ಶೀರ್ಷಿಕೆ : NEWS AND PHOTOS DATE: 16-02-2019
ಲಿಂಕ್ : NEWS AND PHOTOS DATE: 16-02-2019
NEWS AND PHOTOS DATE: 16-02-2019
ಮಹಾನಗರಪಾಲಿಕೆಯ ಎಲ್ಲ ವಾರ್ಡುಗಳ ಸಮಸ್ಯೆಗಳನ್ನು ಪರಿಹರಿಸಲು ಕ್ರಮ
********************************************************************
ಕಲಬುರಗಿ,ಫೆ.16.(ಕ.ವಾ.)-ಕಲಬುರಗಿ ಮಹಾನಗರಪಾಲಿಕೆಯ ಎಲ್ಲ ಸದಸ್ಯರು ತಮ್ಮ ವಾರ್ಡುಗಳ ಕನಿಷ್ಠ 5 ಪ್ರಮುಖ ಸಮಸ್ಯೆಗಳನ್ನು ತಿಳಿಸಿದ್ದಲ್ಲಿ ಅವುಗಳನ್ನು ಪರಿಹರಿಸಲು ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಅವರು ಶನಿವಾರ ಕಲಬುರಗಿ ಮಹಾನಗರ ಪಾಲಿಕೆ ಇಂದಿರಾ ಸ್ಮಾರಕ ಭವನದಲ್ಲಿ ಅನೌಪಚಾರಿಕವಾಗಿ ಮಹಾನಗರಪಾಲಿಕೆಯ ಎಲ್ಲ ಸದಸ್ಯರೊಂದಿಗೆ ಚರ್ಚಿಸಿ, ಮಹಾನಗರಪಾಲಿಕೆಯ ಸದಸ್ಯರು ಸೂಚಿಸಿರುವ ಪ್ರಮುಖ ಸಮಸ್ಯೆಗಳ ಪೈಕಿ ಯಾವ ಯಾವ ಇಲಾಖೆಯಿಂದ ಎಷ್ಟು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂಬುದನ್ನು ತಿಳಿಸಲಾಗುವುದು ಎಂದರು.
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಮೂಲಕ ಕಲಬುರಗಿ ಮಹಾನಗರಪಾಲಿಕೆಯನ್ನು ರಾಜ್ಯದಲ್ಲಿಯೇ ಮಾದರಿ ಪಾಲಿಕೆಯನ್ನಾಗಿಸಬೇಕು. ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಪ್ಲಾಸ್ಟಿಕ್ ನಿಷೇಧದ ಅಭಿಯಾನ ಹಮ್ಮಿಕೊಂಡಿದ್ದು, ಪ್ಲಾಸ್ಟಿಕ್ ಮಾರಾಟ ಮಾಡುವವರ ಹಾಗೂ ಉತ್ಪಾದಿಸುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ಮುಂಬರುವ ಮಾರ್ಚ್ 15ರ ನಂತರ ನಗರದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಸದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಮಾರಾಟಗಾರರೊಂದಿಗೆ ಚರ್ಚಿಸಬೇಕು. ಅನಿರೀಕ್ಷಿತವಾಗಿ ದಾಳಿಗಳು ಮಾಡುವ ಮೂಲಕ ಜಿಲ್ಲೆಯಲ್ಲಿರುವ ಪ್ಲಾಸ್ಟಿಕ್ ಜಪ್ತಿ ಮಾಡಿಕೊಂಡು ನಾಶ ಪಡಿಸಬೇಕು ಎಂದರು.
ಮಹಾನಗರಪಾಲಿಕೆಯಿಂದ ನೂತನವಾಗಿ ಜಾಹೀರಾತು ನೀತಿ ರೂಪಿಸುವ ಮೂಲಕ ನಗರದಾದ್ಯಂತ ಜಾಹೀರಾತಿಗಾಗಿ ಬಳಸುವ ಸ್ಥಳಗಳನ್ನು ಗುರುತಿಸಿ ಜಾಹೀರಾತಿಗೆ ಅನುಮತಿ ನೀಡುವ ಮೂಲಕ ಮಹಾನಗರ ಪಾಲಿಕೆಗೆ ಆದಾಯ ಹೆಚ್ಚಿಸಬೇಕು. ಈ ಹಣವನ್ನು ನಗರದಲ್ಲಿ ಕೈಗೊಳ್ಳಬೇಕಾಗಿರುವ ಸಣ್ಣ ಪುಟ್ಟ ಕಾಮಗಾರಿಗಳಿಗಾಗಿ ಬಳಸಿಕೊಳ್ಳಬಹುದಾಗಿದೆ. ಕಲಬುರಗಿ ಮಹಾನಗರ ಪಾಲಿಕೆಯು ಜನಸಂಖ್ಯೆಯಿಂದ ಹಾಗೂ ಆಸ್ತಿಗಳಿಂದ ದೊಡ್ಡದಾಗಿದ್ದರೂ ತೆರಿಗೆ ಸಂಗ್ರಹದಲ್ಲಿ ತುಂಬಾ ಹಿಂದಿದೆ. ಇದನ್ನು ನಗರಾಭಿವೃದ್ಧಿ ಇಲಾಖೆಯೂ ಒಪ್ಪಿಕೊಂಡಿದ್ದು, ಮುಂಬರುವ ದಿನಗಳಲ್ಲಿ ನಗರದಿಂದ ಆದಾಯ ಹೆಚ್ಚಿಸುವಂತಹ, ತೆರಿಗೆ ಸಂಗ್ರಹಿಸುವಂತಹ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಮಹಾನಗರ ಪಾಲಿಕೆಯ ಎಲ್ಲ ಸದಸ್ಯರು ಸಹಕರಿಸಬೇಕು ಎಂದರು.
