News and photo Date: 20-04-2019

News and photo Date: 20-04-2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 20-04-2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 20-04-2019
ಲಿಂಕ್ : News and photo Date: 20-04-2019

ಓದಿ


News and photo Date: 20-04-2019

ಕಲಬುರಗಿ ವಿಭಾಗದ 95600 ವಿಕಲಚೇತನ
***************************************
ಮತದಾರರಿಗೆ ಮತದಾನ ಮಾಡಲು ವ್ಯವಸ್ಥೆ
*************************************
ಕಲಬುರಗಿ,ಏ.20.(ಕ.ವಾ)-ವಿಕಲಚೇತನ ಮತದಾರರು ಮತದಾನದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕಲಬುರಗಿ ವಿಭಾಗದ ಒಟ್ಟು 95600 ವಿಕಲಚೇತನ ಮತದಾರರನ್ನು ಮತಗಟ್ಟೆಗಳಿಗೆ ಕರೆತರುವ ವ್ಯವಸ್ಥೆ ಮಾಡಲಾಗಿದೆ. ವಿಕಲಚೇತನ ಮತದಾರರು ಈ ವ್ಯವಸ್ಥೆಯ ಸದುಪಯೋಗ ಪಡೆದು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಅಕ್ಸೆಸಿಬಿಲಿಟಿ ಅಬ್ಸರ್ವರ್ ಸುಬೋದ ಯಾಧವ ಮನವಿ ಮಾಡಿದ್ದಾರೆ.
ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳ ಜಿಲ್ಲಾ ಚುನಾವಣಾಧಿಕಾರಿಗಳ ವಿಕಲಚೇತನ ಮತದಾರರನ್ನು ಏಪ್ರಿಲ್ 23 ಮತದಾನದಂದು ಮತಗಟ್ಟೆಗಳಿಗೆ ಸರ್ಕಾರ ವ್ಯವಸ್ಥೆ ಮಾಡಿರುವ ವಾಹನಗಳ ಮೂಲಕ ಕರೆತರುವ ವ್ಯವಸ್ಥೆ ಮಾಡಿದ್ದು, ಇದಕ್ಕಾಗಿ ವಿಭಾಗದಲ್ಲಿ ಒಟ್ಟು 3807 ವಾಹನಗಳ ವ್ಯವಸ್ಥೆ ಮಾಡಿದೆ. ವಿಕಲಚೇತನರಿಗೆ ಸಹಾಯ ಮಾಡಲು ಒಟ್ಟು 9152 ಸ್ವಯಂ ಸೇವಕರನ್ನು ಗುರುತಿಸಲಾಗಿದ್ದು, ಈಗಾಗಲೇ ಆಯಾ ಪ್ರದೇಶದ ಸ್ವಯಂ ಸೇವಕರ ದೂರವಾಣಿ ಸಂಖ್ಯೆಗಳ ಮಾಹಿತಿಯನ್ನು ಆಯಾ ಪ್ರದೇಶದಲ್ಲಿರುವ ವಿಕಲಚೇತನರಿಗೆ ನೀಡಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ವಿಕಲಚೇತನ ಮತದಾರರನ್ನು ಮತಗಟ್ಟೆಗೆ ಕರೆತರುವ ಸಮರ್ಪಕ ವ್ಯವಸ್ಥೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ ವಿಭಾಗದಲ್ಲಿ ಒಟ್ಟು 10555 ಮತಗಟ್ಟೆಗಳಿದ್ದು, ಈ ಪೈಕಿ 10013 ಮತಗಟ್ಟೆಗಳ ವ್ಯಾಪ್ತಿಯಲ್ಲಿ ವಿಕಲಚೇತನ ಮತದಾರರು ನೋಂದಾಯಿಸಿಕೊಂಡಿದ್ದು, ಈ ಮತಗಟ್ಟೆಗಳಲ್ಲಿ ಗಾಲಿಕುರ್ಚಿ ವ್ಯವಸ್ಥೆ ಸಹಿತ ಮಾಡಲಾಗಿದೆ. ವಿಭಾಗದಲ್ಲಿರುವ ಒಟ್ಟು 95600 ವಿಕಲಚೇತನ ಮತದಾರರ ಪೈಕಿ 57401 ಪುರುಷ, 37804 ಮಹಿಳಾ ಹಾಗೂ 395 ಇತರೆ ವಿಕಲಚೇತನ ಮತದಾರರು ಇದ್ದಾರೆ. ಕಲಬುರಗಿ ವಿಭಾಗದಲ್ಲಿ 16 ಮತಗಟ್ಟೆಗಳಲ್ಲಿ ವಿಕಲಚೇತನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗುತ್ತಿದೆ. ಈ ಪೈಕಿ 9 ಮತಗಟ್ಟೆಗಳು ಕಲಬುರಗಿ ಜಿಲ್ಲೆಯಲ್ಲಿವೆ.
ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 14584 ವಿಕಲಚೇತನ ಮತದಾರರಿದ್ದು, ಈ ಪೈಕಿ 9439 ಪುರುಷ, 4918 ಮಹಿಳೆ ಹಾಗೂ 227 ಇತರೆ ವಿಕಚೇತನ ಮತದಾರರಿದ್ದಾರೆ. ಇವರನ್ನು ಮತಗಟ್ಟೆಗೆ ಕರೆತರಲು 1216 ವಾಹನದ ವ್ಯವಸ್ಥೆ ಮಾಡಲಾಗಿದ್ದು, 1750 ಸ್ವಯಂ ಸೇವಕರನ್ನು ನೇಮಿಸಲಾಗಿದೆ. ಮತಗಟ್ಟೆಗೆ ಆಗಮಿಸುವ ವಿಕಲಚೇತನರು ಮತದಾನ ಮಾಡಲು ಅನುಕೂಲ ಮಾಡಿಕೊಡಲು 2368 ಮತಗಟ್ಟೆಗಳಲ್ಲಿ ಗಾಲಿ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಎಲ್ಲ ಮತಗಟ್ಟೆಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳಾದ ರ್ಯಾಂಪ್, ಕುಡಿಯುವ ನೀರು, ನೆರಳು, ಶೌಚಾಲಯ, ವಿಕಲಚೇತನರಿಗಾಗಿ ಗಾಲಿ ಕುರ್ಚಿ, ಭೂತಗನ್ನಡಿ, ಬ್ರೈಲ್ ಮತಪತ್ರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವಿಕಲಚೇತನರಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬ್ರೈಲ್ ಲಿಪಿ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿತ್ತು. ವಿಕಲಚೇತನರಿಗೆ ವಿದ್ಯುನ್ಮಾನ್ ಮತಯಂತ್ರ ಹಾಗೂ ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರ ಕಲ್ಪಿಸಿರುವ ಈ ಎಲ್ಲ ಸವಲತ್ತುಗಳನ್ನು ಸದುಪಯೋಗಿಸಿಕೊಂಡು ವಿಕಲಚೇತನ ಮತದಾರರು ನೂರಕ್ಕೆ ನೂರು ಪ್ರತಿಶತ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ತಿಳಿಸಿದ್ದಾರೆ.
ಬೃಹತ್ ಮ್ಯಾರಾಥಾನ್ ಓಟದ ಮೂಲಕ ಮತದಾನದ ಜಾಗೃತಿ
ಕಲಬುರಗಿ,ಏ.20.(ಕ.ವಾ)-ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿಯು ಶನಿವಾರದಂದು ಕಲಬುರಗಿ ನಗರೇಶ್ವರ ಶಾಲೆಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮ್ಯಾರಾಥಾನ್ ಓಟವನ್ನು ಹಮ್ಮಿಕೊಳ್ಳುವ ಮೂಲಕ ಮತದಾನದ ಜಾಗೃತಿ ಮೂಡಿಸಿತು.
