ಶೀರ್ಷಿಕೆ : News and Photos Date: 2-3-2019
ಲಿಂಕ್ : News and Photos Date: 2-3-2019
News and Photos Date: 2-3-2019
ಗಣಿ ಮತ್ತು ಭೂ ವಿಜ್ಞಾನ ಸಚಿವರ ಪ್ರವಾಸ
*************************************
ಕಲಬುರಗಿ,ಮಾ.02.(ಕ.ವಾ.)-ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ರಾಜಶೇಖರ ಬಿ. ಪಾಟೀಲ ಅವರು ಇದೇ ಮಾರ್ಚ್ 5ರಂದು ಹುಮನಾಬಾದ್‍ದಿಂದ ರಸ್ತೆ ಮೂಲಕ ಬೆಳಿಗ್ಗೆ 10 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಹೆಚ್.ಕೆ.ಆರ್.ಡಿ.ಬಿ. ಮಂಡಳಿಯ ಸಭಾಂಗಣದಲ್ಲಿ ಹೆಚ್.ಕೆ.ಆರ್.ಡಿ.ಬಿ. ಮಂಡಳಿಯ ಸಭೆಯಲ್ಲಿ ಪಾಲ್ಗೊಳ್ಳುವರು. ನಂತರ ಸಂಜೆ 4.30 ಗಂಟೆಗೆ ಕಲಬುರಗಿಯಿಂದ ಹುಮನಾಬಾದಿಗೆ ಪ್ರಯಾಣಿಸುವರು.

ಮಾ. 3ರಂದು ಕೋನ ಹಿಪ್ಪರಗಾ ಸೇತುವೆ ಕಾಮಗಾರಿಗೆ ಉದ್ಘಾಟನೆ
***********************************************************
ಕಲಬುರಗಿ,ಮಾ.02.(ಕ.ವಾ.)-ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಾ ಕೋನ-ಸರಡಗಿ(ಬಿ) ಮಧ್ಯದಲ್ಲಿ ಬರುವ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಕಾಮಗಾರಿಗೆ ರವಿವಾರ ಮಾರ್ಚ್ 3 ರಂದು ಮಧ್ಯಾಹ್ನ 3 ಗಂಟೆಗೆ ಹಿಪ್ಪರಗಾ ಕೋನ್ (ಸೇತುವೆ ಹತ್ತಿರ) ದಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಉದ್ಘಾಟಿಸುವರು.
ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಗೌರವಾನ್ವಿತ ಅತಿಥಿಗಳಾಗಿ ಹಾಗೂ ಜೇವರ್ಗಿ ಶಾಸಕ ಹಾಗೂ ನವದೆಹಲಿ ಕರ್ನಾಟಕ ರಾಜ್ಯದ ವಿಶೇಷ ಪ್ರತಿನಿಧಿ ಡಾ. ಅಜಯಸಿಂಗ್ ಅಧ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಅಫಜಲಪುರ ಶಾಸಕ ಎಂ.ವೈ. ಪಾಟೀಲ ಹಾಗೂ ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ದತ್ತಾತ್ರೇಯ ಪಾಟೀಲ ಸಿ. ರೇವೂರ, ಸುಭಾಷ ಆರ್. ಗುತ್ತೇದಾರ್, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮುಡ, ಕನೀಜ ಫಾತೀಮಾ, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಬಿ.ಜಿ. ಪಾಟೀಲ, ಶರಣಪ್ಪ ಮಟ್ಟೂರ್, ಡಾ. ಚಂದ್ರಶೇಖರ ಪಾಟೀಲ, ಜೇವರ್ಗಿ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದಮ್ಮ ಸಂಗಣ್ಣ ಇಟಗಾ, ಕಲಬುರಗಿ ತಾಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಕೆ. ಸಜ್ಜನ್, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಅಪ್ಪಸಾಹೇಬ ಪಾಟೀಲ ರದ್ದೇವಾಡಗಿ, ಜಿಲ್ಲಾ ಪಂಚಾಯಿತಿ ಸದಸ್ಯ ದೀಲಿಪ ಆರ್. ಪಾಟೀಲ, ತಾಲೂಕು ಪಂಚಾಯಿತಿ ಸದಸ್ಯ ಗುರು ಎಸ್. ಸಿಕೇದ, ಅನ್ನಪೂರ್ಣ ಷಡಕ್ಷರಿ ಹಿರೇಮಠ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಬಸವರಾಜ ಎಸ್. ಪೊಲೀಸ್ ಪಾಟೀಲ, ಚಂದನಕುಮಾರ ಬಾಬು ಬುಳ್ಳಾ ಅತಿಥಿಗಳಾಗಿ ಪಾಲ್ಗೊಳ್ಳುವರು.

