ಶೀರ್ಷಿಕೆ : news 12-4-2019
ಲಿಂಕ್ : news 12-4-2019
news 12-4-2019
ತ್ರಕಲಾ ಸ್ಪರ್ಧೆ ಮೂಲಕ ಮತದಾನ ಕುರಿತು ಜಾಗೃತಿ
************************************************
ಕಲಬುರಗಿ,ಏಪ್ರಿಲ್.12.(ಕ.ವಾ.)-ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಶುಕ್ರವಾರ ಕಲಬುರಗಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ)ಯಲ್ಲಿ ಚಿತ್ರಕಲಾ ಸ್ಪರ್ಧೆಯ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಡಾ. ಪಿ. ರಾಜಾ ಅವರು ಸ್ವತ: ಕುಂಚ ಹಿಡಿದು ಚಿತ್ರ ಬಿಡಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಕೂಡಾ “ಮತದಾನ ನಮ್ಮೆಲ್ಲರ ಹಕ್ಕು, ಆಮಿಷಕ್ಕೆ ಒಳಗಾಗದಿರಿ ನಿಮ್ಮ ಮತ ಅಮೂಲ್ಯ, ವೋಟ್ ಫಾರ್ ಕಲಬುರಗಿ, ವೋಟ್ ಫಾರ್ ಇಂಡಿಯಾ, ಮತದಾನ ನಮ್ಮೆಲ್ಲರ ಹಕ್ಕು” ಮುಂತಾದ ಘೋಷಣೆವುಳ್ಳ ಚಿತ್ರಗಳಿಗೆ ರಂಗು ತುಂಬಿದರು.
ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಹಣ, ಮದ್ಯ, ಸೀರೆ ಮುಂತಾದವುಗಳನ್ನು ಹಂಚಲಿದ್ದು, ಇಂತಹ ಆಮಿಷಗಳಿಗೆ ಮರುಳಾಗಬೇಡಿ. ಪ್ರತಿಯೊಬ್ಬರೂ ಮುಕ್ತ ಮತ್ತು ನಿರ್ಭಿತಿಯಿಂದ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಎತ್ತಿ ಹಿಡಿಯಬೇಕು ಎಂದು ಶಾಲಾ ಮಕ್ಕಳು ಜನತೆಗೆ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಗುಲಬರ್ಗಾ ಉತ್ತರ ವಿಧಾನಸಭಾಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ, ಮಹಾನಗರ ಪಾಲಿಕೆ ಪರಿಸರ ಇಂಜಿನಿಯರ್ ಮುನಾಫ್ ಪಟೇಲ್, ವಿವಿಧ ಶಾಲಾ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

ಎಲ್ಲ ಕಾರ್ಮಿಕರಿಗೆ ಏಪ್ರಿಲ್ 23ರಂದು ವೇತನ ಸಹಿತ ರಜೆ ನೀಡಲು ಸೂಚನೆ
*****************************************************************
ಕಲಬುರಗಿ,ಏಪ್ರಿಲ್.12.(ಕ.ವಾ.)-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ 2019ರ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಸದರಿ ದಿನದಂದು ಕಾರ್ಮಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಹೊಟೇಲ್‍ಗಳು, ಚಿತ್ರಮಂದಿರಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಸಹಿತ ರಜೆ ನೀಡಬೇಕೆಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಕಾರ್ಮಿಕರಿಗೆ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕಾಗುತ್ತದೆ. ಸಂಸ್ಥೆಗಳ ಮಾಲೀಕರು ಮತದಾನ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಿ ಮತ ಚಲಾಯಿಸಲು ಅನುವು ಮಾಡಿಕೊಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 14ರಂದು ಡಾ. ಬಿ.ಆರ್. ಅಂಬೇಡ್ಕರ ಜಯಂತಿ ಆಚರಣೆ
********************************************************
ಕಲಬುರಗಿ,ಏಪ್ರಿಲ್.12.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರವರ 128ನೇ ಜಯಂತ್ಯೋತ್ಸವವನ್ನು ರವಿವಾರ ಏಪ್ರಿಲ್ 14ರಂದು ಬೆಳಿಗ್ಗೆ 8 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದ ಡಾ. ಬಿ.ಆರ್. ಅಂಬೇಡ್ಕರ ಪುತ್ಥಳಿ ಹತ್ತಿರದಲ್ಲಿ ಆಚರಿಸಲಾಗುತ್ತಿದೆ.
ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅಧ್ಯಕ್ಷತೆ ವಹಿಸುವರು. ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬೀಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾಟೀನ್ ಮಾರ್ಬನ್ಯಾಂಗ್ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಕಲಬುರಗಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಪಟ್ಟಮಣಿ ದೇವಿದಾಸ ಅವರು ಭಾಷಣಕಾರರಾಗಿ ಆಗಮಿಸಲಿದ್ದಾರೆ.

18 ದಿನದೊಳಗೆ ಆಸ್ತಿ ತೆರಿಗೆ ಪಾವತಿಸಿ ಶೇ.5ರಷ್ಟು ರಿಯಾಯಿತಿ ಪಡೆಯಿರಿ
****************************************************************
ಕಲಬುರಗಿ,ಏ.12.(ಕ.ವಾ.)-ಕಲಬುರಗಿ ನಗರ ವ್ಯಾಪ್ತಿಯಲ್ಲಿ ಬರುವ ವಿವಿಧ ಆಸ್ತಿಗಳ ಮಾಲೀಕರು 2019-20ನೇ ಸಾಲಿನ ಆಸ್ತಿ ತೆರಿಗೆ ಮೇಲೆ 5ರಷ್ಟು ರಿಯಾಯಿತಿ ಸೌಲಭ್ಯ ಪಡೆದುಕೊಳ್ಳಬೇಕು. (2019ರ ಏಪ್ರಿಲ್ 30ರೊಳಗಾಗಿ) ಕೇವಲ 18 ದಿನಗಳ ಕಾಲ ಮಾತ್ರ ಬಾಕಿ ಉಳಿದಿದೆ. ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಮಾಲೀಕರು ಆಸ್ತಿ ತೆರಿಗೆ ಪಾವತಿಸಿ ಇದರ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಪ್ರಕಾಶ ಸಿ. ಹರಕುಡೆ ಅವರು ಕೋರಿದ್ದಾರೆ.
ಆಸ್ತಿ ತೆರಿಗೆ ಪಾವತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಮಹಾನಗರ ಪಾಲಿಕೆಯ ವಲಯ ಕಚೇರಿ-3ರ ಆವರಣ ಹಾಗೂ ಖರ್ಗೆ ಪೆಟ್ರೋಲ್ ಬಂಕ್ ಹತ್ತಿರದ ಹೌಸಿಂಗ್ ಬೋರ್ಡ್ ಕಾಂಪ್ಲೆಕ್ಸ್‍ನಲ್ಲಿರುವ ಗುಲಬರ್ಗಾ ಒನ್ ಶಾಖೆಗಳಲ್ಲಿ ಹಾಗೂ ಮಹಾನಗರ ಪಾಲಿಕೆಯ ಹೊಸ ಕಟ್ಟಡದ ಆವರಣದಲ್ಲಿರುವ ಇಂಡಿಯನ್ ಬ್ಯಾಂಕ್‍ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಆಸ್ತಿಗಳ ಮಾಲೀಕರು 2019ರ ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸಿ ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

ನಗರ ಕುಡಿಯುವ ನೀರಿನ ಸಮಸ್ಯೆ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ
******************************************************************
ಕಲಬುರಗಿ,ಏ.12(ಕ.ವಾ)-ಕಲಬುರಗಿ ನಗರದ ಕುಡಿಯುವ ನೀರು ಸರಬರಾಜು ಸಮಸ್ಯೆ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ ಜಲಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಆರ್.ವಿ. ಪಾಟೀಲ ಅವರು (ಮೊಬೈಲ್ ಸಂಖ್ಯೆ 09480813143) ಇದೇ ಏಪ್ರಿಲ್ 12 ರಿಂದ ಜೂನ್ 15ರವರೆಗೆ ಪ್ರತಿದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಲಬುರಗಿ ಮಹಾನಗರ ಪಾಲಿಕೆಯ ಕೊಠಡಿ ಸಂಖ್ಯೆ 26 ರಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಮಹಾನಗರ ಪಾಲಿಕೆ ಆಡಳಿತಾಧಿಕಾರಿಗಳ ನಿರ್ದೇಶನದ ಮೇರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುತ್ತಿದೆ. ಸಾರ್ವಜನಿಕರು ಮೇಲ್ಕಂಡ ದಿನದಂದು ಕುಡಿಯುವ ನೀರಿನ ಸಮಸ್ಯೆ ಕುರಿತು ಸದರಿ ಜಲಮಂಡಳಿಯ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಾಂಸ ಮಾರಾಟ ನಿಷೇಧ
