NEWS AND PHOTO DATE: 18--4--2019

NEWS AND PHOTO DATE: 18--4--2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 18--4--2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 18--4--2019
ಲಿಂಕ್ : NEWS AND PHOTO DATE: 18--4--2019

ಓದಿ


NEWS AND PHOTO DATE: 18--4--2019

ಗುಲಬರ್ಗಾ ಲೋಕಸಭೆ,
***********************
ಚಿಂಚೋಳಿ ವಿ.ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆ ಬಹುತೇಕ ಪೂರ್ಣ
********************************************************
ಗುಲಬರ್ಗಾ ವಿವಿಯಲ್ಲಿ ಜಿಲ್ಲಾಧಿಕಾರಿಗಳಿಂದ ಕೌಟಿಂಗ್ ಕೇಂದ್ರಗಳ ವೀಕ್ಷಣೆ
ಕಲಬುರಗಿ,ಏ.18(ಕ.ವಾ.)-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರ ಹಾಗೂ 42-ಚಿಂಚೋಳಿ (ಪ.ಜಾ. ಮೀಸಲು) ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ವೆಂಕಟೇಶ್‍ಕುಮಾರ್ ಅವರು ಗುರುವಾರ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ತೆರಳಿ ಮತ ಎಣಿಕಾ ಕಾರ್ಯಗಳ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಕೌಂಟಿಂಗ್ ಕೇಂದ್ರಗಳಲ್ಲಿ ಟೇಬಲ್ ವ್ಯವಸ್ಥೆ, ಮತ ಎಣಿಕಾ ಕೇಂದ್ರಗಳಿಗೆ ಬ್ರಾಡ್‍ಬ್ಯಾಂಡ್ ನೆಟ್‍ವರ್ಕ್, ಎನ್‍ಐಸಿ ಸಂಪರ್ಕ, ಸಿಸಿಟಿವಿ, ಬ್ಯಾರಿಕೇಡ್ ವ್ಯವಸ್ಥೆ, ಅಧಿಕಾರಿಗಳು, ಅಭ್ಯರ್ಥಿಗಳ ಹಾಗೂ ಕೌಟಿಂಗ್ ಏಜೆಂಟರು ಮತ ಎಣಿಕಾ ಕೇಂದ್ರಕ್ಕೆ ಒಳ ಪ್ರವೇಶಿಸುವ ಪ್ರತ್ಯೇಕ ಮಾರ್ಗ, ಸ್ಟ್ರಾಂಗ್ ರೂಂ ನಿಂದ ಮತ ಎಣಿಕಾ ಕೇಂದ್ರಕ್ಕೆ ಮತಯಂತ್ರಗಳನ್ನು ತರುವ ವ್ಯವಸ್ಥೆಗಳ ಬಗ್ಗೆ ಕೌಟಿಂಗ್ ಕೇಂದ್ರಗಳ ನಿರ್ಮಾಣದ ಉಸ್ತುವಾರಿ ಕೈಗೊಂಡಿರುವ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಅಮೀನ್ ಮುಖ್ತಾರ್ ಅವರಿಂದ ಇಂಚಿಂಚೂ ಮಾಹಿತಿಯನ್ನು ಪಡೆದರು.
ಪರೀಕ್ಷಾ ವಿಭಾಗದ ಹಾಲ್‍ನಲ್ಲಿ ಚಿತ್ತಾಪುರ. ಕಲಬುರಗಿ ಗ್ರಾಮೀಣ ಹಾಗೂ ಜೇವರ್ಗಿ ವಿಧಾನಸಭಾ ಕ್ಷೇತ್ರ, ಒಳಾಂಗಣ ಕ್ರೀಡಾಂಗಣದಲ್ಲಿ ಕಲಬುರಗಿ ಉತ್ತರ ಮತ್ತು ಗುರುಮಠಕಲ್ ಮತಕ್ಷೇತ್ರ, ಗಣಿತಶಾಸ್ತ್ರ ವಿಭಾಗದದಲ್ಲಿ ಅಫ್ಜಲಪುರ, ಸಸ್ಯಶಾಸ್ತ್ರ ವಿಭಾಗದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರ ಹಾಗೂ ಕನ್ನಡ ಅಧ್ಯಯನ ಕೇಂದ್ರ ಸಭಾಂಗಣ(ನೆಲಮಹಡಿ)ದಲ್ಲಿ ಸೇಡಂ ಕ್ಷೇತ್ರಗಳ ಮತಗಳ ಎಣಿಕೆ ನಡೆಯಲಿದೆ.
