news 30-3-2019

news 30-3-2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು news 30-3-2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : news 30-3-2019
ಲಿಂಕ್ : news 30-3-2019

ಓದಿ


news 30-3-2019

ಲೋಕಸಭಾ ಚುನಾವಣೆ:
********************
ಮೂರನೇ ದಿನ ಯಾವುದೇ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ ಇಲ್ಲ
**********************************************************
ಕಲಬುರಗಿ,ಮಾ.30.(ಕ.ವಾ.).05-ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರಕ್ಕೆ 2019ರ ಏಪ್ರಿಲ್ 23ರಂದು ನಡೆಯುವ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಶನಿವಾರದಂದು ಯಾವುದೇ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು 05-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 4 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 05 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಏಪ್ರಿಲ್ 8 ಇರುತ್ತದೆ.
ಏಪ್ರಿಲ್ 7ರಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ
**************************************************************
ಕಲಬುರಗಿ,ಮಾ.30.(ಕ.ವಾ.)-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಲಬುರಗಿ ಜಿಲ್ಲೆಯ ಆಳಂದ, ಅಫಜಲಪುರ, ಚಿಂಚೋಳಿ, ಚಿತ್ತಾಪುರ, ಜೇವರ್ಗಿ, ಕಲಬುರಗಿ ಮತ್ತು ಸೇಡಂ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 2019-20ನೇ ಸಾಲಿನಲ್ಲಿ ಖಾಲಿಯಿರುವ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ 2019ರ ಏಪ್ರಿಲ್ 7ರಂದು ಬೆಳಿಗ್ಗೆ 10 ಗಂಟೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಜೇವರ್ಗಿ, ಸೇಡಂ ಹಾಗೂ ಕಲಬುರಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಕಲಬುರಗಿ ಎಸ್.ಟಿ.ಬಿ.