ಶೀರ್ಷಿಕೆ : News and Photo Date: 7-3-2019
ಲಿಂಕ್ : News and Photo Date: 7-3-2019
News and Photo Date: 7-3-2019
1614 ಫಲಾನುಭವಿಗಳು ವಿವಿಧ ಸವಲತ್ತುಗಳ ವಿತರಣೆ
*************************************************
ಕಲಬುರಗಿ,ಮಾ.07.(ಕ.ವಾ.)-ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಸವಲತ್ತುಗಳನ್ನು ಕಲಬುರಗಿ ಜಿಲ್ಲೆಯ ಫಲಾನುಭವಿಗಳಿಗೆ ವಿತರಿಸಲಾಗುತ್ತಿದ್ದು, ಒಟ್ಟು 1614 ಫಲಾನುಭವಿಗಳಿಗೆ ಇಂದು ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಅವರು ಗುರುವಾರ ನಗರದ ಸರ್ಕಾರಿ ಐಟಿಐ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲ ಯೋಜನೆಗಳು ಸಾರ್ವಜನಿಕರಿಗೆ ತಲುಪಿಸಬೇಕು. ರೈತರಿಗೆ ನೀಡಿರುವ ಭರವಸೆಗಳನ್ನು ಪೂರೈಸಬೇಕು ಎಂದರು.
ಕಲಬುರಗಿ ಜಿಲ್ಲೆಯ ಅಭಿವೃದ್ಧಿಗಾಗಿ ನೂತನವಾಗಿ ಸೋಲಾಪುರ, ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಮಾರ್ಗ ಡಬ್ಲಿಂಗ್, ಇಂಡಸ್ಟ್ರೀಯಲ್ ಕಾರಿಡಾರ್, ಕೇಂದ್ರೀಯ ವಿಶ್ವವಿದ್ಯಾಲಯ, ಇ.ಎಸ್.ಐ.ಸಿ. ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆಗಳಂತಹ ವಿವಿಧ ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಈ ಹಿಂದಿನ ಯುಪಿಎ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದಾಗ ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಪ್ರಾರಂಭಿಸಲು 5 ಕೋಟಿ ರೂ. ಹಣ ನೀಡಿ ಜಮೀನು ಸಹ ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದಿನವರೆಗೆ ರೈಲ್ವೆ ವಿಭಾಗೀಯ ಕಚೇರಿ ಪ್ರಾರಂಭವಾಗಿಲ್ಲ. ಬೀದರ, ಕಲಬುರಗಿ ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರ ಶೇ. 50ರಷ್ಟು ಅನುದಾನ ನೀಡಿದೆ. ನನ್ನ ಅವಧಿಯಲ್ಲಿ ಎಲ್ಲ ಟನಲ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಹುಮನಾಬಾದ್‍ದಿಂದ ಕಲಬುರಗಿವರೆಗೆ ರೈಲು ಮಾರ್ಗ ಉದ್ಘಾಟಿಸಿ ಡೆಮೋ ರೈಲು ಸಹಿತ ಪ್ರಾರಂಭಿಸಲಾಗಿತ್ತು ಎಂದರು.
ಈ ಹಿಂದಿನ ಯುಪಿಎ ಸರ್ಕಾರದಲ್ಲಿ ಉದ್ದು ಮತ್ತು ಹೆಸರು ಬೇಳೆಗೆ ನೀಡುತ್ತಿದ್ದ ಕನಿಷ್ಠ ಬೆಂಬಲ ಬೆಲೆ ರೀರಿಯಲ್ಲಿ ತೊಗರಿಗೂ ಸಹ ಬೆಂಬಲ ಬೆಲೆ ಪ್ರಾರಂಭಿಸಲಾಗಿತ್ತು. ತೊಗರಿ ಮಂಡಳಿ ಪ್ರಾರಂಭಿಸುವ ಮೂಲಕ ರೈತರ ಅನುಕೂಲಕ್ಕಾಗಿ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಪ್ರಕ್ರಿಯೇ ಪ್ರಾರಂಭಿಸಲಾಗಿದೆ. ಇಂದು ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಈ ಹಿಂದಿನ ಸರ್ಕಾರಗಳು ಕಾರಣವಾಗಿವೆ. ದೇಶದಲ್ಲಿ ಕೃಷಿ ಕ್ರಾಂತಿ ಹಮ್ಮಿಕೊಂಡಿದ್ದರಿಂದ ಇಂದು ರಾಜ್ಯದಲ್ಲಿ ಪ್ರತಿ ಕುಟುಂಬಕ್ಕೆ 35 ಕೆ.ಜಿ. ಆಹಾರಧಾನ್ಯ ಉಚಿತವಾಗಿ ನೀಡಲಾಗುತ್ತಿದೆ ಎಂದರು.
