News and Photo Date: 27-4-2019

News and Photo Date: 27-4-2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photo Date: 27-4-2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photo Date: 27-4-2019
ಲಿಂಕ್ : News and Photo Date: 27-4-2019

ಓದಿ


News and Photo Date: 27-4-2019

ಚಿಂಚೋಳಿ ವಿಧಾನಸಭಾ ಉಪಚುನಾವಣೆ: ಲೆಕ್ಕಪತ್ರ ತಂಡ ರಚನೆ
**********************************************************
ಕಲಬುರಗಿ,ಏ.27(ಕ.ವಾ)-ಚುನಾವಣಾ ಆಯೋಗದ ನಿರ್ದೇಶನದಂತೆ 42-ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರದ ಉಪಚುನಾವಣೆ-2019ಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ ಈ ವಿಧಾನಸಭಾ ಕ್ಷೇತ್ರಕ್ಕೆ ಸಹಾಯಕ ವೆಚ್ಚ ವೀಕ್ಷಕರು ಸೇರಿದಂತೆ ನಾಲ್ಕು ಜನರು ಒಳಗೊಂಡ ಲೆಕ್ಕಪತ್ರ ತಂಡವನ್ನು ನೇಮಕ ಮಾಡಿ ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
42-ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರ: ಕಲಬುರಗಿ ಕಾಡಾ ಲೆಕ್ಕಪತ್ರ ಅಧೀಕ್ಷಕ ವಿಜೇಂದ್ರ ದೇಸಾಯಿ (ಮೊಬೈಲ್ ಸಂಖ್ಯೆ 9449729694) ಇವರನ್ನು ಸಹಾಯಕ ವೆಚ್ಚ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಚಿಂಚೋಳಿ ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಅಣ್ಣಾರಾವ ಪಾಟೀಲ, ಚಿಂಚೋಳಿ ತೋಟಗಾರಿಕೆ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಸಂತೋಷ ಗೌಡ ಹಾಗೂ ಚಿಂಚೋಳಿ ತಾಲೂಕು ಪಂಚಾಯಿತಿಯ ಕ್ಲರ್ಕ್/ಆಪರೇಟರ್ ಅಸದ್ ಅಲಿ ಇವರು ಈ ಲೆಕ್ಕಪತ್ರ ತಂಡದಲ್ಲಿ ಇರಲಿದ್ದಾರೆ.
ಏಪ್ರಿಲ್ 28ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
*******************************************
ಕಲಬುರಗಿ,ಏ.27(ಕ.ವಾ)-ತುರ್ತು ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ರವಿವಾರ ಏಪ್ರಿಲ್ 28 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಭೀಮಾ ನದಿಯ 1118 ಎಂ.ಎಂ. ವ್ಯಾಸದ ಎಂ.ಎಸ್. ಕೊಳವೆ ಮಾರ್ಗ ಜಾಕ್‍ವೆಲ್ ಹಾಗೂ ಸರಡಗಿ ಗ್ರಾಮದ ಹತ್ತಿರ ಕೊಳವೆ ಮಾರ್ಗ ಹಾಗೂ ಏರ್‍ವಾಲ್ವ್‍ದಲ್ಲಿ ಸೋರಿಕೆ ಕಂಡು ಬಂದಿರುತ್ತದೆ. ಇದರ ಹಿನ್ನೆಲೆಯಲ್ಲಿ ಇದರ ತುರ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಶಿಷ್ಯವೇತನಕ್ಕಾಗಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ
***************************************************************
ಕಲಬುರಗಿ,ಏ27.(ಕ.ವಾ)-ವೃತ್ತಿಪರ ಕೋರ್ಸ್‍ಗಳಾದ ಎಂ.ಬಿ.ಬಿ.ಎಸ್., ಬಿ.ಇ. ಮತ್ತಿತರ ಕೋರ್ಸ್‍ಗಳಲ್ಲಿ 2018-19ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಧಾನಮಂತ್ರಿ ಶಿಷ್ಯವೇತನಕ್ಕಾಗಿ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸದಿರುವ ಹಾಗೂ ಅರ್ಜಿ ಸಲ್ಲಿಸಿ ಕೆಲವು ಕಾರಣಗಳಿಂದ ಅರ್ಜಿ ತಿರಸ್ಕøತಗೊಂಡ ಮಾಜಿ ಸೈನಿಕರ ಮಕ್ಕಳಿಗೆ (ವಿದ್ಯಾರ್ಥಿಗಳಿಗೆ) ಮತ್ತೊಮ್ಮೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಶಿಷ್ಯವೇತನಕ್ಕಾಗಿ 2019ರ ಏಪ್ರಿಲ್ 24 ರಿಂದ ಮೇ 5 ರವರೆಗೆ ತಿತಿತಿ.ಞsb.gov.iಟಿ ವೆಬ್‍ಸೈಟ್‍ನಲ್ಲಿ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾಜಿ ಸೈನಿಕರ ಮಕ್ಕಳು ಇದರ ಸದುಪಯೋಗ ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ-ಹೈದ್ರಾಬಾದ್-ಕಲಬುರಗಿ ಮಾರ್ಗದಲ್ಲಿ ಸುಹಾಸ ಸಾರಿಗೆ ಪ್ರಾರಂಭ
ಕಲಬುರಗಿ,ಏ27.(ಕ.ವಾ)-ಸಾರ್ವಜನಿಕ ಪ್ರಯಾಣಿಕರ ಬೇಡಿಕೆ ಮೇರೆಗೆ ಕಲಬುರಗಿ-ಹೈದ್ರಾಬಾದ-ಕಲಬುರಗಿ ಮಾರ್ಗದಲ್ಲಿ 2019ರ ಏಪ್ರಿಲ್ 17ರಿಂದ ಸುಹಾಸ ಸಾರಿಗೆಯನ್ನು ಪ್ರಾರಂಭಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಈ ಸುಹಾಸ ಸಾರಿಗೆಯು ಕಲಬುರಗಿ ಬಸ್‍ನಿಲ್ದಾಣದಿಂದ ಖಾಜಾ ಬಂದೇ ನವಾಜ್ ದರ್ಗಾ, ನೆಹರು ಗಂಜ್, ಹುಮನಾಬಾದ, ಜಹೀರಾಬಾದ, ಸಂಗಾರೆಡ್ಡಿ ಮಾರ್ಗವಾಗಿ ಹೈದ್ರಾಬಾದಿಗೆ ಪ್ರಯಾಣಿಸಲಿದೆ. ಕಲಬುರಗಿಯಿಂದ ಹೈದ್ರಾಬಾದಿಗೆ ಪ್ರಯಾಣಿಸುವ ಈ ಬಸ್ಸು ಬೆಳಿಗ್ಗೆ 5.30 ಗಂಟೆಗೆ ಕಲಬುರಗಿಯಿಂದ ಹೊರಟು ಬೆಳಿಗ್ಗೆ 11 ಗಂಟೆಗೆ ಹೈದ್ರಾಬಾದಿಗೆ ತಲುಪಲಿದೆ. ಹೈದ್ರಾಬಾದದಿಂದ ಕಲಬುರಗಿಗೆ ಪ್ರಯಾಣಿಸುವ ಈ ಬಸ್ಸು ಹೈದ್ರಾಬಾದ್‍ದಿಂದ ಬೆಳಿಗ್ಗೆ 11.45 ಗಂಟೆಗೆ ಬಿಟ್ಟು ಸಂಜೆ 5.30 ಗಂಟೆಗೆ ಕಲಬುರಗಿಗೆ ಆಗಮಿಸಲಿದೆ.
ಈ ರಾಜಹಂಸ ಬಸ್ಸಿಗೆ ಮುಂಗಡ ಟಿಕೇಟ್ ಕಾಯ್ದಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯಾಣಿಕರು ಮುಂಗಡ ಟಿಕೇಟ್ ಕಾಯ್ದಿರಿಸಲು ಸಂಸ್ಥೆಯ ಬಸ್ ನಿಲ್ದಾಣ ಅಥವಾ ಸಂಸ್ಥೆಯಿಂದ ನೇಮಿಸಲ್ಪಟ್ಟ ಖಾಸಗಿ ಏಜೆಂಟ್ ಅಥವಾ ಮೊಬೈಲ್ ಮೂಲಕ ಅಥವಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತಿತಿತಿ.ಞsಡಿಣಛಿ.oಡಿg ವೆಬ್‍ಸೈಟ್‍ನಲ್ಲಿ ಆನ್ ಮೂಲಕ ಲಾಗಿನ್ ಆಗಿ ಟಿಕೇಟ್ ಕಾಯ್ದಿರಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಪ್ರಯಾಣಿಕರು ಸಾರಿಗೆ ಬಸ್ಸಿನ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ಎಂಟನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*****************************************