ಲೋಕಸಭಾ ಚುನಾವಣೆಯ ಮತಗಳನ್ನು ಆಯಾ ವಿಧಾನಸಭಾವಾರು ಕೌಟಿಂಗ್ ಕೇಂದ್ರ ತೆರೆದು ಎಣಿಕೆ ಮಾಡುತ್ತಿದ್ದು, ಈಗಾಗಲೇ ಆಯಾ ಕ್ಷೇತ್ರದ ಕೌಟಿಂಗ್ ಕೇಂದ್ರಗಳಿಗೆ ಹೊಂದಿಕೊಂಡಂತೆ ಸ್ಟ್ರಾಂಗ್ ರೂಂಗಳ ಸಿದ್ಧಗೊಳಿಸಲಾಗಿದೆ. ಕೊಠಡಿಗಳಿಗೆ ಕಿಟಕಿ ಮುಂತಾದವುಗಳನ್ನು ಇಟ್ಟಿಗೆಗಳ ಮೂಲಕ ಮುಚ್ಚಿ ಭದ್ರಪಡಿಸಿರುವುದನ್ನು ಖುದ್ದು ವೀಕ್ಷಿಸಿದ ಜಿಲ್ಲಾ ಚುನಾವಣಾಧಿಕಾರಿಗಳು ಆಗಬೇಕಾದ ಕೆಲಸಗಳನ್ನು ತುರ್ತಾಗಿ ಮುಗಿಸುವಂತೆ ಸೂಚಿಸಿದರು.
ಏನೇ ಸಣ್ಣ-ಪುಟ್ಟ ಕೆಲಸಗಳಿದ್ದರೂ ಏಪ್ರಿಲ್ 22 ರೊಳಗೆ ಮುಗಿಸಬೇಕು. ಏಪ್ರಿಲ್ 22ರಂದು ಸಂಜೆ ಮತ ಎಣಿಕಾ ಕೇಂದ್ರಗಳನ್ನು ಪ್ಯಾರಾ ಮಿಲಿಟರಿ ಪಡೆ ವಶಕ್ಕೆ ನೀಡಿದರೆ, ಯಾವುದೇ ಕೆಲಸಗಳ ನಡೆಸಲು ಅವಕಾಶ ಸಿಗುವುದಿಲ್ಲ. ಹಾಗಾಗಿ ಶೀಘ್ರ ಮುಗಿಸಬೇಕು ಎಂದು ಸೂಚಿಸಿದ ಅವರು, ಅಧಿಕಾರಿಗಳು ಪ್ರತಿದಿನ ಬಂದು ಸಿದ್ಧತೆಗಳನ್ನು ಪರಿಶೀಲಿಸಬೇಕು ಎಂದು ಅವರು ಲೋಕೋಪಯೋಗಿ ಇಲಾಖೆ ಇಂಜಿಯರ್‍ಗಳಿಗೆ ತಿಳಿಸಿದರು.