ಹಿಂದಿನ ಸರ್ಕಾರಗಳು ಸಂವಿಧಾನದ ಆಧಾರದ ಮೇಲೆ ದೇಶದಲ್ಲಿ ಗಟ್ಟಿಯಾದ ಪ್ರಜಾಪ್ರಭುತ್ವ ನೆಲೆಸುವಂತೆ ಹಾಗೂ ದೇಶದ ಎಲ್ಲರನ್ನು ಒಗ್ಗೂಡಿಸುವ ಕೆಲಸ ಮಾಡಿದೆ. ಇಂದು ಎಲ್ಲರೂ ಒಗ್ಗೂಡಿ ಸಂವಿಧಾನ ಮತ್ತು ಪ್ರಜಾತಂತ್ರದ ಉಳುವಿಗಾಗಿ ಹೋರಾಡಬೇಕಾಗಿದೆ. ಪ್ರಜಾಪ್ರಭುತ್ವದಿಂದಲೇ ಎಲ್ಲರಿಗೂ ಸಮಾನ ಅವಕಾಶ ದೊರೆತ್ತಿದ್ದು, ಇಂದು ಬಡತನ ಕುಟುಂಬದವರೂ ಸಹ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಿದೆ. ಕಲಬುರಗಿ ಜಿಲ್ಲೆಯ ಮತದಾರರ ಆಶೀರ್ವಾದ ಮತ್ತು ಬೆಂಬಲದಿಂದ ಲೋಕಸಭಾ ಸದಸ್ಯನಾಗಿ, ಕೇಂದ್ರದಲ್ಲಿ ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದೇನೆ. ಕಲಬುರಗಿ ಜಿಲ್ಲೆಯ ಮತದಾರರ ಆಶೀರ್ವಾದ ಒಳ್ಳೆಯದಕ್ಕೆ ಬಳಸಿಕೊಂಡಿದ್ದೇನೆ. ಎಂದೂ ಜನರ ಆಶೀರ್ವಾದವನ್ನು ದುರುಪಯೋಗ ಮಾಡಿಕೊಂಡಿಲ್ಲ ಹಾಗೂ ಯಾರಿಗೂ ಸುಳ್ಳು ಹೇಳಿ ಮೋಸ ಮಾಡಿಲ್ಲ ಎಂದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಪ್ರಸ್ತಾವಿಕವಾಗಿ ಮಾತನಾಡಿ, ಇಂದು ಕಲಬುರಗಿ ಜಿಲ್ಲೆಯ ಒಟ್ಟು 1614 ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಹಕ್ಕು ಪತ್ರ, ಪ್ರಮಾಣಪತ್ರ, ಮಂಜೂರಿ ಪತ್ರ, ಯಂತ್ರೋಪಕರಣ ವಿತರಣೆ ಮಾಡಲಾಗಿದೆ ಹಾಗೂ ಸುಮಾರು 84.52 ಕೋಟಿ ರೂ. ಗಳ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಈ ಪೈಕಿ 15 ಕೋಟಿ ರೂ.ವೆಚ್ಚದಲ್ಲಿ ಸಿಂದಗಿ (ಬಿ) ಹತ್ತಿರ ನಿರ್ಮಿಸಿರುವ ಭಾರಿ ವಾಹನ ಚಾಲಕರ ತರಬೇತಿ ಕೇಂದ್ರ, 42.5 ಕೋಟಿ ರೂ. ವೆಚ್ಚದಲ್ಲಿ ಮೂರು 33/11ಕೆವಿ. ಗ್ಯಾಸ್ ಇನ್ಸುಲೆಟೆಡ್ ವಿದ್ಯುತ್ ವಿತರಣಾ ಕೇಂದ್ರಗಳು, ಮಹಾನಗರ ಪಾಲಿಕೆಯಿಂದ 50 ಕೋಟಿ ರೂ. ವೆಚ್ಚದಲ್ಲಿ ಧನ್ವಂತರಿ ಕಾಲೋನಿ ಉದ್ಯಾನ ಅಭಿವೃದ್ಧಿ 92.90 ಲಕ್ಷ ರೂ. ಗಳಲ್ಲಿ, ಸ್ವಸ್ತಿಕ ನಗರ ಉದ್ಯಾನವನ ಅಭಿವೃದ್ಧಿ, 2 ಕೋಟಿ ರೂ. ವೆಚ್ಚದಲ್ಲಿ ಮೆಹಬೂಬ ಗುಲ್ಶನ್ ಗಾರ್ಡನ್ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಲಾಗಿದೆ ಎಂದರು.
