News and Photos Date: 28-02-2019

News and Photos Date: 28-02-2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photos Date: 28-02-2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photos Date: 28-02-2019
ಲಿಂಕ್ : News and Photos Date: 28-02-2019

ಓದಿ


News and Photos Date: 28-02-2019

ಸೆಕ್ಟರ್ ಅಧಿಕಾರಿಗಳು ಮತದಾರರಿಗೆ ಮತಯಂತ್ರದ ಮಾಹಿತಿ ನೀಡಲು ಸೂಚನೆ
**********************************************************************
ಕಲಬುರಗಿ,ಫೆ.18.(ಕ.ವಾ.)-ಲೋಕಸಭಾ ಚುನಾವಣೆಗೆ ನೇಮಿಸಿರುವ ಸೆಕ್ಟರ್ ಅಧಿಕಾರಿಗಳು ನಾಳೆಯಿಂದ ಮತಗಟ್ಟೆಗಳಿಗೆ ತೆರಳಿ ಮತದಾರರಿಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಯಂತ್ರದ ಕುರಿತು ತಿಳುವಳಿಕೆ ನೀಡಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಕ್ಟರ್ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್ ಯಂತ್ರದ ಹ್ಯಾಂಡ್ಸ್ ಆನ್ ತರಬೇತಿಯ ಅಧ್ಯಕ್ಷತೆವಹಿಸಿ ಮಾತನಾಡಿ, ಮತದಾರರಿಗೆ ವಿದ್ಯುನ್ಮಾನ ಮತ ಯಂತ್ರಗಳ ಮಾಹಿತಿ ನೀಡುವುದಕ್ಕಿಂತ ಮುಂಚಿತವಾಗಿ ಮತಯಂತ್ರಗಳು ಹಾಗೂ ವಿವಿ ಪ್ಯಾಟ್ ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿವೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಲ್ಲಿ ವಿದ್ಯುನ್ಮಾನ ಮತಯಂತ್ರದ ಕುರಿತು ತಪ್ಪ ಕಲ್ಪನೆ ಮೂಡದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಸೆಕ್ಟರ್ ಅಧಿಕಾರಿಗಳು ಎಲ್ಲ ಮತಗಟ್ಟೆಗಳಿಗೆ ಸಂಪರ್ಕಿಸುವ ಮೂಲಕ ವಲ್ನರೆಬಲಿಟಿ ಮತಗಟ್ಟೆಗಳ ಮಾಹಿತಿ ಸಂಗ್ರಹಿಸಬೇಕು. ಈ ಹಿಂದಿನ ಚುನಾವಣೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದಲ್ಲಿ, ಮತದಾನಕ್ಕೆ ಅಡ್ಡಿಪಡಿಸಿದರೆ, ಸಮುದಾಯಗಳ ನಡುವೆ ಗಲಭೆ ಅಥವಾ ಘರ್ಷಣೆ ಇರುವಂತಹ ಪ್ರದೇಶಗಳನ್ನು ಗುರುತಿಸಿ ವರದಿ ನೀಡಬೇಕು. ಚುನಾವಣಾ ಪ್ರಕ್ರಿಯೇಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸುವುದರಿಂದ ಹಿಡಿದು ಮತಯಂತ್ರಗಳು ಭದ್ರ ಕೋಣೆಯಲ್ಲಿ ಸಂಗ್ರಹಿಸುವವರೆಗೆ ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿ ಅತೀ ಮುಖ್ಯವಾಗಿದ್ದು, ಚುನಾವಣಾ ಪ್ರಕ್ರಿಯೇಯ ಸಂಪೂರ್ಣ ಮಾಹಿತಿಯನ್ನು ಹೊಂದಬೇಕು. ಸೆಕ್ಟರ್ ಅಧಿಕಾರಿಗಳು ಮತಗಟ್ಟೆ ಅಧಿಕಾರಿಗಳ ಸಮಸ್ಯೆಗಳನ್ನು ತಿಳಿದು ಅವುಗಳನ್ನು ನಿವಾರಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಪಿ. ರಾಜಾ ಮಾತನಾಡಿ, ಭಾರತ ಚುನಾವಣಾ ಆಯೋಗದಿಂದ ಲೋಕಸಭಾ ಚುನಾವಣೆಗೆ (ಛಿಗಿIಉIಐ) ಸಿವಿಜಿಲ್ ಎಂಬ ಮೊಬೈಲ್ ಆ್ಯಪ್ ಮೂಲಕ ಚುನಾವಣಾ ದೂರುಗಳನ್ನು ದಾಖಲಿಸಿಕೊಂಡು ಪರಿಹರಿಸುವ ಕ್ರಮ ಕೈಗೊಂಡಿದೆ. ಮತದಾರರು ಪ್ಲೇಸ್ಟೋರ್ ಮೂಲಕ ಸಿವಿಜಿಲ್ ಆ್ಯಪ್ ಮೊಬೈಲ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳುವ ಮೂಲಕ ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ದೂರುಗಳು ನೇರವಾಗಿ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ವಿಲೇ ಆಗುವುದರಿಂದ ನೋಡಲ್ ಅಧಿಕಾರಿಗಳು ದೂರಿನಲ್ಲಿರುವ ಜಿಪಿಎಸ್ ಮಾಹಿತಿ ಪಡೆದು ಪರಿಶೀಲಿಸಿ ಆ ಪ್ರದೇಶದ ಫ್ಲೈಯಿಂಗ್ ಸ್ಕ್ವಾಡ್ ಅಥವಾ ಸೆಕ್ಟರ್ ಅಧಿಕಾರಿಗಳಿಗೆ ಕಳುಹಿಸುವರು. ದೂರು ಸ್ವೀಕರಿಸಿದ ಅಧಿಕಾರಿಗಳು ಜಿಪಿಎಸ್ ಮಾಹಿತಿಯಲ್ಲಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ತೊಂದರೆ ನಿವಾರಿಸಬೇಕು. ದೂರಿನಲ್ಲಿರುವ ಸಮಸ್ಯೆ ಗಂಭೀರವಾಗಿದರೆ ಅವಶ್ಯಕವಿದ್ದಲ್ಲಿ ಎಫ್.ಐ.ಆರ್. ಕೂಡಾ ದಾಖಲಿಸಲು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಸಿವಿಜಿಲ್ ಮೊಬೈಲ್ ಆ್ಯಪ್ ಕುರಿತು ವಿವರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ವಿದ್ಯುನ್ಮಾನ ಮತಯಂತ್ರದ ತರಬೇತಿ ನೀಡಿ ಸೆಕ್ಟರ್ ಅಧಿಕಾರಿಗಳಿಗೆ ಚುನಾವಣೆ ನಿಮಿತ್ತವಾಗಿ ಮೆಜೆಸ್ಟ್ರೀಯಲ್ ಅಧಿಕಾರ ನೀಡಲಾಗುತ್ತದೆ. ಈ ಅಧಿಕಾರವನ್ನು ಚಲಾಯಿಸುವ ಮೂಲಕ ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಬೇಕು. ಸೆಕ್ಟರ್ ಅಧಿಕಾರಿಗಳು ಎಲ್ಲ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆಗಳು ನೆಲಮಹಡಿಯಲ್ಲಿ ಇರುವ ಹಾಗೆ ನೋಡಿಕೊಂಡು ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳಾದ ರ್ಯಾಂಪ್, ನೆರಳು, ಶೌಚಾಲಯ, ಕುಡಿಯುವ ನೀರು ವ್ಯವಸ್ಥೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕು. ತಹಶೀಲ್ದಾರರು ಅಂತಿಮ ಮತದಾರರ ಪಟ್ಟಿ ತಮಗೆ ನೀಡಿದಾಗ ಮತದಾರರ ಪಟ್ಟಿಯಲ್ಲಿರುವ ಮತಗಟ್ಟೆ ಯಾವ ಸ್ಥಳದಲ್ಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ನೂತನವಾಗಿ ರೂಪಿಸಿರುವ ಮತಗಟ್ಟೆಗಳ ಕುರಿತು ಮತದಾರರಿಗೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಇದಕ್ಕಾಗಿ ಗ್ರಾಮಗಳಲ್ಲಿ ಡಂಗೂರ ಹೊಡಿಸಬೇಕು. ಮತಗಟ್ಟೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪಕ್ಷಗಳ ಕಚೇರಿ ಇರದಂತೆ ನೋಡಿಕೊಳ್ಳಬೇಕು. ಸೆಕ್ಟರ್ ಅಧಿಕಾರಿಗಳು ವಿದ್ಯುನ್ಮಾನ ಮತಯಂತ್ರಗಳ ತರಬೇತಿ ನೀಡುವಾಗ ಮತದಾರರಿಗೆ ತಮ್ಮ ಹೆಸರು ಮತದಾರರ ಯಾದಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ತಿಳಿಸಬೇಕು. ಯಾದಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ತಕ್ಷಣ ನೋಂದಣಿಗೆ ಅರ್ಜಿ ಸಲ್ಲಿಸಲು ತಿಳಿಸಬೇಕೆಂದರು.