ಮ್ಯಾರಾಥಾನ್ ಓಟದಲ್ಲಿ ಮಕ್ಕಳು, ಹಿರಿಯರು ಸೇರಿದಂತೆ ಸುಮಾರು 400ಕ್ಕೂ ಹೆಚ್ಚು ನಾಗರಿಕರು ಪಾಲ್ಗೊಂಡಿದ್ದರು. ನಗರೇಶ್ವರ ಶಾಲೆಯಿಂದ ಪ್ರಾರಂಭವಾದ ಮ್ಯಾರಾಥಾನ್ ಓಟವು ಬಾಂಡೆ ಬಜಾರ, ಸುಪರ ಮಾರ್ಕೇಟ್, ಜಗತ್ ವೃತ್ತದ ಮೂಲಕವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಕ್ತಾಯಗೊಂಡಿತು.
ಮ್ಯಾರಾಥಾನ್ ಓಟದ ಸ್ಪರ್ಧೆಯಲ್ಲಿ ಪುರುಷರು, ಮಹಿಳೆಯರು ಹಾಗೂ 15 ವರ್ಷದೊಳಗಿನ ಮಕ್ಕಳ ವಿಭಾಗಗಳೆಂದು ವಿಂಗಡಿಸಲಾಗಿತ್ತು. ಈ ಮೂರು ಪ್ರತ್ಯೇಕ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 3000ರೂ. ನಗದು, ದ್ವಿತೀಯ ಸ್ಥಾನ ಪಡೆದವರಿಗೆ 2000ರೂ. ಗಳ ನಗದು ಮತ್ತು ತೃತೀಯ ಸ್ಥಾನ ಪಡೆದವರಿಗೆ 1000ರೂ.ಗಳ ನಗದು ಬಹುಮಾನ ಹಾಗೂ ಪ್ರತಿ ವಿಭಾಗಗಳಲ್ಲಿ ಹತ್ತು ಸ್ಪರ್ಧಾಳುಗಳಿಗೆ 500 ರೂ.ಗಳ ಸಮಾಧಾನಕರ ನಗದು ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.
ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಪಿ. ರಾಜಾ ಅವರು ನಗರೇಶ್ವರ ಶಾಲೆಯ ಹತ್ತಿರ ಮ್ಯಾರಾಥಾನ ಓಟಕ್ಕೆ ಚಾಲನೆ ನೀಡಿದರು ಹಾಗೂ ಬಹುಮಾನಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಹೋಂಗಾರ್ಡ್ ಕಮಾಂಡೆಂಟ್ ಸಂತೋಷ ಪಾಟೀಲ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭೀಮರಾವ ನಾಂದ್ರೆ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಲೋಕಸಭಾ ಚುನಾವಣೆ: 11 ದಾಖಲಾತಿಗಳಲ್ಲಿ ಒಂದು ತೋರಿಸಿ ಮತ ಚಲಾಯಿಸಿ
***********************************************************************
ಕಲಬುರಗಿ,ಏಪ್ರಿಲ್.20.(ಕ.ವಾ.)-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಇದೇ ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ ಕೆಳಕಂಡ 11 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ಈ ಚುನಾವಣೆ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 23ರಂದು ಬೆಳಗಿನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿಯನ್ನು ನಿಗದಿಪಡಿಸಿದೆ. ಈ ಬಾರಿ ವೋಟರ್ ಸ್ಲಿಪ್‍ನ್ನು ಗುರುತಿನ ಚೀಟಿಯಂದು ಪರಿಗಣಿಸುತ್ತಿಲ್ಲ. ಕಾರಣ ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರು ಮತದಾರರ ಗುರುತಿನ ಚೀಟಿ (ಎಪಿಕ್) ಕಾರ್ಡ ಅಥವಾ ತಮ್ಮ ಭಾವಚಿತ್ರವಿರುವ ಕೆಳಕಂಡ 11 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೊಂದು ದಾಖಲೆ ಒದಗಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಲಿಸಿದೆ. ಈ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
1) ಪಾಸ್‍ಪೋರ್ಟ್
2) ಡ್ರೈವಿಂಗ್ ಲೈಸೆನ್ಸ್
3) ರಾಜ್ಯ/ ಕೇಂದ್ರ ಸರ್ಕಾರ/ ಸಾರ್ವಜನಿಕ ಉದ್ಯಮಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡುವ
ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ
4) ಬ್ಯಾಂಕ್, ಕಿಸಾನ್ ಮತು ಅಂಚೆ ಕಚೇರಿಗಳು ನೀಡುವ ಭಾವಚಿತ್ರವುಳ್ಳ ಪಾಸ್ ಬುಕ್
5) ಪ್ಯಾನ್ ಕಾರ್ಡ್
6) ಎನ್‍ಪಿಆರ್ ಅಡಿ ಆರ್‍ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್
7) ಎನ್‍ಆರ್‍ಇಜಿ ಯೋಜನೆ ಅಡಿ ನೀಡಿರುವ ಭಾವಚಿತ್ರವುಳ್ಳ ಉದ್ಯೋಗ ಖಾತ್ರಿ ಜಾಬ್ ಕಾರ್ಡ್
8) ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್‍ಗಳು
9) ಭಾವಚಿತ್ರವುಳ್ಳ ಪಿಂಚಣಿ ಪಾವತಿ ಆದೇಶಗಳು
10) ಆಧಾರ ಕಾರ್ಡ್
11) ಸಂಸದರು, ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿ.