ಸುಪರ ಮಾರ್ಕೇಟ್ ಪ್ರದೇಶದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನೂತನ ಸಿಟಿ ಬಸ್ ನಿಲ್ದಾಣ, ಮಹಾನಗರ ಪಾಲಿಕೆಯಿಂದ 95 ಲಕ್ಷ ರೂ. ವೆಚ್ಚದಲ್ಲಿ ಫಿರ್ದೋಸ್ ಮತ್ತು ಅಬುಬಕ್ಕರ್ ಕಾಲೋನಿಯಲ್ಲಿ ಒಳಚರಂಡಿ ನಿರ್ಮಾಣ, 112 ಲಕ್ಷ ರೂ. ವೆಚ್ಚದಲ್ಲಿ ಮಜೀದದಿಂದ ಭವಾನಿ ಟೆಂಪಲ್‍ವರೆಗೆ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, 57.83 ಲಕ್ಷ ರೂ. ವೆಚ್ಚದಲ್ಲಿ ಸ್ಟೇಶನ್ ಬಜಾರನಲ್ಲಿ ಕಮರ್ಶಿಯಲ್ ಕಾಂಪ್ಲೇಕ್ಸ್ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.
ಹಿರಿಯ ನಾಗರಿಕ ಹಾಗೂ ವಿಕಲಚೇತನ ಸಬಲೀಕರಣ ಇಲಾಖೆಯ 52, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ 14, ಡಾ. ಅಂಬೇಡ್ಕರ ಅಭಿವೃದ್ಧಿ ನಿಗಮದ 57, ಡಾ. ದೇವರಾಜ ಅರಸು ಅಭಿವೃದ್ಧಿ ನಿಗಮದ 50, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ಯೋಜನೆಯಡಿ 23, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 200, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 100, ಸಮಾಜ ಕಲ್ಯಾಣ ಇಲಾಖೆ 40, ಕಂದಾಯ ಇಲಾಖೆ 700, ಕೃಷಿ ಇಲಾಖೆ 15, ತೋಟಗಾರಿಕೆ ಇಲಾಖೆ 50, ಅಲ್ಪಸಂಖ್ಯಾತರ ಇಲಾಖೆ 150, ಆರೋಗ್ಯ ಇಲಾಖೆ 12, ಪ್ರವಾಸೋದ್ಯಮ ಇಲಾಖೆ 51, ಮಹಾನಗರ ಪಾಲಿಕೆ 99, ಜಿಲ್ಲಾ ಪಂಚಾಯಿತಿ 1000 ಹಾಗೂ ಶಿಕ್ಷಣ ಇಲಾಖೆ 3 ಹೀಗೆ ಒಟ್ಟು 1614 ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳನ್ನು ವಿತರಿಸಲಾಗಿದೆ ಎಂದರು.
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಮುಖಂಡರಾದ ಜಗದೇವ ಗುತ್ತೇದಾರ್, ಎಕ್ಬಾಲ್ ಅಹ್ಮದ್ ಸರಡಗಿ, ಭೀಮಣ್ಣ ಸಾಲಿ, ಮಾರುತಿರಾವ ಡಿ.ಮಾಲೆ, ಮಹಾನಗರಪಾಲಿಕೆ ಮಹಾಪೌರ ಮಲ್ಲಮ್ಮ ಎಸ್. ವಳಕೇರಿ, ಉಪ ಮೇಯರ್ ಆಲಿಯಾ ಶೀರಿನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಶರಣಕುಮಾರ ಮೋದಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟೀನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ., ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ರಾಗಪ್ರಿಯಾ, ಮಹಾನಗರ ಪಾಲಿಕೆ ಆಯುಕ್ತ ಬಿ. ಫೌಜಿಯಾ ತರನ್ನುಮ್, ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ, ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದರು.

