ಶೀರ್ಷಿಕೆ : News and photo Date: 16-4-2019
ಲಿಂಕ್ : News and photo Date: 16-4-2019
News and photo Date: 16-4-2019
ವಿಕಲಚೇತನರು ಕಡ್ಡಾಯ ಮತದಾನ ಮಾಡುವಂತೆ ಮನವಿ
***************************************************
ಕಲಬುರಗಿ,ಏ.16.(ಕ.ವಾ)-ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಕಲಚೇತನ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗವು ವಿಕಲಚೇತನ ಮತದಾರರನ್ನು ಮನೆಯಿಂದ ಮತಗಟ್ಟೆಗೆ ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡುತ್ತಿದ್ದು, ಇದರ ಉಪಯೋಗ ವಿಕಲಚೇತನ ಮತದಾರರು ಪಡೆಯಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಫ್ಯಾಶನ್ ಸ್ವಯಂ ಸೇವಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ವಿಕಲಚೇತನ ಮತದಾರರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಜಾಗೃತಿ ವಾಹನವನ್ನು ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ಎದುರುಗಡೆ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿರುವ ಎಲ್ಲ ವಿಕಲಚೇತನ ಮತದಾರರನ್ನು ಮತಗಟ್ಟೆಗೆ ಕರೆದುಕೊಂಡು ಹೋಗಲು ಚುನಾವಣಾ ಆಯೋಗದ ವತಿಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಗಾಲಿ ಕುರ್ಚಿ ವ್ಯವಸ್ಥೆ ಸಹಿತ ಇದ್ದು, ವಿಕಲಚೇತನ ಮತದಾರರು ಸರ್ಕಾರಿ ವಾಹನದಲ್ಲಿ ಮತಗಟ್ಟೆಗೆ ಆಗಮಿಸಿದಾಗ ಪ್ರಥಮಾಧ್ಯತೆ ಮೇರೆಗೆ ಸ್ವಯಂ ಸೇವಕರಿಂದ ಮತದಾನ ಮಾಡಿಸಲಾಗುವುದು. ಜಿಲ್ಲೆಯ ಎಲ್ಲ ವಿಕಲಚೇತನ ಮತದಾರರು ಕಡ್ಡಾಯ ಮತದಾನ ಮಾಡುವ ಬಗ್ಗೆ ನಿಗಾವಹಿಸಲಾಗುತ್ತಿದ್ದು, ಎಲ್ಲ ವಿಕಲಚೇತನ ಮತದಾರರು ಚುನಾವಣಾ ಆಯೋಗ ನೀಡಿರುವ ಸವಲತ್ತನ್ನು ಸದುಪಯೊಗಪಡಿಸಿಕೊಂಡು ಕಡ್ಡಾಯ ಮತದಾನ ಮಾಡಬೇಕು. ಪ್ರತಿಯೊಂದು ಮತವು ಮಹತ್ವಪೂರ್ಣವಾಗಿದ್ದು, ನಮ್ಮ ಒಂದು ಮತದಿಂದ ಯಾವ ದೊಡ್ಡ ಬದಲಾವಣೆ ಆಗಲಿದೆ ಎಂಬ ಮನೋಭಾವವನ್ನು ವಿಕಲಚೇತನ ಮತದಾರರು ತೊರೆದು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕೆಂದರು.
ಮಹಾನಗರ ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಮಾತನಾಡಿ, ಎಲ್ಲ ಮತಗಟ್ಟೆಗಳಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರಿಗಾಗಿ ರ್ಯಾಂಪ್ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರು, ನೆರಳಿನಂತಹ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಏಪ್ರಿಲ್ 23ರಂದು ನಡೆಯುವ ಮತದಾನ ದಿನದಂದು ಬಿಸಿಲು ಹೆಚ್ಚಿಗೆ ಇದ್ದರೂ ಸಹಿತ ಮಹಿಳೆಯರೆಲ್ಲರೂ ಕಡ್ಡಾಯವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಬೇಕು. ಮಹಿಳೆಯರಿಗೆ ಇರುವ ಮತದಾನ ಹಕ್ಕನ್ನು ಚಲಾಯಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಫ್ಯಾಶನ್ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥ ಜಾಕೀರ, ವಿಕಲಚೇತನರು ಪಾಲ್ಗೊಂಡಿದ್ದರು.