ಎಸ್.ಎಸ್.ಎಲ್.ಸಿ. ಉತ್ತರ ಪತ್ರಿಕೆಗಳ
************************************
ಮೌಲ್ಯಮಾಪನ: ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
**********************************************
ಕಲಬುರಗಿ.ಏ.20.(ಕ.ವಾ.)-ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆ-2019ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಇದೇ ಏಪ್ರಿಲ್ 10 ರಿಂದ ಏಪ್ರಿಲ್ 22ರವರೆಗೆ ಕಲಬುರಗಿ ನಗರದ ಒಟ್ಟು 10 ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನ ಕಾರ್ಯವು ಸುಗಮವಾಗಿ ನಡೆಸಲು ಅನುವಾಗುವಂತೆ ಮೌಲ್ಯಮಾಪನ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶÀದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕಲಬುರಗಿ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರು ಆದೇಶ ಹೊರಡಿಸಿದ್ದಾರೆ.
ಮೌಲ್ಯಮಾಪನ ಕೇಂದ್ರದಲ್ಲಿ ಮೌಲ್ಯಮಾಪನ ಸಿಬ್ಬಂದಿ ಹೊರತುಪಡಿಸಿ ಇತರೆ ಯಾವುದೇ ಖಾಸಗಿ ವ್ಯಕ್ತಿಯು ಮೌಲ್ಯಮಾಪನ ಕೇಂದ್ರದೊಳಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು ಹಾಗೂ ಮೌಲ್ಯಮಾಪನ ಕೇಂದ್ರದ ವ್ಯಾಪ್ತಿಯ 200 ಮೀಟರ್ ಪ್ರದೇಶವನ್ನು ನಿಷೇಧಿಸಿ ಅವರು ಆದೇಶ ಹೊರಡಿಸಿದ್ದಾರೆ.
ಲೋಕಸಭಾ ಚುನಾವಣೆ : ಮದ್ಯ ಮಾರಾಟ ನಿಷೇಧ
*********************************************
ಕಲಬುರಗಿ,ಮೇ.20.(ಕ.ವಾ.)-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 23ರಂದು ನಡೆಯುವ ಮತದಾನದ ಪ್ರಯುಕ್ತ ಏಪ್ರಿಲ್ 21 ರ ಸಂಜೆ 6 ಗಂಟೆಯಿಂದ ಏಪ್ರಿಲ್ 24 ರ ಬೆಳಿಗ್ಗೆ 6 ಗಂಟೆಯವರೆಗೆ ಹಾಗೂ ಮೇ 23 ರಂದು ನಡೆಯುವ ಮತ ಎಣಿಕೆ ಪ್ರಯುಕ್ತ ಮೇ 21 ರ ಸಂಜೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಎಲ್ಲ ತರಹದ ಮದ್ಯಪಾನ ಮಾರಾಟ, ವೈನ್‍ಶಾಫ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಮದ್ಯದ ವಹಿವಾಟುಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ-10 (ಬಿ) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯಮಾರಾಟ ನಿಷೇಧ ಆದೇಶ ಹೊರಡಿಸಲಾಗಿದೆ. ಚುನಾವಣೆಯು ಮುಕ್ತ ಹಾಗೂ ನಿಸ್ಪಕ್ಷಪಾತವಾಗಿ ನಡೆಸಲು ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಹಾಗೂ ಮತ ಎಣಿಕೆ ದಿನದಂದು ಸಂಪೂರ್ಣವಾಗಿ ಮದ್ಯಮಾರಾಟವನ್ನು ನಿಷೇಧಿಸಿ ಒಣ ದಿನಗಳೆಂದು ಘೋಷಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 25 ರಂದು ವಿಶೇಷ ಜನತಾ ನ್ಯಾಯಾಲಯ