ಮಾರ್ಚ್ 8ರಂದು ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
***********************************************
ಕಲಬುರಗಿ,ಮಾ.07.(ಕ.ವಾ.)-ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಫ್.ಓ.ಜಿ.ಎಸ್.ಐ. ಇವುಗಳ ಸಂಯುಕ್ತಾಶ್ರಯದಲ್ಲಿ ಇದೇ ಮಾರ್ಚ್ 8 ರಂದು ಕ್ಯಾನ್ಸರ್‍ದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಆಳಂದ ಹಾಗೂ ಚಿಂಚೋಳಿ ತಾಲೂಕಿನವರಿಗೆ ಮಹಾದೇವಪ್ಪ ರಾಂಪುರೆ ವೈದ್ಯಕೀಯ ಮಹಾವಿದ್ಯಾಲಯದಲ್ಲಿ, ಕಲಬುರಗಿ ನಗರ ಮತ್ತು ಗ್ರಾಮೀಣ ಪ್ರದೇಶದವರಿಗೆ ಕಲಬುರಗಿ ಕೆ.ಬಿ.ಎನ್. ವೈದ್ಯಕೀಯ ಮಹಾವಿದ್ಯಾಲಯದಲ್ಲಿ, ಜೇವರ್ಗಿ ಮತ್ತು ಅಫಜಲಪುರ ತಾಲೂಕಿನವರಿಗೆ ಹೆಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹಾಗೂ ಸೇಡಂ ಹಾಗೂ ಚಿತ್ತಾಪುರ ತಾಲೂಕಿನವರಿಗೆ ಕಲಬುರಗಿ ವೈದ್ಯಕೀಯ ಮಹಾವಿದ್ಯಾಲಯ (ಜಿಮ್ಸ್) ನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಆಯಾ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರದ ಕುರಿತು ಮಾಹಿತಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಅನುದಾನಿತ ಪದವಿಪೂರ್ವ ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ
***********************************************************
ಕಲಬುರಗಿ,ಮಾ.07.(ಕ.ವಾ.)-ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು 2019-20ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಾರಂಭಿಸಲು ಇಚ್ಛಿವುಳ್ಳ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟ್‍ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮುಳೇಗಾಂವ ಅವರು ತಿಳಿಸಿದ್ದಾರೆ.
ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟ್‍ಗಳು ಜಂಟಿ ನಿರ್ದೇಶಕರು (ಮಾನ್ಯತೆ ಮತ್ತು ಅನುದಾನ), ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು ಇವರಿಗೆ 2019ರ ಮಾರ್ಚ್ 11 ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ಆನ್‍ಲೈನ್ ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ ತಿತಿತಿ.ಠಿue.ಞಡಿ.ಟಿiಛಿ.iಟಿ ನ್ನು ಸಂಪರ್ಕಿಸಬೇಕು.
ಅದೇ ರೀತಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಉದ್ದೇಶಿಸಿ 2017-18 ಮತ್ತು 2018-19ನೇ ಶೈಕ್ಷಣಿಕ ಸಾಲಿನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟ್‍ಗಳು, ಪುನಃ ಹೊಸದಾಗಿ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಮತ್ತೊಮ್ಮೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಅರ್ಜಿ ಶುಲ್ಕ ಪಾವತಿಸಲು ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

ಮಾನಸಿಕ ಅಸ್ವಸ್ಥ ಮಹಿಳೆಯ ಪೋಷಕರ ಪತ್ತೆಗೆ ಮನವಿ
************************************************
ಕಲಬುರಗಿ,ಮಾ.07.(ಕ.ವಾ.)-ಕಲಬುರಗಿ ನಗರದಲ್ಲಿ ಪತ್ತೆಯಾದ ಮಾನಸಿಕ ಅಸ್ವಸ್ಥೆ ಮಹಿಳೆಯ ಪಾಲಕರ ಪತ್ತೆಗಾಗಿ 2017ರ ಮಾರ್ಚ್ 27ರಂದು ಕಲಬುರಗಿ ಚೈಲ್ಡ್ ಲೈನ್‍ರವರು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ಮಹಿಳಾ ನಿಲಯದಲ್ಲಿ ದಾಖಲಿಸಿರುತ್ತಾರೆ ಎಂದು ರಾಜ್ಯ ಮಹಿಳಾ ನಿಲಯದ ಅಧೀಕ್ಷಕರು ತಿಳಿಸಿದ್ದಾರೆ.