ಕಲಬುರಗಿ,ಏ.27.(ಕ.ವಾ)-ಪ್ರಸಕ್ತ 2019-20ನೇ ಸಾಲಿನಲ್ಲಿ ಕಲಬುರಗಿ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ 8ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸರ್ಕಾರಿ ತಾಂತ್ರಿಕ ಶಾಲೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಕರ್ನಾಟಕದ ಯಾವುದೇ ಮಾನ್ಯತೆ ಪಡೆದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ಪಾಸಾಗಿರಬೇಕು. ಕನ್ನಡ ಅಥವಾ ಇಂಗ್ಲೀಷ ಮಾಧ್ಯಮದಲ್ಲಿ ಅಭ್ಯಾಸ ಮಾಡಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಭಾರತದ ಪ್ರಜೆಯಾಗಿರಬೇಕು. ಅರ್ಜಿ ಸ್ವೀಕರಿಸುವ ಹಿಂದಿನ ದಿನಾಂಕಕ್ಕೆ ಅಭ್ಯರ್ಥಿಯು ಕರ್ನಾಟಕದ ಯಾವುದೇ ಅಂಗೀಕೃತ ಶಾಲೆಯಲ್ಲಿ 1 ರಿಂದ 7ನೇ ತರಗತಿಯ ವರೆಗೆ ಕನಿಷ್ಠ 5 ವರ್ಷಗಳು ವ್ಯಾಸಂಗ ಮಾಡಿರಬೇಕು.
ಅರ್ಜಿಗಳನ್ನು ಏಪ್ರಿಲ್ 20ರಿಂದ ಕಚೇರಿ ವೇಳೆಯಲ್ಲಿ ಪ್ರತಿದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ವಿತರಿಸಲಾಗುತ್ತಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಮೇ 25ರ ಸಂಜೆ 5.30 ಗಂಟೆಯೊಳಗಾಗಿ ಕಚೇರಿಯಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯ ಪ್ರಾಚಾರ್ಯರನ್ನು ಸಂಪರ್ಕಿಸಲು ಕೋರಲಾಗಿದೆ.
ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
*****************************
ಕಲಬುರಗಿ,ಏ27.(ಕ.ವಾ)-ಬೆಂಗಳೂರಿನ ಡಿಸ್ಟ್ರಿಕ್ಟ್ 317ಎ ಲಯನ್ಸ್ ಸರ್ವೀಸ್ ಫೌಂಡೇಶನರವರು ಮೃತ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡುತ್ತಿದ್ದು, ಇದಕ್ಕಾಗಿ ಅರ್ಹ ಮೃತ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮೃತ ಮಾಜಿ ಸೈನಿಕರ ಪತ್ನಿಯು ಮಾಹೆಯಾನ 25,000 ರೂ.ಕ್ಕಿಂತ ಕಡಿಮೆ ಕುಟುಂಬ ಪಿಂಚಣಿಯನ್ನು ಪಡೆಯುತ್ತಿರಬೇಕು. ಅರ್ಹ ಮೃತ ಮಾಜಿ ಸೈನಿಕರ ಪತ್ನಿ/ಮಕ್ಕಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ 2019ರ ಜೂನ್ 1ರ ರೊಳಗಾಗಿ ಬೆಂಗಳೂರಿನ ಡಿಸ್ಟ್ರಿಕ್ಟ್ 317ಎ ಲಯನ್ಸ್ ಸರ್ವೀಸ್ ಫೌಂಡೇಶನ್ ಇವರಿಗೆ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧದಲ್ಲಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-225003ಗೆ ಸಂಪರ್ಕಿಸಲು ಕೋರಲಾಗಿದೆ.
ಏಪ್ರಿಲ್ 29 ಹಾಗೂ 30 ರಂದು ಸಿ.ಇ.ಟಿ ಪರೀಕ್ಷೆ:
*****************************************
ಲೋಪವಾದಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳೆ ಹೊಣೆ
