಪತ್ರ, ಮೊದಲನೇ ಪತಿಯ ಆಧಾರ ಕಾರ್ಡ, ವಯಸ್ಸಿನ ದಾಖಲಾತಿಗಳನ್ನು ಸಲ್ಲಿಸಬೇಕು.
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಆಧಾರ ಮತ್ತು ಪಡಿತರ ಚೀಟಿ ದಾಖಲೆ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು.
ಅಟಜೀ ಜನಸ್ನೇಹಿ ಕೇಂದ್ರಗಳ ಮೂಲಕ ನಾಗರಿಕರಿಗೆ ವಿವಿಧ 27 ಬಗೆಯ ಸೇವೆಗಳನ್ನು ನೀಡಲಾಗುತ್ತಿದ್ದು, ಈ ಸೇವೆಗಳ ಸೌಲಭ್ಯ ಪಡೆಯಲು ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಅಥವಾ ಆಧಾರ ಕಾರ್ಡ, ಆಯಾ ಸೇವೆಗಳ ಅರ್ಜಿ ನಮೂನೆಯಲ್ಲಿ ಸ್ವಯಮ ಘೋಷಣಾ ಪತ್ರ ಸೇರಿದಂತೆ ವಿವಿಧ ಸೇವೆಗಳಿಗೆ ಅವಶ್ಯಕವಿರುವ ದಾಖಲಾತಿಗಳನ್ನು ಸಲ್ಲಿಸಿ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ.
ಮಹಾತ್ಮಾ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವೈಯಕ್ತಿಕವಾಗಿ ಫಲಾನುಭವಿಗಳು ತಮ್ಮ ಜಮೀನಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಕೃಷಿ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ,ಪಂಗಡದ, ಸಣ್ಣ ಮತ್ತು ಅತೀ ಸಣ್ಣ ಹಾಗೂ ಇತರೆ ರೈತರು ಹೊಲದಲ್ಲಿ ಕೃಷಿ ಹೊಂಡ, ಕ್ಷೇತ್ರ ಬದು ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಇದಕ್ಕಾಗಿ ಆಯಾ ಗ್ರಾಮದ ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಳ್ಳಲು ಕೋರಿದೆ.
ಮಿನಿ ಮಣ್ಣು ಪರೀಕ್ಷಾ ಘಟಕ ಸ್ಥಾಪನೆಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಫೆ.21.(ಕ.ವಾ.)-ಕೃಷಿ ಇಲಾಖೆಯ ಮಣ್ಣು ಆರೋಗ್ಯ ನಿರ್ವಹಣೆ ಕಾರ್ಯಕ್ರಮದಡಿ ಕಲಬುರಗಿ ಜಿಲ್ಲೆಯ 24 ಹೋಬಳಿಗಳ ಗ್ರಾಮ ಮಟ್ಟದಲ್ಲಿ ಮಿನಿ ಮಣ್ಣು ಪರೀಕ್ಷಾ ಘಟಕಗಳನ್ನು ಸ್ಥಾಪಿಸಲು ಅರ್ಹ ಉದ್ದಿಮೆದಾರರು/ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಗ್ರಾಮ ಮಟ್ಟದಲ್ಲಿ ಮಿನಿ ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪಿಸಿ ಮತ್ತು ಮುನ್ನಡೆಸಲು ಸ್ಥಳಿಯ ಉದ್ದಿಮೆದಾರರು/ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು. ಸ್ಥಳೀಯ ಉದ್ದಿಮೆದಾರರು/ ಅಭ್ಯರ್ಥಿಗಳು ಗ್ರಾಮ ಮಟ್ಟದಲ್ಲಿ ಸ್ಥಾಪಿಸಲಾಗುವ ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪನೆಗೆ ಗರಿಷ್ಟ ವೆಚ್ಚ 5 ರೂ.ಲಕ್ಷಗಳಾಗಿದೆ. ಶೇ 75 ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಶೇ. 25 ರಷ್ಟು ಉದ್ದಿಮೆದಾರರು ಸ್ವಂತವಾಗಿ ಭರಿಸಬೇಕಾಗುತ್ತದೆ. ಮಾರ್ಗ ಸೂಚಿಯನ್ವಯ ಪ್ರತಿ ಮಣ್ಣು ಮಾದರಿ ಸಂಗ್ರಹಣೆ, ವಿಶ್ಲೇಷಣೆ, ಮಣ್ಣು ಆರೋಗ್ಯ ಚೀಟಿ ತಯಾರಿಕೆ ಹಾಗೂ ವಿತರಣೆಗಾಗಿ ಸಹಾಯಧನ ನೀಡಲಾಗುವುದು.