ಮಹಾಶಿವರಾತ್ರಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ
***********************************************
ಕಲಬುರಗಿ,ಮಾ.02.(ಕ.ವಾ.)-ಸೋಮವಾರ ಮಾರ್ಚ್ 4 ರಂದು ಮಹಾಶಿವರಾತ್ರಿಯನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸದರಿ ದಿನದÀÀಂದು ಕಲಬುರಗಿ ನಗರದಲ್ಲಿರುವ ಎಲ್ಲ ಕಸಾಯಿ ಖಾನೆ ಮತ್ತು ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿ ಯಾವುದೇ ರೀತಿಯ ಪ್ರಾಣಿ ವಧೆ ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಒಂದು ವೇಳೆ ಈ ಆದೇಶ ಉಲ್ಲಂಘಿಸಿದಲ್ಲಿ ಕೆ.ಎಂ.ಸಿ. ಕಾಯ್ದೆ 1976ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
********************************************
ಕಲಬುರಗಿ,ಮಾ.02.(ಕ.ವಾ.)-ಕಲಬುರಗಿ ಪಶು ವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಇದೇ ಮಾರ್ಚ್ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ರೈತರಿಗಾಗಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ. ರೈತರು ಇದರ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.
ತರಬೇತಿ ಸಂದರ್ಭದಲ್ಲಿ ಊಟದ ವ್ಯವಸ್ಥೆ ಹಾಗೂ ಯಾವುದೇ ಭತ್ಯೆ ಸೌಲಭ್ಯ ಇರುವುದಿಲ್ಲ. ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸೇಡಂ ರಸ್ತೆಯಲ್ಲಿರುವ ಪಶು ವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-220576ಗೆ ಸಂಪರ್ಕಿಸಲು ಕೋರಲಾಗಿದೆ.

ಶಿವಾಲಿ ಎ. ಅವರಿಗೆ ಪಿಹೆಚ್.ಡಿ.
****************************
ಕಲಬುರಗಿ,ಮಾ.02.(ಕ.ವಾ.)-ಗುಲಬರ್ಗಾ ವಿಶ್ವವಿದ್ಯಾಲಯವು ಮೈಕ್ರೋಬಯೋಲಾಜಿ ವಿಷಯದಲ್ಲಿ ಶಿವಾಲಿ ಎ. ಚಂದ್ರಕಾಂತ ಇಕ್ಕಲಕಿ ಅವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ. ಡಾ. ಕೆ. ಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಪ್ರೋಡಕ್ಷನ್ ಆಫ್ ಕೈಟಿನೆಸ್ ಬೈ ಸ್ಟ್ರೆಪ್ಟೊಮೈಸಿಸ್ ಪ್ರೆಟೆನ್ಸಿಸ್ ಕೆಎಲ್‍ಎಸ್‍ಎಲ್55 ಆಂಡ್ ಇಟ್ಸ್ ಅಪ್ಲಿಕೇಶನ್ಸ್ ಕುರಿತು ಶಿವಾಲಿ ಎ. ಅವರು ಪ್ರಬಂಧವನ್ನು ಮಂಡಿಸಿದ್ದರು.
ವಸತಿ ನಿಲಯ ಪ್ರವೇಶ ಪರೀಕ್ಷೆ: ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆಯಲು ಸೂಚನೆ
ಕಲಬುರಗಿ,ಮಾ.02.(ಕ.ವಾ.)-ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಅಡಿಯಲ್ಲಿ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ವಸತಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳ 2019-20ನೇ ಸಾಲಿನ 6ನೇ ತರಗತಿಯ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗಳು 2019ರ ಮಾರ್ಚ್ 10 ರಂದು ನಡೆಯಲಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ಆಯಾ ವಸತಿ ಶಾಲೆಗಳಲ್ಲಿ ಪ್ರವೇಶ ಪತ್ರವನ್ನು ಪಡೆದುಕೊಂಡು ಮೇಲ್ಕಂಡ ದಿನದಂದು ಪರೀಕ್ಷೆಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನ-ಶುಲ್ಕ ವಿನಾಯಿತಿ ಸೌಲಭ್ಯ:
***************************************
ತಿರಸ್ಕøತಗೊಂಡ ಅರ್ಜಿಯನ್ನು ಸರಿಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ
ಕಲಬುರಗಿ,ಮಾ.02.(ಕ.ವಾ.)-ಪ್ರಸಕ್ತ 2018-19ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮತ್ತು ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಕೆಲವು ವಿದ್ಯಾರ್ಥಿಗಳ ಅರ್ಜಿಯು ಆಧಾರ ಅಥೆಂಟಿಕೇಶನ್ ವಿಫಲತೆಯಿಂದ (ಈಚಿiಟuಡಿe oಜಿ ಂಚಿಜhಚಿಡಿ ಂuಣheಟಿಣiಛಿಚಿಣioಟಿ) ತಿರಸ್ಕøತಗೊಂಡಿರುತ್ತದೆ ಎಂದು ಸೇಡಂ ಹಿಂದುಳಿದ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ತಿರಸ್ಕøತಗೊಂಡ ವಿದ್ಯಾರ್ಥಿಗಳು 2019ರ ಮಾರ್ಚ್ 5 ರೊಳಗಾಗಿ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಆಧಾರ ಅಥೆಂಟಿಕೇಶನ್ ವಿಫಲತೆಗೆ ಸಂಬಂಧಿಸಿದಂತೆ ಆಧಾರನಲ್ಲಿ ಹೆಸರು ತಿದ್ದುಪಡಿ ಮಾಡಿಕೊಂಡು ಸಂಬಂಧಿಸಿದ ಸೇಡಂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಆಧಾರ ದಾಖಲೆಯನ್ನು ಸಲ್ಲಿಸಿ, ಅರ್ಜಿಯನ್ನು ಅಪ್‍ಲೋಡ್ ಮಾಡಿಸಿಕೊಂಡು ತಮ್ಮ ಅರ್ಜಿಗಳನ್ನು ಅರ್ಹಗೊಳಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸೇಡಂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಮತದಾರರ ಮಿಂಚಿನ ನೋಂದಣಿ ಆಂದೋಲನ
******************************************
ಕಲಬುರಗಿ,ಮಾ.02.(ಕ.ವಾ.)-ಭಾರತ ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ದಿನಾಂಕ: 01.01.2019ಕ್ಕೆ ಅನ್ವಯಿಸುವಂತೆ, ಅರ್ಹರಿರುವ ಯುವ ಮತದಾರರು ನಿರೀಕ್ಷಿತ ಮಟ್ಟದಲ್ಲಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳದೇ ಇರುವ ಹಿನ್ನೆಲೆಯಲ್ಲಿ ಇದೇ ಮಾರ್ಚ್ 2 ಹಾಗೂ 3 ರಂದು ಮಿಂಚಿನ ನೊಂದಣಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
01.01.2019 ಕ್ಕೆ 18 ವರ್ಷ ಪೂರೈಸಿದ ಅರ್ಹರಿರುವ ಎಲ್ಲಾ ಯುವ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
****
ಮಾ.5 ರಂದು ಚಿತ್ತಾಪುರ ಪಟ್ಟಣದಲ್ಲಿ ಬೃಹತ್ ಆರೋಗ್ಯ ಮೇಳ
*******************************************************
ಕಲಬುರಗಿ,ಮಾ.03(ಕ.ವಾ)- ಮಾರ್ಚ್ 5 ರಂದು ಕಲಬುರಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೃಹತ್ ಆರೋಗ್ಯ ಮೇಳ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಆಯೋಜಿಸಲಾಗಿದ್ದು, ಆರೋಗ್ಯ ಮೇಳಕ್ಕೆ ಆಗಮಿಸುವ ರೋಗಿಗಳಿಗೆ ಯಾವುದೇ ರೀತಿಯ ಅನಾನುಕೂಲತೆ ಆಗದಂತೆ ಕುಡಿಯುವ ನೀರು, ಶೌಚಾಲಯ, ಊಟದ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜಾ ಪಿ. ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೃಹತ್ ಆರೋಗ್ಯ ಮೇಳಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಾಗೂ ಆರೋಗ್ಯ ಸಂಬಂಧಿತ ಇನ್ನೀತರ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಮಾತನಾಡಿದರು.
ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಸಾರ್ವಜನಿಕ ಆಸ್ಪತ್ರೆ, ಜಯದೇವ ಹಾಗೂ ಕಿದ್ವಾಯಿ ಆಸ್ಪತ್ರೆಗಳ ಸಹಯೋಗದೊಂದಿಗೆ ಈ ಬೃಹತ್ ಆರೋಗ್ಯ ಮೇಳ ಆಯೋಜಿಸಿದ್ದು, ಅಂದು ಚಿತ್ತಾಪೂರ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆ ವರೆಗೆ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ. ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಾ.ರಾಜಾ ಪಿ. ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ ಲೋಕಸಭಾ ಸದಸ್ಯ ಮತ್ತು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ಮಾಡಲಿದ್ದಾರೆ. ಉಳಿದಂತೆ ಶಿಷ್ಠಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದರು.
ಬೃಹತ್ ಆರೋಗ್ಯ ಮೇಳದಲ್ಲಿ ಉಚಿತ ವೈದ್ಯಕೀಯ ತಪಾಸಣೆಯೊಂದಿಗೆ ಕಣ್ಣು, ಕೀಲು ಮತ್ತು ಎಲುಬು, ಹೃದ್ರೋಗ, ಕ್ಯಾನ್ಸರ್, ಸಕ್ಕರೆ ಕಾಯಿಲೆ ಸೇರಿದಂತೆ ಇನ್ನೀತರ ರೋಗಗಳ ತಪಾಸಣೆ ಇಲ್ಲಿ ನಡೆಯಲಿದೆ. ಜಯದೇವ ಮತ್ತು ಕಿದ್ವಾಯಿ ಆಸ್ಪತ್ರೆಯ ವೈದ್ಯರು ಸೇರಿದಂತೆ 45ಕ್ಕೂ ಹೆಚ್ಚು ತಜ್ಞ ವೈದ್ಯರುಗಳು ಮೇಳದಲ್ಲಿ ಭಾಗವಹಿಸಿ ರೋಗಿಗಳನ್ನು ಪರೀಕ್ಷಿಸಲಿದ್ದಾರೆ. ಅಗತ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸೆಗೆ ಸಹ ಇಲ್ಲಿಂದಲೆ ರೆಫರ್ ಮಾಡಲಾಗುತ್ತದೆ ಎಂದರು.