ಕಲಬುರಗಿ,ಏ.12(ಕ.ವಾ)-ಇದೇ ಏಪ್ರಿಲ್ 13ರಂದು ಶ್ರೀರಾಮನವಮಿ, ಏಪ್ರಿಲ್ 14 ರಂದು ಡಾ. ಬಾಬಾಸಾಹೇಬ್ ಅಂಬೇಡ್ಕರ ಜಯಂತಿ ಹಾಗೂ ಏಪ್ರಿಲ್ 17 ರಂದು ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ಸದರಿ ದಿನಗಳಂದು ಕಲಬುರಗಿ ನಗರದಲ್ಲಿರುವ ಎಲ್ಲ ಕಸಾಯಿ ಖಾನೆ ಮತ್ತು ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿ ಯಾವುದೇ ರೀತಿಯ ಪ್ರಾಣಿ ವಧೆ ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಕಲಬುರಗಿ ನಗರದಲ್ಲಿನ ಮಾಂಸ ಮಾರಾಟ ಮಾಡುವ ಹಾಗೂ ಕಸಾಯಿ ಖಾನೆ ಮಾಲೀಕರು ಒಂದು ವೇಳೆ ಈ ಆದೇಶ ಉಲ್ಲಂಘಿಸಿದಲ್ಲಿ ಕೆ.ಎಂ.ಸಿ. ಕಾಯ್ದೆ 1976ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಹಳ್ಳಿಖೇಡ(ಬಿ) ನಾಡ ಕಚೇರಿಯ ಉಪ ತಹಶೀಲ್ದಾರ ಅಮಾನತ್ತು
*******************************************************
ಕಲಬುರಗಿ,ಏ.12.(ಕ.ವಾ.)-ಲೋಕಸಭಾ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಮಾಶಾಸನ ಮಂಜೂರು ಮಾಡಿ, ಸರ್ಕಾರಿ ಸೇವೆಯಲ್ಲಿ ನಿರ್ಲಕ್ಷ್ಯತನ ಮತ್ತು ತೀವ್ರ ತೆರನಾದ ಕರ್ತವ್ಯ ಲೋಪವೆಸಗಿರುವ ಹಿನ್ನೆಲೆಯಲ್ಲಿ ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ನಾಡ ಕಚೇರಿಯ ಉಪ ತಹಶೀಲ್ದಾರ ಪ್ರೇಮದಾಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋದ ಯಾಧವ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1) (ಡಿ) ರಡಿಯಲ್ಲಿ ಇವರನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಸದರಿ ನೌಕರರು ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958ರ ನಿಯಮ 98ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಸಕ್ಷಮ ಪ್ರಾಧಿಕಾರದ ಪರವಾನಿಗೆ ಪಡೆಯದೇ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೆಂಗಳೂರಿನ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ ಚುನಾವಣಾ ಪ್ರಕ್ರಿಯೇಗಳು ಮುಗಿಯುವವರೆಗೆ ಅರ್ಜಿಗಳನ್ನು ಸ್ವೀಕರಿಸುವುದು, ಸಂಸ್ಕರಿಸುವುದು ಹಾಗೂ ಮಂಜೂರಾತಿ ನೀಡಬಾರದೆಂಬ ಸೂಚನೆಗಳು ನೀಡಲಾಗಿದ್ದರೂ ಕೂಡಾ ಸಹ ಕಂದಾಯ ಇಲಾಖೆಯ ಸದರಿ ಉಪ ತಹಶೀಲ್ದಾರರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಂಧ್ಯಾ ಸುರಕ್ಷಾ, ವಿಧವಾ ವೇತನ ಹಾಗೂ ವೃದ್ಯಾಪ್ಯ ವೇತನ ಮಾಸಾಶನಗಳನ್ನು ಮಂಜೂರು ಮಾಡಿರುತ್ತಾರೆ.

