News and Photo 1-3-2019

News and Photo 1-3-2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photo 1-3-2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photo 1-3-2019
ಲಿಂಕ್ : News and Photo 1-3-2019

ಓದಿ


News and Photo 1-3-2019

ಚಿತ್ತಾಪುರ ಪಟ್ಟಣದಲ್ಲಿ 14.81 ಕೋಟಿ ರೂ. ಕಾಮಗಾರಿಗಳ ಚಾಲನೆ
***********************************************************
ಕಲಬುರಗಿ,ಮಾ.01.(ಕ.ವಾ.)-ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಚಿತ್ತಾಪುರ ಪಟ್ಟಣದಲ್ಲಿ ಒಟ್ಟು 14.81 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಅವರು ಚಿತ್ತಾಪುರ ಪಟ್ಟಣದ ಹತ್ತಿರದಲ್ಲಿರುವ ನಾಗಾವಿ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ 2018-19ನೇ ಸಾಲಿನ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಚಿತ್ತಾಪುರ ಪಟ್ಟಣದಲ್ಲಿ ಅಂಬಿಗರ ಚೌಡಯ್ಯ ಸಮುದಾಯ ಭವನ ನಿರ್ಮಾಣ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಬುದ್ದ, ಬಸವ ಹಾಗೂ ಅಂಬೇಡ್ಕರ ಅವರು ಸಮಾಜದಲ್ಲಿ ಅರಿವು ಮೂಡಿಸಲು ಪ್ರಯತ್ನಿಸಿದರು. ಇದಕ್ಕೆ ಶಿಕ್ಷಣ ಬಹುಮುಖ್ಯವಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಿಂದುಳಿದ, ದೀನ ದಲಿತ ಮಕ್ಕಳಿಗೆ ಶಿಕ್ಷಣ ನೀಡುವ ಮುಖ್ಯ ಉದ್ದೇಶದಿಂದ ರಾಜ್ಯದಲ್ಲಿ 820 ಆಂಗ್ಲ ಮಾಧ್ಯಮ ವಸತಿ ಶಾಲೆಗಳನ್ನು ಹಾಗೂ 3200 ವಸತಿ ನಿಲಯಗಳನ್ನು ನಡೆಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ರಾಜ್ಯದ ಸುಮಾರು 4.5 ಲಕ್ಷ ಮಕ್ಕಳು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರಬುದ್ಧ ಸಮಾಜ ಕಟ್ಟಲು ಶಿಕ್ಷಣ ತಳಹದಿಯಾಗಿದ್ದು, ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎಂದರು.
ಸಮಾಜ ಕಲ್ಯಾಣ ಎಂದರೆ ಸಮಾಜದ ಪ್ರತಿ ವ್ಯಕ್ತಿಗೆ ಸ್ವಾಭಿಮಾನದ ಬದುಕು ಕಲ್ಪಿಸುವುದರ ಜೊತೆಗೆ ಆರ್ಥಿಕ ಹಾಗೂ ಸಾಮಾಜಿಕ ಸ್ಥಿರತೆ ನೀಡುವುದಾಗಿದೆ. ಇದು ಕಷ್ಟಕರವಾಗಿದ್ದರೂ ಪ್ರಯತ್ನಿಸಲಾಗುತ್ತಿದೆ. ಹಿಂದುಳಿದ ಸಮಾಜ ಕಷ್ಟಪಟ್ಟು ಅರ್ಥಿಕವಾಗಿ ಸ್ಥಿರತೆ ಕಂಡುಕೊಳ್ಳಬೇಕಾಗಿದೆ. ಕಷ್ಟದಲ್ಲಿರುವ ದೀನ ದಲಿತರ ಆರ್ಥಿಕ ಸ್ಥಿರತೆಗೆ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಸರ್ಕಾರ ರೈತರಿಗೆ ನೆರವಾಗಲು ಈ ಹಿಂದೆ 8500 ಕೋಟಿ ರೂ. ಸಾಲ ಮನ್ನಾ ಮಾಡಿದೆ. ಸಧ್ಯದ ಮೈತ್ರಿ ಸರ್ಕಾರವು ಸಹ 48000 ಕೋಟಿ ರೈತರ ಸಾಲ ಮನ್ನಾ ಮಾಡುವಲ್ಲಿ ಯಶಸ್ವಿಯಾಗಿದೆ. ಆದರೆ ಇದಕ್ಕೆ ಕೇಂದ್ರದಿಂದ ಒಂದು ಪೈಸೆ ಸಹಾಯ ದೊರೆತಿಲ್ಲ ಎಂದರು.