ಆರೋಗ್ಯ ಮೇಳಕ್ಕೆ ಜಿಲ್ಲೆಯ ಎಲ್ಲಾ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ರೋಗಿಗಳನ್ನು ಕರೆದುಕೊಂಡ ಬರಬೇಕು ಮತ್ತು ಮೇಳಕ್ಕೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತವಾಗಿ ಅಂಬುಲೆನ್ಸ್, ಪೊಲೀಸ್ ಬಂದೋಬಸ್ತ್ ಮಾಡಬೇಕು. ಹೆಚ್ಚಿನ ಜನರು ಮೆಲದಲ್ಲಿ ಭಾಗವಹಿಸುವುದರಿಂದ ನಿಯಂತ್ರಣಕ್ಕಾಗಿ ಸ್ವಯಂ ಸೇವಕರ ನಿಯೋಜಿಸುವುದಲ್ಲದೆ ಅಗತ್ಯವಾದ ಎಲ್ಲಾ ಮುನ್ನೆಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಂಬರಾಯ ಎಸ್. ರುದ್ರವಾಡಿ ಅವರು ಆರೋಗ್ಯ ಮೇಳಕ್ಕೆ ಕೈಗೊಳ್ಳಲಾದ ಪೂರ್ವಸಿದ್ಧತೆ ಬಗ್ಗೆ ಸಭೆಗೆ ವಿವರಿಸಿದರು. ಸಭೆಯಲ್ಲಿ ಆಯುಷ್ ಇಲಾಖೆಯ ಉಪನಿರ್ದೇಶಕಿ ನಾಗರತ್ನ ಚಿಮ್ಮಲಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಯ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ವಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಿದ್ಧರಾಮೇಶ್ವರ ಭವನಕ್ಕೆ 3.5 ಕೋಟಿ ರೂ. ಮಂಜೂರು
************************************************
ಕಲಬುರಗಿ,ಮಾ.02.(ಕ.ವಾ.)-ಕಲಬುರಗಿ ನಗರದಲ್ಲಿ ಸಿದ್ಧರಾಮೇಶ್ವರ ಭವನ ನಿರ್ಮಾಣಕ್ಕೆ 3.5 ಕೋಟಿ ರೂ. ಅನುದಾನ ನೀಡಲಾಗಿದೆ. ಸಮಾಜದ ಮುಖಂಡರು ಸಮರ್ಪಕ ನಿವೇಶನ ಒದಗಿಸಿ ಭವನ ನಿರ್ಮಿಸಿಕೊಳ್ಳಬೇಕೆಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಅವರು ಶನಿವಾರ ಕಲಬುರಗಿ ನಗರದ ವಡ್ಡರ ಗಲ್ಲಿಯಲ್ಲಿ ಸಾರ್ವಜನಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಡ್ಡರ ಗಲ್ಲಿಯಲ್ಲಿರುವ ಮಠದ ಪಕ್ಕದಲ್ಲಿ ಸಮಾಜದವರಿಗಾಗಿ ಸಣ್ಣ ಪ್ರಮಾಣದ ಸಮುದಾಯ ಭವನ ನಿರ್ಮಾಣಕ್ಕೆ ಲೋಕಸಭಾ ಸದಸ್ಯರ ನಿಧಿಯಿಂದ ಒಟ್ಟು 10 ಲಕ್ಷ ರೂ.ಗಳನ್ನು ನೀಡಲಾಗುವುದು. ಸಧ್ಯ 7 ಲಕ್ಷ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಿ, ಮುಂದಿನ ವಾರ್ಷಿಕ ನಿಧಿಯಲ್ಲಿ 3 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದರು.
ಕಲಬುರಗಿ ನಗರದಲ್ಲಿ ಬಡವರಿಗೆ ಬೋರವೇಲ್ ಹಾಕಿ ನೀರು ಒದಗಿಸುವುದಕ್ಕಿಂತ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ದೊರಕಿಸಲು ತಲಾ 15 ಲಕ್ಷ ರೂ.ಗಳಲ್ಲಿ ಬುದ್ಧ ನಗರ ಮತ್ತು ಅಶೋಕ ನಗರಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಲಾಗಿದೆ ಹಾಗೂ ತಲಾ 15 ಲಕ್ಷ ರೂ.ಗಳಲ್ಲಿ ವಿದ್ಯಾನಗರ ಹಾಗೂ ವಡ್ಡರ ಗಲ್ಲಿಯಲ್ಲಿ ನಿರ್ಮಿಸಲಾಗುವ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಘಟಕಗಳನ್ನು ನಿರ್ವಹಣೆ ಮಾಡುವ ಮೂಲಕ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪಡೆಯಬೇಕು ಎಂದರು.
