News and Photos Date: 02-02-2019

News and Photos Date: 02-02-2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photos Date: 02-02-2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photos Date: 02-02-2019
ಲಿಂಕ್ : News and Photos Date: 02-02-2019

ಓದಿ


News and Photos Date: 02-02-2019

ಸಾರ್ವಜನಿಕರಿಂದ ಅಹಲವಾರು ಸ್ವೀಕಾರಕ್ಕೆ ಮಹತ್ವ ನೀಡಿದ ಜಿಲ್ಲಾ ಸಚಿವರು
*******************************************************************
ಕಲಬುರಗಿ,ಫೆ.02.(ಕ.ವಾ)-ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ತಾಲೂಕಿನ ಸಾತನೂರ ಗ್ರಾಮಕ್ಕೆ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ತೆರಳಿದಾಗ ಶಂಕುಸ್ಥಾಪನೆಗಿಂತ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೆ ಮಹತ್ವ ನೀಡಿದ್ದು ವಿಶೇಷವಾಗಿತ್ತು.
ಅವರು ಶನಿವಾರ ಸಾತನೂರ ಗ್ರಾಮದಲ್ಲಿ ಸಾತನೂರ ಹಾಗೂ ಪಕ್ಕದ ಗ್ರಾಮದಿಂದ ಅಹವಾಲುಗಳನ್ನು ಹೊತ್ತು ಆಗಮಿಸಿದ ಸಾರ್ವಜನಿಕರ ತೊಂದರೆಗಳನ್ನು ಆಲಿಸಿ ಸಾತನೂರ ಹಾಗೂ ಹೊಸೂರ ಗ್ರಾಮಗಳು ಸೇರಿದಂತೆ ಸುಮಾರು 6 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸಾರ್ವಜನಿಕರು ಗಮನಕ್ಕೆ ತಂದಿದ್ದು, ಈಗಾಗಲೇ ಸಾತನೂರ ಗ್ರಾಮದಲ್ಲಿರುವ ಎರಡು ಬೋರವೇಲ್‍ಗಳು ಫ್ಲಶಿಂಗ್ ಮಾಡುವ ಮೂಲಕ ಅಥವಾ ಖಾಸಗಿ ಬೋರವೇಲ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು. ಈ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಸರಬರಾಜುಗಾಗಿ ಯೋಜನೆಯನ್ನು ರೂಪಿಸಿ ಅದಕ್ಕಾಗುವ ಅನುದಾನವನ್ನು ಪ್ರಗತಿ ಯೋಜನೆಯಡಿ ನೀಡಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಾತನೂರ ಗ್ರಾಮದ ಸ್ತ್ರಿಶಕ್ತಿ ಸಂಘದವರು ಕಳೆದ 10 ವರ್ಷಗಳಿಂದ ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಮಾಡುವಲ್ಲಿ ತೊಡಗಿದ್ದಾರೆ. ಸಧ್ಯ ಇಂತಹ ಸಂಘಗಳಿಂದ ಸರ್ಕಾರ ಪೌಷ್ಠಿಕ ಆಹಾರ ಪಡೆಯುತ್ತಿಲ್ಲ. ಅಂಗನವಾಡಿಗಳಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡುವವರ ನಿಗಮ ಸ್ಥಾಪಿಸುವಂತೆ ಸ್ತ್ರೀಶಕ್ತಿ ಸಂಘದವರ ಮನವಿಗೆ ಸ್ಪಂದಿಸಿದ ಸಚಿವರು ಇದೇ ಮಾದರಿಯಲ್ಲಿ ಅಂಗನವಾಡಿಗಳಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡುವರ ಒಕ್ಕೂಟ ಇದ್ದಲ್ಲಿ ಒಕ್ಕೂಟದ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ ಭೇಟಿ ನೀಡಿ ಸಮಸ್ಯೆಯನ್ನು ತಿಳಿಸಬೇಕು. ನಾನು ಸಹಿತ ಸಚಿವರೊಂದಿಗೆ ಚರ್ಚಿಸಿ ತೊಂದರೆ ನಿವಾರಿಸಲಾಗುವುದು ಎಂದರು.
ನಂತರ ಸಾತನೂರ ಗ್ರಾಮದಲ್ಲಿ ಹಮ್ಮಿಕೊಂಡಿರುವ ಡಾ. ಬಾಬು ಜಗಜೀವನರಾಂ ಭವನ, ಸಿ.ಸಿ. ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಅಧಿಕಾರದಲ್ಲಿದಾಗ ಜನಪ್ರತಿನಿಧಿಗಳು ತಮ್ಮ ಮತಕ್ಷೇತ್ರದ ಜನರ ನೋವು, ಸಮಸ್ಯೆಗಳಿಗೆ ಸ್ಪಂದಿಸಬೇಕು. ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಅರ್ಥೈಸಿಕೊಳ್ಳಬೇಕು. ಮತಕ್ಷೇತ್ರದಲ್ಲಿ ಮಳೆಯ ಅಭಾವದಿಂದ ಬರಗಾಲ ಗಂಭೀರವಾಗಿದ್ದು, ಮತಕ್ಷೇತ್ರದ ಶಾಸಕರು ಗ್ರಾಮಗಳಿಗೆ ಬಂದಾಗ ಸನ್ಮಾನ ಮಾಡುವುದನ್ನು ನಿಷೇಧಿಸಿದರು ಸಹ ಸಾರ್ವಜನಿಕರು ಅರ್ಥೈಸಿಕೊಳ್ಳುತ್ತಿಲ್ಲ. ಇನ್ನು ಮುಂದೆಯಾದರೂ ವಿನ:ಕಾರಣ ಸನ್ಮಾನಕ್ಕೆ ದುಡ್ಡು ಖರ್ಚು ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದರು.
ರಾಜ್ಯದ ಎಲ್ಲ ತಾಲೂಕುಗಳಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಯ ಅಭಾವದಿಂದ ಬರಗಾಲ ತಲೆದೋರಿದೆ. ಕೇಂದ್ರ ಸರ್ಕಾರಕ್ಕೆ ರಾಜ್ಯದಲ್ಲಿರುವ ಬರದ ಪ್ರಕೋಪವನ್ನು ಎಲ್ಲ ಸಚಿವರನ್ನೊಳಗೊಂಡ ನಿಯೋಗದ ಮೂಲಕ ಮನವರಿಕೆ ಮಾಡಿದರೂ ಸಹ ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೊರುತ್ತಿದೆ. ರಾಜ್ಯಕ್ಕೆ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿಗಾಗಿ ನೀಡಬೇಕಾಗಿದ್ದ ಇಲ್ಲಿಯವರೆಗಿನ 1800 ಕೋಟಿ ರೂ. ಸಹ ಬಿಡುಗಡೆ ಮಾಡದೇ ಕೂಲಿಕಾರರಿಗೆ ಕಳೆದೆರಡು ತಿಂಗಳಿಂದ ಸಂಬಳ ಪಾವತಿಸಿಲ್ಲ. ಕೇಂದ್ರ ಸರ್ಕಾರವು ರೈತರ ಹಾಗೂ ಮಹಿಳೆಯರ ಪರವಾಗಿ ಕಾಳಜಿ ಹೊಂದಬೇಕು ಎಂದರು.
