News and Photo Date: 14--04-2019

News and Photo Date: 14--04-2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photo Date: 14--04-2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photo Date: 14--04-2019
ಲಿಂಕ್ : News and Photo Date: 14--04-2019

ಓದಿ


News and Photo Date: 14--04-2019

ಕಡ್ಡಾಯ ಮತದಾನ ಮಾಡುವ ಮೂಲಕ ಅಂಬೇಡ್ಕರರ ಕನಸು ನನಸಾಗಿಸಲು ಕರೆ
************************************************************************
ಕಲಬುರಗಿ,ಏ.14.(ಕ.ವಾ.)-ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರವರು ಚುನಾವಣೆಯ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆಗೊಳ್ಳಬೇಕೆಂಬ ಕನಸು ಕಂಡಿದ್ದರು. ಅವರ ಕನಸ್ಸನ್ನು ಸಂಪೂರ್ಣವಾಗಿ ನನಸಾಗಿಸಲು ಇದೇ ಏಪ್ರಿಲ್ 23 ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನದ ದಿನದಂದು ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಬಲಗೊಳಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಕರೆ ನೀಡಿದರು.
ಅವರು ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಜಗತ್ ವೃತ್ತದ ಡಾ. ಬಿ.ಆರ್. ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರವರ 128ನೇ ಜಯಂತ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ದೇಶದಲ್ಲಿ ಅನೇಕ ಭಾಷೆ, ವೇಷ, ಧರ್ಮ, ಸಂಸ್ಕøತಿಗಳಿದ್ದರೂ ಎಲ್ಲರೂ ಒಗ್ಗಟ್ಟಾಗಿ ಬಾಳುತ್ತಿರುವುದಕ್ಕೆ ಸಂವಿಧಾನವೇ ಮೂಲ ಕಾರಣವಾಗಿದೆ. ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಸಂವಿಧಾನ ಇರದಿದ್ದರೆ ಯಾರೂ ಸ್ವತಂತ್ರರಾಗಿ ಹಾಗೂ ಸಮಾನರಾಗಿ ಬದುಕುತ್ತಿರಲಿಲ್ಲ. ಸಂವಿಧಾನವು ಎಲ್ಲರಿಗೂ ಸಮಾನತೆ, ಸಮಾನ ಅವಕಾಶ, ಒಂದೇ ಸಮನಾದ ಹಕ್ಕು ಮತ್ತು ಕರ್ತವ್ಯಗಳನ್ನು ಒದಗಿಸಿದೆ. ಎಲ್ಲರೂ ಸಂಪೂರ್ಣ ಸಮಾನತೆಯಿಂದ ಬದುಕಲು ಕೇವಲ ಭಾರತ ದೇಶದಲ್ಲಿ ಮಾತ್ರ ಸಾಧ್ಯವಾಗಿದೆ ಎಂದು ಹೇಳಿದರು.
ಅಂಬೇಡ್ಕರರು ಕೇವಲ ಸಂವಿಧಾನದ ಶಿಲ್ಪಿಗಳಲ್ಲದೇ ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ದೇಶದಲ್ಲಿ ಸಾಮಾಜಿಕ ಸಮಾನತೆಗೆ ಬಹಳ ಹೊರಾಡಿದ್ದಾರೆ. ಮೂಢನಂಬಿಕೆಗಳು ಹಾಗೂ ವರ್ಣಾಶ್ರಮವನ್ನು ಹೊಗಲಾಡಿಸಲು ಹೋರಾಡಿದ್ದಾರೆ. ದೇಶದ ಪ್ರತಿಯೊಬ್ಬರಿಗೂ ಆರ್ಥಿಕ ಸಮಾನತೆ ನೀಡುವಲ್ಲಿಯೂ ಸಹ ಅವರ ಪಾತ್ರ ಹಿರಿದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಮಾತನಾಡಿ, ಅಂಬೇಡ್ಕರವರು ಎಲ್ಲ ಕ್ಷೇತ್ರಗಳಿಗೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ. ಎಲ್ಲರೂ ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಸಮಾಜದಲ್ಲಿ ಎಲ್ಲ ರೀತಿಯಲ್ಲಿ ಸಮಾನತೆ ತರುವಲ್ಲಿ ಪ್ರಯತ್ನಿಸಿದ್ದಾರೆ. ಅಸ್ಪøಷ್ಯತೆ ಹೊಗಲಾಡಿಸಲು ಹಾಗೂ ಮಹಿಳೆಯರಿಗೆ ಸರ್ವ ಹಕ್ಕುಗಳನ್ನು ದೊರಕಿಸುವಲ್ಲಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಅಂಬೇಡ್ಕರರ ತತ್ವ ಸಿದ್ಧಾಂತಗಳನ್ನು ಎಲ್ಲರೂ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಮಾರ್ಗದರ್ಶನದಂತೆ ನಾವು ನಡೆಯಬೇಕು ಎಂದು ಹೇಳಿದರು.
ಕಲಬುರಗಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಪುಟ್ಟಮಣಿ ದೇವಿದಾಸ ಉಪನ್ಯಾಸ ನೀಡಿ, ಡಾ. ಬಿ.ಆರ್. ಅಂಬೇಡ್ಕರರ ಬದುಕಿನ ಪ್ರತಿಯೊಂದು ಕ್ಷಣವೂ ಅರ್ಥ ಗಂರ್ಭಿತವಾಗಿತ್ತು. ಸದಾ ಸಮಾಜದ ಒಳಿತಿನ ಬಗ್ಗೆ ಚಿಂತನೆ ಮಾಡುತ್ತಿದ್ದರು. ಅಂದಿನ ಕಾಲದ ಅಸಾಧ್ಯತೆಗಳ ಮಧ್ಯೆ ಅವರು ಸಮಾಜದಲ್ಲಿ ಸಮಾನತೆ ಸಾಧಿಸಲು ಪ್ರಯತ್ನಿಸಿದರು. ದೇಶಕ್ಕೆ ವೇದಗಳ ಅವಶ್ಯಕತೆಯಿದ್ದಾಗ ವೇದವ್ಯಾಸರು ವೇದಗಳನ್ನು ಬರೆದಿದ್ದಾರೆ. ದೇಶಕ್ಕೆ ಪುರಾಣದ ಅವಶ್ಯಕತೆಯಿದ್ದಾಗ ವಾಲ್ಮೀಕಿ ಪುರಾಣ ಬರೆದಿದ್ದಾರೆ. ಅದೇ ರೀತಿ ದೇಶಕ್ಕೆ ಸಂವಿಧಾನ ಅವಶ್ಯಕತೆಯಿದ್ದಾಗ ಡಾ. ಬಿ.ಆರ್. ಅಂಬೇಡ್ಕರರು ಸಂವಿಧಾನ ರಚಿಸಿದ್ದಾರೆ. ಇದುವೇ ತಳಸಮುದಾಯದ ವಿಶೇಷತೆಯಾಗಿದೆ. ತಳ ಸಮುದಾಯ ಎಂದರೆ ದೇಶದಲ್ಲಿ ಸಮಾಜವನ್ನು ಕಟ್ಟುವ ಸಮುದಾಯವಾಗಿದೆ. ಕಾರಣ ತಳ ಸಮುದಾಯದವರು ಯಾರೂ ತಮ್ಮ ಜಾತಿಯನ್ನು ಮುಚ್ಚಿಡಬಾರದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿದ್ಧಾರ್ಥ ವಿಹಾರ ಟ್ರಸ್ಟಿನ ಸಂಗಾನಂದ ಭಂತೇಜಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬೀಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾಟೀನ್ ಮಾರ್ಬನ್ಯಾಂಗ್ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್, ಕಲಬುರಗಿ ಸಹಾಯಕ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ, ಐ.ಎ.ಎಸ್. ಪ್ರೊಬೇಷನರಿ ಅಧಿಕಾರಿ ಸ್ನೇಹಲ್ ಸುಧಾಕರ ಲೋಖಂಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೆ.ಹೆಚ್. ಸತೀಶ, ಮುಖಂಡರಾದ ಅವಿನಾಶ ಗಾಯಕವಾಡ, ಸೋಮಶೇಖರ ಮದನಕರ, ಬಾಬು ಮೋರೆ ಮುಂತಾದವರು ಪಾಲ್ಗೊಂಡಿದ್ದರು.
ಜಿಲ್ಲಾ ಚುನಾವಣಾಧಿಕಾರಿಗಳಿಂದ ಮತದಾನ ಜಾಗೃತಿ ಅಭಿಯಾನ ಮಳಿಗೆ ಉದ್ಘಾಟನೆ
*************************************************************************
ಕಲಬುರಗಿ,ಏ.14.(ಕ.ವಾ.)-ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮತ್ತು ಪ್ರಜಾಪ್ರಭುತ್ವದ ಡೊಡ್ಡ ಹಬ್ಬದಲ್ಲಿ ಸಕ್ರೀಯವಾಗಿ ಪ್ರತಿ ಪ್ರಜೆಯೂ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸ್ಥಾಪಿಸಲಾದ “ಮತದಾರ ಜಾಗೃತಿ ಅಭಿಯಾನ” ಮಳಿಗೆಯನ್ನು ರವಿವಾರ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಉದ್ಘಾಟಿಸಿದರು.