ಶುದ್ಧ ಕುಡಿಯುವ ನೀರಿನ ಘಟಕಗಳಿಂದ 5 ರೂ.ದಲ್ಲಿ 25 ಲೀಟರ ಶುದ್ಧ ಕುಡಿಯುವ ನೀರು ದೊರೆಯುತ್ತದೆ. ಇದರಿಂದಾಗಿ ನೀರಿನಿಂದ ಬರುವ ಕಾಯಿಲೆಗಳಿಂದ ಮುಕ್ತಿ ಪಡೆಯಬಹುದು. ಎಲ್ಲ ಘಟಕಗಳಲ್ಲಿ ನೀರು ಬಳಕೆ ಮಾಡುವುದನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದ ಸಂಸದರು ನಗರದ ಒಳ ರಸ್ತೆಗಳಲ್ಲಿ ತುಂಬಾ ತಗ್ಗುಗಳಿವೆ ಅವುಗಳನ್ನು ಮಹಾನಗರ ಪಾಲಿಕೆಯಿಂದ ಮುಚ್ಚುವ ಕ್ರಮ ಕೈಗೊಳ್ಳಬೇಕು. ಬಡವರ ಓಣಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಹೇಳಿದರು.
ಗುಲಬರ್ಗಾ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಲೋಕಸಭಾ ಸದಸ್ಯನಾಗಿ ಲೋಕಸಭೆಯಲ್ಲಿ ಎಲ್ಲ ಸಂಸದರ ಮನಗೆದ್ದು ಈ ಭಾಗಕ್ಕೆ ಕಲಂ 371(ಜೆ) ನೀಡುವ ಮೂಲಕ ಅಭಿವೃದ್ದಿಯ ಬಾಗಿಲನ್ನು ತೆರೆಯಲಾಗಿದೆ. ಇದನ್ನು ಯಾವುದೇ ಜಾತಿ ಜನಾಂಗಕ್ಕೆ ಸೀಮಿತಗೊಳಿಸದೇ ಇಡೀ ಹೈದ್ರಾಬಾದ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಬಳಸಿಕೊಳ್ಳಲಾಗುತ್ತಿದೆ. 371(ಜೆ)ದಿಂದಾಗಿ ಈ ಭಾಗಕ್ಕೆ ದೊರೆತ್ತಿರುವ ಶಿಕ್ಷಣ ಮತ್ತು ನೌಕರಿಯಲ್ಲಿ ಮೀಸಲಾತಿಯಿಂದಾಗಿ ಇಂದು ಬಡ ಕುಟುಂಬದ ಯುವಕರು ಸಾಕಷ್ಟು ನೌಕರಿ ಮತ್ತು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಡಾ. ಬಾಬಾಸಾಹೇಬ ಅಂಬೇಡ್ಕರ ರಚಿಸಿರುವ ದೇಶದ ಸಂವಿಧಾನ ಬದಲಿಸಲು ಕೆಲವು ಜನ ಪ್ರಯತ್ನಿಸುತ್ತಿದ್ದಾರೆ. ಇದು ನೆರವೇರದಂತೆ ಎಲ್ಲರೂ ಗಟ್ಟಿಯಾಗಿ ನಿಲ್ಲಬೇಕು. ಸಂವಿಧಾನ ಬದಲಾವಣೆಯಲ್ಲಿ ತೊಡಗಿರುವವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಜಗದೇವ ಗುತ್ತೇದಾರ, ಅಲ್ಲಮಪ್ರಭು ಪಾಟೀಲ, ಬಾಗನಗೌಡ ಸಂಕನೂರ, ಮಾರುತಿ ಮಾಲೆ, ಆಲಂ ಖಾನ್, ತಿಮ್ಮಣ್ಣ ಒಡೆಯರಾಜ್, ಭೀಮರಡ್ಡಿ ಪಾಟೀಲ ಕುರಕುಂದಾ, ಮಹಾನಗರ ಪಾಲಿಕೆ ಸದಸ್ಯರಾದ ಲತಾ ರವಿ ರಾಠೋಡ, ಪರಶುರಾಮ ನಸಲವಾಯಿ, ಪರಶುರಾಮ ಎಸ್. ಹೊಳ್ಕರ್, ನಾಗೇಂದ್ರ ದಂಡಪ್ಪ ಗುಂಡಗುರ್ತಿ, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ಪ್ರಕಾಶ ಶ್ರೀಹರಿ, ಕಾರ್ಯನಿರ್ವಾಹಕ ಇಂಜಿನಿಯರ್ ಅಮೀನ್ ಮುಖ್ತಾರ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳಲು ಸೂಚನೆ
********************************************************************
ಕಲಬುರಗಿ,ಮಾ.02.(ಕ.ವಾ.)-ಕಲಬುರಗಿ ನಗರಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 6 ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳುವಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶನಿವಾರ ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪ್ರಧಾನಮಂತ್ರಿಗಳ ಕಾರ್ಯಕ್ರಮಗಳ ಸಿದ್ಧತೆಗಾಗಿ ಕರೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಕಲಬುರಗಿ ನಗರಕ್ಕೆ ಪ್ರಧಾನ ಮಂತ್ರಿಗಳು ಹೆಲಿಕ್ಯಾಪ್ಟರ್ ಮೂಲಕ ಆಗಮಿಸುತ್ತಿರುವುದರಿಂದ ಹೆಲಿಪ್ಯಾಡ್ ಸ್ವಚ್ಛಗೊಳಿಸಬೇಕು ಹಾಗೂ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ಹೆಲಿಕ್ಯಾಪ್ಟರಿನ ಪೈಲೆಟ್‍ಗಳಿಗೆ ಸೂಕ್ತ ಸೌಲಭ್ಯ ಒದಗಿಸಬೇಕು ಎಂದರು.