ಏಪ್ರಿಲ್ 20ರಂದು ಮತದಾನದ ಜಾಗೃತಿಗಾಗಿ ಮ್ಯಾರಾಥಾನ್ ಓಟ
*********************************************************
ಕಲಬುರಗಿ,ಏ.16.(ಕ.ವಾ)-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಶನಿವಾರ ಏಪ್ರಿಲ್ 20 ರಂದು ಕಲಬುರಗಿ ನಗರದಲ್ಲಿ ಮ್ಯಾರಾಥಾನ್ ಓಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಪಿ. ರಾಜಾ ಅವರು ತಿಳಿಸಿದ್ದಾರೆ.
ಈ ಮ್ಯಾರಾಥಾನ್ ಓಟವು ಅಂದು ಬೆಳಿಗ್ಗೆ 6.30 ಗಂಟೆಗೆ ಕಲಬುರಗಿ ನಗರೇಶ್ವರ ಶಾಲೆಯಿಂದ ಪ್ರಾರಂಭವಾಗಿ, ಜಗತ್ ವೃತ ಮೂಲಕ ಮಿನಿ ವಿಧಾನಸೌಧಕ್ಕೆ ಆಗಮಿಸಿ ಮುಕ್ತಾಯಗೊಳ್ಳಲಿದೆ. ಈ ಮ್ಯಾರಾಥಾನ್ ಓಟದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಶಾಲಾ-ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದ್ದಾರೆ.
ಈ ಮ್ಯಾರಾಥಾನ್ ಓಟದ ಸ್ಪರ್ಧೆಯಲ್ಲಿ ಪುರುಷರು, ಮಹಿಳೆಯರು ಹಾಗೂ 15 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ. ಈ ಮೂರು ಪ್ರತ್ಯೇಕ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನ ಹಾಗೂ ಪ್ರತಿ ವಿಭಾಗಗಳಲ್ಲಿ ಹತ್ತು ಸ್ಪರ್ಧಾಳುಗಳಿಗೆ ಸಮಾಧಾನಕರ ನಗದು ಬಹುಮಾನ ವಿತರಿಸಲಾಗುವುದು. 15 ವರ್ಷದೊಳಗಿನ ಮಕ್ಕಳ ವಿಭಾಗಗಳಲ್ಲಿ ಸ್ಪರ್ಧಿಸುವ ಮಕ್ಕಳು ತಮ್ಮ ಜನ್ಮ ದಿನಾಂಕದ ದಾಖಲೆಯನ್ನು ಕಡ್ಡಾಯವಾಗಿ ತರಬೇಕು ಎಂದು ತಿಳಿಸಿದ್ದಾರೆ.

ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ
***************************************
ಕಲಬುರಗಿ,ಏ.16.(ಕ.ವಾ)-ಶಹಾಬಾದ ರೈಲು ನಿಲ್ದಾಣದಲ್ಲಿ 2019ರ ಮಾರ್ಚ್ 22 ರಂದು ಪತ್ತೆಯಾದ ಸುಮಾರು ಒಂದು ದಿನದ ಹೆಣ್ಣು ಮಗುವನ್ನು ಮಕ್ಕಳ ಸಹಾಯವಾಣಿ ಮಾರ್ಗದರ್ಶಿ ಸಂಸ್ಥೆಯವರು ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿರುತ್ತಾರೆ. ನಂತರ ಈ ಮಗುವಿನ ಪಾಲನೆ ಹಾಗೂ ಪೋಷಣೆಗಾಗಿ 2019ರ ಮಾರ್ಚ್ 28ರಂದು ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶುಗೃಹದಲ್ಲಿ ದಾಖಲಿಸಲಾಗಿದೆ.
ಈ ಹೆಣ್ಣು ಮಗು ಬಿಳುಪು ಬಣ್ಣ ಹೊಂದಿದ್ದು, ಹೆಣ್ಣು ಮಗುವಿನ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 30 ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಅಧೀಕ್ಷಕರು, ಅಮೂಲ್ಯ ಶಿಶು ಗೃಹ, ಆಳಂದ ರಸ್ತೆ ಕಲಬುರಗಿ ಕಚೇರಿಗೆ ಭೇಟಿ ನೀಡಲು ಕೋರಿದೆ. ತಪ್ಪಿದಲ್ಲಿ ಕಾನೂನು ಪ್ರಕಾರ ಈ ಹೆಣ್ಣು ಮಗುವಿನ ದತ್ತು ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಮೂಲ್ಯ ಶಿಶುಗೃಹದ ಅಧೀಕ್ಷಕರನ್ನು ಹಾಗೂ ದೂರವಾಣಿ ಸಂಖ್ಯೆ 08472-265588ನ್ನು ಸಂಪರ್ಕಿಸಬೇಕೆಂದು ಕೋರಿದ್ದಾರೆ.

ಹೀಗಾಗಿ ಲೇಖನಗಳು News and photo Date: 16-4-2019
ಎಲ್ಲಾ ಲೇಖನಗಳು ಆಗಿದೆ News and photo Date: 16-4-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 16-4-2019 ಲಿಂಕ್ ವಿಳಾಸ https://dekalungi.blogspot.com/2019/04/news-and-photo-date-16-4-2019.html
0 Response to "News and photo Date: 16-4-2019"
ಕಾಮೆಂಟ್ ಪೋಸ್ಟ್ ಮಾಡಿ