ಸಾತನೂರ ಗ್ರಾಮದಲ್ಲಿ ಈ ಹಿಂದೆ 10 ಕೋಟಿ ರೂ.ಗಿಂತ ಹೆಚ್ಚಿನ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇಂದು ಸುಮಾರು 50 ಲಕ್ಷ ರೂ.ಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ಸರ್ಕಾರವು ಮುಂದಿನ ದಿನಗಳಲ್ಲಿ ನೂತನ ಕಾಲೇಜುಗಳನ್ನು ಮಂಜೂರು ಮಾಡಿದ್ದಲ್ಲಿ ಈ ಗ್ರಾಮಕ್ಕೂ ಒಂದು ಕಾಲೇಜು ನೀಡಲು ಪ್ರಯತ್ನ ಪಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಭೀಮಣ್ಣಾ ಸಾಲಿ, ನಾಗರೆಡ್ಡಿ ಪಾಟೀಲ ಕರದಾಳ, ಜಗನ್ನಾಥ ರೆಡ್ಡಿ, ಶಿವಾನಂದ ಪಾಟೀಲ, ನಾಗರಾಜ ಗುತ್ತೇದಾರ್, ರಮೇಶ ಮರಗೋಳ, ಮಕ್ಬೂಲ್ ಪಟೇಲ್, ಶಿವರುದ್ರ ಬೇಣಿ, ಸಾಹೇಬಗೌಡ ಪೊಲೀಸ್ ಪಾಟೀಲ, ಧೂಳಪ್ಪ ಸಾವು ವಂಟಿ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಕೇಂದ್ರೀಯ ವಿದ್ಯಾಲಯದಲ್ಲಿ ಶೇ. 100 ರಷ್ಟು ಫಲಿತಾಂಶಕ್ಕೆ ಸಿದ್ಧತೆ
ಕಲಬುರಗಿ,ಫೆ.02.(ಕ.ವಾ)-ಕಲಬುರಗಿಯ ಕೇಂದ್ರೀಯ ವಿದ್ಯಾಲಯದಲ್ಲಿ ಓದುತ್ತಿರುವ 10ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶವನ್ನು ಶೇ. 100ರಷ್ಟು ಸಾಧಿಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಡಾ. ಅಮರನಾಥ ಕೋರುಕೊಂಡಾ ತಿಳಿಸಿದರು.
ಅವರು ಶನಿವಾರ ಕೇಂದ್ರೀಯ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 10ನೇ ತರಗತಿಯ ಪಾಲಕರ ಹಾಗೂ ಶಿಕ್ಷಕರ ಸಮಾಲೋಚನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಬೆಂಗಳೂರಿನಿಂದ ಹಾಗೂ ಬೆಳಗಾವಿಯಿಂದ ಆಂಗ್ಲ, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳ ಪರಿಣಿತ ಶಿಕ್ಷಕರನ್ನು ಕಲಬುರಗಿಗೆ ಬರಮಾಡಿಕೊಂಡು 10 ದಿನಗಳ ಕಾಲ ವಿಶೇಷ ತರಗತಿಗಳನ್ನು ಏರ್ಪಡಿಸಲಾಗಿದೆ ಹಾಗೂ ಸ್ಟಡಿ ಕ್ಯಾಂಪ್ ಸಹ ನಡೆಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಬೋರ್ಡ್ ಪರೀಕ್ಷೆಗಳನ್ನು ಎದುರಿಸುವ ಸಾಮಥ್ರ್ಯ ವೃದ್ಧಿಯಾಗಿದೆ ಎಂದರು.
