ಶೀರ್ಷಿಕೆ : 18-03-2019
ಲಿಂಕ್ : 18-03-2019
18-03-2019
ಮತದಾನ ಕುರಿತು ವಿದ್ಯಾರ್ಥಿನಿಯರಿಂದ ಪ್ರತಿಜ್ಞಾ ವಿಧಿ ಸ್ವೀಕಾರ
*******************************************************
18 ವರ್ಷ ತುಂಬಿದ ಎಲ್ಲರೂ ಮತದಾನ ಮಾಡಬೇಕು
**********************************************
-- ಜಿ.ಪಂ. ಸಿ.ಇ.ಓ. ಡಾ. ಪಿ. ರಾಜಾ
**********************************
ಕಲಬುರಗಿ,ಮಾ.18.(ಕ.ವಾ)-ಹದಿನೆಂಟು ವರ್ಷ ತುಂಬಿದ ಎಲ್ಲ ವಿದ್ಯಾಥಿ/ವಿದ್ಯಾರ್ಥಿನಿಯರು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕೆಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮತ್ತು ನೋಡಲ್ ಅಧಿಕಾರಿಗಳಾದ ಡಾ. ಪಿ. ರಾಜಾ ಅವರು ಕರೆ ನೀಡಿದ್ದಾರೆ.
ಅವರು ಸೋಮವಾರ ಕಲಬುರಗಿ ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಸ್ವೀಪ್ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
2019ರ ಜನವರಿ 1ಕ್ಕೆ 18ವರ್ಷ ತುಂಬಿದಂತಹ ವಿದ್ಯಾರ್ಥಿಗಳು ಇನ್ನೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿರದಿದ್ದಲ್ಲಿ, ಆಯಾ ಬೂತ್ ಮಟ್ಟದ ಬಿ.ಎಲ್.ಓ. ಗಳನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಬೇಕು. ಈ ಮೂಲಕ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಅವರು ತಿಳಿಸಿದರು.
ಹಾಗೆಯೇ ತಮ್ಮ ತಮ್ಮ ಮನೆಗಳಲ್ಲಿ ಯಾವುದಾದರೂ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದಿದ್ದರೆ ಕೂಡಲೇ ಸೇರಿಸಿ ಅವರು ಮತದಾನ ಮಾಡುವಂತೆ ಅರಿವು ಮುಡಿಸಬೇಕೆಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿನಿಯರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
“ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭಿತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ, ಪ್ರಭಾವಿಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇನೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ” ಎಂದು ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮಾಳೆಗಾಂವ, ಕಾಲೇಜಿನ ಪ್ರಾಂಶುಪಾಲ ಶಿವಾಜಿ ಪಾಟೀಲ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಸುಮಾರು 1200 ಕ್ಕೂ ವಿದ್ಯಾರ್ಥಿನಿಯರು ಹಾಜರಿದ್ದರು.
ಮಾರ್ಚ್ 19ರಂದು
*****************
ಮತದಾನ ಜಾಗೃತಿ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ
***********************************************************
ಕಲಬುರಗಿ,ಮಾ.18.(ಕ.ವಾ)-ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ, ಕರ್ನಾಟಕ ಜರ್ಮನ ತಾಂತ್ರಿಕ ತರಬೇತಿ ವಿದ್ಯಾಲಯ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ “ಮೂಲಭೂತ ಕಾನೂನು, ಮತದಾನ ಜಾಗೃತಿ ಮತ್ತು ಮತಯಂತ್ರದ ಬಗ್ಗೆ ಪ್ರದರ್ಶನ ಮಾಹಿತಿ” ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಮಂಗಳವಾರ ಮಾರ್ಚ್ 19ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಕೇಂದ್ರ ಬಸ್ ನಿಲ್ದಾಣ ರಸ್ತೆಯಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ಜರ್ಮನ್ ತಾಂತ್ರಿಕ ತರಬೇತಿ ವಿದ್ಯಾಲಯದ ನಿರ್ದೇಶಕ ಸುನೀಲ ನೇಯರ್ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್.ಮಾಣಿಕ್ಯ ಹಾಗೂ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕಲಬುರಗಿ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ಅಧ್ಯಕ್ಷ ಸಿದ್ರಾಮಯ್ಯ ಹಿರೇಮಠ ಅವರು ಮತದಾನ ಮತ್ತು ಮಾದರಿ ನೀತಿ ಸಂಹಿತೆ ಕುರಿತು ವಿಶೇಷ ಉಪನ್ಯಾಸ ನೀಡುವರು.
ಮಾರ್ಚ್ 22ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
***********************************************
ಕಲಬುರಗಿ,ಮಾ.18.(ಕ.ವಾ)-ಕಲಬುರಗಿ ವೃತ್ತದ ವ್ಯಾಪ್ತಿಯಲ್ಲಿ ಬರುವ ಆಳಂದ ಹಾಗೂ ಕಡಗಂಚಿ ಉಪವಿಭಾಗಗಳಲ್ಲಿ ಇದೇ ಮಾರ್ಚ್ 22ರಂದು ಕಲಬುರಗಿ ಜೆಸ್ಕಾಂ ಅಧೀಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯು ಜರುಗಲಿದೆ.
ಆಳಂದ ಉಪವಿಭಾಗಕ್ಕೆ ಸಂಬಂಧಿಸಿದಂತೆ ವಿದ್ಯುತ್ ಗ್ರಾಹಕರ ಸಂವಾದ ಸಭೆಯು ಇದೇ ಮಾರ್ಚ್ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆವರೆಗೆ ಆಳಂದ ತಹಶೀಲ್ದಾರರ ಕಚೇರಿ ಹತ್ತಿರದ ಜೆಸ್ಕಾಂ ಉಪವಿಭಾಗದ ಕಚೇರಿ ಆವರಣದಲ್ಲಿ ಹಾಗೂ ಕಡಗಂಚಿ ಉಪವಿಭಾಗಕ್ಕೆ ಸಂಬಂಧಿಸಿದಂತೆ ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಕಡಗಂಚಿ ಜೆಸ್ಕಾಂ ಉಪವಿಭಾಗದ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಜನಸ್ಪಂದನ ಸಭೆ ಏರ್ಪಡಿಸಲಾಗಿದೆ. ವಿದ್ಯುತ್ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಗ್ರಾಹಕರ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಎಂದು ಕಲಬುರಗಿ ಜೆಸ್ಕಾಂ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು 18-03-2019
ಎಲ್ಲಾ ಲೇಖನಗಳು ಆಗಿದೆ 18-03-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ 18-03-2019 ಲಿಂಕ್ ವಿಳಾಸ https://dekalungi.blogspot.com/2019/03/18-03-2019.html
0 Response to "18-03-2019"
ಕಾಮೆಂಟ್ ಪೋಸ್ಟ್ ಮಾಡಿ