ಈ ಮಹಿಳೆಯನ್ನು ವಿಚಾರಿಸಿದಾಗ ತನ್ನ ಹೆಸರು ಗಂಗಾ ತಂದೆ ಹೆಸರು ಗಂಗಪ್ಪ ಹಾಗೂ ವಿಳಾಸ ಗದಗ ಎಂದು ಹೇಳಿದ್ದು, ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಸುಮಾರು 23 ವರ್ಷದ ಈ ಮಹಿಳೆಯು ಕಪ್ಪು ಬಣ್ಣ ಹಾಗೂ ಐದು ಅಡಿ ಒಂದು ಇಂಚು ಎತ್ತರ ಹೊಂದಿದ್ದು, ಮೇಲ್ಕಂಡ ಮಹಿಳೆಯ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 60 ದಿನದೊಳಗೆ ಅಗತ್ಯ ದಾಖಗಳಾದ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ ದಾಖಲೆಯೊಂದಿಗೆ ಕಲಬುರಗಿಯ ಆಳಂದ ಕಾಲೋನಿಯಲ್ಲಿರುವ ರಾಜ್ಯ ಮಹಿಳಾ ನಿಲಯವನ್ನು ಹಾಗೂ ದೂರವಾಣಿ ಸಂಖ್ಯೆ 08472-274441ಗೆ ಸಂಪರ್ಕಿಸಲು ಕೋರಿದೆ.

ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ತಪ್ಪಿತಸ್ಥರಿಗೆ ಶಿಕ್ಷೆ
**********************************************
ಕಲಬುರಗಿ,ಮಾ.07.(ಕ.ವಾ.)-ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಕಾಯ್ದೆ 2016ರ ದಿನಾಂಕ: 03-03-2018 ರಿಂದ ಜಾರಿಗೆ ಬಂದಿದೆ. ಈ ತಿದ್ದುಪಡಿ ಕಾಯ್ದೆಯ ಪ್ರಮುಖ ಅಂಶಗಳು ಕೆಳಕಂಡಂತೆ ಇರುತ್ತವೆ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್ 10 ಮತ್ತು 11ರ ಪ್ರಕಾರ ಬಾಲ್ಯವಿವಾಹ ನಡೆಸಿದ ಮತ್ತು ಉತ್ತೇಜಿಸಿದ ತಪ್ಪಿತಸ್ಥರಿಗೆ ಕನಿಷ್ಠ 1 ವರ್ಷದಿಂದ ಗರಿಷ್ಠ 2 ವರ್ಷಗಳವರೆಗೆ ಕಾರಾವಾಸ ಮತ್ತು 1 ಲಕ್ಷ ರೂ. ವರೆಗೆ ದಂಡದ ಶಿಕ್ಷೆಗೆ ಗುರಿಯಾಗುವರು. ದಿನಾಂಕ: 03-03-2018 ರಿಂದ ನೆರವೇರಿಸಲಾದ ಪ್ರತಿಯೊಂದು ಬಾಲ್ಯ ವಿವಾಹನವು ಪ್ರಾರಂಭದಿಂದಲೇ ಅನೂರ್ಜಿತಗೊಳಿತಕ್ಕದ್ದು. ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಲ್ಲಿ ನಡೆದ ಅಪರಾಧದ ಸಂಜ್ಞೆಯತೆಯನ್ನು ಗಮನಿಸಿ ಈ ಅಧಿನಿಯಮದಡಿ, ತನಾಗಿಯೇ ಕ್ರಮ ತೆಗೆದುಕೊಳ್ಳತಕ್ಕದ್ದು.