ಹತ್ತನೇ ತರಗತಿ ವಿದ್ಯಾರ್ಥಿಗಳು ಪ್ರಥಮ ಪ್ರೀಬೋರ್ಡ ಪರೀಕ್ಷೆಗಳಿಂತ ದ್ವಿತೀಯ ಪ್ರಿಬೋರ್ಡ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿರುವುದು ಸಂತೋಷದ ವಿಷಯವಾಗಿದೆ. ಈಗಾಗಲೇ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಸ್ಟಡಿ ಮಟೇರಿಯಲ್ ಒದಗಿಸಲಾಗಿದ್ದು, ಮೂರನೇ ಪ್ರಿಬೋರ್ಡ ಪರೀಕ್ಷೆಗಳು ಫೆಬ್ರವರಿ 11ರಿಂದ 16ರವರೆಗೆ ನಡೆಯಲಿವೆ. ಫೆಬ್ರವರಿ ತಿಂಗಳು ವಿದ್ಯಾರ್ಥಿಗಳ ಓದಿಗೆ ಮಹತ್ವದ ಸಮಯವಾಗಿದ್ದು, ಎಲ್ಲ ಶಿಕ್ಷಕರಿಗೆ ಹೆಚ್ಚಿನ ಗುಣಮಟ್ಟದ ವಿದ್ಯಾರ್ಜನೆ ಮಾಡಲು ತಿಳಿಸಲಾಗಿದೆ. ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಅವರ ಅಭ್ಯಾಸಕ್ಕೆ ಮನೆಯಲ್ಲಿ ಯಾವುದೇ ತೊಂದರೆಯಾಗದಂತೆ ಪಾಲಕರು ನೋಡಿಕೊಳ್ಳಬೇಕು. ಮಕ್ಕಳ ಅಭ್ಯಾಸದ ಕಡೆಗೆ ಲಕ್ಷವಹಿಸಿ ಮಕ್ಕಳನ್ನು ಬೋರ್ಡ ಪರೀಕ್ಷೆಗಳಿಗೆ ಸಿದ್ಧತೆ ಮಾಡಬೇಕು ಎಂದರು.
ಅಭ್ಯಾಸದ ಹಾಗೂ ಫಲಿತಾಂಶದ ಕುರಿತು ಮಕ್ಕಳ ಮೇಲೆ ಒತ್ತಡ ಹೇರದೇ ಪಾಲಕರು ಮಕ್ಕಳೊಂದಿಗೆ ಸ್ನೇಹಿತರಂತೆ ವರ್ತಿಸಿ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸಬೇಕು. ಪರೀಕ್ಷೆ ಸಮಯದಲ್ಲಿ ಆರೋಗ್ಯ ತುಂಬಾ ಮಹತ್ವದಾಗಿದ್ದು, ಮಕ್ಕಳಿಗೆ ಸಮತೋಲನವಾದ ಆಹಾರ ನೀಡುವ ಮೂಲಕ ಆರೋಗ್ಯಕ್ಕೆ ಹೆಚ್ಚಿನ ಗಮನಹರಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಶಿಕ್ಷಕರುಗಳಾದ ಪ್ರೀತಮ್ , ಗಣಪತಿ, ಕಾವ್ಯಾ, ಗೌರಿಲಾಲ, ವಿಜಯಲಕ್ಷ್ಮೀ ಮತ್ತಿತರರು ಪಾಲ್ಗೊಂಡಿದ್ದರು.
ಲೋಕೋಪಯೋಗಿ ಸಚಿವರ ಪ್ರವಾಸ
********************************
ಕಲಬುರಗಿ,ಫೆ.02.(ಕ.ವಾ)-ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಸೋಲಾಪುರ-ಯಶವಂತಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಇದೇ ಫೆಬ್ರವರಿ 4ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಅಗಮಿಸುವರು.
ನಂತರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರರ ಕಚೇರಿಯಲ್ಲಿ ಕಲಬುರಗಿ ಲೋಕೋಪಯೋಗಿ ವೃತ್ತದ ಕಲಬುರಗಿ, ಬೀದರ, ಸೇಡಂ ಮತ್ತು ಯಾದಗಿರಿ ಲೋಕೋಪಯೋಗಿ ವಿಭಾಗಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ರಾಯಚೂರಿಗೆ ಪ್ರಯಾಣಿಸುವರು.