ಕೇಂದ್ರ ಸರ್ಕಾರವು ತೊಗರಿಯನ್ನು ಆಫ್ರಿಕಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇದರಿಂದಾಗಿ ಕಲಬುರಗಿ ಜಿಲ್ಲೆಯ ತೊಗರಿ ಬೆಳೆಗಾರರ ಮೇಲೆ ದುಷ್ಪರಿಣಾಮವಾಗುತ್ತಿದೆ. ರಾಜ್ಯದಲ್ಲಿ ಭೀಕರ ಬರವಿದ್ದರೂ ಸಹ ಕೇಂದ್ರ ಹೆಚ್ಚಿನ ನೆರವಿಗೆ ಬರದೇ ಕೇವಲ 800 ಕೋಟಿ ರೂ. ನೀಡಿದೆ ಎಂದು ತಿಳಿಸಿದ ಸಚಿವರು ಮತದಾರರು ಪ್ರಬುದ್ಧರಾಗಿ ಅಭಿವೃದ್ಧಿಯಲ್ಲಿ ಹಾಗೂ ತಮ್ಮ ಜೀವನ ಸುಧಾರಣೆಗಾಗಿ ತೊಡಗಿರುವವರನ್ನು ಪ್ರೋತ್ಸಾಹಿಸಬೇಕು. ಸಂವಿಧಾನಿಕವಾಗಿ ಮತದಾರರು ಜನಪ್ರತಿನಿಧಿಗಳಿಗೆ ದಡ ಸೇರಿಸುತ್ತಾರೆ. ದಡ ಸೇರಿದ ರಾಜಕಾರಣಿಗಳು ಮತದಾರರನ್ನು ನೀರಿಗೆ ಹಾಕದ ಹಾಗೆ ನೋಡಿಕೊಳ್ಳಬೇಕು. ಅಂತಹವರನ್ನು ಬೆಂಬಲಿಸಬಾರದು ಎಂದರು.
ಚಿತ್ತಾಪುರ ಪಟ್ಟಣದಲ್ಲಿ ಬಸವ ಭವನ ನಿರ್ಮಿಸುವ ಉದ್ದೇಶ ಹೊಂದಲಾಗಿದ್ದು, ನಿವೇಶನದ ಕೊರತೆಯಿಂದ ಈ ಕನಸ್ಸು ಈಡೇರುತ್ತಿಲ್ಲ. ಸಮಾಜದ ಮುಖಂಡರೆಲ್ಲರೂ ಮುತುವರ್ಜಿವಹಿಸಿ ಭೂಮಿ ದೊರಕಿಸಬೇಕು. ಬಸವ ಭವನ ನಿರ್ಮಾಣಕ್ಕೆ ಅನುದಾನ ಸಹ ಕಾಯ್ದಿರಿಸಲಾಗಿದೆ. ಚಿತ್ತಾಪುರದ ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿದ್ದ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಲಾಗಿದ್ದು, ಅಂಬಿಗರ ಚೌಡಯ್ಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಅಂಬಿಗರ ಚೌಡಯ್ಯ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಗಳ ಅನುದಾನ ಒದಗಿಸಲಾಗಿದ್ದು, ಇನ್ನೂ ಹೆಚ್ಚಿನ ಅನುದಾನ ಅವಶ್ಯಕತೆಯಿದ್ದಲ್ಲಿ ಒದಗಿಸಲಾಗುವುದು ಎಂದರು.
ತೊನಸನಹಳ್ಳಿ ಮಲ್ಲಣ್ಣಪ್ಪ ಮಹಾಸ್ವಾಮಿ, ಕಂಬಳೀಶ್ವರ ಮಠದ ಸೋಮಶೇಖರ ಶಿವಾಚಾರ್ಯರು, ಸಿಂಧಗಿ ಶಾಂತಗಂಗಾಧರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಜಗದೀವರೆಡ್ಡಿ ಪೊಲೀಸ್ ಪಾಟೀಲ, ಮುಖಂಡರುಗಳಾದ ಜಗದೇವ ಗುತ್ತೇದಾರ್, ಭೀಮಣ್ಣ ಸಾಲಿ, ರಮೇಶ ಮರಗೋಳ, ಪ್ರಭುರಾಜ ಕಾಂತಾ, ರಾಜಗೋಪಾಲರೆಡ್ಡಿ, ಪ್ರಕಾಶ ಕಮಕನೂರ, ಶಿವಕುಮಾರ ನಾಟಿಕಾರ, ಮೆಹಬೂಬ ಸಾಬ, ನಾಗರೆಡ್ಡಿ ಪಾಟೀಲ ಕರದಾಳ, ಈರಣ್ಣಗೌಡ ಪರಸರೆಡ್ಡಿ, ಶಿವರುದ್ರ ಬೇಣಿ, ಪುರಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
ಸಚಿವರು ಚಿತ್ತಾಪುರ ಪಟ್ಟಣದಲ್ಲಿ ಒಳಾಂಗಣ ಕ್ರೀಡಾಂಗಣ, ಪೋಸ್ಟ್ ಮೇಟ್ರಿಕ್ ಬಾಲಕರ ವಸತಿ ನಿಲಯ, ಬಾಲಕಿಯರ ವಸತಿ ನಿಲಯ, ಪ್ರೀ ಮೇಟ್ರಿಕ್ ಬಾಲಕರ ವಸತಿ ನಿಲಯ, ಪ್ರೀ ಮೇಟ್ರಿಕ್ ಬಾಲಕಿಯರ ವಸತಿ ನಿಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಂಡು ಮಕ್ಕಳ ವಸತಿ ನಿಲಯ ಹಾಗೂ ಇಂದಿರಾ ಕ್ಯಾಂಟೀನ್‍ಗಳು ಸೇರಿದಂತೆ ಒಟ್ಟು 7.44 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಉದ್ಘಾಟಿಸಿದರು. ಹಾಗೂ 7.37 ಕೋಟಿ ರೂ. ವೆಚ್ಚದ 13 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮಾರ್ಚ್ 5 ರಂದು ಮಹಾನಗರಪಾಲಿಕೆ ವಿಶೇಷ ತುರ್ತು ಮುಂಗಡ ಪತ್ರ ಸಭೆ