ಅಭ್ಯರ್ಥಿಗಳು ಗ್ರಾಮ ಮಟ್ಟದಲ್ಲಿನ ಉದ್ದಿಮೆದಾರರಾಗಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ದ್ವಿತೀಯ ಪಿ.ಯು.ಸಿ (ವಿಜ್ಞಾನ) ಪಾಸಾಗಿರಬೇಕು ಮತ್ತು ಕಂಪ್ಯೂಟರ ಜ್ಞಾನ ಹೊಂದಿರಬೇಕು. ಗ್ರಾಮದಲ್ಲಿ ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸ್ವಂತ ಅಥವಾ ಬಾಡಿಗೆ ಕಟ್ಟಡ ಹೊಂದಿರಬೇಕು. ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ ಫೆಬ್ರವರಿ 22ರ ಬೆಳಿಗ್ಗೆ 10 ಗಂಟೆಯಿಂದ ಪಡೆದು ಭರ್ತಿ ಮಾಡಿ ಅಗಶ್ಯಕ ದಾಖಲೆಗಳೊಂದಿಗೆ ಫೆಬ್ರವರಿ 27ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಂಟಿ ನಿರ್ದೇಶಕರ ಕಾರ್ಯಾಲಯವನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278630ನ್ನು ಸಂಪರ್ಕಿಸಲು ಕೋರಲಾಗಿದೆ.
ಬಾಲಕಿಯ ಪೋಷಕರ ಪತ್ತೆಗೆ ಮನವಿ
ಕಲಬುರಗಿ,ಫೆ.21.(ಕ.ವಾ.)-ಕಲಬುರಗಿ ಸರ್ಕಾರಿ ಬುದ್ದಿಮಾಂದ್ಯ ಬಾಲಕಿಯರ ಬಾಲಮಂದಿರದಲ್ಲಿರುವ ಅಂದಾಜು 17 ವರ್ಷದ ಸಾಧಾರಣ ಬುದ್ಧಿಮಾಂದ್ಯತೆ ಹೊಂದಿದ ಬಾಲಕಿಯು 2019ರ ಫೆಬ್ರವರಿ 3ರಂದು ರಾಯಚೂರ ಜಿಲ್ಲೆಯ ಲಿಂಗಸೂರ ಮಹಿಳಾ ಸಾಂತ್ವನ ಕೇಂದ್ರದ ಮುಖಾಂತರ ಲಿಂಗಸೂರನಲ್ಲಿ ಸಿಕ್ಕಿರುತ್ತಾಳೆ.
ಈ ಬಾಲಕಿಯರ ಪಾಲನೆ ಹಾಗೂ ಪೋಷಣೆಗಾಗಿ ರಾಯಚೂರ ಜಿಲ್ಲೆಯ ಲಿಂಗಸೂರ ಮಹಿಳಾ ಸಾಂತ್ವನ ಕೇಂದ್ರದ ಸಿಬ್ಬಂದಿಗಳು ಕಲಬುರಗಿ ಸರ್ಕಾರಿ ಬುದ್ದಿಮಾಂದ್ಯ ಬಾಲಕಿಯರ ಬಾಲಮಂದಿರದಲ್ಲಿ ದಾಖಲಿಸಿರುತ್ತಾರೆ. ಈ ಬಾಲಕಿಯು ಕಪ್ಪು ಬಣ್ಣ ಹೊಂದಿದ್ದು, ಈ ಬಾಲಕಿಗೆ ಮಾತು ಬರುವುದಿಲ್ಲ. ಸಂಸ್ಥೆಯಲ್ಲಿ ಈ ಬಾಲಕಿ ಹೆಸರನ್ನು ಸಂಧ್ಯಾ ಎಂದು ಇಡಲಾಗಿದೆ.