********************************************
ಕಲಬುರಗಿ.ಏ.20.(ಕ.ವಾ.)-ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರಗಿ ಜಿಲ್ಲೆಯ ಮತ್ತು ತಾಲೂಕಿನ ಎಲ್ಲ ನ್ಯಾಯಾಲಯಗಳಲ್ಲಿ ಹಿರಿಯ ನಾಗರಿಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದೇ ಏಪ್ರಿಲ್ 25ರಂದು ವಿಶೇಷ ಜನತಾ ನ್ಯಾಯಾಲಯವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಈ ಜನತಾ ನ್ಯಾಯಾಲಯದಲ್ಲಿ ಹಿರಿಯ ನಾಗರಿಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ತೀರ್ಮಾನ ಕೈಗೊಳ್ಳಲಾಗುವುದು. ಹಿರಿಯ ನಾಗರಿಕರು ಸಂಬಂಧಪಟ್ಟ ತಮ್ಮ ಪ್ರಕರಣಗಳ ವಿವರಗಳನ್ನು ಏಪ್ರಿಲ್ 24ಕ್ಕಿಂತ ಮೊದಲು ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ತಿಳಿಸಿದ್ದಲ್ಲಿ ಅಥವಾ ಅರ್ಜಿ ಸಲ್ಲಿಸಿದ್ದಲ್ಲಿ ಏಪ್ರಿಲ್ 25ರಂದು ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯುವ ಜನತಾ ನ್ಯಾಯಾಲಯದಲ್ಲಿ ಈ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅನುಕೂಲವಾಗುತ್ತದೆ. ಸಾರ್ವಜನಿಕರು ಈ ವಿಶೇಷ ಜನತಾ ನ್ಯಾಯಾಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಏಪ್ರಿಲ್ 21ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
**************************************************
ಕಲಬುರಗಿ.ಏ.20.(ಕ.ವಾ.)-ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಹಿರಿಯ ನಾಗರಿಕರ ಸಂಘ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವುಗಳ
ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಭಾನುವಾರ ಏಪ್ರಿಲ್ 21ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಹಳೆಯ ಆರ್.ಟಿ.ಓ. ಆಫೀಸ್ ಹತ್ತಿರದ ರಾಜಾಪುರ ರಸ್ತೆಯ ಜಿಲ್ಲಾ ಹಿರಿಯ ನಾಗರಿಕರ ಸಂಘದ ಸೌಹಾರ್ಧ ಕ್ಯಾಂಪಸ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಜಿ.ಆರ್ ಶೆಟ್ಟರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಹಿರಿಯ ನಾಗರಿಕ ಸಂಘದ ಅಧ್ಯಕ್ಷ ಎಸ್.ಎಸ್ ಹೀರಾಪೂರ ಅಧ್ಯಕ್ಷತೆ ವಹಿಸುವರು. ನ್ಯಾಯವಾದಿ ಸಂಘದ ಅಧ್ಯಕ್ಷ ಆರ್.ಕೆ ಹಿರೇಮಠ, ಶ್ರೀರಕ್ಷೆ ಸೇವಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ನ್ಯಾಯವಾದಿ ಎಂ.ಎಸ್ ಜಗದೀಶ, ಜಿಲ್ಲಾ ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷ ಡಾ ಅಂಬಾರಾವ ಉಪಳಾಂವಕರ್ ಮುಖ್ಯ ಅತಿಥಿಗಳಾಗಿ ಹಾಗೂ ನ್ಯಾಯವಾದಿಗಳಾದ ಸರಸಿಜಾ ರಾಜನ್, ನಾಗೇಂದ್ರಪ್ಪ ಎಸ್.ಪೊಲೀಸ್ ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಿಂದ ಬೀದರಿಗೆ ವಿಶೇಷ ರೈಲು
************************************************************
ಕಲಬುರಗಿ,ಏ.20.(ಕ.ವಾ)-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ಬೆಂಗಳೂರಿನಿಂದ ಆಗಮಿಸುವ ಮತದಾರರಿಗೆ ಅನುಕೂಲ ಮಾಡಿಕೊಡಲು ವಿಶೇಷ ರೈಲಿನ ವ್ಯವಸ್ಥೆ ಮಾಡಿದೆ ಎಂದು ಸೋಲಾಪುರ ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ತಿಳಿಸಿದ್ದಾರೆ.
