ಶೀರ್ಷಿಕೆ : News and Photo Date: 22-02--2019
ಲಿಂಕ್ : News and Photo Date: 22-02--2019
News and Photo Date: 22-02--2019
ಪ್ರಸಕ್ತ ವರ್ಷದಲ್ಲಿ ನಾಲ್ಕು ರಾಷ್ಟ್ರೀಯ ಜನತಾ ಅದಾಲತ್
**************************************************
ಕಲಬುರಗಿ,ಫೆ.22.(ಕ.ವಾ.)-ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 2019ನೇ ಇಸವಿಯಲ್ಲಿ ನಾಲ್ಕು ರಾಷ್ಟ್ರೀಯ ಜನತಾ ನ್ಯಾಯಾಲಯಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಟಿ. ಕಟ್ಟೀಮನಿ ತಿಳಿಸಿದರು.
ಅವರು ಶುಕ್ರವಾರ ಕಲಬುರಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯದ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, 2019ರ ಮಾರ್ಚ್ 9, ಜುಲೈ 13, ಸೆಪ್ಟೆಂಬರ್ 14 ಹಾಗೂ ಡಿಸೆಂಬರ್ 14ರಂದು ದೇಶದಾದ್ಯಂತ ರಾಷ್ಟ್ರೀಯ ಜನತಾ ನ್ಯಾಯಾಲಯ ಏರ್ಪಡಿಸಲಾಗುತ್ತಿದೆ ಎಂದರು.
ಮಾರ್ಚ್ 9 ಹಾಗೂ ಜುಲೈ 13ರಂದು ನಡೆಯುವ ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ ಪ್ರಕರಣ, ವಿದ್ಯುತ್ ಮತ್ತು ನೀರಿನ ಶುಲ್ಕಗಳ ಬಾಕಿ ಪಾವತಿ, ಸಿವಿಲ್, ಕ್ರಿಮಿನಲ್ ಹಾಗೂ ವೈವಾಹಿಕ ಪ್ರಕರಣಗಳನ್ನು ತೀರ್ಮಾನಿಸಲಾಗುವುದು. ಸೆಪ್ಟೆಂಬರ್ 14ರಂದು ಕ್ರಿಮಿನಲ್ ಪ್ರಕರಣ, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರ ವಾಹನ ಅಪಘಾತ ಕ್ಲೇಮ್ ಹಾಗೂ ಕಾರ್ಮಿಕ ವಿವಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಡಿಸೆಂಬರ್ 14ರಂದು ವೈವಾಹಿಕ ವಾಜ್ಯಗಳು, ಭೂಸ್ವಾಧೀನ ಪ್ರಕರಣ, ಸೇವಾ ವಿವಾದ ಪ್ರಕರಣ, ಕಂದಾಯ ಪ್ರಕರಣ ಮತ್ತು ಎಲ್ಲ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು.
ಜನತಾ ನ್ಯಾಯಾಲಯದಲ್ಲಿ ನ್ಯಾಯಾಲಯದ ಒಬ್ಬರು ನ್ಯಾಯಾಧೀಶರು, ಒಬ್ಬರು ವಕೀಲರು ಹಾಗೂ ಕಕ್ಷಿದಾರರು ವಕೀಲರೊಡನೆ ಸಮಾಲೋಚಿಸಿ ಕಕ್ಷಿದಾರರಿಗೆ ಒಪ್ಪಿಗೆಯಾಗುವ ಹಾಗೆ ರಾಜಿ ಸೂತ್ರದ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುವುದು. ರಾಜಿಗೊಂಡ ಪ್ರಕರಣಗಳಿಗೆ ಅಂದೇ ಅಂತಿಮ ಆದೇಶ ನೀಡಲಾಗುವುದು. ಜನತಾ ನ್ಯಾಯಾಲಯದಲ್ಲಿ ತೀರ್ಮಾನಗೊಂಡ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಪ್ರಕರಣವು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳ್ಳುವುದರಿಂದ ನ್ಯಾಯಾಲಯ ನೀಡಿದ ಆದೇಶವೇ ಅಂತಿಮವಾಗಿರುತ್ತದೆ. ಪ್ರಕರಣಗಳು ಇಬ್ಬರು ಕಕ್ಷಿದಾರರೊಂದಿಗೆ ಸಮಾಲೋಚಿಸಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳ್ಳುವುದರಿಂದ ಇಬ್ಬರು ಕಕ್ಷಿದಾರರಲ್ಲಿ ಮನಸ್ಥಾಪ ಇರುವುದಿಲ್ಲ. ಇದರಿಂದ ಸಮಾಜದಲ್ಲಿ ಇಬ್ಬರು ನೆಮ್ಮದಿಯಾಗಿ ಬದುಕಬಹುದಾಗಿದೆ ಎಂದರು.