ತರಬೇತಿಯಲ್ಲಿ ಮಹಾನಗರಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್, ಕಲಬುರಗಿ ಸಹಾಯಕ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ, ರಾಷ್ಟ್ರೀಯ ತರಬೇತಿದಾರ ಡಾ. ಶಶಿಶೇಖರ ರೆಡ್ಡಿ ಹಾಗೂ ಸೆಕ್ಟರ್ ಅಧಿಕಾರಿಗಳು ಪಾಲ್ಗೊಂಡಿದ್ದರು.
ಫೆಬ್ರವರಿ 19ರಂದು ದಿವ್ಯಾಂಗರಿಗೆ ಸಾಧನ ಸಲಕರಣೆ ವಿತರಣಾ ಸಮಾರಂಭ
*****************************************************************
ಕಲಬುರಗಿ,ಫೆ.18.(ಕ.ವಾ.)-ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಕರ್ನಾಟಕ ರಾಜ್ಯ ಕಚೇರಿ) ಹಾಗೂ ಕೃತಕ ಅಂಗಾಂಗಗಳು ಭಾರತದ ಉತ್ಪಾದನಾ ನಿಗಮ, ಕಲಬುರಗಿ ಜಿಲ್ಲಾ ಆಡಳಿತ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ದಿವ್ಯಾಂಗರಿಗಾಗಿ ಸಾಧನ ಸಲಕರಣೆ ವಿತರಣಾ ಸಮಾರಂಭವನ್ನು ಇದೇ ಫೆಬ್ರವರಿ 19 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿಯಾದ ಡಾ. ಅಜಯ ಸಿಂಗ್ ಹಾಗೂ ಐಓಸಿಎಲ್-ಕೆಎಸ್‍ಓ ಪ್ರಧಾನ ವ್ಯವಸ್ಥಾಪಕರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಅಧÀ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಎಮ್.ವಾಯ್. ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಬಿ. ಮತ್ತಿಮೂಡ, ಖನೀಜ್ ಫಾತೀಮಾ ಹಾಗೂ ಸುಭಾಷ ಗುತ್ತೇದಾರ್, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ್ ಖರ್ಬಿಕರ್, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಹಾಗೂ ಐಓಸಿಎಲ್-ಕೆ.ಎಸ್.ಓ.(ಹೆಚ್.ಆರ್.) ಡಿಜಿಎಮ್ ರಾಜೇಶ ಪಂತ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಫೆಬ್ರವರಿ 21ರಂದು ದೈಹಿಕ ಪರೀಕ್ಷೆ
*******************************
ಕಲಬುರಗಿ,ಫೆ.18.(ಕ.ವಾ.)-ನೂತನವಾಗಿ ಗೃಹರಕ್ಷಕ ದಳದ ಸದಸ್ಯರಾಗಲು 2018ರ ಫೆಬ್ರವರಿ 15 ರಂದು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ 2019ರ ಫೆಬ್ರವರಿ 21 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ (ಡಿ.ಎ.ಆರ್.) ಕವಾಯತ್ ಮೈದಾನದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ ಎಂದು ಕಲಬುರಗಿಯ ಹೋಮಗಾರ್ಡ್ ಕಮಾಂಡಂಟ್ ಅವರು ತಿಳಿಸಿದ್ದಾರೆ.