******************************************************************
ಕಲಬುರಗಿ,ಮಾ.01.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆಯ ವಿಶೇಷ ತುರ್ತು ಮುಂಗಡ ಪತ್ರದ ಸಭೆಯು ಇದೇ ಮಾರ್ಚ್ 5 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಇಂದಿರಾ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಏರ್ಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಸಭಾ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಈ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆ ಮಹಾಪೌರರು, ಉಪ ಮಹಾಪೌರರು, ಎಲ್ಲ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಉಪಸ್ಥಿತರಿರಬೇಕೆಂದು ಅವರು ತಿಳಿಸಿದ್ದಾರೆ.
ಮಾರ್ಚ್ 6 ರಂದು ಕಲಬುರಗಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ
ಕಲಬುರಗಿ,ಮಾ.01.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇದೇ ಮಾರ್ಚ್ 6 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಇಂದಿರಾ ಸ್ಮಾರಕಭವನ (ಟೌನ್‍ಹಾಲ್) ದಲ್ಲಿ ಏರ್ಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಸಭಾ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಈ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆ ಮಹಾಪೌರರು, ಉಪ ಮಹಾಪೌರರು, ಎಲ್ಲ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಉಪಸ್ಥಿತರಿರಬೇಕೆಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಉದ್ಯಮ ಸ್ನೇಹಿ ಜವಳಿ ನೀತಿ
**********************************
ಕಲಬುರಗಿ,ಮಾ.01.(ಕ.ವಾ.)-ರಾಜ್ಯ ಸರ್ಕಾರದ ನೂತನ ಜವಳಿ ನೀತಿಯಡಿ ಜವಳಿ ಉದ್ಯಮದಾರರಿಗೆ ಪೂರಕವಾಗಿ ಅನೇಕ ಅವಕಾಶಗಳನ್ನು ಹಾಗೂ ಸವಲತ್ತುಗಳನ್ನು ಒದಗಿಸಲಾಗಿದ್ದು, ಜವಳಿ ಉದ್ಯಮದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಬೆಂಗಳೂರಿನ ನೇಕಾರರ ಸೇವಾ ಕೇಂದ್ರದ ಉಪನಿರ್ದೇಶಕ ಜವಾಹರಲಾಲ್ ಕುನ್ಸೋತ್ ಅವರು ತಿಳಿಸಿದ್ದಾರೆ.
ಅವರು ಗುರುವಾರ ಗುಲಬರ್ಗಾ ವಸಾಹತು ಉದ್ದಿಮೆದಾರರ ಸಂಘದಲ್ಲಿ ನೂತನ ಜವಳಿ ನೀತಿ 2013-18 ಹಾಗೂ ಇಲಾಖಾ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ಎರಡು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಮಾಹಿತಿ ನೀಡುವುದರ ಜೊತೆಗೆ ಜವಳಿ ಆಧಾರಿತ ಕೈಗಾರಿಕಾ ಘಟಕಗಳಾದ ಕಾಟನ್ ಜಿನ್ನಿಂಗ್, ಪ್ರೆಸ್ಸಿಂಗ್, ವೀವಿಂಗ್, ಗಾರ್ಮೆಂಟ್ಸ್ ಜವಳಿ ಸಂಸ್ಕರಣ ಘಟಕಗಳನ್ನು ಪ್ರಾರಂಭಿಸುವ ಕುರಿತು ಅಭ್ಯರ್ಥಿಗಳಿಗೆ ಮಾಹಿತಿ ನೀಡಲು ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದರು.