2018ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 5 ರಾಷ್ಟ್ರೀಯ ಜನತಾ ನ್ಯಾಯಾಲಯಗಳು ನಡೆದಿದ್ದು, ಅವುಗಳಲ್ಲಿ 146 ವ್ಯಾಜ್ಯ ಪೂರ್ವ ಪ್ರಕರಣಗಳು, 147 ಸಿವಿಲ್ ಪ್ರಕರಣಗಳು, 236 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು 1244 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ. ಪ್ರತಿ ಶನಿವಾರ ನಡೆಯುವ ಜನತಾ ನ್ಯಾಯಾಲಯದಲ್ಲಿ ಒಟ್ಟು 2446 ಪ್ರಕರಣಗಳನ್ನು ತೀರ್ಮಾನಿಸಲಾಗಿದೆ. ಜನತಾ ನ್ಯಾಯಾಲಯಗಳಲ್ಲಿ ಕಕ್ಷಿದಾರರಿಗೆ ಅತೀ ಶೀಘ್ರ ಪರಿಹಾರ ಹಾಗೂ ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯ ದೊರಕುವುದು. ಎಲ್ಲ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆಯಬೇಕೆಂದು ಸಲಹೆ ನೀಡಿದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಮಾತನಾಡಿ, ಕ್ರಿಮಿನಲ್ ಪ್ರಕರಣಗಳಲ್ಲಿ ನೋಂದ ಸಂತ್ರಸ್ಥರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿರುವ ಸಂತ್ರಸ್ಥ ಪರಿಹಾರ ಯೋಜನೆಯಡಿ ಪರಿಹಾರ ನೀಡಲಾಗುವುದು. ಸಚಿತ್ರಸ್ಥರು ನಿಗದಿತ ಅರ್ಜಿಯೊಂದಿಗೆ ಸಂಬಂಧಪಟ್ಟ ದಾಖಲಾತಿಗಳನ್ನು ಸಲ್ಲಿಸಿದಲ್ಲಿ ಸಮಿತಿಯು ವಿಚಾರಣೆ ಕೈಗೊಂಡು ಪರಿಹಾರ ಮಂಜೂರು ಮಾಡುತ್ತದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಇಲ್ಲಿಯವರೆಗೆ 27.70 ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ. ಜನಸಾಮಾನ್ಯರಿಗೆ ಸುಲಭವಾಗಿ ಕಾನೂನಿನ ಸಲಹೆ ದೊರಕಿಸಲು ನ್ಯಾಯಾಲಯ ಆವರಣ, ತಹಶೀಲ್ದಾರರ ಕಾರ್ಯಾಲಯ, ಸಿ.ಡಿ.ಪಿ.ಓ. ನಗರ ಮತ್ತು ಗ್ರಾಮೀಣ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ಬಾಲ ನ್ಯಾಯಿಕ ಮಂಡಳಿ, ಎ.ಆರ್.ಟಿ. ಕೇಂದ್ರ, ಜಿಲ್ಲಾ ಆಸ್ಪತ್ರೆ ಹಾಗೂ ಕೇಂದ್ರ ಕಾರಾಗೃಹಗಳಲ್ಲಿ ಉಚಿತ ಕಾನೂನು ಸಲಹಾ ಕೇಂದ್ರಗಳನ್ನು ಸ್ಥಾಪಿಸಿ ವಕೀಲರನ್ನು ನೇಮಿಸಲಾಗಿದೆ. ಈ ಕೇಂದ್ರಗಳಲ್ಲಿ ಉಚಿತವಾಗಿ ಕಾನೂನು ಸಲಹೆ ಪಡೆಯಬಹುದಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ ಉಪಸ್ಥಿತರಿದ್ದರು.
ಮತದಾರರ ನೋಂದಣಿಗೆ ವಿಶೇಷ ಅಭಿಯಾನ
*****************************************
ಕಲಬುರಗಿ,ಫೆ.22.(ಕ.ವಾ.)-ಚುನಾವಣಾ ಆಯೋಗದ ನಿರ್ದೇಶನದಂತೆ ಗುಲಬರ್ಗಾ ಉತ್ತರ ಹಾಗೂ ಗುಲಬರ್ಗಾ ದಕ್ಷಿಣ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿನ ಬಿಟ್ಟುಹೋದ ಮತದಾರರ ನೋಂದಣಿಗಾಗಿ 2019ರ ಫೆಬ್ರವರಿ 23 ಹಾಗೂ 24 ಹಾಗೂ ಮಾರ್ಚ್ 2 ಮತ್ತು 3 ರಂದು ನಾಲ್ಕು ದಿನಗಳ ಕಾಲ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮತದಾರರ ನೋಂದಣಿ ಅಧಿಕಾರಿಗಳು ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.