ದೈಹಿಕ ಪರೀಕ್ಷೆಗೆ ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಲಗತ್ತಿಸಿರುವ ಎಲ್ಲ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು. ದೈಹಿಕ ಪರೀಕ್ಷೆ ಕುರಿತು ಅಭ್ಯರ್ಥಿಗಳ ವಿಳಾಸಕ್ಕೆ ಪೋಸ್ಟ್ ಕಾರ್ಡನ್ನು ಕಳುಹಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ ಮಾರ್ಗದ ಸಮೀಪ ಹೋಗದಂತೆ ಸೂಚನೆ
********************************************
ಕಲಬುರಗಿ,ಫೆ.18.(ಕ.ವಾ)-ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯ ಕಲಬುರಗಿ ನಿರ್ಮಾಣ ಮತ್ತು ನಿರ್ವಹಣೆ ವಿಭಾಗದ ವ್ಯಾಪ್ತಿಯಲ್ಲಿ ಬರುವ 110/33-11ಕೆವಿ (ಉತ್ತರ) ವಿದ್ಯುತ್ ವಿತರಣಾ ಕೇಂದ್ರ, (ಫಿಲ್ಟರ್ ಬೆಡ್) ದಿಂದ 33/11 ಕೆ.ವಿ. ಜಿ.ಐ.ಎಸ್. ಸರ್ಕಾರಿ ಆಸ್ಪತ್ರೆ ವಿದ್ಯುತ್ ವಿತರಣಾ ಕೇಂದ್ರದವರೆಗಿನ ಸುಮಾರು 3.34 ಕಿ.ಮಿ. ಹೊಸ ವಿದ್ಯುತ್ ಮಾರ್ಗವು ಕೆಳಕಂಡ ಬಡಾವಣೆಗಳಲ್ಲಿ ಹಾದು ಹೋಗುತ್ತದೆ. ಈ ಮಾರ್ಗವು 2019ರ ಫೆಬ್ರವರಿ 19 ರಂದು ಅಥವಾ ತಂದನಂತರ ಯಾವುದೇ ದಿನದಂದು ಚಾಲನೆಯಾಗಲಿದೆ ಎಂದು ಕಲಬುರಗಿಯ ಜೆಸ್ಕಾಂ ನಿರ್ಮಾಣ ಮತ್ತು ನಿರ್ವಹಣೆ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿದ್ಯುತ್ ಮಾರ್ಗವು ಕಲಬುರಗಿ ನಗರದ ಸನಾ ಹೊಟೇಲ್‍ದಿಂದ ಬಾಕರ್ ಫಂಕ್ಷನ್ ಹಾಲ್, ಬಸವೇಶ್ವರ ಕಾಲೋನಿ, ಆದರ್ಶ ನಗರ, ಗುಬ್ಬಿ ಕಾಲೋನಿ, ಸ್ಮಶಾನ ಹನುಮಾನ ಮಂದಿರ, ಹಳೆಯ ಆರ್.ಟಿ.ಓ. ಕಚೇರಿ, ವಾತ್ಸಲ್ಯ ಆಸ್ಪತ್ರೆ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಹಾದು ಹೋಗುತ್ತದೆ. ಆದ್ದರಿಂದ ಈ ಸುತ್ತಮುತ್ತಲಿನ ಬಡಾವಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಜನರು ಈ ಮಾರ್ಗದ ಸಮೀಪ ಹೋಗಬಾರದು, ಬಡಾವಣೆಗಳಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬಗಳಿಗೆ ದನಕರುಗಳು ಕಟ್ಟುವುದಾಗಲಿ, ಗೈ ತಂತಿ/ಕಂಬಕ್ಕೆ ಹತ್ತುವುದಾಗಲಿ ಮತ್ತು ವಿದ್ಯುತ್ ಮಾರ್ಗವನ್ನು ಮುಟ್ಟುವುದಾಗಲಿ ಮಾಡಬಾರದೆಂದು ಅವರು ತಿಳಿಸಿದ್ದಾರೆ.