************************************************
ಕಲಬುರಗಿ,ಏ.27.(ಕ.ವಾ.)- ಪ್ರಸಕ್ತ 2019-20ನೇ ಶೈಕ್ಷಣಿಕ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿ.ಇ.ಟಿ) ಇದೇ ಏಪ್ರಿಲ್ 29 ಹಾಗೂ 30 ರಂದು ಕಲಬುರಗಿ ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸುವುದು. ಪರೀಕ್ಷಾ ಕರ್ತವ್ಯದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಸಂಬಂಧಿಸಿದ ಕೇಂದ್ರದ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಅವರು ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿ.ಇ.ಟಿ. ಪರೀಕ್ಷೆಗೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪೂರ್ವಭಾವಿ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತ, ಏಪ್ರಿಲ್ 29 ರಂದು ಜೀವಶಾಸ್ತ್ರ ಮತ್ತು ಗಣಿತ ಹಾಗೂ 30 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದ್ದು, ಒಟ್ಟು 8853 ವಿದ್ಯಾರ್ಥಿಗಳು ಸಿ.ಇ.ಟಿ. ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಈ ಪರೀಕ್ಷೆ ಪ್ರಮುಖ ಘಟ್ಟವಾಗಿದೆ. ವಿವಿಧ ವೃತ್ತಿ ಕೋರ್ಸುಗಳಿಗೆ ಪ್ರವೇಶ ಪಡೆಯಲು ಈ ಪರೀಕ್ಷೆಯಲ್ಲಿ ಗಳಿಸುವ ಅಂಕವೆ ವಿದ್ಯಾರ್ಥಿಗಳಿಗೆ ಮಾನದಂಡವಾಗಿರುವುದರಿಂದ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದರು.
ಪರೀಕ್ಷೆ ಸುಸೂತ್ರವಾಗಿ ನಡೆಯಲು ಜಿಲ್ಲಾಡಳಿತದಿಂದ ತಲಾ 21 ಮಾರ್ಗಾಧಿಕಾರಿಗಳು, ವೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆ ಪಾಲಕರನ್ನು ನೇಮಿಸಲಾಗಿದೆ. ನಕಲು ತಡೆಯಲೆಂದೆ ಪ್ರತಿ ಕೇಂದ್ರಕ್ಕೆ ಇಬ್ಬರಂತೆ ಒಟ್ಟು 42 ಜಾಗೃತ ದಳದ ಸದಸ್ಯರನ್ನು ನಿಯೋಜಿಸಲಾಗಿದೆ. ಇದಲ್ಲದೆ ಪರೀಕ್ಷಾ ದಿನದಂದು ಸಿ.ಆರ್.ಪಿ.ಸಿ. ಕಲಂ 144 ಸಹ ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿಯೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಪ್ರತ್ಯೇಕ ತಪಾಸಣೆ ನಡೆಸಬೇಕು. ಬಂದೋಬಸ್ತ್‍ಗಾಗಿ ಪೊಲೀಸ್ ಸಿಬ್ಬಂದಿ ಒದಗಿಸಲು ಪೊಲೀಸ್ ಅಧೀಕ್ಷಕರಿಗೆ ಈಗಾಗಲೆ ಪತ್ರ ಬರೆಯಲಾಗಿದೆ. ಇದರ ಹೊರತಾಗಿಯೂ ಕೇಂದ್ರದ ಮುಖ್ಯಸ್ಥರು ಸಂಬಂಧಿಸಿದ ಠಾಣೆಗೆ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಪತ್ರ ಬರೆಯಿರಿ ಎಂದರು.
ಪರೀಕ್ಷಾ ದಿನ ಮುನ್ನವೆ ಕೇಂದ್ರದ ಅಧೀಕ್ಷಕರು ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಬೆಳಕಿನ ವ್ಯವಸ್ಥೆ ಸ್ಭೆರಿದಂತೆ ಮೂಲಭೂತ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು. ಈ ಸಂಬಂಧ ವೀಕ್ಷಕರು ಪರೀಕ್ಷಾ ಕೇಂದ್ರಕ್ಕೆ ತೆರಳಿ ಕೇಂದ್ರದ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರÀಕರ ಸಭೆ ನಡೆಸಿ ಪೂರ್ವ ಸಿದ್ಧತೆ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ವೀಕ್ಷಕರಿಗೆ ನಿರ್ದೇಶನ ನೀಡಿದರು.