ಈ ಕಾಯ್ದೆಯಡಿ ಮಹಿಳೆಯರೂ ಕೂಡ ಕಾರವಾಸದ ಶಿಕ್ಷೆಗೆ ಅರ್ಹರಾಗಿರುತ್ತಾರೆ. ಈ ತಿದ್ದುಪಡಿ ಪ್ರಕಾರ ಸೆಕ್ಷನ್ 9 ಮತ್ತು 13 ರ ಪ್ರಕಾರ ತಪ್ಪಿತಸ್ಥ ವಯಸ್ಕ ಪತಿ, ತಡೆಯಾಜ್ಞೆ ಉಲ್ಲಂಘಿಸಿದವರು ಕನಿಷ್ಠ ಒಂದು ವರ್ಷ ಆದರೆ ಎರಡು ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಠಿಣ ಕಾರಾವಾಸದಿಂದ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ಜುಲ್ಮಾನೆ ಅಥವಾ ಇವೆಡರಿಂದಲೂ ಶಿಕ್ಷೆಗೆ ಗುರಿಯಾಗುವರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 8 ರಂದು ಮಹಿಳಾ ಸಾಂಸ್ಕøತಿಕ ಉತ್ಸವ ಉದ್ಘಾಟನೆ
******************************************************
ಕಲಬುರಗಿ,ಮಾ.07.(ಕ.ವಾ.)-ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಹಿಳಾ ಸಾಂಸ್ಕøತಿಕ ಉತ್ಸವ-2019ರ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ ಮಾರ್ಚ್ 8 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಅಧÀ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ನವದೆಹಲಿ ಪ್ರತಿನಿಧಿ ಡಾ|| ಅಜಯಸಿಂಗ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಎಮ್.ವಾಯ್. ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಬಿ. ಮತ್ತಿಮೂಡ, ಖನೀಜ್ ಫಾತೀಮಾ ಹಾಗೂ ಸುಭಾಷ ಗುತ್ತೇದಾರ್, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ್ ಖರ್ಬಿಕರ್ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟೀನ್ ಮಾರ್ಬನ್ಯಾಂಗ್, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಹಾಗೂ ಮಹಾನಗರಪಾಲಿಕೆ ಆಯುಕ್ತ ಬಿ. ಫೌಜಿಯಾ ತರನ್ನುಮ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ವಚನ ಗಾಯನ, ಸಮೂಹ ನೃತ್ಯ, ಸುಗಮ ಸಂಗೀತ, ಗೀಗೀ ಪದ, ತತ್ವಪದ ಹಾಗೂ ದಾಸವಾಣಿ ಸಾಂಸ್ಕøತಿಕ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ.
ಮಧ್ಯಾಹ್ನ 12.30 ಗಂಟೆಗೆ ಡಾ. ಮಿನಾಕ್ಷಿ ಬಾಳಿ ಅವರು ಮಹಿಳೆಯರ ಸಮಸ್ಯೆಗಳು ಕುರಿತು, ಡಾ. ಮೀರಾ ಪಂಡಿತ ಅವರು ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಯುವ ಕುರಿತು, ಡಾ. ಶಾಂತಾ ಮಠ ಅವರು ಮಹಿಳಾ ಸಬಲೀಕರಣ ಹಾಗೂ ಡಾ. ಸುಜಾತ ಜಂಗಮಶೆಟ್ಟಿ ಅವರು ರಂಗಭೂಮಿ ಮತ್ತು ಮಹಿಳೆ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 1.30 ಗಂಟೆಗೆ ಸಂಧ್ಯಾ ಹೊನಗುಂಟೆಕರ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಏರ್ಪಡಿಸಲಾಗಿದೆ.
ಅಂದು ಮಧ್ಯಾಹ್ನ 3 ಗಂಟೆಗೆ ದೀಪಾ ಚಂದನ ಪಾಟೀಲ ಹಾಗೂ ತಂಡದವರಿಂದ ಕೋಲಾಟ (ದಾಂಡಿಯಾ) ನೃತ್ಯ ನಡೆಯಲಿದೆ. ಸಂಜೆ 4 ಗಂಟೆಗೆ ಸಾವಿತ್ರಿ ಭಾಯಿ ಫುಲೆ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ. ಅಂದು ಮಧ್ಯಾಹ್ನ 12 ಗಂಟೆಗೆ ಮಹಿಳಾ ಚಿತ್ರಕಲಾ ಶಿಬಿರವನ್ನು ಏರ್ಪಡಿಸಲಾಗಿದೆ. ಸಂಜೆ 4 ಗಂಟೆಗೆ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಇದಕ್ಕೂ ಮುನ್ನ ಅಂದು ಬೆಳಿಗ್ಗೆ 9.30 ಗಂಟೆಗೆ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ. ಎಸ್.ಎಂ. ಪಂಡಿತ ರಂಗಮಂದಿರವರೆಗೆ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಶೋಭಾಯಾತ್ರೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಲಿವೆ.

