News and Photos Date: 22--04--2019

News and Photos Date: 22--04--2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photos Date: 22--04--2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photos Date: 22--04--2019
ಲಿಂಕ್ : News and Photos Date: 22--04--2019

ಓದಿ


News and Photos Date: 22--04--2019

ಚುನಾವಣೆಗಾಗಿ ಒಟ್ಟು 11,162 ಸಿಬ್ಬಂದಿಗಳ ನೇಮಕ
***********************************************
ಕಲಬುರಗಿ,ಮೇ.11.(ಕ.ವಾ.)-ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಏಪ್ರಿಲ್ 23ರಂದು ಬೆಳಗಿನ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನಕ್ಕಾಗಿ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 2368 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನ ಪ್ರಕ್ರಿಯೇಯನ್ನು ಶಾಂತಿಯುತವಾಗಿ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಜಿಲ್ಲೆಯಾದ್ಯಂತ ಒಟ್ಟು 11,162 ಸಿಬ್ಬಂದಿಗಳ ನೇಮಕ ಮಾಡಲಾಗಿದೆ ಎಂದು ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ಮತದಾನವು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ಜರುಗಲು ಗುಲಬರ್ಗಾ ಕಲಬುರಗಿ ಜಿಲ್ಲೆಯಾದ್ಯಂತ 2737 ಪೊಲಿಂಗ್ ಪಾರ್ಟಿ ಹಾಗೂ ಹೆಚ್ಚುವರಿಯಾಗಿ 369 ಪೊಲಿಂಗ್ ಪಾರ್ಟಿ ರಚಿಸಲಾಗಿದೆ. ಒಟ್ಟು 2737 ಮತಗಟ್ಟೆ ಅಧ್ಯಕ್ಷಾಧಿಕಾರಿಗಳನ್ನು, 2737 ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ 5474 ಮತದಾನಾಧಿಕಾರಿಗಳನ್ನು, 214 ಕಾಯ್ದಿರಿಸಿದ ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಸೇರಿದಂತೆ ಒಟ್ಟು 11,162 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆಯಲ್ಲಿ 2775 ಬ್ಯಾಲೆಟ್ ಯೂನಿಟ್, 2775 ಕಂಟ್ರೋಲ್ ಯೂನಿಟ್ ಹಾಗೂ 3266 ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುತ್ತಿದೆ.
ಕಲಬುರಗಿ ಜಿಲ್ಲೆಯಾದ್ಯಂತ ಒಟ್ಟು 21,26,276 ಮತದಾರರಿದ್ದು, ಅದರಲ್ಲಿ 10,78,077 ಪುರುಷ ಮತದಾರರು, 10,47,835 ಮಹಿಳಾ ಮತದಾರರು ಹಾಗೂ 364 ಇತರೆ ಮತದಾರರು ಮತದಾನದ ದಿನದಂದು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಚುನಾವಣೆಗಾಗಿ ಕೆ.ಎಸ್.ಆರ್.ಟಿ.ಸಿ. ಬಸ್‍ಗಳು-232, ಜೀಪಗಳು 40, ಕ್ರೂಜರ್-481 ಹಾಗೂ 86 ಮಿನಿಬಸ್‍ಗಳು ಸೇರಿದಂತೆ ಒಟ್ಟು 839 ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಮತದಾರರನ್ನು ಆಕರ್ಷಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಒಟ್ಟು 9 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೆ ವಿಧಾನಸಭಾವಾರು 9 ಮಾದರಿ ಮತಗಟ್ಟೆಗಳನ್ನು ಹಾಗೂ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 9 ವಿಕಲಚೇತನರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಬಾರಿ ಚುನಾವಣೆಯಲ್ಲಿ ವಿಕಲಚೇತನರಿಗೆ ವಿನೂತನ ವ್ಯವಸ್ಥೆಯನ್ನು ಚುನಾವಣಾ ಆಯೋಗ ಕೈಗೊಂಡಿದ್ದು, ವಿಕಲಚೇತನ ಮತದಾರರನ್ನು ಮನೆಯಿಂದ ಮತಗಟ್ಟೆಗೆ ಕರೆತರಲು ಚುನಾವಣಾ ಆಯೋಗದ ವತಿಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ದೃಷ್ಠಿ ದೋಷವುಳ್ಳವರಿಗೆ ಸಹಾಯವಾಗಲು ಬ್ರೈಲ್ ಬ್ಯಾಲೆಟ್ ಪೇಪರ್ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮತದಾನ ದಿನದಂದು ಮತಗಟ್ಟೆಯಲ್ಲಿ ಮತದಾನದ ಗೌಪ್ಯತೆಯನ್ನು ಕಾಪಾಡುವ ದೃಷ್ಠಿಯಿಂದ ಮತದಾರರು ಮತಗಟ್ಟೆಗೆ ಮೊಬೈಲ್, ಕ್ಯಾಮೆರಾ ತರುವುದನ್ನು ನಿಷೇಧಿಸಲಾಗಿದೆ. ಜಿಲ್ಲೆಯ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ನಿರ್ಭೀತ ಮತ್ತು ಕಡ್ಡಾಯ ಮತದಾನಕ್ಕೆ ಜಿಲ್ಲಾಧಿಕಾರಿಗಳ ಮನವಿ
********************************************************
ಕಲಬುರಗಿ,ಏಪ್ರಿಲ್.22.(ಕ.ವಾ.)-ಪ್ರÀಜಾಪ್ರÀ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವತ್ರಿಕ ಚುನಾವಣೆಗಳು ಮಹತ್ತರ ಪಾತ್ರ ವಹಿಸುತ್ತವೆ. ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಏಪ್ರಿಲ್ 23 ರಂದು ಬೆಳಗಿನ 7 ರಿಂದ ಸಂಜೆ 6 ಗಂಟೆಯವರೆಗೆ ಚುನಾವಣಾ ಮತದಾನ ನಡೆಯಲಿದೆ. ಮುಕ್ತ, ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲೆಯಾದ್ಯಂತ ವ್ಯಾಪಕ ವ್ಯವಸ್ಥೆ ಮಾಡಲಾಗಿದೆ.
ಕಲಬುರಗಿ ಜಿಲ್ಲೆಯ ಎಲ್ಲ ಅರ್ಹ ಮತದಾರರು 2019ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಮತ ಚಲಾವಣೆ ಮಾಡಬೇಕು. ಜಿಲ್ಲೆಯ ಪ್ರತಿಯೊಬ್ಬ ಮತದಾರರು ಸಂವಿಧಾನಾತ್ಮಕ ಮತದಾನದ ಹಕ್ಕನ್ನು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಕಡ್ಡಾಯವಾಗಿ ಚಲಾಯಿಸಬೇಕು. ಮತದಾರರ ನಡೆ ಬೂತ್ ಕಡೆಗೆ ಇರಲಿ. ಪ್ರಜಾಪ್ರಭುತ್ವದ ಬಲವರ್ಧನೆಗೆ ತಪ್ಪದೇ ಮತದಾನ ಮಾಡಬೇಕು. ಮತಕ್ಕೆ ಹಣ ಕೊಡುವುದು ಮತ್ತು ಕೇಳೋದು ಅಪರಾಧ. ಜಿಲ್ಲೆಯ ಎಲ್ಲ ಮತಬಾಂಧವರು ಸುಗಮ ಮತ್ತು ಶಾಂತಿಯುತ ಮತದಾನ ಪ್ರಕ್ರಿಯೆಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಮನವಿ ಮಾಡಿಕೊಂಡಿದ್ದಾರೆ.
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ:
********************************************
ಓರ್ವ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
************************************
ಕಲಬುರಗಿ,ಏ.22.(ಕ.ವಾ.).-42-ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರಕ್ಕೆ 2019ರ ಮೇ 19ರಂದು ನಡೆಯುವ ಉಪ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಮೊದಲನೇ ದಿನವಾದ ಸೋಮವಾರದಂದು ಕಾಂಗ್ರೆಸ್ ಪಕ್ಷದಿಂದ ಶಿವಕುಮಾರ ಖತಲಪ್ಪ ಕೊಳ್ಳೂರು ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೋಮಶೇಖರ ಅವರು ತಿಳಿಸಿದ್ದಾರೆ.
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಧಿಸೂಚನೆ ಪ್ರಕಟ
***************************************************************
ಕಲಬುರಗಿ,ಏ.22.(ಕ.ವಾ.). 42-ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರಕ್ಕೆ 2019ರ ಮೇ 19ರಂದು ಉಪ ಚುನಾವಣೆ ನಡೆಸಲು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಸೋಮವಾರ ಅಧಿಸೂಚನೆ ಪ್ರಕಟಿಸಿದ್ದಾರೆ.
ಏಪ್ರಿಲ್ 29ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಏಪ್ರಿಲ್ 30ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ಮೇ 2 ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆ ದಿನವಾಗಿದೆ. ಮೇ 19 ರಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಮತದಾನ ನಡೆಯಲಿದೆ. ಮೇ 23ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಆಸ್ತಿ ತೆರಿಗೆ ಮೇಲೆ ಶೇ.5ರಷ್ಟು ರಿಯಾಯಿತಿ ಪಡೆಯಲು ಕೇವಲ ಏಳು ದಿನ ಬಾಕಿ
*********************************************************************
ಕಲಬುರಗಿ,ಏ.22.(ಕ.ವಾ.)-ಕಲಬುರಗಿ ನಗರ ವ್ಯಾಪ್ತಿಯಲ್ಲಿ ಬರುವ ವಿವಿಧ ಆಸ್ತಿಗಳ ಮಾಲೀಕರು 2019-20ನೇ ಸಾಲಿನ ಆಸ್ತಿ ತೆರಿಗೆ ಮೇಲೆ 5ರಷ್ಟು ರಿಯಾಯಿತಿ ಸೌಲಭ್ಯ ಪಡೆಯಲು ಕೇವಲ 7 ದಿನಗಳು ಮಾತ್ರ ಬಾಕಿ ಇರುತ್ತದೆ. ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಮಾಲೀಕರು ಇದೇ ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸಿ ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಪ್ರಕಾಶ ಸಿ. ಹರಕುಡೆ ಅವರು ಕೋರಿದ್ದಾರೆ.
ಆಸ್ತಿ ತೆರಿಗೆ ಪಾವತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಮಹಾನಗರ ಪಾಲಿಕೆಯ ವಲಯ ಕಚೇರಿ-3ರ ಆವರಣ ಹಾಗೂ ಖರ್ಗೆ ಪೆಟ್ರೋಲ್ ಬಂಕ್ ಹತ್ತಿರದ ಹೌಸಿಂಗ್ ಬೋರ್ಡ್ ಕಾಂಪ್ಲೆಕ್ಸ್‍ನಲ್ಲಿರುವ ಗುಲಬರ್ಗಾ ಒನ್ ಶಾಖೆಗಳಲ್ಲಿ ಹಾಗೂ ಮಹಾನಗರ ಪಾಲಿಕೆಯ ಹೊಸ ಕಟ್ಟಡದ ಆವರಣದಲ್ಲಿರುವ ಇಂಡಿಯನ್ ಬ್ಯಾಂಕ್‍ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಆಸ್ತಿಗಳ ಮಾಲೀಕರು 2019ರ ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸಿ ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.












ಹೀಗಾಗಿ ಲೇಖನಗಳು News and Photos Date: 22--04--2019

ಎಲ್ಲಾ ಲೇಖನಗಳು ಆಗಿದೆ News and Photos Date: 22--04--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photos Date: 22--04--2019 ಲಿಂಕ್ ವಿಳಾಸ https://dekalungi.blogspot.com/2019/04/news-and-photos-date-22-04-2019.html

Subscribe to receive free email updates:

0 Response to "News and Photos Date: 22--04--2019"

ಕಾಮೆಂಟ್‌‌ ಪೋಸ್ಟ್‌ ಮಾಡಿ