ಮೇಲ್ಕಂಡ ಬಾಲಕಿಯ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 60 ದಿನದೊಳಗಾಗಿ ಅಗತ್ಯ ದಾಖಲೆ (ರೇಷನ ಕಾರ್ಡ ಹಾಗೂ ಆಧಾರ ಕಾರ್ಡ ಗುರುತಿನ ಚೀಟಿ) ಗಳೊಂದಿಗೆ ಕಲಬುರಗಿಯ ಆಳಂದ ರಸ್ತೆಯಲ್ಲಿರುವ ಬುದ್ಧಿಮಾಂದ್ಯ ಸರ್ಕಾರಿ ಬಾಲಕಿಯರ ಬಾಲಮಂದಿರದ ಅಧೀಕ್ಷಕರನ್ನು ಹಾಗೂ ದೂರವಾಣಿ ಸಂ. 08472-230053ನ್ನು ಸಂಪರ್ಕಿಸಲು ಕೋರಿದೆ.
ಫೆ. 22ರಂದು ವಿಶ್ವ ಚಿಂತನಾ ದಿನಾಚರಣೆ
ಕಲಬುರಗಿ,ಫೆ.21.(ಕ.ವಾ.)-ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸ್ಥಳೀಯ ಸಂಸ್ಥೆ ಚಿಂಚೋಳಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಚಿಂಚೋಳಿ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಲಾರ್ಡ ಸ್ವೀಪನಸನ್ಸ್ ಬೇಡನ್ ಪಾವೆಲ್‍ರವರ ಜನ್ಮ ದಿನಾಚರಣೆ ಅಂಗವಾಗಿ ವಿಶ್ವ ಚಿಂತನಾ ದಿನಾಚರಣೆಯನ್ನು ಇದೇ ಫೆಬ್ರವರಿ 22ರಂದು ಬೆಳಿಗ್ಗೆ 10.30 ಗಂಟೆಗೆ ಚಿಂಚೋಳಿ ಪೋಲಕಪಳ್ಳಿಯ ಆರ್.ಎಂ.ಎಸ್.ಎ. ಆದರ್ಶ ವಿದ್ಯಾಲಯ ಶಾಲೆಯಲ್ಲಿ ಏರ್ಪಡಿಸಲಾಗಿದೆ.
ಕಮಲಾಪುರ ಡಯಟ್ (ಅಭಿವೃದ್ಧಿ) ಉಪನಿರ್ದೇಶಕರು ಹಾಗೂ ಪ್ರಾಂಶುಪಾಲ ಶಶಿಕಾಂತ ವರ್ತುಳೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಚಿಂಚೋಳಿ ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಣ್ಣಾ ಸಿಂಪಿ ಅಧ್ಯಕ್ಷತೆ ವಹಿಸುವರು. ಚಿಂಚೋಳಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೈನೋದ್ದೀನ್ ಪಾಟ್ಲಿಕರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕಿಶೋರ ಪಿ. ಕುಲಕರ್ಣಿ, ತಾಲೂಕು ದೈಹಿಕ ಶಿಕ್ಷಕ ಪರಿವೀಕ್ಷಕ ನಾರಾಯಣ ರೆಡ್ಡಿ ಸೇರಿದಂತೆ ಮತ್ತಿತರ ಗಣ್ಯರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳುವರು.