ಮಾರ್ಚ್ ಅಂತ್ಯಕ್ಕೆ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲು ಸೂಚನೆ
*******************************************************
ಕಲಬುರಗಿ,ಫೆ,2(ಕ.ವಾ)- ಕಲಬುರಗಿ ನಗರದ ನೂತನ ಜೇವರ್ಗಿ ರಸ್ತೆಯಲ್ಲಿನ ಮದರ ಥೆರೆಸಾ ಶಾಲೆ ಬಳಿ 23 ಕೋಟಿ ರೂ.. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಮೇಲ್ಸೇತುವೆ ಕಾಮಗಾರಿಯ ಒಂದು ಬದಿ ರಸ್ತೆಯನ್ನು ಮಾರ್ಚ್ ಅಂತ್ಯದ ಒಳಗೆ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಒಂದು ಬದಿ ರಸ್ತೆ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ನಂತರ ಇನ್ನೊಂದು ಬದಿಯಿರುವ ರಸ್ತೆ ಮೇಲ್ಸೇತುವೆಯನ್ನು ಸಂಪೂರ್ಣವಾಗಿ ಕೆಡವಿ ಅದು ಆದಷ್ಟು ಬೇಗನೆ ರಸ್ತೆ ನಿರ್ಮಾಣ ಕೈಗೊಳ್ಳಬೇಕು ಎಂದರು.
ಈ ರಸ್ತೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ 9 ಜನರಿಗೆ ಪರಿಹಾರ ನೀಡುವ ಸಂಬಂಧ ಜಮೀನು ಮಾಲೀಕರೊಂದಿಗೆ ಮಹಾನಗರ ಪಾಲಿಕೆಯ ಆಯುಕ್ತರು ಕೂಡಲೆ ಸಭೆ ನಡೆಸಿ ಪರಿಹಾರ ನೀಡಲು ಕ್ರಮ ವಹಿಸಬೇಕು ಹಾಗೂ ಈ ರಸ್ತೆ ಬದಿಯಲ್ಲಿ ದ್ವಿಚಕ್ರ, ಸೈಕಲ್ ಸವಾರರು ಮತ್ತು ಪಾದಚಾರಿಗಳು ಓಡಾಡಲು ಅನುಕೂಲವಾಗುವಂತೆ ಸೇವಾ ರಸ್ತೆಯನ್ನು ಸಹ ಬೇಗ ನಿರ್ಮಿಸಬೇಕು. ಇದಲ್ಲದೆ ಬಿದ್ದಾಪುರ ಕಾಲೋನಿ-ಹಳೇ ಜೇವರ್ಗಿ ರಸ್ತೆಗೆ ಸಂಪರ್ಕ ಕಲ್ಪಸಲು ಪ್ರಸ್ತುತ ಈ ರಸ್ತೆ ಕೆಳ ಮಾರ್ಗ ಸಹ ಅಭಿವೃದ್ಧಿ ಪಡಿಸಲಾಗುತ್ತಿದೆ ಇದರಿಂದ ಜನರಿಗೆ ಮತ್ತಷ್ಟು ಒಳ್ಳೆಯದಾಗಲಿದೆ ಎಂದರು.
ನಂತರ ಅಫಜಲಪುರ ರಸ್ತೆಯ ರಸ್ತೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಸ್ಥಳದಲ್ಲಿ ಹಾಜರಿದ್ದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಅಮೀನ ಮುಖ್ತಾರ ಮಾತನಾಡಿ ಪ್ರಸ್ತುತ ಈ ಯೋಜನೆಗೆ 28.35 ಕೋಟಿ ರೂ. ಮೊತ್ತದಲ್ಲಿ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲಾಗಿದೆ. ಕಾರಣಾಂತರದಿಂದ ಕಾಮಗಾರಿ ತಡವಾಗಿರುವುದರಿಂದ ಕಾಮಗಾರಿ ವೆಚ್ಚ 35 ಕೋಟಿ ರೂ.ಗಳಿಗೆ ಹೆಚ್ಚಳವಾಗುತ್ತಿದೆ. ಟೆಂಡರ್ ಮೊತ್ತ ಹೊರತುಪಡಿಸಿ ಹೆಚ್ಚುವರಿಯಾಗಿ 2-3 ಕೋಟಿ ರೂ ಅನುದಾನ ನೀಡಿದಲ್ಲಿ ಶೀಘ್ರವೆ ಈ ಕಾಮಗಾರಿ ಪೂರ್ಣಗೊಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಯೋಜನಾ ವೆಚ್ಚ ಹೆಚ್ಚಳವಾಗಿದ್ದರಿಂದ ಹೆಚ್ಚುವರಿ ಹಣ ಬಿಡುಗಡೆಗೆ ಸರ್ಕಾರಕ್ಕೆ ಕಳುಹಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಗುವ ನಿರೀಕ್ಷೆ ಇದೆÉ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ತರನ್ನುಮ, ಕಾರ್ಯನಿರ್ವಾಹಕ ಅಭಿಯಂತ ಶಿವಣಗೌಡ ಪಾಟೀಲ ಸೇರಿದಂತೆ ಇನ್ನೀತರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪಸ್ಥಿರಿದ್ದರು.
ಫೆಬ್ರವರಿ 4ರಂದು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರಂಭ ಉದ್ಘಾಟನೆ
********************************************************************
ಕಲಬುರಗಿ,ಫೆ.02.(ಕ.ವಾ)-ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಇದೇ ಫೆಬ್ರವರಿ 4 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರು ಉಪಸ್ಥಿತರಿರುವರು.
ಫೆಬ್ರವರಿ 4 ರಿಂದ 10ರವರೆಗೆ 30ನೇ ರಾಷ್ಟೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು “ರಸ್ತೆ ಸುರಕ್ಷತೆ-ಜೀವನ ಸುರಕ್ಷತೆ” ಎಂಬ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯಿಂದ ಸಪ್ತಾಹದ ಧ್ಯೇಯ ಕುರಿತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಫೆ. 5ರಂದು ಗ್ರಾಹಕರ ಕೊಂದುಕೊರತೆ ಸಭೆ ಸಭೆ
*******************************************
ಕಲಬುರಗಿ,ಫೆ.02.(ಕ.ವಾ.)-ಕಲಬುರಗಿ ಜೇಸ್ಕಾಂ ವಿಭಾಗೀಯ ಕಚೇರಿ-2ರ ವ್ಯಾಪ್ತಿಯಲ್ಲಿ ಬರುವ ಗ್ರಾಹಕರ ಕುಂದುಕೊರತೆ ಸಭೆಯನ್ನು ಇದೇ ಫೆಬ್ರವರಿ 5 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿ ಹಳೆಯ ಜೇವರ್ಗಿ ರಸ್ತೆಯಲ್ಲಿರುವ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರವರ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಜೇಸ್ಕಾಂ ವಿಭಾಗೀಯ ಕಚೇರಿ-2ರ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ ಹಾಗೂ ಚಿತ್ತಾಪುರ ತಾಲೂಕಿನ (ಯಡ್ರಾಮಿ, ಜೇವರ್ಗಿ, ಚಿತ್ತಾಪೂರ, ಶಹಾಬಾದ ಮತ್ತು ಕಾಳಗಿ ಉಪವಿಭಾಗ) ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿನ ವಿದ್ಯುತ್‍ಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗಾಗಿ ಗ್ರಾಹಕರ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಜೇಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿಕಲಚೇತನರಿಗೆ ರಿಯಾಯಿತಿ ದರದ ಬಸ್ ಪಾಸ್ ವಿತರಣಾ ವ್ಯವಸ್ಥೆ
***********************************************************
ಕಲಬುರಗಿ,ಫೆ.02.(ಕ.ವಾ)-ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗ-1ರಿಂದ ವಿಕಲಚೇತನ ಫಲಾನುಭವಿಗಳಿಗೆ 2018ನೇ ಸಾಲಿನಲ್ಲಿ ವಿತರಿಸಿದ ಬಸ್‍ಪಾಸ್ ಅವಧಿಯು ಕಳೆದ ಡಿಸೆಂಬರ್ 31 ರಂದು ಮುಕ್ತಾಯಗೊಂಡಿರುತ್ತದೆ. ವಿಕಲಚೇತನ ಫಲಾನುಭವಿಗಳಿಗೆ ಬಸ್‍ಪಾಸ್ ನವೀಕರಿಸಿಕೊಳ್ಳಲು ಆಗಬಹುದಾದ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು 2018ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು ನವೀಕರಿಸದೇ 2019ರ ಫೆಬ್ರವರಿ 28ರವರೆಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ವಿಕಲಚೇತನ ಫಲಾನುಭವಿಗಳು 2019ರ ಸಾಲಿಗೆ ರಿಯಾಯಿತಿ ದರದ ಪಾಸುಗಳನ್ನು ನವೀಕರಣಗೊಳಿಸಲು ಆಯಾ ತಾಲೂಕು ವ್ಯಾಪ್ತಿಗೆ ಬರುವ ಘಟಕ, ಬಸ್‍ನಿಲ್ದಾಣ, ಪಾಸ್ ವಿತರಣಾ ಕೇಂದ್ರಗಳಲ್ಲಿ ಎಲ್ಲ ದಾಖಲಾತಿಗಳೊಂದಿಗೆ 660 ರೂ. ನಗದು ರೂಪದಲ್ಲಿ ಪಾವತಿಸಿ 2019ರ ಫೆಬ್ರವರಿ 28ರೊಳಗಾಗಿ ನವೀಕರಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಕರ್ನಾಟಕ ಕುಸ್ತಿ ಹಬ್ಬ
********************************
ಕಲಬುರಗಿ,ಫೆ.02.(ಕ.ವಾ)- ಬೆಳಗಾವಿಯ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ ಫೆಬ್ರವರಿ 7 ರಿಂದ 10ರವರೆಗೆ ಪ್ರಥಮ ಬಾರಿಗೆ 2018-19ನೇ ಸಾಲಿನ “ಕರ್ನಾಟಕ ಕುಸ್ತಿ ಹಬ್ಬ”ವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕರ್ನಾಟಕ ಕುಸ್ತಿ ಹಬ್ಬದಲ್ಲಿ ಪಾಲ್ಗೊಳ್ಳಲಿಚ್ಛಿಸುವ ಕಲಬುರಗಿ ಜಿಲ್ಲೆಯ ಆಸಕ್ತಿಯುಳ್ಳ ಕುಸ್ತಿಪಟುಗಳು ನೇರವಾಗಿ ಬೆಳಗಾವಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9481966245, 9880031118 ಹಾಗೂ 8050485113 ಗಳಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಗಣಕಯಂತ್ರ ಶಿಕ್ಷಣ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
*******************************************************
ಕಲಬುರಗಿ,ಫೆ.02.(ಕ.ವಾ.)-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಕಲಬುರಗಿ ನಗರದ ಆಳಂದ ರಸ್ತೆ (ಖಾದ್ರಿ ಚೌಕ್)ದಲ್ಲಿರುವ ಸಕ್ಸಸ್ ಕಂಪ್ಯೂಟರ್ ಟ್ರೇನಿಂಗ್ ಸೆಂಟರ್‍ನಲ್ಲಿ ಇದೇ ಫೆಬ್ರವರಿ 11 ರಿಂದ 15ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಗಣಕಯಂತ್ರದ ಶಿಕ್ಷಣದ ಆಫೀಸ್ ಆಟೋಮೇಶನ್ ಹಾಗೂ ಗ್ರಾಫಿಕ್ ಡಿಸೈನರ್ ಕೋರ್ಸ್‍ಗಳ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ.
ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲು ಇರುವ ಜಿರಾಕ್ಸ್, ಪುಸ್ತಕ ಮಳಿಗೆಗಳನ್ನು ಮುಚ್ಚುವುದರೊಂದಿಗೆ ಮೆರವಣಿಗೆ ಹಾಗೂ ಧರಣಿವನ್ನು ನಡೆಸಬಾರದೆಂದು ಕಲಬುರಗಿ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಫೋನ್, ಇತರೆ ಚಿಕ್ಕಗಾತ್ರದ ಎಲೆಕ್ಟ್ರಾನಿಕ್ಸ್ ವಸ್ತುಗಳು, ಬ್ಲ್ಯೂಟೂತ್ ಹಾಗೂ ಇತರೆ ಚಿಕ್ಕ ಗಾತ್ರದ ಪುಸ್ತಕಗಳು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಕೂಡದು ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.