ಪ್ರಧಾನಮಂತ್ರಿಗಳ ಮುಖ್ಯ ಸಮಾರಂಭವು ನಗರದ ಎನ್.ವಿ. ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಹೆಲಿಪ್ಯಾಡ್‍ನಿಂದ ಎನ್.ವಿ. ಮೈದಾನದವರೆಗೆ ರಸ್ತೆಯಲ್ಲಿ ಅಡೆತಡೆಗಳು ಹಾಗೂ ಗುಂಡಿಗಳು ಇಲ್ಲದಂತೆ ನೋಡಿಕೊಳ್ಳಬೇಕು. ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಬೇರೆ ಜಿಲ್ಲೆಯಿಂದ ಆಗಮಿಸುವ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳಗಳನ್ನು ಗುರುತಿಸಿ ವಾಹನ ನಿಲ್ದಾಣ ರೂಪಿಸಬೇಕು. ವಾಹನ ನಿಲ್ದಾಣಗಳಲ್ಲಿಯೇ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಬೇಕೆಂದರು.
ಮುಖ್ಯ ಕಾರ್ಯಕ್ರಮ ನಡೆಯುವ ಎನ್.ವಿ. ಮೈದಾನದಲ್ಲಿ ವಿಶೇಷ ವೈದ್ಯರ ತಂಡ, ಅಂಬ್ಯುಲೆನ್ಸ್, ಆಗ್ನಿಶಾಮಕದಳದ ವಾಹನ ವ್ಯವಸ್ಥೆ ಮಾಡಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಸುಸಜ್ಜಿತ ವಾರ್ಡ ಸಿದ್ಧಗೊಳಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿಯೂ ಸಹ ಐಸಿಯು ವ್ಯವಸ್ಥೆ ಇರುವ ವಾರ್ಡ ಸಿದ್ಧಪಡಿಸಬೇಕು. ಬಿ.ಎಸ್.ಎನ್.ಎಲ್.ದಿಂದ ಬ್ರ್ಯಾಡ್‍ಬ್ಯಾಂಡ್ ಮತ್ತು ವೈಫೈ ಸಂಪರ್ಕವನ್ನು ಕಲ್ಪಿಸಬೇಕು. ಪಕ್ಷದ ಮುಖಂಡರು ಪ್ರಧಾನಿಗಳನ್ನು ಬರಮಾಡಿಕೊಳ್ಳುವವರ, ವೇದಿಕೆ ಮೇಲೆ ಉಪಸ್ಥಿತರಿರುವ ಹಾಗೂ ಬೀಳ್ಕೋಡುವವ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕು ಎಂದರು.
ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಬೇರೆ ಜಿಲ್ಲೆಗಳಿಂದ ಹಾಗೂ ನಗರದಿಂದ ಬಹಳಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವುದರಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ವಾಹನ ಸಂಚಾರದ ಮಾರ್ಗ ಬದಲಾವಣೆಯನ್ನು ಮಾಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಹಿರಿಯ ಅಧಿಕಾರಿಗಳು, ಗಣ್ಯರಿಗಾಗಿ ಹೆಚ್ಚುವರಿ ವಾಹನಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ ಮಾತನಾಡಿ, ಪ್ರಧಾನಮಂತ್ರಿಗಳು ಮಾರ್ಚ್ 6ರಂದು ವಿಶೇಷ ವಿಮಾನದ ಮೂಲಕ ಬೀದರಗೆ ಬಂದು ಬೀದರಿಂದ ಕಲಬುರಗಿಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ 3 ಗಂಟೆಯವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ತಮೀಳುನಾಡಿಗೆ ಪ್ರಯಾಣಿಸಲಿದ್ದಾರೆ. ಪ್ರಧಾನಿ ಆಗಮಿಸುವುದಕ್ಕಿಂತಲೂ ಮುಂಚಿತವಾಗಿ ಮುಖ್ಯ ವೇದಿಕೆಯಲ್ಲಿ ಪಕ್ಷದ ಮುಖಂಡರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಲಿದ್ದು, ಪ್ರಧಾನಿಗಳು ಆಗಮಿಸಿದ ತಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವರು ಎಂದು ವಿವರಿಸಿದರು.