ಏಪ್ರಿಲ್ 13ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
**********************************************
ಕಲಬುರಗಿ,ಏ.12.(ಕ.ವಾ.)-ಜೆಸ್ಕಾಂ ಕಲಬುರಗಿ ನಗರ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ವ್ಯಾಪ್ತಿಯಲ್ಲಿ ಬರುವ 11ಕೆ.ವಿ. ಹೌಸಿಂಗ್ ಬೋರ್ಡ್ ಹಾಗೂ ವಿಠ್ಠಲ ನಗರ ಫೀಡರಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಂಡಿರುವ ಹಿನ್ನೆಲೆಯಲ್ಲಿ ಶನಿವಾರ 2019ರ ಏಪ್ರಿಲ್ 13ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11ಕೆ.ವಿ. ಹೌಸಿಂಗ್ ಬೋರ್ಡ್ ಫೀಡರ್: ಗಂಜ್‍ಬ್ಯಾಂಕ್ ಕಾಲೋನಿ, ಗಂಜ್ ಬಸ್‍ಸ್ಟ್ಯಾಂಡ್ ಎದುರುಗಡೆ, ಭವಾನಿ ಗುಡಿ, ಈಶ್ವರ ಗುಡಿ, ರಾಮ ಮಂದಿರ, ಬಿಯಾನಿ, ಜಿ.ಓ.ಎಸ್ ಪ್ರದೇಶ, ಲಾಹೋಟಿ ಕಲ್ಯಾಣ ಮಂಟಪ ಹಿಂಭಾಗ ಪ್ರದೇಶ, ಆದರ್ಶ ಸ್ಕೂಲ್ ಪ್ರದೇಶ ಕೆ.ಎಚ್.ಬಿ ಕಾಲೋನಿ, ಕಲಂತ್ರಿ ಬಿಲ್ಡಂಗ್ ಪ್ರದೇಶ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11ಕೆ.ವಿ. ವಿಠ್ಠಲ ನಗರ ಫೀಡರ್: ಡಿ.ಡಿ.ಪಿ.ಐ. ಕಚೇರಿ, ವಿಜಯ-ವಿದ್ಯಾಲಯ ಕಂಪೌಂಡ್, ಐವಾನ್ ಶಾಹಿ ಅಥಿತಿಗೃಹ, ಗುಲ್ಲಾಬೌಡಿ, ಲಾಹೋಟಿ ಪೆಟ್ರೋಲ್ ಪಂಪ್, ಕೆ.ಬಿ.ಎನ್.ಆಸ್ಪತ್ರೆ, ಖೂಬಾ ಪ್ಲಾಟ್, ವಿಠ್ಠಲ ನಗರ, ಆನಂದ ನಗರ, ವಿವೇಕಾನಂದ ನಗರ, ರಾಮನಗರ, ಇಂದಿರಾ ನಗರ, ವಿದ್ಯಾನಗರ, ಬಲಘಟ ಕಂಪೌಂಡ್, ಮೇಹತಾ ಕಂಪೌಂಡ್, ಮಿನಿ ವಿಧಾನಸೌಧ, ಜಿಲ್ಲಾ ನ್ಯಾಯಲಯ ಮತ್ತು ಜೆಸ್ಕಾಂ ಕಛೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ
ಕಲಬುರಗಿ,ಏ.12.(ಕ.ವಾ.)-ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ 36 ದತ್ತಿನಿಧಿ ಪ್ರಶಸ್ತಿಗಳಿಗಾಗಿ 2018ನೇ ಸಾಲಿನಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಕಳುಹಿಸಬೇಕು. ಸ್ಪರ್ಧೆಗೆ ಬರುವ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸು ಗಮನಿಸಿ ಪರಿಷತ್ತು ಅಂತಿಮ ನಿರ್ಧಾರ ಕೈಗೊಳ್ಳುತ್ತ್ತದೆ. ಒಂದಕ್ಕಿಂತ ಹೆಚ್ಚು ಪುಸ್ತಕಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗಿರುತ್ತದೆ. ಪಿ.ಹೆಚ್.ಡಿ. ಗ್ರಂಥಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟ್ಯಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬೇಕು.
ಭಾಗವಹಿಸುವ ಸ್ಪರ್ಧೆಯ ದತ್ತಿ ಹೆಸರನ್ನು ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸಲು 2019ರ ಮೇ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560018 ದೂರವಾಣಿ ಸಂಖ್ಯೆ: 080-26612991, 26623584 ಗೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ತಿತಿತಿ.ಞಚಿsಚಿಠಿಚಿ.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.