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳು
ಕಲಬುರಗಿ,ಫೆ.21.(ಕ.ವಾ.)-ದೇಶದಾದ್ಯಂತ ಇದೇ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದಿಂದ ಇದೇ ಫೆಬ್ರವರಿ 25 ರಿಂದ 28 ರವರೆಗೆ ಕೆಳಕಂಡ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದ ಜಿಲ್ಲಾ ವಿಜ್ಞಾನ ಅಧಿಕಾರಿ ಸಿ.ಎನ್. ಲಕ್ಷ್ಮೀನಾರಾಯಣ ಅವರು ತಿಳಿಸಿದ್ದಾರೆ.

ಫೆಬ್ರವರಿ 25 ರಂದು ಬೆಳಿಗ್ಗೆ 10.15 ಗಂಟೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರುಗಲಿದೆ. ಅಂದು ಬೆಳಿಗ್ಗೆ 11 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕರಿಗಾಗಿ ಪರಿಣಾಮಕಾರಿ ಬೋಧನೆ ಮತ್ತು ಶಿಕ್ಷಣ ಕಲೆ ಕುರಿತು ಸಮ್ಮೇಳನ ಏರ್ಪಡಿಸಲಾಗಿದೆ. ಫೆಬ್ರವರಿ 26 ರಂದು ಬೆಳಿಗ್ಗೆ 11 ಗಂಟೆಗೆ 5 ರಿಂದ 7ತರಗತಿವರೆಗಿನ ಮಕ್ಕಳಿಗೆ ಸಿ.ವಿ. ರಾಮನ್ ಮತ್ತು ರಾಮನ್ ಪರಿಣಾಮ ವಿಷಯ ಹಾಗೂ 8 ರಿಂದ 10 ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸೌರಶಕ್ತಿಯ ಸದ್ಬಳಕೆಗೆ ಬಳಸುವ ಸಾಧನಗಳು ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಫೆಬ್ರವರಿ 26 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಅವಕಾಶ ವಂಚಿತ ಮಕ್ಕಳಿಗಾಗಿ ವಿಜ್ಞಾನದ ಅರಿವು ಕುರಿತು ಕಮ್ಮಟ, ಫೆಬ್ರವರಿ 27 ರಂದು ಬೆಳಿಗ್ಗೆ 11 ಗಂಟೆಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಸಾಧನೆಗಳ ಕುರಿತು ಭಾಷಣ ಸ್ಪರ್ಧೆ, ಫೆಬ್ರವರಿ 28 ರಂದು ಬೆಳಿಗ್ಗೆ 10.45 ಗಂಟೆಗೆ ಸಿ.ವಿ. ರಾಮನ್ ಸ್ಮಾರಕ ಭಾಷಣ ಹಾಗೂ ಬಹುಮಾನ ವಿತರಣಾ ಸಮಾರಂಭ ಜರುಗಲಿದೆ. ಅಂದು ಮಧ್ಯಾಹ್ನ 12.30 ಗಂಟೆಗೆ ಮುಕ್ತ ರಸಪ್ರಶ್ನೆ ಕಾರ್ಯಕ್ರಮ ಜರುಗಲಿದೆ.