ಫೆಬ್ರವರಿ 23ರಂದು ಕಲಬುರಗಿ ಜಿಲ್ಲಾ ಮಟ್ಟದ ಯುವಜನ ಮೇಳ
********************************************************
ಕಲಬುರಗಿ,ಫೆ.18.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಲಬುರಗಿ ಸಾಂಸ್ಕøತಿಕ ಪ್ರತಿಷ್ಠಾನ ಇವುಗಳ ಸಂಯುಕ್ತಾಶ್ರಯದಲ್ಲಿ 2018-19ನೇ ಸಾಲಿನ ಕಲಬುರಗಿ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಇದೇ ಫೆಬ್ರವರಿ 23 ರಂದು ಕಲಬುರಗಿ ಸುಪರ ಮಾರ್ಕೇಟಿನ ಎಂ.ಪಿ.ಎಚ್.ಎಸ್. ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಹಾಗೂ ಇಲಾಖೆಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಯುವಕರಿಗೆ ಭಾವಗೀತೆ, ಗೀಗೀ ಪದ, ಲಾವಣಿ, ಕೋಲಾಟ, ವೀರಗಾಸೆ, ಡೊಳ್ಳು ಕುಣಿತ, ರಂಗಗೀತೆ, ಜಾನಪದ ನೃತ್ಯ, ಭಜನೆ, ಜಾನಪದ ಗೀತೆ, ದೊಡ್ಡಾಟ (ಮೂಡಲಪಾಯ), ಸಣ್ಣಾಟ, ಯಕ್ಷಗಾನ, ಚರ್ಮವಾದ್ಯ ಮೇಳ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳನ್ನು ಹಾಗೂ ಯುವತಿಯರಿಗೆ ಭಾವಗೀತೆ, ಗೀಗೀ ಪದ, ಲಾವಣಿ, ಕೋಲಾಟ, ಜಾನಪದ ಗೀತೆ, ಡೊಳ್ಳು ಕುಣಿತ, ರಂಗಗೀತೆ, ಜಾನಪದ ನೃತ್ಯ, ರಾಗಿ/ಜೋಳ ಭೀಸುವ ಪದ, ಸೋಬಾನೆ ಪದ, ಭಜನೆ, ಜಾನಪದ ಗೀತೆ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ.
ವಯೋಮಿತಿ 15 ರಿಂದ 35 ವರ್ಷದೊಳಗಿನ ಎಲ್ಲ ಯುವಕ/ ಯುವತಿಯರು ಈ ಯುವಜನ ಮೇಳದಲ್ಲಿ ಭಾಗವಹಿಸಬಹುದಾಗಿದೆ. ತಾಲೂಕು ಕೇಂದ್ರದಿಂದ ಕಲಬುರಗಿಗೆ ಬಂದು ಹೋಗುವ ಸಾಮಾನ್ಯ ಬಸ್ ಪ್ರಯಾಣ ದರವನ್ನು ನೀಡಲಾಗುವುದು.