ಟಿ. ಬಸ್ ನಿಲ್ದಾಣ ಹತ್ತಿರದ (ಬುಲೇಟ್ ಶೋ ರೂಂ ಹಿಂದುಗಡೆಯಿರುವ) ಗುಲ್ಶನ್-ಇ-ಅತ್ಫಾಲ್ ಶಾಲೆಯಲ್ಲಿ, ಸೇಡಂ ಮತ್ತು ಅಫಜಲಪುರ ತಾಲೂಕಿನ ವಿದ್ಯಾರ್ಥಿಗಳಿಗೆ ಕಲಬುರಗಿ ದರ್ಗಾ ರಸ್ತೆಯಲ್ಲಿರುವ ಲೀಲ್ಲಿ ರೋಸ್ ಸ್ಕೂಲ್ (ಫರ್ಹಾನ್ ಬಾಲಕಿಯರ ಕಾಲೇಜು) ನಲ್ಲಿ ಹಾಗೂ ಅಫಜಲಪುರ, ಆಳಂದ, ಚಿಂಚೋಳಿ, ಚಿತ್ತಾಪುರ ಮತ್ತು ಕಲಬುರಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಕಲಬುರಗಿ ದರ್ಗಾ ರಸ್ತೆಯಲ್ಲಿರುವ ನ್ಯಾಷನಲ್ ಎಜ್ಯುಕೇಶನ್ ಸೊಸೈಟಿಯಲ್ಲಿ ಏರ್ಪಡಿಸಲಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪಾಲಕ/ಪೋಷಕರು ಅರ್ಜಿ ಸಲ್ಲಿಸಿದ ಸಂಬಂಧಿಸಿದ ತಾಲೂಕಿನ ಮಾಹಿತಿ ಕೇಂದ್ರ ಅಥವಾ ವಸತಿ ಶಾಲೆಗಳಿಗೆ ಭೇಟಿ ನೀಡಿ ಪ್ರವೇಶ ಪರೀಕ್ಷಾ ಕೇಂದ್ರಗಳನ್ನು ಖಾತರಿಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಐವಾನ್ ಶಾಹಿಯಲ್ಲಿರುವ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಹಾಗೂ ದೂರವಾಣಿ ಸಂಖ್ಯೆ 08472-244006/ 247260ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಮಾ. 31 ಹಾಗೂ ಏ. 1ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
*******************************************************
ಕಲಬುರಗಿ,ಮಾ.30.(ಕ.ವಾ.)-ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಬೆಣ್ಣೆತೋರಾ ನದಿಯ ಜಾಕ್‍ವೆಲ್ 600 ಎಂ.ಎಂ. ವ್ಯಾಸದ ಎಂ.ಎಸ್. ಏರು ಕೊಳವೆ ಮಾರ್ಗದಲ್ಲಿ ಸೋರುವಿಕೆ ಕಂಡು ಬಂದಿದೆ. ತುರ್ತು ದುರಸ್ಥಿ ಕಾರ್ಯ ಕೈಗೊಳ್ಳಬೇಕಾಗುವ ಹಿನ್ನೆಲೆಯಲ್ಲಿ ಮೇಲ್ಮಟ್ಟದ / ಕೆಳಮಟ್ಟದ ಜಲ ಸಂಗ್ರಹಗಾರದಿಂದ ನಗರಕ್ಕೆ ನೀರು ಸರಬರಾಜು ಮಾಡುವ ನಗರದ ವಿವಿಧ ಹಾಗೂ 24x7 ನಿರಂತರ ನೀರು ಸರಬರಾಜು ಮಾಡುವ ಕೆಳಕಂಡ ಬಡಾವಣೆಗಳಲ್ಲಿ ಇದೇ ಮಾರ್ಚ್ 31 ಹಾಗೂ ಏಪ್ರಿಲ್ 1 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.
ಹಳೆಯ ಜಲಶುದ್ಧೀಕರಣ ಕೇಂದ್ರ, ಹೆಚ್.ಎಸ್.ಆರ್. ಮೇಲ್ಮಟ್ಟದ / ಕೆಳಮಟ್ಟದ, ಮೋಮಿನಪುರ, ಸುಪರ್ ಮಾರ್ಕೆಟ್ (ನೇರ ಸರಬರಾಜು), ಡಿ.ಸಿ. ಟ್ಯಾಂಕ್, ಪೋಲಿಸ್ ಕಾಲೋನಿ, ಐವಾನ್-ಇ-ಶಾಹಿ ಟ್ಯಾಂಕ್ ಹಾಗೂ 24x7 ಬಡಾವಣೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಏಪ್ರಿಲ್ 2ರಂದು ಕಾಳಗಿ ಉಪವಿಭಾಗದ ವಿದ್ಯುತ್ ಗ್ರಾಹಕರ ಸಂವಾದ ಸಭೆ