ಕಾಸಿಯಾ ವಿಶೇಷ ಪ್ರತಿ ನಿಧಿ ಸುರೇಶ್ ನಂದ್ಯಾಳ ಮಾತನಾಡಿ, ರಾಜ್ಯ ಸರ್ಕಾರ ನೂತನ ಜವಳಿ ನೀತಿ ಅನುಷ್ಠಾನದಿಂದ ಕಳೆದ 5 ವರ್ಷಗಳಿಂದ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ. ಹಲವಾರು ಯುವಕ/ಯುವತಿಯರು ತರಬೇತಿ ಪಡೆದು ಉದ್ಯೋಗಾವಕಾಶ ಪಡೆದುಕೊಳ್ಳುತ್ತಿದ್ದಾರೆ. ಜವಳಿ ಉದ್ದಿಮೆದಾರರು ಇಲಾಖೆಯ ವಿವಿಧ ಯೋಜನೆಯಗಳಡಿ ಸಿಗುವ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕೆಂದರು.
ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಕಲಬುರಗಿ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ಜಂಟಿನಿರ್ದೇಶಕ .ವಿ. ರಘೋಜಿ, ಮಾತನಾಡಿ ನಿರುದ್ಯೋಗಿಗಳು ಸರ್ಕಾರದಿಂದ ಸಿಗುವ ಉದ್ಯಮಿಶೀಲತಾ ತರಬೇತಿ ಪಡೆದು, ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು. ಇಂದಿನ ದಿನಗಳಲ್ಲಿ ನೇಕಾರಿಕೆ ವೃತ್ತಿಯು ತುಂಬಾ ಕಡಿಮೆಯಾಗುತ್ತಿದ್ದು, ನೇಕಾರರು ತಯಾರಿಸುತ್ತಿರುವ ಬಟ್ಟೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ನೇಕಾರರು ವಿವಿಧ ಬಗೆಯ ಹೊಸ ವಿನ್ಯಾಸದ ಉತ್ಪನ್ನಗಳನ್ನು ತಯಾರಿಸುವ ಕೌಶಲ್ಯ ಮೈಗೂಡಿಸಿಕೊಳ್ಳಬೇಕೆಂದರು.
ನೂತನ ಜವಳಿ ನೀತಿ ಯೋಜನೆಯಡಿ ಜವಳಿ ಉದ್ಯಮಿದಾರರಿಗೆ ಅವಕಾಶಗಳಿದ್ದು, ಇದರಲ್ಲಿ ಜಿನ್ನಿಂಗ್, ಸ್ಪಿನ್ನಿಂಗ್, ವೀವಿಂಗ್, ಗಾರ್ಮೆಂಟ್ಸ್ ಇತರೆ ಹೊಸ ತೆರನಾದ ಘಟಕಗಳನ್ನು ಸ್ಥಾಪಿಸಲು ಉದ್ದಿಮೆದಾರರು ಮುಂದೆ ಬರಬೇಕೆಂದರು.
ಕಲಬುರಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಮಂಜುನಾಥ ಎ. ಅವರು ಪ್ರಾರಂಭದಲ್ಲಿ ಸ್ವಾಗತಿಸಿ, ಕಾರ್ಯಕ್ರಮದ ರೂಪರೇಷೆಗಳ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಇಲಾಖೆಯ ತ್ರಾಂತ್ರಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
.
ಅಫಜಲಪುರ ಪಟ್ಟಣ ಬಯಲು ಶೌಚ ಮುಕ್ತ ಘೋಷಣೆ:
**********************************************
ಸಾರ್ವಜನಿಕರು ಸಹಕರಿಸಲು ಸೂಚನೆ
*******************************
ಕಲಬುರಗಿ,ಮಾ.01,(ಕ.ವಾ)-ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ಅಫಜಲಪುರ ಪುರಸಭೆಯ ವ್ಯಾಪ್ತಿಯ ಬರುವ 23 ವಾರ್ಡುಗಳಲ್ಲಿ ಹಾಗೂ ಸರ್ಕಾರಿ ಶಾಲೆ/ ಖಾಸಗಿ ಶಾಲೆಗಳು ಶೌಚಾಲಯಗಳು ಹೊಂದಿರುತ್ತವೆ. ಇದರ ಹಿನ್ನೆಲೆಯಲ್ಲಿ ಅಫಜಲಪುರ ಪಟ್ಟಣವನ್ನು ಬಯಲು ಶೌಚ ಮುಕ್ತವೆಂದು ಘೋಷಿಸಲು ನಿರ್ಧರಿಸಲಾಗಿದೆ. ಅಫಜಲಪುರ ಪಟ್ಟಣದ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಅಫಜಲಪುರ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಮಾನಸಿಕ ರೋಗಿಗಳ ತಪಾಸಣಾ ಶಿಬಿರ
ಕಲಬುರಗಿ,ಮಾ.01.(ಕ.ವಾ.)-ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಮನೋಚೈತನ್ಯ ಕಾರ್ಯಕ್ರಮದಡಿ 2019ರ ಮಾರ್ಚ್ ಮಾಹೆಯಲ್ಲಿ ಕಲಬುರಗಿ ಜಿಲ್ಲೆಯ ತಾಲೂಕುಗಳ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾನಸಿಕ ರೋಗಿಗಳ ತಪಾಸಣಾ ಶಿಬಿರವನ್ನು ಕೆಳಕಂಡ ದಿನಾಂಕಗಳಂದು ನಡೆಸಲಾಗುವುದು ಎಂದು ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ತಿಳಿಸಿದ್ದಾರೆ. ಶಿಬಿರದ ದಿನಾಂಕ, ಸ್ಥಳ ಮತ್ತು ಪಾಲ್ಗೊಳ್ಳುವ ತಜ್ಞ ಮನೋವೈದ್ಯರುಗಳ ವಿವರ ಇಂತಿದೆ.