ಇನ್ನು ಕೆಲವು ಅರ್ಹ ಮತದಾರರು ನೋಂದಣಿಯಾಗದೇ ಇರುವುದರಿಂದ ಬಿಟ್ಟು ಹೋದ ಮತದಾರರಿಗೆ ನೋಂದಣಿ ಮಾಡಿಕೊಳ್ಳಲು ಇನ್ನೊಂದು ಅವಕಾಶ ಕಲ್ಪಿಸಲಾಗಿದೆ. ಮೇಲ್ಕಂಡ ದಿನಾಂಕಗಳಂದು ಬಿ.ಎಲ್.ಓ. ಗಳು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಹಾಜರಿದ್ದು, ಸಾರ್ವಜನಿಕರಿಂದ ನಮೂನೆ 6,7,8 ಹಾಗೂ 8ಎ ಅರ್ಜಿಗಳನ್ನು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಸ್ವೀಕರಿಸಬೇಕು. ಸ್ವೀಕೃತವಾದ ಅರ್ಜಿಗಳ ಕುರಿತು ವರದಿಯನ್ನು ಅದೇ ದಿನದಂದು ನಿಗದಿತ ನಮೂನೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣಾ ಶಾಖೆಯಲ್ಲಿ ಸಲ್ಲಿಸಬೇಕು. ಈ ಕುರಿತು ಕಲಬುರಗಿ (ಉತ್ತರ ಮತ್ತು ದಕ್ಷಿಣ) ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ತಮ್ಮ ಅಧೀನದ ಬಿ.ಎಲ್.ಓ.ಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ತಿಳಿಸಿದ್ದಾರೆ.
ಈ ಕಾರ್ಯನಿರ್ವಹಣೆಯಲ್ಲಿ ಏನಾದರೂ ಲೋಪದೋಷ ಉಂಟಾದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಬಿ.ಎಲ್.ಓ.ರವರ ಮೇಲೆ ಶಿಸ್ತು ಕ್ರಮ ಜರುಗಿಸಲು ಶಿಫಾರಸ್ಸು ಮಾಡುವಂತೆ ಮಹಾನಗರ ಪಾಲಿಕೆಯ ಆಯುಕ್ತರು ಸೂಚನೆ ನೀಡಿದ್ದಾರೆ.
ಮಹಿಳಾ ಸಂಸ್ಕøತಿ ಉತ್ಸವ ಅಂಗವಾಗಿ ರಂಗೋಲಿ ಸ್ಪರ್ಧೆ
**************************************************
ಕಲಬುರಗಿ,ಫೆ.22.(ಕ.ವಾ.)-ಕಲಬುರಗಿ ಜಿಲ್ಲೆಯಿಂದ ಮಾರ್ಚ್ ತಿಂಗಳಲ್ಲಿ ನಡೆಯುವ ``ಮಹಿಳಾ ಸಂಸ್ಕೃತಿ ಉತ್ಸವ'' ಅಂಗವಾಗಿ ವಿವಿಧ ವಯೋಮಾನದ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಯನ್ನು ಇದೇ ಫೆಬ್ರವರಿ 27 ರಂದು ಕಲಬುರಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಯೋಮಿತಿ 18 ರಿಂದ 30 ವರ್ಷ, 31 ರಿಂದ 45 ವರ್ಷ ಹಾಗೂ 46 ರಿಂದ ಮೇಲ್ಪಟ್ಟ ಮಹಿಳೆಯರ ವಿವಿಧ ವಿಭಾಗಗಳಲ್ಲಿ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುವುದು. ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಮಹಿಳೆಯರು ಕಲಬುರಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೆÉೀರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿ ಕಚೇರಿಯನ್ನು ಹಾಗು ದೂರವಾಣಿ ಸಂಖ್ಯೆ: 08472-227734ಗೆ ಸಂಪರ್ಕಿಸಲು ಕೋರಲಾಗಿದೆ.