42-ಚಿಂಚೋಳಿ (ಪ.ಜಾ. ಮೀಸಲು) ವಿಧಾನಸಭಾ ಕ್ಷೇತ್ರ: ಚಿಂಚೋಳಿ (ಪ.ಜಾ. ಮೀಸಲು) ವಿಧಾನಸಭಾ ಕ್ಷೇತ್ರದ ಮತದಾನ ಮೇ 19 ರಂದು ನಡೆದು ಅಂದು ಸಂಜೆ ಕನ್ನಡ ಅಧ್ಯಯನ ಕೇಂದ್ರ ಸಭಾಂಗಣದ ಮೊದಲ ಮಹಡಿಯ ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳನ್ನು ತಂದಿಡುವ ವ್ಯವಸ್ಥೆ ಮಾಡಬೇಕು. ಮೇ 23 ರಂದು ಮತಗಳ ಎಣಿಕೆ ನಡೆಯಬೇಕು. ಹಾಗೆಯೇ ಮೇ 23ರಂದೇ ಕನ್ನಡ ಅಧ್ಯಯನ ಕೇಂದ್ರ ಸಭಾಂಗಣದ ನೆಲಮಹಡಿಯಲ್ಲಿ ಲೋಕಸಭಾ ಚುನಾವಣೆಯ ಸೇಡಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಳ ಎಣಿಕೆ ನಡೆಯಲಿದೆ. ಹಾಗಾಗಿ ಪ್ರತ್ಯೇಕ ಬ್ಯಾರಿಕೇಡ್ ನಿರ್ಮಿಸುವ ಮೂಲಕ ಸುಗಮ ಮತೆಣಿಕೆಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಪ್ರೊ.ಡಿ.ಎಂ. ಮದರಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಸ್ನೇಹಲ್ ಸುಧಾಕರ ಲೋಖಂಡೆ, ಎನ್‍ಐಸಿ ಕೇಂದ್ರದ ಅಧಿಕಾರಿ ಸುಧೀಂದ್ರ ಅವಧಾನಿ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಮಹ್ಮದ್ ಕಲೀಮುದ್ದೀನ್, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ (ವಿದ್ಯುತ್) ಭೀಮರಾವ ಗೋಗಿ, ಬಿಎಸ್‍ಎನ್‍ಎಲ್ ಸಬ್ ಡಿವಿಜನ್ ಇಂಜಿನಿಯರ್ ಎಂ.ಎಸ್. ಮಳಖೇಡ, ಶಿಷ್ಟಾಚಾರ ತಹಸೀಲ್ದಾರ್ ಪ್ರಕಾಶ್ ಚಿಂಚೋಳಿಕರ ಮುಂತಾದವರು ಇದ್ದರು.
ಲೋಕಸಭಾ ಚುನಾವಣೆ:
*********************
ಮತಗಟ್ಟೆ ಕೇಂದ್ರಗಳ ಸುತ್ತಲೂ ನಿರ್ಬಂಧಿತ ಪ್ರದೇಶ ಘೋಷಣೆ
*****************************************************
ಕಲಬುರಗಿ,ಏಪ್ರಿಲ್.18.(ಕ.ವಾ.)-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಇದೇ ಏಪ್ರಿಲ್ 23ರ ಬೆಳಗಿನ 6 ರಿಂದ ಸಂಜೆ 6 ಗಂಟೆಯವರೆಗೆ ಅಥವಾ ಮತಗಟ್ಟೆಯಲ್ಲಿ ಮತದಾನವು ಮುಕ್ತಾಯಗೊಂಡು ಮತಗಟ್ಟೆ ಸಿಬ್ಬಂದಿಗಳು ಮತಗಟ್ಟೆಯಿಂದ ತೆರಳುವವರೆಗೆ ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಸಿ.ಆರ್.ಪಿ.ಸಿ. ಸೆಕ್ಷನ್ 144, 144ಎ ರನ್ವಯ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಮೆರವಣಿಗೆ ಅಥವಾ 5 ಜನರಿಂಗಿತ ಹೆಚ್ಚು ಜನ ಸೇರುವುದು, ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು, ಪ್ರತಿಕೃತಿ ಪ್ರದರ್ಶನ, ದಹನ ಮಾಡುವುದನ್ನು ಮತ್ತು ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಹಾಗೂ ಸಾರ್ವಜನಿಕರ ಗಾಂಭಿರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ಚುನಾವಣಾ ಕರ್ತವ್ಯನಿರತ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ, ನೇಮಕಗೊಂಡಿರುವ ಚುನಾವಣಾ ಏಜೆಂಟ್ಸ್‍ಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ. ಈ ಆದೇಶವು ಅಂತ್ಯಕ್ರಿಯೇ ಮೆರವಣಿಗೆ ಮತ್ತು ಇನ್ನಿತರ ಪ್ರಾಧಿಕಾರದಿಂದ ಅನುಮತಿ ಪಡೆದ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನಿನನ್ವಯ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಏಪ್ರಿಲ್ 23ರಂದು ಜಾತ್ರೆ ಹಾಗೂ ಸಂತೆ ನಿಷೇಧ