ಮಾರ್ಚ್ 5 ರಂದು: ಆಳಂದ ತಾಲೂಕು ಆಸ್ಪತ್ರೆ-ಜಿಮ್ಸ್ ಮನೋವೈದ್ಯ ಡಾ|| ಚಂದ್ರಶೇಖರ ಹುಡೇದ ಹಾಗೂ ತಾರಫೈಲ್ ನಗರ ಆರೋಗ್ಯ ಕೇಂದ್ರ್ರ-ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಮುನಾವರ ಹುಸೇನ್. ಮಾರ್ಚ್ 8 ರಂದು: ಅಫಜಲಪುರ ತಾಲೂಕು ಆಸ್ಪತ್ರೆ-ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೋಲ ಪತಂಗೆ. ಮಾರ್ಚ್ 12 ರಂದು: ಚಿಂಚೋಳಿ ತಾಲೂಕು ಆಸ್ಪತ್ರೆ-ಕಲಬುರಗಿ ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ|| ವಿಜಯೇಂದ್ರ ಹಾಗೂ ಮುಕ್ತಂಪುರ ನಗರ ಆರೋಗ್ಯ ಕೇಂದ್ರ-ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೋಲ ಪತಂಗೆ.
ಮಾರ್ಚ್ 13 ರಂದು: ದೇವಲಗಾಣಗಾಪುರ ಸಮುದಾಯ ಆರೋಗ್ಯ ಕೇಂದ್ರ-ಕಲಬುರಗಿ ಬಸವೇಶ್ವರ ಆಸ್ಪತ್ರೆಯ ಮನೋವೈದ್ಯ ಡಾ. ರಾಹುಲ ಮಂದಕನಳ್ಳಿ. ಮಾರ್ಚ್ 15 ರಂದು: ಜೇವರ್ಗಿ ತಾಲೂಕು ಆಸ್ಪತ್ರೆ-ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಮುನಾವರ ಹುಸೇನ್. ಮಾರ್ಚ್ 19 ರಂದು: ಚಿತ್ತಾಪುರ ತಾಲೂಕು ಆಸ್ಪತ್ರೆ-ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಮುನಾವರ ಹುಸೇನ್.
ಮಾರ್ಚ್ 20 ರಂದು: ಹೀರೇಸಾವಳಗಿ ಪ್ರಾಥಮಿಕ ಆರೋಗ್ಯ ಕೇಂದ್ರ್ರ-ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೋಲ ಪತಂಗೆ. ಮಾರ್ಚ್ 22 ರಂದು: ಹೀರಾಪುರ ನಗರ ಆರೋಗ್ಯ ಕೇಂದ್ರ್ರ-ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಮುನಾವರ ಹುಸೇನ್. ಮಾರ್ಚ್ 26 ರಂದು: ಸೇಡಂ ತಾಲೂಕು ಆಸ್ಪತ್ರೆ-ಕಲಬುರಗಿ ಬಸವೇಶ್ವರ ಆಸ್ಪತ್ರೆಯ ಮನೋವೈದ್ಯ ಡಾ. ಅಜಯ ಢಗೆ. ಮಾರ್ಚ್ 27 ರಂದು: ಶಹಾಬಾದ ಸರ್ಕಾರಿ ಆರೋಗ್ಯ ಕೇಂದ್ರ್ರ-ಕೆ.ಬಿ.ಎನ್. ಆಸ್ಪತ್ರೆಯ ಮನೋವೈದ್ಯ ಡಾ. ಅಮೋಲ ಪತಂಗೆ.