ಮಳಿಗೆಯನ್ನು ವೀಕ್ಷಿಸಿದ ನಂತರ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಅವರು, ಪ್ರಸಕ್ತ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂಬುದು ಚುನಾವಣಾ ಆಯೋಗದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಮತದಾರರಿಗೆ ಶಿಕ್ಷಣ, ಜಾಗೃತಿ ಮೂಡಿಸಲು ಹತ್ತಾರು ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಅದಕ್ಕೆ ಹೊಸದಾಗಿ ಈ ಜಾಗೃತಿ ಅಭಿಯಾನ ಸೇರ್ಪಡೆಯಾಗಿದೆ.
ಮೂರು ದಿನ ಮಳಿಗೆ ಪ್ರದರ್ಶನ:- ಏಪ್ರಿಲ್ 14 ರಿಂದ 16ರ ವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೆ ಜಾಗೃತಿ ಅಭಿಯಾನದ ಪ್ರದರ್ಶನ ಮಳಿಗೆ ಸಾರ್ವಜನಿಕರು ಮತ್ತು ಪ್ರಯಾಣಿಕರ ವೀಕ್ಷಣೆಗೆ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಬೇಕು. ಏಪ್ರಿಲ್ 23 ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ರಾಜಾ ಪಿ., ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ಬಿ. ತರನ್ನುಮ, ಸಹಾಯಕ ಆಯುಕ್ತ ರಾಹುಲ ತುಕಾರಾಮ ಪಾಂಡ್ವೆ, ಐ.ಎ.ಎಸ್. ಪ್ರೊಬೇಷನರಿ ಸ್ನೇಹಲ್ ಸುಧಾಕರ ಲೋಖಂಡೆ, ಈ.ಕ.ರ.ಸಾ.ಸಂಸ್ಥೆಯ ಅಧಿಕಾರಿಗಳು ಇದ್ದರು.
ಗಮನ ಸೆಳೆದ ರೇಖಾಚಿತ್ರಗಳು:- ಮಳಿಗೆಯಲ್ಲಿ ಈ ಬಾರಿ ರೇಖಾಚಿತ್ರದಿಂದ ಮೂಡಿಸಲಾದ ಚಿತ್ರಗಳು ನೋಡುಗರ ಗಮನ ಸೆಳೆದವು. ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಡಾ.ಚಂದ್ರಶೇಖರ ಕಂಬಾರ ಅವರ “ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ ಮತದಾನ ದೇಶವನ್ನು ರೂಪಿಸುತ್ತದೆ ತಪ್ಪದೆ ಮತದಾನ ಮಾಡಿ, ಚಿತ್ರನಟಿ ಪ್ರಣಿತ ಸುಭಾಷ ಅವರ “ಮತದಾನ ಮಾಡಿದರೆ ಹೆಣ್ಣು ತೆರೆಯುವುದು ದೇಶದ ಕಣ್ಣು” ಎಂಬ ಸಂದೇಶಗಳು ಸಾರ್ವಜನಿಕರ ಮನ ಮುಟ್ಟುವಂತಿವೆ. ಇನ್ನು ಇದೇ ಮೊದಲ ಬಾರಿಗೆ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಆಯೋಗವು “ಸಿ ವಿಜಿಲ್ ಆ್ಯಪ್” ಹಾಗೂ “ಚುನಾವಣಾ ಆ್ಯಪ್” ಸಹ ಅಭಿವೃದ್ಧಿಪಡಿಸಿದ್ದು, ಅದರ ಕಾರ್ಯನಿರ್ವಹಣೆ ಬಗ್ಗೆಯೂ ಇಲ್ಲಿ ಪ್ರಸ್ತುತಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ “ರೇಖೆಗಳಲ್ಲಿ ಚುನಾವಣೆ-2019” ಎಂಬ ಕಿರು ಹೊತ್ತಿಗೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.







ಹೀಗಾಗಿ ಲೇಖನಗಳು News and Photo Date: 14--04-2019

ಎಲ್ಲಾ ಲೇಖನಗಳು ಆಗಿದೆ News and Photo Date: 14--04-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 14--04-2019 ಲಿಂಕ್ ವಿಳಾಸ https://dekalungi.blogspot.com/2019/04/news-and-photo-date-14-04-2019.html

Subscribe to receive free email updates:

0 Response to "News and Photo Date: 14--04-2019"

ಕಾಮೆಂಟ್‌‌ ಪೋಸ್ಟ್‌ ಮಾಡಿ