ಫೆಬ್ರವರಿ 28ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ಜನಸ್ಪಂದನ ಸಭೆ ಕೈಗೊಳ್ಳಲಾಗುತ್ತಿದೆ. ಇಲಾಖಾವಾರು ಸಮಸ್ಯೆಗಳನ್ನು ಆಲಿಸಿ ಪರಿಹರಿಸಲಾಗುವುದು. ಮಹಾನಗರಪಾಲಿಕೆಯ ಸದಸ್ಯರೆಲ್ಲರೂ ತಮ್ಮ ವಾರ್ಡುಗಳ ಸಾರ್ವಜನಿಕರ ತೊಂದರೆಗಳನ್ನು ಹಾಗೂ ಇತರೆ ಸಮಸ್ಯೆಗಳನ್ನು ಜನಸ್ಪಂದನ ಸಭೆಯಲ್ಲಿ ಮಂಡಿಸಬೇಕು ಎಂದ ಸಚಿವರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಮಹಾನಗರಪಾಲಿಕೆಯ ಎಲ್ಲ ಸದಸ್ಯರು ದೂರು ಸಲ್ಲಿಸಿದ್ದಾರೆ. ಮಂಡಳಿಯ ಅಧಿಕಾರಿಗಳು ಎಲ್ಲ ಸದಸ್ಯರ ಕರೆಗಳನ್ನು ಸ್ವೀಕರಿಸುವ ಮೂಲಕ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಮಂಡಳಿಯ ಎಲ್ಲ ಅಧಿಕಾರಿಗಳಿಗೆ ಎಚ್ಚರಿಸಿದರು.
ನಗರದಲ್ಲಿ ರಸ್ತೆ, ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯಲ್ಲಿನ ಮಿಸ್ಸಿಂಗ್ ಲಿಂಕ್‍ಗಳನ್ನು ಪತ್ತೆ ಹಚ್ಚಿ ಸುಧಾರಿಸುವ ಮೂಲಕ ಎಲ್ಲ ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೆ ನೋಡಿಕೊಳ್ಳಬೇಕು. ನಗರದಲ್ಲಿ ಹಿಂದೆ ಬಾಕಿ ಇದ್ದ 50 ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಮಹಾನಗರ ಪಾಲಿಕೆ ಆಯುಕ್ತರು ಸರ್ಕಾರದ ಮಟ್ಟದಲ್ಲಿ ಬಾಕಿಯಿರುವ ಕಾಮಗಾರಿಗಳ ಪಟ್ಟಿಯನ್ನು ನೀಡಿದ್ದಲ್ಲಿ ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಲಾಗುವುದು. ಪರಿಶಿಷ್ಟ ಜಾತಿ, ಪಂಗಡದ ವಾರ್ಡುಗಳ ಅಭಿವೃದ್ಧಿಯೊಂದಿಗೆ ಈ ವಾರ್ಡು ಅಥವಾ ಕಾಲೋನಿಗಳ ಮೂಲಕ ಬೇರೆ ವಾರ್ಡುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ, ಚರಂಡಿ ಕಾಮಗಾರಿಗಳ ವಿವರವನ್ನು ಸಲ್ಲಿಸಿದ್ದಲ್ಲಿ ಅವುಗಳನ್ನು ಎಸ್.ಸಿ.ಪಿ. ಟಿ.ಎಸ್.ಪಿ. ಅನುದಾನದಡಿ ಮಂಜೂರಾತಿ ನೀಡಲಾಗುವುದು. ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಾರಂಭಿಸಲಾಗಿರುವ ಪ್ರಗತಿ ಕಾಲೋನಿ ಯೋಜನೆಯನ್ನು ಹೀರಾಪುರದಲ್ಲಿ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಉಪ ಮಹಾಪೌರ ಅಲಿಯಾ ಶಿರೀನ್, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ರಾಜೀವ ಕಪನೂರ, ರಮೇಶ ಟಿ. ಕಮಕನೂರ, ಶೇಕ ಅಫ್ಜಲ್ ಅಹ್ಮದ ಗೋಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಮಹಾನಗರ ಪಾಲಿಕೆ ಆಯುಕ್ತ ಬಿ. ಫೌಜಿಯಾ ತರನ್ನುಮ್ ಸೇರಿದಂತೆ ಮಹಾನಗರ ಪಾಲಿಕೆಯ ಎಲ್ಲ ಸದಸ್ಯರು ಪಾಲ್ಗೊಂಡಿದ್ದರು.

ಬೃಹತ್ ಉದ್ಯೋಗ ಮೇಳಕ್ಕೆ 200ಕ್ಕಿಂತ ಹೆಚ್ಚು ಕಂಪನಿಗಳನ್ನು ಆಹ್ವಾನಿಸಲು ಸೂಚನೆ
*************************************************************************
ಕಲಬುರಗಿ,ಫೆ.16.(ಕ.ವಾ.)-ಕಲಬುರಗಿಯಲ್ಲಿ ಕಲಬುರಗಿ, ಬೀದರ ಮತ್ತು ಯಾದಗಿರಿ ಜಿಲ್ಲೆಯನ್ನೊಳಗೊಂಡು ಹಮ್ಮಿಕೊಂಡಿರುವ ಬೃಹತ್ ಉದ್ಯೋಗ ಮೇಳದಲ್ಲಿ ಕನಿಷ್ಠ 200ಕ್ಕಿಂತಲೂ ಹೆಚ್ಚು ಕಂಪನಿಗಳನ್ನು ಆಹ್ವಾನಿಸುವ ಮೂಲಕ ಅವುಗಳು ಭಾಗಹಿಸುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೂಚಿಸಿದರು.
ಅವರು ಶನಿವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಉದ್ಯೋಗ ಮೇಳಗಳ ಯಶಸ್ಸು ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಸಿಗುವ ಉದ್ಯೋಗಾವಕಾಶಗಳ ಮೇಲೆ ಅವಲಂಬಿತವಾಗುತ್ತದೆ. ಈ ಭಾಗದ ಹೆಚ್ಚಿನ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಸಿಗಬೇಕಾದರೆ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗ ನೀಡುವ ಹೆಚ್ಚಿನ ಕಂಪನಿಗಳು ಭಾಗವಹಿಸಿದರೆ ಮಾತ್ರ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಚೇಂಬರ್ ಆಫ್ ಕಾಮರ್ಸ್, ಉದ್ಯೋಗ ಮತ್ತು ತರಬೇತಿ, ಜಿಲ್ಲಾ ಕೈಗಾರಿಕಾ ಕೇಂದ್ರದವರು ಕಂಪನಿಗಳನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯ ಅಧಿಸೂಚನೆಗಿಂತಲೂ ಮುಂಚಿತವಾಗಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಬೇಕು. ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕಾ ತರಬೇತಿ ಸಂಸ್ಥೆಯ ಅಧಿಕಾರಿಗಳು ಕಲಬುರಗಿ ಸಹಾಯಕ ಆಯುಕ್ತರೊಂದಿಗೆ ಜಂಟಿಯಾಗಿ ಉದ್ಯೋಗ ಮೇಳ ಕೈಗೊಳ್ಳಲು ಸ್ಥಳ ಪರಿಶೀಲನೆ ಮಾಡುವ ಮೂಲಕ ವರದಿ ಸಲ್ಲಿಸಬೇಕು. ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣ, ಎನ್.ವಿ. ಮೈದಾನ, ಪಿಡಿಎ ಇಂಜಿನಿಯರಿಂಗ್ ಕಾಲೇಜುಗಳ ಸ್ಥಳಗಳನ್ನು ಪರಿಶೀಲಿಸಬೇಕು. ಬೃಹತ್ ಉದ್ಯೋಗ ಮೇಳದ ಮೇಲುಸ್ತುವಾರಿಯು ಉದ್ಯೋಗ ಮತ್ತು ತರಬೇತಿ ಇಲಾಖೆಯದ್ದಾಗಿದ್ದು, ಈ ಇಲಾಖೆಯ ಅಧಿಕಾರಿಗಳು ಬೃಹತ್ ಉದ್ಯೋಗ ಮೇಳದಲ್ಲಿ ಆಸಕ್ತಿ ತೋರದಿರುವುದು ವಿಷಾಧನೀಯವಾಗಿದೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಉದ್ಯೋಗ ಮೇಳದ ಮೇಲುಸ್ತುವಾರಿಯನ್ನು ವಹಿಸಿಕೊಳ್ಳಬೇಕೆಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರವನ್ನು ಮುಂಚಿತವಾಗಿ ಪಡೆದುಕೊಳ್ಳಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲು ಸಾಧ್ಯವಾಗುತ್ತದೆ. ಉದ್ಯೋಗ ಮೇಳದ ಕುರಿತಂತೆ ವೆಬ್‍ಸೈಟ್ ಪ್ರಾರಂಭಿಸಿ ಅಭ್ಯರ್ಥಿಗಳ ನೋಂದಣಿ ಪ್ರಾರಂಭಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಬೃಹತ್ ಉದ್ಯೋಗ ಮೇಳದ ಆಯೋಜನೆಗೆ ಸ್ವಾಗತ ಮತ್ತು ಶಿಷ್ಠಾಚಾರ, ವೇದಿಕೆ, ಮುದ್ರಣ ಪ್ರಚಾರ, ಕಾರ್ಯನಿರ್ವಹಣೆ, ಆಹಾರ, ಆರೋಗ್ಯ-ಸ್ವಚ್ಛತೆ-ಸುರಕ್ಷತೆ, ಸಮನ್ವಯ ಸಮಿತಿಗಳನ್ನು ರಚಿಸುವ ಮೂಲಕ ಆಯಾ ಸಮಿತಿಗಳ ಕರ್ತವ್ಯಗಳನ್ನು ತಿಳಿಸಿದರು.