ಮೇಲ್ಕಂಡ ದಿನಾಂಕಗಳಂದು ಮನೋವೈದ್ಯರು ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮಾನಸಿಕ ರೋಗದಿಂದ ಬಳಲುತ್ತಿರುವವರು ಸದರಿ ದಿನದಂದು ಮನೋವೈದ್ಯರ ಹತ್ತಿರ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಾರ್ಚ್ 3ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
**********************************************
ಕಲಬುರಗಿ,ಮಾ.01.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-1ರಿಂದ ಉಪ ವಿತರಣಾ ಕೇಂದ್ರದಿಂದ ಎಫ್-2 ಅವರಾದ ಎಕ್ಸ್‍ಪ್ರೆಸ್ ಫೀಡರ ವಿಭಜನೆ ಹಿನ್ನೆಲೆಯಲ್ಲಿ ಕಪನೂರ ಉಪ ವಿತರಣಾ ಕೇಂದ್ರದಲ್ಲಿ ಸುಧಾರಣಾ ಕಾರ್ಯಕೈಗೊಳ್ಳಲಾಗಿದೆ. ಇದರ ಹಿನ್ನೆಲೆಯಲ್ಲಿ ಇದೇ ಮಾರ್ಚ್ 3ರಂದು ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ಸದರಿ ಉಪ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಫೀಡರಗಳ ಗ್ರಾಮ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಇದಕ್ಕೆ ಸಹಕರಿಸಲು ಕೋರಲಾಗಿದೆ.
110 ಕೆ.ವಿ. ಕಪನೂರ ಉಪ ವಿತರಣಾ ಕೇಂದ್ರ: ಎಫ್-2 ಅವರಾದ ಎಕ್ಸ್‍ಪ್ರೆಸ್ ಫೀಡರ್ ವ್ಯಾಪ್ತಿಯಲ್ಲಿ ಬರುವ ಅವರಾದ, ಯಳವಂತಗಿ, ಕಗ್ಗನಮಡ್ಡಿ, ಬಬಲಾದ, ಕಣ್ಣೂರ, ಭೂಷಣಗಿ, ಸಿರಗಾಪುರ ಮತ್ತು ಅಂಕಲಗಾ ಗ್ರಾಮ.

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*****************************
ಕಲಬುರಗಿ,ಮಾ.01.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಾರ್ಯ ಮತ್ತು ಪಾಲನೆ ವಿಭಾಗ-2ದಿಂದ ಚಿತ್ತಾಪುರ ತಾಲೂಕಿನಲ್ಲಿ ವಿದ್ಯುತ್ತಿನ ಹಳೆಯ ಕಂಡಕ್ಟರ್ ಬದಲಿಸಿ ಹೊಸ ಕಂಡಕ್ಟರ್ ಹಾಕಲಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ಕೆಳಕಂಡ ಗ್ರಾಮಗಳಲ್ಲಿ ಮಾರ್ಚ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದ್ದು, ಗ್ರಾಹಕರು ಇದಕ್ಕೆ ಸಹಕರಿಸಲು ಬೇಕೆಂದು ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಗ್ರಾಮಗಳ ವಿವರ: ಚಿತ್ತಾಪುರ ತಾಲೂಕಿನ ಮುಡಬೂಳ, ಬಾಗೋಡಿ, ಖದ್ದರಗಿ, ಜೀವಣಗಿ, ಮೋಗಲಾ, ದಂಡೋತಿ, ಮರ್ಗೋಳ ಹಾಗೂ ಯರಗೋಳ ಗ್ರಾಮಗಳು.
ವಿದ್ಯಾರ್ಥಿ ವೇತನ-ಶುಲ್ಕ ವಿನಾಯಿತಿ ಸೌಲಭ್ಯ:
**********************************************
ತಿರಸ್ಕøತಗೊಂಡ ಅರ್ಜಿಯನ್ನು ಸರಿಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ
ಕಲಬುರಗಿ,ಮಾ.01.(ಕ.ವಾ.)-ಪ್ರಸಕ್ತ 2018-19ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮತ್ತು ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಕೆಲವು ವಿದ್ಯಾರ್ಥಿಗಳ ಅರ್ಜಿಯು ಆಧಾರ ಅಪಡೇಟ್ ವಿಫಲತೆಯಿಂದ ತಿರಸ್ಕøತಗೊಂಡಿರುತ್ತದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ ಅರ್ಜಿ ತಿರಸ್ಕøತಗೊಂಡ ವಿದ್ಯಾರ್ಥಿಗಳು 2019ರ ಮಾರ್ಚ್ 5 ರೊಳಗಾಗಿ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಆಧಾರ ಅಥೆಂಟಿಕೇಶನ್ ವಿಫಲತೆಗೆ ಸಂಬಂಧಿಸಿದಂತೆ ಹಾಗೂ ಆಧಾರನಲ್ಲಿ ಹೆಸರು ತಿದ್ದುಪಡಿ ಮಾಡಿಕೊಂಡು ಕಲಬುರಗಿ ತಾಲೂಕಾ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಆಧಾರ ದಾಖಲೆಯನ್ನು ಸಲ್ಲಿಸಿ, ಅರ್ಜಿಯನ್ನು ಅಪ್‍ಲೋಡ್ ಮಾಡಿಕೊಂಡು ತಮ್ಮ ಅರ್ಜಿಗಳನ್ನು ಅರ್ಹಗೊಳಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಪರಿಶಿಷ್ಟ ಕಾಲೋನಿಗಳಿಗೆ ಸ್ಮಶಾನ ಭೂಮಿ ನೀಡಲು ವರದಿ ಸಲ್ಲಿಸಲು ಸೂಚನೆ
*******************************************************************
ಕಲಬುರಗಿ,ಮಾ.01.(ಕ.ವಾ.)-ಪರಿಶಿಷ್ಟ ಜಾತಿ ಮತ್ತು ಪಂಗಡದವರು ವಾಸಿಸುವ ಪ್ರದೇಶ ಅಥವಾ ಕಾಲೋನಿಗಳಲ್ಲಿ ಲಭ್ಯವಿರದ ಸ್ಮಶಾನ ಭೂಮಿಗಳ ವರದಿಯನ್ನು ಸಿದ್ಧಪಡಿಸಿ ಒಂದು ವಾರದಲ್ಲಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ/ ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಿಷ್ಠ ಶೇ. 40ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಅಥವಾ ಪಂಗಡದ ಜನರು ವಾಸವಾಗಿದ್ದರೆ ಅಂತಹ ಪ್ರದೇಶಗಳನ್ನು ಪರಿಶಿಷ್ಟ ಜಾತಿ ಅಥವಾ ಪಂಗಡದ ಪ್ರದೇಶಗಳೆಂದು ಘೋಷಿಸಬೇಕು. ಜಿಲ್ಲೆಯ ಎಲ್ಲ ಪರಿಶಿಷ್ಟ ಜಾತಿಯ ಪ್ರದೇಶಗಳನ್ನು ಗುರುತಿಸಿ ಪಟ್ಟಿ ಮಾಡಿ ಅಲ್ಲಿ ಸ್ಮಶಾನ ಭೂಮಿ ಲಭ್ಯತೆ ಕುರಿತು ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕೆಂದರು.
ಸ್ಮಶಾನ ಭೂಮಿ ಲಭ್ಯವಿಲ್ಲದ ಪ್ರದೇಶಗಳ ಮಾಹಿತಿಯನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ಸಲ್ಲಿಸಿದ್ದಲ್ಲಿ ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನು ಖರೀದಿಗೆ ಕ್ರಮ ಜರುಗಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಿಗೆ ಸ್ಮಶಾನ ಭೂಮಿ ಒದಗಿಸುವುದು ಇಲಾಖೆಯ ಕರ್ತವ್ಯವಾಗಿದೆ ಎಂದು ಸೂಚಿಸಿದ ಜಿಲ್ಲಾಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು. ವಿಲೇವಾರಿಗೆ ನ್ಯಾಯಾಲಯಗಳಲ್ಲಿ ಬಾಕಿಯಿರುವ 247 ಪ್ರಕರಣಗಳನ್ನು ಬೇಗ ಇತ್ಯರ್ಥವಾಗುವ ಹಾಗೆ ಕ್ರಮ ಕೈಗೊಳ್ಳಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಸತೀಶ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರ ಮೇಲಾಗಿರುವ ದೌರ್ಜನ್ಯದಲ್ಲಿ ನೊಂದ ಸಂತ್ರಸ್ಥರಿಗೆ ಪರಿಹಾರ ಧನ ನೀಡಲಾಗುತ್ತಿದ್ದು, ಇಲ್ಲಿಯವರೆಗೆ 126 ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ 86 ಪ್ರಕರಣಗಳು ವಿಲೇವಾರಿಯಾಗಿದ್ದು, 1.45 ಕೋಟಿ ರೂ. ಪರಿಹಾರ ನೀಡಲಾಗಿದೆ. ಬಾಕಿಯಿರುವ 40 ಪ್ರಕರಣಗಳ ಪೈಕಿ 15 ಪ್ರಕರಣಗಳನ್ನು ಮಂಜೂರಾತಿಗಾಗಿ ಅನುಮೋದಿಸಲಾಗಿದೆ. 19 ಪ್ರಕರಣಗಳು ಮಂಜೂರಾತಿ ಹಂತದಲ್ಲಿದ್ದು, 6 ಪ್ರಕರಣಗಳಲ್ಲಿ ಪೊಲೀಸರಿಂದ ವರದಿ ಬರಬೇಕಾಗಿದೆ ಎಂದು ಸಭೆಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ದೌರ್ಜನ್ಯ ನಿಯಂತ್ರಣ ಸಮಿತಿಯ ಸದಸ್ಯರಾದ ಡಾ. ಜಿ. ಗೋಪಾಲರಾವ, ಮಲ್ಲಪ್ಪ ಹೊಸಮನಿ, ಚನ್ನಪ್ಪ ಸುರಪುರಕರ ಮತ್ತಿತರರು ಪಾಲ್ಗೊಂಡಿದ್ದರು.