ನಕಲಿನಲ್ಲಿ ಭಾಗಿಯಾದಲ್ಲಿ ಕಠಿನ ಕ್ರಮ:- ಪರೀಕ್ಷಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರತುಪಡಿಸಿ ಅನಧೀಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಆವರಣ ಪ್ರವೇಶಿಸದಂತೆ ಕೇಂದ್ರದ ಮುಖ್ಯಸ್ಥರು ಗಮನಹರಿಸಬೇಕು. ಇನು ಕೊಠಡಿ ಮೇಲ್ವಿಚಾರಕರು ಕೋಣೆಯಲ್ಲಿ ವಿದ್ಯಾರ್ಥಿಗಳ ನಿಗಾ ಮಾಡುವ ಬದಲು ಪತ್ರಿಕೆ, ಪುಸ್ತಕ ಓದುವಂತಿಲ್ಲ. ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ.ಟಿ.ವಿ. ಅಳವಡಿಸಲಾಗಿದ್ದು, ಯಾವುದೇ ನಕಲುಗಳೀಗೆ ಇಲ್ಲಿ ಅವಕಾಶವಿಲ್ಲ. ನಕಲು ಮಾಡುವ ಅಭ್ಯರ್ಥಿಗಳು ಮತ್ತು ಅದಕ್ಕೆ ಸಹಕರಿಸಿ ಅಕ್ರಮದಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನಿನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಮೊಬೈಲ್ ನಿಷೇಧ: ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಭ್ಯರ್ಥಿಗಳು ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್, ವೈರಲೆಸ್ ಸೆಟ್, ಸ್ಲೈಡರೂಲ್ ಕ್ಯಾಲ್ಕುಲೇಟರ್, ವಾಚ್ ಕ್ಯಾಲ್ಕುಲೇಟರ್, ಪಠ್ಯ ಪುಸ್ತಕ ಸೇರಿದಂತೆ ಇನ್ನಿತರ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದ್ದು, ಇವುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಠಪಡಿಸಿದ್ದಾರೆ.
ಗುರುತಿನ ಚೀಟಿ ಕಡ್ಡಾಯ:- ಪರೀಕ್ಷೆಗ ಬರುವಾಗ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನಮೂದಿಸಿರುವ ಗುರುತಿನ ಚೀಟಿ ಪೈಕಿ ಯಾವುದಾದರು ಒಂದು ಮೂಲ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಕೆಇಎ ರೂಟ್ ಅಧಿಕಾರಿ ಪ್ರಭಾಕರ ರೆಡ್ಡಿ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವೀಕ್ಷಕರು ಸೇರಿದಂತೆ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.



ಹೀಗಾಗಿ ಲೇಖನಗಳು News and Photo Date: 27-4-2019

ಎಲ್ಲಾ ಲೇಖನಗಳು ಆಗಿದೆ News and Photo Date: 27-4-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 27-4-2019 ಲಿಂಕ್ ವಿಳಾಸ https://dekalungi.blogspot.com/2019/04/news-and-photo-date-27-4-2019.html

Subscribe to receive free email updates:

0 Response to "News and Photo Date: 27-4-2019"

ಕಾಮೆಂಟ್‌‌ ಪೋಸ್ಟ್‌ ಮಾಡಿ