ಬೃಹತ್ ಕ್ಯಾಂಡಲ್ ಮಾರ್ಚ ಮೂಲಕ ಮತದಾನ ಜಾಗೃತಿ
ಕಲಬುರಗಿ,ಏಪ್ರಿಲ್.12.(ಕ.ವಾ-ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಶುಕ್ರವಾರ ಮತದಾನ ಜಾಗೃತಿಗಾಗಿ ಕಲಬುರಗಿ ನಗರದಲ್ಲಿ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು.
ನಗರದ ಲಾಲ್‍ಗೇರಿ ಕ್ರಾಸ್, ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತ, ಬಸವೇಶ್ವರ ಆಸ್ಪತ್ರೆ ಹಾಗೂ ನಗರೇಶ್ವರ ಹೀಗೆ ನಾಲ್ಕು ಭಾಗಗಳಿಂದ ಬಂದ ಕ್ಯಾಂಡಲ್ ಮಾರ್ಚ ಮೆರವಣಿಗೆಯು ಕಲಬುರಗಿ ನಗರದ ಜಗತ್ ವೃತ್ತಕ್ಕೆ ಬಂದು ಸಮಾಪನೆಗೊಂಡಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿಯ ಕ್ಯಾಂಡಲ್ ಮಾರ್ಚಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಚಾಲನೆ ನೀಡಿದರು. ಮಾರ್ಗದುದ್ದಕ್ಕೂ ಎಲ್ಲ ಇಲಾಖೆಯ ಅಧಿಕಾರಿಗಳು ಮತದಾನ ಮಾಡುವ ಕುರಿತು ಘೋಷಣೆ ಕೂಗಿ ಜನರಿಗೆ ಅರಿವು ಮೂಡಿಸಿದರು.
ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಡಾ. ಪಿ. ರಾಜಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಗುಲಬರ್ಗಾ ಉತ್ತರ ವಿಧಾನಸಭಾಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟೀಲ್, ಚುನಾವಣೆಗೆ ನಿಯೋಜಿತ ನೋಡಲ್ ಅಧಿಕಾರಿಗಳು ಪಾಲ್ಗೊಂಡಿದ್ದರು. ಆಶಾ ಕಾರ್ಯಕರ್ತೆಯರು, ಅಂಗಡಿನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ಸುಮಾರು 2000 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಕ್ಯಾಂಡಲ್ ಮಾರ್ಚ ಮೂಲಕ ಜಗತ್ ವೃತ್ತದಲ್ಲಿ ಸೇರಿದ ಎಲ್ಲರಿಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ ಜಯಂತಿ ಪ್ರಯುಕ್ತ ಮದ್ಯ ಮಾರಾಟ ನಿಷೇಧ
ಕಲಬುರಗಿ,ಏ.12.(ಕ.ವಾ.)-ಡಾ. ಬಾಬಾಸಾಹೇಬ ಅಂಬೇಡ್ಕರವರ 128ನೇ ಜಯಂತಿಯನ್ನು ಇದೇ ಏಪ್ರಿಲ್ 14ರಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಎಲ್ಲ ತರಹದ ಮದ್ಯ ಮಾರಾಟವನ್ನು ಇದೇ ಏಪ್ರಿಲ್ 13ರ ಮಧ್ಯರಾತ್ರಿಯಿಂದ ಏಪ್ರಿಲ್ 15ರ ಬೆಳಗಿನ 6 ಗಂಟೆಯವರೆಗೆ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಈ ಮೇಲ್ಕಂಡ ದಿನದಂದು ಬಾರ್ ಮತ್ತು ರೆಸ್ಟೊರೆಂಟ್‍ನ್ನು ಮುಚ್ಚಬೇಕು. ಡಾ. ಬಿ.ಆರ್. ಅಂಬೇಡ್ಕರರ ಜಯಂತಿ ಆಚರಣೆಯ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ.

ಹೀಗಾಗಿ ಲೇಖನಗಳು news 12-4-2019
ಎಲ್ಲಾ ಲೇಖನಗಳು ಆಗಿದೆ news 12-4-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news 12-4-2019 ಲಿಂಕ್ ವಿಳಾಸ https://dekalungi.blogspot.com/2019/04/news-12-4-2019.html
0 Response to "news 12-4-2019"
ಕಾಮೆಂಟ್ ಪೋಸ್ಟ್ ಮಾಡಿ