ಕಲಬುರಗಿ,ಮಾ.30.(ಕ.ವಾ.)-ಕಲಬುರಗಿ ವೃತ್ತದ ವ್ಯಾಪ್ತಿಯಲ್ಲಿ ಬರುವ ಕಾಳಗಿ ಉಪವಿಭಾಗದ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಕಲಬುರಗಿ ಜೆಸ್ಕಾಂ ಅಧೀಕ್ಷಕ ಅಭಿಯಂತರವರ ಅಧ್ಯಕ್ಷತೆಯಲ್ಲಿ 2019ರ ಏಪ್ರಿಲ್ 2ರಂದು ಬೆಳಿಗ್ಗೆ 10 ರಿಂದ ಮಧಾಹ್ನ 12 ಗಂಟೆಯವರೆಗೆ ಕಾಳಗಿ ಉಪವಿಭಾಗದ ಜೆಸ್ಕಾಂ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾಳಗಿ ಉಪವಿಭಾಗಕ್ಕೆ ಸಂಬಂಧಿಸಿದ ವಿದ್ಯುತ್ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿದ್ಯುತ್ ಗ್ರಾಹಕರ ಸಂವಾದ ಸಭೆಯಲ್ಲಿ ಭಾಗವಹಿಸಬೇಕೆಂದು ಗುಲಬರ್ಗಾ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ನೋಂದಾಯಿತ ವರ್ತಕರು ನಾಮಫಲಕದಲ್ಲಿ
**************************************
ನೋಂದಣಿ ಸಂಖ್ಯೆ ನಮೂದಿಸುವುದು ಕಡ್ಡಾಯ
****************************************
ಕಲಬುರಗಿ,ಮಾ.30.(ಕ.ವಾ.)-ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಡಿಯಲ್ಲಿ ನೋಂದಾಯಿತ ವರ್ತಕರು ತಮ್ಮ ನೋಂದಣಿ ಸಂಖ್ಯೆಯನ್ನು ತಮ್ಮ ಅಂಗಡಿಯ ನಾಮಫಲಕದಲ್ಲಿ ನಮೂದಿಸಬೇಕು ಹಾಗೂ ಅವರ ಹೆಚ್ಚುವರಿ ವ್ಯಾಪಾರ ಸ್ಥಳಗಳಲ್ಲಿಯೂ ಸಹ ಇದರ ಬೋರ್ಡ ಹಾಕುವುದು ನಿಯಮ 18ರ ಪ್ರಕಾರ ಕಡ್ಡಾಯವಾಗಿದೆ ಎಂದು ಕಲಬುರಗಿ ಪೂ.ವ. (ಜಾರಿ) ವಾಣಿಜ್ಯ ತೆರಿಗೆ ಜಂಟಿ ಆಯುಕ್ತರಾದ ಪದ್ಮಾಕರ್ ಆರ್. ಕುಲಕರ್ಣಿ ಅವರು ತಿಳಿಸಿದ್ದಾರೆ.
ಅದೇ ರೀತಿ ರಾಜಿ ತೆರಿಗೆಯನ್ನು ಸಂದಾಯ ಮಾಡುತ್ತಿರುವ ವರ್ತಕರು ಸಹ ತಮ್ಮ ನಾಮಫಲಕದ ಮೇಲೆ “ರಾಜಿ ತೆರಿಗೆ ಸಂದಾಯ ಮಾಡುವ ವ್ಯಕ್ತಿ/ವ್ಯಾಪಾರಿ” ಎಂದು ನಮೂದಿಸಬೇಕು ಹಾಗೂ ಅವರು ನೀಡುವ ಮಾರಾಟದ ಬಿಲ್ಲುಗಳ ಮೇಲ್ಭಾಗದಲ್ಲಿ ಸಹ “ರಾಜಿ ತೆರಿಗೆ ಸಂದಾಯ ಮಾಡುವ ವ್ಯಕ್ತಿ, ತೆರಿಗೆ ಸಂಗ್ರಹಿಸುವಂತಿಲ್ಲ” ಎಂದು ನಮೂದಿಸುವುದು ನಿಯಮ 5ರ ಅಡಿಯಲ್ಲಿ ಕಡ್ಡಾಯವಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಸರ್ವೇ ಹಾಗೂ ತಪಾಸಣೆ ಕೈಗೊಳ್ಳುವ ಸಂದರ್ಭದಲ್ಲಿ ನ್ಯೂನ್ಯತೆಗಳು ಕಂಡು ಬಂದಲ್ಲಿ ಸೇವಾ ತೆರಿಗೆ ಕಾನೂನಿನ ಅಡಿಯಲ್ಲಿ ದಂಡ ವಿಧಿಸಲಾಗುವುದೆಂದು ಅವರು ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು news 30-3-2019

ಎಲ್ಲಾ ಲೇಖನಗಳು ಆಗಿದೆ news 30-3-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ news 30-3-2019 ಲಿಂಕ್ ವಿಳಾಸ https://dekalungi.blogspot.com/2019/03/news-30-3-2019.html

Subscribe to receive free email updates:

0 Response to "news 30-3-2019"

ಕಾಮೆಂಟ್‌‌ ಪೋಸ್ಟ್‌ ಮಾಡಿ