ಅಸಂಘಟಿತ ವಲಯಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್
ಕಲಬುರಗಿ,ಮಾ.01.(ಕ.ವಾ.)-ಜಿಲ್ಲೆಯ ಅಸಂಘಟಿತ ವಲಯಗಳ ಕಾರ್ಮಿಕರಿಗೆ ಸರ್ಕಾರವು ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿಯಲ್ಲಿ ಸ್ಮಾರ್ಟ ಕಾರ್ಡ ಸೌಲಭ್ಯ ನೀಡಿದೆ. ಇದರ ಸದುಪಯೋಗ ಕಾರ್ಮಿಕರು ಪಡೆದುಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ.ಪಿ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರ ಸಮ್ಮಾನ ದಿನ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಶ್ರಮದಿಂದ ಕೆಲಸ ಮಾಡುವ ಅಸಂಘಟಿತ ವಲಯಗಳಾದ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್, ಮೆಕ್ಯಾನಿಕ, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕರಿಗೆ ವೈದ್ಯಕೀಯ, ಇತರೆ ಸೌಲಭ್ಯ ಒದಗಿಸುವ ಹಾಗೂ ಸಾಮಾಜಿಕ ಭದ್ರತೆ ನೀಡುವ ಕಾರಣ ಸ್ಮಾರ್ಟ ಕಾರ್ಡ ಸೌಲಭ್ಯ ಜಾರಿಗೊಳಿಸಲಾಗಿದೆ. ಸ್ಮಾರ್ಟ್ ಕಾರ್ಡ್ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ಸ್ವಯಂಘೋಷಿತ ಅರ್ಜಿಯನ್ನು ಭರ್ತಿಮಾಡಿ ಅವಶ್ಯಕ ದಾಖಲಾತಿಗಳನ್ನು ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ ಪಡೆಯಬಹುದಾಗಿದೆ ಎಂದರು.
ಕಲಬುರಗಿ ಕಾರ್ಮಿಕ ಅಧಿಕಾರಿ ಶ್ರೀಹರಿ ಪ್ರಸ್ತಾವಿಕ ಮಾತನಾಡಿ, 13 ವಲಯದ ಅಸಂಘಟಿತ ಕಾರ್ಮಿಕರು ನೀಡಿದ ಸೇವೆಯನ್ನು ಗುರುತಿಸಿ 194 ಕಾರ್ಮಿಕರಿಗೆ ಸಮ್ಮಾನ ಮಾಡಲಾಗುತ್ತಿದೆ. ಆಯಾ ಸಮಾಜದ ವೃತ್ತಿಯಲ್ಲಿ 30 ವರ್ಷಕಿಂತ ಹೆಚ್ಚಿನ ಕೆಲಸ ನಿರ್ವಹಿಸಿ ಬೇರೆಯವರಿಗೆ ತರಬೇತಿ ನೀಡಿದ ಓರ್ವ ಕಾರ್ಮಿಕನಿಗೆ ವಿಶೇಷ ಪುರಷ್ಕಾರ ಪ್ರಶಸ್ತಿ, 10000 ರೂ.ಗಳ ನಗದು ಬಹುಮಾನ ಹಾಗೂ ಸ್ಮರಣಿಕೆ, ಅಸಂಘಟಿತ ವಲಯದ ಸಮಾಜದಲ್ಲಿ ಉತ್ತಮ ಕೆಲಸ ನಿರ್ವಹಿಸಿದವರಿಗೆ ಶ್ರಮ ಸಮ್ಮಾನ ಪ್ರಶಸ್ತಿ, 1000 ರೂ. ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಲಾಗುವುದು ಎಂದರು.
ಈ ಸಂಧರ್ಭದಲ್ಲಿ ಕಲಬುರಗಿ ಸಹಾಯಕ ಆಯುಕ್ತ ರಾಹುಲ ತುಕಾರಾಮ್ ಪಾಂಡ್ವೆ, ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಗಿರೀಶ ಪಾಟೀಲ, ಕಲಬುರಗಿ ವಿಭಾಗ ಸಹಾಯಕ ಕಾರ್ಮಿಕ ಆಯುಕ್ತೆ ಆರತಿ ಪೂಜಾರಿ, ಉಪಸ್ಥಿತರಿದ್ದರು.











ಹೀಗಾಗಿ ಲೇಖನಗಳು News and Photo 1-3-2019

ಎಲ್ಲಾ ಲೇಖನಗಳು ಆಗಿದೆ News and Photo 1-3-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo 1-3-2019 ಲಿಂಕ್ ವಿಳಾಸ https://dekalungi.blogspot.com/2019/03/news-and-photo-1-3-2019.html

Subscribe to receive free email updates:

0 Response to "News and Photo 1-3-2019"

ಕಾಮೆಂಟ್‌‌ ಪೋಸ್ಟ್‌ ಮಾಡಿ