*****************************************
ಕಲಬುರಗಿ,ಏಪ್ರಿಲ್.18.(ಕ.ವಾ.)-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅನುಕೂಲವಾಗುವಂತೆ ಕರ್ನಾಟಕ ಪಂಚಾಯತ್‍ರಾಜ್ ಅಧಿನಿಯಮ 1993ರ ನಿಯಮ 36 ರಡಿಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಮತದಾನದ ದಿನದಂದು ನಡೆಯುವ ಜಾತ್ರೆ, ದನಗಳ ಸಂತೆ, ಉತ್ಸವಗಳು ಹಾಗೂ ಉರುಸ ಮುಂತಾದವುಗಳನ್ನು ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಏಪ್ರಿಲ್ 21 ರ ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರ ನಿರ್ಬಂಧ
**********************************************************
ಕಲಬುರಗಿ,ಏಪ್ರಿಲ್.18.(ಕ.ವಾ.)-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ 2019ರ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರವು ಇದೇ ಏಪ್ರಿಲ್ 21ರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಯಾವುದೇ ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಸ್ಪರ್ಧಿಸಿರುವ ಅಭ್ಯರ್ಥಿಗಳು ಅವರ ಚುನಾವಣಾ ಏಜೆಂಟ್‍ಗಳು ಮತ್ತು ಬೆಂಬಲಿಗರು ಬಹಿರಂಗ ಪ್ರಚಾರ ನಡೆಸುವುದನ್ನು ನಿರ್ಬಂಧಿಸಿ ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಮನೆ ಮನೆಗೆ ತೆರಳಿ ಮತಯಾಚಿಸುವುದನ್ನು ಮತ್ತು ಕರಪತ್ರಗಳನ್ನು ವಿತರಿಸಲು ನಿರ್ಬಂಧ ಇರುವುದಿಲ್ಲ. ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಈ ಅವಧಿಯಲ್ಲಿ ಕ್ಷೇತ್ರದ ಹೊರಗಿನಿಂದ ಬಂದಂತಹ ಹಾಗೂ ಆ ಕ್ಷೇತ್ರದ ಮತದಾರರಲ್ಲದ ರಾಜಕೀಯ ಕಾರ್ಯಕರ್ತರು ಇತರೆ ಕ್ಷೇತ್ರದಲ್ಲಿ ಉಳಿಯದೇ ತಮ್ಮ ಮತಕ್ಷೇತ್ರದ ವಾಪ್ತಿಯಲ್ಲಿಯೇ ವಾಸ್ತವ್ಯ ಮಾಡಬೇಕು. ಈ ಆದೇಶವು ಏಪ್ರಿಲ್ 21ರ ಸಂಜೆ 6 ಗಂಟೆಯಿಂದ ಏಪ್ರಿಲ್ 24ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರುತ್ತದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಎಲ್ಲ ಕಾರ್ಮಿಕರಿಗೆ ಏಪ್ರಿಲ್ 23ರಂದು ವೇತನ ಸಹಿತ ರಜೆ ನೀಡಲು ಸೂಚನೆ