ಶಿಕ್ಷಕರ ಅರ್ಹತಾ ಪರೀಕ್ಷೆ: ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
******************************************************
ಕಲಬುರಗಿ,ಫೆ.02.(ಕ.ವಾ.)-2018ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಇದೇ ಫೆಬ್ರವರಿ 3 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 1.30 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ನಗರದ ಒಟ್ಟು 48 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲು ಇರುವ ಜಿರಾಕ್ಸ್, ಪುಸ್ತಕ ಮಳಿಗೆಗಳು ಹಾಗೂ ಮೊಬೈಲ್ ಅಂಗಡಿಗಳನ್ನು ಮುಚ್ಚಬೇಕೆಂದು ಕಲಬುರಗಿ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಖಾಸಗಿ ವ್ಯಕ್ತಿಗಳು ಪರೀಕ್ಷಾ ಕೇಂದ್ರದಿಂದ 200 ಮೀಟರ ಪ್ರದೇಶದೊಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಫೋನ್, ಇತರೆ ಚಿಕ್ಕಗಾತ್ರದ ಬ್ಲ್ಯೂಟೂತ್ (ಎಲೆಕ್ಟ್ರಾನಿಕ್ಸ್ ವಸ್ತುಗಳು) ಉಪಕರಣಗಳನ್ನು ಹಾಗೂ ವಿದ್ಯಾರ್ಥಿಗಳು ಯಾವುದೇ ತರಹದ ಇತರೆ ಚಿಕ್ಕ ಗಾತ್ರದ ಪುಸ್ತಕ (ಗೈಡ್)ಗಳು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಕೂಡದು ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.
ಫೆ. 5ರಂದು ಗ್ರಾಹಕರ ಜನಸಂಪರ್ಕ ಸಭೆ
************************************
ಕಲಬುರಗಿ,ಫೆ.02.(ಕ.ವಾ.)-ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ ಕಲಬುರಗಿ ನಗರ ವಿಭಾಗದ ವ್ಯಾಪ್ತಿಯಲ್ಲಿ ಬರುವ ಉಪ ವಿಭಾಗಗಳ ಗ್ರಾಹಕರ ಜನಸಂಪರ್ಕ ಸಭೆಯನ್ನು ಇದೇ ಫೆಬ್ರವರಿ 5ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಲಬುರಗಿ ಸುಪರ ಮಾರ್ಕೇಟ್‍ನಲ್ಲಿರುವ ಮುಖ್ಯ ಅಂಚೆ ಕಚೇರಿಯ ಹಿಂದುಗಡೆಯಿರುವ ಜೇಸ್ಕಾಂ ಕಾರ್ಯ ಮತ್ತು ಪಾಲಕ ನಗರ ವಿಭಾಗದ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದು ಜೇಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಗ್ರಾಹಕರು ತಮ್ಮ ಯಾವುದೇ ತರಹದ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಈ ಜನಸಂಪರ್ಕ ಸಭೆಯಲ್ಲಿ ಸಲ್ಲಿಸಬಹುದಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.













ಹೀಗಾಗಿ ಲೇಖನಗಳು News and Photos Date: 02-02-2019

ಎಲ್ಲಾ ಲೇಖನಗಳು ಆಗಿದೆ News and Photos Date: 02-02-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photos Date: 02-02-2019 ಲಿಂಕ್ ವಿಳಾಸ https://dekalungi.blogspot.com/2019/02/news-and-photos-date-02-02-2019.html

Subscribe to receive free email updates:

0 Response to "News and Photos Date: 02-02-2019"

ಕಾಮೆಂಟ್‌‌ ಪೋಸ್ಟ್‌ ಮಾಡಿ