ಸಭೆಯಲ್ಲಿ ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ರಘೋಜಿ, ಐಟಿಐ ಕಾಲೇಜಿನ ಪ್ರಾಂಶುಪಾಲ ಪಾಂಚಾಳ, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಾರ್ವಜನಿಕರಿಗೆ ವಿದ್ಯುನ್ಮಾನ ಮತಯಂತ್ರದ ಮಾಹಿತಿ
*************************************************
ಕಲಬುರಗಿ,ಫೆ.16.(ಕ.ವಾ)-ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಮಹತ್ವದ್ದಾಗಿದ್ದು, ನಾವು ಮಾಡುವ ಮತದಾನ ಅದೇ ಅಭ್ಯರ್ಥಿಗೆ ಸೇರುತ್ತದೆ ಎಂಬುದನ್ನು ತಿಳಿಯುವುದು ಅತೀ ಮುಖ್ಯವಾಗಿದೆ. ಇದಕ್ಕಾಗಿ ಸಾರ್ವಜನಿಕರು ವಿದ್ಯುನ್ಮಾನ ಮತ ಯಂತ್ರದ ಮಾಹಿತಿ ಪಡೆಯುವುದು ಅವಶ್ಯಕ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ವಿದ್ಯುನ್ಮಾನ ಮತ ಯಂತ್ರದ ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಹ್ಯಾಂಡ್ಸ್ ಆನ್ ತರಬೇತಿಯ ಅಧ್ಯಕ್ಷತೆವಹಿಸಿ ಮಾತನಾಡಿ, ಪ್ರಾರಂಭಿಕವಾಗಿ ಯುವ ಮತದಾರರಿಗೆ ಹಾಗೂ ಶಿಕ್ಷಕರಿಗೆ ವಿದ್ಯುನ್ಮಾನ ಮತಯಂತ್ರದ ಕುರಿತು ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಮತದಾರರಿಗೆ ತರಬೇತಿ ನೀಡಲು 10 ಮತಗಟ್ಟೆಗೊಬ್ಬರಂತೆ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿರುವ 200 ಸೆಕ್ಟರ್ ಅಧಿಕಾರಿಗಳು ಎಲ್ಲ ಗ್ರಾಮಗಳಲ್ಲಿ ವಿದ್ಯುನ್ಮಾನ ಮತಯಂತ್ರದೊಂದಿಗೆ ವಿವಿ ಪ್ಯಾಟ್ ಯಂತ್ರದ ತರಬೇತಿ ಮತ್ತು ಮಾಹಿತಿಯನ್ನು ನೀಡುವರು ಎಂದರು.
2019ರ ಜನವರಿ 1ಕ್ಕೆ ಹದ್ದಿನೆಂಟು ವರ್ಷ ಪೂರ್ಣಗೊಂಡಿರುವ ಯುವ ಮತದಾರರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಸರು ನೋಂದಣಿಗಾಗಿ ಪಾಲಕರ ಅಥವಾ ಸಂಬಂಧಿಕರ ಮತದಾರರ ಚೀಟಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಎಲ್ಲ ಶಾಲಾ-ಕಾಲೇಜುಗಳಲ್ಲಿ ಯುವ ಮತದಾರರನ್ನು ನೋಂದಾಯಿಸಿಕೊಳ್ಳಲು ಅರ್ಜಿಗಳನ್ನು ವಿತರಿಸಲಾಗಿದೆ. ಆಯಾ ಕಾಲೇಜುಗಳ ಪ್ರಾಂಶುಪಾಲರು ಮುತುವರ್ಜಿವಹಿಸಿ ಯುವ ಮತದಾರರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಮತದಾನ ದಿನದಂದು ಎಲ್ಲ ಮನೆಗಳಿಗೆ ಮತದಾರರ ಚೀಟಿಯನ್ನು ನೀಡಲಾಗುತ್ತದೆ. ಚೀಟಿಯಲ್ಲಿರುವ ಮತಗಟ್ಟೆಯ ಸ್ಥಳವನ್ನು ಪರಿಶೀಲಿಸಿ ಮತಚಲಾಯಿಸಬೇಕು ಎಂದರು.
ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದ ವಿದ್ಯಾರ್ಥಿ ಪ್ರಕಾಶ ದತ್ತು ಗೌಳಿ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ವೀಕ್ಷಿಸಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಚುನಾವಣಾ ವ್ಯವಸ್ಥೆಯ ಸುಧಾರಣೆಗಳು ಪಠ್ಯವಿದ್ದು, ಅದರಲ್ಲಿ ಮತಯಂತ್ರಗಳ ಮಾಹಿತಿ ನೀಡಲಾಗಿದೆ. ಇಂದು ಪ್ರತ್ಯಕ್ಷವಾಗಿ ನಕಲು ಮತದಾನದ ಮಾಡುವ ಮೂಲಕ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ವೀಕ್ಷಿಸಿರುವುದು ಬಹಳ ಉಪಯುಕ್ತವಾಗಿದೆ. ನಾವು ಯಾವ ಅಭ್ಯರ್ಥಿಗೆ ಮತ ಹಾಕಿದ್ದೇವೆ ಹಾಗೂ ಆ ಮತ ಅವರ ಖಾತೆಗೆ ಸೇರಿರುವುದು ಖಚಿತಪಡಿಸಿಕೊಳ್ಳಲು ಅನುಕೂಲವಾಗಿದೆ ಎಂದರು.
ಮತದಾರರ ಯಾದಿಯಲ್ಲಿ ನನ್ನ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದು, ಮೊದಲ ಬಾರಿಗೆ ಮುಂಬರುವ ಚುನಾವಣೆಯಲ್ಲಿ ಮತದಾನ ಮಾಡಬೇಕಾಗಿರುವುದರಿಂದ ನನಗೆ ಇಲ್ಲಿ ಮತ ಯಂತ್ರದ ಬಗ್ಗೆ ಮಾಹಿತಿ ಸಿಕ್ಕಿದ್ದು ತುಂಬಾ ಅನುಕೂಲವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸರಳವಾಗಿದೆ ಎಂದು ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿ ಅಮ್ರೀನ್ ಶೇಖ್ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜಾ ಪಿ, ಮಹಾನಗರ ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತ ರಾಹುಲ ಪಾಂಡ್ವೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಹಾಗೂ ಮಾಸ್ಟರ್ ಟ್ರೇನರ್ಸ್‍ಗಳಾದ ಡಾ. ಸುರೇಶ ಜಾಧವ್, ಡಾ. ಕಲ್ಲಿನಾಥ ಪಾಟೀಲ್, ಡಾ.ಮಹಾಂತೇಶ್ ಸ್ವಾಮಿ ಸೇರಿದಂತೆ ವಿವಿಧ ಕಾಲೇಜಿನ ಶಿಕ್ಷಕರು ಉಪಸ್ಥಿತರಿದ್ದರು.