ಫರಹಾನಾ ಪರ್ವೀನ್ ಅವರಿಗೆ ಪಿಹೆಚ್.ಡಿ.
************************************
ಕಲಬುರಗಿ,ಮಾ.07.(ಕ.ವಾ.)-ಗುಲಬರ್ಗಾ ವಿಶ್ವವಿದ್ಯಾಲಯವು ಭೌತಶಾಸ್ತ್ರ ವಿಷಯದಲ್ಲಿ ಫರಹಾನಾ ಪರ್ವೀನ್ ಅವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ.
ಡಾ. ಬಸವರಾಜ ಸಣ್ಣಕ್ಕಿ ಅವರ ಮಾರ್ಗದರ್ಶನದಲ್ಲಿ “ಸ್ಟಡೀಸ್ ಆನ್ ಸರಫೇಸ್ ಪ್ಲಾಸ್ಮಾ ಮೀಡಿಯೆಟೆಡ್ ಹಾಟ್ ಎಲೆಕ್ಟ್ರಾನ್ ಜನರೇಶನ್ ಆಂಡ್ ದೇರ್ ಅಪ್ಲಿಕೇಶನ್ ಇನ್ ಎನರ್ಜಿ ಹಾರ್ವೇಸ್ಟಿಂಗ್” ಕುರಿತು ಫರಹಾನಾ ಪರ್ವಿನ್ ಅವರು ಪ್ರಬಂಧವನ್ನು ಮಂಡಿಸಿದ್ದರು.

25 ಸಹಕಾರ ಸಂಘಗಳ ಸಮಾಪನೆ: ಆಕ್ಷೇಪಣೆ ಆಹ್ವಾನ
************************************************
ಕಲಬುರಗಿ,ಜ.07.(ಕ.ವಾ.)-ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ಮತ್ತು ನಿಯಮಗಳು 1960 ರಡಿಯಲ್ಲಿ ನೋಂದಣಿಯಾಗಿರುವ ಕಲಬುರಗಿ ತಾಲೂಕಿನ ಒಟ್ಟು 25 ಸಹಕಾರಿ ಸಂಘಗಳು ಸುಮಾರು ವರ್ಷಗಳಿಂದ ಕೆಲಸ ನಿರ್ವಹಿಸದೇ ಸ್ಥಗಿತಗೊಂಡಿದ್ದು, ಈ ಸಂಘಗಳು ಆಸ್ತಿತ್ವದಲ್ಲಿರುವ, ಲೆಕ್ಕ ಪರಿಶೋಧನೆಯಾಗಿರುವ, ಪದಾಧಿಕಾರಿಗಳ ಚುನಾವಣೆ ಜರುಗಿಸಿರುವ ಕುರಿತು ಕಲಬುರಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಗೆ ಮಾಹಿತಿ ಸಲ್ಲಿಸಿರುವುದಿಲ್ಲ ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಪ್ರಕಟವಾದ 7 ದಿನದೊಳಗಾಗಿ ಕಲಬುರಗಿ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಾರ್ಯಾಲಯಕ್ಕೆ ಲಿಖಿತ ಹೇಳಿಕೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಸದರಿ ಸಂಘಗಳನ್ನು ಸಮಾಪನೆಗೊಳಿಸಿ ನೋಂದಣಿ ಸಂಖ್ಯೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸ್ಥಗಿತಗೊಂಡ 25 ಸಹಕಾರ ಸಂಘಗಳ ಮಾಹಿತಿಯನ್ನು ಕಲಬುರಗಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಾರ್ಯಾಲಯಕ್ಕೆ ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು News and Photo Date: 7-3-2019
ಎಲ್ಲಾ ಲೇಖನಗಳು ಆಗಿದೆ News and Photo Date: 7-3-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 7-3-2019 ಲಿಂಕ್ ವಿಳಾಸ https://dekalungi.blogspot.com/2019/03/news-and-photo-date-7-3-2019.html
0 Response to "News and Photo Date: 7-3-2019"
ಕಾಮೆಂಟ್ ಪೋಸ್ಟ್ ಮಾಡಿ