ಚುನಾವಣಾ ವಿಶೇಷ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಹೊರಟು ಬೀದರ ಹಾಗೂ ಬೀದರದಿಂದ ಯಶವಂತಪುರ ರೈಲು ನಿಲ್ದಾಣವರೆಗೆ ಪ್ರಯಾಣಿಸುವುದು. ಏಪ್ರಿಲ್ 22ರಂದು ಸಾಯಂಕಾಲ 6 ಗಂಟೆಗೆ ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಡುವ ವಿಶೇಷ ರೈಲು ಏಪ್ರಿಲ್ 23ರಂದು ಬೆಳಗಿನ 4.30 ಗಂಟೆಗೆ ಕಲಬುರಗಿ ಹಾಗೂ ಬೆಳಗಿನ 6.30 ಗಂಟೆಗೆ ಬೀದರಗೆ ತಲುಪುವುದು. ಈ ವಿಶೇಷ ರೈಲು ಏಪ್ರಿಲ್ 23ರಂದು ಸಾಯಂಕಾಲ 7 ಗಂಟೆಗೆ ಬೀದರನಿಂದ ಹೊರಟು ಕಲಬುರಗಿಗೆ ರಾತ್ರಿ 9 ಗಂಟೆಗೆ ಆಗಮಿಸಿ ಏಪ್ರಿಲ್ 24ರಂದು ಬೆಳಗಿನ 8 ಗಂಟೆಗೆ ಯಶವಂತಪುರ ರೈಲು ನಿಲ್ದಾಣಕ್ಕೆ ತಲುಪುವುದು. ವಿಶೇಷ ರೈಲು ಒಟ್ಟು 18 ಬೋಗಿಗಳನ್ನು ಹೊಂದಿದ್ದು, ನಾಲ್ಕು ಹವಾ ನಿಯಂತ್ರಿತ, 12 ಸ್ಲೀಪರ್ ಹಾಗೂ 2 ಸಾಮಾನ್ಯ ಬೋಗಿಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಏ. 21ಕ್ಕೆ ಬಹಿರಂಗ ಪ್ರಚಾರ ಅಂತ್ಯ ಹಿನ್ನಲೆ:
***************************************
ಮುದ್ರಣ ಮಾಧ್ಯಮದಲ್ಲಿ ಜಾಹೀರಾತು ಪ್ರಕಟಿಸಬೇಕಾದಲ್ಲಿ ಪೂರ್ವಾನುಮತಿ ಅಗತ್ಯ
**********************************************************************
ಕಲಬುರಗಿ,ಏ.20.(ಕ.ವಾ.)-ಸಾರ್ವತ್ರಿಕ ಲೋಕಸಭೆಗೆ ಇದೇ ಏಪ್ರಿಲ್ 23 ರಂದು ಚುನಾವಣೆ ನಡೆಯಲಿದ್ದು, ಏಪ್ರಿಲ್ 21ರ ಸಾಯಂಕಾಲ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಹೀಗಾಗಿ ಏಪ್ರಿಲ್ 22 ಹಾಗೂ 23 ರಂದು ಮುದ್ರಣ ಮಾಧ್ಯಮದಲ್ಲಿ ಯಾವುದೇ ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಣೆ ಮಾಡಬೇಕಾದಲ್ಲಿ ಅದಕ್ಕೆ ಎಂ.ಸಿ.ಎಂ.ಸಿ. ಅನುಮತಿ ಕಡ್ಡಾಯ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.