ಫೆಬ್ರವರಿ 20ರಂದು ತ್ರಿಪದಿ ಕವಿ ಸರ್ವಜ್ಞರ ಜಯಂತಿ
*********************************************
ಕಲಬುರಗಿ,ಫೆ.16.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಮಹಾ ಮಾನವತಾವಾದಿ ಕನ್ನಡದ ಶ್ರೇಷ್ಠ ತ್ರಿಪದಿ ಕವಿ ಸರ್ವಜ್ಞರ ಜಯಂತಿ ಆಚರಣೆಯ ಉದ್ಘಾಟನಾ ಸಮಾರಂಭವನ್ನು ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಬುಧವಾರ ಫೆಬ್ರವರಿ 20ರಂದು ಮಧ್ಯಾಹ್ನ 12.30 ಗಂಟೆಗೆ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಹಾ ಮಾನವತಾವಾದಿ ಕನ್ನಡದ ಶ್ರೇಷ್ಠ ತ್ರಿಪದಿ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಅಧÀ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಡಾ|| ಅಜಯಸಿಂಗ್, ಎಮ್.ವಾಯ್. ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಬಿ. ಮತ್ತಿಮೂಡ, ಖನೀಜ್ ಫಾತೀಮಾ ಹಾಗೂ ಸುಭಾಷ ಗುತ್ತೇದಾರ್, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ್ ಖರ್ಬಿಕರ್, ಕಲಬುರಗಿ ಕುಂಬಾರ ಸಮಾಜದ ಅಧ್ಯಕ್ಷ ಶಿವಶರಣಪ್ಪ ಎಲ್. ಕುಂಬಾರ ಸುಲೇಪೇಟ್ ಹಾಗೂ ಕುಂಬಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ ಡಿ. ಕುಂಬಾರ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಖ್ಯಾತ ಸಾಹಿತಿಗಳು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಶ್ರೀ ಕುಂ. ವೀರಭದ್ರಪ್ಪ ಅವರು ವಿಶೇಷ ಉಪನ್ಯಾಸ ನೀಡುವರು.
ಇದಕ್ಕೂ ಮುನ್ನ ಬೆಳಿಗ್ಗೆ 10.30 ಗಂಟೆಗೆ ತ್ರಿಪದಿ ಕವಿ ಸರ್ವಜ್ಞರ ಭಾವಚಿತ್ರನ್ನೊಳಗೊಂಡ ವಿವಿಧ ಜಾನಪದ ಕಲಾ ತಂಡದ ಭವ್ಯ ಮೆರವಣಿಗೆಯು ಕಲಬುರಗಿ ನಗರದ ಸೂಪರ್ ಮಾರ್ಕೆಟ್ಟಿನ ಜನತಾ ಬಜಾರದಿಂದ ಪ್ರಾರಂಭವಾಗಿ ಜಗತ್ ವೃತ್ತದ ಮಾರ್ಗವಾಗಿ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಕೊನೆಗೊಳ್ಳಲಿದೆ.

ಮಾರ್ಚ್ 6 ರಿಂದ ಕೋರವಾರ ಶ್ರೀ ಅಣವೀರಭದ್ರೇಶ್ವರ ದೇವಸ್ಥಾನದ ಜಾತ್ರೆ
*****************************************************************
ಕಲಬುರಗಿ,ಫೆ.16.(ಕ.ವಾ.)-ಮುಜರಾಯಿ ಇಲಾಖೆಗೆ ಒಳಪಡುವ ಚಿತ್ತಾಪುರ ತಾಲೂಕಿನ ಕೋರವಾರ ಗ್ರಾಮದ ಶ್ರೀ ಅಣವೀರಭದ್ರೇಶ್ವರ ದೇವಸ್ಥಾನದ ಜಾತ್ರೆಯು 2019ರ ಮಾರ್ಚ್ 6 ರಿಂದ 8 ರವರೆಗೆ ಜರುಗಲಿದೆ.
ಮಾರ್ಚ್ 6 ರಂದು ಆಗ್ನಿ ಪ್ರವೇಶ ಹಾಗೂ ಮಾರ್ಚ್ 7 ರಂದು ಸಂಜೆ 8 ಗಂಟೆಗೆ ಭವ್ಯ ರಥೋತ್ಸವ ಕಾರ್ಯಕ್ರಮ ಜರುಗಲಿದೆ. ಸಾರ್ವಜನಿಕ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಭಾಗವಹಿಸಬೇಕೆಂದು ಚಿತ್ತಾಪುರ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆ ಸಮೀಪಿಸುತ್ತಿವೆ: ವಸತಿ ನಿಲಯಕ್ಕೆ ವಿದ್ಯುತ್ ಕಡಿತದಿಂದ ವಿನಾಯ್ತಿ ನೀಡಿ
********************************************************************
ಕಲಬುರಗಿ ಫೆ,16(ಕ-ವಾ)- ಪ್ರಸಕ್ತ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಜಿಲ್ಲೆಯ ವಿವಿಧ ಇಲಾಖೆಯ ವಸತಿ ನಿಲಯಕ್ಕೆ ಬಿಲ್ಲು ಪಾವತಿಯಾಗಿಲ್ಲ ಎಂಬ ಕಾರಣದಿಂದ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡುವುದರಿಂದ ವಿನಾಯ್ತಿ ನೀಡಿ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತ ಮಲಾಜಿ ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶನಿವಾರ ಜಿಲ್ಲಾ ಪಂಚಾಯತಿಯ ನೂತನ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚೆಗೆ ಫರಹತಾಬಾದ ವಸತಿ ನಿಲಯಕ್ಕೆ ಭೇಟಿ ನೀಡಿದಾಗ, ವಸತಿ ನಿಲಯಕ್ಕೆ ವಿದ್ಯುತ್ ಕಡಿತಗೊಂಡಿರುವುದರಿಂದ ಓದಲು ತುಂಬಾ ತೊಂದರೆಯಾಗುತ್ತಿದೆ ಎಂದು ವಿದ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ. ಇದಲ್ಲದೆ ಫರಹತಾಬಾದ ವಸತಿ ನಿಲಯದಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ, ನೀರು ಪೂರೈಕೆಯಾಗುತ್ತಿಲ್ಲ ಎಂಬ ದೂರು ಬಂದಿದ್ದು, ಕೂಡಲೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶಿಲಿಸಬೇಕು ಎಂದು ಸೂಚನೆ ನೀಡಿದರು.