ಸಭೆಯಲ್ಲಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬೀಕರ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಪಕ್ಷದ ಮುಖಂಡರಾದ ದತ್ತಾತ್ರೇಯ ಪಾಟೀಲ ಸಿ. ರೇವೂರ, ಬಿ.ಜಿ. ಪಾಟೀಲ, ದೊಡ್ಡಪ್ಪಗೌಡ ಪಾಟೀಲ, ಅಮರನಾಥ ಪಾಟೀಲ, ಸಶೀಲ ಜಿ. ನಮೋಶಿ, ವಿದ್ಯಾಸಾಗರ ಕುಲಕರ್ಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮತದಾರರ ವಿಶೇಷ ಮಿಂಚಿನ ನೋಂದಣಿ ಆಂದೋಲನ
*************************************************
ಕಲಬುರಗಿ,ಮಾ.02.(ಕ.ವಾ.)-ಕಲಬುರಗಿ ಜಿಲ್ಲೆಯಲ್ಲಿ ಜನವರಿ 1, 2019ಕ್ಕೆ 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅನುಕೂಲವಾಗುವ ಹಾಗೆ ಇದೇ ಮಾರ್ಚ್ 2 ಹಾಗೂ 3 ರಂದು ಮತದಾರರ ಪಟ್ಟಿಗೆ ಹೆಸರು ಸೇರಿರುವ ವಿಶೇಷ ಮಿಂಚಿನ ನೋಂದಣಿ ಆಂದೋಲನವನ್ನು ಎಲ್ಲ ಬೂತಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗಾಗಿ ಸಮೀಪದ ಮತಗಟ್ಟೆಗೆ ಭೇಟಿ ನೀಡಿ ಫಾರಂ 6 ಭರ್ತಿ ಭರ್ತಿ ಮಾಡಿ ಎರಡು ಪಾಸ್‍ಪೋರ್ಟ ಅಳತೆಯ ಭಾವಚಿತ್ರ, ವಿಳಾಸ ಹಾಗೂ ಗುರುತಿನ ಚೀಟಿ ಸಲ್ಲಿಸಬೇಕು. ಈಗಾಗಲೇ ಮತದಾರರ ಯಾದಿಯಲ್ಲಿ ನೋಂದಾಯಿಸಿಕೊಂಡವರು ಸಹ ಬೂತಗಳಿಗೆ ಭೇಟಿ ನೀಡಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಾತರಿ ಪಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಯಾವುದೇ ಮತದಾರರು ಮತದಾನದಿಂದ ಹೊರಗುಳಿಯಬಾರದೆಂಬುವುದನ್ನು ಚುನಾವಣಾ ಆಯೋಗದ ಪ್ರಯತ್ನವಾಗಿದ್ದು, ಎಲ್ಲರೂ ಕಡ್ಡಾಯಗಾಗಿ ಹೆಸರು ನೋಂದಣಿ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.

ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮ: 326340 ಮಕ್ಕಳಿಗೆ ಲಸಿಕೆ ಹಾಕುವ ಗುರಿ
************************************************************************
ಕಲಬುರಗಿ,ಮಾ.03(ಕ.ವಾ)-ಪೊಲೀಯೋ ನಿರ್ಮೂಲನೆಯ ನಿಟ್ಟಿನಲ್ಲಿ 2019ನೇ ಸಾಲಿನ ಪ್ರಥಮ ಸುತ್ತಿನ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮ ಇದೇ ಮಾರ್ಚ್ 10 ರಿಂದ 13ರ ವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ನಡೆಯಲಿದ್ದು, 5 ವರ್ಷದೊಳಗಿನ 326340 ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ.ರಾಜಾ ಪಿ. ಹೇಳಿದರು.
ಅವರು ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೊಲೀಯೋ ಲಸಿಕೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೊಲೀಯೋ ಲಸಿಕೆ ಕಾರ್ಯಕ್ರಮಕ್ಕೆ 552373 ಮನೆಗಳನ್ನು ಸರ್ವೇ ಮಾಡಲಾಗಿದೆ. ಮಾರ್ಚ್ 10 ರಂದು ಮೊದಲನೇ ದಿನ ಬೂತ್ ಮಟ್ಟದಲ್ಲಿ ಪೊಲಿಯೋ ಲಸಿಕೆ ಹಾಕಲಾಗುತ್ತಿದ್ದು, ಇದಕ್ಕಾಗಿ 1490 ತಂಡಗಳನ್ನು ರಚಿಸಲಾಗಿದೆ. 1490 ಆರೋಗ್ಯ ತಂಡಗಳು ಮಾರ್ಚ್ 11 ರಿಂದ 13ರ ವರೆಗೆ ಮನೆ-ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಲಿವೆ. ಇನ್ನುಳಿದಂತೆ 128 ಟ್ರಾಂಜಿಟ್ ಲಸಿಕಾ ತಂಡಗಳು, 29 ಸಂಚಾರಿ ತಂಡಗಳು ಸೇರಿದಂತೆ ಒಟ್ಟಾರೆ 1647 ತಂಡಗಳನ್ನು ಲಸಿಕಾ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದೆ. ಲಸಿಕೆ ಕಾರ್ಯಕ್ರಮ ಸುಸೂತ್ರವಾಗಿ ಜರುಗಲು ನಿಗಾವಹಿಸಲೆಂದೆ 326 ಜನರ ಮೇಲ್ವಿಚಾರಕರನ್ನು ಸಹ ನೇಮಿಸಲಾಗಿದೆ ಎಂದರು.