ಸ್ಪರ್ಧಾಳುಗಳು ಕಡ್ಡಾಯವಾಗಿ ವಯಸ್ಸಿನ ದೃಢೀಕರಣ ಪತ್ರ ಹಾಜರುಪಡಿಸಿ ಅಂದು ಬೆಳಿಗ್ಗೆ 11 ಗಂಟೆಯೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ವೇಷಭೂಷಣ, ವಾದ್ಯ, ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಹಾಗೂ ಮೊಬೈಲ್ ಸಂಖ್ಯೆ 9945570234, 9844029235, 9902853193 ಹಾಗೂ 08472-268637ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಸೇಡಂ ಪಟ್ಟಣ: ಬಯಲು ಶೌಚ ಮುಕ್ತ ಘೋಷಣೆ
******************************************
ಕಲಬುರಗಿ,ಫೆ.18.(ಕ.ವಾ.)-ಸೇಡಂ ಪಟ್ಟಣವನ್ನು ಬಯಲು ಶೌಚ ಮುಕ್ತ ಪಟ್ಟಣವೆಂದು ಘೋಷಿಸಲಾಗಿದೆ. ಪಟ್ಟಣದಲ್ಲಿ ಬಯಲು ಶೌಚವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸೇಡಂ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಬಯಲು ಶೌಚ ಮಾಡಿ ಮೊದಲನೇ ಬಾರಿ ಉಲ್ಲಂಘಿಸಿದ್ದಲ್ಲಿ 500 ರೂ. ದಂಡ ವಿಧಿಸಲಾಗುವುದು. ಎರಡನೇ ಬಾರಿಗೆ 1000 ರೂ. ದಂಡ ಹಾಗೂ ಮೂರನೇ ಬಾರಿ 1500 ರೂ. ಗಳ ದಂಡ ವಿಧಿಸಲಾಗುತ್ತದೆ. ಮೂರಕ್ಕಿಂತ ಹೆಚ್ಚು ಬಾರಿ ಉಲ್ಲಂಘಿಸಿದ್ದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಅವರು ತಿಳಿಸಿದ್ದಾರೆ.
ಫೆ. 19 ಹಾಗೂ 20ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*****************************************************
ಕಲಬುರಗಿ,ಫೆ.18.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-1ರ ಉಪ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ 110/33/11 ಕೆ.ವಿ. ಕಪನೂರ ಉಪ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸುಧಾರಣಾ ಕಾರ್ಯಕೈಗೊಂಡಿರುವ ಪ್ರಯುಕ್ತ ಇದೇ ಫೆಬ್ರವರಿ 19 ಹಾಗೂ 20ರಂದು ಬೆಳಿಗ್ಗೆ 10.30 ರಿಂದ ಸಂಜೆ 5.30 ಗಂಟೆಯವರೆಗೆ ಸದರಿ ಉಪ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಫೀಡರಗಳ ಗ್ರಾಮ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಇದಕ್ಕೆ ಸಹಕರಿಸಲು ಕೋರಲಾಗಿದೆ.
110 ಕೆ.ವಿ. ಕಪನೂರ ಉಪ ವಿತರಣಾ ಕೇಂದ್ರದ ಎಫ್-2 ಅವರಾದ ಎಕ್ಸ್‍ಪ್ರೆಸ್ ಫೀಡರ್ ವ್ಯಾಪ್ತಿಯಲ್ಲಿ ಬರುವ ಅವರಾದ, ಯಳವಂತಗಿ, ಕಗ್ಗನಮಡ್ಡಿ, ಬಬಲಾದ, ಕಣ್ಣೂರ, ಭೂಷಣಗಿ, ಸಿರಗಾಪುರ ಮತ್ತು ಅಂಕಲಗಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.




ಹೀಗಾಗಿ ಲೇಖನಗಳು News and Photos Date: 28-02-2019

ಎಲ್ಲಾ ಲೇಖನಗಳು ಆಗಿದೆ News and Photos Date: 28-02-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photos Date: 28-02-2019 ಲಿಂಕ್ ವಿಳಾಸ https://dekalungi.blogspot.com/2019/02/news-and-photos-date-28-02-2019.html

Subscribe to receive free email updates:

0 Response to "News and Photos Date: 28-02-2019"

ಕಾಮೆಂಟ್‌‌ ಪೋಸ್ಟ್‌ ಮಾಡಿ