*****************************************************************
ಕಲಬುರಗಿ,ಏಪ್ರಿಲ್.18.(ಕ.ವಾ.)-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ 2019ರ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಮತದಾನ ದಿನದಂದು ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ರ ಪ್ರಕಾರ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಸಹಿತ ರಜೆ ನೀಡಿ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕೆಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಮಿಕರಿಗೆ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೇ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದೇ ಇದ್ದಲ್ಲಿ ಅಂತಹ ಮಾಲೀಕರ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾಪ್ರತಿನಿಧ್ಯ ಕಾಯ್ದೆಯ ಕಲಂ 135(ಬಿ) ಉಲ್ಲಂಘನೆಗಾಗಿ ಕಾನೂನಿನ ರೀತ್ಯ ಕ್ರಮ ಜರುಗಿಸಲಾಗುವುದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ. 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸಿದ್ದಲ್ಲಿ ಶೇ.5ರಷ್ಟು ರಿಯಾಯಿತಿ
***********************************************************
ಕಲಬುರಗಿ,ಏ.18.(ಕ.ವಾ.)-ಕಲಬುರಗಿ ನಗರ ವ್ಯಾಪ್ತಿಯಲ್ಲಿ ಬರುವ ವಿವಿಧ ಆಸ್ತಿಗಳ ಮಾಲೀಕರು 2019-20ನೇ ಸಾಲಿನ ಆಸ್ತಿ ತೆರಿಗೆ ಮೇಲೆ 5ರಷ್ಟು ರಿಯಾಯಿತಿ ಸೌಲಭ್ಯ ಪಡೆಯಲು ಇದೇ ಏಪ್ರಿಲ್ 30 ಕೊನೆಯ ದಿನವಾಗಿದೆ. ಕೇವಲ 11 ದಿನಗಳ ಕಾಲ ಮಾತ್ರ ಬಾಕಿ ಉಳಿದಿದ್ದು, ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಮಾಲೀಕರು ಆಸ್ತಿ ತೆರಿಗೆ ಪಾವತಿಸಿ ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಪ್ರಕಾಶ ಸಿ. ಹರಕುಡೆ ಅವರು ಕೋರಿದ್ದಾರೆ.
ಆಸ್ತಿ ತೆರಿಗೆ ಪಾವತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಮಹಾನಗರ ಪಾಲಿಕೆಯ ವಲಯ ಕಚೇರಿ-3ರ ಆವರಣ ಹಾಗೂ ಖರ್ಗೆ ಪೆಟ್ರೋಲ್ ಬಂಕ್ ಹತ್ತಿರದ ಹೌಸಿಂಗ್ ಬೋರ್ಡ್ ಕಾಂಪ್ಲೆಕ್ಸ್‍ನಲ್ಲಿರುವ ಗುಲಬರ್ಗಾ ಒನ್ ಶಾಖೆಗಳಲ್ಲಿ ಹಾಗೂ ಮಹಾನಗರ ಪಾಲಿಕೆಯ ಹೊಸ ಕಟ್ಟಡದ ಆವರಣದಲ್ಲಿರುವ ಇಂಡಿಯನ್ ಬ್ಯಾಂಕ್‍ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಆಸ್ತಿಗಳ ಮಾಲೀಕರು 2019ರ ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸಿ ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿಯಿಂದ ಹೈದ್ರಾಬಾದಿಗೆ ರಾಜಹಂಸ ನೂತನ ಸಾರಿಗೆ ಬಸ್ ಸೌಲಭ್ಯ
*******************************************************************
ಕಲಬುರಗಿ,ಏ.18.(ಕ.ವಾ.)-ಸಾರ್ವಜನಿಕರ ಹಾಗೂ ಪ್ರಯಾಣಿಕರ ಬೇಡಿಕೆ ಮೇರೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿ ವಿಭಾಗದ ಘಟಕ-1 ರಿಂದ ಕಲಬುರಗಿಯಿಂದ ಹೈದರಾಬಾದಿಗೆ ಏಪ್ರಿಲ್ 17ರಿಂದ ನೂತನವಾಗಿ ರಾಜಹಂಸ ಬಸ್‍ನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜ್ ಎಲ್. ಶಿರಾಲಿ ಅವರು ತಿಳಿಸಿದ್ದಾರೆ.