ಲಸಿಕಾ ತಂಡಗಳು ಸ್ಲಂ ನಿವಾಸಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಬೇಕು ಎಂದು ಒತ್ತಿ ಹೇಳಿದ ಅವರು ಯಾವುದೇ ಕಾರಣಕ್ಕೂ ಲಸಿಕಾ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಮಕ್ಕಳು ಪೊಲಿಯೋದಿಂದ ವಂಚಿತರಾಗದಂತೆ ಆರೋಗ್ಯ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ಲಸಿಕಾ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಡಿ-ಫ್ರೀಜರ್‍ನಲ್ಲಿ ವ್ಯಾಕ್ಸಿನ್ ಶೇಖರಣೆ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ, 4 ದಿನಗಳ ಈ ಅವಧಿಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ವ್ಯತ್ಯಯ ಆಗದಂತೆ ಜೆಸ್ಕಾಂ ಅಧಿಕಾರಿಗಳು ನಿಗಾವಹಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಾಧವರಾವ ಕೆ.ಪಾಟೀಲ ಅವರು ಪಲ್ಸ ಪೊಲೀಯೋ ಅಂಗವಾಗಿ ಕೈಗೊಳ್ಳಲಾದ ಪೂರ್ವಸಿದ್ಧತೆ ಬಗ್ಗೆ ಸಭೆಗೆ ವಿವರಿಸಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಂಬರಾಯ ಎಸ್. ರುದ್ರವಾಡಿ, ಆಯುಷ್ ಇಲಾಖೆಯ ಉಪನಿರ್ದೇಶಕಿ ನಾಗರತ್ನ ಚಿಮ್ಮಲಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮತದಾನ ಹೆಚ್ಚಳಕ್ಕೆ ಸ್ವೀಪ್ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಲಹೆ
ಕಲಬುರಗಿ,ಮಾ.02.(ಕ.ವಾ.)-ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯ ಮತದಾರರಲ್ಲಿ ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸುವ ಮೂಲಕ ಕಳೆದ ಬಾರಿಯ ಮತದಾನಕ್ಕಿಂತ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನವಾಗುವ ಹಾಗೆ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜಾ.ಪಿ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸ್ವೀಪ್ ಕಾರ್ಯಕ್ರಮ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆಹಿಸಿ ಮಾತನಾಡಿ, ಜಿಲ್ಲಾ, ತಾಲೂಕು, ಹೊಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಶಾಲಾ ಕಾಲೇಜು ಮಕ್ಕಳಿಂದ ಮತದಾನದ ಜಾಗೃತಿ ಕುರಿತು ಪ್ರಭಾತ ಫೇರಿ ಮಾಡಿಸುವುದು, ಸೈಕಲ್ ರ್ಯಾಲಿ, ಬೈಕ್ ರ್ಯಾಲಿ, ಗ್ರಾಮಗಳಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸುವುದರ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಮತದಾನ ಜಾಗೃತಿ ಕುರಿತು, ಪ್ರಚಾರ ಮಾಡಿ ಜನರಲ್ಲಿ ಅರಿವು ಮೂಡಿಸಬೇಕೆಂದರು.

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮತದಾನ
ಜಾಗೃತಿ ಕಾರ್ಯಕ್ರಮ ಕೂಡ ಏರ್ಪಡಿಸಬೇಕು. ಜಿಲ್ಲೆಯ ವಿವಿಧ ವಾರ್ಡ್‍ಗಳಿಗೆ ತೆರಳಿ ಕಸ ವಿಲೇವಾರಿ ಮಾಡುವ ಮಹಾನಗರ ಪಾಲಿಕೆಯ ವಾಹನಗಳಲ್ಲಿ ಧ್ವನಿವರ್ಧಕದ ಮೂಲಕ ಮತದಾನ ಜಾಗೃತಿ ಕುರಿತು ಅರಿವು ಮೂಡಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಬ್ಯಾನರ ಅಳವಡಿಸುವುದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಒಡೆತನದಲ್ಲಿರುವ ಹೆದ್ದಾರಿ ಫಲಕಗಳ ಮೇಲೆ ಮತದಾರರ ಜಾಗೃತಿ ಕುರಿತು ಪ್ರಚಾರ ಫಲಕಗಳನ್ನು ಅಳವಡಿಸಬೇಕೆಂದರು.
ಯುವಕರು, ವೃದ್ಧರು, ಮಹಿಳೆಯರು, ಫೇಸ್‍ಬುಕ್, ಟ್ವಿಟರ್, ಇನ್ನಿತÀರೆ ಸೋಶಿಯಲ್ ಮೀಡಿಯಾಗಳನ್ನು ತುಂಬಾ ಉಪಯೋಗಿಸುತ್ತಿರುವುದರಿಂದ ಪ್ರತಿ ತಾಲೂಕಿನ ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ತೆರೆದು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ನಡೆಯುವ ಮತದಾನ ಜಾಗೃತಿ ಕಾರ್ಯಕ್ರಮಗಳ ಪ್ರಚಾರ ಮಾಡಬೇಕೆಂದರು. ಈ ಸಭೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹೀಗಾಗಿ ಲೇಖನಗಳು News and Photos Date: 2-3-2019
ಎಲ್ಲಾ ಲೇಖನಗಳು ಆಗಿದೆ News and Photos Date: 2-3-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photos Date: 2-3-2019 ಲಿಂಕ್ ವಿಳಾಸ https://dekalungi.blogspot.com/2019/03/news-and-photos-date-2-3-2019.html
0 Response to "News and Photos Date: 2-3-2019"
ಕಾಮೆಂಟ್ ಪೋಸ್ಟ್ ಮಾಡಿ