ಇಂದಿನ ಸಭೆಗೆ ಕೆಲ ಇಲಾಖೆಯ ಮುಖ್ಯಸ್ಥರು ಅನುಮತಿ ಪಡೆಯದೆ ಗೈರಾಗಿದ್ದಕ್ಕೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದ ಸಿರಸಗಿ ಸೇರಿದಂತೆ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಅಕ್ಷೇಪಿಸದರು. ಈ ಸಂಬಂಧ ಗೈರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರು ಜಿ.ಪಂ.ಮುಖ್ಯ ಕಾರ್ಯನಿವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಾರ್ಚ್ ಒಳಗೆ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ:- ಬೇಸಿಗೆ ತೀವ್ರತೆ ಅರಿತು ಕೂಡಲೆ ಕುಡಿಯುವ ನೀರು ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಗ್ರಾಮೀಣ ಮತ್ತು ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ವಿಭಾಗದ ಕಾರ್ಯನಿವಾಹಕ ಅಭಿಯಂತರ ರೇವಣಸಿದ್ದಪ್ಪ ಅವರಿಗೆ ಜಿ.ಪಂ. ಅಧ್ಯಕ್ಷರು ನಿದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಮಾತನಾಡಿ, ಕಲಬುರಗಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿರಾಶ್ರಿತರ ಕೇಂದ್ರದಲ್ಲಿ ಇಬ್ಬರು ಮಹಿಳಾ ನರ್ಸ್‍ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರದಲ್ಲ ನಿರ್ಗತಿಕ ಪರುಷರು ಇರುವುದರಿಂದ ಓರ್ವ ಪುರುಷ ನರ್ಸ್‍ನನ್ನು ಇಲ್ಲಿ ನಿಯೋಜಿಸಬೇಕು ಹಾಗೂ ವಸತಿ ನಿಲಯಗಳಿಗೆ ಬಯೋ ಮೆಟ್ರಿಕ್ ಆಧಾರದ ಮೇಲೆ ಅನುದಾನ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಹಕ ಅಧಿಕಾರಿ ಡಾ.ರಾಜಾ ಪಿ. ಮಾತನಾಡಿ ವಿವಿಧ ಇಲಾಖೆಯ ಕಟ್ಟದ, ದುರಸ್ತಿ ಕಾಮಗಾರಿಗಳು ಪ್ರಸಕ್ತ ಆರ್ಥಿಕ ಸಾಲಿನ ಒಳಗಾಗಿಯೆ ರ್ಪೂಣಘೊಳಿಸಬೇಕು ಎಂದು ಅನುಷ್ಠಾನ ಏಜೆನ್ಸಿ ಇಲಾಖೆಗಳಿಗೆ ಸೂಚಿಸಿದ ಅವರು ಕಟ್ಟದ ಪೂರ್ಣಗೊಂಡ ನಂತರ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಟ್ಟಡವನ್ನು ತಮ್ಮ ಸುಪರ್ದಿಗೆ ಪಡೆಯಬೇಕು. ಪ್ರಾದೇಶಿಕ ಅಸಮಾತೋಲನ ನಿವಾರಣೆಗೆ ನೀಡಲಾಗುವ ವಿಶೇಷ ಅಭಿವೃದ್ಧಿ ಅನುದಾನ ಮತ್ತು ಎಸ್.ಸಿ.ಪಿ./ ಟಿ.ಎಸ್.ಪಿ. ಯೋಜನೆಯ ಅನುದಾನ ಖರ್ಚಿನಲ್ಲಿ ಬಹುತೇಕ ಇಲಾಖೆಗಳು ಹಿಂದುಳಿದಿದ್ದು, ಈ ಅನುದಾನಗಳನ್ನು ಮಾರ್ಚ್ ಒಳಗೆ ಖರ್ಚು ಮಾಡಿ ನಿಗಧಿತ ಭೌತಿಕ ಗುರಿ ಸಾಧಿಸಬೇಕು. ಎಸ್.ಸಿ.ಪಿ., ಟಿ.ಎಸ್.ಪಿ. ಅನುದಾನ ಖರ್ಚಾಗದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶೂನ್ಯ ಬಡ್ಡಿದರದಲ್ಲಿ ಕೃಷಿ ಬಂಡವಾಳ ಹೂಡಿಕೆಯ ನೂತನ ಯೋಜನೆಯನ್ನು ಮುಂದಿನ ಆರ್ಥಿಕ ವರ್ಷದಿಂದ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಎಲ್ಲಾ ಆರಂಭಿಕ ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 1500 ಹೆಕ್ಟೇರ್ ಪ್ರದೇಶವನ್ನು ಗುರುತಿಸಿಲಾಗಿದೆ. ಕೇಂದ್ರ ಸರ್ಕಾರವು ಇತ್ತೀಚಿನ ತನ್ನ ಆಯವ್ಯಯದಲ್ಲಿ ಘೋಷಿಸಿರುವಂತೆ ಜಿಲ್ಲೆಯಲ್ಲಿ “ಪ್ರಧಾನಮಂತ್ರಿ ಕಿಸಾನ” ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರತಿ ವರ್ಷ 6000 ರೂ. ಆರ್ಥಿಕ ಸಔಲಭ್ಯ ನೀಡುವ ಯೋಜನೆಯಡಿ ಮೊದಲನೇ ಕಂತಿನ ರೂಪವಾಗಿ 2000 ರೂ. ಮೊತ್ತವನ್ನು ಇದೇ ಫೆಬ್ರವರಿ ಅಂತ್ಯದೊಳಗೆ ಸಂಬಂಧಿಸಿದ ರೈತರ ಖಾತೆಗೆ ಜಮಾ ಮಾಡಲು ನಿರ್ಧರಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರಿತೇಂದ್ರಬಾಥ ಸುಗೂರ ಸಭೆಯ ಗಮನಕ್ಕೆ ತಂದರು.
ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಮುಂದುವರೆದ 611 ಕಾಮಗಾರಿಗಳಿಗೆ ಪ್ರಸಕ್ತ ಸಾಲಿನಲ್ಲಿ 3747.73 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಈ ಪೈಕಿ 1676.62 ಅನುದಾನ ಬಿಡುಗಡೆಯಾಗಿದೆ. ಬಿಡುಗಡೆ ಮೊತ್ತದಲ್ಲಿ 1150.68 ಲಕ್ಷ ರೂ. ಖರ್ಚು ಮಾಡಲಾಗಿದ್ದು, ಶೇ.68ರಷ್ಟು ಪ್ರಗತಿ ಸಾಧಿಸಿದೆ. ಅದೇ ರೀತಿ ಎಸ್.ಡಿ.ಪಿ. ಯೋಜನೆಯಡಿ 659 ಗುರಿ ಹೊಂದಿದ್ದು, ಇದಕ್ಕಾಗಿ 4656.78 ಅನುದಾನ ಒದಗಿಸಲಾಗಿದೆ. ಜನವರಿ ಅಂತ್ಯಕ್ಕೆ 290 ಕಾಮಗಾರಿಗಳನ್ನು ಪೂರ್ಣಗೊಳಿಸಿ 1176.43 ಲಕ್ಷ ರೂ. ಅನುದಾನ ವ್ಯಯ ಮಾಡಲಾಗಿದೆ ಎಂದು ಗ್ರಾಮೀಣ ಮತ್ತು ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ವಿಭಾಗದ ಕಾರ್ಯನಿವಾಹಕ ಅಭಿಯಂತ ರೇವಣಸಿದ್ದಪ್ಪ ಅವರು ಮಾಹಿತಿ ನೀಡಿದರು. ಆರೋಗ್ಯ, ಶಿಕ್ಷಣ, ಅಲ್ಪಸಂಖ್ಯಾತ, ಹಿಂದುಳಿದ, ನೀರಾವರಿ, ತೋಟಗಾರಿಕೆ ಸೇರಿದಂತೆ ಇನ್ನೀತರ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯು ಹೊರತಂದಿರುವ 2019ನೇ ಸಾಲಿನ ಡೈರಿಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರು ಬಿಡುಗಡೆಗೊಳಿಸದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶರಣಗೌಡ ಪಾಟೀಲ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಂತಪ್ಪ ಕೂಡಲಗಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಸೇರಿದಂತೆ ಜಿಲ್ಲಾ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಸಭೆ ಆರಂಭಕ್ಕೂ ಮುನ್ನ ಗುರುವಾರ ಜಮ್ಮು ಕಾಶ್ಮೀರಿನ ಪುಲವಾಮಾನಲ್ಲಿ ಭಯೋತ್ಪಾದಕರ ದಾಳಿಗೆ ಹುತಾತ್ಮರಾದ ಸಿ.ಆರ್.ಪಿ.ಎಫ್. ಯೋಧರಿಗೆ ಮೌನಾಚರಣೆ ಮೂಲಕ ಸಭೆಯು ಸಂತಾಪ ಸೂಚಿಸಿತು.

ಸಾಲ ಮನ್ನಾ ಯೋಜನೆ: ದಾಖಲಾತಿಗಳು ಸಲ್ಲಿಸಲು ಸೂಚನೆ
*****************************************************
ಕಲಬುರಗಿ,ಫೆ.16.(ಕ.ವಾ.)-ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರು ಪಡೆದ ಅಲ್ಪಾವಧಿ ಸಾಲವನ್ನು ಸರ್ಕಾರವು ಇತ್ತೀಚಗೆ ಮನ್ನಾ ಮಾಡಿರುವುದರಿಂದ ಈ ಕುರಿತು ಫಲಾನುಭವಿ ರೈತರ ಮಾಹಿತಿ ಗಣಕಯಂತ್ರದ ತಂತ್ರಾಂಶದಲ್ಲಿ ಅಳವಡಿಸಬೇಕಾಗಿರುತ್ತದೆ. ಹೀಗಾಗಿ ಕಲಬುರಗಿ ಜಿಲ್ಲೆಯ ಸಾಲ ಪಡೆದಿರುವ ಫಲಾನುಭವಿಗಳು ತಮ್ಮ ಭೂಮಿಯ ಸರ್ವೇ ನಂಬರ್, ಆಧಾರ ಕಾರ್ಡ್ ಮತ್ತು ರೇಷನ್ ಕಾರ್ಡ್ ದಾಖಲೆಗಳನ್ನು ಎರಡು ದಿನದೊಳಗಾಗಿ ತಮ್ಮ ವ್ಯಾಪ್ತಿಗೆ ಬರುವ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.
ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಎರಡರಲ್ಲಿಯೂ ಸಾಲ ಪಡೆದಿದ್ದಲ್ಲಿ ಅಂತಹ ರೈತರ ಸಾಲ ಮನ್ನಾವನ್ನು ಸಹಕಾರ ಸಂಘಗಳ ಬ್ಯಾಂಕಿನಲ್ಲಿಯೆ ಮಾಡಲಾಗುತ್ತಿದೆ. ನಿಗಧಿತ ಅವಧಿಯಲ್ಲಿ ದಾಖಲೆಗಳು ಸಲ್ಲಿಸದಿದ್ದಲ್ಲಿ ಸಾಲ ಮನ್ನಾ ಯೋಜನೆಯ ಪ್ರಯೋಜನದಿಂದ ವಂಚಿತರಾಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಅಬಕಾರಿ ಉಪ ನಿರೀಕ್ಷಕರ ಹುದ್ದೆಗೆ ಪರೀಕ್ಷೆ: ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
********************************************************************
ಕಲಬುರಗಿ,ಫೆ.16.(ಕ.ವಾ.)-ಅಬಕಾರಿ ಇಲಾಖೆಯಲ್ಲಿನ ಅಬಕಾರಿ ಉಪನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಇದೇ ಫೆಬ್ರವರಿ 17 ರಂದು ಬೆಳಿಗ್ಗೆ 10 ರಿಂದ 11.30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ರಿಂದ 3.30 ಗಂಟೆಯವರೆಗೆ ಕಲಬುರಗಿ ನಗರದ ಒಟ್ಟು 17 ಪರೀಕ್ಷಾ ಉಪ ಕೇಂದ್ರಗಳಲ್ಲಿ ನಡೆಯಲಿದೆ.
ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲು ಇರುವ ಜಿರಾಕ್ಸ್ ಅಂಗಡಿ ಹಾಗೂ ಪುಸ್ತಕ ಮಳಿಗೆಗಳು ಮುಚ್ಚಬೇಕೆಂದು ಕಲಬುರಗಿ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಫೋನ್, ಇತರೆ ಚಿಕ್ಕಗಾತ್ರದ ಎಲೆಕ್ಟ್ರಾನಿಕ್ ವಸ್ತು ಮತ್ತು ಚಿಕ್ಕ ಗಾತ್ರದ ಪುಸ್ತಕಗಳನ್ನು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಕೂಡದು ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.

ಸಾಲ ಮನ್ನಾ: ರೈತ ಬಾಂಧವರಲ್ಲಿ ಮನವಿ
*************************************
ಕಲಬುರಗಿ,ಫೆ.16.(ಕ.ವಾ.)-ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಸಂಯೋಜನೆಗೊಂಡಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿ ಅಲ್ಪಾವಧಿ ಬೆಳೆ ಸಾಲ ಪಡೆದು ದಿನಾಂಕ 10-07-2018ಕ್ಕೆ ಹೊಂದಿರುವ ಹೊರಬಾಕಿಯಲ್ಲಿ ಗರಿಷ್ಠ 1 ಲಕ್ಷ ರೂ.ವರೆಗೆ ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದೆ.
ಈ ಕುರಿತು ಫಲಾನುಭವಿ ರೈತರ ಮಾಹಿತಿ ಗಣಕಯಂತ್ರದ ತಂತ್ರಾಂಶದಲ್ಲಿ ಅಳವಡಿಸಬೇಕಾಗಿರುತ್ತದೆ. ಹೀಗಾಗಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವ್ಯಾಪ್ತಿಗೊಳಪಡುವ ಸಹಕಾರ ಸಂಘಗಳಲ್ಲಿ ಸಾಲ ಪಡೆದಿರುವ ಫಲಾನುಭವಿಗಳು ತಮ್ಮ ಭೂಮಿಯ ಸರ್ವೇ ನಂಬರ್, ಆಧಾರ ಕಾರ್ಡ್ ಮತ್ತು ರೇಷನ್ ಕಾರ್ಡ್ ದಾಖಲೆಗಳನ್ನು 2 ದಿನದೊಳಗಾಗಿ ತಮ್ಮ ವ್ಯಾಪ್ತಿಗೆ ಬರುವ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಬೇಕು ಎಂದು ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ರೈತ ಬಾಂಧವರಲ್ಲಿ ಮನವಿ ಮಾಡಿದಾರೆ.
ನಿಗಧಿತ ಅವಧಿಯಲ್ಲಿ ದಾಖಲೆಗಳು ಸಲ್ಲಿಸದಿದ್ದಲ್ಲಿ ಸಾಲ ಮನ್ನಾ ಯೋಜನೆಯ ಪ್ರಯೋಜನೆಯಿಂದ ವಂಚಿತರಾಗುವಿರಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಹೀಗಾಗಿ ಲೇಖನಗಳು NEWS AND PHOTOS DATE: 16-02-2019
ಎಲ್ಲಾ ಲೇಖನಗಳು ಆಗಿದೆ NEWS AND PHOTOS DATE: 16-02-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTOS DATE: 16-02-2019 ಲಿಂಕ್ ವಿಳಾಸ https://dekalungi.blogspot.com/2019/02/news-and-photos-date-16-02-2019.html

0 Response to "NEWS AND PHOTOS DATE: 16-02-2019"
ಕಾಮೆಂಟ್ ಪೋಸ್ಟ್ ಮಾಡಿ