ಫೆಬ್ರವರಿ 25 ರಿಂದ 28ರವರೆಗೆ ಶಾಲೆಯ ಮಕ್ಕಳು ಮತ್ತು ಸಾರ್ವಜನಿಕರಿಗಾಗಿ ಪ್ರತಿದಿನ 25 ಜನರಿಗೆ ಮಾತ್ರ ದೂರದರ್ಶಕದ ಮೂಲಕ ಆಕಾಶ ವೀಕ್ಷಣೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯುಳ್ಳ ಶಾಲೆಗಳು ಫೆಬ್ರವರಿ 24ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರ ಹಾಗೂ ದೂರವಾಣಿ ಸಂಖ್ಯೆ 08472-220608ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಫೆಬ್ರವರಿ 23ರಂದು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ
ಕಲಬುರಗಿ,ಫೆ.21.(ಕ.ವಾ.)-ಕಲಬುರಗಿ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ಬುನಾದಿ ತರಬೇತಿ ಪಡೆಯುತ್ತಿರುವ 8ನೇ ತಂಡದ ಪಿ.ಎಸ್.ಐ. (ಸಿವಿಲ್), 4ನೇ ತಂಡದ ಪಿ.ಎಸ್.ಐ. (ನಿಸ್ತಂತು) ಹಾಗೂ 1ನೇ ತಂಡದ ಪಿ.ಎಸ್.ಐ. (ಸಿ.ಐ.ಡಿ, ಕೆ.ಎಸ್.ಐ.ಎಸ್.ಎಫ್., ಎಫ್‍ಬಿ.ಪಿ., ಗುಪ್ತವಾರ್ತೆ) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮವನ್ನು ಕಲಬುರಗಿ ಪಿ.ಟಿ.ಸಿ. ಕವಾಯತು ಮೈದಾನದಲ್ಲಿ ಇದೇ ಫೆಬ್ರವರಿ 23 ರಂದು ಬೆಳಿಗ್ಗೆ 8.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಗೃಹ ಸಚಿವರಾದ ಎಂ.ಬಿ. ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರಶಿಕ್ಷಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ, ಬಹುಮಾನ ವಿತರಿಸುವರು. ತರಬೇತಿ ಪೊಲೀಸ್ ಮಹಾ ನಿರ್ದೇಶಕ ಪದಮ್ ಕುಮಾರ ಗರ್ಗ್ ಹಾಗೂ ತರಬೇತಿ ಪೊಲೀಸ್ ಮಹಾ ನಿರೀಕ್ಷಕ ರವಿ. ಎಸ್. ಅವರು ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರವಾಸಿ ಟ್ಯಾಕ್ಸಿ: ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕಲಬುರಗಿ,ಫೆ.21.(ಕ.ವಾ.)-ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಟ್ಯಾಕ್ಸಿ ಸಹಾಯಧನ ಯೋಜನೆಯಡಿ 2017-18ನೇ ಸಾಲಿನ ಹೆಚ್ಚುವರಿಯಾಗಿ ಹಾಗೂ 2018-19ನೇ ಸಾಲಿನ ಪ್ರವಾಸಿ ಟ್ಯಾಕ್ಸಿ ಸಹಾಯಧನ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ/ ಅಲ್ಪಸಂಖ್ಯಾತರ ವರ್ಗದವರಿಂದ ಸ್ವೀಕೃತವಾದ ಅರ್ಜಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕಲಬುರಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ 2019ರ ಫೆಬ್ರವರಿ 22ರಂದು ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ಇದನ್ನು ಗಮನಿಸಬೇಕೆಂದು ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅಭ್ಯರ್ಥಿಗಳಿಂದ ಸ್ವೀಕೃತವಾದ ಅರ್ಜಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಚರ್ಚಿಸಿ ಗರಿಷ್ಠ ವಯೋಮಿತಿಗೆ ಅನುಗುಣವಾಗಿ ಇಳಿಕೆ ಕ್ರಮದಲ್ಲಿ ತಾಲೂಕುವಾರು ಗುರಿ ಹಂಚಿಕೆಗೆ ಅನುಗುಣವಾಗಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗಳು ಅನುಮೋದಿಸಿದ ನಂತರ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-277484ನ್ನು ಸಂಪರ್ಕಿಸಲು ಕೋರಲಾಗಿದೆ.

ಹೀಗಾಗಿ ಲೇಖನಗಳು News and Photo Date: 21-02-2019
ಎಲ್ಲಾ ಲೇಖನಗಳು ಆಗಿದೆ News and Photo Date: 21-02-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 21-02-2019 ಲಿಂಕ್ ವಿಳಾಸ https://dekalungi.blogspot.com/2019/02/news-and-photo-date-21-02-2019.html

0 Response to "News and Photo Date: 21-02-2019"
ಕಾಮೆಂಟ್ ಪೋಸ್ಟ್ ಮಾಡಿ