ಈ ರಾಜಹಂಸ ಬಸ್ ವ್ಹಯಾ ಹುಮನಾಬಾದ, ಜಹೀರಾಬಾದ್ ಮಾರ್ಗವಾಗಿ ಹೈದ್ರಾಬಾದಿಗೆ ಪ್ರಯಾಣಿಸಲಿದೆ. ಕಲಬುರಗಿ ಬಸ್ ನಿಲ್ದಾಣದಿಂದ ಪ್ರತಿದಿನ ಬೆಳಿಗ್ಗೆ 5.30 ಗಂಟೆಗೆ ಹೊರಟು ಹೈದ್ರಾಬಾದ್ ಬಿಸ್ ನಿಲ್ದಾಣಕ್ಕೆ ಬೆಳಿಗ್ಗೆ 11.45 ಗಂಟೆಗೆ ತಲುಪಲಿದೆ. ಸಾರ್ವಜನಿಕರು ಹಾಗೂ ಪ್ರಯಾಣಿಕರು ಇದರ ಸದುಪಯೋಗ ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಟ್ಟುಗೋಲು ಹಾಕಿಕೊಂಡ 15 ವಾಹನಗಳ ಹರಾಜು
***********************************************
ಕಲಬುರಗಿ,ಏ.18.(ಕ.ವಾ.)-ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಕಾಯ್ದೆಯ ಪ್ರಕಾರ ತೆರಿಗೆ ಸಂದಾಯ ಮಾಡದಿರುವ ಹಾಗೂ ವಿವಿಧ ಅಪರಾಧಗಳಿಗಾಗಿ ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಂಡಿರುವ ಒಟ್ಟು 15 ವಾಹನಗಳ ಬಹಿರಂಗ ಹರಾಜು 2019ರ ಮೇ 14ರಂದು ಬೆಳಗಿನ 11.30 ಗಂಟೆಗೆ ಕಲಬುರಗಿ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಜರುಗಲಿದೆ ಎಂದು ಉಪ ಸಾರಿಗೆ ಆಯುಕ್ತರು ತಿಳಿಸಿದ್ದಾರೆ.
ಹರಾಜು ಮಾಡುವ ವಾಹನಗಳ ವಿವರ ಇಂತಿದೆ. ಮ್ಯಾಕ್ಸಿಕ್ಯಾಬ್-09, ಜೆಸಿಬಿ-01, ಎಲ್‍ಎಂವಿ (ಸನ್ನಿ ನಿಸಾನ್)-01, ಎಲ್‍ಎಂವಿ (ಟಾಟಾ ಸಫಾರಿ)-01, ಟಾಟಾ ಮ್ಯಾಜಿಕ್-01, ಲ್ಯಾಂಡ್ ರೋವರ್-01 ಹಾಗೂ ಎಲ್‍ಎಂವಿ (ಕಮಾಂಡರ್ ಜೀಪ್)-01. ಕರ್ನಾಟಕ ಮೋಟಾರು ವಾಹನ ತೆರಿಗೆ ನಿಯಮಗಳ ನಿಯಮ 27ಎ ಪ್ರಕಾರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಹರಾಜಿನಲ್ಲಿ ಭಾಗವಹಿಸುವರು ಮುಂಗಡ ಠೇವಣಿ 5,000 ರೂ.ಗಳ ಸಂದಾಯ ಮಾಡಬೇಕು. ವಾಹನಗಳ ವಿವರ, ವಾಹನ ನಿಲುಗಡೆ ಸ್ಥಳದ ವಿವರ, ಹರಾಜು ನಡೆಯುವ ಸ್ಥಳ, ಮಾದರಿ, ಷರತ್ತು, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಪ್ರಾದೇಶಿಕ ಸಾರಿಗೆ ಉಪ ಆಯುಕ್ತರ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.




ಹೀಗಾಗಿ ಲೇಖನಗಳು NEWS AND PHOTO DATE: 18--4--2019

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 18--4--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 18--4--2019 ಲಿಂಕ್ ವಿಳಾಸ https://dekalungi.blogspot.com/2019/04/news-and-photo-date-18-4-2019.html

Subscribe to receive free email updates:

0 Response to "NEWS AND PHOTO DATE: 18--4--2019"

ಕಾಮೆಂಟ್‌‌ ಪೋಸ್ಟ್‌ ಮಾಡಿ