ಚಂದ್ರಂಪಳ್ಳಿ ಕ್ಷೇತ್ರದ ಮಾವಿನ ಫಸಲು ವಿಲೇವಾರಿ
********************************************
ಕಲಬುರಗಿ,ಫೆ.22.(ಕ.ವಾ.)-ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಬೆಳೆದಿರುವ ಮಾವಿನ ಫಸಲನ್ನು 2018-19ನೇ ಸಾಲಿನಲ್ಲಿ ಹಣ್ಣಿನ ವ್ಯಾಪಾರಿಗಳಿಗೆ/ ಸಾರ್ವಜನಿಕರಿಗೆ ಇ-ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು ಎಂದು ಕಲಬುರಗಿ ತೋಟಗಾರಿಕೆ ಇಲಾಖೆಯ ರಾಜ್ಯ ವಲಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಫೆಬ್ರವರಿ 23 ರಂದು ಸಂಜೆ 5 ಗಂಟೆಗೆ ಮಾವಿನ ಅಲ್ಪಾವಧಿ ಫಸಲು ಹರಾಜು ಪ್ರಾರಂಭವಾಗಲಿದೆ. ಮಾರ್ಚ್ 2ರಂದು ಸಂಜೆ 5 ಗಂಟೆಗೆ ಹರಾಜು ಮುಕ್ತಾಯಗೊಳ್ಳಲಿದೆ. ಒಂದನೇ ಕರೆಯಲ್ಲಿ ಬಿಡ್ ನಿಲ್ಲದಿದ್ದಲ್ಲಿ ಮರು ಅಲ್ಪಾವಧಿ ಫಸಲು ಹರಾಜು ಮಾರ್ಚ್ 5 ರ ಸಂಜೆ 5 ಗಂಟೆಗೆ ಪ್ರಾರಂಭವಾಗುತ್ತದೆ. ಮಾರ್ಚ್12 ರಂದು ಸಂಜೆ 5 ಗಂಟೆಗೆ ಮರು ಅಲ್ಪಾವಧಿ ಫಸಲು ಹರಾಜು ಮುಕ್ತಾಯಗೊಳ್ಳಲಿದೆ.
ಹಣ್ಣಿನ ವ್ಯಾಪಾರಿಗಳು/ಸಾರ್ವಜನಿಕರು ಹೆಚ್ಚಿನ ವಿವರಗಳಿಗಾಗಿ ಕಲಬುರಗಿ ಐವಾನ್ ಶಾಹಿ ರಸ್ತೆಯಲ್ಲಿರುವ ರಾಜ್ಯ ವಲಯದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-229479ನ್ನು ಸಂಪರ್ಕಿಸಲು ಕೋರಲಾಗಿದೆ.
ಸಹಕಾರ ಸಚಿವರ ಪ್ರವಾಸ
************************
ಕಲಬುರಗಿ,ಫೆ.22.(ಕ.ವಾ.)-ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಅವರು ಹೈದ್ರಾಬಾದ್ದಿಂದ ರಸ್ತೆ ಮೂಲಕ ಇದೇ ಫೆಬ್ರವರಿ 23 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 10.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಸಮುದಾಯ ಭವನದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಗುತ್ತಿಗೆ ಆಧಾರದ ನೌಕರರ ಪತ್ತಿನ ಸಹಕಾರ ಸಂಘ ನಿ. ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ವೀರಶೈವ ಕಲ್ಯಾಣ ಮಂಟಪದಲ್ಲಿ ಎಸ್.ಪಿ. ಸುಳ್ಳದರವರ ಮಹಿಪಾಲರೆಡ್ಡಿ ಮುನ್ನೂರ ರವರ ಸಂಪಾದನೆಯಲ್ಲಿ ರಚಿತಗೊಂಡ ಅಭಿನಂದನಾ ಗ್ರಂಥದ ಲೋಕಾರ್ಪಣೆ ಮತ್ತು ಸನ್ಮಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು.
ಎಂ.ಫಿಲ್.-ಪಿಎಚ್.ಡಿ ಪ್ರವೇಶಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
*********************************************************
ಕಲಬುರಗಿ,ಫೆ.22.(ಕ.ವಾ.)-ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್., ಪಿಎಚ್.ಡಿ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು (500 ರೂ.ಗಳ ದಂಡ ಶುಲ್ಕದೊಂದಿಗೆ) ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ. ಇನ್ನುಳಿದಂತೆ ಪ್ರವೇಶ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆಬ್ರವರಿ 21 ಎಂದು ನಿಗದಿಪಡಿಸಲಾಗಿತ್ತು.
ಹೀಗಾಗಿ ಲೇಖನಗಳು News and Photo Date: 22-02--2019
ಎಲ್ಲಾ ಲೇಖನಗಳು ಆಗಿದೆ News and Photo Date: 22-02--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 22-02--2019 ಲಿಂಕ್ ವಿಳಾಸ https://dekalungi.blogspot.com/2019/02/news-and-photo-date-22-02-2019.html


0 Response to "News and Photo Date: 22-02--2019"
ಕಾಮೆಂಟ್ ಪೋಸ್ಟ್ ಮಾಡಿ