ಹೀಗಾಗಿ ಅಭ್ಯರ್ಥಿಗಳು ಮುದ್ರಣ ಮಾಧ್ಯಮದಲ್ಲಿ ಏಪ್ರಿಲ್ 22 ಹಾಗೂ 23 ರಂದು ಯಾವುದೇ ರೀತಿಯ ಜಾಹೀರಾತು ನೀಡಬೇಕಾದಲ್ಲಿ ಕಲಬುರಗಿ ವಾರ್ತಾ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಇನ್ನೂ ಮುದ್ರಣ ಮಾಧ್ಯಮ ಸಂಸ್ಥೆಗಳು ಚುನಾವಣೆಗೆ ಸಂಬಂಧಿಸಿದ ಯಾವುದೇ ಜಾಹೀರಾತುಗಳನ್ನು ಪ್ರಕಟಿಸುವ ಮುನ್ನ ಜಾಹೀರಾತು ಪೂರ್ವಾನುಮತಿ ಪಡೆದುಕೊಳ್ಳಲಾಗಿದಿಯೆ ಎಂಬುದನ್ನು ಖಾತ್ರಿಪಡಿಸಿಕೊಂಡು ಜಾಹೀರಾತು ಪ್ರಕಟಿಸಬೇಕು ಎಂದು ಅವರು ತಿಳಿಸಿದ್ದಾರೆ.
ಎಕ್ಸಿಟ್ ಪೋಲ್, ಓಪಿನಿಯನ್ ಪೋಲ್ ನಿಷೇಧ: ಮತದಾನಕ್ಕೆ ನಿಗದಿಯಾಗಿರುವ ಸಮಯದ ಮುಂಚಿತ 48 ಗಂಟೆಗಳಲ್ಲಿ ಸುದ್ದಿ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣ, ಡಿಜಿಟಲ್ ಮಾಧ್ಯಮದಲ್ಲಿ ಚುನಾವಣೆ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರುವ ಸುದ್ದಿ, ಗುಂಪು ಚರ್ಚೆ, ಸಂದರ್ಶನ ಪ್ರಸಾರ ಮಾಡುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ 1951ರ ನಿಯಮ 126ಎ ರನ್ವಯ ನಿರ್ಭಂಧಿಸಲಾಗಿದೆ. ಇದನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದಲ್ಲಿ 2 ವರ್ಷ ಶಿಕ್ಷೆ, ದಂಡ ಅಥವಾ ಎರಡನ್ನು ವಿಧಿಸಲು ಕಾಯ್ದೆಯಡಿ ಅವಕಾಶ ನೀಡಲಾಗಿದೆ. ಇದಲ್ಲದೆ ಪ್ರಜಾ ಪ್ರತಿನಿಧಿ ಕಾಯ್ದೆ-1951ರ ನಿಯಮ 126 (1) (ಬಿ) ಪ್ರಕಾರ ಎಕ್ಸಿಟ್ ಪೋಲ್, ಸರ್ವೆ ಪೋಲ್ ಮಾಡುವುದನ್ನು ಸಹ ನಿರ್ಭಂಧಿಸಲಾಗಿದ್ದು, ಮಾಧ್ಯಮ ಸಂಸ್ಥೆಗಳು ಇದನ್ನು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.









ಹೀಗಾಗಿ ಲೇಖನಗಳು News and photo Date: 20-04-2019

ಎಲ್ಲಾ ಲೇಖನಗಳು ಆಗಿದೆ News and photo Date: 20-04-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 20-04-2019 ಲಿಂಕ್ ವಿಳಾಸ https://dekalungi.blogspot.com/2019/04/news-and-photo-date-20-04-2019.html

Subscribe to receive free email updates:

0 Response to "News and photo Date: 20-04-2019"

ಕಾಮೆಂಟ್‌‌ ಪೋಸ್ಟ್‌ ಮಾಡಿ